The most-visited ಕನ್ನಡ Wikipedia articles, updated daily. Learn more...
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ರಂಗಭೂಮಿ ಚಟುವಟಿಕೆ ನಿರತರಿಗೂ ಒಂದು ಸ್ಮರಣೀಯ ದಿನ ಬೇಕು ಎನ್ನುವ ಕಾರಣಕ್ಕೆ 1962ರಿಂದ ವಿಶ್ವ ರಂಗಭೂಮಿ ದಿನವನ್ನು ಮಾರ್ಚ್ 27ರಂದು ಆಚರಿಸಿಕೊಂಡು ಬರಲಾಗುತ್ತಿದೆ. ಪ್ಯಾರಿಸ್ನಲ್ಲಿ ಮುಖ್ಯ ಕಚೇರಿ ಹೊಂದಿರುವ ಅಂತರರಾಷ್ಟ್ರೀಯ ರಂಗಸಂಸ್ಥೆಯು ಪ್ರತಿವರ್ಷ ವಿಶ್ವದ ಯಾವುದಾದರೊಂದು ಭಾಷೆಯ ಹೆಸರಾಂತ ನಟ, ನಾಟಕಕಾರ, ನಿರ್ದೇಶಕ ಅಥವಾ ಸಂಘಟಕನಿಗೆ ಒಂದು ಸಂದೇಶ ಕೊಡುವಂತೆ ಕೇಳಿಕೊಂಡು ಅದನ್ನು ವಿಶ್ವದೆಲ್ಲೆಡೆ ಪಸರಿಸುತ್ತದೆ. ಕನ್ನಡಕ್ಕೂ ಒಮ್ಮೆ ಈ ಗೌರವ ಸಂದಿತ್ತು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಒಂದು ಅವಳಿ ನಕ್ಷತ್ರ ವೆಂದರೆ, ತಮ್ಮ ಸಮಾನ ರಾಶಿಕೇಂದ್ರದ ಸುತ್ತ ಪರಿಭ್ರಮಿಸುವ ಎರಡು ನಕ್ಷತ್ರಗಳನ್ನೊಳಗೊಂಡ ತಾರಾ ಮಂಡಲವಾಗಿದೆ. ಅತ್ಯಂತ ಪ್ರಕಾಶಮಾನವಾದ ನಕ್ಷತ್ರವನ್ನು ಪ್ರಾಥಮಿಕ ತಾರೆಯೆಂದು ಹಾಗು ಮತ್ತೊಂದು ಅದರ ಸಹತಾರೆ ಯೆಂದು, ಅಲ್ಲದೇ ಹತ್ತಿರವಿರುವ, ಕಮ್ಸ್, ಅಥವಾ ದ್ವಿತೀಯಕ ತಾರೆ ಗಳೆಂದು ಕರೆಯಲಾಗುತ್ತದೆ. ೧೯ನೇ ಶತಮಾನದ ಆರಂಭ ಮತ್ತು ಇಂದಿನವರೆಗಿನ ಸಂಶೋಧನೆಗಳು, ಹಲವು ನಕ್ಷತ್ರಗಳು ಅವಳಿ ತಾರಾ ವ್ಯವಸ್ಥೆಗಳು ಅಥವಾ ಎರಡಕ್ಕಿಂತ ಹೆಚ್ಚು ತಾರೆಗಳಿರುವ ತಾರಾ ಮಂಡಲದ ಭಾಗವಾಗಿರುತ್ತವೆ, ಎಂದು ಸೂಚಿಸಿದೆ.
