The most-visited ಕನ್ನಡ Wikipedia articles, updated daily. Learn more...
ಶಿವಕುಮಾರ ಸ್ವಾಮಿ (ಜನನ- ಶಿವಣ್ಣ, ೧ ಏಪ್ರಿಲ್ ೧೯೦೭ - ೨೧ ಜನವರಿ ೨೦೧೯) ಒಬ್ಬ ಭಾರತೀಯ ಆಧ್ಯಾತ್ಮಿಕ ನಾಯಕ, ಮಾನವೀಯ ಮತ್ತು ಶಿಕ್ಷಣತಜ್ಞ.ಅವರು ಹಿಂದೂ ಲಿಂಗಾಯತ ಧಾರ್ಮಿಕ ವ್ಯಕ್ತಿಯಾಗಿದ್ದರು ಮತ್ತು ಕರ್ನಾಟಕದ ಸಿದ್ದಗಂಗಾ ಮಠದ ಮಠಾಧಿಪತಿಗಳಾಗಿದ್ದರು. ಅವರು ಶ್ರೀ ಸಿದ್ದಗಂಗ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು. ಹಿಂದೂಧರ್ಮದ ಲಿಂಗಾಯತ ಸಂಪ್ರದಾಯದ ಅತ್ಯಂತ ಗೌರವಾನ್ವಿತ ಅನುಯಾಯಿಯಾಗಿದ್ದರು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಾಬು ಜಗಜೀವನ್ ರಾಮ್ (೫ ಏಪ್ರಿಲ್ ೧೯೦೮ - ೬ ಜುಲೈ ೧೯೮೬) ಇವರು ಜನಪ್ರಿಯವಾಗಿ ಬಾಬೂಜಿ ಎಂದು ಕರೆಯಲ್ಪಡುತ್ತಾರೆ ಹಾಗೂ ಇವರು ಭಾರತದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಿಹಾರದ ರಾಜಕಾರಣಿಯಾಗಿದ್ದರು. ೧೯೩೫ ರಲ್ಲಿ, ದಲಿತರಿಗೆ ಸಮಾನತೆಯನ್ನು ಸಾಧಿಸಲು ಸಮರ್ಪಿತವಾದ ಅಖಿಲ ಭಾರತ ಶೋಷಿತ ವರ್ಗಗಳ ಲೀಗ್ ಅನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು ಮತ್ತು ೧೯೩೭ ರಲ್ಲಿ, ಬಿಹಾರ ವಿಧಾನಸಭೆಗೆ ಆಯ್ಕೆಯಾದರು. ನಂತರ, ಅವರು ಗ್ರಾಮೀಣ ಕಾರ್ಮಿಕ ಚಳವಳಿಯನ್ನು ಸಂಘಟಿಸಿದರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಅಕ್ಬರನ ನಂತರ ಮೊಘಲರ ಧಾರ್ಮಿಕ ನೀತಿ
ಮೊಘಲ್ ಸಾಮ್ರಾಜ್ಯವು 1526 ರಲ್ಲಿ ಮೊದಲ ಪಾಣಿಪತ್ ಕದನದಲ್ಲಿ ಇಬ್ರಾಹಿಂ ಲೋದಿಯ ಸೋಲಿನ ನಂತರ ಸ್ಥಾಪಿತವಾಯಿತು. ಇದರ ಆಡಳಿತಗಾರರ ವಿಸ್ತರಣಾ ನೀತಿಯೊಂದಿಗೆ ಕಾಲಾನಂತರದಲ್ಲಿ ಕ್ರೋಢೀಕರಿಸಲ್ಪಟ್ಟಿತು. ಹೈಪರ್ಗಾಮ್ಸ್ ಮತ್ತು ಟರ್ಕ್ಸ್, ಆಫ್ಘನ್ನರು, ಉಜ್ಬೆಗ್ಸ್ ಅನ್ನು ಮತ್ತು ಮತ್ತು ಹಿಂದೂ ರಜಪೂತರು ಮತ್ತು ಖತ್ರಿಗಳು ಕೂಡ ಒಳಗೊಂಡಿದ್ದರಿಂದ ತನ್ನ ಶಕ್ತಿಯನ್ನು ಬಲಪಡಿಸಿತು..
