The most-visited ಕನ್ನಡ Wikipedia articles, updated daily. Learn more...
ಮಾಂಗ್ಟೆ ಚುಂಗ್ನೀಜಾಂಗ್ ಮೇರಿ ಕೋಮ್ OLY (ಜನನ 24 ನವೆಂಬರ್ 1982) ಒಬ್ಬ ಭಾರತೀಯ ಹವ್ಯಾಸಿ ಬಾಕ್ಸರ್, ರಾಜಕಾರಣಿ ಮತ್ತು ಹಾಲಿ ಸಂಸತ್ತಿನ ಸದಸ್ಯ, ರಾಜ್ಯಸಭೆ. ಆರು ಬಾರಿ ವಿಶ್ವ ಅಮೆಚೂರ್ ಬಾಕ್ಸಿಂಗ್ ಚಾಂಪಿಯನ್ಶಿಪ್ ಗೆದ್ದ ಏಕೈಕ ಮಹಿಳೆ, ಮೊದಲ ಏಳು ವಿಶ್ವ ಚಾಂಪಿಯನ್ಶಿಪ್ಗಳಲ್ಲಿ ಪ್ರತಿಯೊಂದರಲ್ಲಿ ಪದಕ ಗೆದ್ದ ಏಕೈಕ ಮಹಿಳಾ ಬಾಕ್ಸರ್ ಮತ್ತು ಎಂಟು ವಿಶ್ವ ಚಾಂಪಿಯನ್ಶಿಪ್ ಪದಕಗಳನ್ನು ಗೆದ್ದ ಏಕೈಕ ಬಾಕ್ಸರ್ (ಪುರುಷ ಅಥವಾ ಮಹಿಳೆ). ಮ್ಯಾಗ್ನಿಫಿಸೆಂಟ್ ಮೇರಿ ಎಂಬ ಅಡ್ಡಹೆಸರು ಹೊಂದಿರುವ ಅವರು 2012 ರ ಬೇಸಿಗೆ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಏಕೈಕ ಭಾರತೀಯ ಮಹಿಳಾ ಬಾಕ್ಸರ್, ಫ್ಲೈವೇಟ್ (51 ಕೆಜಿ) ಸ್ಪರ್ಧಿಸಿ ಕಂಚಿನ ಪದಕವನ್ನು ಗೆದ್ದಿದ್ದಾರೆ..ಇಂಟರ್ನ್ಯಾಷನಲ್ ಬಾಕ್ಸಿಂಗ್ ಅಸೋಸಿಯೇಷನ್ (ಹವ್ಯಾಸಿ) (AIBA) ಯಿಂದ ಅವರು ವಿಶ್ವದ ನಂ.
ಸುನೀತಾ ವಿಲಿಯಮ್ಸ್ (ಜನನ ಸೆಪ್ಟೆಂಬರ್ 19, 1965) ಅವರು ಅಮೇರಿಕದಲ್ಲಿ ನೌಕಾದಳದಲ್ಲಿ ಅಧಿಕಾರಿ ಹಾಗೂ ನಾಸಾದಲ್ಲಿ ಗಗನಯಾತ್ರಿಯಾಗಿದ್ದಾರೆ. ಅವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಏರ್ಪಡಿಸಿದ್ದ ಎಕ್ಸ್ಪೆಡಿಷನ್ 14ರ ಯಾನದಲ್ಲಿಯ ಗಗನ ಯಾತ್ರಿಗಳಲ್ಲಿ ಒಬ್ಬರನ್ನಾಗಿ ಆಯ್ಕೆ ಮಾಡಲಾಗಿತ್ತು. ನಂತರ ಎಕ್ಪ್ಪೆಡಿಷನ್ 15ರಲ್ಲೂ ಕೂಡ ಅವರನ್ನು ಬಳಸಿಕೊಳ್ಳಲಾಯ್ತು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಾನು ಮುಷ್ತಾಕ್ (1948 ರಲ್ಲಿ ಜನನ) ಭಾರತದ ದಕ್ಷಿಣ ರಾಜ್ಯವಾದ ಕರ್ನಾಟಕದ ಒಬ್ಬ ಕಾರ್ಯಕರ್ತೆ, ವಕೀಲೆ ಮತ್ತು ಬರಹಗಾರ್ತಿ. ಇವರು ಕನ್ನಡ ಭಾಷೆಯಲ್ಲಿ ಬರೆಯುತ್ತಾರೆ ಮತ್ತು ಅವರ ಕೃತಿಗಳು ಉರ್ದು, ಹಿಂದಿ, ತಮಿಳು, ಮಲಯಾಳಂ ಮತ್ತು ಇತ್ತೀಚೆಗೆ ಆಂಗ್ಲ ಭಾಷೆಗಳಲ್ಲಿಯೂ ಪ್ರಕಟವಾಗಿವೆ. ೨೦೨೫ ರಲ್ಲಿ, ದೀಪಾ ಭಸ್ತಿ ಅವರಿಂದ ಆಂಗ್ಲ ಭಾಷೆಗೆ ಅನುವಾದಿಸಲ್ಪಟ್ಟ ಸಣ್ಣ ಕಥಾಸಂಕಲನ, ಹಾರ್ಟ್ ಲ್ಯಾಂಪ್, ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.
