The most-visited ಕನ್ನಡ Wikipedia articles, updated daily. Learn more...
ಈದ್ ಅಲ್-ಅಧಾ ( ಅರೇಬಿಕ್: عيد الأضحى ʿĪd al-ʾAḍḥā [ˈʕiːd æl ˈʔɑdˤħæː], "ತ್ಯಾಗದ ಹಬ್ಬ") ಅಥವಾ ತ್ಯಾಗದ ಹಬ್ಬವು ಇಸ್ಲಾಂನಲ್ಲಿ ಎರಡನೆಯದು ಮತ್ತು ದೊಡ್ಡದಾದ ರಜಾದಿನಗಳಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬ. (ಇನ್ನೊಂದು ಈದ್ ಅಲ್-ಫಿತರ್ ). ಅಬ್ರಹಾಂ (ಇಬ್ರಾಹಿಂ) ತನ್ನ ಮಗನಾದ ಇಸ್ಮಾಯಿಲ್ (ಇಸ್ಮಾಯಿಲ್) ನನ್ನು ದೇವರ ಆಜ್ಞೆಗೆ ವಿಧೇಯತೆಗಾಗಿ ತ್ಯಾಗಮಾಡಲು ಇಚ್ಛೆಯನ್ನು ವ್ಯಕ್ತಪಡಿಸುತ್ತಾನೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
2003 ಮಾರ್ಚ್ 20ರಂದು ಪ್ರಾರಂಭಗೊಂಡ ಬಹುರಾಷ್ಟ್ರಗಳ ಸೇನಾ ತುಕಡಿಗಳು ಇರಾಕಿನ ನೆಲವನ್ನು ವಶಪಡಿಸಿಕೊಳ್ಳುವ ಸೇನಾಕಾರ್ಯಾಚರಣೆಯನ್ನು ಇರಾಕ್ ಯುದ್ಧ ಎಂದು ಕರೆಯಲಾಗುತ್ತದೆ (ಇದನ್ನು ಇರಾಕ್ ಆಕ್ರಮಣ, ಎರಡನೇ ಗಲ್ಫ್ ಯುದ್ಧ , ಹಾಗೂ ಆಪರೇಷನ್ ಇರಾಕ್ ವಿಮೋಚನಾ ಕಾರ್ಯಾಚರಣೆ ಎಂದೂ ಕರೆಯಲಾಗುತ್ತದೆ). ಅಮೇರಿಕಾದ ಅಧ್ಯಕ್ಷ ಜಾರ್ಜ್.ಡಬ್ಲ್ಯು.ಬುಷ್ ಅವರ ಮುಂಚೂಣಿಯ ಅಮೇರಿಕಾ ಹಾಗೂ ಟೋನಿ ಬ್ಲೇರ್ ಮುಖಂಡತ್ವದ ಇಂಗ್ಲೆಂಡ್ ಈ ಕಾರ್ಯಾಚರಣೆಯ ಮುಂದಾಳತ್ವ ವಹಿಸಿಕೊಂಡಿದ್ದವು. ಹೀಗೆ ವಿಮೋಚನೆಯ ಹೆಸರಿನಲ್ಲಿ ಇರಾಕಿನ ನೆಲದ ಮೇಲೆ ಕಾಲೂರಿದ ಸೇನೆಯನ್ನು ಇತ್ತೀಚೆಗೆ ತೆರವುಗೊಳಿಸಲಾಯಿತು.
ಮಂಗಳೂರು(ಉಚ್ಚಾರಣೆː), ಕರ್ನಾಟಕದ ನೈಋತ್ಯದಲ್ಲಿರುವ ಪ್ರಮುಖ ರೇವು ಪಟ್ಟಣ ಹಾಗೂ ಕರ್ನಾಟಕದ ಪ್ರಮುಖ ನಗರಗಳಲ್ಲೊಂದು. ಭಾರತದ ಪಶ್ಚಿಮ ಕರಾವಳಿಯಲ್ಲಿ ಅರಬ್ಬೀ ಸಮುದ್ರದ ತೀರದಲ್ಲಿರುವ ಇದು ತನ್ನ ಪೂರ್ವದಲ್ಲಿ ಪಶ್ಚಿಮ ಘಟ್ಟಗಳನ್ನು ಹೊಂದಿದೆ, ಹಾಗೂ ಕರಾವಳಿ ಪ್ರದೇಶವಾದ ಮಂಗಳೂರು ಮೀನು ಮತ್ತು ಇತರ ಸಮುದ್ರ ಖಾದ್ಯಗಳಿಗೆ ಪ್ರಸಿದ್ದ. ಮಂಗಳೂರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತ ಕೇಂದ್ರ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಗುರುತ್ವಾಕರ್ಷಣದಿಂದ ಒಟ್ಟಾಗಿರುವ ಅನೇಕ ನಕ್ಷತ್ರಗಳು, ಅವುಗಳ ಮಧ್ಯೆ ಇರುವ ವಾಯು, ಧೂಳು ಮತ್ತು ಅಜ್ಞಾತ ಕಪ್ಪು