The most-visited ಕನ್ನಡ Wikipedia articles, updated daily. Learn more...
ಚಿಕ್ಕಕಾಲ್ಯ ನಾರಾಯಣಪ್ಪ ಅಶ್ವತ್ಥನಾರಾಯಣ (ಜನನ 2 ಫೆಬ್ರವರಿ 1969) ಒಬ್ಬ ಭಾರತೀಯ ರಾಜಕಾರಣಿಯಾಗಿದ್ದು, ಅವರು 20 ಆಗಸ್ಟ್ 2019 ರಿಂದ 13 ಮೇ 2023 ರವರೆಗೆ ಕರ್ನಾಟಕ ಸರ್ಕಾರದಲ್ಲಿ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ-ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾಗಿದ್ದರು. ಅವರು 2019ರ ಆಗಸ್ಟ್ 20ರಿಂದ 2021ರ ಜುಲೈ 26ರವರೆಗೆ ಕರ್ನಾಟಕದ 8ನೇ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು ಮಲ್ಲೇಶ್ವರಂ ಕ್ಷೇತ್ರ ಭಾರತೀಯ ಜನತಾ ಪಕ್ಷ (ಬಿಜೆಪಿ) ಪ್ರತಿನಿಧಿಸುವ ಕರ್ನಾಟಕ ವಿಧಾನಸಭೆ ಸದಸ್ಯರಾಗಿದ್ದಾರೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ದಾವೂದ್ ಇಬ್ರಾಹಿಂ ಕಸ್ಕರ್ ಒಬ್ಬ ಭಾರತೀಯ ದರೋಡೆಕೋರ, ಮಾದಕವಸ್ತು ದೊರೆ, ಮತ್ತು ಭಯೋತ್ಪಾದಕ. ಅವರು 1970 ರ ದಶಕದಲ್ಲಿ ಮುಂಬೈನಲ್ಲಿ ಸ್ಥಾಪಿಸಿದ ಭಾರತೀಯ ಸಂಘಟಿತ ಅಪರಾಧ ಸಿಂಡಿಕೇಟ್ ಡಿ-ಕಂಪನಿಯ ಮುಖ್ಯಸ್ಥರಾಗಿದ್ದಾರೆಂದು ವರದಿಯಾಗಿದೆ. ಇಬ್ರಾಹಿಂ ವಿರುದ್ಧ ಕೊಲೆ, ಸುಲಿಗೆ, ಗುರಿಯಾಗಿಸಿಕೊಂಡು ಹತ್ಯೆ, ಮಾದಕವಸ್ತು ಕಳ್ಳಸಾಗಣೆ ಮತ್ತು ಭಯೋತ್ಪಾದನೆ ಸೇರಿದಂತೆ ಹಲವು ಆರೋಪಗಳ ಮೇಲೆ ಬೇಕಾಗಿದ್ದಾರೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ವಿಲಿಯಂ ಹೆನ್ರಿ "ಬಿಲ್" ಗೇಟ್ಸ್ III (ಅಕ್ಟೋಬರ್ 28, 1955ರಲ್ಲಿ ಜನನ) ರವರು ಅಮೆರಿಕದ ಪ್ರಭಾವಿ ಉದ್ಯಮಿ , ಪರೋಪಕಾರಿ ಮತ್ತು ಪಾಲ್ ಅಲೆನ್ ಜೊತೆಗೂಡಿ ತಾವೇ ಸ್ಥಾಪಿಸಿದ ಮೈಕ್ರೋಸಾಫ್ಟ್ ಎಂಬ ಸಾಫ್ಟ್ವೇರ್ ಕಂಪನಿಯ ಅಧ್ಯಕ್ಷ. ಇವರು ವಿಶ್ವದ ಅತಿದೊಡ್ಡ ಸಿರಿವಂತರಲ್ಲಿ ಒಬ್ಬರೆಂಬ ಸ್ಥಾನವನ್ನು ಹಲವು ವರ್ಷಗಳಿಂದ ಸ್ಥಿರವಾಗಿ ಉಳಿಸಿಕೊಂಡು ಬಂದಿದ್ದಾರೆ ಮತ್ತು ಒಟ್ಟಾರೆಯಾಗಿ 