The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಬಾಬು ಜಗಜೀವನ್ ರಾಮ್ (೫ ಏಪ್ರಿಲ್ ೧೯೦೮ - ೬ ಜುಲೈ ೧೯೮೬) ಇವರು ಜನಪ್ರಿಯವಾಗಿ ಬಾಬೂಜಿ ಎಂದು ಕರೆಯಲ್ಪಡುತ್ತಾರೆ ಹಾಗೂ ಇವರು ಭಾರತದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಿಹಾರದ ರಾಜಕಾರಣಿಯಾಗಿದ್ದರು. ೧೯೩೫ ರಲ್ಲಿ, ದಲಿತರಿಗೆ ಸಮಾನತೆಯನ್ನು ಸಾಧಿಸಲು ಸಮರ್ಪಿತವಾದ ಅಖಿಲ ಭಾರತ ಶೋಷಿತ ವರ್ಗಗಳ ಲೀಗ್ ಅನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು ಮತ್ತು ೧೯೩೭ ರಲ್ಲಿ, ಬಿಹಾರ ವಿಧಾನಸಭೆಗೆ ಆಯ್ಕೆಯಾದರು. ನಂತರ, ಅವರು ಗ್ರಾಮೀಣ ಕಾರ್ಮಿಕ ಚಳವಳಿಯನ್ನು ಸಂಘಟಿಸಿದರು.
ಜಲಿಯನ್ವಾಲಾ ಬಾಗ್ ಹತ್ಯಾಕಾಂಡ (ಅಥವಾ ಅಮೃತಸರ ಹತ್ಯಾಕಾಂಡ) - ಅಮೃತಸರದಲ್ಲಿರುವ ಜಲಿಯನ್ವಾಲಾ ಬಾಗ್ ಉದ್ಯಾನದಲ್ಲಿ ಏಪ್ರಿಲ್ ೧೩, ೧೯೧೯ರಂದು ಬ್ರಿಟೀಷ್ ಭಾರತ ಸೇನೆಯಿಂದ ಅಲ್ಲಿ ನೆರೆದಿದ್ದ ಗಂಡಸರು, ಹೆಂಗಸರು, ಮಕ್ಕಳೆಲ್ಲರ ಮೇಲೆ ನಡೆಸಿದ ಗುಂಡಿನ ದಾಳಿಯ ಪರಿಣಾಮವಾಗಿ ನಡೆದ ಮಾರಣಹೋಮ. ಅಧಿಕೃತ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ೩೭೯. ಖಾಸಗಿ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ಸಾವಿರಕ್ಕೂ ಹೆಚ್ಚು ಹಾಗು ಗಾಯಗೊಂಡವರ ಸಂಖ್ಯೆ ೧೨೦೦ಕ್ಕೂ ಹೆಚ್ಚು., ಮತ್ತು ಸಿವಿಲ್ ಶಸ್ತ್ರಚಿಕಿತ್ಸಾ ತಜ್ಞ ಡಾ.ಸ್ಮಿತ್ ನೀಡಿದ ಮಾಹಿತಿಯ ಪ್ರಕಾರ, ಸಾವಿಗೀಡಾದವರು ೧೮೦೦ಕ್ಕೂ ಹೆಚ್ಚು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಲತಾ ಮಂಗೇಶ್ಕರ್ (೨೮ ಸೆಪ್ಟೆಂಬರ್ ೧೯೨೯ - ೬ ಫೆಬ್ರವರಿ ೨೦೨೨) ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವುದಲ್ಲದೆ ಹಲವಾರು ಭಾರತೀಯ ಭಾಷೆಗಳಲ್ಲಿಯೂ ಹಾಡಿದ್ದಾರೆ. ೧೯೬೭ರಲ್ಲಿ ಬಿಡುಗಡೆಯಾದ "ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ" ಕನ್ನಡ ಚಲನಚಿತ್ರದಲ್ಲಿನ "ಬೆಳ್ಳನೆ ಬೆಳಗಾಯಿತು" ಮತ್ತು "ಎಲ್ಲಾರೆ ಇರತೀರೋ ಎಂದಾರೆ ಬರತೀರೋ" ಹಾಡುಗಳನ್ನು ಹಾಡಿದ್ದಾರೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮೂಗುತಿಯು ಮೂಗಿನ ಮೇಲೆ ಧರಿಸಲಾದ ಒಂದು ಆಭರಣ. ಪ್ರಾಚೀನ ಕಾಲದಿಂದ ಹೆಚ್ಚು ಸಾಮಾನ್ಯವಾಗಿ ಭಾರತೀಯ ಉಪಖಂಡದ ಮಹಿಳೆಯರೊಂದಿಗೆ ಸಂಬಂಧಿಸಲಾದ ಈ ಆಭರಣಗಳನ್ನು ಮೂಗಿನ ಹೊಳ್ಳೆಯ ಪಾರ್ಶ್ವದಲ್ಲಿನ ಒಂದು ಚುಚ್ಚುರಂಧ್ರದ ಮೂಲಕ ಲಗತ್ತಿಸಲಾಗುತ್ತದೆ. ಜಾಗತೀಕರಣ ಮತ್ತು ಭಾರತೀಯ ಫ಼್ಯಾಶನ್ ಹಾಗೂ ಸಂಸ್ಕೃತಿಯ ಹರಡುವಿಕೆಯ ಕಾರಣ, ಇತ್ತೀಚಿನ ದಶಕಗಳಲ್ಲಿ ಮೂಗಿನ ಹೊಳ್ಳೆಯನ್ನು ಚುಚ್ಚಿಸಿಕೊಳ್ಳುವುದು ವಿಶ್ವದಲ್ಲಿ ಜನಪ್ರಿಯವಾಗಿದೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
[[]] ಜೋಳವು ಸೋರ್ಗಮ್ ವರ್ಗದಲ್ಲಿನ ಹುಲ್ಲುಗಳ ಜಾತಿಯ ಬೇಸಾಯ ಮತ್ತು ವಾಣಿ ಸಸ್ಯಗಳನ್ನು ಧಾನ್ಯ, ನಾರು ಮತ್ತು ಮೇವಿಗಾಗಿ ಬಳಸಲಾಗುತ್ತದೆ. ಸಸ್ಯಗಳನ್ನು ವಿಶ್ವಾದ್ಯಂತ ಹೆಚ್ಚು ಉಷ್ಣ ವಾಯುಗುಣವಿರುವಲ್ಲಿ ಬೆಳೆಸಲಾಗುತ್ತದೆ. ವಾಣಿಜ್ಯ ಸಾರ್ಗಮ್ ಜಾತಿಗಳು ಉಷ್ಣವಲಯದ ಮತ್ತು ಉಪಉಷ್ಣವಲಯದ ಪ್ರದೇಶಗಳಾದ ಆಫ್ರಿಕಾ, ಏಷ್ಯಾಗಳ ಸ್ಥಳೀಯ ಸಸ್ಯಗಳಾಗಿವೆ, ಒಂದು ಜಾತಿಯು ಮೆಕ್ಸಿಕೋದ ದೇಶೀಯ ಬೆಳೆಯಾಗಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಬ್ರಿಟಿಷರ ಆಕ್ರಮಣ ಕಾಲದಿಂದಲೇ ಒಂದು ದೃಷ್ಟಿಯಲ್ಲಿ ಆರಂಭವಾಗಿ, ೧೯ನೆಯ ಶತಮಾನದ ನಡುಗಾಲದಿಂದ ಕ್ರಮೇಣ ತೀವ್ರವಾಗಿ, ೨೦ನೆಯ ಶತಮಾನದಲ್ಲಿ ವ್ಯಾಪಕವಾಗಿ ಹಬ್ಬಿ, ೧೯೪೭ರಲ್ಲಿ ಯಶಸ್ವಿಯಾಗಿ ಪರ್ಯವಸಾನ ಹೊಂದಿನ ಭಾರತೀಯ ಸ್ವಾತಂತ್ರ್ಯ ಚಳವಳಿಯ ಅಂಗವಾಗಿದ್ದೂ ವಿಶಿಷ್ಟವಾಗಿ ವಿಕಾಸಗೊಂಡ ಕರ್ನಾಟಕ ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಸ್ಥೂಲವಾಗಿ ಮೂರು ಕಾಲಗಳಾಗಿ ವಿಂಗಡಿಸಬಹುದಾಗಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮಹಾತ್ಮ ಜ್ಯೋತಿಬಾ ಫುಲೆ (೧೮೨೭ - ೧೮೯೦) ಅವರು ಆಧುನಿಕ ಮಹಾರಾಷ್ಟ್ರದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು. ಸಮಾಜ ಸುಧಾರಕರಾಗಿ, ಸಮಾನತೆಯ ಹರಿಕಾರರಾಗಿ ದೀನ, ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿದವರು. ಇವರು ಜನಸಾಮಾನ್ಯರು ಡಾಂಭಿಕ ಧರ್ಮ, ಪಂಥ, ಸಂಪ್ರದಾಯ ಮುಂತಾದ ಸಂಕುಚಿತ ಭಾವನೆಗಳಿಗೆ ಮರುಳಾಗದೆ, ಮಾನವ ಧರ್ಮವನ್ನು ಅಂಗೀಕರಿಸಬೇಕೆಂದು ಅಪೇಕ್ಷೆ ಪಟ್ಟವರು.ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ಕನ್ನಡದಲ್ಲಿರುವ ಬಹುತೇಕ ಕೃತಿಗಳಲ್ಲಿ "ಜ್ಯೋತಿಬಾ ಫುಲೆ" ಎಂಬ ಹೆಸರೆ ಬಳಕೆಯಲ್ಲಿದೆ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೫ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಆಸ್ತಿಕ ("ಅದು ಅಸ್ತಿತ್ವದಲ್ಲಿದೆ") ಮತ್ತು ನಾಸ್ತಿಕ ("ಅದು ಅಸ್ತಿತ್ವದಲ್ಲಿಲ್ಲ") ಪರಮ ಬಹಿರಂಗಪಡಿಸಿದ ಧರ್ಮಗ್ರಂಥಗಳಾಗಿ ವೇದಗಳ ಶ್ರೇಷ್ಠತೆಯನ್ನು ಅವು ಅಥವಾ ಅವರು ಒಪ್ಪುತ್ತಾರೊ ಅಥವಾ ಇಲ್ಲವೊ ಎಂಬುದರ ಪ್ರಕಾರ ತತ್ವಶಾಸ್ತ್ರೀಯ ಪರಂಪರೆಗಳು ಮತ್ತು ವ್ಯಕ್ತಿಗಳನ್ನು ವರ್ಗೀಕರಿಸಲು ಬಳಸಲಾಗುವ ಹಿಂದೂ ಧರ್ಮದಲ್ಲಿನ ತಾಂತ್ರಿಕ ಪದಗಳು. ಈ ವ್ಯಾಖ್ಯಾನದ ಪ್ರಕಾರ, ನ್ಯಾಯ, ವೈಶೇಷಿಕ, ಸಾಂಖ್ಯ, ಯೋಗ, ಮೀಮಾಂಸ ಮತ್ತು ವೇದಾಂತವನ್ನು ಆಸ್ತಿಕ ಪರಂಪರೆಗಳಾಗಿ ವರ್ಗೀಕರಿಸಲಾಗುತ್ತದೆ; ಮತ್ತು ಚಾರ್ವಾಕ, ಆಜೀವಿಕ, ಜೈನ ಧರ್ಮ ಮತ್ತು ಬೌದ್ಧ ಧರ್ಮದಂತಹ ಕೆಲವು ಪರಂಪರೆಗಳನ್ನು ನಾಸ್ತಿಕ ಎಂದು ಪರಿಗಣಿಸಲಾಗುತ್ತದೆ. ಈ ವ್ಯತ್ಯಾಸ ಪಾಶ್ಚಾತ್ಯದಲ್ಲಿನ ಸಾಂಪ್ರದಾಯಿಕ/ಸಂಪ್ರದಾಯ ವಿರೋಧದ ವ್ಯತ್ಯಾಸವನ್ನು ಹೋಲುತ್ತದೆ.
ಜನಗಣತಿ ಎಂದರೆ, ನಿರ್ಧಿಷ್ಟ ಜನಸಂಖ್ಯೆಯ ಸದಸ್ಯರ ಮಾಹಿತಿಯನ್ನು ಉತ್ತಮ ಕಾರ್ಯವಿಧಾನ-ಪದ್ದತಿಗಳ ಅನುಸರಿಸಿ ದಾಖಲಿಸುವುದು. ಇದು ನಿಯಮಿತವಾಗಿ ನಡೆಯುವ ನಿರ್ಧಿಷ್ಟ ಜನಸಂಖ್ಯೆಯ ಅಧಿಕೃತ ಎಣಿಕೆಯ ವಿಧಾನವಾಗಿದೆ. ಈ ಪದವನ್ನು ಹೆಚ್ಚಾಗಿ ರಾಷ್ಟ್ರೀಯ ಜನಸಂಖ್ಯೆ ಮತ್ತು ಜನವಸತಿ ಗೃಹಗಳ ಎಣಿಕೆಗೆ ಬಳಸಲಾಗುತ್ತದೆ.