The most-visited ಕನ್ನಡ Wikipedia articles, updated daily. Learn more...
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವ್ಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.
ಬೂಟಾಟಿಕೆ ಎಂದರೆ ನೈಜ ನಡತೆ ಅಥವಾ ಒಲವುಗಳನ್ನು ಮರೆಮಾಡಿ (ವಿಶೇಷವಾಗಿ ಧಾರ್ಮಿಕ ಹಾಗೂ ನೈತಿಕ ನಂಬಿಕೆಗಳಿಗೆ ಸಂಬಂಧಿಸಿದಂತೆ), ಸದ್ಗುಣ ಅಥವಾ ಒಳ್ಳೆಯತನದ ಹುಸಿ ತೋರಿಕೆಯ ಕೌಶಲ್ಯ; ಹಾಗಾಗಿ ಸಾಮಾನ್ಯ ಅರ್ಥದಲ್ಲಿ ಬೂಟಾಟಿಕೆಯು ಸೋಗು, ಡೋಂಗಿ ಅಥವಾ ಕಪಟವನ್ನು ಒಳಗೊಳ್ಳಬಹುದು. ಬೂಟಾಟಿಕೆಯು ಮತ್ತೊಬ್ಬರನ್ನು ಅದಕ್ಕಾಗಿ ಟೀಕಿಸಿ ಅದೇ ವರ್ತನೆ ಅಥವಾ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ಅಭ್ಯಾಸ. ನೈತಿಕ ಮನಶ್ಶಾಸ್ತ್ರದಲ್ಲಿ, ಇದು ವ್ಯಕ್ತಪಡಿಸಲಾದ ತಮ್ಮ ಸ್ವಂತ ನೈತಿಕ ನಿಯಮಗಳು ಮತ್ತು ತತ್ತ್ವಗಳನ್ನು ಅನುಸರಿಸುವಲ್ಲಿನ ವೈಫಲ್ಯ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಹಿಂದೂ ಧರ್ಮದಲ್ಲಿ, ಯಜ್ಞ ಅಥವಾ ಯಾಗವು ವೈದಿಕ ಕಾಲದಿಂದ ಹುಟ್ಟಿಕೊಂಡಿರುವ ವೈದಿಕ ಮಂತ್ರಗಳ (ಮತ್ತು ಅರ್ಚನೆ, ಪ್ರಾರ್ಥನೆ, ಪ್ರಶಂಸೆ, ಅರ್ಪಣೆ ಮತ್ತು ನೈವೇದ್ಯ, ಬಲಿದಾನ) ಪಠಣವು ಜೊತೆಗೂಡಿರುವ ಅರ್ಪಣೆಗಳ ಒಂದು ಧರ್ಮಾಚರಣೆ. ಯಜ್ಞವು ಅಗ್ನಿಯಲ್ಲಿ ಹವನ ಸಾಮಗ್ರಿಯನ್ನು ಅರ್ಪಿಸುವ ಮತ್ತು ಶುದ್ಧೀಕರಿಸುವ ಒಂದು ಪುರಾತನ ಕ್ರಿಯಾವಿಧಿ. ಯಜ್ಞ ಶಬ್ದದ ಭವ್ಯ ಅರ್ಥವು ಸಂಸ್ಕೃತ ಕ್ರಿಯಾಪದ ಯಜ್ ಇಂದ ವ್ಯುತ್ಪನ್ನವಾಗಿದೆ, ಮತ್ತು ಇದು ಮೂರು ಅರ್ಥಗಳನ್ನು ಹೊಂದಿದೆ - ದೇವಪೂಜನ, ಸೌಗತೀಕರಣ ಹಾಗೂ ದಾನ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.(ಷಟ್ಪದಿಯ ಬ್ರಹ್ಮ ಎಂದೇ ಪ್ರಸಿದ್ಧರಾಗಿದ್ದಾರೆ) ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ ಧರ್ಮದ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ.
ಜೈನ ಧರ್ಮವನ್ನು ಉಪದೇಶಿಸಿದ ಮೊದಲನೆಯ ತೀರ್ಧಂಕರರು ವೃಷಭನಾಥರು. ಇವರಿಗೆ ಸುನಂದ ಮತ್ತು ನಂದಾ ಯೆಂಬ ಇಬ್ಬರು ಪತ್ನಿಯರು.ಇವರಿಂದ ನೂರುಜನ ಗಂಡು ಮಕ್ಕಳೂ ಮತ್ತು ಇಬ್ಬರು ಹೆಣ್ಣು ಮಕ್ಕಳೂ ಜನಿಸಿದರು.ಬಾಹುಬಲಿಯು ಸುನಂದೆಯ ಮಗ.ವೃಷಭನಾಥರಿಗೆ ವೈರಾಗ್ಯ ಉಂಟಾದಾಗ ಮಕ್ಕಳಿಗೆ ರಾಜ್ಯವನ್ನು ಹಂಚಿ ತಪಸ್ಸಿಗೆ ತೆರಳಿದರು. ಸಕಲ ಕರ್ಮಗಳನ್ನು ಜಯಿಸಿ ಕೈವಲ್ಯಜ್ಞಾನ ಪಡೆದು ಜನರಿಗೆ ಮುಕ್ತಿ ಮಾರ್ಗವನ್ನು ಉಪದೇಶಿಸುತ್ತಿದ್ದರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಪತ್ತನಾಜೆ (ತುಳು: ಪತ್ತನಾಜೆ/pattanāje) ಭಾರತದ ತುಳುನಾಡಿನಲ್ಲಿ ಹಬ್ಬದ ಋತುವಿನ ಅಂತ್ಯದ ಒಂದು ದಿನದ ಆಚರಣೆಯಾಗಿದೆ. ತುಳುನಾಡಿನ ಜನರು ಎಲ್ಲಾ ರೀತಿಯ ಹಬ್ಬಗಳಿಗೆ ತಮ್ಮದೇ ಆದ ಧಾರ್ಮಿಕ ಮತ್ತು ಸಾಮಾಜಿಕ ಗಡುವನ್ನು ಹೊಂದಿದ್ದಾರೆ. ಇದು ನಿಗದಿತ ದಿನದ ಆಚರಣೆಯಾಗಿದ್ದು, ಇದು ತುಳುವಿನ ಪ್ರಾದೇಶಿಕ ಕ್ಯಾಲೆಂಡರ್ನಲ್ಲಿ ಬೇಶ( ಬೇಸ) ಎಂದು ಕರೆಯಲ್ಪಡುವ ಎರಡನೇ ಸೌರ ತಿಂಗಳ ಹತ್ತನೇ ದಿನದಂದು, ಸಾಮಾನ್ಯವಾಗಿ ಪ್ರತಿ ವರ್ಷ ಮೇ ೨೪ ಅಥವಾ ೨೫ ರಂದು ಬರುತ್ತದೆ.
ಭಾರತದ ಗಡಿಗಳು ಮತ್ತು ನರೆ ರಾಜ್ಯಗಳು
ಭಾರತವು 1947ರಲ್ಲಿ ಸ್ವತಂತ್ರ ರಾಷ್ಟ್ರವಾದ ನಂತರ ಅದರ ನೆರೆಹೊರೆಯ ಸಾರ್ವಭೌಮ ರಾಷ್ಟ್ರಗಳಾದ ಅಫ್ಘಾನಿಸ್ತಾನ್, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನಗಳೊಂದಿಗೆ ಅಂತರರಾಷ್ಟ್ರೀಯ ಭೂ ಗಡಿಗಳನ್ನು ಹೊಂದಿದೆ. ಕಾಶ್ಮೀರ ವಿವಾದದ ಪರಿಣಾಮ ಪಾಕಿಸ್ತಾನದೊಂದಿಗೆ ಗಡಿ ನಿಯಂತ್ರಣ ನಿಯಂತ್ರಣ (ಎಲ್ಒಸಿ) ರೇಖೆಯನ್ನು ಹೊಂದಿದೆ. ಈ ಎಲ್ಲಾ ಗಡಿ ಮತ್ತು ನಿಯಂತ್ರಣ (ಎಲ್ಒಸಿ) ರೇಖೆಯ ರಕ್ಷಣೆಯ ಹೊಣೆಯನ್ನೂ ಹೊಂದಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಸ್ವಾತಂತ್ರ್ಯ ಪೂರ್ವದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗು ಮಹಾತ್ಮ ಗಾಂಧಿಯವರ ನಡುವೆ ಬ್ರಿಟಿಷ್ ಸರ್ಕಾರದ ಅಸ್ಪೃಶ್ಯರಿಗೆ ಪ್ರತ್ಯೇಕ ಮೀಸಲು ಕ್ಷೇತ್ರಗಳನ್ನು ನೀಡುವ ಕುರಿತು ಉಂಟಾದ ಒಪ್ಪಂದವೇ ಪೂನಾ ಒಪ್ಪಂದ. ಅಸ್ಪೃಷ್ಯರಿಗೆ ಚುನಾವಣಾ ಕ್ಷೇತ್ರಗಳಲ್ಲಿ ಪ್ರತ್ಯೇಕ ಮೀಸಲಾತಿ ಒದಗಿಸದಂತೆ ಗಾಂಧೀಜಿ ಪುಣೆಯ ಜೈಲಿನಲ್ಲಿಯೇ ಉಪವಾಸ ನಡೆಸುತ್ತಿದ್ದರು. ಆಗಿನ ಬ್ರಿಟಿಷ್ ಪ್ರಧಾನ ಮಂತ್ರಿ ರಾಮ್ಸಯ್ ಮೆಕ್ಡೊನಾಲ್ಡ್ ಅಸ್ಪೃಶ್ಯರಿಗೆ ಪ್ರತ್ಯೇಕ ಮೀಸಲು ಚುನಾವಣಾ ಕ್ಷೇತ್ರಗಳ ಕೋರಿಕೆಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಗರಗಸವು (ಕ್ರಕಚ) ಗಡುಸಾದ ಹಲ್ಲುಗಳುಳ್ಳ ಅಂಚಿರುವ ಕಠಿಣ ಅಲಗು, ತಂತಿ, ಅಥವಾ ಸರಪಳಿಯನ್ನು ಹೊಂದಿರುವ ಒಂದು ಉಪಕರಣ. ಇದನ್ನು ವಸ್ತುವನ್ನು ಕತ್ತರಿಸಲು ಬಳಸಲಾಗುತ್ತದೆ, ಬಹಳವೇಳೆ ಕಟ್ಟಿಗೆ ಆದರೆ ಕೆಲವೊಮ್ಮೆ ಲೋಹ ಅಥವಾ ಕಲ್ಲು. ವಸ್ತುವಿಗೆ ಎದುರಾಗಿ ತಗಲುವಂತೆ ಹಲ್ಲುಗಳುಳ್ಳ ಅಂಚನ್ನು ಇರಿಸಿ, ಅದನ್ನು ಮುಂದಕ್ಕೆ ಬಲಯುತವಾಗಿ ಹಾಗೂ ಹಿಂದಿಕ್ಕಿನಲ್ಲಿ ಕಡಿಮೆ ಬಲಯುತವಾಗಿ ಅಥವಾ ನಿಲ್ಲಿಸದಂತೆ ಮುಂದಿಕ್ಕಿನಲ್ಲಿ ಚಲಿಸಿ ಕಾಟನ್ನು ಮಾಡಲಾಗುತ್ತದೆ.
ಕನ್ನಡದಲ್ಲಿ ಮಹಿಳಾ ವಿಮಾಂಸೆ ಸಾಹಿತ್ಯದ ಸಾವಿರದೈನೂರು ವರ್ಷಗಳ ಕನ್ನಡ ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೆ ೨೦ನೆಯ ಶತಮಾನಕ್ಕೆ ಕಾಲಿರಿಸುವವರೆಗೆ ಮಹಿಳೆಯರೇ ರಚಿಸಿದ ಸಾಹಿತ್ಯ, ಮಹಿಳಾ ಸಾಹಿತ್ಯವೆಂಬ ಹೆಸರಿನಲ್ಲಿ ಗುರುತಿಸಬಹುದಾದಂಥದ್ದು ಹೆಚ್ಚು ಕಂಡುಬರುವುದಿಲ್ಲ. ಸ್ತ್ರೀಯರು ವಿದ್ಯೆಯಿಂದ ವಂಚಿತರಾದದ್ದು, ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗುವ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗದೇ ಹೋದದ್ದು, ಸ್ವಾತಂತ್ರ್ಯವಿರದ ಅವಲಂಬನೆಯ ಜೀವನವೇ ಪ್ರಧಾನವಾದದ್ದು - ಇಂಥ ಅನೇಕ ಕಾರಣಗಳಿಂದಾಗಿ ಮಹಿಳೆ ಕನ್ನಡ ಸಾಹಿತ್ಯದ ಮುಖ್ಯವಾಹಿನಿಯಲ್ಲಿ ಬಹುಕಾಲದವರೆಗೆ ಅನನ್ಯತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳಿರಬಹುದು.
ಸಿದ್ಧಾಂತ ಎಂದರೆ ಒಂದು ವಿದ್ಯಮಾನದ ಬಗ್ಗೆ ಆಲೋಚನಾತ್ಮಕ ಮತ್ತು ತರ್ಕಾಧಾರಿತ ಬಗೆಯ ಅಮೂರ್ತ ಅಥವಾ ಸಾಮಾನ್ಯೀಕೃತ ಚಿಂತನೆ, ಅಥವಾ ಅಂತಹ ವಿಚಾರದ ಫಲಿತಾಂಶಗಳು. ಹಲವುವೇಳೆ ಆಲೋಚನಾತ್ಮಕ ಮತ್ತು ತರ್ಕಾಧಾರಿತ ಚಿಂತನೆಯ ಪ್ರಕ್ರಿಯೆಯು ವೀಕ್ಷಣಾತ್ಮಕ ಅಧ್ಯಯನ, ಸಂಶೋಧನೆಯಂತಹ ಪ್ರಕ್ರಿಯೆಗಳೊಂದಿಗೆ ಸಂಬಂಧಿಸಿರುತ್ತದೆ. ಸಿದ್ಧಾಂತಗಳು ವೈಜ್ಞಾನಿಕವಾಗಿರಬಹುದು ಅಥವಾ ವೈಜ್ಞಾನಿಕದಿಂದ ಭಿನ್ನವಿರಬಹುದು (ಅಥವಾ ಸ್ವಲ್ಪಮಟ್ಟಿಗೆ ವೈಜ್ಞಾನಿಕವಿರಬಹುದು).