2009 ರವರೆಗಿನ ವಿಶ್ವದ ಅತಿದೊಡ್ಡ ಸಿರಿವಂತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೈಕ್ರೋಸಾಫ್ಟ್ ಸಂಸ್ಥೆಯಲ್ಲಿನ ತಮ್ಮ ವೃತ್ತಿಜೀವನದಲ್ಲಿ, CEO ಹಾಗೂ ಮುಖ್ಯ ಸಾಫ್ಟ್ವೇರ್ ವಿನ್ಯಾಸಕನಂತಹ ಉನ್ನತ ಸ್ಥಾನಗಳಲ್ಲಿ ಇವರು ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಆಡಿ A4 ಎಂಬುದು ಒಂದು ಕಾರ್ಯಕಾರಿ ಸಾಮರ್ಥ್ಯದ ಅಡಕ ಕಾರು ಆಗಿದ್ದು, ಆಡಿ AG ಎಂಬ ಜರ್ಮನ್ ಕಾರು ತಯಾರಕ ಕಂಪನಿಯಿಂದ 1994ರ ಅಂತ್ಯಭಾಗದಿಂದಲೂ ಉತ್ಪಾದಿಸಲ್ಪಡುತ್ತಿದೆ. ಆರಂಭಿಕ ಪೀಳಿಗೆಯ A4 ಕಾರು, ಆಡಿ 80 ಕಾರಿನ ಹಿಂದಿನ ನಾಲ್ಕು ಪೀಳಿಗೆಗಳನ್ನು ಅನುಸರಿಸಿತು. ಮತ್ತು ತನ್ನ ಪೂರ್ವವರ್ತಿಯಾದ ಆಡಿ 80 ಕಾರಿನ ರೀತಿಯಲ್ಲಿಯೇ, ಆಡಿ A4 ಕಾರಿನ ವಾಹನ ವಿನ್ಯಾಸವು ಅನುಲಂಬವಾಗಿ ತಿರುಗಿಸಲಾದ ಒಂದು ಎಂಜಿನ್ನ್ನು ಮುಂಭಾಗದಲ್ಲಿ ಒಳಗೊಂಡಿರುತ್ತದೆ ಹಾಗೂ ಎಂಜಿನ್ನ ಹಿಂಭಾಗಕ್ಕೆ ಅತಿ ಸಮೀಪದಲ್ಲಿ, ಮತ್ತೊಮ್ಮೆ ಅನುಲಂಬವಾಗಿ ತಿರುಗಿಸಲಾದ ಆಚೆಯ-ಅಚ್ಚಿನ-ಬಗೆಯ ಶಕ್ತಿ ಸಂವಹನಗಳ ವ್ಯವಸ್ಥೆಯನ್ನು ಜೋಡಣೆ ಮಾಡಲಾಗಿರುತ್ತದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕೆಂಬೂತ, (ಕೆಂಬೂತ-ಘನ - Greater Coucal or Crow Pheasant) (ವೈಜ್ಞಾನಿಕ ಹೆಸರು : Centropus sinensis) ಕೆಂಬೂತ, ಕಾಗೆ ಗಾತ್ರದ ಕೋಗಿಲೆ ಗಣಕ್ಕೆ ಸೇರಿದ ಒಂದು ಹಕ್ಕಿ ಪ್ರಭೇದ. ಕೋಗಿಲೆ (cuckoo) ಗಣಕ್ಕೆ ಸೇರಿದ್ದರೂ, ಕೋಗಿಲೆಯಂತೆ ಬೇರೆ ಹಕ್ಕಿಗಳ ಗೂಡಿನಲ್ಲಿ ಮೊಟ್ಟೆ ಇಡುವುದಿಲ್ಲ, ಹಾಗಾಗಿ ಇದು ಪರಾವಲಂಬಿಯಲ್ಲ. ಏಷ್ಯಾದ ಬಹು ಭಾಗ, ಭಾರತ, ಚೀನಾ, ಇಂಡೋನೇಷ್ಯಾಗಳಲ್ಲಿ ಇದರ ಜಾತಿ, ಪ್ರಜಾತಿಗಳು ಹರಡಿವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),
ದ್ರವೀಕೃತ ಪೆಟ್ರೋಲಿಯಮ್ ಅನಿಲ(LPG, GPL, LP ಗ್ಯಾಸ್, ಅಥವಾ ಆಟೋಗ್ಯಾಸ್ ಎಂದೂ ಕರೆಯಲಾದ) [[ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ. ಈ ಅನಿಲವನ್ನು ಬಿಸಿ ಮಾಡುವ ಉಪಕರಣಗಳು ಹಾಗೂ ವಾಹನಗಳಲ್ಲಿ ಇಂಧನ ರೂಪದಲ್ಲಿ ಬಳಸಲಾಗುತ್ತಿದೆ. ಇದಲ್ಲದೆ, ಓಜೋನ್ ಪದರಕ್ಕೆ ಹಾನಿಯನ್ನು ಕಡಿಮೆಗೊಳಿಸುವ ಉದ್ದೇಶದಿಂದ, ಕ್ಲೋರೋಫ್ಲೋರೋಕಾರ್ಬನ್ಗಳ ಬದಲಿಗೆ, ವಾಯುದ್ರವ ನೋದಕ (ಏರೋಸಾಲ್ ಪ್ರೊಪೆಲ್ಲಂಟ್) ಹಾಗೂ ಶೀತಕ|ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸಾಮಾನ್ಯವಾಗಿ ಫೀಫಾ (ಎಲ್ಲೆಡೆ ಟೆಂಪ್ಲೇಟು:3/) ಎಂದು ಕರೆಯಲ್ಪಡುವ, ಫ್ರೆಂಚ್ ಭಾಷೆಯಲ್ಲಿ ದಿ ಫೆಡರೇಷನ್ ಇಂಟರ್ನ್ಯಾಷನಲೆ ಡಿ ಫುಟ್ ಬಾಲ್ ಅಸೋಸಿಯೇಶನ್ (ಇಂಗ್ಲೀಷ್: ಇಂಟರ್ನ್ಯಾಷನಲ್ ಫೆಡರೇಷನ್ ಆಫ್ ಫುಟ್ ಬಾಲ್ ಅಸೋಸಿಯೇಶನ್, ಕನ್ನಡ:ಅಂತಾರಾಷ್ಟ್ರೀಯ ಫುಟ್ಬಾಲ್ ಒಕ್ಕೂಟ) ಫುಟ್ ಬಾಲ್ ಸಂಸ್ಥೆಯ ಆಡಳಿತ ನಡೆಸುತ್ತಿರುವ ಅಂತರಾಷ್ಟ್ರೀಯ ಸಂಘಟನೆಯಾಗಿದೆ. ಅದರ ಕೇಂದ್ರ ಕಾರ್ಯಸ್ಥಾನ ಸ್ವಿಡ್ಜರ್ಲ್ಯಾಂಡಿನ ಜ್ಯೂರಿಚ್ ನಲ್ಲಿದೆ ಹಾಗೂ ಅದರ ಪ್ರಚಲಿತ ಅಧ್ಯಕ್ಷರು ಸೆಪ್ ಬ್ಲಾಟರ್. ಫೀಫಾ ಫುಟ್ ಬಾಲ್ ನ ಪ್ರಮುಖ ಅಂತರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಿಗೆ, ವಿಶೇಷವಾಗಿ 1930 ರಿಂದ ನಡೆಸಲ್ಪಡುತ್ತಿರುವ, ಫೀಫಾ ವಿಶ್ವ ಕಪ್ ಅನ್ನುಸಂಘಟಿಸುವುದು ಮತ್ತು ಪ್ರದರ್ಶನಕ್ಕೆ ಜವಾಬ್ದಾರವಾಗಿದೆ.
ಬಂಗಾಳಿ ಅಥವಾ ಬಾಂಗ್ಲ ಇಂಡೊ-ಯೂರೋಪಿಯನ್ ಪಂಗಡಕ್ಕೆ ಸೇರಿದ ಭಾಷೆ.ಸಂಸ್ಕೃತ ಮತ್ತು ಪಾಳಿ ಭಾಷೆಗಳನ್ನು ಪೂರ್ವಜರನ್ನಾಗಿ ಹೊಂದಿರುವ ಈ ಭಾಷೆ, ಭಾರತದ ಪಶ್ಚಿಮ ಬಂಗಾಳದ ರಾಜ್ಯ ಭಾಷೆ ಮತ್ತು ಬಾಂಗ್ಲಾದೇಶದ ರಾಷ್ಟ್ರಭಾಷೆ. ಸುಮಾರು ೨೦.೭ ಕೋಟಿ ಜನ ಈ ಭಾಷೆ ಮಾತನಾಡುತ್ತಾರೆ. ಬಂಗಾಳೀ ಭಾಷೆ - ಪಶ್ಚಿಮ ಬಂಗಾಳ ರಾಜ್ಯದ ಭಾಷೆ: ನೆರೆಯ ಬಾಂಗ್ಲದೇಶದಲ್ಲಿ ರಾಷ್ಟ್ರಭಾಷೆ: ಗಂಗಾನದಿ ಬಯಲಿನ ಉತ್ತರ ಮತ್ತು ಪೂರ್ವ ಭಾಗದಲ್ಲಿ ಹಬ್ಬಿರುವ ಬಂಗಾಳ ಪ್ರಾಂತ್ಯದ ಜನರ ಭಾಷೆ.