ಇತರ ಗಣತಿಗಳೆಂದರೆ ಎಂದರೆ ಕೃಷಿ,ವಹಿವಾಟು ಮತ್ತು ಸಂಚಾರಿ ವಿಭಾಗದ ಅಂಕಿಅಂಶ ಸೇರಿವೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತದ ಕರ್ನಾಟಕ ರಾಜ್ಯದ ಪ್ರಸ್ತುತ ಬಾಗಲಕೋಟೆ ಜಿಲ್ಲೆಯಲ್ಲಿನ ಮಲಪ್ರಭಾ ನದಿ ತೀರದಲ್ಲಿ, ೫ ರಿಂದ ೮ನೇ ಶತಮಾನಗಳಲ್ಲಿ ಅಸ್ತಿತ್ವದಲ್ಲಿದ್ದ ಚಾಲುಕ್ಯರ ಆಡಳಿತಾವಧಿಯಲ್ಲಿ ಬದಾಮಿ ಚಾಲುಕ್ಯರ ವಾಸ್ತುಶಿಲ್ಪ ಎಂಬ ದೇಗುಲ ಕಟ್ಟಡ ವಿನ್ಯಾಸ ವಿಕಸನಗೊಂಡಿತು. ಈ ವಾಸ್ತು ಪ್ರಕಾರವನ್ನು ವೆಸರ ಶೈಲಿ ಮತ್ತು ಚಾಲುಕ್ಯ ಶೈಲಿ ಎಂದಾಗಿಯೂ ಕರೆಯಲಾಗುತ್ತದೆ. ಅದಾಗ್ಯೂ ಈ ಪದವು ೧೧ ಮತ್ತು ೧೨ ನೇ ಶತಮಾನಗಳ ನಂತರದ ಪಾಶ್ಚಾತ್ಯ ಚಾಲುಕ್ಯ ವಾಸ್ತುಶಿಲ್ಪವನ್ನೂ ಒಳಗೊಂಡಿದೆ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಅರಿಸ್ಟಾಟಲ್ (Greek: Ἀριστοτέλης , ಅರಿಸ್ಟಾಟೆಲೆಸ್ ) (384 BC – 322 BC) ಒಬ್ಬ ಗ್ರೀಕ್ ದಾರ್ಶನಿಕ ಮಾತ್ರವಲ್ಲದೆ, ಪ್ಲೇಟೋನ ಓರ್ವ ವಿದ್ಯಾರ್ಥಿ ಹಾಗೂ ಅಲೆಕ್ಸಾಂಡರ್ನ ಗುರುವಾಗಿದ್ದ. ಭೌತಶಾಸ್ತ್ರ, ತತ್ತ್ವಮೀಮಾಂಸೆ, ಕವಿತೆ, ರಂಗಭೂಮಿ, ಸಂಗೀತ, ತರ್ಕಶಾಸ್ತ್ರ, ಭಾಷಣಶಾಸ್ತ್ರ, ರಾಜಕಾರಣ, ಸರ್ಕಾರ, ನೀತಿಶಾಸ್ತ್ರ, ಜೀವಶಾಸ್ತ್ರ, ಮತ್ತು ಪ್ರಾಣಿಶಾಸ್ತ್ರ ಇವೇ ಮೊದಲಾದವನ್ನು ಒಳಗೊಂಡಂತೆ ಅನೇಕ ವಿಷಯಗಳ ಕುರಿತು ಆತ ಬರೆದ. ಪ್ಲೇಟೋನ ಗುರುವಾದ ಸಾಕ್ರಟಿಸ್ ಮತ್ತು ಪ್ಲೇಟೋನ ಜೊತೆಜೊತೆಗೆ, ಪಾಶ್ಚಿಮಾತ್ಯ ತತ್ತ್ವಶಾಸ್ತ್ರದಲ್ಲಿನ ಅತಿ ಪ್ರಮುಖ ಪ್ರಸಿದ್ಧ ಸಂಸ್ಥಾಪಕರಲ್ಲಿ ಅರಿಸ್ಟಾಟಲ್ ಕೂಡಾ ಒಬ್ಬನಾಗಿದ್ದಾನೆ.
ಜೈನ ಧರ್ಮವನ್ನು ಉಪದೇಶಿಸಿದ ಮೊದಲನೆಯ ತೀರ್ಧಂಕರರು ವೃಷಭನಾಥರು. ಇವರಿಗೆ ಸುನಂದ ಮತ್ತು ನಂದಾ ಯೆಂಬ ಇಬ್ಬರು ಪತ್ನಿಯರು.ಇವರಿಂದ ನೂರುಜನ ಗಂಡು ಮಕ್ಕಳೂ ಮತ್ತು ಇಬ್ಬರು ಹೆಣ್ಣು ಮಕ್ಕಳೂ ಜನಿಸಿದರು.ಬಾಹುಬಲಿಯು ಸುನಂದೆಯ ಮಗ.ವೃಷಭನಾಥರಿಗೆ ವೈರಾಗ್ಯ ಉಂಟಾದಾಗ ಮಕ್ಕಳಿಗೆ ರಾಜ್ಯವನ್ನು ಹಂಚಿ ತಪಸ್ಸಿಗೆ ತೆರಳಿದರು. ಸಕಲ ಕರ್ಮಗಳನ್ನು ಜಯಿಸಿ ಕೈವಲ್ಯಜ್ಞಾನ ಪಡೆದು ಜನರಿಗೆ ಮುಕ್ತಿ ಮಾರ್ಗವನ್ನು ಉಪದೇಶಿಸುತ್ತಿದ್ದರು.
ರಾಹುಲ್ ದೇವ್ ಬರ್ಮನ್ (ಬಂಗಾಳಿ:রাহুল দেব বর্মন, ಹಿಂದಿ:राहुल देव बर्मन) (೨೭ ಜೂನ್ ೧೯೩೯ – ೪ ಜನವರಿ ೧೯೯೪), ಸಾಮಾನ್ಯವಾಗಿ ಆರ್.ಡಿ ಬರ್ಮನ್ ಮತ್ತು ಪಂಚಮ್ ದಾ (पंचम दा) ಅಥವಾ ಕೇವಲ ಪಂಚಮ್ ಎಂಬ ಅಡ್ಡ ಹೆಸರುಗಳನ್ನು ಹೊಂದಿರುವ ಇವರು ಭಾರತೀಯ ಸಂಗೀತ ಸಂಯೋಜಕರಾಗಿದ್ದಾರೆ. ಹಾಡುಗಾರ ಮತ್ತು ಸಂಗೀತ ಸಂಯೋಜಕ ಸಚಿನ್ ದೇವ್ ಬರ್ಮನ್ ಮತ್ತು ಅವರ ಹೆಂಡತಿ ಮೀರಾರ ಏಕೈಕ ಪುತ್ರರಾಗಿದ್ದಾರೆ.
ಬ್ರಿಟೀಷರಿಂದ ಆರಂಭಿಸಲ್ಪಪಟ್ಟ ಹಿಂದೂ 'ವೈಯಕ್ತಿಕ ಕಾನೂನಿನ ಸುಧಾರಣೆ ಮತ್ತು ಕ್ರೂಢೀಕರಣ' ಪ್ರಕ್ರಿಯೆಯು,೧೯೪೭ರಲ್ಲಿ ಭಾರತ ಸ್ವಾತಂತ್ರವಾದ ಮೇಲೆ ವಸಾಹತುಶಾಹಿನಂತರದ ಸರ್ಕಾರದ ಪ್ರಧಾನ ಮಂತ್ರಿಯಾದ ಜವಹರಲಾಲ್ ನೆಹರು ನೇತ್ರುತ್ವದಲ್ಲಿ ಸಂಪೂರ್ಣಗೊಂಡಿತು.ಹಸ್ತಕ್ಷೇಪ ಮಾಡದಿರುವ ಬ್ರಿಟಿಷ್ ನೀತಿಯ ಪ್ರಕಾರ, ವೈಯಕ್ತಿಕ ಕಾನೂನಿನ ಸುಧಾರಣೆಯು ಹಿಂದೂ ಸಮುದಾಯದಲ್ಲಿ ಹುಟ್ಟಿದಂತಹ ಬೇಡಿಕೆಯಾಗಿತ್ತು.ಇದು ಆಗಿನ ಸಂಗತಿಯಾಗಿರಲಿಲ್ಲ,ಆ ವೇಳೆಗೆ ಮಹತ್ವವಾದ ವಿರೋಧವು ವಿವಿಧ ಹಿಂದೂ ರಾಜಕಾರಣಿಗಳು,ಸಂಘಟನೆಗಳು ಮತ್ತು ಧಮ೯ಭಕ್ತರುಗಳಿಂದ ವ್ಯಕ್ತವಾಗಿ,ಅನ್ಯಾಯಯುತವಾದದ್ದೆಂದು ಅವರು ಹಿಂದೂ ಸಮುದಾಯದಿಂದ ತಮ್ಮನ್ನು ತಾವು ಬೇಪ೯ಡಿಸಿಕೊಂಡರು ಆದ ಕಾರಣ ಕಾನೂನುಗಳ ಸುಧಾರಣೆಯಾಗಬೇಕಿತ್ತು.ಹೇಗಾದರೂ,ಏಕರೂಪತೆ ಎಂಬುದು ಆದಶ೯ಪ್ರಾಯ ರಾಷ್ಟ್ರದ ಮೊದಲ ಹೆಜ್ಜೆ,ಹೀಗಾಗಿ 'ಕ್ರೂಢಿಕರಣವು' ಹಿಂದೂ ಸಮುದಾಯವನ್ನು ಒಗ್ಗೂಡಿಸುವ ಸಲುವಾಗಿ ಅಗತ್ಯವಾದದ್ದು ಎಂದು ನೆಹರು ಆಡಳಿತವು ಕಂಡುಕೊಂಡಿತು.೧೯೫೫-೫೬ರಲ್ಲಿ ಅವರು ನಾಲ್ಕು ಹಿಂದೂ ಕೋಡ್ ಬಿಲ್ಸ್ ಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾದರು.ಅವುಗಳೆಂದರೆ- (೧)ಹಿಂದೂ ವಿವಾಹ ಕಾಯ್ದೆ (೨)ಹಿಂದೂ ಅನುಪೂವಿ೯ ಅಥವಾ ಅನುಕ್ರಮ ಕಾಯ್ದೆ (೩)ಹಿಂದೂ ಅಲ್ಪಸಂಖ್ಯಾತ ಮತ್ತು ಗಾಡ್೯ನ್ ಶಿಫ್ ಕಾಯ್ದೆ (೪)ಹಿಂದೂ ದತ್ತು ಸ್ವೀಕಾರ ಮತ್ತು ಜೀವನಾಂಶಕಾಯ್ದೆ ಈ ಕಾಯ್ದೆಗಳು ಸ್ತ್ರೀಯರ,ಧಾಮಿ೯ಕ ಮತ್ತು ರಾಷ್ಟ್ರೀಯವಾದಿ ಗುಂಪುಗಳಿಗೆ ಸಂಬಂಧಿಸಿದಂತೆ ಇಂದಿಗೂ ಸಹ ವಿವಾದಾತ್ಮಕವಾಗಿವೆ. ಹಿನ್ನೆಲೆ ಹಿಂದೂಧಮ೯ದ ಜೀವನಸ್ವರೂಪದ ಬಗ್ಗೆ ಬಹಳ ವ್ಯಾಪಕವಾದ ಕೆಲವು ಶಾಶ್ವತವಾದ ನಿಧಿ೯ಷ್ಟ ಮೂಲಭೂತ ನಂಬಿಕೆಗಳು ಇರಬಹುದು.ಹೀಗಾಗಿ ಹಿಂದೂ ಕಾನೂನುಗಳು ಹೆಚ್ಚು ಏಕರೂಪವಾಗಿಲ್ಲದ್ದು.ವಿದ್ವಾಂಸರಾದ ಡೆರೆಟ್ ರವರ ಗ್ರಂಥವಾದ "ಹಿಂದೂ ಕಾನೂನು"ನಲ್ಲಿ ಉಲ್ಲೇಖಿತವಾಗಿದ್ದು-"ನಾವು ಹಿಂದೂಗಳನ್ನು ಗುರುತಿಸುವುದಾದರೆ,ಭೂಮಿಯ ಅಂತ್ಯಭಾಗದಿಂದ ಸಂಗ್ರಹಿಸಲ್ಪಟ್ಟಿರಬಹುದಾದ ಮನುಷ್ಯ ಜೀವಿಗಳ ವೈವಿಧ್ಯಮಯವಾದ ಜೀವನ ಕ್ರಮ,ಮನೋವಿಜ್ಞಾನ,ಹವ್ಯಾಸ,ಮತ್ತು ಕಸುಬು ಮುಂತಾದ ಮಾನವ ಸಮುದಾಯದ ವಿಭಿನ್ನ ಸ್ವರೂಪದ ಆಧಾರದ ಮೇಲೆ ಹಿಂದೂಗಳೆಂದು ವಿವರಿಸಿದ್ದಾರೆ.ಹಾಗೆಯೇ ಧಮ೯ಶಾಸ್ತ್ರವು ಕೆಲೊವೊಂದು ಗ್ರಾಂಥಿಕ ವಿಷಯಗಳ ಮೇಲೆ ಹಿಡಿತವನ್ನು ಹೊಂದಿದೆ ಅವುಗಳಂದರೆ ವಿವಾಹ,ದತ್ತುಸ್ವೀಕಾರ,ಅಲ್ಪಸಂಖ್ಯಾತರು,ಅನುಕ್ರಮ ಹಕ್ಕುದಾರಿಕೆ,ಧಾಮಿ೯ಕ ದತ್ತಿಗಳು ಮತ್ತು ಜಾತಿ ಸವಲತ್ತುಗಳು ಮುಂತಾದ ಖಾಸಗಿ ಕಾನೂನುಗಳಲ್ಲಿ ಹಿಂದೂ ಧಮ೯ ವಿಚಾರಗಳನ್ನು ಕಾಣಬಹುದು.ಹೇಗಾದರೂ,ಹಿಂದೂ ಕಾನೂಗಳ ಅಸಮಂಜಸ ನಿಯಮಗಳನ್ನು ಹೆಸರಿಸುವುದು ಮತ್ತು ವಣಿ೯ಸುವುದು ಕಷ್ಟಸಾಧ್ಯವಾಗಿದ್ದು,ಬೇರೆ ವಿಚಾರಗಳಿಗೆ ಸಂಬಂಧಿಸಿದಂತೆ ಹಿಂದೂ ಕಾನೂನುಗಳು ಕಲಬೆರಕೆಗಳಿಂದಾದ ನಿಯಮಗಳು,ಸಾಮರಸ್ಯವಿಲ್ಲದೆ ಅಪೈಪೋಟಿಯುತವಾಗಿವೆ.ಹೀಗಾಗಿ ಹಿಂದೂ ಕಾನೂಗಳ ಏಕಪ್ರಕಾರತೆಯಲ್ಲಿ ಕೊರತೆಯನ್ನು ಕಾಣಬಹುದು. ಹಿಂದೂ ಕಾನೂನುಗಳ ವಿಷಯ ಮತ್ತು ರಚನೆಯು ಅಂತಿಮವಾಗಿ ಬ್ರಿಟೀಷರ ಆಡಳಿತ ಕಾಲದಲ್ಲಿ ರಕ್ಷಣೆಗೆ ಬಂದು,ಅವರ ಬಹಳಷ್ಟು ಗಮನ ಹಿಂದೂ ಧಾಮಿ೯ಕ ಕಾನೂನು ಗ್ರಂಥಗಳ ಮೇಲಾಗಿ ಏಕಕಾಲದಲ್ಲಿ ಇಂಗ್ಲಿಷ್ ಕಾಯ೯ವಿಧಾನವನ್ನು ಉರಿದುಂಬಿಸಿದರು ಮತ್ತು ಇದ್ದ ಅಂತರವನ್ನು ಆಂಗ್ಲ ಕಾನೂನಿನಿಂದ ಪೂಣ೯ ಮಾಡಿದರು.