The most-visited ಕನ್ನಡ Wikipedia articles, updated daily. Learn more...
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಬಾಬು ಜಗಜೀವನ್ ರಾಮ್ (೫ ಏಪ್ರಿಲ್ ೧೯೦೮ - ೬ ಜುಲೈ ೧೯೮೬) ಇವರು ಜನಪ್ರಿಯವಾಗಿ ಬಾಬೂಜಿ ಎಂದು ಕರೆಯಲ್ಪಡುತ್ತಾರೆ ಹಾಗೂ ಇವರು ಭಾರತದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಿಹಾರದ ರಾಜಕಾರಣಿಯಾಗಿದ್ದರು. ೧೯೩೫ ರಲ್ಲಿ, ದಲಿತರಿಗೆ ಸಮಾನತೆಯನ್ನು ಸಾಧಿಸಲು ಸಮರ್ಪಿತವಾದ ಅಖಿಲ ಭಾರತ ಶೋಷಿತ ವರ್ಗಗಳ ಲೀಗ್ ಅನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು ಮತ್ತು ೧೯೩೭ ರಲ್ಲಿ, ಬಿಹಾರ ವಿಧಾನಸಭೆಗೆ ಆಯ್ಕೆಯಾದರು. ನಂತರ, ಅವರು ಗ್ರಾಮೀಣ ಕಾರ್ಮಿಕ ಚಳವಳಿಯನ್ನು ಸಂಘಟಿಸಿದರು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಎರಡನೇ ಜಾಗತೀಕ ಯುದ್ಧದಲ್ಲಿ ಸ್ಟ್ಯಾಲಿನ್ಗ್ರಾಡ್ ಸಮರ ಕ್ಕೆ ಅದರದ್ದೇ ಆದ ಮಹತ್ವವಿದೆ. ಈ ಸಮರದಲ್ಲಿ ನಾಜಿ ಜರ್ಮನಿ ತನ್ನ ಮಿತ್ರಕೂಟದೊಂದಿಗೆ ಸೋವಿಯತ್ ಯೂನಿಯನ್ ಮೇಲೆ ಹಿಡಿತ ಸಾಧಿಸಲು ರಷ್ಯಾದ ನೈರುತ್ಯ ಭಾಗದಲ್ಲಿರುವ ಸ್ಟ್ಯಾಲಿನ್ಗ್ರಾಡ್ (ಈಗಿನ ಒಲ್ಗೊಗ್ರಾದ್) ನಗರದಲ್ಲಿ ಘನಘೋರ ಹೋರಾಟಕ್ಕಿಳಿದಿತ್ತು. 1942 ಜುಲೈ 17 ಹಾಗೂ 1943 ಫೆಬ್ರುವರಿ 2ರ ನಡುವೆ ನಡೆದ ಈ ಕದನ ಒಂದರ್ಥದಲ್ಲಿ ಜರ್ಮನಿಯ ಪಾಲಿಗೆ ಮಾರಣಾಂತಿಕವಾಗಿ ಪರಿಗಣಿಸಿತ್ತು.
