The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಅಟ್ಲಾಂಟಿಕ್ ಮಹಾಸಾಗರ ಭೂಮಿಯ ಮಹಾಸಾಗರಗಳಲ್ಲಿ ಎರಡನೇ ದೊಡ್ಡದಾಗಿದ್ದು ಭೂಮಿಯ ಐದನೇ ಒಂದು ಭಾಗವನ್ನು ಆವರಿಸಿದೆ. ಅಮೆರಿಕಾ ಭೂಖಂಡಗಳ ಮತ್ತು ಯೂರೋಪ್ ಹಾಗೂ ಆಫ್ರಿಕಾ ಖಂಡಗಳ ನಡುವೆ ವ್ಯಾಪಿಸಿರುವ ಈ ಮಹಾಸಾಗರವು ಕೆಲವೊಮ್ಮೆ ಉತ್ತರ ಹಾಗೂ ದಕ್ಷಿಣ ಅಟ್ಲಾಂಟಿಕ್ ಸಾಗರಗಳೆಂದು ಬೇರೆಬೇರೆಯಾಗಿ ಕರೆಯಲ್ಪಡುವುದು. ಈ ಮಹಾಸಾಗರವು ಎಲ್ಲ ಸಾಗರಗಳ ಪೈಕಿ ಅತಿ ಹೆಚ್ಚಿನ ಪ್ರಕ್ಷುಬ್ಧತೆಯುಳ್ಳದ್ದಾಗಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದ ಸಂಸತ್ತು ಭಾರತದ ಗಣರಾಜ್ಯದ ಒಕ್ಕೂಟ ಸರ್ಕಾರದ ಎರಡು ಶಾಸನಸಭೆಗಳುಳ್ಳ (ಉಭಯ ಸದನಿಕ) ಸರ್ವೋಚ್ಚ ವಿಧಾಯಕ ಘಟಕವಾಗಿದೆ. ಭಾರತದ ರಾಷ್ಟ್ರಪತಿಯವರ ಕಚೇರಿ, "ರಾಜ್ಯಸಭಾ" ಎಂದು ಕರೆಯಲ್ಪಡುವ ರಾಜ್ಯಗಳ ಪರಿಷತ್ತು ಆಗಿರುವ ಒಂದು ಮೇಲ್ಮನೆ, ಮತ್ತು "ಲೋಕಸಭಾ" ಎಂದು ಕರೆಯಲ್ಪಡುವ ಪ್ರಜಾಪ್ರತಿನಿಧಿಗಳ ಸಭೆಯಾಗಿರುವ ಒಂದು ಕೆಳಮನೆಯನ್ನು ಇದು ಒಳಗೊಂಡಿದೆ. ನವದೆಹಲಿಯಲ್ಲಿನ ಸಂಸದ್ ಭವನದಲ್ಲಿರುವ (ಇದನ್ನು ಸಾಮಾನ್ಯವಾಗಿ ಸಂಸದ್ ಮಾರ್ಗ ಎಂದು ಕರೆಯಲಾಗುತ್ತದೆ) ಪ್ರತ್ಯೇಕ ಶಾಸನಸಭೆಗಳಲ್ಲಿ ಎರಡೂ ಸದನಗಳು ಸಭೆ ಸೇರುತ್ತವೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಮಮತಾ ಬ್ಯಾನರ್ಜಿ (ಬಂಗಾಳಿ:মমতা বন্দ্যোপাধ্যায়, [mɔːmoːt̪ʰaː bɛːnaːrjiː]; ೫ ಜನವರಿ ೧೯೫೫ರಂದು ಜನನ) ಯವರು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣ ಮೂಲ ಕಾಂಗ್ರೆಸ್ನ ಮುಖಂಡರಾಗಿದ್ದು, ಅವರು ಪಕ್ಷರೆ. ಮಮತಾ ಬ್ಯಾನರ್ಜಿಯವರನ್ನು ಪಶ್ಚಿಮ ಬಂಗಾಳದಲ್ಲಿ ಅವರ ಅನುಯಾಯಿಗಳು "ದೀದಿ" ಅಂದರೆ ಅಕ್ಕ ಎಂದು ಪ್ರೀತಿಯಿಂದ ಕರೆಯುತ್ತಾರೆರು. ವಿಶೇಷ ಆರ್ಥಿಕ ವಲಯಗಳನ್ನು ವಿರೋಧಿಸುವುದರ ಮೂಲಕ ಹಾಗೂ ಪಶ್ಚಿಮ ಬಂಗಾಳದಲ್ಲಿ ಕೈಗಾರಿಕೆಗಳ ಸ್ಥಾಪನೆಗೋಸ್ಕರ ಕೃಷಿಕರು ಹಾಗೂ ರೈತರ ಜಮೀನುಗಳನ್ನು ಬಲವಂತವಾಗಿ ಸ್ವಾಧೀನ ಪಡಿಸಿಕೊಳ್ಳುವುದರ ವಿರುದ್ಧ ಹೋರಾಡುವುದರ ಮೂಲಕ ತಮ್ಮನ್ನು ಗುರುತಿಸಿಕೊಂಡರು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ದೇಶದ ಮುಖ್ಯಸ್ಥರಾಗಿ ರಾಷ್ಟ್ರಪತಿ ಇರುವಂತೆಯೇ, ಭಾರತದಲ್ಲಿ ರಾಜ್ಯಗಳ ಮುಖ್ಯಸ್ಥರನ್ನು ರಾಜ್ಯಪಾಲ ಎಂದು ಕರೆಯುತ್ತಾರೆ.