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ವಿಕಿಪೀಡಿಯವು (ಇಂಗ್ಲಿಷ್: Wikipedia ) ಒಂದು ಅಂತರಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಯ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಭೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಎರಡು ರಾಷ್ಟ್ರಗಳ ಸಿದ್ಧಾಂತವು ಭಾರತೀಯ ಉಪಖಂಡದಲ್ಲಿ ಮುಸ್ಲಿಮರ ಪ್ರಾಥಮಿಕ ಗುರುತಿಸುವಿಕೆ ಮತ್ತು ಏಕೀಕರಿಸುವ ಛೇದವು ಅವರ ಭಾಷೆ ಅಥವಾ ಜನಾಂಗೀಯತೆಗಿಂತ ಅವರ ಧರ್ಮವಾಗಿದೆ, ಆದ್ದರಿಂದ ಭಾರತೀಯ ಹಿಂದೂಗಳು ಮತ್ತು ಮುಸ್ಲಿಮರು ಜನಾಂಗೀಯ ಅಥವಾ ಇತರ ಸಾಮಾನ್ಯತೆಗಳಿಲ್ಲದೆಯೇ ಎರಡು ವಿಭಿನ್ನ ರಾಷ್ಟ್ರಗಳು. ಎರಡು ರಾಷ್ಟ್ರಗಳ ಸಿದ್ಧಾಂತವು ಪಾಕಿಸ್ತಾನದ ಚಳವಳಿಯ ಒಂದು ಸ್ಥಾಪನೆಯ ತತ್ತ್ವವಾಗಿದೆ (ಅಂದರೆ ಪಾಕಿಸ್ತಾನದ ಸಿದ್ಧಾಂತವನ್ನು ದಕ್ಷಿಣ ಏಷ್ಯಾದಲ್ಲಿ ಮುಸ್ಲಿಂ ದೇಶ-ರಾಜ್ಯ ಎಂದು) ಮತ್ತು ೧೯೪೭ ರಲ್ಲಿ ಭಾರತದ ವಿಭಜನೆಯಾಗಿದೆ. ಭಾರತೀಯ ಮುಸ್ಲಿಮರ ರಾಷ್ಟ್ರೀಯತೆಯನ್ನು ವಿವರಿಸುವಲ್ಲಿ ಧರ್ಮವು ನಿರ್ಣಾಯಕ ಅಂಶವಾಗಿದೆ ಎಂಬ ಸಿದ್ಧಾಂತವನ್ನು ಮುಹಮ್ಮದ್ ಅಲಿ ಜಿನ್ನಾ ಅವರು ಕೈಗೊಂಡರು, ಅವರು ಅದನ್ನು ಪಾಕಿಸ್ತಾನ ರಚನೆಗೆ ಮುಸ್ಲಿಮರ ಜಾಗೃತಿ ಎಂದು ಕರೆದರು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಭ್ರಮೆ ಎಂಬುದನ್ನು ಶಬ್ದದ ವಿಶಾಲಾರ್ಥದಲ್ಲಿ ಯಾವುದೇ ಪ್ರಚೋದನೆ ಇಲ್ಲದೇ ಆಗುವ ಅನುಭವ ಎಂದು ಅರ್ಥೈಸಬಹುದು. ನಿಖರವಾಗಿ ವ್ಯಾಖ್ಯಾನ ಮಾಡಬೇಕೆಂದರೆ, "ಭ್ರಮೆ ಎಂದರೆ ಎಚ್ಚರವಾದ ಪ್ರಜ್ಞಾಪೂರ್ವಕ ಸ್ಥಿತಿಯಲ್ಲಿಯೇ ಹೊರಗಿನ ಪ್ರಚೋದನೆಯಿಲ್ಲದೆ ಆಗುವ ಅನುಭವ. ಈ ಅನುಭವವು ಸ್ಫುಟತೆ, ಸಾಕಾರತೆ, ಮತ್ತು ಹೊರಗಿನ ಚಿತ್ತಗೋಚರ ದೇಶ(space-ಸ್ಪೇಸ್)ದಲ್ಲಿ ಸ್ಥಿತವಾಗಿರುವಿಕೆ ಮುಂತಾದ ನಿಜ ಅನುಭವದ ಲಕ್ಷಣಗಳನ್ನು ಹೊಂದಿರುತ್ತವೆ " ಎಂದು ಹೇಳಬಹುದು.