ಅಪರಿಗ್ರಹ ಅಸ್ವಾಮ್ಯತೆ ಅಥವಾ ದುರಾಸೆಯಲ್ಲದರ ಪರಿಕಲ್ಪನೆ ಮತ್ತು ಇದು ಒಂದು ಜೈನ ಪರಿಕಲ್ಪನೆ ಮತ್ತು ರಾಜಯೋಗ ಅಥವಾ ಅಷ್ಟಾಂಗ ಯೋಗ ಸಂಪ್ರದಾಯಗಳ ಭಾಗ ಕೂಡ. ಈ ಪದದ ಸಾಮಾನ್ಯ ಅರ್ಥ ಸಮಯ ಹಾಗು ಅವಧಿಯೊಂದಿಗೆ ಬದಲಾಗುವ ಸ್ವತ್ತುಗಳನ್ನು ಅಗತ್ಯವಿದ್ದಷ್ಟಕ್ಕೆ ಅಥವಾ ಪ್ರಮುಖವಾದವುಗಳಿಗೆ ಮಿತಿಗೊಳಿಸುವುದು, ಆದರೆ ಸಾಧುಗಳು ಯಾವುದೇ ಸ್ವತ್ತುಗಳನ್ನು ಹೊಂದಿರುವುದಿಲ್ಲ. ಅಹಿಂಸೆ, ಆಸ್ತೇಯ, ಬ್ರಹ್ಮಚರ್ಯ ಮತ್ತು ಸತ್ಯಗಳೊಂದಿಗೆ ಅದು ಜೈನ ಧರ್ಮದ ಐದು ತತ್ವಗಳ ಪೈಕಿ ಒಂದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಚದುರಂಗ (ಚೆಸ್) ಇಬ್ಬರು ಆಟಗಾರರಿಂದ ಆಡಲ್ಪಡುವ ಒಂದು ಆಟ - ಇದನ್ನು ೬೪ ಚೌಕಗಳಿರುವ ಮಣೆಯ ಮೇಲೆ ಆಡಲಾಗುತ್ತದೆ. ಮಣೆಯ ಮೇಲಿನ ಚೌಕಗಳು ಕಪ್ಪು ಮತ್ತು ಬಿಳುಪು ಬಣ್ಣಗಳಿಂದ ಕೂಡಿದ್ದ ಒಂದು ಕಪ್ಪು ಮತ್ತು ಒಂದು ಬಿಳಿ - ಹೀಗೆ ಜೋಡಿಸಲ್ಪಟ್ಟಿರುತ್ತವೆ. ಆಟದ ಪ್ರಾರಂಭದಲ್ಲಿ ಪ್ರತಿ ಆಟಗಾರನ ಬಳಿ ೧೬ ಕಾಯಿಗಳಿರುತ್ತವೆ - ಒಂದು ರಾಜ, ಒಂದು ರಾಣಿ, ಎರಡು ಆನೆ, ಎರಡು ಕುದುರೆ, ಎರಡು ಒಂಟೆ ಮತ್ತು ಎಂಟು ಪದಾತಿಗಳು.
ಬಾಬು ಜಗಜೀವನ್ ರಾಮ್ (೫ ಏಪ್ರಿಲ್ ೧೯೦೮ - ೬ ಜುಲೈ ೧೯೮೬) ಇವರು ಜನಪ್ರಿಯವಾಗಿ ಬಾಬೂಜಿ ಎಂದು ಕರೆಯಲ್ಪಡುತ್ತಾರೆ ಹಾಗೂ ಇವರು ಭಾರತದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಿಹಾರದ ರಾಜಕಾರಣಿಯಾಗಿದ್ದರು. ೧೯೩೫ ರಲ್ಲಿ, ದಲಿತರಿಗೆ ಸಮಾನತೆಯನ್ನು ಸಾಧಿಸಲು ಸಮರ್ಪಿತವಾದ ಅಖಿಲ ಭಾರತ ಶೋಷಿತ ವರ್ಗಗಳ ಲೀಗ್ ಅನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು ಮತ್ತು ೧೯೩೭ ರಲ್ಲಿ, ಬಿಹಾರ ವಿಧಾನಸಭೆಗೆ ಆಯ್ಕೆಯಾದರು. ನಂತರ, ಅವರು ಗ್ರಾಮೀಣ ಕಾರ್ಮಿಕ ಚಳವಳಿಯನ್ನು ಸಂಘಟಿಸಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ನಾಟಕವು ನಟರು ಅಭಿನಯಿಸಬಹುದಾದ ರೀತಿಯಲ್ಲಿ ರಚಿಸಲ್ಪಡುವ ಒಂದು ಸಾಹಿತ್ಯ ಪ್ರಕಾರ. ನಾಟಕದ ಅಭಿನಯವು ಒಂದು ರಂಗಕಲೆಯ ವಿಧ. ನಾಟಕವು ಪ್ರದರ್ಶನದಲ್ಲಿ ಪ್ರತಿನಿಧಿಸುವ ನಿರ್ದಿಷ್ಟ ಕಾಲ್ಪನಿಕ ವಿಧಾನವಾಗಿದೆ: ನಾಟಕ, ಒಪೆರಾ, ಮೈಮ್, ಬ್ಯಾಲೆ, ಇತ್ಯಾದಿಗಳನ್ನು ರಂಗಮಂದಿರದಲ್ಲಿ ಅಥವಾ ರೇಡಿಯೋ ಅಥವಾ ದೂರದರ್ಶನದಲ್ಲಿ ಪ್ರದರ್ಶಿಸಲಾಗುತ್ತದೆ.[1] ಸಾಮಾನ್ಯವಾಗಿ ಕಾವ್ಯದ ಪ್ರಕಾರವಾಗಿ ಪರಿಗಣಿಸಲ್ಪಟ್ಟಿರುವ, ನಾಟಕೀಯ ವಿಧಾನವು ನಾಟಕೀಯ ಸಿದ್ಧಾಂತದ ಆರಂಭಿಕ ಕೃತಿಯಾದ ಅರಿಸ್ಟಾಟಲ್ನ ಪೊಯೆಟಿಕ್ಸ್ (c.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ದಾವೂದ್ ಇಬ್ರಾಹಿಂ ಕಸ್ಕರ್ ಒಬ್ಬ ಭಾರತೀಯ ದರೋಡೆಕೋರ, ಮಾದಕವಸ್ತು ದೊರೆ, ಮತ್ತು ಭಯೋತ್ಪಾದಕ. ಅವರು 1970 ರ ದಶಕದಲ್ಲಿ ಮುಂಬೈನಲ್ಲಿ ಸ್ಥಾಪಿಸಿದ ಭಾರತೀಯ ಸಂಘಟಿತ ಅಪರಾಧ ಸಿಂಡಿಕೇಟ್ ಡಿ-ಕಂಪನಿಯ ಮುಖ್ಯಸ್ಥರಾಗಿದ್ದಾರೆಂದು ವರದಿಯಾಗಿದೆ. ಇಬ್ರಾಹಿಂ ವಿರುದ್ಧ ಕೊಲೆ, ಸುಲಿಗೆ, ಗುರಿಯಾಗಿಸಿಕೊಂಡು ಹತ್ಯೆ, ಮಾದಕವಸ್ತು ಕಳ್ಳಸಾಗಣೆ ಮತ್ತು ಭಯೋತ್ಪಾದನೆ ಸೇರಿದಂತೆ ಹಲವು ಆರೋಪಗಳ ಮೇಲೆ ಬೇಕಾಗಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಋತುಚಕ್ರ ಪ್ರತಿ ತಿಂಗಳು ಗರ್ಭಕೋಶದ ಒಳಪದರು ಗರ್ಭದಾರಣೆಗೆ ಸಿದ್ಧವಾಗುತ್ತದೆ. ಪ್ರಜನನ ಸಾಮರ್ಥ್ಯ ಹೊಂದಿದ ಕಾಲದಾದ್ಯಂತ ಎಂದರೆ ಸ್ತ್ರೀ ಋತುಮತಿಯಾದ ಕಾಲದಿಂದ ಋತುಬಂಧದ ವರೆಗೆ-ಗರ್ಭವತಿಯಾದಾಗ ಮತ್ತು ಹೆರಿಗೆಯಾದ ಕೆಲವು ತೊಂಗಳನ್ನು ಹೊರತುಪಡಿಸಿ ಪ್ರತಿ ತಿಂಗಳು ರಜಸ್ರಾವವನ್ನು ತೋರ್ಪಡಿಸುತ್ತಾಳೆ. ಗರ್ಭ ತೆಳೆಯದ್ದಿದ್ದರೆ ಬರಲಿರುವ ಸಂತಾನಕ್ಕಾಗಿ ನೆಲೆಯೊದಗಿಸಲು ರೂಪುಗೊಂಡ ಈ ಪದರು ಕಳಚಿ ಬಿದ್ದು ಈ ಕಾರ್ಯವನ್ನು ಪುನರಾರಂಭಿಸುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಅರಿಸ್ಟಾಟಲ್ (Greek: Ἀριστοτέλης , ಅರಿಸ್ಟಾಟೆಲೆಸ್ ) (384 BC – 322 BC) ಒಬ್ಬ ಗ್ರೀಕ್ ದಾರ್ಶನಿಕ ಮಾತ್ರವಲ್ಲದೆ, ಪ್ಲೇಟೋನ ಓರ್ವ ವಿದ್ಯಾರ್ಥಿ ಹಾಗೂ ಅಲೆಕ್ಸಾಂಡರ್ನ ಗುರುವಾಗಿದ್ದ. ಭೌತಶಾಸ್ತ್ರ, ತತ್ತ್ವಮೀಮಾಂಸೆ, ಕವಿತೆ, ರಂಗಭೂಮಿ, ಸಂಗೀತ, ತರ್ಕಶಾಸ್ತ್ರ, ಭಾಷಣಶಾಸ್ತ್ರ, ರಾಜಕಾರಣ, ಸರ್ಕಾರ, ನೀತಿಶಾಸ್ತ್ರ, ಜೀವಶಾಸ್ತ್ರ, ಮತ್ತು ಪ್ರಾಣಿಶಾಸ್ತ್ರ ಇವೇ ಮೊದಲಾದವನ್ನು ಒಳಗೊಂಡಂತೆ ಅನೇಕ ವಿಷಯಗಳ ಕುರಿತು ಆತ ಬರೆದ. ಪ್ಲೇಟೋನ ಗುರುವಾದ ಸಾಕ್ರಟಿಸ್ ಮತ್ತು ಪ್ಲೇಟೋನ ಜೊತೆಜೊತೆಗೆ, ಪಾಶ್ಚಿಮಾತ್ಯ ತತ್ತ್ವಶಾಸ್ತ್ರದಲ್ಲಿನ ಅತಿ ಪ್ರಮುಖ ಪ್ರಸಿದ್ಧ ಸಂಸ್ಥಾಪಕರಲ್ಲಿ ಅರಿಸ್ಟಾಟಲ್ ಕೂಡಾ ಒಬ್ಬನಾಗಿದ್ದಾನೆ.
