The most-visited ಕನ್ನಡ Wikipedia articles, updated daily. Learn more...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ದಲ್ಲಾಳಿ ಎಂದರೆ ಸರಕು, ಸ್ವತ್ತು, ಸ್ಟಾಕು, ಬಾಂಡು, ವಿಮೆ ಮತ್ತು ಪದಾರ್ಥಗಳನ್ನು ಖರೀದಿ ಮಾಡುವ ಅಥವಾ ವಿಕ್ರಯಿಸುವ ಉದ್ದೇಶದಿಂದ ತನ್ನ ಮುಖ್ಯನ (ಪ್ರಿನ್ಸಿಪಲ್) ಮತ್ತು ಮೂರನೆಯ ವ್ಯಕ್ತಿಯ ಅಥವಾ ಪಕ್ಷದ ನಡುವೆ ಸಂಧಾನ ನಡೆಸುವ ಅಭಿಕರ್ತ (ಏಜೆಂಟ್) (ಬ್ರೋಕರ್). ಇದಕ್ಕೆ ಅವನು ಪಡೆಯುವ ಶುಲ್ಕವೇ ಕಮೀಷನ್ ಅಥವಾ ದಲ್ಲಾಳಿ ರುಸುಂ ಅಥವಾ ದಲ್ಲಾಳಿ (ಬ್ರೋಕರೇಜ್). ಈ ಸಂಧಾನ ನಡೆಸುವ ದಲ್ಲಾಳಿಗೆ ಆ ಸರಕು, ಸ್ವತ್ತು, ಸ್ಟಾಕು, ಬಾಂಡು, ಮುಂತಾದುವುಗಳ ಸ್ವಾಧೀನವಾಗಲಿ, ಅವುಗಳ ಮೇಲೆ ಯಾವುದೇ ಹಕ್ಕಾಗಲಿ ಸಾಮಾನ್ಯವಾಗಿ ಇರುವುದಿಲ್ಲ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್.
ವಿಶ್ವ ಎಂದರೆ ಸಮಸ್ತವನ್ನೂ ಒಳಗೊಂಡಿರುವ ಭೌತವ್ಯವಸ್ಥೆ (ಯೂನಿವರ್ಸ್). ನಮಗೂ ನಮ್ಮ ಉಪಕರಣಗಳಿಗೂ ಗೋಚರವಾಗುವ ಮತ್ತು ವರ್ತಮಾನದಲ್ಲಿ ಗೋಚರವಾಗದೆ ಮುಂದೆಂದೋ ಅನಾವರಣಗೊಳ್ಳಲಿರುವ ಸಕಲ ಭೌತಕಾಯಗಳ, ಶಕ್ತಿ ಆಕರಗಳ (energy sources) ಮತ್ತು ವಿಕಿರಣ ಮೂಲಗಳ ಸಮಗ್ರ ಸಮುದಾಯವಿದು. ವಿಶ್ವದ ವ್ಯಾಖ್ಯೆ ನಮ್ಮಿಂದ ಆರಂಭವಾಗಿ ಮುಂದೆ ನಮ್ಮ ನಗರ, ದೇಶ, ಭೂಮಿ, ಸೌರವ್ಯೂಹ, ಆಕಾಶಗಂಗೆ, ಇನ್ನೂ ಮುಂದಿನ ಬ್ರಹ್ಮಾಂಡಗಳ (ಗೆಲಾಕ್ಸಿ) ಸಮೂಹ ಹೀಗೆ ನಮ್ಮ ಗ್ರಹಣಸಾಮರ್ಥ್ಯಕ್ಕೆ ಅನುಗುಣವಾಗಿ ವಿಸ್ತರಿಸುತ್ತದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಮಾನವ ಅಸ್ಥಿಪಂಜರ ಎಂದರೆ ಶರೀರದ ಆಂತರಿಕ ಚೌಕಟ್ಟು. ಅದು ಜನನದ ಸಮಯದಲ್ಲಿ ೨೭೦ ಮೂಳೆಗಳಿಂದ ಕೂಡಿದ್ದು – ಪ್ರೌಢಾವಸ್ಥೆಯ ವೇಳೆಗೆ ಕೆಲವು ಮೂಳೆಗಳು ಒಟ್ಟಿಗೆ ಕೂಡಿಕೊಂಡ ನಂತರ ಈ ಮೊತ್ತ ೨೦೬ ಮೂಳೆಗಳಿಗೆ ಇಳಿಯುತ್ತದೆ. ಅಸ್ಥಿಪಂಜರದಲ್ಲಿ ಮೂಳೆಯ ದ್ರವ್ಯರಾಶಿಯು ಸುಮಾರು ೩೦ರ ವಯಸ್ಸಿನ ಹೊತ್ತಿಗೆ ಗರಿಷ್ಠ ಸಾಂದ್ರತೆಯನ್ನು ಮುಟ್ಟುತ್ತದೆ.ಮಾನವನ ಅಸ್ಥಿಪಂಜರವನ್ನು ಅಕ್ಷೀಯ ಅಸ್ಥಿಪಂಜರ ಮತ್ತು "ಅಪೆಂಡಿಕ್ಯುಲಾರ್"(appendicular) ಅಸ್ಥಿಪಂಜರ ಎಂದು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ.ಅಕ್ಷೀಯ ಅಸ್ಥಿಪಂಜರವು ಬೆನ್ನೆಲುಬು, ಪಕ್ಕೆಲುಬು ಮತ್ತು ತಲೆಬುರುಡೆಯಿಂದ ರೂಪುಗೊಂಡಿದೆ."ಅಪೆಂಡಿಕ್ಯುಲಾರ್" ಅಸ್ತಿಪಂಜರವು ಅಕ್ಷೀಯ ಅಸ್ಥಿಪಂಜರಕ್ಕೆ ಲಗತ್ತಿಸಲಾಗಿದ್ದು ಇದು ಎದೆಯ ನಡುಕಟ್ಟು,ಶ್ರೋಣಿಯ ಹುಳು ಹಾಗು ಕೈ ಕಾಲುಗಳ ಮೂಳೆಗಳಿಂದ ರೂಪುಗೊಂಡಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ರಜನೀಕಾಂತ್ ಕನ್ನಡಿಗ (ಜನನ: ಡಿಸೆಂಬರ್ ೧೨ ೧೯೪೯) - ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಸಿನಿಮಾ ತಾರೆಯರಲ್ಲೊಬ್ಬರು. ಕನ್ನಡ ಚಿತ್ರರಂಗವಲ್ಲದೆ, ತೆಲುಗು, ತಮಿಳು, ಹಿಂದಿ ಚಿತ್ರರಂಗದಲ್ಲಿಯೂ ಬಹಳಷ್ಟು ಚಿತ್ರಗಳಲ್ಲಿ ಅಭಿನಯಿಸಿ, ಖ್ಯಾತಿಯನ್ನು ಪಡೆದಿದ್ದಾರೆ. ಇವರು ಬೆಂಗಳೂರು ಮಹಾನಗರ ಸಾರಿಗೆಯಲ್ಲಿ ನಿರ್ವಾಹಕರಾಗಿದ್ದುಕೊಂಡು ನಾಟಕಗಳಲ್ಲಿ ಅಭಿನಯಿಸಲು ಪ್ರಾರಂಭಿಸಿದರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಕನ್ನಡದಲ್ಲಿ ಮಹಿಳಾ ವಿಮಾಂಸೆ ಸಾಹಿತ್ಯದ ಸಾವಿರದೈನೂರು ವರ್ಷಗಳ ಕನ್ನಡ ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೆ ೨೦ನೆಯ ಶತಮಾನಕ್ಕೆ ಕಾಲಿರಿಸುವವರೆಗೆ ಮಹಿಳೆಯರೇ ರಚಿಸಿದ ಸಾಹಿತ್ಯ, ಮಹಿಳಾ ಸಾಹಿತ್ಯವೆಂಬ ಹೆಸರಿನಲ್ಲಿ ಗುರುತಿಸಬಹುದಾದಂಥದ್ದು ಹೆಚ್ಚು ಕಂಡುಬರುವುದಿಲ್ಲ. ಸ್ತ್ರೀಯರು ವಿದ್ಯೆಯಿಂದ ವಂಚಿತರಾದದ್ದು, ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗುವ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗದೇ ಹೋದದ್ದು, ಸ್ವಾತಂತ್ರ್ಯವಿರದ ಅವಲಂಬನೆಯ ಜೀವನವೇ ಪ್ರಧಾನವಾದದ್ದು - ಇಂಥ ಅನೇಕ ಕಾರಣಗಳಿಂದಾಗಿ ಮಹಿಳೆ ಕನ್ನಡ ಸಾಹಿತ್ಯದ ಮುಖ್ಯವಾಹಿನಿಯಲ್ಲಿ ಬಹುಕಾಲದವರೆಗೆ ಅನನ್ಯತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳಿರಬಹುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
"ಶ್ರೀ ರಾಮಾಯಣ ದರ್ಶನಂ" ವು ಮಹಾಕಾವ್ಯವಾದ ರಾಮಾಯಣವನ್ನು ಆಧರಿಸಿ ಕುವೆಂಪು ರವರು ರಚಿಸಿದ ಆಧುನಿಕ ಕನ್ನಡ ಸಾಹಿತ್ಯದ ಮೇರು ಕೃತಿಯಾಗಿದ್ದು ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ೧೯೬೮ ರಲ್ಲಿ 'ಜ್ಞಾನಪೀಠ ಪ್ರಶಸ್ತಿ'ಯನ್ನು ಕುವೆಂಪುರವರಿಗೆ ತಂದೊದಗಿಸಿದೆ. ಆಧುನಿಕ ಕನ್ನಡ ಸಾಹಿತ್ಯದ ಮಹೋನ್ನತ ಕೃತಿ. ಮಹಾಕಾವ್ಯಗಳ ರಚನೆಯ ಯುಗ ಮುಗಿದೇ ಹೋಯಿತು ಎನ್ನುವಾಗಲೇ ಸೃಷ್ಟಿಯಾದ ಆಧುನಿಕ ಮಹಾಕಾವ್ಯ.
ಉದಯ ಟಿವಿ ಪ್ರಸಾರ ಮಾಡುವ ಕಾರ್ಯಕ್ರಮಗಳ ಪಟ್ಟಿ
ಉದಯ ಟಿವಿ ಸನ್ ಟಿವಿ ನೆಟ್ವರ್ಕ್ನ ಪ್ರಾದೇಶಿಕ ಕನ್ನಡ ಮನೋರಂಜನಾ ದೂರದರ್ಶನ ವಾಹಿನಿ ಆಗಿದೆ. ಇದು ಭಾರತದ ಮೊದಲ ಕನ್ನಡ ಸಾಮಾನ್ಯ ಮನರಂಜನಾ ವಾಹಿನಿ ಕೂಡ ಆಗಿದೆ. ಉದಯ ಟಿವಿಯಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ಪಟ್ಟಿ ಈ ಕೆಳಗಿನಂತೆ ಇದೆ.
ಭಾರತದ ಕರ್ನಾಟಕ ರಾಜ್ಯದ ಪ್ರಸ್ತುತ ಬಾಗಲಕೋಟೆ ಜಿಲ್ಲೆಯಲ್ಲಿನ ಮಲಪ್ರಭಾ ನದಿ ತೀರದಲ್ಲಿ, ೫ ರಿಂದ ೮ನೇ ಶತಮಾನಗಳಲ್ಲಿ ಅಸ್ತಿತ್ವದಲ್ಲಿದ್ದ ಚಾಲುಕ್ಯರ ಆಡಳಿತಾವಧಿಯಲ್ಲಿ ಬದಾಮಿ ಚಾಲುಕ್ಯರ ವಾಸ್ತುಶಿಲ್ಪ ಎಂಬ ದೇಗುಲ ಕಟ್ಟಡ ವಿನ್ಯಾಸ ವಿಕಸನಗೊಂಡಿತು. ಈ ವಾಸ್ತು ಪ್ರಕಾರವನ್ನು ವೆಸರ ಶೈಲಿ ಮತ್ತು ಚಾಲುಕ್ಯ ಶೈಲಿ ಎಂದಾಗಿಯೂ ಕರೆಯಲಾಗುತ್ತದೆ. ಅದಾಗ್ಯೂ ಈ ಪದವು ೧೧ ಮತ್ತು ೧೨ ನೇ ಶತಮಾನಗಳ ನಂತರದ ಪಾಶ್ಚಾತ್ಯ ಚಾಲುಕ್ಯ ವಾಸ್ತುಶಿಲ್ಪವನ್ನೂ ಒಳಗೊಂಡಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಮಧ್ಯ ಏಷ್ಯಾದಿಂದ(ಮಂಗೋಲಿಯ ಸಾಮ್ರಾಜ್ಯದ ಉಜಬೇಕಿಸ್ತಾನದಿಂದ) ಬಂದ ಮುಸ್ಲಿಂಜಯಶಾಲಿ, ಜಹೀರ್ ಉದ್ -ದಿನ್ ಮಹಮ್ಮದ್ ಬಾಬರ್ (February 23 [O.S. February 14] 1483 — January 5 [O.S. December 26, 1530] 1531) ಹಲವಾರು ಸತತ ಸೋಲಿನಿಂದ,ಎದೆಗುಂದದೆ ಅಂತಿಮವಾಗಿ ಭಾರತದಲ್ಲಿ ಮುಘಲ್ ಸಾಮ್ರಾಜ್ಯ ಸ್ಥಾಪಿಸಿದನು .https://www.britannica.com/biography/Babur ತನ್ನ ತಂದೆಯ ಮೂಲಕ ತೈಮೂರುವಂಶದ ನೇರಸ್ಥಾನಾಗಿ, ಗೆನ್ಗೀಸ್ ಖಾನ್ ನ ವಂಶಸ್ಥನಾದದ್ದು, ತಾಯಿಯ ಮೂಲಕ. ಬಾಬರ್ ತನ್ನ ವಂಶ ಪರಂಪರೆಯನ್ನು ಟಿಮುರಿಡ್ ಮತ್ತು ಚಾಘತಯ್ -ಟರ್ಕಿಕ್ ಎಂದು ಗುರುತಿಸಿಕೊಂಡಿದ್ದು,ತನ್ನ ಹುಟ್ಟು,ವಾತಾವರಣ, ತರಭೇತಿ ಮತ್ತು ಸಂಸ್ಕೃತಿಗಳು ಪೆರ್ಸಿಯನ್ ಸಂಸ್ಕೃತಿ ಯಿಂದ ಬಂದವುಗಳೆಂದು,ಆದುದರಿಂದ ತನ್ನ ವಂಶದವರಿಂದ ಬಂದ ಇವುಗಳನ್ನು ತನ್ನ ಜವಾಬ್ದಾರಿಯಿಂದ ಪೋಷಿಸಬೇಕೆಂದು, ಪೆರ್ಸಿಯನ್ ಸಂಸ್ಕೃತಿಯ ಪ್ರಭಾವ ವನ್ನು ಭಾರತದ ಉಪಖಂಡ ದಲ್ಲಿ ವಿಸ್ತರಿಸಿ, ಬುದ್ಧಿವಂತಿಕೆಯ ಸಾಹಿತ್ಯ, ಕಲೆ, ಮತ್ತು ಚಾರಿತ್ರಿಕ ಫಲಿತಾಂಶದ ಮೂಲಕ ಪರಿಚಯಿಸಲು ಉದ್ಯುಕ್ತನಾದನು.
ಭಾಷಾಂತರ ಎಂದರೆ ಒಂದು ಭಾಷೆಯಲ್ಲಿನ ಮಾತು ಅಥವಾ ಬರವಣಿಗೆಯನ್ನು ಇನ್ನೊಂದು ಭಾಷೆಯಲ್ಲಿ ಸಮಾನ ಅರ್ಥ ನೀಡುವಂತೆ ಪರಿವರ್ತಿಸುವ ಒಂದು ಪ್ರಕ್ರಿಯೆ. ಕನ್ನಡದಲ್ಲಿ ಇದಕ್ಕೆ ಸಂವಾದಿಯಾದ ಇತರ ಪದಗಳು: ಅನುವಾದ, ತರ್ಜುಮೆ, ಕನ್ನಡೀಕರಿಸು (ಬೇರೆ ಭಾಷೆಗಳಿಂದ ಕನ್ನಡಕ್ಕೆ ಭಾಷಾಂತರಿಸುವಾಗ), ಮರುಬರವಣಿಗೆ, ರೂಪಾಂತರ, ಅಳವಡಿಕೆ ಇತ್ಯಾದಿ. ಭಾಷೆಗಳು ಆರಂಭವಾದಾಗಿನಿಂದ ಭಾಷಾಂತರವು ಆರಂಭಗೊಂಡಿದೆ.
