The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಈದ್ ಅಲ್-ಅಧಾ ( ಅರೇಬಿಕ್: عيد الأضحى ʿĪd al-ʾAḍḥā [ˈʕiːd æl ˈʔɑdˤħæː], "ತ್ಯಾಗದ ಹಬ್ಬ") ಅಥವಾ ತ್ಯಾಗದ ಹಬ್ಬವು ಇಸ್ಲಾಂನಲ್ಲಿ ಎರಡನೆಯದು ಮತ್ತು ದೊಡ್ಡದಾದ ರಜಾದಿನಗಳಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬ. (ಇನ್ನೊಂದು ಈದ್ ಅಲ್-ಫಿತರ್ ). ಅಬ್ರಹಾಂ (ಇಬ್ರಾಹಿಂ) ತನ್ನ ಮಗನಾದ ಇಸ್ಮಾಯಿಲ್ (ಇಸ್ಮಾಯಿಲ್) ನನ್ನು ದೇವರ ಆಜ್ಞೆಗೆ ವಿಧೇಯತೆಗಾಗಿ ತ್ಯಾಗಮಾಡಲು ಇಚ್ಛೆಯನ್ನು ವ್ಯಕ್ತಪಡಿಸುತ್ತಾನೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ವೈಭವ್ ಸೂರ್ಯವಂಶಿ (ಜನನ ೨೭ ಮಾರ್ಚ್ ೨೦೧೧) ಒಬ್ಬ ಭಾರತೀಯ ಕ್ರಿಕೆಟಿಗ, ಇವರು ದೇಶೀಯ ಕ್ರಿಕೆಟ್ನಲ್ಲಿ ಬಿಹಾರ ಪರ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಾರೆ. ಎಡಗೈ ಬ್ಯಾಟ್ಸ್ಮನ್ ಆಗಿ, ಅವರು ಜನವರಿ 2024 ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು. ಅವರು ಲಿಸ್ಟ್ ಎ ತಂಡದ ಆರಂಭಿಕ ಆಟಗಾರರಲ್ಲಿ ಅತ್ಯಂತ ಕಿರಿಯರು ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯರು.
ಸಂಶೋಧನೆ ಎಂಬುದನ್ನು ಜ್ಞಾನದ ಸಲುವಾಗಿ ನಡೆಸುವ ಹುಡುಕಾಟ ಎಂದು ವ್ಯಾಖ್ಯಾನಿಸಬಹುದು,ಅಥವಾ ಮುಕ್ತ ಮನಸ್ಸಿನಿಂದ ಯಾವುದೇ ಶಿಸ್ತುಬದ್ದ ಶೋಧನೆ,ತನಿಖೆ ಮೂಲಕ ನವೀನ ಸಂಗತಿಗಳ ಹುಟ್ಟುಹಾಕಿ ಹೊಸ ಅಥವಾ ಅಸ್ತಿತ್ವದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು.ಒಂದು ವೈಜ್ಞಾನಿಕ ಪದ್ದತಿಯಂತೆ ಹೊಸ ಸಿದ್ದಾಂತಗಳ ಅಭಿವೃದ್ಧಿಪಡಿಸುವಿಕೆಯೇ ಸಂಶೋಧನೆಯಾಗಿದೆ. ಮೂಲಭೂತ ಸಂಶೋಧನೆಯ ಪ್ರಾಥಮಿಕ ಉದ್ದೇಶವೆಂದರೆ, (ಅದನ್ನು ಅನ್ವಯಿಕ ಸಂಶೋಧನೆಗೆ ವಿರೋಧವೆನ್ನಲಾಗುತ್ತದೆ.)ಆವಿಷ್ಕಾರಗೊಳಿಸುವಿಕೆ,ವಿವರವಾಗಿ ಅರ್ಥೈಸುವಿಕೆ ಮತ್ತು ಅಭಿವೃದ್ಧಿ ಮೂಲಕ ಮನುಷ್ಯನ ಜ್ಞಾನವನ್ನು ನಿರ್ಧಿಷ್ಟ ಪದ್ದತಿ ಮತ್ತು ಶಿಸ್ತುಗಳಿಗೆ ಅಳವಡಿಸುವುದೇ ಆಗಿದೆ.ನಮ್ಮ ಜಗತ್ತು ಮತ್ತು ಬ್ರಹ್ಮಾಂಡದಲ್ಲಿನ ವೈಜ್ಞಾನಿಕ ಭೌತಿಕ ವಸ್ತುಗಳ ಮೇಲೆ ವಿಸ್ತಾರವಾದ ತಿಳಿವಳಿಕೆ ಪಡೆಯುವುದು. ವೈಜ್ಞಾನಿಕ ಸಂಶೋಧನೆ ಯು ವೈಜ್ಞಾನಿಕ ಪದ್ದತಿಯ ಅಳವಡಿಕೆಯನ್ನು ಅವಲಂಬಿಸಿದೆ.ಈ ಮೂಲಕ ಅದು ಕುತೂಹಲವನ್ನು ಬಡಿದೆಬ್ಬಿಸಿ ಫಲಿತಾಂಶಕ್ಕಾಗಿ ಸಜ್ಜುಗೊಳಿಸುತ್ತದೆ.