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ನ್ಯಾಯಾಲಯವು ಕಾನೂನು ನಿಯಮದ ಅನುಗುಣವಾಗಿ ಕಕ್ಷಿಗಳ ನಡುವೆ ಕಾನೂನು ವಿವಾದಗಳನ್ನು ನಿರ್ಣಯ ಮಾಡುವ ಮತ್ತು ನಾಗರೀಕ, ಕ್ರಿಮಿನಲ್, ಹಾಗೂ ಆಡಳಿತಾತ್ಮಕ ವಿಷಯಗಳಲ್ಲಿ ನ್ಯಾಯ ನಿರ್ವಹಣೆ ನಡೆಸುವ ಅಧಿಕಾರವಿರುವ ಒಂದು ತೀರ್ಪುಜಗಲಿ, ಹಲವುವೇಳೆ ಒಂದು ಸರ್ಕಾರಿ ಸಂಸ್ಥೆ. ಸಾಮಾನ್ಯ ಕಾನೂನು ಮತ್ತು ನಾಗರೀಕ ಕಾನೂನು ಎರಡರದ್ದೂ ಕಾನೂನು ವ್ಯವಸ್ಥೆಗಳಲ್ಲಿ, ನ್ಯಾಯಾಲಯಗಳು ವಿವಾದ ಪರಿಹಾರಗಳಿಗೆ ಕೇಂದ್ರ ಸಾಧನಗಳಾಗಿವೆ, ಮತ್ತು ಎಲ್ಲ ವ್ಯಕ್ತಿಗಳು ನ್ಯಾಯಾಲಯದ ಮುಂದೆ ತಮ್ಮ ಬೇಡಿಕೆಗಳನ್ನು ತರುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಸಾಮಾನ್ಯವಾಗಿ ತಿಳಿಯಲಾಗಿದೆ. ಅದೇರೀತಿ, ಅಪರಾಧದಿಂದ ಆರೋಪಿತರ ಹಕ್ಕುಗಳು ನ್ಯಾಯಾಲಯದ ಮುಂದೆ ಪ್ರತಿವಾದ ಹೂಡುವ ಹಕ್ಕನ್ನು ಒಳಗೊಂಡಿವೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಜನಗಣತಿ ಎಂದರೆ, ನಿರ್ಧಿಷ್ಟ ಜನಸಂಖ್ಯೆಯ ಸದಸ್ಯರ ಮಾಹಿತಿಯನ್ನು ಉತ್ತಮ ಕಾರ್ಯವಿಧಾನ-ಪದ್ದತಿಗಳ ಅನುಸರಿಸಿ ದಾಖಲಿಸುವುದು. ಇದು ನಿಯಮಿತವಾಗಿ ನಡೆಯುವ ನಿರ್ಧಿಷ್ಟ ಜನಸಂಖ್ಯೆಯ ಅಧಿಕೃತ ಎಣಿಕೆಯ ವಿಧಾನವಾಗಿದೆ. ಈ ಪದವನ್ನು ಹೆಚ್ಚಾಗಿ ರಾಷ್ಟ್ರೀಯ ಜನಸಂಖ್ಯೆ ಮತ್ತು ಜನವಸತಿ ಗೃಹಗಳ ಎಣಿಕೆಗೆ ಬಳಸಲಾಗುತ್ತದೆ.ಇತರ ಗಣತಿಗಳೆಂದರೆ ಎಂದರೆ ಕೃಷಿ,ವಹಿವಾಟು ಮತ್ತು ಸಂಚಾರಿ ವಿಭಾಗದ ಅಂಕಿಅಂಶ ಸೇರಿವೆ.