ಆಯುರ್ವೇದ (ಸಂಸ್ಕೃತ: आयुर्वेद ಆಯು—ಆಯಸ್ಸು; ವೇದ—ಜ್ಞಾನ) ೧೨೦೦೦ ವರ್ಷಗಳಿಗೂ ಹೆಚ್ಚು ಹಳೆಯದಾದ ಔಷಧ ಪದ್ಧತಿ. ವೇದಗಳಲ್ಲಿ ಮೂಡಿಬರುವ ಈ ಪದ್ಧತಿಯಲ್ಲಿ ಆರೋಗ್ಯ ಹಾಗೂ ದೀರ್ಘ ಆಯಸ್ಸನ್ನು ಹೇಗೆ ಪಡೆಯುವುದು ಎಂಬುದನ್ನು ಹೇಳುವುದೇ ಸಂಹಿತೆಗಳ ಮೂಲ ಉದ್ದೇಶ. ಹಿಂದೂ ಸಂಪ್ರದಾಯಕ್ಕೆ ಹೊಂದಿಕೊಂಡಂತಿರುವ ಈ ಪದ್ಧತಿ ಪ್ರಾಚೀನ ಭಾರತದಿಂದ (ಭಾರತೀಯ ಉಪಖಂಡ) ಬೆಳೆದು ಬಂದದ್ದು.
ಛತ್ತೀಸ್ಘಡ್ (ಛತ್ತೀಸ್ಘಡಿ /ಹಿಂದಿ: छत्तीसगढ़) ಮಧ್ಯಭಾರತದ ಒಂದು ರಾಜ್ಯವಾಗಿದ್ದು ಮಧ್ಯಪ್ರದೇಶದ ಆಗ್ನೇಯ ಮೂಲೆಯಲ್ಲಿರುವ ೧೬ ಛತ್ತೀಸ್ಘಡಿ ಭಾಷೆಯನ್ನು ಮಾತನಾಡುವ ಜಿಲ್ಲೆಗಳು ಒಂದುಗೂಡಿ, ನವೆಂಬರ್ ಒಂದು, ೨೦೦೦ದಂದು ರಾಜ್ಯವಾಗಿ ಘೋಷಿಸಲ್ಪಟ್ಟಿತು. ರಾಯ್ಪುರ್ ಈ ರಾಜ್ಯದ ರಾಜಧಾನಿಯಾಗಿದೆ. ಇದು ಭಾರತದ ಹತ್ತನೆಯ ಅತಿ ದೊಡ್ಡ ರಾಜ್ಯವಾಗಿದ್ದು ಇದರ ವಿಸ್ತೀರ್ಣ ೫೨,೧೯೯ ಚದರ ಮೈಲಿಗಳಾಗಿದೆ (೧೩೫,೧೯೪ km²).
ಹಬ್ಬವು (ಉತ್ಸವ) ಸಾಮಾನ್ಯವಾಗಿ ಒಂದು ಸ್ಥಳೀಯ ಸಮುದಾಯದಿಂದ ಏರ್ಪಡಿಸಲಾಗುವ, ಆ ಸಮುದಾಯದ ಯಾವುದೋ ಒಂದು ಅದ್ವಿತೀಯ ಅಂಶದ ಮೇಲೆ ಕೇಂದ್ರೀಕರಿಸುವ ಮತ್ತು ಅದನ್ನು ಆಚರಿಸುವ ಒಂದು ಸಂದರ್ಭ. ಅನೇಕ ಧರ್ಮಗಳಲ್ಲಿ, ಉತ್ಸವವು ದೇವರು ಅಥವಾ ದೇವತೆಗಳ ಗೌರವಾರ್ಥವಾಗಿ ಏರ್ಪಡಿಸಲಾಗುವ ಆಚರಣೆಗಳ ಒಂದು ಕೂಟ. ಉತ್ಸವ ಮತ್ತು ಹಬ್ಬ ಎರಡೂ ಐತಿಹಾಸಿಕವಾಗಿ ಅದಲು ಬದಲು ಮಾಡಬಲ್ಲವಾಗಿವೆ.