ಜಾಕಿ ಚಾನ್, SBS, MBE (ಹುಟ್ಟಿದಾಗ ಇಟ್ಟ ಹೆಸರು ಚಾನ್ ಕಾಂಗ್ ಸ್ಯಾಂಗ್, 陳港生; ಹುಟ್ಟಿದ್ದು 1954ರ ಏಪ್ರಿಲ್ 7ರಂದು) ಓರ್ವ ಹಾಂಗ್ ಕಾಂಗ್ ಮೂಲದ ನಟ, ಚಲನಾ ನೃತ್ಯ ಸಂಯೋಜಕ, ಚಲನಚಿತ್ರೋದ್ಯಮಿ, ಹಾಸ್ಯನಟ, ನಿರ್ಮಾಪಕ, ಕದನ ಕಲೆಯ ಕಲಾವಿದ, ಚಿತ್ರಕಥಾ ಲೇಖಕ, ವಾಣಿಜ್ಯೋದ್ಯಮಿ, ಗಾಯಕ ಮತ್ತು ಸಾಹಸ ಪ್ರದರ್ಶನ ನಿರ್ವಾಹಕನಾಗಿದ್ದಾನೆ. ಆತನ ಚಲನಚಿತ್ರಗಳಲ್ಲಿನ, ಆತನ ದೊಂಬರಾಟದಂಥ ಹೊಡೆದಾಟದ ಶೈಲಿ, ಕಾಲೋಚಿತವಾಗಿ ನಗೆಯುಕ್ಕಿಸುವ ಸಾಮರ್ಥ್ಯ, ಸುಧಾರಿತ ಶಸ್ತ್ರಾಸ್ತ್ರಗಳು ಹಾಗೂ ನಾವೀನ್ಯತೆಯ ಸಾಹಸ ಪ್ರದರ್ಶನಗಳ ಬಳಕೆಗೆ ಆತ ಖ್ಯಾತಿಯನ್ನು ಪಡೆದಿದ್ದಾನೆ. 1970ರ ದಶಕದಿಂದಲೂ ಜಾಕಿ ಚಾನ್ ಅಭಿನಯಿಸುತ್ತಾ ಬಂದಿದ್ದು, ಇದುವರೆಗೂ 100 ಹೆಚ್ಚಿನ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾನೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಗುರುತ್ವಾಕರ್ಷಣದಿಂದ ಒಟ್ಟಾಗಿರುವ ಅನೇಕ ನಕ್ಷತ್ರಗಳು, ಅವುಗಳ ಮಧ್ಯೆ ಇರುವ ವಾಯು, ಧೂಳು ಮತ್ತು ಅಜ್ಞಾತ ಕಪ್ಪು ದ್ರವ್ಯದ (en:Dark Matter) ಬೃಹತ ಗಾತ್ರದ ಸಮೂಹ -ಬ್ರಹ್ಮಾಂಡ; ನಕ್ಷತ್ರಗಳ ಗುಂಪು ಎರಡು ಅಥವಾ ಹೆಚ್ಚು ನಕ್ಷತ್ರಗಳ ಗುಂಪಿಗೆ ನಕ್ಷತ್ರಪುಂಜಗಳು; (ನಕ್ಷತ್ರಕೂಟ:ಉಪಯೋಗದಲ್ಲಿಲ್ಲ - ಜಾತಕ ತಾಳೆ ನೋಡುವಾಗ ಮಾತ್ರಾ ಉಪಯೋಗಿಸುವರು) ಅಥವಾ ತಾರಾಗಣವು ಕೆಲವೇ ನಕ್ಷತ್ರಗಳ ಒಂದು ಗುಂಪು ಎಂದು ಹೆಸರು. ಈ ನಕ್ಷತ್ರಕೂಟಗಳಲ್ಲಿ ಸಾಮಾನ್ಯವಾಗಿ ೧೦ ಮಿಲಿಯನ್ ಇಂದ ೧ ಟ್ರಿಲಿಯನ್ ನಕ್ಷತ್ರಗಳು ಒಂದೇ ಗುರುತ್ವದ ಕೇಂದ್ರಬಿಂದುವಿನ ಸುತ್ತ ಪ್ರದಕ್ಷಣೆ ಮಾಡುತ್ತವೆ. ಸೂರ್ಯ ಮತ್ತು ಸೌರಮಂಡಲ ಇರುವ ನಕ್ಷತ್ರಕೂಟದ ಹೆಸರು ಆಕಾಶಗಂಗೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಭಾಷಾವೈಶಿಷ್ಟ್ಯ ಎಂಬುದು (ಲ್ಯಾಟಿನ್: ಇಡಿಯೋಮಾLatin: idioma, “ವಿಶೇಷ ಗುಣ”, f. ಗ್ರೀಕ್: ἰδίωμα - ಇಡಿಯೋಮಾGreek: [ἰδίωμα - idiōma] Error: {{Lang}}: text has italic markup (help) , “ವಿಶೇಷ ಲಕ್ಷಣ, ವಿಶೇಷ ಪದವಿನ್ಯಾಸ”, f. ಗ್ರೀಕ್: ἴδιος - ಇಡಿಯೋಸ್Greek: [ἴδιος - idios] Error: {{Lang}}: text has italic markup (help) , “ತನಗೇ ಸೇರಿದ”) ಒಂದು ಅಭಿವ್ಯಕ್ತಿ, ಪದ, ಅಥವಾ ನುಡಿಗಟ್ಟು ಆಗಿದ್ದು, ಅದು ಒಂದು ಭಾಷಾಲಂಕಾರಿಕ ಅರ್ಥವನ್ನು ಹೊಂದಿರುತ್ತದೆ ಮತ್ತು ಈ ಭಾಷಾಲಂಕಾರಿಕ ಅರ್ಥವು ಆ ಅಭಿವ್ಯಕ್ತಿಯ ಒಂದು ಸಾಮಾನ್ಯ ಬಳಕೆಗೆ ಸಂಬಂಧಿಸಿದಂತೆ ಗ್ರಹಿಸಲ್ಪಡುತ್ತದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಗ್ರಂಥ ಸಂಪಾದನೆ ಎಂದರೆ ಉಪಲಬ್ಧವಿರುವ ಪ್ರತಿಗಳ ಆಧಾರದ ಮೇಲೆ ಗ್ರಂಥದ ಮೂಲಪಾಠವೇನಿದ್ದಿರಬಹುದೆಂಬುದನ್ನು ಗುರುತಿಸುವ ಹಾಗೂ ಸಮಗ್ರ ಗ್ರಂಥದ ಬಗ್ಗೆ ವಿಮರ್ಶೆಯನ್ನು ನೀಡುವ ಕೆಲಸ (ಟೆಕ್ಸ್ಚುಅಲ್ ಕ್ರಿಟಿಸಿಸóಂ). ಕೈಬರೆಹದಲ್ಲಿ ಉಳಿದಿರುವ ಕೃತಿಗಳ ಸಂಪಾದನೆಯಲ್ಲೇ ಹೆಚ್ಚಿನ ಕ್ಲೇಶಗಳು ಕಂಡುಬರುತ್ತವಾಗಿ ಅವನ್ನೇ ಗಮನದಲ್ಲಿಟ್ಟುಕೊಂಡು ವಿಷವನ್ನಿಲ್ಲಿ ವಿಮರ್ಶಿಸಲಾಗಿದೆ. ಹಿಂದಿನ ಕಾಲದಲ್ಲಿ ಕವಿಗಳು, ಜ್ಞಾನಿಗಳು, ಸಂತರು ತಾವು ಲೋಕಕ್ಕೆ ಹೇಳಬಯಸಿದ ವಿಚಾರಗಳನ್ನು ಭೂರ್ಜಪತ್ರಗಳ ಮೇಲೂ ತಾಳೆಗರಿಗಳ ಮೇಲೂ ಬರೆದಿಡುತ್ತಿದ್ದರು.