ದ್ರವ್ಯದ (en:Dark Matter) ಬೃಹತ ಗಾತ್ರದ ಸಮೂಹ -ಬ್ರಹ್ಮಾಂಡ; ನಕ್ಷತ್ರಗಳ ಗುಂಪು ಎರಡು ಅಥವಾ ಹೆಚ್ಚು ನಕ್ಷತ್ರಗಳ ಗುಂಪಿಗೆ ನಕ್ಷತ್ರಪುಂಜಗಳು; (ನಕ್ಷತ್ರಕೂಟ:ಉಪಯೋಗದಲ್ಲಿಲ್ಲ - ಜಾತಕ ತಾಳೆ ನೋಡುವಾಗ ಮಾತ್ರಾ ಉಪಯೋಗಿಸುವರು) ಅಥವಾ ತಾರಾಗಣವು ಕೆಲವೇ ನಕ್ಷತ್ರಗಳ ಒಂದು ಗುಂಪು ಎಂದು ಹೆಸರು. ಈ ನಕ್ಷತ್ರಕೂಟಗಳಲ್ಲಿ ಸಾಮಾನ್ಯವಾಗಿ ೧೦ ಮಿಲಿಯನ್ ಇಂದ ೧ ಟ್ರಿಲಿಯನ್ ನಕ್ಷತ್ರಗಳು ಒಂದೇ ಗುರುತ್ವದ ಕೇಂದ್ರಬಿಂದುವಿನ ಸುತ್ತ ಪ್ರದಕ್ಷಣೆ ಮಾಡುತ್ತವೆ. ಸೂರ್ಯ ಮತ್ತು ಸೌರಮಂಡಲ ಇರುವ ನಕ್ಷತ್ರಕೂಟದ ಹೆಸರು ಆಕಾಶಗಂಗೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಜಾಕಿ ಚಾನ್, SBS, MBE (ಹುಟ್ಟಿದಾಗ ಇಟ್ಟ ಹೆಸರು ಚಾನ್ ಕಾಂಗ್ ಸ್ಯಾಂಗ್, 陳港生; ಹುಟ್ಟಿದ್ದು 1954ರ ಏಪ್ರಿಲ್ 7ರಂದು) ಓರ್ವ ಹಾಂಗ್ ಕಾಂಗ್ ಮೂಲದ ನಟ, ಚಲನಾ ನೃತ್ಯ ಸಂಯೋಜಕ, ಚಲನಚಿತ್ರೋದ್ಯಮಿ, ಹಾಸ್ಯನಟ, ನಿರ್ಮಾಪಕ, ಕದನ ಕಲೆಯ ಕಲಾವಿದ, ಚಿತ್ರಕಥಾ ಲೇಖಕ, ವಾಣಿಜ್ಯೋದ್ಯಮಿ, ಗಾಯಕ ಮತ್ತು ಸಾಹಸ ಪ್ರದರ್ಶನ ನಿರ್ವಾಹಕನಾಗಿದ್ದಾನೆ. ಆತನ ಚಲನಚಿತ್ರಗಳಲ್ಲಿನ, ಆತನ ದೊಂಬರಾಟದಂಥ ಹೊಡೆದಾಟದ ಶೈಲಿ, ಕಾಲೋಚಿತವಾಗಿ ನಗೆಯುಕ್ಕಿಸುವ ಸಾಮರ್ಥ್ಯ, ಸುಧಾರಿತ ಶಸ್ತ್ರಾಸ್ತ್ರಗಳು ಹಾಗೂ ನಾವೀನ್ಯತೆಯ ಸಾಹಸ ಪ್ರದರ್ಶನಗಳ ಬಳಕೆಗೆ ಆತ ಖ್ಯಾತಿಯನ್ನು ಪಡೆದಿದ್ದಾನೆ. 1970ರ ದಶಕದಿಂದಲೂ ಜಾಕಿ ಚಾನ್ ಅಭಿನಯಿಸುತ್ತಾ ಬಂದಿದ್ದು, ಇದುವರೆಗೂ 100 ಹೆಚ್ಚಿನ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾನೆ.
ಬೀಟಲ್ಸ್ ಲಿವರ್ ಪೂಲ್ನಲ್ಲಿ 1960ರಲ್ಲಿ ನಿರ್ಮಿತವಾದ ಒಂದು ರಾಕ್ ಸಂಗೀತ ತಂಡ. ಜನಪ್ರಿಯ ಸಂಗೀತ ಇತಿಹಾಸದಲ್ಲಿ ಇದು ಅತಿ ಹೆಚ್ಚು ವಾಣಿಜ್ಯತ್ಮಕವಾಗಿ ಯಶಸ್ಸು ಮತ್ತು ವಿಮರ್ಶಾತ್ಮಕ ಶ್ಲಾಘನೆ ಗಳಿಸಿದ ಸಂಗೀತ ತಂಡಗಳಲ್ಲಿ ಒಂದಾಗಿದೆ. 1962ರಿಂದ ಜಾನ್ ಲೆನನ್ ([ಸ್ವರತರಂಗ]ರಿದಮ್ ಗಿಟಾರ್, ಗಾಯನ), ಪೌಲ್ ಮ್ಯಾಕ್ಕಾರ್ಟ್ನಿ (ಬ್ಯಾಸ್ ಗಿಟಾರ್, ಗಾಯನ), ಜಾರ್ಜ್ ಹ್ಯಾರಿಸನ್ (ಲೀಡ್ ಗಿಟಾರ್, ಗಾಯನ) ಮತ್ತು ರಿಂಗೋ ಸ್ಟಾರ್ರ್ (ಡ್ರಮ್ಸ್, ಗಾಯನ) ರನ್ನು ಈ ತಂಡ ಒಳಗೊಂಡಿದೆ.