ವೈದ್ಯನು ವೈದ್ಯಕೀಯ ವೃತ್ತಿಯನ್ನು ನಡೆಸುವ ಒಬ್ಬ ವೃತ್ತಿನಿರತ, ಅಂದರೆ ಈ ವೃತ್ತಿಯು ರೋಗ, ಗಾಯ, ಮತ್ತು ಇತರ ಶಾರೀರಿಕ ಹಾಗು ಮಾನಸಿಕ ದುರ್ಬಲತೆಗಳ ಅಧ್ಯಯನ, ರೋಗನಿರ್ಣಯ, ಮತ್ತು ಚಿಕಿತ್ಸೆಯ ಮೂಲಕ ಮಾನವ ಆರೋಗ್ಯವನ್ನು ಉತ್ತೇಜಿಸುವುದು, ಕಾಪಾಡಿಕೊಳ್ಳುವುದು, ಅಥವಾ ಪುನರಾರೋಗ್ಯ ಉಂಟುಮಾಡುವುದಕ್ಕೆ ಸಂಬಂಧಿಸಿರುತ್ತದೆ. ಈ ವೃತ್ತಿಯಲ್ಲಿ ನಿರತರಾಗಿರುವವರು ತಮ್ಮ ವೃತ್ತಿಯನ್ನು ನಿರ್ದಿಷ್ಟ ರೋಗಗಳ ವರ್ಗಗಳು, ಪ್ರಕಾರದ ರೋಗಿಗಳು, ಅಥವಾ ಚಿಕಿತ್ಸಾವಿಧಾನಗಳ ಮೇಲೆ ಕೇಂದ್ರೀಕರಿಸಬಹುದು (ಪರಿಣತ ವೈದ್ಯಭಿಷಜ) ಅಥವಾ ವ್ಯಕ್ತಿಗಳು,ಕುಟುಂಬಗಳು, ಮತ್ತು ಸಮುದಾಯಗಳಿಗೆ ನಿರಂತರ ಹಾಗು ಪರಿಪೂರ್ಣ ವೈದ್ಯಕೀಯ ಆರೈಕೆಯನ್ನು ಒದಗಿಸುವ ಜವಾಬ್ದಾರಿಯನ್ನು ವಹಿಸಬಹುದು (ಸಾಮಾನ್ಯ ವೈದ್ಯಭಿಷಜ). ವೈದ್ಯವೃತ್ತಿಗೆ (ಅಂಗರಚನಾಶಾಸ್ತ್ರ ಮತ್ತು ಶರೀರಶಾಸ್ತ್ರದಂತಹ) ಶೈಕ್ಷಣಿಕ ವಿಷಯಗಳು, ಆಧಾರವಾಗಿರುವ ರೋಗಗಳು ಮತ್ತು ಅವುಗಳ ಚಿಕಿತ್ಸೆಯ ವಿವರವಾದ ಅರಿವು - ವೈದ್ಯಕೀಯದ ವಿಜ್ಞಾನ - ಮತ್ತು ಜೊತೆಗೆ ಅದರ ಅನ್ವಯಿಕ ಅಭ್ಯಾಸದಲ್ಲಿ ಒಪ್ಪುವ ಸಾಮರ್ಥ್ಯ - ವೈದ್ಯಶಾಸ್ತ್ರದ ಕಲೆ ಅಥವಾ ಕೌಶಲ ಎರಡೂ ಸರಿಯಾಗಿ ಅಗತ್ಯವಿರುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಚೇಳು ಗಳು ಪರಭಕ್ಷಕ ಜಾತಿಗೆ ಸೇರಿದ ಸಂಧಿಪದಿ (ಜಂತು)ಪ್ರಾಣಿಗಳಾಗಿವೆ.ಪ್ರಾಣಿ ವಿಂಗಡಣೆ ಸಂಧರ್ಭದಲ್ಲಿ ವರ್ಗೀಯ ವಿಂಗಡಣೆಯಲ್ಲಿ ಚೇಳುಗಳು ಅರಕ್ನಿಡ್ ಎಂಬ ಪ್ರಭೇದಕ್ಕೆ ಸೇರುತ್ತವೆ. ಅವುಗಳಿಗೆ ಎಂಟು ಪಾದಗಳಿವೆ.ಅವುಗಳ ಮುಂದಿರುವ ಇಕ್ಕಳದಂತಹ ವಾಸನೆ ಕಂಡು ಹಿಡಿಯುವ ಜೋಡಿ ನಖಗಳು ಹಾಗು ಪಟ್ಟಿಗಳುಳ್ಳ ಸಣ್ಣ ಬಾಲದ ತಿರುವು ಆಕಾರವು, ಅದರ ಹಿಂದೆಯೇ ವಿಷದ ಮುಳ್ಳನ್ನು ಹೊಂದಿರುತ್ತದೆ. ಚೇಳು ಅತ್ಯಂತ ವಿಷಕಾರಿ ಎಂದು ಸಾಮಾನ್ಯವಾಗಿ ಎಲ್ಲರಲ್ಲಿಯೂ ಭಯವಿದೆ.ಈ ಪ್ರಭೇದದ 25 ಜಾತಿಯ ಚೇಳುಗಳಿಗೆ ಮಾತ್ರ ಮಾನವನನ್ನು ಕೊಲ್ಲುವ ವಿಷದ ಪ್ರಮಾಣವಿದೆ.
ಗವರ್ನರ್ ಜನರಲ್ ಆಫ್ ಇಂಡಿಯಾ (ಅಥವಾ, ೧೮೫೮ ರಿಂದ ೧೯೪೭ ವರೆಗೆ, ವೈಸ್ರಾಯ್ ಮತ್ತು ಗವರ್ನರ್ ಜನರಲ್ ಆಫ್ ಇಂಡಿಯಾ ) ಅವರು ಭಾರತದಲ್ಲಿ ಬ್ರಿಟಿಷ್ ಆಡಳಿತದ ಮುಖ್ಯಸ್ಥರಾಗಿದ್ದರು ಮತ್ತು ನಂತರದಲ್ಲಿ ಭಾರತದ ಸ್ವಾತಂತ್ರ್ಯದ ಬಳಿಕ ರಾಜ ಮತ್ತು ದೇಶದ ಡಿ ಫ್ಯಾಕ್ಟೋ ದ ಪ್ರತಿನಿಧಿಗಳಾಗಿದ್ದರು. ಈ ಹುದ್ದೆಯನ್ನು ೧೭೭೩ ರಲ್ಲಿ ಫೋರ್ಟ್ ವಿಲಿಯಮ್ ನ ಪ್ರೆಸಿಡೆನ್ಸಿಯ ಗವರ್ನರ್ ಜನರಲ್ ಎಂಬ ನಾಮಧೇಯದೊಂದಿಗೆ ರಚಿಸಲಾಯಿತು.
ವಿಸ್ಕೊನ್ ಸಿನ್ U.S. ನ ಐವತ್ತು ರಾಜ್ಯಗಳಲ್ಲಿ ಇದೂ ಒಂದಾಗಿದೆ.. ಯುನೈಟೆಡ್ ಸ್ಟೇಟ್ಸ್ ನ ಉತ್ತರ-ಕೇಂದ್ರದಲ್ಲಿರುವ ವಿಸ್ಕೊನ್ ಸಿನ್ ಮಧ್ಯಪ್ರಾಚ್ಯದ ಭಾಗವಾಗಿದೆ.ಇದರ ಪಶ್ಚಿಮಕ್ಕೆ ಮಿನ್ನೆಸೊಟಾ,ಐವೊವಾ ನೈಋತ್ಯಕ್ಕೆ,ಇಲಿಯೊನೊಯಿಸ್ ದಕ್ಷಿಣಕ್ಕಿದ್ದರೆ ಪೂರ್ವದಲ್ಲಿ ಮಿಚಿಗನ್ ಲೇಕ್,ಮಿಚಗನ್ ಈಶಾನ್ಯದಲ್ಲಿದೆ,ಅದೂ ಅಲ್ಲದೇ ಲೇಕ್ ಸುಪಿರಿಯರ್ ಉತ್ತರ ಭಾಗದಲ್ಲಿ ಆವರಿಸಿದೆ. ವಿಸ್ಕೊನ್ ಸಿನ್ ನ ರಾಜಧಾನಿ ಮ್ಯಾಡಿಸನ್ ಮತ್ತು ಮಿಲ್ವೆಕಿ ಅದರ ಅತ್ಯಂತ ದೊಡ್ಡ ನಗರವಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಕಪ್ಪು ಕುಳಿ ಬಾಹ್ಯಾಕಾಶದ ಪ್ರದೇಶವಾಗಿದ್ದು, ಅದರಿಂದ ಬೆಳಕು ಸೇರಿದಂತೆ ಯಾವುದೂ ತಪ್ಪಿಸಿಕೊಂಡು ಹೋಗುವುದು ಸಾಧ್ಯವಾಗುವುದಿಲ್ಲ. ಇದು ತೀರಾ ಸಾಂದ್ರೀಕೃತ ದ್ರವ್ಯರಾಶಿಯಿಂದ ಉಂಟಾದ ಸ್ಪೇಸ್ಟೈಮ್(ದೇಶ-ಕಾಲ)(ದೇಶದ ಮೂರು ಆಯಾಮ ಮತ್ತು ಕಾಲದ ಒಂದು ಆಯಾಮದ ಕಲ್ಪನೆ) ರೂಪವಿಕೃತಿಯ ಫಲಿತಾಂಶವಾಗಿದೆ. ಕಪ್ಪು ಕುಳಿಯ ಸುತ್ತ ಗುರುತಿಸಲಾಗದ ಹೊರಮೈಯಿದ್ದು, ಇದು ಹಿಂತಿರುಗಲಾರದ ಬಿಂದುವನ್ನು ಸಂಕೇತಿಸುತ್ತದೆ.