ಮಕ್ಕಳ ಕಥೆಗಳು (ಫೇರಿ ಟೇಲ್) ಫೇರಿ ಟೇಲ್ ಒಂದು ಇಂಗ್ಲಿಷ್ ಶಬಧ , ಇದು ಒಂದು ಪ್ರಕಾರದ ಸಣ್ಣ ನಿರೂಪಕ ಕಥೆಯಾಗಿದೆ. ಇದು ಪ್ರೆಂಚ್ ನುಡಿಗಟ್ಟು ಕಾಂಟೆ ಡಿ ಫಿ (conte de fee), ಜರ್ಮನ್ ಪದ ಮೆರ್ಕನ್ (Marchen), ಇಟಾಲಿಯನ್ ಫಿಯಾಬ (fiaba), ಪೋಲಿಷ್ ಬಾಸ್ನ್ (basn) ಅಥವಾ ಸ್ವೀಡಿಶ್ ಭಾಷೆಯ ಸಾಗಾ (saga) ಪದಗಳಿಗೆ ಸದೃಶವಾಗಿದೆ. ಹೀಗೆ ಸೂಚಿಸಿದ ಕೆಲವೇ ಕೆಲವು ಕಥೆಗಳು ಮಾತ್ರ ಸ್ಪಷ್ಟವಾಗಿ ಯಕ್ಷಯಕ್ಷಿಣಿಯ ಕಥೆಗಳ ಬಗ್ಗೆ ತಿಳಿಸುತ್ತವೆ.
ಪ್ರತಿ ವರ್ಷ ಫೆಬ್ರವರಿ ೨೮ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು "ರಾಷ್ಟ್ರೀಯ ವಿಜ್ಞಾನ ದಿನ"ದ ಆಚರಣೆಯ ಉದ್ದೇಶವಾಗಿದೆ. ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ - ಹೀಗೆ ಅನೇಕ ಚಟುವಟಿಕೆಗಳನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ.
ಮಲ್ಲಿಕಾ ಘಂಟಿಯವರು ಕನ್ನಡದ ಲೇಖಕಿ. ಗುಲಬರ್ಗಾ ವಿಶ್ವವಿದ್ಯಾಲಯದ ಸಂಡೂರ ಕೇಂದ್ರದ ಕನ್ನಡ ವಿಭಾಗದಲ್ಲಿ ಕನ್ನಡ ಪ್ರಾಧ್ಯಾಪಕಿಯಾಗಿದ್ದರು. ಡಾ ಮಲ್ಲಿಕಾ ಘಂಟಿ ಅವರು, ವಿಶ್ವದಲ್ಲಿಯೇ ಕನ್ನಡ ಭಾಷೆಗಾಗಿಯೇ ಸ್ಥಾಪಿತವಾದ ಏಕೈಕ ವಿಶ್ವವಿದ್ಯಾಲಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕನ್ನಡ ವಿಶ್ವವಿದ್ಯಾಲಯ, ಹಂಪಿ ಇದರ ಮೊಟ್ಟ ಮೊದಲ ಮಹಿಳಾ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ದೀಪಾ ಬಸ್ತಿ (ಜನನ:೧೯೮೩) ಒಬ್ಬ ಭಾರತೀಯ ಬರಹಗಾರ್ತಿ, ಪತ್ರಕರ್ತೆ ಮತ್ತು ಸಾಹಿತ್ಯ ಅನುವಾದಕಿ. ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರ ಸಣ್ಣ ಕಥಾ ಸಂಕಲನ "ಹಾರ್ಟ್ ಲ್ಯಾಂಪ್" (ಮೂಲ ಕನ್ನಡದಲ್ಲಿ "ಎದೆಯ ಹಣತೆ") ಅನ್ನು ಆಂಗ್ಲ ಭಾಷೆಗೆ ಅನುವಾದಿಸಿದ್ದಕ್ಕಾಗಿ ಇವರು ೨೦೨೫ರ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು (ಲೇಖಕಿಯೊಂದಿಗೆ ಜಂಟಿಯಾಗಿ) ಗಳಿಸಿದ್ದಾರೆ. ಈ ಮೂಲಕ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಮೊದಲ ಕನ್ನಡ ಅನುವಾದಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಇಸ್ರೇಲ್ (יִשְׂרָאֵל, ಯಿಸ್ರೆಇಲ್), ಅಧಿಕೃತವಾಗಿ ಇಸ್ರೇಲ್ ರಾಜ್ಯ (מְדִינַת יִשְׂרָאֵל, ಮೆದೀನತ್ ಯಿಸ್ರೇಎಲ್; دَوْلَةْ إِسْرَائِيل, ದವ್ಲತ್ ಇಸ್ರೇಇಲ್), ಮೆಡಿಟೆರೇನಿಯ ಸಮುದ್ರದ ಆಗ್ನೇಯಕ್ಕೆ ಇರುವ ಪಶ್ಚಿಮ ಏಷ್ಯಾದ ಒಂದು ದೇಶ. ಉತ್ತರಕ್ಕೆ ಲೆಬನನ್, ಪೂರ್ವಕ್ಕೆ ಸಿರಿಯ ಮತ್ತು ಜಾರ್ಡನ್, ನೈರುತ್ಯಕ್ಕೆ ಸಂಯುಕ್ತ ಅರಬ್ ಗಣರಾಜ್ಯ ಈಜಿಪ್ಟ್ ದೇಶಗಳೊಂದಿಗೆ ಗಡಿಯನ್ನು ಇಸ್ರೇಲ್ ಹೊಂದಿದೆ. ಪ್ಯಾಲೆಸ್ತೈನ್ ರಾಷ್ಟ್ರೀಯ ಪ್ರಾಧಿಕಾರ ಆಡಳಿತ ನಡೆಸುವ ಪಶ್ಚಿಮ ದಂಡೆ ಮತ್ತು ಗಾಜಾ ಪಟ್ಟಿ ಕೂಡ ಪಕ್ಕದಲ್ಲಿ ಇವೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು
ಟೆಂಪ್ಲೇಟು:Infobox fire department ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವಿಭಾಗವು ಕರ್ನಾಟಕ ಸರ್ಕಾರದ ಒಂದು ಇಲಾಖೆಯಾಗಿದ್ದು, ಇದು ಭಾರತದ ಕರ್ನಾಟಕದ ವಿಪತ್ತು ನಿರ್ವಹಣಾ ಸಂಸ್ಥೆಯಾಗಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಸರ್ ಸಿ.ವಿ.ರಾಮನ್ (Sir C.V.Raman) ಎಂದು ಶಿಕ್ಷಣ ವಲಯದಲ್ಲಿ ಸುಪ್ರಸಿದ್ಧರಾಗಿದ್ದ, ಚಂದ್ರಶೇಖರ ವೆಂಕಟರಾಮನ್ ರವರು ನೋಬೆಲ್ ಪ್ರಶಸ್ತಿ ಗಳಿಸಿದ ಪ್ರಪ್ರಥಮ ಭಾರತೀಯ ವಿಜ್ಞಾನಿ. ಅಷ್ಟೇ ಏಕೆ, ಏಷ್ಯದಲ್ಲೇ ಮೊತ್ತಮೊದಲ ಬಾರಿಗೆ ನೊಬೆಲ್ ಪಾರಿತೋಷಿಕ ಪಡೆದ ಭಾರತೀಯ ವಿಜ್ಞಾನಿ. ಈ ಪ್ರಶಸ್ತಿಯನ್ನು ೧೯೩೦ ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ಪಡೆದರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ರಕ್ಷಿತ ಶವ/ಮಮ್ಮಿ ಎಂದರೆ ಉದ್ದೇಶಪೂರ್ವಕ ಅಥವಾ ಅನುಗತವಾದ ರಾಸಾಯನಿಕ ಚಟುವಟಿಕೆ, ವಿಪರೀತ ಶೀತ, ವಿಪರೀತ ಕಡಿಮೆ ಆರ್ದ್ರತೆ, ಅಥವಾ ಹೂಳುಭೂಮಿಗಳಲ್ಲಿ ದೇಹಗಳನ್ನು ಹೂಳಿದಾಗ ಗಾಳಿಯ ಅಲಭ್ಯತೆಗಳಿಂದಾಗಿ ಚರ್ಮ ಹಾಗೂ ಅಂಗಗಳು ಸಂರಕ್ಷಿತಗೊಂಡ ಶವ. ಪ್ರಸ್ತುತ, ಪತ್ತೆಯಾದ ಪ್ರಾಚೀನ (ನೈಸರ್ಗಿಕವಾಗಿ) ಸಂರಕ್ಷಿತ ಮಾನವ ಶವವೆಂದರೆ 6,000 ವರ್ಷಗಳಷ್ಟು ಹಳೆಯದು ಎನ್ನಲಾದ 1936ರಲ್ಲಿ ಪತ್ತೆಯಾದ ಛೇದಗೊಂಡ ತಲೆ. ಪತ್ತೆಯಾದುದರಲ್ಲಿ ಹಳೆಯ "ಸಂರಕ್ಷಿತ ಶವ"ವೆಂದರೆ ಸರಿಸುಮಾರು 3300 BCನಷ್ಟು ಹಿಂದಿನ ಈಜಿಪ್ಟ್ನ ವ್ಯಕ್ತಿಯದ್ದು.
ಎರಡನೆಯ ಮಹಾಯುದ್ಧ ೧೯೩೯ರಿಂದ ೧೯೪೫ರವರೆಗೆ ನಡೆದ, ಜಗತ್ತಿನ ಅನೇಕ ದೇಶಗಳನ್ನೊಳಗೊಂಡ ಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆಯಲ್ಪಟ್ಟ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ ( ಫ್ರಾನ್ಸ್, ರಶಿಯಾ, ಇಂಗ್ಲೆಂಡ್ ಮತ್ತು ಅಮೆರಿಕಾ) ಮತ್ತು ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಒಟ್ಟಿನಲ್ಲಿ ೭೦ ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ ಈ ಯುದ್ಧದಲ್ಲಿ ಆರು ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ರಶ್ಮಿಕಾ ಮಂದಣ್ಣ (ಜನನ: ೫ ಏಪ್ರಿಲ್ ೧೯೯೬), ಒಬ್ಬ ಭಾರತೀಯ ರೂಪದರ್ಶಿ ಹಾಗೂ ಕನ್ನಡ ಚಿತ್ರನಟಿ. ತನ್ನ ವೃತ್ತಿಜೀವನವನ್ನು ಒಬ್ಬ ರೂಪದರ್ಶಿಯಾಗಿ ಪ್ರಾರಂಭಿಸಿದ ಅವರು ಕನ್ನಡ ಚಲನಚಿತ್ರ ಕಿರಿಕ್ ಪಾರ್ಟಿಯೊಂದಿಗೆ ೨೦೧೬ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಿರಿಕ್ ಪಾರ್ಟಿಯ ನಂತರ ಕರ್ನಾಟಕ ಕ್ರಶ್ ಎನಿಸಿಕೊಂಡಿದ್ದ ರಶ್ಮಿಕಾ ಅವರನ್ನು, ಇದೀಗ ನ್ಯಾಷನಲ್ ಕ್ರಶ್ 2020 ಎಂದು ಗೂಗಲ್ ಇಂಡಿಯಾ ಕರೆದಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಇಪ್ಪತನೆಯ ಶತಮಾನದ ಮೊದಲ ಭಾಗದಲ್ಲಿ ಅಂದರೆ 1914 ರಿಂದ 1918 ರವರೆಗೆ ಸಂಭವಿಸಿದ ಮೊದಲನೇ ವಿಶ್ವಯುದ್ದ ಮಾನವನ ಇತಿಹಾಸದಲ್ಲೇ ಒಂದು ಪ್ರಮುಖ ಘಟನೆಯಾಗಿದೆ. ಇದು ಮೂಲತಃ ಯುರೋಪಿನಲ್ಲೆ ಸಂಭವಿಸಿದರೂ ಕೂಡ ಕ್ರಮೇಣ ಇಡೀ ವಿಶ್ವವ್ಯಾಪಿಯಾಗಿ ಆಸ್ಫೋಟಿಸಿತು. ಇದು ಜರ್ಮನಿ ಮುಖಂಡತ್ವದ ಶತ್ರು ಪಕ್ಷ ಮತ್ತು ಇಂಗ್ಲಂಡ್ ನೇತೃತ್ವದ ಮಿತ್ರ ಪಕ್ಷಗಳ ನಡುವೆ ಸುಮಾರು 4 ವರ್ಷಗಳು ಸಂಭವಿಸಿ ಜರ್ಮನಿಯ ಸೋಲಿನೊಂದಿಗೆ 1918ರಲ್ಲಿ ಮುಕ್ತಾಯಗೊಂಡಿತು.ಈ ಯುದ್ಧದಲ್ಲಿ ಹಿಂದೆಂದೂ ಕಂಡರಿಯದ ಹೊಸ ಶಸ್ತ್ರಾಸ್ತ್ರಗಳು, ಯುದ್ಧ ವಿಮಾನಗಳು, ನವೀನ ಯುದ್ಧ ನೌಕೆಗಳು, ಟ್ಯಾಂಕರ್ಗಳು, ಜಲಾಂತರ್ಗಾಮಿಗಳು, ಸ್ಪೋಟಕಗಳು, ವಿಷಾನಿಲಗಳು ಬಳಕೆಯಾದವು.
ವೈಯಕ್ತಿಕ ಮಾಹಿತಿ ಜನನ ದುರ್ಗಿ ಟುಡು (1958-06-20) 20 June 1958ಉಪರ್ಬೇಡಾ, ಒಡಿಶಾ, ಭಾರತ ರಾಜಕೀಯ ಪಕ್ಷ ಭಾರತೀಯ ಜನತಾ ಪಕ್ಷ ಸಂಗಾತಿ(ಗಳು) ಮಕ್ಕಳು * ಲಕ್ಷ್ಮಣ್ ಮುರ್ಮು (ಮರಣ: 2009) ಸಿಪುನ್ ಮುರ್ಮು (ಮರಣ: 2012) ಇತಿಶ್ರೀ ಮುರ್ಮು ವಾಸಸ್ಥಾನ ಟೆಂಪ್ಲೇಟು:Bulletedlist ಅಭ್ಯಸಿಸಿದ ವಿದ್ಯಾಪೀಠ ರಾಮಾ ದೇವಿ ಮಹಿಳಾ ವಿಶ್ವವಿದ್ಯಾಲಯ (ಬಿಎ) ವೃತ್ತಿ ರಾಜಕಾರಣಿ ಉದ್ಯೋಗ ಶಿಕ್ಷಕಿ ಸಹಿ ಜಾಲತಾಣ presidentofindia.nic.in ಮಿಲಿಟರಿ ಸೇವೆ ಪ್ರಶಸ್ತಿಗಳು ಕೆಳಗೆ ನೋಡಿ ದ್ರೌಪದಿ ಮುರ್ಮು (ಜನನ ೨೦ ಜೂನ್ ೧೯೫೮) ಒಬ್ಬ ಭಾರತೀಯ ರಾಜಕಾರಣಿ, ಇವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರಾಗಿದ್ದರು. ಅವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದ ಸ್ಥಳೀಯ, ಪರಿಶಿಷ್ಟ ಬುಡಕಟ್ಟು ಸಮುದಾಯಕ್ಕೆ ಸೇರಿದ ಮೊದಲ ವ್ಯಕ್ತಿ.