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಸಿದ್ಧಯ್ಯ ಪುರಾಣಿಕ (ಜೂನ್ ೧೮, ೧೯೧೮ - ಸೆಪ್ಟೆಂಬರ್ ೫, ೧೯೯೪) ಕನ್ನಡ ನಾಡು ಕಂಡ ಶ್ರೇಷ್ಠ ಅಧಿಕಾರಿಗಳು ಮತ್ತು ಸಾಹಿತಿಗಳಲ್ಲಿ ಒಬ್ಬರೆನಿಸಿದ್ದಾರೆ. ಉನ್ನತ ಅಧಿಕಾರಗಳಲ್ಲಿದ್ದು ಕನ್ನಡದಲ್ಲಿ ಶ್ರೇಷ್ಠ ಕೆಲಸ ಮಾಡಿದ ಮಾಸ್ತಿ ವೆಂಕಟೇಶ ಅಯ್ಯಂಗಾರ್, ನವರತ್ನ ರಾಮರಾವ್ ಅಂಥಹ ಮಹನೀಯರ ಸಾಲಿನಲ್ಲಿ ನಿರಂತರ ರಾರಾಜಿಸುವವರು ‘ವಚನೋದ್ಯಾನದ ಅನುಭಾವಿ’ ಬಿರುದಾಂಕಿತ, ‘ಕಾವ್ಯಾನಂದ’ ಕಾವ್ಯನಾಮಾಂಕಿತ, ‘ಐಎಎಸ್’ ಸ್ಥಾನಾಲಂಕೃತ, ಸಹೃದಯತೆಯ ಶ್ರೇಷ್ಠ ಔನ್ನತ್ಯರಾದ ಕನ್ನಡ ನಾಡಿನ ಅಗ್ರಗಣ್ಯ ಶ್ರೇಯಾಂಕಿತ ಮಹನೀಯ ಡಾ. ಸಿದ್ಧಯ ಪುರಾಣಿಕರು.
ಏಕಾದಶ ಈ ಸಂಸ್ಕೃತ ಪದದ ಅರ್ಥ ಹನ್ನೊಂದು(೧೧).ಹಿಂದೂ ಪಂಚಾಂಗದ ೧೨ ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ.ಒಂದು ಮಾಸದಲ್ಲಿ ಎರಡು ಏಕಾದಶಿಗಳಿರುತ್ತವೆ.ಈ ದಿನದಂದು ಯಾವ ಆಹಾರವನ್ನೂ ಸೇವಿಸದೆ,ಉಪವಾಸ ಮಾಡುವ ಸಂಪ್ರದಾಯವಿದೆ.ಈ ದಿನದಂದು ಕೆಲವರು ಅನ್ನವನ್ನು ಮಾತ್ರ ತ್ಯಜಿಸಿ ಉಪವಾಸ ಆಚರಿಸಿದರೆ,ಮತ್ತೆ ಕೆಲವರು ಹನಿ ನೀರನ್ನೂ ಕುಡಿಯದೆ,ನಿರಾಹಾರ ವ್ರತವನ್ನು ಆಚರಿಸುತ್ತಾರೆ.ಏಕಾದಶಿಯ ದಿನ ಉಪವಾಸವಿದ್ದು,ಮಾರನೆಯ ದಿನ ಅಂದರೆ ದ್ವಾದಶಿಯಂದು ಬೆಳಿಗ್ಗೆ ೯ ಘಂಟೆಯೊಳಗಾಗಿ ಪಾರಣೆ(ಊಟ)ಮಾಡುವ ಸಂಪ್ರದಾಯವಿದೆ. ಕೆಲವರು ಏಕಾದಶಿಯಂದು ಮೌನ ವ್ರತ ಸಹ ಆಚರಿಸುತ್ತಾರೆ. ವೈಕುಂಠ ಏಕಾದಶಿ ಏಕಾದಶಿಗಳಲ್ಲಿ ವಿಶೇಷ ದಿನ.ಚಾಂದ್ರಮಾನ ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿಯೇ ಈ ವಿಶೇಷ ದಿನ.
