The most-visited ಕನ್ನಡ Wikipedia articles, updated daily. Learn more...
ಹುಬ್ಬಳ್ಳಿ (ಹುಬ್ಳಿ) ಕರ್ನಾಟಕದ ಉತ್ತರ ಭಾಗದಲ್ಲಿರುವ ಪ್ರಮುಖ ವಾಣಿಜ್ಯ ನಗರ.ಹುಬ್ಬಳ್ಳಿ ನಗರವು ಧಾರವಾಡ ಜಿಲ್ಲೆಯಲ್ಲಿದೆ. ಬೆಂಗಳೂರು - ಪುಣೆ ರಾಷ್ಟ್ರೀಯ ಹೆದ್ದಾರಿ- 4 ರಲ್ಲಿ, ಬೆಂಗಳೂರಿನಿಂದ ಸುಮಾರು 410 ಕಿ.ಮೀ ಹಾಗೂ ಪುಣೆಯಿಂದ ಸುಮಾರು 430 ಕಿ.ಮೀ ದೂರದಲ್ಲಿದೆ. 2011ರ ಭಾರತದ ಜನಗಣತಿಯ ಪ್ರಕಾರ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ಜನಸಂಖ್ಯೆ 943,788.ಅದರಲ್ಲಿ 474,518 ಪುರುಷರು ಮತ್ತು 469,270 ಮಹಿಳೆಯರಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಯುಥೆನೇಶಿಯ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ ದಯಾಮರಣ ಪದಕ್ಕೆ ಉತ್ತಮ ಸಾವು ಎಂಬ ಅರ್ಥವಿದೆ. ಈ ಪದವನ್ನು ಗ್ರೀಕ್ ಭಾಷೆಯ 'ಯು' ಅಂದರೆ ಒಳ್ಳೆಯ ಮತ್ತು 'ಥಾನಾಟೋಸ್' ಅಂದರೆ ಸಾವು ಎಂಬ ೨ ಪದಗಳಿಂದ ಎರವಲು ಪಡೆದುಕೊಂಡು ಸೃಷ್ಟಿಸಲಾಗಿದೆ. ಗುಣಪಡಿಸಲಾಗದ ಕಾಯಿಲೆಯಿಂದ ಬಳಲುತ್ತಿರುವ ಅಥವಾ ತೀವ್ರವಾದ ದೈಹಿಕ ವೇದನೆಯಲ್ಲಿರುವ ರೋಗಿಯ ಸ್ಥಿತಿಯನ್ನು ಮೊದಲಿನಂತಾಗದೆ ಇದ್ದಾಗ ಆತನ ಜೀವನವನ್ನು ದೀರ್ಘಗೊಳಿಸಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PMKSN, ಅನುವಾದ: ಪ್ರಧಾನಮಂತ್ರಿಗಳ ರೈತ ಗೌರವ ನಿಧಿ) ಭಾರತ ಸರ್ಕಾರದ ಉಪಕ್ರಮವಾಗಿದ್ದು, ರೈತರಿಗೆ ಕನಿಷ್ಠ ಆದಾಯ ಬೆಂಬಲವಾಗಿ ವರ್ಷಕ್ಕೆ ₹೬೦೦೦(₹೬,೩೦೦ ಅಥವಾ ೨೦೨೦ ರಲ್ಲಿ US$೭೯ ಗೆ ಸಮಾನ) ನೀಡುತ್ತದೆ. ೧ ಫೆಬ್ರವರಿ ೨೦೧೯ ರಂದು ಭಾರತದ ೨೦೧೯ರ ಮಧ್ಯಂತರ ಯೂನಿಯನ್ ಬಜೆಟ್ನಲ್ಲಿ ಪಿಯೂಷ್ ಗೋಯಲ್ ಅವರು ಈ ಉಪಕ್ರಮವನ್ನು ಘೋಷಿಸಿದರು . ಈ ಯೋಜನೆಗೆ ವಾರ್ಷಿಕ ₹೭೫,೦೦೦ ಕೋಟಿ (₹೭೯೦ ಶತಕೋಟಿ ಅಥವಾ ೨೦೨೦ ರಲ್ಲಿ US$೯.೯ ಶತಕೋಟಿಗೆ ಸಮಾನ) ವೆಚ್ಚವಾಗಿದೆ ಮತ್ತು ಡಿಸೆಂಬರ್ ೨೦೧೮ರಿಂದ ಜಾರಿಗೆ ಬಂದಿದೆ.