ವೀರಾಸ್ವಾಮಿ ರವಿಚಂದ್ರನ್ ಕನ್ನಡ ಚಿತ್ರರಂಗದಲ್ಲಿ ವಿ.ರವಿಚಂದ್ರನ್ ಎನ್ನುವ ಹೆಸರಿನಲ್ಲಿ ಪ್ರಸಿದ್ಧರು. ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ಮತ್ತು ಬೆಳ್ಳಿಪರದೆಗೆ ಹೊಸರಂಗು ತಂದ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಅನೇಕ ರೀಮೇಕ್ ಸಿನಿಮಾಗಳನ್ನು ಕನ್ನಡಕ್ಕೆ ತಂದರೂ ಮೂಲಸಿನಿಮಾದ ಛಾಯೆ ಇರದ ತಮ್ಮದೇ ಆದ ಶೈಲಿಯಲ್ಲಿ ಕನ್ನಡ ಸೊಗಡಿನ ಸೂಪರ್ ಹಿಟ್ ಗಳನ್ನು ನೀಡಿದ್ದಾರೆ.
ರಾಜಕೀಯ ಅಸ್ತಿತ್ವವುಳ್ಳ ವ್ಯಕ್ತಿಗಳ ಸಮೂಹದ ಒಂದು ದೃಢ ಗುರುತಿಸುವುಕೆಯನ್ನು ರಾಷ್ಟ್ರೀಯತೆ ಯು ಒಳಗೊಂಡಿದೆ, ಇದನ್ನು ರಾಷ್ಟ್ರೀಯತೆಯ ವಿಧಾನಗಳಲ್ಲಿ ಒಂದು ರಾಷ್ಟ್ರ ಎಂದು ವ್ಯಾಖ್ಯಾನಿಸಲಾಗಿದೆ. ಹಲವು ಬಾರಿ, ಒಂದು ಜನಾಂಗೀಯ ಗುಂಪಿಗೆ ರಾಜ್ಯತ್ವದ ಅಧಿಕಾರವಿದೆ ಎಂಬ ನಂಬಿಕೆ ಇದೆ, ಅಥವಾ ಒಂದು ರಾಜ್ಯದ ಪೌರತ್ವ ಬರಿ ಒಂದೇ ಜನಾಂಗೀಯ ಗುಂಪಿಗೆ ಸೀಮಿತವಾಗಿರಬೇಕೆಂದು, ಅಥವಾ ಒಂದೇ ರಾಜ್ಯದಲ್ಲಿ ಇರಬಹುದಾದ ಬಹುರಾಷ್ಟ್ರೀಯತೆಯು ಅವಶ್ಯವಾಗಿ ವ್ಯಕ್ತಪಡಿಸುವ ಹಕ್ಕನ್ನು ಒಳಗೊಂಡಿರಬೇಕು ಮತ್ತು ಅಲ್ಪಸಂಖ್ಯಾತರುಗಳಿಂದ ಕೂಡ ರಾಷ್ಟ್ರದ ಗುರುತಿಸುವಿಕೆಯನ್ನು ಕಾರ್ಯಗತ ಮಾಡಬಹುದು.
ನಿಕೋಲಸ್ ಸರ್ಕೋಜಿ ಯವರು [nikɔla saʁkɔzi] ( ) (ನಿಕೋಲಸ್ ಪೌಲ್ ಸ್ಟೀಫನ್ ಸರ್ಕೋಜಿ ಡೆ ನಾಜಿ-ಬೊಕ್ಸಾ ಎಂದು ಚಿರಪರಿಚಿತರಾಗಿದ್ದು , ಜನವರಿ 28 1955ರಂದು ಜನನ) 23 ನೇ ಹಾಗೂ ಪ್ರಸ್ತುತ ಫ್ರೆಂಚ್ ರಿಪಬ್ಲಿಕ್ನ ಅಧ್ಯಕ್ಷರೂ ಮತ್ತು ನಿವೃತ್ತ ರಾಜನೀತಿ ತಜ್ಞ ಹಾಗೂ ಆಂಡೋರ್ರಾದ ನಿಷ್ಠಾ ಬದ್ಧ ರಾಜಕುಮಾರರಾಗಿದ್ದಾರೆ. ಅವರು 10ದಿನಗಳ ಮುಂಚೆ ಸಮಾಜವಾದಿ ಪಕ್ಷದ ಅಭ್ಯರ್ಥಿಯೆನಿಸಿದ್ದ ಸೆಗೊಲಿನ್ ರಾಯಲ್ರನ್ನು ಸೋಲಿಸಿದ ನಂತರ 2007 ಮೇ 16 ರಂದು ಅಧಿಕಾರ ವಹಿಸಿಕೊಂಡರು. ಅವರ ಅಧ್ಯಕ್ಷತೆಗಿಂತ ಮೊದಲು, ಅವರು ಯೂನಿಯನ್ ಫಾರ್ ಪಾಪ್ಯುಲರ್ ಮೂವ್ಮೆಂಟ್ (ಯುಎಮ್ಪಿ) ನ ನಾಯಕನಾಗಿದ್ದರು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ವಿಶ್ವ ಪರಿಸರ ದಿನವನ್ನು ( ಡಬ್ಲ್ಯೂಇಡಿ ) ವಾರ್ಷಿಕವಾಗಿ ಜೂನ್ 5 ರಂದು ಆಚರಿಸಲಾಗುತ್ತದೆ ಮತ್ತು ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮವನ್ನು