The most-visited ಕನ್ನಡ Wikipedia articles, updated daily. Learn more...
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ರಂಧ್ರವು ಒಂದು ಟೊಳ್ಳಾದ ಜಾಗ, ಒಂದು ಘನಕಾಯದಲ್ಲಿ/ಘನಕಾಯದ ಮೂಲಕವಿರುವ ತೂತು, ಅಥವಾ ನೆಲದಲ್ಲಿನ ಉತ್ಖನನ. ರಂಧ್ರಗಳು ನೈಸರ್ಗಿಕ ಮತ್ತು ಕೃತಕ ಪ್ರಕ್ರಿಯೆಗಳಿಂದ ಉಂಟಾಗುತ್ತವೆ, ಮತ್ತು ವಿವಿಧ ಉದ್ದೇಶಗಳಿಗೆ ಉಪಯುಕ್ತವಿರಬಹುದು, ಅಥವಾ ಶಿಲ್ಪವಿಜ್ಞಾನದ ಅನೇಕ ಕ್ಷೇತ್ರಗಳಲ್ಲಿ ಪರಿಹರಿಸಬೇಕಾದ ಸಮಸ್ಯೆಯನ್ನು ಪ್ರತಿನಿಧಿಸಬಹುದು. ವಸ್ತು ಮತ್ತು ಸ್ಥಳವನ್ನು ಅವಲಂಬಿಸಿ, ರಂಧ್ರವು ಒಂದು ಮೇಲ್ಮೈಯಲ್ಲಿನ ತಗ್ಗು ಆಗಿರಬಹುದು (ಉದಾಹರಣೆಗೆ ನೆಲದಲ್ಲಿನ ರಂಧ್ರ), ಅಥವಾ ಆ ಮೇಲ್ಮೈಯ ಮುಖಾಂತರ ಸಂಪೂರ್ಣವಾಗಿ ಸಾಗಬಹುದು (ಉದಾಹರಣೆಗೆ ಕಾಗದದ ಚೂರಿನಲ್ಲಿ ರಂಧ್ರಕದಿಂದ ಸೃಷ್ಟಿಯಾದ ತೂತು).
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ. , ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯು ೨೦೨೫ರ ಏಪ್ರಿಲ್ ೨೨ರಂದು ಭಾರತದ ಆಡಳಿತದಲ್ಲಿರುವ ಜಮ್ಮು ಮತ್ತು ಕಾಶ್ಮೀರ ಪಹಲ್ಗಮ್ ಬಳಿ ಐದು ಸಶಸ್ತ್ರ ಇಸ್ಲಾಮಿಕ್ ಭಯೋತ್ಪಾದಕರು ಪ್ರವಾಸಿಗರ ಮೇಲೆ ನಡೆಸಿದ ದಾಳಿಯಾಗಿದೆ. ೨೬ ನಾಗರಿಕರು ಕೊಲ್ಲಲ್ಪಟ್ಟರು, ಅವರು ಮುಖ್ಯವಾಗಿ ಹಿಂದೂ ಪ್ರವಾಸಿಗರಾಗಿದ್ದರು, ಆದರೂ ಒಬ್ಬ ಕ್ರಿಶ್ಚಿಯನ್ ಪ್ರವಾಸಿ ಮತ್ತು ಸ್ಥಳೀಯ ಮುಸ್ಲಿಮರೂ ಸಹ ಕೊಲ್ಲಲ್ಪಟ್ಟರು.ಈ ಘಟನೆಯು ಬೈಸರನ್ ಕಣಿವೆ ಪ್ರವಾಸಿ ತಾಣದಲ್ಲಿ ನಡೆಯಿತು ಮತ್ತು ೨೦೦೮ರ ಮುಂಬೈ ದಾಳಿಯ ನಂತರ ಭಾರತದಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಮಾರಣಾಂತಿಕ ದಾಳಿ ಎಂದು ಪರಿಗಣಿಸಲಾಗಿದೆ. ಪಾಕಿಸ್ತಾನ ಮೂಲದ ವಿಶ್ವಸಂಸ್ಥೆ ಗೊತ್ತುಪಡಿಸಿದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾದ ಒಂದು ಅಂಗವೆಂದು ನಂಬಲಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್), ಆರಂಭದಲ್ಲಿ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ಈ ದಾಳಿಯು ಭಾರತೀಯ ನಾಗರಿಕರಿಗೆ ಕಾಶ್ಮೀರದಲ್ಲಿ ವಾಸಿಸಲು ಮತ್ತು ಕೆಲಸ ಮಾಡಲು ಅವಕಾಶ ನೀಡುವ ಭಾರತ ಸರ್ಕಾರದ ನೀತಿ ವಿರುದ್ಧವಾಗಿದೆ ಎಂದು ಹೇಳಿತ್ತು, ಇದು ಈ ಪ್ರದೇಶದಲ್ಲಿ ಸ್ಥಳೀಯೇತರ ವಸಾಹತುಗಳಿಗೆ ಕಾರಣವಾಯಿತು.
ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು
ಟೆಂಪ್ಲೇಟು:Infobox fire department ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವಿಭಾಗವು ಕರ್ನಾಟಕ ಸರ್ಕಾರದ ಒಂದು ಇಲಾಖೆಯಾಗಿದ್ದು, ಇದು ಭಾರತದ ಕರ್ನಾಟಕದ ವಿಪತ್ತು ನಿರ್ವಹಣಾ ಸಂಸ್ಥೆಯಾಗಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದ ಕರ್ನಾಟಕ ರಾಜ್ಯದ ಪ್ರಸ್ತುತ ಬಾಗಲಕೋಟೆ ಜಿಲ್ಲೆಯಲ್ಲಿನ ಮಲಪ್ರಭಾ ನದಿ ತೀರದಲ್ಲಿ, ೫ ರಿಂದ ೮ನೇ ಶತಮಾನಗಳಲ್ಲಿ ಅಸ್ತಿತ್ವದಲ್ಲಿದ್ದ ಚಾಲುಕ್ಯರ ಆಡಳಿತಾವಧಿಯಲ್ಲಿ ಬದಾಮಿ ಚಾಲುಕ್ಯರ ವಾಸ್ತುಶಿಲ್ಪ ಎಂಬ ದೇಗುಲ ಕಟ್ಟಡ ವಿನ್ಯಾಸ ವಿಕಸನಗೊಂಡಿತು. ಈ ವಾಸ್ತು ಪ್ರಕಾರವನ್ನು ವೆಸರ ಶೈಲಿ ಮತ್ತು ಚಾಲುಕ್ಯ ಶೈಲಿ ಎಂದಾಗಿಯೂ ಕರೆಯಲಾಗುತ್ತದೆ. ಅದಾಗ್ಯೂ ಈ ಪದವು ೧೧ ಮತ್ತು ೧೨ ನೇ ಶತಮಾನಗಳ ನಂತರದ ಪಾಶ್ಚಾತ್ಯ ಚಾಲುಕ್ಯ ವಾಸ್ತುಶಿಲ್ಪವನ್ನೂ ಒಳಗೊಂಡಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ತ್ರಿಪದಿ ತ್ರಿಪದಿ ಅಂದರೆ ಮೂರು ಸಾಲಿನ ಪದ್ಯ, ಇದು ಅಚ್ಚಕನ್ನಡದೇಸೀಮಟ್ಟಿನ ಛಂದಸ್ಸಾಗಿದೆ. ಇದರಲ್ಲಿ ಕೂಡ ಹಲವಾರು ಪ್ರಬೇಧಗಳಿದ್ದರೂ ಅಂಶಗಣ ಆಧಾರಿತ ತ್ರಿಪದಿಗಳೇ ಹೆಚ್ಚು ಪ್ರಾಮುಖ್ಯತೆ ಪಡೆದಿವೆಸರ್ವಜ್ಞನ ವಚನಗಳಲ್ಲಿ ಮಾತ್ರಾಗಣಗಳ ಆಧಾರದ ಮೇಲೆ ಕೂಡ ತ್ರಿಪದಿಗಳನ್ನು ರಚಿಸಿರುವುದು ಕಂಡುಬರುತ್ತದೆ. ಅಲ್ಲಿ ಐದು ಮಾತ್ರೆಗಳ ಗಣಗಳನ್ನು ನಾವು ಕಾಣಬಹುದು ಅಂಶಗಣ ಆಧಾರಿತ ತ್ರಿಪದಿಗಳಲ್ಲಿ ಹಲವು ವೈವಿಧ್ಯಗಳಿದ್ದರೂ ಜಾನಪದ ಒನಕೆವಾಡು,ಬೀಸುವಕಲ್ಲಿನ ಹಾಡುಗಳಲ್ಲೆಲ್ಲ ಕಂಡುಬರುವ ಸಾಮಾನ್ಯ ತ್ರಿಪದಿಯ ಲಕ್ಷಣ ಹೀಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಸಾಮಾನ್ಯವಾಗಿ ಆರ್ ಸಿ ಬಿ ಎಂದು ಸಂಕ್ಷಿಪ್ತಗೊಳಿಸಲಾಗಿದೆ) ಕರ್ನಾಟಕ, ಬೆಂಗಳೂರು ಮೂಲದ ವೃತ್ತಿಪರ ಫ್ರಾಂಚೈಸ್ ಕ್ರಿಕೆಟ್ ತಂಡವಾಗಿದ್ದು, ಇದು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಆಡುತ್ತದೆ. ಫ್ರ್ಯಾಂಚೈಸ್ ಅನ್ನು 2008 ರಲ್ಲಿ ಯುನೈಟೆಡ್ ಸ್ಪಿರಿಟ್ಸ್ ಸ್ಥಾಪಿಸಿತು ಮತ್ತು ಅದರ ಮದ್ಯದ ಬ್ರ್ಯಾಂಡ್ ರಾಯಲ್ ಚಾಲೆಂಜ್ ನಂತರ ಹೆಸರಿಸಲಾಯಿತು. ರಾಯಲ್ ಚಾಲೆಂಜರ್ಸ್ ತಮ್ಮ ತವರಿನ ಪಂದ್ಯಗಳನ್ನು 32,000 ಸಾಮರ್ಥ್ಯದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಾರೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಮಹದೇಶ್ವರ ಬೆಟ್ಟ ಕರ್ನಾಟಕದ ದಕ್ಷಿಣ ತುದಿಯ ಗಡಿಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನ ಮುಖ್ಯ ಶ್ರದ್ಧಾಭಕ್ತಿ ಕೇಂದ್ರ. ದೇವಸ್ಥಾನವು ಬೆಟ್ಟಗಳಿಂದ ಸುತ್ತುವರಿದಿರುವ ಕಾರಣ ಮಹದೇಶ್ವರ ಬೆಟ್ಟವೆಂದು ಕರೆಯಲಾಗುತ್ತದೆ. ಪಶ್ಚಿಮಘಟ್ಟಗಳ ಭಾಗದಿಂದ ಆರಂಭವಾಗಿ ಪೂರ್ವಘಟ್ಟಗಳ ಕಡೆಗೆ ಹರಡಿಕೊಂಡಿರುವ ಬೆಟ್ಟ ಸಾಲುಗಳಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಹಬ್ಬಿರುವ ಮಹದೇಶ್ವರ ಬೆಟ್ಟ ದಖನ್ ಪ್ರಸ್ಥಭೂಮಿಯ ಬಹುಮುಖ್ಯ ಭಾಗವೂ ಕೂಡ.
ಸರ್ಕಾರಗಳ ಆರ್ಥಿಕತೆಯು ತೆರಿಗೆ, ಸರ್ಕಾರಿ ಬಜೆಟ್ಗಳು, ಹಣ ಪೂರೈಕೆ ಮತ್ತು ಬಡ್ಡಿದರಗಳು ಮತ್ತು ಕಾರ್ಮಿಕ ಮಾರುಕಟ್ಟೆ, ರಾಷ್ಟ್ರೀಯ ಮಾಲೀಕತ್ವ ಮತ್ತು ಆರ್ಥಿಕತೆಗೆ ಸರ್ಕಾರದ ಮಧ್ಯಸ್ಥಿಕೆಯ ಇತರ ಹಲವು ಕ್ಷೇತ್ರಗಳನ್ನು ಹೊಂದಿಸುವ ವ್ಯವಸ್ಥೆಗಳನ್ನು ಒಳಗೊಂಡಿದೆ. ಆರ್ಥಿಕ ನೀತಿಯ ಹೆಚ್ಚಿನ ಅಂಶಗಳನ್ನು ವಿತ್ತೀಯ ನೀತಿ ಎಂದು ವಿಂಗಡಿಸಬಹುದು. ಇದು ತೆರಿಗೆ ಮತ್ತು ಖರ್ಚುಗೆ ಸಂಬಂಧಿಸಿದ ಸರ್ಕಾರದ ಕ್ರಮಗಳೊಂದಿಗೆ ವ್ಯವಹರಿಸುತ್ತದೆ ಅಥವಾ ಹಣ ಪೂರೈಕೆ ಮತ್ತು ಬಡ್ಡಿದರಗಳಿಗೆ ಸಂಬಂಧಿಸಿದ ಕೇಂದ್ರ ಬ್ಯಾಂಕಿಂಗ್ ಕ್ರಮಗಳೊಂದಿಗೆ ವ್ಯವಹರಿಸುತ್ತದೆ.
ನಾಟಕವು ನಟರು ಅಭಿನಯಿಸಬಹುದಾದ ರೀತಿಯಲ್ಲಿ ರಚಿಸಲ್ಪಡುವ ಒಂದು ಸಾಹಿತ್ಯ ಪ್ರಕಾರ. ನಾಟಕದ ಅಭಿನಯವು ಒಂದು ರಂಗಕಲೆಯ ವಿಧ. ನಾಟಕವು ಪ್ರದರ್ಶನದಲ್ಲಿ ಪ್ರತಿನಿಧಿಸುವ ನಿರ್ದಿಷ್ಟ ಕಾಲ್ಪನಿಕ ವಿಧಾನವಾಗಿದೆ: ನಾಟಕ, ಒಪೆರಾ, ಮೈಮ್, ಬ್ಯಾಲೆ, ಇತ್ಯಾದಿಗಳನ್ನು ರಂಗಮಂದಿರದಲ್ಲಿ ಅಥವಾ ರೇಡಿಯೋ ಅಥವಾ ದೂರದರ್ಶನದಲ್ಲಿ ಪ್ರದರ್ಶಿಸಲಾಗುತ್ತದೆ.[1] ಸಾಮಾನ್ಯವಾಗಿ ಕಾವ್ಯದ ಪ್ರಕಾರವಾಗಿ ಪರಿಗಣಿಸಲ್ಪಟ್ಟಿರುವ, ನಾಟಕೀಯ ವಿಧಾನವು ನಾಟಕೀಯ ಸಿದ್ಧಾಂತದ ಆರಂಭಿಕ ಕೃತಿಯಾದ ಅರಿಸ್ಟಾಟಲ್ನ ಪೊಯೆಟಿಕ್ಸ್ (c.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.