The most-visited ಕನ್ನಡ Wikipedia articles, updated daily. Learn more...
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ದುರ್ಗದ ಹುಲಿ ಮದಕರಿ ನಾಯಕ, ಭಾರತ ದೇಶದಲ್ಲಿದ್ದ ಹಲವು ಸಂಸ್ಥಾನಗಳಲ್ಲಿ ಒಂದಾದ ಚಿತ್ರದುರ್ಗದ ಕೊನೆಯ ಆರಸನಾಗಿದ್ದ. ಹೈದರ್ ಅಲಿಯ ಮೈಸೂರಿನ ಸೇನೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ನಾಯಕನನ್ನು ಮಾತುಕತೆಗೆಂದು ರಾಜಿಸಂಧಾನವೆಂದು ಕರೆಸಿ ಮೋಸದಿಂದ ಹೈದರ್ ಅಲಿ ಬಂಧಿಸಿ ಶ್ರೀರಂಗಪಟ್ಟಣದ ಸೆರೆಮನೆಯಲ್ಲಿಟ್ಟು ಮತಾಂತರವಾದರೆ ರಾಜ್ಯವನ್ನು ವಾಪಸ್ಸು ನೀಡಿ ಬಿಡುಗಡೆ ಮಾಡುವುದಾಗಿ ಹೇಳಲು ಮದಕರಿ ಜೀವ ನೀಡುತ್ತಾನೆ ಹೊರತು ಧರ್ಮದ್ರೋಹ ಮಾಡುವುದಿಲ್ಲ ಎಂದು ಕೆಚ್ಚೆದೆಯಿಂದ ಹೇಳುತ್ತಾನೆ. ನಂತರ ಹೈದರ್ ಅಲಿಯ ಪುತ್ರ ಟಿಪ್ಪುಸುಲ್ತಾನ್ ಮೈಸೂರಿನ ಮತ್ತು ಚಿತ್ರದುರ್ಗದ ಬೇಡರ ಪಡೆಗಳು ಒಂದಾಗಿ ದಾಳಿ ಮಾಡಬಹುದೆಂಬ ಹೆದರಿ ಸೈನಿಕ ದಂಗೆಯಾದರೆ ನಮಗೆ ಸೋಲು ಖಚಿತವೆಂದು ಭಾವಿಸಿ ಯುದ್ಧಭಯದಿಂದ ಮದಕರಿ ಊಟದಲ್ಲಿ ವಿಷವಿಟ್ಟು ಕೊಲೆ ಮಾಡುತ್ತಾನೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕನ್ನಡ ರಂಗಭೂಮಿಯ ಪರಂಪರೆ ಅತಿ ಪ್ರಾಚೀನವಾದದ್ದೆಂಬುದರಲ್ಲಿ ಸಂದೇಹವಿಲ್ಲ. ಕನ್ನಡ ರಂಗಭೂಮಿಯ ಪ್ರಕಾರಗಳಲ್ಲಿ ಗೊಂಬೆಯಾಟ, ತೊಗಲು ಗೊಂಬೆಯಾಟ, ಬಯಲಾಟ ದಶಾವತಾರ ಎಂದು ಕರೆಯುವ ಯಕ್ಷಗಾನದ ಆಟಗಳು (ಅದರ ತೆಂಕು ಬಡಗು ಎಂಬ ಪ್ರಭೇದ), ದೊಡ್ಡಾಟ(ಮೂಡಲಪಾಯ ಎನ್ನುವುದು ಅಧ್ಯಯನಕ್ಕೆ ಇಟ್ಟ ಹೆಸರು), ಘಟ್ಟದಕೋರೆ, ಶನಿಕಥೆ ಆಟ, ಕೃಷ್ಣಪಾರಿಜಾತ ಎನ್ನುವ ದೊಡ್ಡಾಟದ ಪ್ರಕಾರಗಳು ಮತ್ತು ನಾಟಕಗಳು ಪ್ರಮುಖವಾಗಿವೆ. ಪಾರ್ತಿಸುಬ್ಬನ ರಾಮಾಯಣದ ಯಕ್ಷಗಾನದ ಪ್ರಸಂಗಗಳು (ಸೀತಾಪಹಾರ, ವಾಲೀ ವಧಾ, ರಾವಣಾ ವಧಾ) ಸುಮಾರು ೧೬ನೇ ಶತಮಾನದವು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಬೀಸಣಿಗೆಯು ತಮ್ಮನ್ನು ತಂಪಾಗಿಸುವ ಅಥವಾ ದಣಿವಾರಿಸುವ ಉದ್ದೇಶಕ್ಕಾಗಿ ವಾಯುಪ್ರವಾಹವನ್ನು ಪ್ರಚೋದಿಸಲು ಬಳಸಲಾಗುವ ಒಂದು ಸಾಧನ. ಹಿಂದೆ ಮುಂದೆ ಬೀಸಲಾದ ಯಾವುದೇ ಅಗಲವಾದ, ಚಪ್ಪಟೆ ಮೇಲ್ಮೈಯು ಸಣ್ಣ ವಾಯುಪ್ರವಾಹವನ್ನು ಸೃಷ್ಟಿಸುತ್ತದೆ ಮತ್ತು ಹಾಗಾಗಿ ಅದನ್ನು ಒಂದು ಮೂಲಭೂತ ಬೀಸಣಿಗೆ ಎಂದು ಪರಿಗಣಿಸಬಹುದು. ಸಾಮಾನ್ಯವಾಗಿ, ಉದ್ದೇಶ-ನಿರ್ಮಿತ ಕೈಯಲ್ಲಿ ಹಿಡಿಯಬಹುದಾದ ಬೀಸಣಿಗೆಗಳು ವೃತ್ತದ ಖಂಡದಂತಹ ಆಕಾರ ಹೊಂದಿರುತ್ತವೆ ಮತ್ತು ತೆಳು ವಸ್ತುವಿನಿಂದ (ಕಾಗದ ಅಥವಾ ಗರಿಗಳು) ನಿರ್ಮಿತವಾಗಿರುತ್ತವೆ ಮತ್ತು ಇವನ್ನು ಪಟ್ಟಿಗಳ ಮೇಲೆ ಕೂರಿಸಲಾಗಿರುತ್ತದೆ ಮತ್ತು ಒಂದು ತಿರುಗುಗೂಟದ ಸುತ್ತ ತಿರುಗುತ್ತವೆ ಮತ್ತು ಹಾಗಾಗಿ ಬಳಕೆಯಲ್ಲಿ ಇಲ್ಲದಿದ್ದಾಗ ಇದನ್ನು ಮುಚ್ಚಬಹುದು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಭಾರತದ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಶೀಲ ಮಾರುಕಟ್ಟೆ ಅರ್ಥವ್ಯವಸ್ಥೆ ಎಂದು ವಿವರಿಸಲಾಗಿದೆ. ಪಿ.ಪಿ.ಪಿ.ವುಳ್ಳ (ಕೊಳ್ಳುವ ಶಕ್ತಿಯ ಸಾಮ್ಯತೆ) ಜಿ.ಡಿ.ಪಿ ಪ್ರಕಾರ ಭಾರತ ವಿಶ್ವದಲ್ಲೇ ಮೂರನೆಯ ಸ್ಥಾನದಲ್ಲಿದೆ ಮತ್ತು ಅಮೇರಿಕನ್ ಡಾಲರಿನಲ್ಲಿನ ಒಟ್ಟೂ ದೇಶಿಯ ಉತ್ಪನ್ನ(ಜಿ.ಡಿ.ಪಿ) ಪ್ರಕಾರ $೬೯೧.