ಎರಡನೆಯ ಮಹಾಯುದ್ಧ ೧೯೩೯ರಿಂದ ೧೯೪೫ರವರೆಗೆ ನಡೆದ, ಜಗತ್ತಿನ ಅನೇಕ ದೇಶಗಳನ್ನೊಳಗೊಂಡ ಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆಯಲ್ಪಟ್ಟ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ ( ಫ್ರಾನ್ಸ್, ರಶಿಯಾ, ಇಂಗ್ಲೆಂಡ್ ಮತ್ತು ಅಮೆರಿಕಾ) ಮತ್ತು ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಒಟ್ಟಿನಲ್ಲಿ ೭೦ ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ ಈ ಯುದ್ಧದಲ್ಲಿ ಆರು ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಪಾಪೆಯು (ಕನೀನಿಕೆ) ಕಣ್ಣಿನ ಕನೀನಿಕಾ ಪಟದ ಮಧ್ಯದಲ್ಲಿ ಸ್ಥಿತವಾಗಿರುವ ಕಪ್ಪುಬಣ್ಣದ ರಂಧ್ರ. ಇದು ಬೆಳಕು ರೆಟಿನಾದ ಮೇಲೆ ಬೀಳಲು ಅವಕಾಶ ನೀಡುತ್ತದೆ. ಪಾಪೆಯನ್ನು ಪ್ರವೇಶಿಸುವ ಬೆಳಕಿನ ಕಿರಣಗಳು ಕಣ್ಣಿನೊಳಗಿನ ಅಂಗಾಂಶಗಳಿಂದ ನೇರವಾಗಿ ಹೀರಲ್ಪಡುವ ಕಾರಣದಿಂದ, ಅಥವಾ ಕಣ್ಣಿನೊಳಗೆ ಕಿರಿದಾದ ಪಾಪೆಯಿಂದ ಬಹುತೇಕವಾಗಿ ಹೊರಬರಲು ಆಗದ ಕಿರಣಗಳಿಂದ ಎಲ್ಲೆಡೆ ಆಗುವ ಪ್ರತಿಫಲನಗಳ ನಂತರ ಹೀರಲ್ಪಡುವ ಕಾರಣದಿಂದ ಇದು ಕಪ್ಪಾಗಿ ಕಾಣುತ್ತದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ದೇವಸ್ಥಾನ
ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ದೇವಸ್ಥಾನವು ಕರ್ನಾಟಕದ ಹಾಸನ ಜಿಲ್ಲೆಯ ಅರಸಿಕೆರೆ ತಾಲ್ಲೂಕಿನ ಯಾದಪುರ ಗ್ರಾಮದಲ್ಲಿರುವ ಪ್ರಸಿದ್ಧ ಹಿಂದೂ ದೇವಾಲಯವಾಗಿದೆ. ಯಾದಪುರವು ಅರಸಿಕೆರೆಯಿಂದ ೮ ಕಿಲೋ ಮೀಟರ್ ದೂರದಲ್ಲಿದೆ. ಈ ದೇವಾಲಯವು ಬೆಟ್ಟದ ಮೇಲಿದ್ದು ಶಿವನಿಗೆ ಸಮರ್ಪಿತವಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮಾಂಗ್ಟೆ ಚುಂಗ್ನೀಜಾಂಗ್ ಮೇರಿ ಕೋಮ್ OLY (ಜನನ 24 ನವೆಂಬರ್ 1982) ಒಬ್ಬ ಭಾರತೀಯ ಹವ್ಯಾಸಿ ಬಾಕ್ಸರ್, ರಾಜಕಾರಣಿ ಮತ್ತು ಹಾಲಿ ಸಂಸತ್ತಿನ ಸದಸ್ಯ, ರಾಜ್ಯಸಭೆ. ಆರು ಬಾರಿ ವಿಶ್ವ ಅಮೆಚೂರ್ ಬಾಕ್ಸಿಂಗ್ ಚಾಂಪಿಯನ್ಶಿಪ್ ಗೆದ್ದ ಏಕೈಕ ಮಹಿಳೆ, ಮೊದಲ ಏಳು ವಿಶ್ವ ಚಾಂಪಿಯನ್ಶಿಪ್ಗಳಲ್ಲಿ ಪ್ರತಿಯೊಂದರಲ್ಲಿ ಪದಕ ಗೆದ್ದ ಏಕೈಕ ಮಹಿಳಾ ಬಾಕ್ಸರ್ ಮತ್ತು ಎಂಟು ವಿಶ್ವ ಚಾಂಪಿಯನ್ಶಿಪ್ ಪದಕಗಳನ್ನು ಗೆದ್ದ ಏಕೈಕ ಬಾಕ್ಸರ್ (ಪುರುಷ ಅಥವಾ ಮಹಿಳೆ). ಮ್ಯಾಗ್ನಿಫಿಸೆಂಟ್ ಮೇರಿ ಎಂಬ ಅಡ್ಡಹೆಸರು ಹೊಂದಿರುವ ಅವರು 2012 ರ ಬೇಸಿಗೆ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಏಕೈಕ ಭಾರತೀಯ ಮಹಿಳಾ ಬಾಕ್ಸರ್, ಫ್ಲೈವೇಟ್ (51 ಕೆಜಿ) ಸ್ಪರ್ಧಿಸಿ ಕಂಚಿನ ಪದಕವನ್ನು ಗೆದ್ದಿದ್ದಾರೆ..ಇಂಟರ್ನ್ಯಾಷನಲ್ ಬಾಕ್ಸಿಂಗ್ ಅಸೋಸಿಯೇಷನ್ (ಹವ್ಯಾಸಿ) (AIBA) ಯಿಂದ ಅವರು ವಿಶ್ವದ ನಂ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ರಾಜಾ ರವಿವರ್ಮ ( ೨೯ ಏಪ್ರಿಲ್ ೧೮೪೮ - ೨ ಅಕ್ಟೋಬರ್ ೧೯೦೬) ಅವರು ಭಾರತೀಯ ವರ್ಣಚಿತ್ರಕಾರ ಮತ್ತು ಕಲಾವಿದ. ಅವರ ಕೃತಿಗಳು ಯುರೋಪಿಯನ್ ಶೈಕ್ಷಣಿಕ ಕಲೆಯನ್ನು ಸಂಪೂರ್ಣವಾಗಿ ಭಾರತೀಯ ಸಂವೇದನೆ ಮತ್ತು ಐಕಾನೋಗ್ರಫಿಯೊಂದಿಗೆ ಸಂಯೋಜಿಸುವ ಅತ್ಯುತ್ತಮ ಉದಾಹರಣೆಗಳಲ್ಲಿ ಒಂದಾಗಿದೆ. ವಿಶೇಷವಾಗಿ, ಅವರು ತಮ್ಮ ವರ್ಣಚಿತ್ರಗಳ ಕೈಗೆಟುಕುವ ಲಿಥೋಗ್ರಾಫ್ಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡುವಲ್ಲಿ ಗಮನಾರ್ಹರಾಗಿದ್ದರು, ಇದು ವರ್ಣಚಿತ್ರಕಾರ ಮತ್ತು ಸಾರ್ವಜನಿಕ ವ್ಯಕ್ತಿಯಾಗಿ ಅವರ ವ್ಯಾಪ್ತಿಯನ್ನು ಮತ್ತು ಪ್ರಭಾವವನ್ನು ಬಹಳವಾಗಿ ಹೆಚ್ಚಿಸಿತು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮಂಡಿಯು ತೊಡೆಯನ್ನು ಕಾಲಿನ ಜೊತೆ ಸೇರಿಸುತ್ತದೆ ಮತ್ತು ಎರಡು ಕೀಲುಗಳನ್ನು ಹೊಂದಿದೆ: ಫೀಮರ್ ಹಾಗೂ ಜಂಘಾಸ್ಥಿ ನಡುವೆ ಒಂದು, ಮತ್ತು ಫ಼ೀಮರ್ ಹಾಗೂ ಮಂಡಿಚಿಪ್ಪು ನಡುವೆ ಒಂದು. ಇದು ಮಾನವ ದೇಹದಲ್ಲಿನ ಅತ್ಯಂತ ದೊಡ್ಡ ಕೀಲಾಗಿದೆ. ಮಂಡಿಯು