The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಗುರಾಣಿ ಕೈಯಲ್ಲಿ ಹಿಡಿಯಲಾದ ಅಥವಾ ಮಣಿಕಟ್ಟು ಅಥವಾ ಮುಂಗೈ ಮೇಲೆ ಏರಿಸಲಾದ ವೈಯಕ್ತಿಕ ರಕ್ಷಾಕವಚದ ಒಂದು ತುಂಡು. ನಿಕಟ ವ್ಯಾಪ್ತಿಯ ಶಸ್ತ್ರಾಸ್ತ್ರಗಳಿಂದ ಅಥವಾ ಬಾಣಗಳಂತಹ ಉತ್ಕ್ಷೇಪಕಗಳಿಂದಾಗಬಹುದಾದ ನಿರ್ದಿಷ್ಟ ದಾಳಿಗಳಿಗೆ ತಡೆಯೊಡ್ಡಲು ಗುರಾಣಿಗಳನ್ನು ಬಳಸಲಾಗುತ್ತದೆ, ನಿಷ್ಕ್ರಿಯ ರಕ್ಷಣೆ ಒದಗಿಸುವ ಬದಲು ಕ್ರಿಯಾತ್ಮಕ ತುಂಡುಗಳ ಮೂಲಕ. ಗುರಾಣಿಗಳು ಗಾತ್ರದಲ್ಲಿ ಬಹುಮಟ್ಟಿಗೆ ಬದಲಾಗುತ್ತವೆ, ಬಳಕೆದಾರನ ಸಂಪೂರ್ಣ ಶರೀರವನ್ನು ರಕ್ಷಿಸುವ ದೊಡ್ಡ ಫಲಕಗಳಿಂದ ಹಿಡಿದು ಕೈಕೈ ಹೊಡೆದಾಟದ ಬಳಕೆಗೆ ಉದ್ದೇಶಿತವಾದ ಸಣ್ಣ ಮಾದರಿಗಳವರೆಗೆ (ಉದಾ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಡೊನಾಲ್ಡ್ ಜಾನ್ ಟ್ರಂಪ್ ರವರು ೧೯೪೬ ರ ಜೂನ್ ೧೪ ರಂದು ಜನಿಸಿದರು,ಇವರು ಅಮೆರಿಕದ ಪ್ರಭಾವಿ ಉದ್ಯಮಿ ಹಾಗೂ ೨೦೧೬ರ ಅಮೇರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತು ೨೦೨೪ರಲ್ಲಿ ರಿಪಬ್ಲಿಕನ್ ಪಕ್ಷದ ವಿಜಯೀ ಅಭ್ಯರ್ಥಿ. ೨೦೧೭ರ ಜನವರಿ ೨೦ರಂದು ಅಮೇರಿಕದ ೪೫ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರು ಲೇಖಕರಾಗಿ ಮತ್ತು ಮಾಧ್ಯಮ ಲೋಕದ ಖ್ಯಾತಿಯನ್ನು ಪಡೆದ್ದಿದ್ದರು.ಅವರು ಟ್ರಂಪ್ ಸಂಸ್ಥೆಯ ಅಧ್ಯಕ್ಷ ಮತ್ತು ಟ್ರಂಪ್ ಎಂಟರ್ಟೈನ್ಮೆಂಟ್ ರೆಸಾರ್ಟ್ಸ್ ನ ಸ್ಥಾಪಕರಾಗಿದ್ದರು.ಟ್ರಂಪ್ ವೃತ್ತಿಜೀವನದಲ್ಲಿ, ಮುದ್ರೆಹಾಕುವುದರಲ್ಲಿ ಅವರ ಪ್ರಯತ್ನಗಳು, ಜೀವನ, ಮತ್ತು ನೇರ್ ನುಡಿಗಳು ಅವರನ್ನು ಬಹಳ ವರ್ಷಗಳ ಕಾಲ ಒಬ್ಬ ಖ್ಯಾತ ವ್ಯಕ್ತಿಯನ್ನಾಗಿ ಮಾಡಿತು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಇತಿಹಾಸ ಎಂದರೆ ನಮ್ಮ ಭೂತಕಾಲದ ಬಗೆಗಿನ ಮಾಹಿತಿ ಎಂದರ್ಥ (ಸಂಸ್ಕೃತದಲ್ಲಿ ಇತಿ=ಹೀಗೆ ಮತ್ತು ಹಾಸ=ಆದದ್ದು ಎಂಬ ವಿವರಣೆ ಇದೆ). ಸಂಬಂಧಪಟ್ಟ ವಿಷಯಗಳಿಗೆ ಈ ಪದವನ್ನು ನಾಮಪದವನ್ನಾಗಿ ಉಪಯೋಗಿಸಿದಾಗ ಇತಿಹಾಸವು ಮಾನವ, ಕುಟುಂಬ, ಮತ್ತು ಸಮಾಜದ ಮತ್ತು ಜೈವಿಕ ಬದುಕಿನ ಆಗುಹೋಗುಗಳ ದಾಖಲೆಗಳ ವೈಚಾರಿಕ ಚಿಂತನೆಗೆ ಪರಿಭಾಷೆಯಾಗಿ ಬಳಸಲ್ಪಡುತ್ತದೆ. ಬಹುಮಟ್ಟಿನ ಇತಿಹಾಸಕಾರರು ತಮ್ಮ ಅಧ್ಯಯನಗಳಿಗೆ ಬರವಣಿಗೆಯಲ್ಲಿ ದಾಖಲಾಗಿರುವ ಮೂಲಗಳನ್ನು ಆಧಾರವಾಗಿಟ್ಟುಕೊಳ್ಳುತ್ತಾರೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),