ಹಿಮ ಚಿರತೆ (ಉನ್ಷಿಯ ಉನ್ಷಿಯ )ಯು ಒಂದು ಮಧ್ಯಮ ಗಾತ್ರದ ದೊಡ್ಡ ಬೆಕ್ಕು, ಇದು ಹೆಚ್ಚಾಗಿ ಮಧ್ಯ ಹಾಗೂ ದಕ್ಷಿಣ ಏಷ್ಯಾದ ಬೆಟ್ಟಗಳ ಸಾಲುಗಳಲ್ಲಿ ಕ೦ಡುಬರುತ್ತದೆ. ಈ ಜಾತಿಗಳ ವರ್ಗೀಕರಣವನ್ನು ಬದಲಾವಣೆಗೆ ಒಳಪಡಿಸಲಾಯಿತು ಹಾಗು ಜೀವಿವರ್ಗೀಕರಣದಲ್ಲಿ ಅದರ ಜಾತಿಯನ್ನು ಸರಿಯಾಗಿ ನಿರ್ಧರಿಸಲು ಹೆಚ್ಚಿನ ಅಧ್ಯಯನದ ನಂತರ ಮಾತ್ರ ಸಾಧ್ಯ ಎಂದು ಹೇಳಲಾಗಿದೆ. ಹಿಮ ಚಿರತೆಗಳು 3,000 and 5,500 metres (9,800 and 18,000 ft)ಮಧ್ಯ ಏಷಿಯಾದ ಕಲ್ಲಿನ ಪರ್ವತ ಶ್ರೇಣಿಗಳ ಸಮುದ್ರ ಮಟ್ಟಕ್ಕಿ೦ತ ಮೇಲಿನ ಭಾಗದಲ್ಲಿ ವಾಸಿಸುತ್ತವೆ.
ಬೀಟಲ್ಸ್ ಲಿವರ್ ಪೂಲ್ನಲ್ಲಿ 1960ರಲ್ಲಿ ನಿರ್ಮಿತವಾದ ಒಂದು ರಾಕ್ ಸಂಗೀತ ತಂಡ. ಜನಪ್ರಿಯ ಸಂಗೀತ ಇತಿಹಾಸದಲ್ಲಿ ಇದು ಅತಿ ಹೆಚ್ಚು ವಾಣಿಜ್ಯತ್ಮಕವಾಗಿ ಯಶಸ್ಸು ಮತ್ತು ವಿಮರ್ಶಾತ್ಮಕ ಶ್ಲಾಘನೆ ಗಳಿಸಿದ ಸಂಗೀತ ತಂಡಗಳಲ್ಲಿ ಒಂದಾಗಿದೆ. 1962ರಿಂದ ಜಾನ್ ಲೆನನ್ ([ಸ್ವರತರಂಗ]ರಿದಮ್ ಗಿಟಾರ್, ಗಾಯನ), ಪೌಲ್ ಮ್ಯಾಕ್ಕಾರ್ಟ್ನಿ (ಬ್ಯಾಸ್ ಗಿಟಾರ್, ಗಾಯನ), ಜಾರ್ಜ್ ಹ್ಯಾರಿಸನ್ (ಲೀಡ್ ಗಿಟಾರ್, ಗಾಯನ) ಮತ್ತು ರಿಂಗೋ ಸ್ಟಾರ್ರ್ (ಡ್ರಮ್ಸ್, ಗಾಯನ) ರನ್ನು ಈ ತಂಡ ಒಳಗೊಂಡಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಕೆಂಪು ಸಿಂಹಮೀನು (ಪಿಟರೊಯಿಸ್ ವಲಿಟಾನ್ಸ್) ಸ್ಕಾರ್ಪೇನಿಡೇ ಕುಟುಂಬದಲ್ಲಿರುವ ವಿಷಪೂರಿತ ಹವಳದ ಬಂಡೆಯ ಮೀನು, ಆರ್ಡರ್ ಸ್ಕಾರ್ಪೇನಿಫಾರ್ಮ್ಸ್. ಇದು ಮುಖ್ಯವಾಗಿ ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ಸ್ಥಳೀಯವಾಗಿದೆ, ಆದರೆ ಕೆರಿಬಿಯನ್ ಸಮುದ್ರದಲ್ಲಿ ಆಕ್ರಮಣಕಾರಿ ಜಾತಿಯಾಗಿ ಮಾರ್ಪಟ್ಟಿದೆ, ಜೊತೆಗೆ ಯುನೈಟೆಡ್ ಸ್ಟೇಟ್ಸ್ನ ಪೂರ್ವ ಕರಾವಳಿ ಮತ್ತು ಪೂರ್ವ ಮೆಡಿಟರೇನಿಯನ್ ಉದ್ದಕ್ಕೂ ಮತ್ತು ಬ್ರೆಜಿಲ್ನಲ್ಲಿ ಫೆರ್ನಾಂಡೋ ಡಿ ನೊರೊನ್ಹಾದಲ್ಲಿ ಕಂಡುಬರುತ್ತದೆ. ಪಿ.