ಒಂದು ಮಾರ್ಪಡಿಸಲ್ಪಟ್ಟ ತಿರುಗಣೆ ಕೀಲಾಗಿದೆ, ಮತ್ತು ಬಾಗುವಿಕೆ ಹಾಗೂ ಚಾಚುವಿಕೆ ಜೊತೆಗೆ ಸ್ವಲ್ಪ ಆಂತರಿಕ ಹಾಗೂ ಬಾಹ್ಯ ತಿರುಗುವಿಕೆಯನ್ನು ಅನುಮತಿಸುತ್ತದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಇಪ್ಪತನೆಯ ಶತಮಾನದ ಮೊದಲ ಭಾಗದಲ್ಲಿ ಅಂದರೆ 1914 ರಿಂದ 1918 ರವರೆಗೆ ಸಂಭವಿಸಿದ ಮೊದಲನೇ ವಿಶ್ವಯುದ್ದ ಮಾನವನ ಇತಿಹಾಸದಲ್ಲೇ ಒಂದು ಪ್ರಮುಖ ಘಟನೆಯಾಗಿದೆ. ಇದು ಮೂಲತಃ ಯುರೋಪಿನಲ್ಲೆ ಸಂಭವಿಸಿದರೂ ಕೂಡ ಕ್ರಮೇಣ ಇಡೀ ವಿಶ್ವವ್ಯಾಪಿಯಾಗಿ ಆಸ್ಫೋಟಿಸಿತು. ಇದು ಜರ್ಮನಿ ಮುಖಂಡತ್ವದ ಶತ್ರು ಪಕ್ಷ ಮತ್ತು ಇಂಗ್ಲಂಡ್ ನೇತೃತ್ವದ ಮಿತ್ರ ಪಕ್ಷಗಳ ನಡುವೆ ಸುಮಾರು 4 ವರ್ಷಗಳು ಸಂಭವಿಸಿ ಜರ್ಮನಿಯ ಸೋಲಿನೊಂದಿಗೆ 1918ರಲ್ಲಿ ಮುಕ್ತಾಯಗೊಂಡಿತು.ಈ ಯುದ್ಧದಲ್ಲಿ ಹಿಂದೆಂದೂ ಕಂಡರಿಯದ ಹೊಸ ಶಸ್ತ್ರಾಸ್ತ್ರಗಳು, ಯುದ್ಧ ವಿಮಾನಗಳು, ನವೀನ ಯುದ್ಧ ನೌಕೆಗಳು, ಟ್ಯಾಂಕರ್ಗಳು, ಜಲಾಂತರ್ಗಾಮಿಗಳು, ಸ್ಪೋಟಕಗಳು, ವಿಷಾನಿಲಗಳು ಬಳಕೆಯಾದವು.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೫ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಮಹಾತ್ಮ ಜ್ಯೋತಿಬಾ ಫುಲೆ (೧೮೨೭ - ೧೮೯೦) ಅವರು ಆಧುನಿಕ ಮಹಾರಾಷ್ಟ್ರದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು. ಸಮಾಜ ಸುಧಾರಕರಾಗಿ, ಸಮಾನತೆಯ ಹರಿಕಾರರಾಗಿ ದೀನ, ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿದವರು. ಇವರು ಜನಸಾಮಾನ್ಯರು ಡಾಂಭಿಕ ಧರ್ಮ, ಪಂಥ, ಸಂಪ್ರದಾಯ ಮುಂತಾದ ಸಂಕುಚಿತ ಭಾವನೆಗಳಿಗೆ ಮರುಳಾಗದೆ, ಮಾನವ ಧರ್ಮವನ್ನು ಅಂಗೀಕರಿಸಬೇಕೆಂದು ಅಪೇಕ್ಷೆ ಪಟ್ಟವರು.ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ಕನ್ನಡದಲ್ಲಿರುವ ಬಹುತೇಕ ಕೃತಿಗಳಲ್ಲಿ "ಜ್ಯೋತಿಬಾ ಫುಲೆ" ಎಂಬ ಹೆಸರೆ ಬಳಕೆಯಲ್ಲಿದೆ.