ದ್ರವೀಕೃತ ಪೆಟ್ರೋಲಿಯಮ್ ಅನಿಲ(LPG, GPL, LP ಗ್ಯಾಸ್, ಅಥವಾ ಆಟೋಗ್ಯಾಸ್ ಎಂದೂ ಕರೆಯಲಾದ) [[ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ. ಈ ಅನಿಲವನ್ನು ಬಿಸಿ ಮಾಡುವ ಉಪಕರಣಗಳು ಹಾಗೂ ವಾಹನಗಳಲ್ಲಿ ಇಂಧನ ರೂಪದಲ್ಲಿ ಬಳಸಲಾಗುತ್ತಿದೆ. ಇದಲ್ಲದೆ, ಓಜೋನ್ ಪದರಕ್ಕೆ ಹಾನಿಯನ್ನು ಕಡಿಮೆಗೊಳಿಸುವ ಉದ್ದೇಶದಿಂದ, ಕ್ಲೋರೋಫ್ಲೋರೋಕಾರ್ಬನ್ಗಳ ಬದಲಿಗೆ, ವಾಯುದ್ರವ ನೋದಕ (ಏರೋಸಾಲ್ ಪ್ರೊಪೆಲ್ಲಂಟ್) ಹಾಗೂ ಶೀತಕ|ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೫ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು
ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು ( ಇಂಗ್ಲೀಷ್ : National Council of Educational Research and Training - NCERT ) ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರ ಮತ್ತು ಪ್ರಾಂತೀಯ ಸರ್ಕಾರಗಳಿಗೆ ಸಲಹೆ ನೀಡುವ ಉದ್ದೇಶದಿಂದ ಭಾರತ ಸರ್ಕಾರ ಸ್ಥಾಪಿಸಿದ ಸಂಸ್ಥೆ. ಈ ಮಂಡಳಿ ಭಾರತದಲ್ಲಿನ ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲಾ ನೀತಿಗಳ ಮೇಲೆ ಕಾರ್ಯನಿರ್ವಹಿಸುತ್ತದೆ. ಇದರ ಮುಖ್ಯ ಕಾರ್ಯವೆಂದರೆ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಚಿವಾಲಯಕ್ಕೆ, ವಿಶೇಷವಾಗಿ ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮತ್ತು ನೀತಿ ನಿರೂಪಣೆಗೆ ಸಹಾಯ ಮಾಡುವುದು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಒಂದು ಪುಸ್ತಕ, ಮ್ಯಾಗಜ಼ೀನ್, ಸುದ್ದಿಪತ್ರಿಕೆ, ಅಥವಾ ಹಾಳೆಗಳ ಇತರ ಸಂಗ್ರಹದಲ್ಲಿ, ಪುಟವು ಕಾಗದ, ಚರ್ಮದ ಕಾಗದ ಅಥವಾ ಇತರ ವಸ್ತುವಿನ (ಅಥವಾ ವಿದ್ಯುನ್ಮಾನ ಮಾಧ್ಯಮ) ಹಾಳೆಯ ಒಂದು ಬದಿಯಾಗಿರುತ್ತದೆ. ದಸ್ತಾವೇಜನ್ನು ಸೃಷ್ಟಿಸಲು ಇದರ ಮೇಲೆ ಪಠ್ಯ ಅಥವಾ ಚಿತ್ರಗಳನ್ನು ಮುದ್ರಿಸಬಹುದು, ಬರೆಯಬಹುದು ಅಥವಾ ಬಿಡಿಸಬಹುದು. ಇದನ್ನು ಮಾಹಿತಿಯ ಸಾಮಾನ್ಯ ಪ್ರಮಾಣವನ್ನು ("ಆ ವಿಷಯವು ಹನ್ನೆರಡು ಪುಟಗಳನ್ನು ಒಳಗೊಳ್ಳುತ್ತದೆ") ಅಥವಾ ಹೆಚ್ಚು ನಿರ್ದಿಷ್ಟ ಪ್ರಮಾಣವನ್ನು (ಒಂದು ಸಾಮಾನ್ಯ ಪುಟದಲ್ಲಿ ಹನ್ನೆರಡು ಬಿಂದು ಫ಼ಾಂಟ್ ಪ್ರಕಾರದಲ್ಲಿ ೫೩೫ ಶಬ್ದಗಳಿವೆ) ತಿಳಿಸುವ ಅಳತೆಯಾಗಿ ಬಳಸಬಹುದು.