ರವಿ ಬೆಳಗೆರೆ (೧೫ ಮಾರ್ಚ್ ೧೯೫೮ - ೧೩ ನವೆಂಬರ್ ೨೦೨೦) ಕನ್ನಡದ ಪತ್ರಕರ್ತರು ಹಾಗೂ ಪತ್ರಿಕೋದ್ಯಮಿಯಾಗಿದ್ದರು. ಹಾಯ್ ಬೆಂಗಳೂರ್ ಎಂಬ ವಾರಪತ್ರಿಕೆ ಹಾಗೂ 'ಓ ಮನಸೇ' ಪಾಕ್ಷಿಕ ಪತ್ರಿಕೆಯ ಸಂಪಾದಕರಾಗಿದ್ದರು. ಅವರು ಕನ್ನಡ ಸಾಹಿತಿ, ಚಿತ್ರಕಥೆ ಬರಹಗಾರ, ಈ-ಟಿವಿ ಕನ್ನಡ ವಾಹಿನಿಯ ಜನಪ್ರಿಯ ಕ್ರೈಂ ಡೈರಿ ಕಾರ್ಯಕ್ರಮದ ನಿರೂಪಕರಾಗಿ ಹಾಗೂ ಜನಶ್ರೀ ವಾಹಿನಿಯ ಮುಖ್ಯಸ್ಥರಾಗಿ, ಕಾರ್ಯಕ್ರಮಗಳ ನಿರೂಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೫ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಅರಿಸ್ಟಾಟಲ್ನ ತರ್ಕಶಾಸ್ತ್ರದಲ್ಲಿನ ಅಂಶಗಳು ಒಂದೇ ಕಡೆ ಒಂದಕ್ಕೊಂದು ಸಂಬಂಧಿಸಿದಂತೆ ಬರದೆ ಬಿಡಿಬಿಡಿಯಾದ ಸಣ್ಣ ಸಣ್ಣ ಗ್ರಂಥಗಳಲ್ಲಿ ದೊರೆಯುತ್ತವೆ. ಆದರೆ ಭಾರತದಲ್ಲಿ ನ್ಯಾಯ ವೈಶೇಷಿಕ ದರ್ಶನಗಳು ಸೇರಿಕೊಂಡಾಗ ತರ್ಕಶಾಸ್ತ್ರಕ್ಕೆ ಸಂಬಂಧಪಟ್ಟ ಎಲ್ಲ ಮುಖ್ಯಾಂಶಗಳೂ ಒಟ್ಟಿಗೆ ಬರುತ್ತವೆ. ವೈಶೇಷಿಕ ದರ್ಶನದ ಸಪ್ತಪದಾರ್ಥಗಳು ಅರಿಸ್ಟಾಟಲನ ದಶಪದಾರ್ಥಗಳಿಗೆ (ಕ್ಯಾಟಗೊರೀಸ್) ಸಂವಾದಿಯಾದುವು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಕನ್ನಡದ ಸಾಹಿತ್ಯ ಕೃತಿಗಳಿಗೆ ನೀಡಲಾಗುವ ವಾರ್ಷಿಕ ಸಾಹಿತ್ಯ ಪ್ರಶಸ್ತಿ ಆಗಿದೆ. ಕನ್ನಡ ಸಾಹಿತ್ಯದ ಕವನ, ಕಾದಂಬರಿ, ಸಣ್ಣ ಕಥೆ, ವಿಮರ್ಶೆ, ಪ್ರವಾಸ ಬರವಣಿಗೆ, ಅನುವಾದ, ಮಕ್ಕಳ ಬರವಣಿಗೆ ಮುಂತಾದ ವಿವಿಧ ಪ್ರಕಾರಗಳಲ್ಲಿ ಪ್ರಕಟವಾದ ಪುಸ್ತಕಗಳಿಗೆ 1965ರಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕನ್ನಡದಲ್ಲಿ ಮಹಿಳಾ ವಿಮಾಂಸೆ ಸಾಹಿತ್ಯದ ಸಾವಿರದೈನೂರು ವರ್ಷಗಳ ಕನ್ನಡ ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೆ ೨೦ನೆಯ ಶತಮಾನಕ್ಕೆ ಕಾಲಿರಿಸುವವರೆಗೆ ಮಹಿಳೆಯರೇ ರಚಿಸಿದ ಸಾಹಿತ್ಯ, ಮಹಿಳಾ ಸಾಹಿತ್ಯವೆಂಬ ಹೆಸರಿನಲ್ಲಿ ಗುರುತಿಸಬಹುದಾದಂಥದ್ದು ಹೆಚ್ಚು ಕಂಡುಬರುವುದಿಲ್ಲ. ಸ್ತ್ರೀಯರು ವಿದ್ಯೆಯಿಂದ ವಂಚಿತರಾದದ್ದು, ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗುವ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗದೇ ಹೋದದ್ದು, ಸ್ವಾತಂತ್ರ್ಯವಿರದ ಅವಲಂಬನೆಯ ಜೀವನವೇ ಪ್ರಧಾನವಾದದ್ದು - ಇಂಥ ಅನೇಕ ಕಾರಣಗಳಿಂದಾಗಿ ಮಹಿಳೆ ಕನ್ನಡ ಸಾಹಿತ್ಯದ ಮುಖ್ಯವಾಹಿನಿಯಲ್ಲಿ ಬಹುಕಾಲದವರೆಗೆ ಅನನ್ಯತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳಿರಬಹುದು.
ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),
ದ್ರವೀಕೃತ ಪೆಟ್ರೋಲಿಯಮ್ ಅನಿಲ(LPG, GPL, LP ಗ್ಯಾಸ್, ಅಥವಾ ಆಟೋಗ್ಯಾಸ್ ಎಂದೂ ಕರೆಯಲಾದ) [[ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ. ಈ ಅನಿಲವನ್ನು ಬಿಸಿ ಮಾಡುವ ಉಪಕರಣಗಳು ಹಾಗೂ ವಾಹನಗಳಲ್ಲಿ ಇಂಧನ ರೂಪದಲ್ಲಿ ಬಳಸಲಾಗುತ್ತಿದೆ. ಇದಲ್ಲದೆ, ಓಜೋನ್ ಪದರಕ್ಕೆ ಹಾನಿಯನ್ನು ಕಡಿಮೆಗೊಳಿಸುವ ಉದ್ದೇಶದಿಂದ, ಕ್ಲೋರೋಫ್ಲೋರೋಕಾರ್ಬನ್ಗಳ ಬದಲಿಗೆ, ವಾಯುದ್ರವ ನೋದಕ (ಏರೋಸಾಲ್ ಪ್ರೊಪೆಲ್ಲಂಟ್) ಹಾಗೂ ಶೀತಕ|ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.