ನ್ಯಾಷನಲ್ ಕನ್ನಡ ಎಜುಕೇಷನ್ ಸೊಸೈಟಿ, ವಡಾಲ, ಮುಂಬಯಿ
ಮೈಸೂರಿನ ಕೆಲವು ತರುಣರು ಕನ್ನಡದ ಮೇಲಿನ ಅಭಿಮಾನದಿಂದ ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡದ ಕಂಪನ್ನು ಹೊರನಾಡಿನಲ್ಲಿ ಪಸರಿಸಿ ಅದರ ಸೊಗಡನ್ನು ಕನ್ನಡಿಗರಿಗೆ ಉಣಬಡಿಸುವ ದೃಷ್ಟಿಯಿಂದ ನಿಸ್ವಾರ್ಥವಾಗಿ ದುಡಿದ ಕನ್ನಡಿಗರ ಪ್ರಯತ್ನದ ಫಲವಾಗಿ, ಎನ್.ಕೆ.ಇ.ಎಸ್.ರಾಷ್ಟ್ರೀಯ ಕನ್ನಡ ಶಿಕ್ಷಣ ಸಮಿತಿ (N.K.E.S), ಮುಂಬಯಿ, ಸನ್, 1939 ರಲ್ಲಿ ಮುಂಬಯಿ ಮಹಾನಗರದಲ್ಲಿ ಸ್ಥಾಪಿಸಲಾಯಿತು. ಮುಂಬಯಿ ಕನ್ನಡಿಗರ ಜ್ಞಾನದಾಹವನ್ನು ಅರಿತು ಸಮಿತಿಯ ಕಾರ್ಯದರ್ಶಿಗಳಾದ 'ಶ್ರೀ ಚಂದ್ರಶೇಖರ ಶರ್ಮ'ರವರ ಮುಂದಾಳತ್ವ ಹಾಗೂ ದೃಢ ನಿರ್ಧಾರದ ಫಲದಿಂದ 1926ರ ಮೇ ತಿಂಗಳಿನಲ್ಲಿ ಮೈಸೂರ್ ಅಸೋಸಿಯೇಷನ್, ಮುಂಬಯಿ, ನ ಸಂಚಾಲಕತ್ವದಲ್ಲಿ ಪ್ರಾಥಮಿಕ ಶಾಲೆಯನ್ನು ಪ್ರಾರಂಭಿಸಲಾಯಿತು.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. ೧೯೯೦ ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು ೨೦೦೭ ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಇದನ್ನು ಬದಲಾಯಿಸುವ ಪ್ರಯತ್ನಗಳು ಲಿಂಗ ಸ್ಟೀರಿಯೊಟೈಪ್ಗಳ ವಿರುದ್ಧ ಹೋರಾಡುವುದು ಮತ್ತು ಮಹಿಳೆಯರಿಗೆ ಶೈಕ್ಷಣಿಕ, ವೃತ್ತಿಪರ ಮತ್ತು ಪರಸ್ಪರ ಅವಕಾಶಗಳು ಮತ್ತು ಫಲಿತಾಂಶಗಳನ್ನು ಸುಧಾರಿಸುವುದು. 18 ನೇ ಶತಮಾನದ ಉತ್ತರಾರ್ಧದಲ್ಲಿ ಯುರೋಪ್ನಲ್ಲಿ ಹುಟ್ಟಿಕೊಂಡ ಸ್ತ್ರೀವಾದಿ ಚಳುವಳಿಗಳು ಮತದಾನದ ಹಕ್ಕು, ಸಾರ್ವಜನಿಕ ಕಚೇರಿಗೆ ಓಟ, ಕೆಲಸ, ಸಮಾನ ವೇತನ, ಸ್ವಂತ ಆಸ್ತಿ, ಶಿಕ್ಷಣವನ್ನು ಪಡೆಯುವುದು, ಒಪ್ಪಂದಗಳನ್ನು ಪ್ರವೇಶಿಸುವುದು, ಸಮಾನ ಹಕ್ಕುಗಳನ್ನು ಹೊಂದುವುದು ಸೇರಿದಂತೆ ಮಹಿಳೆಯರ ಹಕ್ಕುಗಳಿಗಾಗಿ ಪ್ರಚಾರ ಮತ್ತು ಪ್ರಚಾರವನ್ನು ಮುಂದುವರೆಸಿದೆ. ಮದುವೆ, ಮತ್ತು ಹೆರಿಗೆ ರಜೆ .
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಉಷ್ಣ ಮತ್ತು ಸಮಶೀತೋಷ್ಣವಲಯಗಳನ್ನು ಬೇರ್ಪಡಿಸುವ ದೇಶದ ಮಧ್ಯಭಾಗದಿಂದ ಹಾದುಹೋಗುತ್ತದಾದರೂ, ಬಹುತೇಕ ಭಾರತದ ವಾಯುಗುಣ ಉಷ್ಣವಲಯದ ಮಾನ್ಸೂನ್ ವಾಯುಗುಣವಾಗಿದೆ. ಭಾರತದ ವಾರ್ಷಿಕ ವಾಯುಗುಣವನ್ನು ನಾಲ್ಕು ಋತುಗಳನ್ನಾಗಿ ವಿಂಗಡಿಸಬಹುದು. ಅವೇನೆಂದರೆ (ಕ)ಚಳಿಗಾಲ (ಖ) ಬೇಸಿಗೆಕಾಲ : (ಗ) ನೈಋತ್ಯ ಮಾನ್ಸೂನ್ ಅಥವಾ ಮಳೆಗಾಲ (ಘ) ಈಶಾನ್ಯ ಮಾನ್ಸೂನ್ ಅಥವಾ ನಿರ್ಗಮನ ಮಾನ್ಸೂನ್ ಕಾಲ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.