ಬಿಸಿಲು ಎಂದರೆ ಸೂರ್ಯನು ಹೊರಸೂಸಿದ ವಿದ್ಯುತ್ಕಾಂತೀಯ ವಿಕಿರಣದ ಒಂದು ಭಾಗ, ವಿಶೇಷವಾಗಿ ಅತಿಗೆಂಪು, ಗೋಚರ ಮತ್ತು ನೇರಳಾತೀತ ಬೆಳಕು. ಭೂಮಿಯ ಮೇಲೆ, ಬಿಸಿಲು ವಾತಾವರಣದ ಮೂಲಕ ಸೋಸಲ್ಪಡುತ್ತದೆ, ಮತ್ತು ಸೂರ್ಯನು ದಿಗಂತದ ಮೇಲಿದ್ದಾಗ ಸೂರ್ಯಪ್ರಕಾಶವಾಗಿ ಪ್ರಕಟವಾಗುತ್ತದೆ. ನೇರ ಸೌರ ವಿಕಿರಣವು ಮೋಡಗಳಿಂದ ಪ್ರತಿಬಂಧಗೊಳ್ಳದಿದ್ದಾಗ, ಅದು ಬಿಸಿಲಾಗಿ ಅನುಭವಿಸಲ್ಪಡುತ್ತದೆ.
ಎರಿಕ್ ಆರ್ಥರ್ ಬ್ಲೇರ್ (ಜನನ: ೨೫ ಜೂನ್ ೧೯೦೩; ನಿಧನ: ೨೧ ಜನವರಿ ೧೯೫೦), (ಜಾರ್ಜ್ ಆರ್ವೆಲ್ ಎಂಬ ಸಾಹಿತ್ಯದ ಕಾವ್ಯನಾಮದೊಂದಿಗೆ ಚಿರಪರಿಚಿತ) ಒಬ್ಬ ಇಂಗ್ಲಿಷ್ ಬರಹಗಾರ ಹಾಗೂ ಪತ್ರಕರ್ತರಾಗಿದ್ದರು. ಇವರ ಕೃತಿಗಳಲ್ಲಿ ಚಾತುರ್ಯ ಮತ್ತು ಜಾಣತನ, ಸಾಮಾಜಿಕ ಅನ್ಯಾಯದ ಗಹನ ತಿಳಿವಳಿಕೆ, ಸರ್ವಾಧಿಕಾರ ಪ್ರಭುತ್ವದ ವಿರುದ್ಧ ಗಾಢ, ಕ್ರಾಂತಿಕಾರಿ ವಿರೋಧ, ಭಾಷೆಯಲ್ಲಿ ಸ್ಫಟಿಕದಷ್ಟು ಸ್ಪಷ್ಟನೆಗಾಗಿ ಹಂಬಲ, ಹಾಗೂ, ಪ್ರಜಾಪ್ರಭುತ್ವದ ಸಮಾಜವಾದದಲ್ಲಿ ದೃಢ ನಂಬಿಕೆ - ಇವೆಲ್ಲವೂ ಎದ್ದುಕಾಣುತ್ತವೆ. ಇಪ್ಪತ್ತನೆಯ ಶತಮಾನದಲ್ಲಿ ಬಹುಶಃ ಇಂಗ್ಲಿಷ್ ಸಂಸ್ಕೃತಿಯ ಅತ್ಯುತ್ತಮ ಚರಿತ್ರೆ ಲೇಖಕರೆನಿಸಿದ ಜಾರ್ಜ್ ಆರ್ವೆಲ್, ಕಾಲ್ಪನಿಕ ಕಥೆ, ವಿಮರ್ಶಾತ್ಮಕ ಪತ್ರಿಕೋದ್ಯಕ್ಕಾಗಿ, ಸಾಹಿತ್ಯ ಸಂವಾದ-ವಿಮರ್ಶೆ ಮತ್ತು ಕವಿತೆ ಬರೆದರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೫ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ದೇವಸ್ಥಾನ
ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ದೇವಸ್ಥಾನವು ಕರ್ನಾಟಕದ ಹಾಸನ ಜಿಲ್ಲೆಯ ಅರಸಿಕೆರೆ ತಾಲ್ಲೂಕಿನ ಯಾದಪುರ ಗ್ರಾಮದಲ್ಲಿರುವ ಪ್ರಸಿದ್ಧ ಹಿಂದೂ ದೇವಾಲಯವಾಗಿದೆ. ಯಾದಪುರವು ಅರಸಿಕೆರೆಯಿಂದ ೮ ಕಿಲೋ ಮೀಟರ್ ದೂರದಲ್ಲಿದೆ. ಈ ದೇವಾಲಯವು ಬೆಟ್ಟದ ಮೇಲಿದ್ದು ಶಿವನಿಗೆ ಸಮರ್ಪಿತವಾಗಿದೆ.