೮೭೬ ಕೋಟಿ ಹೊಂದಿ ವಿಶ್ವದಲ್ಲೇ ಐದನೆಯ ಸ್ಥಾನದಲ್ಲಿದೆ. ಐಎಂಎಫ್ ಪ್ರಕಾರ, ತಲಾವಾರು ಆದಾಯದ ಆಧಾರದಲ್ಲಿ, ೨೦೧೮ರಲ್ಲಿ ಭಾರತವು ಜಿಡಿಪಿ ಪ್ರಕಾರ ೧೩೯ನೇ (ನಾಮಮಾತ್ರದ) ಮತ್ತು ಜಿಡಿಪಿ ಪ್ರಕಾರ ೧೧೮ನೇ (ಪಿಪಿಪಿ) ಸ್ಥಾನ ಹೊಂದಿತ್ತು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಸನಾತನಿ ಕೆಲವೊಮ್ಮೆ ಸಾಂಪ್ರದಾಯಿಕ ಹಿಂದೂ ಧರ್ಮ ಎಂದು ಕರೆಯಲ್ಪಡುವ ಧರ್ಮವನ್ನು ಅವಲಂಬಿಸುವ ಪಂಥಗಳನ್ನು ವಿವರಿಸಲು ಹಿಂದೂ ಧರ್ಮದಲ್ಲಿ ಬಳಸಲಾಗುವ ಒಂದು ಪದ. ಈ ಪದವನ್ನು ಗಾಂಧೀಜಿ ೧೯೨೧ರಲ್ಲಿ ಜನಪ್ರಿಯಗೊಳಿಸಿದರು. ಹಲವುವೇಳೆ ನಿರ್ದಿಷ್ಟ ಧರ್ಮಗ್ರಂಥಗಳ ಮೂಲಭೂತವಾದಿ ವ್ಯಾಖ್ಯಾನಗಳನ್ನು ಆಧರಿಸಿದ ಈ ಹಿಂದೆ ಸುದೀರ್ಘ ಸ್ಥಾಪಿತವಾದ ಸಮಾಜ-ಧಾರ್ಮಿಕ ವ್ಯವಸ್ಥೆಗಳನ್ನು ತಿರಸ್ಕರಿಸುವ ಅಥವಾ ಸುಧಾರಕ ಸಂತರ ನೇತೃತ್ವದ ಹಿಂದೂ ಧರ್ಮದ ಸುಧಾರಣಾವಾದಿ ಪಂಥಗಳಿಗೆ ವ್ಯತಿರಿಕ್ತವಾಗಿ ಸನಾತನಿ ಪದವನ್ನು ಬಳಸಲಾಗುತ್ತದೆ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಕನ್ನಡದಲ್ಲಿ ಮಹಿಳಾ ವಿಮಾಂಸೆ ಸಾಹಿತ್ಯದ ಸಾವಿರದೈನೂರು ವರ್ಷಗಳ ಕನ್ನಡ ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೆ ೨೦ನೆಯ ಶತಮಾನಕ್ಕೆ ಕಾಲಿರಿಸುವವರೆಗೆ ಮಹಿಳೆಯರೇ ರಚಿಸಿದ ಸಾಹಿತ್ಯ, ಮಹಿಳಾ ಸಾಹಿತ್ಯವೆಂಬ ಹೆಸರಿನಲ್ಲಿ ಗುರುತಿಸಬಹುದಾದಂಥದ್ದು ಹೆಚ್ಚು ಕಂಡುಬರುವುದಿಲ್ಲ. ಸ್ತ್ರೀಯರು ವಿದ್ಯೆಯಿಂದ ವಂಚಿತರಾದದ್ದು, ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗುವ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗದೇ ಹೋದದ್ದು, ಸ್ವಾತಂತ್ರ್ಯವಿರದ ಅವಲಂಬನೆಯ ಜೀವನವೇ ಪ್ರಧಾನವಾದದ್ದು - ಇಂಥ ಅನೇಕ ಕಾರಣಗಳಿಂದಾಗಿ ಮಹಿಳೆ ಕನ್ನಡ ಸಾಹಿತ್ಯದ ಮುಖ್ಯವಾಹಿನಿಯಲ್ಲಿ ಬಹುಕಾಲದವರೆಗೆ ಅನನ್ಯತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳಿರಬಹುದು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಪೆರಿಯಾರ್ ರಾಮಸ್ವಾಮಿ (ಸೆಪ್ಟೆಂಬರ್ ೧೭, ೧೮೭೯–ಡಿಸೆಂಬರ್ ೨೪, ೧೯೭೩) - ಇ.