ಅರಿಸ್ಟಾಟಲ್ (Greek: Ἀριστοτέλης , ಅರಿಸ್ಟಾಟೆಲೆಸ್ ) (384 BC – 322 BC) ಒಬ್ಬ ಗ್ರೀಕ್ ದಾರ್ಶನಿಕ ಮಾತ್ರವಲ್ಲದೆ, ಪ್ಲೇಟೋನ ಓರ್ವ ವಿದ್ಯಾರ್ಥಿ ಹಾಗೂ ಅಲೆಕ್ಸಾಂಡರ್ನ ಗುರುವಾಗಿದ್ದ. ಭೌತಶಾಸ್ತ್ರ, ತತ್ತ್ವಮೀಮಾಂಸೆ, ಕವಿತೆ, ರಂಗಭೂಮಿ, ಸಂಗೀತ, ತರ್ಕಶಾಸ್ತ್ರ, ಭಾಷಣಶಾಸ್ತ್ರ, ರಾಜಕಾರಣ, ಸರ್ಕಾರ, ನೀತಿಶಾಸ್ತ್ರ, ಜೀವಶಾಸ್ತ್ರ, ಮತ್ತು ಪ್ರಾಣಿಶಾಸ್ತ್ರ ಇವೇ ಮೊದಲಾದವನ್ನು ಒಳಗೊಂಡಂತೆ ಅನೇಕ ವಿಷಯಗಳ ಕುರಿತು ಆತ ಬರೆದ. ಪ್ಲೇಟೋನ ಗುರುವಾದ ಸಾಕ್ರಟಿಸ್ ಮತ್ತು ಪ್ಲೇಟೋನ ಜೊತೆಜೊತೆಗೆ, ಪಾಶ್ಚಿಮಾತ್ಯ ತತ್ತ್ವಶಾಸ್ತ್ರದಲ್ಲಿನ ಅತಿ ಪ್ರಮುಖ ಪ್ರಸಿದ್ಧ ಸಂಸ್ಥಾಪಕರಲ್ಲಿ ಅರಿಸ್ಟಾಟಲ್ ಕೂಡಾ ಒಬ್ಬನಾಗಿದ್ದಾನೆ.
ಭಾರತದ ರಾಷ್ಟ್ರೀಯ ಉದ್ಯಾನಗಳ ಹಾಗು ರಾಷ್ಟ್ರಮಟ್ಟದ ವನ್ಯಜೀವಿ ಧಾಮಗಳ ಪಟ್ಟಿ ಇಂತಿದೆ. ಸೂ: ಪೆಂಚ್ ರಾಷ್ಟ್ರೀಯ ಉದ್ಯಾನವು ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಗಳಲ್ಲಿ ಹರಡಿದ್ದು ತಮ್ಮ ತಮ್ಮ ಭಾಗದ ಉಸ್ತುವಾರಿಯನ್ನು ಎರಡೂ ರಾಜ್ಯಗಳು ಬೇರೆಬೇರೆಯಾಗಿ ನೋಡಿಕೊಳ್ಳುತ್ತವೆ. ಸಂಜಯ್ ರಾಷ್ಟ್ರೀಯ ಉದ್ಯಾನವು ಛತ್ತೀಸ್ ಗಢ ಮತ್ತು ಮಧ್ಯಪ್ರದೇಶಗಳಲ್ಲಿ ಹರಡಿದ್ದು ತಮ್ಮ ತಮ್ಮ ಭಾಗದ ಉಸ್ತುವಾರಿಯನ್ನು ಎರಡೂ ರಾಜ್ಯಗಳು ಬೇರೆಬೇರೆಯಾಗಿ ನೋಡಿಕೊಳ್ಳುತ್ತವೆ.