ಜಾರ್ಜ್ ವಾಷಿಂಗ್ಟನ್ (ಫೆಬ್ರುವರಿ ೨೨, ೧೭೩೨ — ಡಿಸೆಂಬರ್ ೧೪, ೧೭೯೯) ಅಮೇರಿಕದ ಕ್ರಾಂತಿಕಾರಿ ಯುದ್ಧದಲ್ಲಿ ಬ್ರಿಟನ್ನಿನ ವಿರುದ್ಧ ವಿಜಯಿಯಾದ ಖಂಡದ ಸೈನ್ಯದ ಸೇನಾಧಿಪತಿಯಾಗಿದ್ದು, ಯುದ್ಧದ ಪರಿಣಾಮವಾಗಿ ಸ್ಥಾಪಿತವಾದ ಅಮೇರಿಕ ಸಂಯುಕ್ತ ಸಂಸ್ಥಾನದ ಪ್ರಥಮ ರಾಷ್ಟ್ರಪತಿಯಾಗಿ ಚುನಾಯಿತರಾದವರು. ಅಮೇರಿಕ ದೇಶದ ಸ್ಥಾಪನೆಯಲ್ಲಿ ಇವರ ಪ್ರಮುಖ ಪಾತ್ರವಿದ್ದಿದ್ದರಿಂದ ಇವರನ್ನು ಅಮೇರಿಕದ ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
"ಶ್ರೀ ರಾಮಾಯಣ ದರ್ಶನಂ" ವು ಮಹಾಕಾವ್ಯವಾದ ರಾಮಾಯಣವನ್ನು ಆಧರಿಸಿ ಕುವೆಂಪು ರವರು ರಚಿಸಿದ ಆಧುನಿಕ ಕನ್ನಡ ಸಾಹಿತ್ಯದ ಮೇರು ಕೃತಿಯಾಗಿದ್ದು ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ೧೯೬೮ ರಲ್ಲಿ 'ಜ್ಞಾನಪೀಠ ಪ್ರಶಸ್ತಿ'ಯನ್ನು ಕುವೆಂಪುರವರಿಗೆ ತಂದೊದಗಿಸಿದೆ. ಆಧುನಿಕ ಕನ್ನಡ ಸಾಹಿತ್ಯದ ಮಹೋನ್ನತ ಕೃತಿ. ಮಹಾಕಾವ್ಯಗಳ ರಚನೆಯ ಯುಗ ಮುಗಿದೇ ಹೋಯಿತು ಎನ್ನುವಾಗಲೇ ಸೃಷ್ಟಿಯಾದ ಆಧುನಿಕ ಮಹಾಕಾವ್ಯ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಆಭರಣಗಳು ಮನುಷ್ಯನ ಅಲಂಕರಣ ಸಾಧನಗಳಲ್ಲಿ ಒಂದು (ತೊಡುಗೆ); ಅಂಗರಾಗಗಳು (ನೋಡಿ- ಅಂಗರಾಗಗಳು,-ಅಂಗರಾಗಶಾಸ್ತ್ರ) ಮತ್ತು ಉಡುಗೆ ಉಳಿದ ಎರಡು ಸಾಧನಗಳು. ಇವು ವೈಯಕ್ತಿಕ ಶೃಂಗಾರಕ್ಕೆ ಧರಿಸಲಾಗುವ ಬ್ರೋಚುಗಳು, ಉಂಗುರಗಳು, ಕಂಠಹಾರಗಳು, ಕಿವಿಯೋಲೆಗಳು, ಲೋಲಕಗಳು ಮತ್ತು ಕಂಕಣಗಳಂತಹ ಸಣ್ಣ ಅಲಂಕಾರಿಕ ವಸ್ತುಗಳನ್ನು ಒಳಗೊಂಡಿರುತ್ತವೆ. ರತ್ನಾಭರಣಗಳನ್ನು ಮೈ ಮೇಲೆ ಧರಿಸಬಹುದು ಅಥವಾ ಬಟ್ಟೆಗಳಿಗೆ ಲಗತ್ತಿಸಬಹುದು, ಮತ್ತು ಈ ಪದವು ಬಾಳಿಕೆ ಬರುವ ವಸ್ತುಗಳಿಗೆ ಸೀಮಿತವಾಗಿದೆ.