The most-visited ಕನ್ನಡ Wikipedia articles, updated daily. Learn more...
ಅಮ್ಮ ಎಂಬುದು ಕನ್ನಡದಲ್ಲಿ ತಾಯಿಗೆ ಪರ್ಯಾಯ ಪದ.ಅಮ್ಮ ಎಂಬುದು ತಾಯಿಯನ್ನು ಸಂಬೋಧಿಸುವ ಪದ ಕೂಡಾ ಹೌದು.ಅಲ್ಲದೆ ಹಿರಿಯ ಹೆಂಗಸರನ್ನು ಸಂಬೋಧಿಸುವಾಗ ಮರ್ಯಾದೆ ಸೂಚಕ ಪದವಾಗಿ ಕೂಡಾ ಬಳಕೆಯಾಗುತ್ತದೆ.ಮಾತೃಸ್ವರೂಪಿಣಿಯಾದ ದೇವತೆಗೆ ಅಮ್ಮ ಎಂದು ಕರೆಯುವ ವಾಡಿಕೆ ಇದೆ.ಮೈಮೇಲೆ ಏಳುವ ದಡಾರ ಮುಂತಾದ ಗುಳ್ಳೆಗಳಿಗೆ "ಅಮ್ಮ ಎದ್ದಿದೆ" ಎಂದು ಹೇಳುವ ರೂಢಿ ಇದೆ. ಅಮ್ಮ ಹೆಸರಿನ ಕನ್ನಡ ಚಲನಚಿತ್ರದ ಬಗ್ಗೆ ಲೇಖನ ಈ ಪುಟದಲ್ಲಿ ಇದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಡಾ.ಕೆ.ಸುಧಾಕರ್ ಭಾರತೀಯ ರಾಜಕಾರಣಿ ಮತ್ತು ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವರು. ಅವರು 2018 ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದಿಂದ ವಿಧಾನಸಭೆಗೆ ಆಯ್ಕೆ ಆದರು (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ) ಮತ್ತು ನಂತರ ಸದಸ್ಯರಾಗಿ 2019 ರಲ್ಲಿ ವಿಧಾನಸಭೆಗೆ ಭಾರತೀಯ ಜನತಾ ಪಕ್ಷದಿಂದ ಮರು ಚುನಾಯಿತರಾದರು. ಮಾತ್ರ 52 ವರ್ಷದವರಾದ ಅವರು ಬಿ.ಎಸ್.ಯಡಿಯೂರಪ್ಪನವರ ಸಚಿವಾಲಯದ ಕಿರಿಯ ಕ್ಯಾಬಿನೆಟ್ ಮಂತ್ರಿಯಾಗಿದ್ದಾರೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಿಜಯನಗರದ ಕಲೆ ಮತ್ತು ವಾಸ್ತುಶಿಲ್ಪ
ವಿಜಯನಗರದ ಕಲೆ ಮತ್ತು ವಾಸ್ತುಶಿಲ್ಪ ವಿಜಯನಗರ ಸಾಮ್ರಾಜ್ಯವು ಒಂದು ಕಾಲದಲ್ಲಿ ಇಡೀ ದಕ್ಷಿಣ ಭಾರತಕ್ಕೇ ಧಾರ್ಮಿಕ ರಕ್ಷಣೆಯನ್ನು ಕೊಟ್ಟ ಕರ್ನಾಟಕದ ರಾಜಮನೆತನ. ಎಲ್ಲ ಕಲೆಗಳಂತೆ ವಾಸ್ತುಶಿಲ್ಪ ಮತ್ತು ಶಿಲ್ಪಕಲೆಯೂ ಈ ಕಾಲದಲ್ಲಿ ಪ್ರಾಮುಖ್ಯತೆಯನ್ನು ಪಡೆಯಿತು. ವಿಜಯನಗರ ಕಾಲದ ದೇವಾಲಯಗಳು ದಕ್ಷಿಣ ಭಾರತದ ತುಂಬೆಲ್ಲಾ ಹರಡಿಕೊಂಡಿವೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