ಉತ್ತೇಜಿಸುತ್ತದೆ. ಇದು ಅನೇಕ ಸರ್ಕಾರೇತರ ಸಂಸ್ಥೆಗಳು, ವ್ಯವಹಾರಗಳು, ಸರ್ಕಾರಿ ಘಟಕಗಳಿಂದ ಬೆಂಬಲಿತವಾಗಿದೆ ಮತ್ತು ಪರಿಸರವನ್ನು ಬೆಂಬಲಿಸುವ ಪ್ರಾಥಮಿಕ ವಿಶ್ವಸಂಸ್ಥೆಯ ಎಲ್ಲರಿಗೂ ತಲುಪುವ ಜಾಗೃತಿ ದಿನವನ್ನು ಪ್ರತಿನಿಧಿಸುತ್ತದೆ. ಮೊದಲ ಬಾರಿಗೆ 1973 ರಲ್ಲಿ ಆಯೋಜಿಸಲಾಯಿತು, ಇದು ಸಮುದ್ರ ಮಾಲಿನ್ಯ, ಅಧಿಕ ಜನಸಂಖ್ಯೆ, ಜಾಗತಿಕ ತಾಪಮಾನ ಏರಿಕೆ, ಸುಸ್ಥಿರ ಅಭಿವೃದ್ಧಿ ಮತ್ತು ವನ್ಯಜೀವಿ ಅಪರಾಧಗಳಂತಹ ಪರಿಸರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಆಂತರಿಕ ದಹನಕಾರಿ ಇಂಜಿನ್ (ICE) ಇಂಧನದ ದಹನಕ್ರಿಯೆಯಿಂದ ಕೆಲಸವನ್ನು ಪ್ರವಹಿಸುವ ಮಂಡಲ. ಅವಿಭಾಜ್ಯ ಭಾಗವಾಗಿರುವ ಒಂದು ದಹನ ಕೋಶದಲ್ಲಿ ಉತ್ಕರ್ಷಕದೊಂದಿಗೆ (ಸಾಮಾನ್ಯವಾಗಿ ಗಾಳಿ) ದಹನ ಆಗುತ್ತದೆ. ಆಂತರಿಕ ದಹನಕಾರಿ ಇಂಜಿನ್ನಲ್ಲಿ ದಹನದಿಂದ ಉತ್ಪಾದನೆಯಾಗುವ ಉನ್ನತ ಉಷ್ಣಾಂಶ ಮತ್ತು ಉನ್ನತ ಒತ್ತಡದ ಅನಿಲಗಳ ವಿಸ್ತರಣೆಯು ಇಂಜಿನ್ನ ಯಾವುದೋ ಭಾಗಕ್ಕೆ ನೇರ ಶಕ್ತಿಯನ್ನು ಅನ್ವಯಿಸುತ್ತದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ವೈಭವ್ ಸೂರ್ಯವಂಶಿ (ಜನನ ೨೭ ಮಾರ್ಚ್ ೨೦೧೧) ಒಬ್ಬ ಭಾರತೀಯ ಕ್ರಿಕೆಟಿಗ, ಇವರು ದೇಶೀಯ ಕ್ರಿಕೆಟ್ನಲ್ಲಿ ಬಿಹಾರ ಪರ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಾರೆ. ಎಡಗೈ ಬ್ಯಾಟ್ಸ್ಮನ್ ಆಗಿ, ಅವರು ಜನವರಿ 2024 ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು. ಅವರು ಲಿಸ್ಟ್ ಎ ತಂಡದ ಆರಂಭಿಕ ಆಟಗಾರರಲ್ಲಿ ಅತ್ಯಂತ ಕಿರಿಯರು ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯರು.
ಎಲೆಕ್ಟ್ರಾನ್ ಅಥವಾ ಋಣವಿದ್ಯುತ್ಕಣ - ಇದು ಋಣ ವಿದ್ಯುದಾವೇಶವನ್ನು ಹೊಂದಿರುವ ಒಂದು ಮೂಲ ಉಪಪರಮಾಣು ಕಣ. ಗಿರಕಿ-½ ಲೆಪ್ಟಾನ್ ಗುಂಪಿನಲ್ಲಿದ್ದು ವಿದ್ಯುತ್ಕಾಂತೀಯ ಒಡನಾಟಗಳಲ್ಲಿ ಭಾಗವಹಿಸುವ ಈ ಕಣವು ಪ್ರೋಟಾನ್ ಅಥವಾ ಧನವಿದ್ಯುತ್ ಕಣದ ೧೮೩೬ನೇ ೧ರಷ್ಟು ದ್ರವ್ಯರಾಶಿಯನ್ನು ಹೊಂದಿದೆ. ಪರಮಾಣು ಕೇಂದ್ರದಲ್ಲಿನ ಪ್ರೋಟಾನ್ ಮತ್ತು ನ್ಯೂಟ್ರಾನ್ಗಳ ಜೊತೆ ಸೇರಿ ಎಲೆಕ್ಟ್ರಾನ್ಗಳು ಪರಮಾಣುಗಳನ್ನು ರಚಿಸುತ್ತವೆ.