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ದತ್ತಾತ್ರೇಯನು ಹಿಂದೂಗಳಿಂದ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರ ಅವತಾರನಾದ ದೇವರೆಂದು ಪರಿಗಣಿಸಲ್ಪಡುತ್ತಾನೆ. ದತ್ತ ಶಬ್ದದ ಅರ್ಥ "ಕೊಟ್ಟಿದ್ದು", ತ್ರಿಮೂರ್ತಿಗಳು ತಮ್ಮನ್ನು ತಾವೇ ಋಷಿ ದಂಪತಿಗಳಾದ ಅತ್ರಿ ಮತ್ತು ಅನಸೂಯೆಯರಿಗೆ ಪುತ್ರನ ರೂಪದಲ್ಲಿ ಅರ್ಪಿಸಿದ್ದರಿಂದ ದತ್ತನೆಂದು ಕರೆಯಲ್ಪಡುತ್ತಾನೆ. ಅವನು ಅತ್ರಿಯ ಪುತ್ರ, ಹಾಗಾಗಿ "ಆತ್ರೇಯ"ನೆಂಬ ಹೆಸರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಎಲೆಕ್ಟ್ರಾನ್ ಅಥವಾ ಋಣವಿದ್ಯುತ್ಕಣ - ಇದು ಋಣ ವಿದ್ಯುದಾವೇಶವನ್ನು ಹೊಂದಿರುವ ಒಂದು ಮೂಲ ಉಪಪರಮಾಣು ಕಣ. ಗಿರಕಿ-½ ಲೆಪ್ಟಾನ್ ಗುಂಪಿನಲ್ಲಿದ್ದು ವಿದ್ಯುತ್ಕಾಂತೀಯ ಒಡನಾಟಗಳಲ್ಲಿ ಭಾಗವಹಿಸುವ ಈ ಕಣವು ಪ್ರೋಟಾನ್ ಅಥವಾ ಧನವಿದ್ಯುತ್ ಕಣದ ೧೮೩೬ನೇ ೧ರಷ್ಟು ದ್ರವ್ಯರಾಶಿಯನ್ನು ಹೊಂದಿದೆ. ಪರಮಾಣು ಕೇಂದ್ರದಲ್ಲಿನ ಪ್ರೋಟಾನ್ ಮತ್ತು ನ್ಯೂಟ್ರಾನ್ಗಳ ಜೊತೆ ಸೇರಿ ಎಲೆಕ್ಟ್ರಾನ್ಗಳು ಪರಮಾಣುಗಳನ್ನು ರಚಿಸುತ್ತವೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಒಂದು ಜೀವಿಯ ದೇಹ-ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ೧೯೪೫ರ ಹೇಳಿಕೆಯ ಪ್ರಕಾರ "ಆರೋಗ್ಯವೆಂದರೆ ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸುಸ್ಥಿತಿ - ಕೇವಲ ರೋಗ, ಭಾದೆಗಳ ಗೈರು ಹಾಜರಿಯಷ್ಟೇ ಅಲ್ಲ" ಆರೋಗ್ಯವೇ ಭಾಗ್ಯ.. ಮಾನವನಿಗೆ ಪರಿಸ್ಥಿತಿಗೆ ಹೊಂದಿಕೊಳ್ಳುವ ಮತ್ತು ದೈಹಿಕ, ಮಾನಸಿಕ ಅಥವಾ ಸಾಮಾಜಿಕ ಸವಾಲುಗಳನ್ನು ಎದುರಿಸುವಾಗ ಸ್ವಯಂ ನಿರ್ವಹಿಸುವ ಸಾಮರ್ಥ್ಯ ಇದೆ.