"ಮೈಸೂರಿನ ಮಹಾರಾಜರಾದ ಹತ್ತನೆ ಶ್ರೀ ಚಾಮರಾಜೇಂದ್ರ ಒಡೆಯರ್ ಬಹದ್ದೂರ್ ಜಿ.ಸಿ.ಎಸ್.ಐ ಅವರ ಆಳ್ವಿಕೆಯ ಕಾಲದಲ್ಲಿ ಪ್ರಪ್ರಥಮವಾಗಿ ಈ ರಾಜ್ಯ ಗೀತೆಯನ್ನು ರಚಿಸಲಾಯಿತು. ಮೈಸೂರು ಅರಸರ ಕುಲದೇವತೆಯಾದ ಶ್ರೀ ಚಾಮುಂಡೇಶ್ವರಿ ಅಥವಾ ಗೌರಿಯನ್ನು ಪ್ರಾರ್ಥಿಸುವ ಈ ರಾಜ್ಯಗೀತೆಯನ್ನು ರಚಿಸಿದವರು ಆಸ್ಥಾನ ಸಾಹಿತಿ ವಿದ್ವಾನ್ ಬಸವಪ್ಪ ಶಾಸ್ತ್ರಿ. ಕನ್ನಡ-ಸಂಸ್ಕೃತ ಭಾಷೆಗಳಲ್ಲಿ ವಿಶೇಷ ಪ್ರಭುತ್ವ ಪಡೆದ ಪ್ರಕಾಂಡ ಪಂಡಿತರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ದುರ್ಗದ ಹುಲಿ ಮದಕರಿ ನಾಯಕ, ಭಾರತ ದೇಶದಲ್ಲಿದ್ದ ಹಲವು ಸಂಸ್ಥಾನಗಳಲ್ಲಿ ಒಂದಾದ ಚಿತ್ರದುರ್ಗದ ಕೊನೆಯ ಆರಸನಾಗಿದ್ದ. ಹೈದರ್ ಅಲಿಯ ಮೈಸೂರಿನ ಸೇನೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ನಾಯಕನನ್ನು ಮಾತುಕತೆಗೆಂದು ರಾಜಿಸಂಧಾನವೆಂದು ಕರೆಸಿ ಮೋಸದಿಂದ ಹೈದರ್ ಅಲಿ ಬಂಧಿಸಿ ಶ್ರೀರಂಗಪಟ್ಟಣದ ಸೆರೆಮನೆಯಲ್ಲಿಟ್ಟು ಮತಾಂತರವಾದರೆ ರಾಜ್ಯವನ್ನು ವಾಪಸ್ಸು ನೀಡಿ ಬಿಡುಗಡೆ ಮಾಡುವುದಾಗಿ ಹೇಳಲು ಮದಕರಿ ಜೀವ ನೀಡುತ್ತಾನೆ ಹೊರತು ಧರ್ಮದ್ರೋಹ ಮಾಡುವುದಿಲ್ಲ ಎಂದು ಕೆಚ್ಚೆದೆಯಿಂದ ಹೇಳುತ್ತಾನೆ. ನಂತರ ಹೈದರ್ ಅಲಿಯ ಪುತ್ರ ಟಿಪ್ಪುಸುಲ್ತಾನ್ ಮೈಸೂರಿನ ಮತ್ತು ಚಿತ್ರದುರ್ಗದ ಬೇಡರ ಪಡೆಗಳು ಒಂದಾಗಿ ದಾಳಿ ಮಾಡಬಹುದೆಂಬ ಹೆದರಿ ಸೈನಿಕ ದಂಗೆಯಾದರೆ ನಮಗೆ ಸೋಲು ಖಚಿತವೆಂದು ಭಾವಿಸಿ ಯುದ್ಧಭಯದಿಂದ ಮದಕರಿ ಊಟದಲ್ಲಿ ವಿಷವಿಟ್ಟು ಕೊಲೆ ಮಾಡುತ್ತಾನೆ.