ಬಾಹ್ಯ ಲೆಕ್ಕ ಪರಿಶೋಧಕನು ನಿರ್ದಿಷ್ಟ ಕಾನೂನುಗಳು ಅಥವಾ ನಿಯಮಗಳಿಗೆ ಅನುಸಾರವಾಗಿ ಕಂಪನಿಯ, ಸರ್ಕಾರಿ ಘಟಕದ, ಇತರ ಕಾನೂನು ಘಟಕದ ಅಥವಾ ಸಂಸ್ಥೆಯ ಹಣಕಾಸಿನ ಹೇಳಿಕೆಗಳ ಲೆಕ್ಕಪರಿಶೋಧನೆಯನ್ನು ನಿರ್ವಹಿಸುತ್ತಾನೆ ಮತ್ತು ಲೆಕ್ಕಪರಿಶೋಧನೆ ಮಾಡಲಾದ ಘಟಕದಿಂದ ಸ್ವತಂತ್ರನಾಗಿರುತ್ತಾನೆ. ಹೂಡಿಕೆದಾರರು, ಸರ್ಕಾರಿ ಏಜೆನ್ಸಿಗಳು ಮತ್ತು ಸಾರ್ವಜನಿಕರಂತಹ ಈ ಘಟಕಗಳ ಆರ್ಥಿಕ ಮಾಹಿತಿಯ ಬಳಕೆದಾರರು ನಿಷ್ಪಕ್ಷಪಾತ ಮತ್ತು ಸ್ವತಂತ್ರ ಆಡಿಟ್ ವರದಿಯನ್ನು ಪ್ರಸ್ತುತಪಡಿಸಲು ಬಾಹ್ಯ ಲೆಕ್ಕಪರಿಶೋಧಕರನ್ನು ಅವಲಂಬಿಸಿರುತ್ತಾರೆ. ನೇಮಕಾತಿಯ ವಿಧಾನ, ಅರ್ಹತೆಗಳು ಮತ್ತು ಬಾಹ್ಯ ಲೆಕ್ಕಪರಿಶೋಧಕರಿಂದ ವರದಿ ಮಾಡುವ ಸ್ವರೂಪವನ್ನು ಕಾನೂನಿನಿಂದ ವ್ಯಾಖ್ಯಾನಿಸಲಾಗಿದ್ದು ಇದು ನ್ಯಾಯವ್ಯಾಪ್ತಿಗೆ ಅನುಗುಣವಾಗಿ ಬದಲಾಗುತ್ತದೆ.
1947-1948 ರ ಇಂಡೋ-ಪಾಕಿಸ್ತಾನ ಯುದ್ಧ
1947-1948 ರ ಇಂಡೋ-ಪಾಕಿಸ್ತಾನಿ ಯುದ್ಧ, ಅಥವಾ ಮೊದಲ ಕಾಶ್ಮೀರ ಯುದ್ಧ, 1947 ರಿಂದ 1948 ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜಪ್ರಭುತ್ವದ ಮೇಲೆ ಭಾರತ ಮತ್ತು ಪಾಕಿಸ್ತಾನದ ನಡುವೆ ಹೋರಾಡಿದ ಸಶಸ್ತ್ರ ಸಂಘರ್ಷವಾಗಿದೆ. ಹೊಸದಾಗಿ ಸ್ವತಂತ್ರವಾದ ಎರಡು ರಾಷ್ಟ್ರಗಳ ನಡುವೆ ನಡೆದ ನಾಲ್ಕು ಇಂಡೋ-ಪಾಕಿಸ್ತಾನ ಯುದ್ಧಗಳಲ್ಲಿ ಇದು ಮೊದಲನೆಯದು. ಕಾಶ್ಮೀರವನ್ನು ವಶಪಡಿಸಿಕೊಳ್ಳುವ ಪ್ರಯತ್ನದಲ್ಲಿ ಮತ್ತು ಅದರ ಆಡಳಿತಗಾರ ಭಾರತಕ್ಕೆ ಸೇರುವ ಸಾಧ್ಯತೆಯನ್ನು ತಡೆಗಟ್ಟುವ ಪ್ರಯತ್ನದಲ್ಲಿ, ವಜೀರಿಸ್ತಾನದಿಂದ ಬುಡಕಟ್ಟು ಲಷ್ಕರ್ (ಮಿಲಿಷಿಯಾ) ಅನ್ನು ಪ್ರಾರಂಭಿಸುವ ಮೂಲಕ ಪಾಕಿಸ್ತಾನವು ತನ್ನ ಸ್ವಾತಂತ್ರ್ಯದ ಕೆಲವು ವಾರಗಳ ನಂತರ ಯುದ್ಧವನ್ನು ಚುರುಕುಗೊಳಿಸಿತು.
ತಮಿಳುನಾಡಿನ ತಂಜಾವೂರಿನಲ್ಲಿ ೪ ಜನ ಸೋದರರಿಂದ ವಿಕಸಿತಗೊಂಡ ಭರತನಾಟ್ಯ ಪರಂಪರೆ, ೨೦ ನೆಯ ಶತಮಾನದ ಆರಂಭದಲ್ಲಿ ೧೯೪೦ ರಲ್ಲಿ, ರುಕ್ಮಿಣಿ ದೇವಿ ಅರುಂಡೇಲ್ ರವರು ತಮ್ಮ ನೃತ್ಯ ಶಾಲೆ 'ಕಲಾಕ್ಷೇತ್ರ' ಸ್ಥಾಪಿಸುವವರೆಗೆ ನೃತ್ಯ ಕಲೆಗೆ ಸಮಾಜದಲ್ಲಿ ಯಾವುದೇ ಗೌರವಯುತ ಸ್ಥಾನಮಾನಗಳಿರಲಿಲ್ಲ. ರಾಜರ ಆಸ್ಥಾನ, ಇಲ್ಲವೆ 'ಶ್ರೀಮಂತರ ವೈಯಕ್ತಿಕ ಕೋಠಿ' ಗಳಲ್ಲಿ ಅವರನ್ನು ರಂಜಿಸಲು, ಇಲ್ಲವೇ ದೊಡ್ಡ ದೊಡ್ಡ ದೇವಸ್ಥಾನಗಳಲ್ಲಿ ದೇವದಾಸಿಯರೆಂದು ಮೀಸಲಾಗಿಟ್ಟ ಹೆಂಗಸರು ಇದನ್ನು ನಿರ್ವಹಿಸುತ್ತಿದ್ದರು. ಮಹಿಳೆಯರೇ ಪ್ರಮುಖ ಕಲಾಕಾರರೆಂದು ನಿರ್ಧರಿಸಿ ಅವರಿಗೇ ಮೀಸಲಾಗಿದ್ದ ಈ ಕಲೆಯಲ್ಲಿ ಪುರುಷರ ಹೆಸರನ್ನು ಪ್ರಪ್ರಥಮವಾಗಿ ಆರಿಸಿಕೊಂಡಿದ್ದು ರುಕ್ಮಿಣಿದೇವಿ ಅರುಂಡೇಲ್ ರವರು ತಮ್ಮ ಕಲಾಕ್ಷೇತ್ರ ದಲ್ಲಿ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಮಹೇಂದ್ರ ಸಿಂಗ್ ಧೋನಿಯವರನ್ನು ಎಮ್ ಎಸ್ ಧೋನಿ ಎಂದೂ ಸಂಕ್ಷ್ತಿಪ್ತ ರೂಪದಲ್ಲಿ ಕರೆಯಲಾಗುತ್ತದೆ. ಜನನ ಬಿಹಾರದ ರಾಂಚಿಯಲ್ಲಿ ೭ ಜುಲೈ ೧೯೮೧ರಂದು (ಈಗಿನ ಜಾರ್ಖಂಡ್) ಇವರು ಭಾರತದ ಕ್ರಿಕೆಟಿಗ ಮತ್ತು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರು. ಭಾರತದಲ್ಲಿ ಅಬ್ಬರದ ಮತ್ತು ಆಕ್ರಮಣಕಾರಿ ಬ್ಯಾಟ್ಸ್ಮ್ಯಾನ್ ಎಂದು ಗುರುತಿಸಿಕೊಂಡರೂ, ನಂತರ ಧೋನಿಯವರು ಭಾರತದ ಏಕದಿನ (ODI) ತಂಡದ ಶಾಂತ ಸ್ವಭಾವದ ನಾಯಕರಲ್ಲಿ ಒಬ್ಬರಂತೆ ಗುರ್ತಿಸಲ್ಪಡುತ್ತಾರೆ.
ಮಂಗಳೂರು ದಸರಾ : 'ಮಂಗಳೂರು ದಸರಾ'ವನ್ನು ಮಂಗಳೂರಿನ ಕುದ್ರೋಳಿ ಶ್ರೀ ಗೋಖರ್ಣನಾತೇಶ್ವರ ದೇವಸ್ಥಾನದವರು ಆಯೋಜಿಸುತ್ತಾರೆ.ಇದನ್ನು 'ಮಾರ್ನೇಮಿ', 'ವಿಜಯದಶಮಿ', 'ನವರಾತ್ರಿ ಹಬ್ಬ' ಎಂಬ ವಿವಿಧ ಹೆಸರುಗಳಿಂದ ಕರೆಯುತ್ತಾರೆ. 'ಹುಲಿವೇಷ','ಕರಡಿ ವೇಷ'ಗಳಂತಹ ಸಾಂಸ್ಕೃತಿಕ ಕುಣಿತಗಳು ಈ ಹಬ್ಬದ ಪ್ರಮುಖ ಆಕರ್ಷಣೆಯಾಗಿದೆ.ಈ ಹಬ್ಬದ ವೇಳೆಯಲ್ಲಿ ಊರಿನ ರಸ್ತೆಗಳು ೧೦ ದಿನಗಳ ಕಾಲ ದೀಪಗಳಿಂದ ಅಲಂಕರಿಸ್ಪಡುತ್ತದೆ. ಜನರು ತಮ್ಮ-ತಮ್ಮ ಮನೆಗಳನ್ನು ಮತ್ತು ಅಂಗಡಿಗಳನ್ನು ಅಲಂಕರಿಸುತ್ತಾರೆ.ಮಂಗಳೂರಿನ ಪ್ರಮುಖ ರಸ್ತೆಗಳಾಗಿರುವ ಎಂ.ಜಿ.
ಬ್ರಿಟಿಷರ ಆಕ್ರಮಣ ಕಾಲದಿಂದಲೇ ಒಂದು ದೃಷ್ಟಿಯಲ್ಲಿ ಆರಂಭವಾಗಿ, ೧೯ನೆಯ ಶತಮಾನದ ನಡುಗಾಲದಿಂದ ಕ್ರಮೇಣ ತೀವ್ರವಾಗಿ, ೨೦ನೆಯ ಶತಮಾನದಲ್ಲಿ ವ್ಯಾಪಕವಾಗಿ ಹಬ್ಬಿ, ೧೯೪೭ರಲ್ಲಿ ಯಶಸ್ವಿಯಾಗಿ ಪರ್ಯವಸಾನ ಹೊಂದಿನ ಭಾರತೀಯ ಸ್ವಾತಂತ್ರ್ಯ ಚಳವಳಿಯ ಅಂಗವಾಗಿದ್ದೂ ವಿಶಿಷ್ಟವಾಗಿ ವಿಕಾಸಗೊಂಡ ಕರ್ನಾಟಕ ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಸ್ಥೂಲವಾಗಿ ಮೂರು ಕಾಲಗಳಾಗಿ ವಿಂಗಡಿಸಬಹುದಾಗಿದೆ.
ಪರ್ವತಾರೋಹಣ ಅಥವಾ ಪರ್ವತದ ಚಾರಣ ವು ಕ್ರೀಡೆ, ಹವ್ಯಾಸ ಅಥವಾ ಕಾಲ್ನಡುಗೆಯಿಂದ ಏರುವಿಕೆ, ನೀರ್ಗಲ್ಲ ಮೇಲೆ ಜಾರುವಿಕೆ ಮತ್ತು ಪರ್ವತ ಚಾರಣಗಳ ವೃತ್ತಿಯಾಗಿರುತ್ತದೆ. ಪರ್ವತಾರೋಹಣವು ಮೊದಲಿಗೆ ಅದುವರೆಗೆ ಏರಿರದ ಪರ್ವತಗಳ ಅತಿ ಎತ್ತರದ ಸ್ಥಳವನ್ನು ತಲುಪುವ ಪ್ರಯತ್ನಗಳಾಗಿ ಆರಂಭಗೊಂಡಿತ್ತಾದರೂ, ಪರ್ವತಕ್ಕೆ ಸಂಬಂಧಿಸಿದ ವಿವಿಧ ಮಗ್ಗಲುಗಳಲ್ಲಿ ವಿಶೇಷ ಅಧ್ಯಯನ ಕ್ಷೇತ್ರಗಳಾಗಿ ಪರಿಣಮಿಸಿರುವುದಲ್ಲದೇ, ಮೂರು ವಲಯಗಳನ್ನು ಹೊಂದಿದೆ : ಇದು ಒಳಗೊಂಡಿರುವ ಪಥವು ಬಂಡೆಗಳನ್ನು, ಹಿಮಪದರವನ್ನು ಅಥವಾ ನೀರ್ಗಲ್ಲುಗಳನ್ನು ಹೊಂದಿರುವುದೋ ಎಂಬುದರ ಮೇಲೆ ಅವುಗಳನ್ನು ಬಂಡೆ ಏರುವಿಕೆಯ-ಕೌಶಲ್ಯ, ಹಿಮಪದರ ಏರುವಿಕೆಯ ಕೌಶಲ್ಯ ಮತ್ತು ನೀರ್ಗಲ್ಲ ಮೇಲೆ ಜಾರುವಿಕೆ ಎಂದು ಪರಿಗಣಿಸಲಾಗುತ್ತದೆ. ಇವೆಲ್ಲಾ ವಿಧಗಳು ಅನುಭವ, ಹೆಚ್ಚಿನ ದೈಹಿಕ ಸಾಮರ್ಥ್ಯ ಹಾಗೂ ಸುರಕ್ಷತೆಯನ್ನು ನೋಡಿಕೊಳ್ಳಲು ಅಗತ್ಯವಾದ ತಾಂತ್ರಿಕ ಜ್ಞಾನವನ್ನು ಬೇಡುತ್ತವೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಸುದೀಪ ಅಥವಾ ಕಿಚ್ಚ ಸುದೀಪ (ಜನನ ೨ ಸೆಪ್ಟೆಂಬರ್ ೧೯೭೩) ಒಬ್ಬ ಭಾರತೀಯ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ, ಕಥೆ,ಚಿತ್ರಕಥೆಗಾರ,ವಿತರಕ,ದೂರದರ್ಶನ ನಿರೂಪಕ ಮತ್ತು ಹಿನ್ನೆಲೆ ಗಾಯಕ, ಇವರು ಮುಖ್ಯವಾಗಿ ಕನ್ನಡ ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ, ಜೊತೆಗೆ ತೆಲುಗು, ಹಿಂದಿ ಮತ್ತು ತಮಿಳು ಭಾಷೆಯ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡ ಚಿತ್ರಗಳಾದ ಸ್ಪರ್ಶ (2000), ಹುಚ್ಚ (2001), ನಂದಿ (2002), ಕಿಚ್ಚ (2003), ಸ್ವಾತಿ ಮುತ್ತು (2003), ಮೈ ಆಟೋಗ್ರಾಫ್ (2006), ನಂ 73 ಶಾಂತಿ ನಿವಾಸ (2007), ಮುಸ್ಸಂಜೆ ಮಾತು (2008), ವೀರ ಮದಕರಿ (2009), ಜಸ್ಟ್ ಮಾತ್ ಮಾತಲ್ಲಿ (2010), ಕೆಂಪೇಗೌಡ (2011), ತೆಲುಗು-ತಮಿಳು ದ್ವಿಭಾಷಾ ಚಿತ್ರ ಈಗ (2012) ಮತ್ತು ಹಿಂದಿ ಚಲನಚಿತ್ರ ದಬಾಂಗ್ 3 (2019) ಇವರ ಪ್ರಮುಖ ಚಿತ್ರಗಳು. ಹುಚ್ಚ, ನಂದಿ ಮತ್ತು ಸ್ವಾತಿ ಮುತ್ತು ಚಿತ್ರಗಳಿಗಾಗಿ ಸತತ ಮೂರು ವರ್ಷಗಳ ಕಾಲ ಕನ್ನಡದ ಅತ್ಯುತ್ತಮ ನಟನೆಗಾಗಿ ಫಿಲ್ಮ್ಫೇರ್ ಪ್ರಶಸ್ತಿ ಪಡೆದರು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಅಭಿಜ್ಞಾನ ಶಾಕುಂತಲಮ್ (ಕನ್ನಡದಲ್ಲಿ "ಅಭಿಜ್ಞಾನ ಶಾಕುಂತಳ" ಎಂಬ ಪ್ರಯೋಗವು ಹೆಚ್ಚಾಗಿದೆ) ‘ಕವಿಕುಲಗುರು’ ಎಂದು ಪ್ರಖ್ಯಾತನಾದ ಕಾಳಿದಾಸನು ಸಂಸ್ಕೃತದಲ್ಲಿ ಬರೆದ ಏಳು ಅಂಕಗಳ ನಾಟಕ. ಜಗತ್ತಿನ ಶ್ರೇಷ್ಠ ಕವಿಗಳಲ್ಲಿ ಕಾಳಿದಾಸನೂ ಒಬ್ಬನೆನ್ನುವ ಸ್ಥಾನವನ್ನು ಗಳಿಸಿಕೊಟ್ಟ ನಾಟಕ. "ಕಾವ್ಯೇಷು ನಾಟಕಂ ರಮ್ಯಂ; ತತ್ರ ರಮ್ಯಾ ಶಾಕುಂತಲಾ" ಎಂದು ಹೊಗಳಿಸಿಕೊಂಡ ಶೃಂಗಾರರಸ ಪ್ರಧಾನವಾಗಿರುವ ಕೃತಿ.
ಇತಿಹಾಸ ಎಂದರೆ ನಮ್ಮ ಭೂತಕಾಲದ ಬಗೆಗಿನ ಮಾಹಿತಿ ಎಂದರ್ಥ (ಸಂಸ್ಕೃತದಲ್ಲಿ ಇತಿ=ಹೀಗೆ ಮತ್ತು ಹಾಸ=ಆದದ್ದು ಎಂಬ ವಿವರಣೆ ಇದೆ). ಸಂಬಂಧಪಟ್ಟ ವಿಷಯಗಳಿಗೆ ಈ ಪದವನ್ನು ನಾಮಪದವನ್ನಾಗಿ ಉಪಯೋಗಿಸಿದಾಗ ಇತಿಹಾಸವು ಮಾನವ, ಕುಟುಂಬ, ಮತ್ತು ಸಮಾಜದ ಮತ್ತು ಜೈವಿಕ ಬದುಕಿನ ಆಗುಹೋಗುಗಳ ದಾಖಲೆಗಳ ವೈಚಾರಿಕ ಚಿಂತನೆಗೆ ಪರಿಭಾಷೆಯಾಗಿ ಬಳಸಲ್ಪಡುತ್ತದೆ. ಬಹುಮಟ್ಟಿನ ಇತಿಹಾಸಕಾರರು ತಮ್ಮ ಅಧ್ಯಯನಗಳಿಗೆ ಬರವಣಿಗೆಯಲ್ಲಿ ದಾಖಲಾಗಿರುವ ಮೂಲಗಳನ್ನು ಆಧಾರವಾಗಿಟ್ಟುಕೊಳ್ಳುತ್ತಾರೆ.