ವಿ.ಆರ್, ಇ.ವಿ. ರಾಮಸ್ವಾಮಿ ನಾಯ್ಕರ್, ತಂತೈ ಪೆರಿಯಾರ್, ಅಥವಾ ಪೆರಿಯಾರ್ ಎಂದು ಹಲವಾರು ಹೆಸರುಗಳಿಂದ ಪ್ರಖ್ಯಾತರಾಗಿದ್ದ "ಪೆರಿಯಾರ್ ರಾಮಸ್ವಾಮಿ" ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂನ ಸ್ಥಾಪಕ ಮತ್ತು "ತಮಿಳು ಸ್ವಾಭಿಮಾನ ಚಳುವಳಿ" ಯ ನಾಯಕರಾಗಿದ್ದರಲ್ಲದೇ, ಸ್ವಾತಂತ್ರ ಹೋರಾಟಗಾರರಾಗಿದ್ದರೂ ನಂತರ ಬ್ರಿಟಿಷರ ವಸಾಹತು ಆಡಳಿತವನ್ನು ಒಪ್ಪಿಕೊಂಡಿದ್ದರು. ತಮಿಳು ಭಾಷೆಯಲ್ಲಿ 'ಪೆರಿಯಾರ್' ಅಂದ್ರೆ ಗೌರವಾನ್ವಿತ, ಅಥವಾ ದೊಡ್ಡವರು ಎಂಬರ್ಥವಿದೆ.
ಅದಾನಿ ಎಂಟರ್ಪ್ರೈಸಸ್ ಲಿಮಿಟೆಡ್ ಭಾರತೀಯ ಬಹುರಾಷ್ಟ್ರೀಯ ಸಾರ್ವಜನಿಕವಾಗಿ ಪಟ್ಟಿ ಮಾಡಲಾದ ಹೋಲ್ಡಿಂಗ್ ಕಂಪನಿ ಮತ್ತು ಅದಾನಿ ಗ್ರೂಪ್ನ ಒಂದು ಭಾಗವಾಗಿದೆ. ಇದು ಅಹಮದಾಬಾದ್ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ ಮತ್ತು ಪ್ರಾಥಮಿಕವಾಗಿ ಕಲ್ಲಿದ್ದಲು ಮತ್ತು ಕಬ್ಬಿಣದ ಅದಿರಿನ ಗಣಿಗಾರಿಕೆ ಮತ್ತು ವ್ಯಾಪಾರದಲ್ಲಿ ತೊಡಗಿಸಿಕೊಂಡಿದೆ. ಅದರ ವಿವಿಧ ಅಂಗಸಂಸ್ಥೆಗಳ ಮೂಲಕ, ಇದು ವಿಮಾನ ನಿಲ್ದಾಣ ಕಾರ್ಯಾಚರಣೆಗಳು, ಖಾದ್ಯ ತೈಲಗಳು, ರಸ್ತೆ, ರೈಲು ಮತ್ತು ನೀರಿನ ಮೂಲಸೌಕರ್ಯ, ಡೇಟಾ ಕೇಂದ್ರಗಳು, ಸೌರ ಉತ್ಪಾದನೆ, ಇತ್ಯಾದಿಗಳಲ್ಲಿ ವ್ಯಾಪಾರ ಆಸಕ್ತಿಗಳನ್ನು ಹೊಂದಿದೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ವಿಕಿಪೀಡಿಯವು (ಇಂಗ್ಲಿಷ್: Wikipedia ) ಒಂದು ಅಂತರಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಯ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಭೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಅಥವಾ ನೀಟ್ ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜ್ಗಳಲ್ಲಿ ಯಾವುದೇ ಪದವಿ ವೈದ್ಯಕೀಯ ಕೋರ್ಸ್ (ಎಮ್ಬಿಬಿಎಸ್/ ದಂತವೈದ್ಯಕೀಯ ಕೋರ್ಸ್ - ಬಿಡಿಎಸ್) ಅಥವಾ ಸ್ನಾತಕೋತ್ತರ ಕೋರ್ಸ್ (ಎಮ್ಡಿ, ಎಮ್ಎಸ್) ಅಭ್ಯಸಿಸಲು ಬಯಸುವ ವಿದ್ಯಾರ್ಥಿಗಳಿಗೆ ಭಾರತದಲ್ಲಿನ ಒಂದು ಪ್ರವೇಶ ಪರೀಕ್ಷೆ. ಎಮ್ಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ ಗಳಿಗಾಗಿ ನೀಟ್-ಯುಜಿ (ಪದವಿಪೂರ್ವ) ಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಸಿ) ನಡೆಸಿಕೊಡುತ್ತದೆ. ಅಖಿಲ ಭಾರತ ಪ್ರಿ ಮೆಡಿಕಲ್ ಟೆಸ್ಟ್ (ಎಐಪಿಎಮ್ಟಿ) ಮತ್ತು ರಾಜ್ಯಗಳು ಅಥವಾ ಕಾಲೇಜ್ಗಳು ನಡೆಸಿಕೊಡುವ ಎಲ್ಲ ಪ್ರತ್ಯೇಕ ಎಮ್ಬಿಬಿಎಸ್ ಪರೀಕ್ಷೆಗಳ ಬದಲಾಗಿ ನೀಟ್-ಯುಜಿ ೨೦೧೩ರಲ್ಲಿ ಬಂದಿತು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ದ್ರೋಹ ಎಂದರೆ ಒಂದು ಪ್ರಕಲ್ಪಿತ ಒಪ್ಪಂದ, ನಂಬಿಕೆ ಅಥವಾ ವಿಶ್ವಾಸವನ್ನು ಮುರಿಯುವುದು ಅಥವಾ ಉಲ್ಲಂಘಿಸುವುದು. ಇದು ವ್ಯಕ್ತಿಗಳ ನಡುವಿನ ಸಂಬಂಧದೊಳಗೆ, ಸಂಸ್ಥೆಗಳ ನಡುವೆ ಅಥವಾ ವ್ಯಕ್ತಿಗಳು ಹಾಗೂ ಸಂಸ್ಥೆಗಳ ನಡುವೆ ನೈತಿಕ ಮತ್ತು ಮಾನಸಿಕ ಸಂಘರ್ಷವನ್ನು ಉಂಟುಮಾಡುತ್ತದೆ. ಹಲವುವೇಳೆ ದ್ರೋಹವು ಒಂದು ವೈರಿ ಗುಂಪನ್ನು ಬೆಂಬಲಿಸುವ ಕ್ರಿಯೆಯಾಗಿರುತ್ತದೆ, ಅಥವಾ ಒಂದು ಪಕ್ಷವು ಇತರರಿಂದ ಮಾಡುವ, ಪೂರ್ವದಲ್ಲಿ ನಿರ್ಧರಿಸಲಾದ ಅಥವಾ ಭಾವಿಸಿಕೊಂಡ ನಡವಳಿಕೆಗಳಿಂದ ಸಂಪೂರ್ಣ ಬೇರ್ಪಡಿಕೆಯಾಗಿರುತ್ತದೆ.