ಶ್ರೀ ಹಳೆ ಮಾರಿಯಮ್ಮ ದೇವಸ್ಥಾನ, ಕಾಪು
೧೭ನೇ ಶತಮಾನದಲ್ಲಿ ತುಳುನಾಡಿನಲ್ಲಿ ಮಾರಿ ದೇವಿಯ ಭಕ್ತಿ ಪ್ರಾರಂಭವಾಯಿತು. ಕೆಳದಿ ರಾಜಮನೆತನದ ಪ್ರಮುಖ ಆಡಳಿತಗಾರರಲ್ಲಿ ಒಬ್ಬರಾದ ಬಸಪ್ಪ ನಾಯಕ ಅವರು ೧೭೪೩ ರಲ್ಲಿ ಕಾಪು ಕಡಲತೀರದಲ್ಲಿ ಮಹೋರಗಧಾ ಕೋಟೆಯನ್ನು ನಿರ್ಮಿಸಿದರು. ಅವರು ತಮ್ಮ ಮಿಲಿಟರಿ (ದಂಡು) ಆಶ್ರಯಕ್ಕಾಗಿ ಮಲ್ಲಾರ್ನಲ್ಲಿ ಕೋಟೆಯನ್ನು ನಿರ್ಮಿಸಿದರು.
ಏಕಾದಶ ಈ ಸಂಸ್ಕೃತ ಪದದ ಅರ್ಥ ಹನ್ನೊಂದು(೧೧).ಹಿಂದೂ ಪಂಚಾಂಗದ ೧೨ ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ.ಒಂದು ಮಾಸದಲ್ಲಿ ಎರಡು ಏಕಾದಶಿಗಳಿರುತ್ತವೆ.ಈ ದಿನದಂದು ಯಾವ ಆಹಾರವನ್ನೂ ಸೇವಿಸದೆ,ಉಪವಾಸ ಮಾಡುವ ಸಂಪ್ರದಾಯವಿದೆ.ಈ ದಿನದಂದು ಕೆಲವರು ಅನ್ನವನ್ನು ಮಾತ್ರ ತ್ಯಜಿಸಿ ಉಪವಾಸ ಆಚರಿಸಿದರೆ,ಮತ್ತೆ ಕೆಲವರು ಹನಿ ನೀರನ್ನೂ ಕುಡಿಯದೆ,ನಿರಾಹಾರ ವ್ರತವನ್ನು ಆಚರಿಸುತ್ತಾರೆ.ಏಕಾದಶಿಯ ದಿನ ಉಪವಾಸವಿದ್ದು,ಮಾರನೆಯ ದಿನ ಅಂದರೆ ದ್ವಾದಶಿಯಂದು ಬೆಳಿಗ್ಗೆ ೯ ಘಂಟೆಯೊಳಗಾಗಿ ಪಾರಣೆ(ಊಟ)ಮಾಡುವ ಸಂಪ್ರದಾಯವಿದೆ. ಕೆಲವರು ಏಕಾದಶಿಯಂದು ಮೌನ ವ್ರತ ಸಹ ಆಚರಿಸುತ್ತಾರೆ. ವೈಕುಂಠ ಏಕಾದಶಿ ಏಕಾದಶಿಗಳಲ್ಲಿ ವಿಶೇಷ ದಿನ.ಚಾಂದ್ರಮಾನ ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿಯೇ ಈ ವಿಶೇಷ ದಿನ.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.(ಷಟ್ಪದಿಯ ಬ್ರಹ್ಮ ಎಂದೇ ಪ್ರಸಿದ್ಧರಾಗಿದ್ದಾರೆ) ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ ಧರ್ಮದ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ.