The most-visited ಕನ್ನಡ Wikipedia articles, updated daily. Learn more...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಐಹೊಳೆ ಪ್ರಶಸ್ತಿ ಎಂದೂ ಕರೆಯಲ್ಪಡುವ ಐಹೊಳೆ ಶಾಸನವು ಹತ್ತೊಂಬತ್ತು ಸಾಲಿನ ಸಂಸ್ಕೃತ ಶಾಸನವಾಗಿದ್ದು, ಇದು ಭಾರತದ ಕರ್ನಾಟಕದ ಐಹೊಳೆಯಲ್ಲಿರುವ ಮೇಗುಟಿ ಜೈನ ದೇವಾಲಯದಲ್ಲಿ ಕನ್ನಡ ಲಿಪಿಯಲ್ಲಿದೆ. ೬೩೪-೬೩೫ CE ದಿನಾಂಕದ ಒಂದು ಸ್ತೋತ್ರ, ಇದನ್ನು ಜೈನ ಕವಿ ರವಿಕೀರ್ತಿ ಬಾದಾಮಿ ಚಾಲುಕ್ಯ ರಾಜವಂಶದ ಅವನ ಪೋಷಕ ರಾಜ ಪುಲಕೇಶಿನ್ ಸತ್ಯಾಶ್ರಯ ( ಪುಲಕೇಶಿನ್ II ) ಗೌರವಾರ್ಥವಾಗಿ ರಚಿಸಿದ್ದಾನೆ. ಶಾಸನವು ಭಾಗಶಃ ಹಾನಿಗೊಳಗಾಗಿದೆ ಮತ್ತು ಭ್ರಷ್ಟಗೊಂಡಿದೆ - ಅದರ ಕೊನೆಯ ಎರಡು ಸಾಲುಗಳನ್ನು ನಂತರದ ದಿನಾಂಕದಲ್ಲಿ ಸೇರಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
2014 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ಯೋಗದ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ ಯೋಗವು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ತಮ್ಮ ಯುಎನ್ ಭಾಷಣದಲ್ಲಿ ಜೂನ್ 21 ರ ದಿನಾಂಕವನ್ನು ಸೂಚಿಸಿದ್ದರು. ಏಕೆಂದರೆ ಇದು ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾಗಿದೆ ಮತ್ತು ಪ್ರಪಂಚದ ಅನೇಕ ಭಾಗಗಳಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹಂಚಿಕೊಳ್ಳುತ್ತದೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ಕನ್ನಡದಲ್ಲಿ ಮಹಿಳಾ ವಿಮಾಂಸೆ ಸಾಹಿತ್ಯದ ಸಾವಿರದೈನೂರು ವರ್ಷಗಳ ಕನ್ನಡ ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೆ ೨೦ನೆಯ ಶತಮಾನಕ್ಕೆ ಕಾಲಿರಿಸುವವರೆಗೆ ಮಹಿಳೆಯರೇ ರಚಿಸಿದ ಸಾಹಿತ್ಯ, ಮಹಿಳಾ ಸಾಹಿತ್ಯವೆಂಬ ಹೆಸರಿನಲ್ಲಿ ಗುರುತಿಸಬಹುದಾದಂಥದ್ದು ಹೆಚ್ಚು ಕಂಡುಬರುವುದಿಲ್ಲ. ಸ್ತ್ರೀಯರು ವಿದ್ಯೆಯಿಂದ ವಂಚಿತರಾದದ್ದು, ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗುವ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗದೇ ಹೋದದ್ದು, ಸ್ವಾತಂತ್ರ್ಯವಿರದ ಅವಲಂಬನೆಯ ಜೀವನವೇ ಪ್ರಧಾನವಾದದ್ದು - ಇಂಥ ಅನೇಕ ಕಾರಣಗಳಿಂದಾಗಿ ಮಹಿಳೆ ಕನ್ನಡ ಸಾಹಿತ್ಯದ ಮುಖ್ಯವಾಹಿನಿಯಲ್ಲಿ ಬಹುಕಾಲದವರೆಗೆ ಅನನ್ಯತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳಿರಬಹುದು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ದುರ್ಗದ ಹುಲಿ ಮದಕರಿ ನಾಯಕ, ಭಾರತ ದೇಶದಲ್ಲಿದ್ದ ಹಲವು ಸಂಸ್ಥಾನಗಳಲ್ಲಿ ಒಂದಾದ ಚಿತ್ರದುರ್ಗದ ಕೊನೆಯ ಆರಸನಾಗಿದ್ದ. ಹೈದರ್ ಅಲಿಯ ಮೈಸೂರಿನ ಸೇನೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ನಾಯಕನನ್ನು ಮಾತುಕತೆಗೆಂದು ರಾಜಿಸಂಧಾನವೆಂದು ಕರೆಸಿ ಮೋಸದಿಂದ ಹೈದರ್ ಅಲಿ ಬಂಧಿಸಿ ಶ್ರೀರಂಗಪಟ್ಟಣದ ಸೆರೆಮನೆಯಲ್ಲಿಟ್ಟು ಮತಾಂತರವಾದರೆ ರಾಜ್ಯವನ್ನು ವಾಪಸ್ಸು ನೀಡಿ ಬಿಡುಗಡೆ ಮಾಡುವುದಾಗಿ ಹೇಳಲು ಮದಕರಿ ಜೀವ ನೀಡುತ್ತಾನೆ ಹೊರತು ಧರ್ಮದ್ರೋಹ ಮಾಡುವುದಿಲ್ಲ ಎಂದು ಕೆಚ್ಚೆದೆಯಿಂದ ಹೇಳುತ್ತಾನೆ. ನಂತರ ಹೈದರ್ ಅಲಿಯ ಪುತ್ರ ಟಿಪ್ಪುಸುಲ್ತಾನ್ ಮೈಸೂರಿನ ಮತ್ತು ಚಿತ್ರದುರ್ಗದ ಬೇಡರ ಪಡೆಗಳು ಒಂದಾಗಿ ದಾಳಿ ಮಾಡಬಹುದೆಂಬ ಹೆದರಿ ಸೈನಿಕ ದಂಗೆಯಾದರೆ ನಮಗೆ ಸೋಲು ಖಚಿತವೆಂದು ಭಾವಿಸಿ ಯುದ್ಧಭಯದಿಂದ ಮದಕರಿ ಊಟದಲ್ಲಿ ವಿಷವಿಟ್ಟು ಕೊಲೆ ಮಾಡುತ್ತಾನೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕರ ಪಟ್ಟಿ
ಸರಸಂಘಚಾಲಕ್ ಭಾರತೀಯ ಬಲಪಂಥೀಯ, ಹಿಂದೂ ರಾಷ್ಟ್ರೀಯತಾವಾದಿ ಸಂಘಟನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಅರ್ ಎಸ್ ಎಸ್ ) ಮುಖ್ಯಸ್ಥರು, ಭಾರತೀಯ ಜನತಾ ಪಕ್ಷದ ಇದರ ಮೂಲ ಸಂಘಟನೆ ಎಂದು ವ್ಯಾಪಕವಾಗಿ ಪರಿಗಣಿಸಲಾಗಿದೆ . ಆರೆಸ್ಸೆಸ್ ಸಂಘ ಪರಿವಾರದಪ್ರಮುಖ ಸಂಘಟನೆಗಳ ಮಾತೃ ಸಂಸ್ಥೆಯಾಗಿದೆ. ಇದು ವಿಶ್ವದ ಅತಿ ದೊಡ್ಡ ಸ್ವಯಂಸೇವಕರುಗಳ ಸಂಸ್ಥೆಯಾಗಿದೆ.
ಸಂಭಾಜಿ (ಶಂಭುರಾಜೆ ಅಥವಾ ಸಂಭಾಜಿ ರಾಜೇ ಶಿವಾಜಿರಾಜೇ ಭೋಸ್ಲೆ) (೧೬೫೭-೧೬೮೯) ಒಬ್ಬ, ಮರಾಠಾ ಸಾಮ್ರಾಜ್ಯದ ಎರಡನೆಯ ಛತ್ರಪತಿ ಅಥವಾ ಅರಸ ಮತ್ತು ಶಿವಾಜಿಯ ಮೂರನೆಯ ಪುತ್ರ. ಆ ಸಮಯದಲ್ಲಿ, ಅವರು ಮರಾಠರ ಶತ್ರುಗಳಾದ, ಮುಘಲ್ ಚಕ್ರವರ್ತಿ ಔರಂಗಜೇಬ್, ಬಿಜಾಪುರ ಸುಲ್ತಾನರ ಅತ್ಯಂತ ಶಕ್ತಿಶಾಲಿ ಆಳ್ವಿಕೆಯನ್ನು ಅಂತ್ಯಗೊಳಿಸಲು ಪ್ರಮುಖ ಪಾತ್ರ ವಹಿಸಿದರು. ಸಂಭಾಜಿ ಅವರು ಧೈರ್ಯಕ್ಕಾಗಿ ಪ್ರಸಿದ್ಧರಾಗಿದ್ದರು.
"ಶ್ರೀ ರಾಮಾಯಣ ದರ್ಶನಂ" ವು ಮಹಾಕಾವ್ಯವಾದ ರಾಮಾಯಣವನ್ನು ಆಧರಿಸಿ ಕುವೆಂಪು ರವರು ರಚಿಸಿದ ಆಧುನಿಕ ಕನ್ನಡ ಸಾಹಿತ್ಯದ ಮೇರು ಕೃತಿಯಾಗಿದ್ದು ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ೧೯೬೮ ರಲ್ಲಿ 'ಜ್ಞಾನಪೀಠ ಪ್ರಶಸ್ತಿ'ಯನ್ನು ಕುವೆಂಪುರವರಿಗೆ ತಂದೊದಗಿಸಿದೆ. ಆಧುನಿಕ ಕನ್ನಡ ಸಾಹಿತ್ಯದ ಮಹೋನ್ನತ ಕೃತಿ. ಮಹಾಕಾವ್ಯಗಳ ರಚನೆಯ ಯುಗ ಮುಗಿದೇ ಹೋಯಿತು ಎನ್ನುವಾಗಲೇ ಸೃಷ್ಟಿಯಾದ ಆಧುನಿಕ ಮಹಾಕಾವ್ಯ.
ಮಡಿವಾಳ ಮಾಚಿದೇವ.. ೧೨ ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತೀಯತೆ, ಮೇಲು -ಕೀಳು ತಾರತಮ್ಯ, ಅಸ್ಪ್ರುಶ್ಯತೆ, ಮೂಢ ನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು, ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು.
ಚಿತ್ರದುರ್ಗವು ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ಬಯಲುಸೀಮೆಯ ಪ್ರದೇಶವಾಗಿದೆ.ಚಿತ್ರದುರ್ಗದವು ಮಧ್ಯೆ ಕರ್ನಾಟಕದ ಜಿಲ್ಲಾ ಕೇಂದ್ರ''.ಚಿತ್ರದುರ್ಗವು ರಾಜಧಾನಿ ಬೆಂಗಳೂರಿನಿಂದ ೨೦೦ ಕಿ.ಮೀ ದೂರದಲ್ಲಿದೆ.ಮೊದಲು ಚಿತ್ರದುರ್ಗವನ್ನು ಚಿತ್ರದುರ್ಗ್,ಚಿತ್ತಾಲ್ ದುರ್ಗ್ ಎಂದು ಕರೆಯಲಾಗುತ್ತಿತ್ತು.ಬ್ರಿಟೀಷರ ಆಳ್ವಿಕೆಯ ಸಮಯದಲ್ಲಿ ಚಿತ್ತಾಲ್ ದುರ್ಗ್ ಎಂದು ಕರೆಯುತ್ತಿದ್ದರು. ಇಲ್ಲಿನ ಪ್ರವಾಸ ಸ್ಥಳಗಳು.ಚಿತ್ರದುರ್ಗದ ಕೋಟೆ, ವಾಣಿ ವಿಲಾಸ ಸಾಗರ ಅಣೆಕಟ್ಟು ಇದನ್ನು ಸ್ಥಳೀಯರು ಮಾರಿ ಕಣಿವೆ ಡ್ಯಾಮ್ ಎಂದು ಕೂಡ ಕರೆಯುತ್ತಾರೆ. ಚಂದ್ರವಳ್ಳಿ ತೋಟ, ಹಿರಿಯೂರು, ಜೋಗಿಮಟ್ಟಿ,ಕಲ್ಲಿನಕೋಟೆ,ಗಾಯತ್ರಿ ಜಲಾಶಯ, ಇತ್ಯಾದಿ..ಚಿತ್ರದುರ್ಗದ ಕೋಟೆಯು ಹದಿನೆಂಟನೇ ಶತಮಾನಕ್ಕೆ ಸೇರಿದೆ.ಈ ಕೋಟೆಯನ್ನು ಕಟ್ಟಿದವರು ಚಿತ್ರದುರ್ಗದ ನಾಯಕರು.ಗ್ರಾನೇಟ್ ಅಥವ ಖನಿಜ ಕಲ್ಲಿನ ಸಹಾಯದಿಂದ ಈ ಕೋಟೆಯನ್ನು ಕಟ್ಟಿದ್ದಾರೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.(ಷಟ್ಪದಿಯ ಬ್ರಹ್ಮ ಎಂದೇ ಪ್ರಸಿದ್ಧರಾಗಿದ್ದಾರೆ) ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ ಧರ್ಮದ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ.
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.