ನಂತರದ ಅಭಿಪ್ರಾಯಗಳು ಒಂದಕ್ಕೊಂದು ಭಿನ್ನವಾಗಿದ್ದು ವಿಸ್ತಾರವಾದ ವ್ಯತ್ಯಾಸವನ್ನು ಪ್ರಚಲಿತ ಕಾನೂನು ಮತ್ತು ಸಾವ೯ಜನಿಕ ಅವಶ್ಯಕತೆ ಮಧ್ಯೆ ಕಂಡುಕೊಂಡರು,ಹಾಗೂ ಇದನ್ನು ಹೆಚ್ಚು ಜನರು ಒಪ್ಪಿ ಗಣನೀಯವಾದ ಅಸಂಗತೆ ಮತ್ತು ಅಸಾಮರಸ್ಯ ಹುಟ್ಟಿಕೊಳ್ಳುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಬ್ರಿಟೀಷರ ವಸಾಹತುಶಾಹಿ ಸಕಾ೯ರ ಆಡಳಿತ ವ್ಯವಸ್ಥೆಯಲ್ಲಿ ಪಸರಿಸಿದ್ದ ವ್ಯಾಪಕವಾದ ಹಸ್ತಕ್ಷೇಪರಹಿತ ನೀತಿಯಲ್ಲಿ,ನಾಗರೀಕ ವಿಷಯಗಳನ್ನು ಆಯಾ ಧಾಮಿ೯ಕ ಸಮುದಾಯಗಳ ಮೂಲಕ ವ್ಯವಹರಿಸಬೇಕು.ಹೀಗಾಗಿ ಈ ಸಮುದಾಯಗಳ ವ್ಯಾಪ್ತಿಗೆ ಬಿದ್ದಿದ್ದ ವಿಷಯಗಳನ್ನು ವೈಯಕ್ತಿಕ ಕಾನೂನುಗಳೆಂದು ಕರೆಯಲಾಯಿತು.ಭಾರತೀಯ ರಾಜಕೀಯ ವ್ಯವಸ್ಥೆಯನ್ನು ಸಂಘಟಿಸುವಲ್ಲಿ,೧೯೪೦ರ ವೇಳೆಯ ಮೊದಲೇ ಬ್ರಿಟೀಷರಿಂದ ಆರಂಭವಾದ ವೈಯಕ್ತಿಕ ಹಿಂದೂ ಕಾನೂನುಗಳ ಕ್ರೂಢೀಕರಣ ಪ್ರಕ್ರಿಯೆಯು ಬಹಳ ಪ್ರಮುಖವಾದದ್ದು ಆಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಕನ್ನಡದಲ್ಲಿ ಮಹಿಳಾ ವಿಮಾಂಸೆ ಸಾಹಿತ್ಯದ ಸಾವಿರದೈನೂರು ವರ್ಷಗಳ ಕನ್ನಡ ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೆ ೨೦ನೆಯ ಶತಮಾನಕ್ಕೆ ಕಾಲಿರಿಸುವವರೆಗೆ ಮಹಿಳೆಯರೇ ರಚಿಸಿದ ಸಾಹಿತ್ಯ, ಮಹಿಳಾ ಸಾಹಿತ್ಯವೆಂಬ ಹೆಸರಿನಲ್ಲಿ ಗುರುತಿಸಬಹುದಾದಂಥದ್ದು ಹೆಚ್ಚು ಕಂಡುಬರುವುದಿಲ್ಲ. ಸ್ತ್ರೀಯರು ವಿದ್ಯೆಯಿಂದ ವಂಚಿತರಾದದ್ದು, ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗುವ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗದೇ ಹೋದದ್ದು, ಸ್ವಾತಂತ್ರ್ಯವಿರದ ಅವಲಂಬನೆಯ ಜೀವನವೇ ಪ್ರಧಾನವಾದದ್ದು - ಇಂಥ ಅನೇಕ ಕಾರಣಗಳಿಂದಾಗಿ ಮಹಿಳೆ ಕನ್ನಡ ಸಾಹಿತ್ಯದ ಮುಖ್ಯವಾಹಿನಿಯಲ್ಲಿ ಬಹುಕಾಲದವರೆಗೆ ಅನನ್ಯತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳಿರಬಹುದು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಪಂಚಾಯತ್ ರಾಜ್ ನಗರ ಮತ್ತು ಉಪನಗರ ಪುರಸಭೆಗಳಿಗೆ ವಿರುದ್ಧವಾಗಿ ಗ್ರಾಮೀಣ ಭಾರತದಲ್ಲಿ ಗ್ರಾಮಗಳ ಸ್ಥಳೀಯ ಸ್ವ-ಸರ್ಕಾರದ ವ್ಯವಸ್ಥೆಯಾಗಿದೆ.ಇದು ಪಂಚಾಯತ್ ರಾಜ್ ಸಂಸ್ಥೆಗಳನ್ನು (ಪಿ.ಆರ್.ಐ) ಒಳಗೊಂಡಿದೆ ಮತ್ತು ಅದರ ಮೂಲಕ ಗ್ರಾಮಗಳ ಸ್ವ-ಸರ್ಕಾರವನ್ನು ಸಾಕಾರಗೊಳಿಸಲಾಗುತ್ತದೆ. ಭಾರತೀಯ ಸಂವಿಧಾನದ IX ನೇ ಭಾಗವು ಪಂಚಾಯತ್ಗಳಿಗೆ ಸಂಬಂಧಿಸಿದ ಸಂವಿಧಾನದ ವಿಭಾಗವಾಗಿದೆ. ಎರಡು ಮಿಲಿಯನ್ಗಿಂತಲೂ ಹೆಚ್ಚು ನಿವಾಸಿಗಳನ್ನು ಹೊಂದಿರುವ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೂರು ಹಂತದ ಪಂಚಾಯತ್ ರಾಜ್ ಸಂಸ್ಥೆಗಳಿವೆ: ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯಿತಿಗಳು ಮಂಡಲ ಪರಿಷತ್ ಅಥವಾ ಬ್ಲಾಕ್ ಸಮಿತಿ ಅಥವಾ ಬ್ಲಾಕ್ ಮಟ್ಟದಲ್ಲಿ ಪಂಚಾಯತ್ ಸಮಿತಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪರಿಷತ್ತು ಎರಡು ಮಿಲಿಯನ್ಗಿಂತಲೂ ಕಡಿಮೆ ನಿವಾಸಿಗಳನ್ನು ಹೊಂದಿರುವ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೇವಲ ಎರಡು ಹಂತದ ಪಂಚಾಯತ್ ರಾಜ್ ಸಂಸ್ಥೆಗಳಿವೆ.
ಅರ್ಥ ಶಾಸ್ತ್ರದಲ್ಲಿ, ಹಣದುಬ್ಬರ ವೆಂದರೆ ಆರ್ಥಿಕತೆಯ ಕಾಲಾವಧಿಯಲ್ಲಿ ಸರಕುಗಳ ಹಾಗೂ ಸೇವೆಗಳ ಸಾಮಾನ್ಯ ಬೆಲೆಗಳ ಮಟ್ಟದ ಏರಿಕೆ. ಬೆಲೆ ಏರಿಕೆಯಾದಾಗ, ಚಲಾವಣೆಯ ಪ್ರತಿ ಘಟಕವೂ ಕಡಿಮೆ ಪ್ರಮಾಣದಲ್ಲಿ ಸರಕುಗಳನ್ನು-ಸೇವೆಗಳನ್ನು ಕೊಂಡುಕೊಳ್ಳುತ್ತದೆ; ಹಾಗಾಗಿ ಹಣದುಬ್ಬರವೆಂದರೆ ಹಣದ ಕೊಂಡುಕೊಳ್ಳುವ ಸಾಮರ್ಥ್ಯದಲ್ಲಿನ ಕೊರೆತಯೂ ಹೌದು - ವಿನಿಮಯ ಮತ್ತು ಆರ್ಥಿಕತೆಯ ಲೆಕ್ಕದ ಘಟಕದ ಆಂತರಿಕ ಮಾಧ್ಯಮದಲ್ಲಿ ನೈಜ ಮೌಲ್ಯದ ನಷ್ಟವೂ ಆಗುತ್ತದೆ. ಹಣದುಬ್ಬರದ ಪ್ರಮಾಣವೇ ಬೆಲೆ ಏರಿಕೆಯ ಮುಖ್ಯ ಪ್ರಮಾಣವಾಗಿದ್ದು, ಕಾಲಾವಧಿಯಲ್ಲಿ ಹಣದುಬ್ಬರದ ದರ, ಸಾಮಾನ್ಯ ಬೆಲೆಯ ಸೂಚ್ಯಂಕಲ್ಲಿ ವಾರ್ಷಿಕ ಶೇಕಡಾವಾರು ಬದಲಾವಣೆ (ಗ್ರಾಹಕ ಬೆಲೆ ಸೂಚ್ಯಂಕ ಎಂದೂ ಹೇಳಲಾಗಿದೆ).
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.