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಬ್ರಿಟಿಷರ ಆಕ್ರಮಣ ಕಾಲದಿಂದಲೇ ಒಂದು ದೃಷ್ಟಿಯಲ್ಲಿ ಆರಂಭವಾಗಿ, ೧೯ನೆಯ ಶತಮಾನದ ನಡುಗಾಲದಿಂದ ಕ್ರಮೇಣ ತೀವ್ರವಾಗಿ, ೨೦ನೆಯ ಶತಮಾನದಲ್ಲಿ ವ್ಯಾಪಕವಾಗಿ ಹಬ್ಬಿ, ೧೯೪೭ರಲ್ಲಿ ಯಶಸ್ವಿಯಾಗಿ ಪರ್ಯವಸಾನ ಹೊಂದಿನ ಭಾರತೀಯ ಸ್ವಾತಂತ್ರ್ಯ ಚಳವಳಿಯ ಅಂಗವಾಗಿದ್ದೂ ವಿಶಿಷ್ಟವಾಗಿ ವಿಕಾಸಗೊಂಡ ಕರ್ನಾಟಕ ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಸ್ಥೂಲವಾಗಿ ಮೂರು ಕಾಲಗಳಾಗಿ ವಿಂಗಡಿಸಬಹುದಾಗಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಅಲೆಕ್ಸಾಂಡರ್ ಗ್ರಹಾಂ ಬೆಲ್ (ಮಾರ್ಚ್ ೩, ೧೮೪೭ – ಆಗಸ್ಟ್ ೨, ೧೯೨೨) ಒಬ್ಬ ಉತ್ಕೃಷ್ಟ ವಿಜ್ಞಾನಿ, ಆವಿಷ್ಕಾರಕ, ಎಂಜಿನಿಯರ್ ಮತ್ತು ಹೊಸತನದ ಪ್ರವರ್ತಕನಾಗಿದ್ದ. ಮೊದಲ ಕಾರ್ಯೋಪಯೋಗಿ ದೂರವಾಣಿಯನ್ನು ಸೃಷ್ಟಿಸಿದ ಕೀರ್ತಿ ಇವನಿಗೆ ದೊರಕಿದೆ. ಬೆಲ್ನ ತಂದೆ, ತಾತ, ಮತ್ತು ಸೋದರ ಇವರೆಲ್ಲರೂ ವಾಗ್ವೈಖರಿ ಮತ್ತು ವಾಕ್ ಶಕ್ತಿಗೆ ಸಂಬಂಧಿಸಿದ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು, ಮತ್ತು ಅವನ ತಾಯಿ ಹಾಗೂ ಹೆಂಡತಿ ಕಿವುಡರಾಗಿದ್ದುದು ಬೆಲ್ನ ಜೀವಮಾನದ ಕಾರ್ಯದ ಮೇಲೆ ಆಳವಾದ ಪ್ರಭಾವವನ್ನು ಬೀರಿತ್ತು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಅಮ್ಮ ಎಂಬುದು ಕನ್ನಡದಲ್ಲಿ ತಾಯಿಗೆ ಪರ್ಯಾಯ ಪದ.ಅಮ್ಮ ಎಂಬುದು ತಾಯಿಯನ್ನು ಸಂಬೋಧಿಸುವ ಪದ ಕೂಡಾ ಹೌದು.ಅಲ್ಲದೆ ಹಿರಿಯ ಹೆಂಗಸರನ್ನು ಸಂಬೋಧಿಸುವಾಗ ಮರ್ಯಾದೆ ಸೂಚಕ ಪದವಾಗಿ ಕೂಡಾ ಬಳಕೆಯಾಗುತ್ತದೆ.ಮಾತೃಸ್ವರೂಪಿಣಿಯಾದ ದೇವತೆಗೆ ಅಮ್ಮ ಎಂದು ಕರೆಯುವ ವಾಡಿಕೆ ಇದೆ.ಮೈಮೇಲೆ ಏಳುವ ದಡಾರ ಮುಂತಾದ ಗುಳ್ಳೆಗಳಿಗೆ "ಅಮ್ಮ ಎದ್ದಿದೆ" ಎಂದು ಹೇಳುವ ರೂಢಿ ಇದೆ. ಅಮ್ಮ ಹೆಸರಿನ ಕನ್ನಡ ಚಲನಚಿತ್ರದ ಬಗ್ಗೆ ಲೇಖನ ಈ ಪುಟದಲ್ಲಿ ಇದೆ.
ಹಿಂದೂ ಧರ್ಮದಲ್ಲಿ, ಯಜ್ಞ ಅಥವಾ ಯಾಗವು ವೈದಿಕ ಕಾಲದಿಂದ ಹುಟ್ಟಿಕೊಂಡಿರುವ ವೈದಿಕ ಮಂತ್ರಗಳ (ಮತ್ತು ಅರ್ಚನೆ, ಪ್ರಾರ್ಥನೆ, ಪ್ರಶಂಸೆ, ಅರ್ಪಣೆ ಮತ್ತು ನೈವೇದ್ಯ, ಬಲಿದಾನ) ಪಠಣವು ಜೊತೆಗೂಡಿರುವ ಅರ್ಪಣೆಗಳ ಒಂದು ಧರ್ಮಾಚರಣೆ. ಯಜ್ಞವು ಅಗ್ನಿಯಲ್ಲಿ ಹವನ ಸಾಮಗ್ರಿಯನ್ನು ಅರ್ಪಿಸುವ ಮತ್ತು ಶುದ್ಧೀಕರಿಸುವ ಒಂದು ಪುರಾತನ ಕ್ರಿಯಾವಿಧಿ. ಯಜ್ಞ ಶಬ್ದದ ಭವ್ಯ ಅರ್ಥವು ಸಂಸ್ಕೃತ ಕ್ರಿಯಾಪದ ಯಜ್ ಇಂದ ವ್ಯುತ್ಪನ್ನವಾಗಿದೆ, ಮತ್ತು ಇದು ಮೂರು ಅರ್ಥಗಳನ್ನು ಹೊಂದಿದೆ - ದೇವಪೂಜನ, ಸೌಗತೀಕರಣ ಹಾಗೂ ದಾನ.
ಡಾ.ಶಶಿ ತರೂರ್ ಮಲಯಾಳಂ:ശശി തരൂ൪,ಹಿಂದಿ:शशि तरूर (ಜನನ ೯ ಮಾರ್ಚ್ ೧೯೫೬ ) ಕೇರಳದ ತ್ರಿವೇಂದ್ರಮ್ ಕ್ಷೇತ್ರದಿಂದ ಆರಿಸಿ ಬಂದ ಭಾರತದ ಸಂಸತ್ತಿನ ಸದಸ್ಯರಾಗಿದ್ದಾರೆ ಮತ್ತು ಈಗ ಭಾರತದ ವಿದೇಶಾಂಗ ಖಾತೆಯ ರಾಜ್ಯ ಸಚಿವರಾಗಿದ್ದಾರೆ. ಇದಕ್ಕೂ ಮುನ್ನ, ೨೦೦೨ರಿಂದ ೨೦೦೭ರವರೆಗೆ,ಯುನೈಟೆಡ್ ನೇಷನ್ಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಕೋಫಿ ಅಣ್ಣನ್ ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ, ಯುನೈಟೆಡ್ ನೇಷನ್ಸ್ ನ ಸಂಪರ್ಕ ಮತ್ತು ಸಾರ್ವಜನಿಕ ಮಾಹಿತಿ ವಿಭಾಗದ ಅಧೀನ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯವಹಿಸಿದರು. ೨೦೦೬ರಲ್ಲಿ ಯುನೈಟೆಡ್ ನೇಷನ್ಸ್ ನ ಪ್ರಧಾನ ಕಾರ್ಯದರ್ಶಿಯ ಕಚೇರಿಗೆ ಅವರು ಭಾರತದ ಅಧಿಕೃತ ಅಭ್ಯರ್ಥಿಯಾಗಿ ಸೂಚಿತರಾಗಿ,ಆ ಹುದ್ದೆಗೆ ಆಯ್ಕೆಯಾಗಲು ಮುಂಚೂಣಿಯಲ್ಲಿದ್ದ ಏಳು ಅಭ್ಯರ್ಥಿಗಳಲ್ಲಿ ಎರಡನೆಯ ಸ್ಥಾನವನ್ನು ಪಡೆದರು.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.