ಮಹರ್ಷಿ ವಾತ್ಸ್ಯಾಯನ ಕೃತವಾದ ಕಾಮಸೂತ್ರವೆಂಬ ಪ್ರಾಚೀನ ಭಾರತೀಯ ಸಂಸ್ಕೃತ ಗ್ರಂಥ ಮಾನವನ ಲೈಂಗಿಕ ವರ್ತನೆ ಮತ್ತು ಭಾರತೀಯ ಪುರುಷಾರ್ಥ ಚಿಂತನೆಯನ್ನು ಕುರಿತ ಪ್ರಮಾಣಿತ ಕೃತಿಯೆಂಬುದು ಪಂಡಿತಜನ ವೇದ್ಯವಾದ ವಿಷಯ. ವಾತ್ಸ್ಯಾಯನ ಕಾಮಸೂತ್ರವು ಪ್ರಧಾನವಾಗಿ ಸಂಭೋಗ ಭಂಗಿಗಳನ್ನು ಕುರಿತ ಲೈಂಗಿಕ ಕೈಪಿಡಿಯಲ್ಲ.ಅದು ಚೆನ್ನಾಗಿ ಬದುಕುವ ಕಲೆ, ಪ್ರೀತಿಯ ಸ್ವರೂಪ, ಸಂಗಾತಿಗಳನ್ನು ಹುಡುಕುವ ಕ್ರಮ, ಲೈಂಗಿಕ ಜೀವನವನ್ನು ಕಾಪಾಡಿಕೊಳ್ಳುವುದು ಮತ್ತು ಆನಂದ-ಆಧಾರಿತ ಸಾಮರ್ಥ್ಯಗಳಿಗೆ ಸಂಬಂಧಿಸಿದ ಇತರ ಅಂಶಗಳನ್ನು ಕುರಿತು ಮಾರ್ಗದರ್ಶಿಯಾಗಿದೆ. ಇದು ವಿಭಿನ್ನ ಭಾಷ್ಯಗಳೊಂದಿಗೆ (ವ್ಯಾಖ್ಯಾನಗಳು) ಆಧುನಿಕ ಯುಗದಲ್ಲಿ ಉಳಿದುಕೊಂಡಿರುವ ಸಂಕ್ಷಿಪ್ತ ಪೌರುಷ ಪದ್ಯಗಳನ್ನು ಹೊಂದಿರುವ ಸೂತ್ರ ವಿಭಾಗದ ಗ್ರಂಥವಾಗಿದೆ.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ತಮಿಳುನಾಡಿನ ಮುಖ್ಯಮಂತ್ರಿ ಭಾರತದ ತಮಿಳುನಾಡಿನ ಮುಖ್ಯ ಕಾರ್ಯನಿರ್ವಾಹಕ. ಭಾರತದ ಸಂವಿಧಾನಕ್ಕೆ ಅನುಗುಣವಾಗಿ, ರಾಜ್ಯಪಾಲರು ರಾಜ್ಯದ ನ್ಯಾಯಾಂಗ ಮುಖ್ಯಸ್ಥರಾಗಿದ್ದಾರೆ, ಆದರೆ ವಾಸ್ತವಿಕ ಕಾರ್ಯನಿರ್ವಾಹಕ ಪ್ರಾಧಿಕಾರವು ಮುಖ್ಯಮಂತ್ರಿಯವರ ಮೇಲೆ ನಿಂತಿದೆ. ತಮಿಳುನಾಡು ವಿಧಾನಸಭೆಗೆ ಚುನಾವಣೆಯ ನಂತರ, ರಾಜ್ಯದ ರಾಜ್ಯಪಾಲರು ಸಾಮಾನ್ಯವಾಗಿ ಪಕ್ಷವನ್ನು (ಅಥವಾ ಒಕ್ಕೂಟವನ್ನು) ಬಹುಮತದ ಸ್ಥಾನಗಳೊಂದಿಗೆ ಸರ್ಕಾರ ರಚಿಸಲು ಆಹ್ವಾನಿಸುತ್ತಾರೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.