ಬೇಟೆ ಪ್ರಾಣಿಗಳನ್ನು ಕೊಲ್ಲುವ ಅಥವಾ ಬಲೆಗೆ ಬೀಳಿಸುವ, ಅಥವಾ ಅದೇ ಉದ್ದೇಶದಿಂದಲೇ ಅವುಗಳನ್ನು ಬೆನ್ನಟ್ಟಿ ಹೋಗುವ ಅಥವಾ ಹಿಂಬಾಲಿಸುವ ಅಭ್ಯಾಸ. ವನ್ಯಜೀವಿಗಳು ಅಥವಾ ಕಾಡು ಪ್ರಾಣಿಗಳನ್ನು ಬೇಟೆಯಾಡುವುದನ್ನು ಮಾನವರು ಅತ್ಯಂತ ಸಾಮಾನ್ಯವಾಗಿ ಆಹಾರಕ್ಕಾಗಿ, ವಿನೋದಕ್ಕಾಗಿ, ತಮಗೆ ಅಥವಾ ಸಾಕು ಪ್ರಾಣಿಗಳಿಗೆ ಅಪಾಯಕಾರಿಯಾದ ಪರಭಕ್ಷಕಗಳನ್ನು ನಿರ್ನಾಮ ಮಾಡಲು, ಅಥವಾ ವ್ಯಾಪಾರಕ್ಕಾಗಿ ಮಾಡುತ್ತಾರೆ. ನ್ಯಾಯಸಮ್ಮತ ಬೇಟೆಯು ಕಳ್ಳಬೇಟೆಯಿಂದ ಬೇರೆಯಾಗಿದೆ, ಏಕೆಂದರೆ ಕಳ್ಳಬೇಟೆಯು ಬೇಟೆಯಾಡಲಾಗುವ ಪ್ರಾಣಿಯ ಅಕ್ರಮ ಕೊಲೆ, ಬಲೆ ಬೀಳಿಸುವಿಕೆ ಅಥವಾ ಸೆರೆ.
ಜನಗಣತಿ ಎಂದರೆ, ನಿರ್ಧಿಷ್ಟ ಜನಸಂಖ್ಯೆಯ ಸದಸ್ಯರ ಮಾಹಿತಿಯನ್ನು ಉತ್ತಮ ಕಾರ್ಯವಿಧಾನ-ಪದ್ದತಿಗಳ ಅನುಸರಿಸಿ ದಾಖಲಿಸುವುದು. ಇದು ನಿಯಮಿತವಾಗಿ ನಡೆಯುವ ನಿರ್ಧಿಷ್ಟ ಜನಸಂಖ್ಯೆಯ ಅಧಿಕೃತ ಎಣಿಕೆಯ ವಿಧಾನವಾಗಿದೆ. ಈ ಪದವನ್ನು ಹೆಚ್ಚಾಗಿ ರಾಷ್ಟ್ರೀಯ ಜನಸಂಖ್ಯೆ ಮತ್ತು ಜನವಸತಿ ಗೃಹಗಳ ಎಣಿಕೆಗೆ ಬಳಸಲಾಗುತ್ತದೆ.ಇತರ ಗಣತಿಗಳೆಂದರೆ ಎಂದರೆ ಕೃಷಿ,ವಹಿವಾಟು ಮತ್ತು ಸಂಚಾರಿ ವಿಭಾಗದ ಅಂಕಿಅಂಶ ಸೇರಿವೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಭಾರತದ ಕರ್ನಾಟಕ ರಾಜ್ಯದ ಪ್ರಸ್ತುತ ಬಾಗಲಕೋಟೆ ಜಿಲ್ಲೆಯಲ್ಲಿನ ಮಲಪ್ರಭಾ ನದಿ ತೀರದಲ್ಲಿ, ೫ ರಿಂದ ೮ನೇ ಶತಮಾನಗಳಲ್ಲಿ ಅಸ್ತಿತ್ವದಲ್ಲಿದ್ದ ಚಾಲುಕ್ಯರ ಆಡಳಿತಾವಧಿಯಲ್ಲಿ ಬದಾಮಿ ಚಾಲುಕ್ಯರ ವಾಸ್ತುಶಿಲ್ಪ ಎಂಬ ದೇಗುಲ ಕಟ್ಟಡ ವಿನ್ಯಾಸ ವಿಕಸನಗೊಂಡಿತು. ಈ ವಾಸ್ತು ಪ್ರಕಾರವನ್ನು ವೆಸರ ಶೈಲಿ ಮತ್ತು ಚಾಲುಕ್ಯ ಶೈಲಿ ಎಂದಾಗಿಯೂ ಕರೆಯಲಾಗುತ್ತದೆ. ಅದಾಗ್ಯೂ ಈ ಪದವು ೧೧ ಮತ್ತು ೧೨ ನೇ ಶತಮಾನಗಳ ನಂತರದ ಪಾಶ್ಚಾತ್ಯ ಚಾಲುಕ್ಯ ವಾಸ್ತುಶಿಲ್ಪವನ್ನೂ ಒಳಗೊಂಡಿದೆ.