ಕಾರ್ಯಾಂಗದ ನಿಜವಾದ ಮುಖ್ಯಸ್ಥರು ಮುಖ್ಯಮಂತ್ರಿಗಳಾಗಿದ್ದರೂ ರಾಜ್ಯಪಾಲರು ರಾಜ್ಯಗಳ ಮುಖ್ಯಸ್ಥರಾಗಿರುತ್ತಾರೆ.ರಾಜ್ಯಪಾಲರನ್ನು ರಾಷ್ಟ್ರಪತಿಗಳು ನೇಮಿಸುತ್ತಾರೆ. ರಾಜ್ಯಪಾಲರ ಅಧಿಕಾರಾವಧಿ ೫ ವರ್ಷಗಳು.ಕೇಂದ್ರದಲ್ಲಿ ರಾಷ್ಟ್ರಪತಿ ಇದ್ದಂತೆ ರಾಜ್ಯದಲ್ಲಿ ರಾಜ್ಯಪಾಲ ಇರಬೇಕಾಗುತ್ತದೆ. ಭಾರತದ ಸಂವಿಧಾನದಲ್ಲಿ ರಾಜ್ಯದ ಶಾಸನ ರಚನಾ ಅಧಿಕಾರ ಹಾಗೂ ನ್ಯಾಯಾಂಗದ ಅಧಿಕಾರ ಹೊರತುಪಡಿಸಿ ಇರುವ ಉಳಿದೆಲ್ಲ ಅಧಿಕಾರವನ್ನು ರಾಜ್ಯಪಾಲರು ಇಲ್ಲವೆ ಅವರ ಹೆಸರಿನಲ್ಲಿಯೇ ನಿರ್ವಹಣೆ ಮಾಡಬೇಕಾಗುತ್ತದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಅಂತರರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆ
ಅಂತರರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆಯು ಸ್ವಿಟ್ಜರ್ಲ್ಯಾಂಡ್ ದೇಶದ ಜಿನೀವ ನಗರದಲ್ಲಿ ಸ್ಥಿತವಾಗಿರುವ ಒಂದು ಜನಸೇವಾಪರ ಸಂಸ್ಥೆ. ಜಿನೀವ ಒಪ್ಪಂದಗಳಲ್ಲಿ ಭಾಗಿಯಾಗಿರುವ ದೇಶಗಳು ಯುದ್ಧ ಕಾಲದಲ್ಲಿ ಈ ಸಂಸ್ಥೆಗೆ ಯುದ್ಧದಿಂದ ಪ್ರಭಾವಿತರಾಗಿರುವವರನ್ನು ಚಿಕಿತ್ಸೆ ನೀಡುವ ಹಕ್ಕನ್ನು ನೀಡಿವೆ. ೧೮೬೪ರಲ್ಲಿ ಹೆನ್ರಿ ಡುನಾಂಟ್ ಅವರಿಂದ ಸ್ಥಾಪಿತವಾದ ಈ ಸಂಸ್ಥೆಗೆ ೧೯೧೭, ೧೯೪೪ ಮತ್ತು ೧೯೬೩ರ ನೊಬೆಲ್ ಶಾಂತಿ ಪುರಸ್ಕಾರಗಳು ದೊರಕಿವೆ.
ಪರಿಸರ ವ್ಯವಸ್ಥೆ ಎಂದರೆ ಪರಿಸರದ ಭೌತಿಕವಾದ ಮತ್ತು ಜೈವಿಕವಾದ ಸಂಯೋಜಿತ ಘಟಕಗಳಿಗೆ ಅನ್ವಯಿಸುತ್ತದೆ. ಪರಿಸರ ವ್ಯವಸ್ಥೆ ಒಂದು ನೈಸರ್ಗಿಕ ಪರಿಸರದೊಳಗಿನ ಪ್ರದೇಶವಾಗಿದೆ.ಈ ಪರಿಸರದಲ್ಲಿ ನಾವು ಜೈವಿಕ ಮತ್ತು ಅಜೈವಿಕ ವಸ್ತುಗಳು ಅಂದರೆ, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೈವಿಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ. ಪರಿಸರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಅಥವಾ ಶಾಶ್ವತ ವ್ಯವಸ್ಥೆಯನ್ನು ಕಾಣಬಹುದು ಮತ್ತು ಸಾಮಾನ್ಯವಾಗಿ ಒಂದು ಅಸಂಖ್ಯಾತ ಆಹಾರ ಜಾಲಗಳನ್ನು ರೂಪಿಸುತ್ತವೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಇದು ಭಾರತದ ಒಂದು ಕೇಂದ್ರೀಯ ಸಂಸ್ಥೆಯಾಗಿದ್ದು ಸಾರ್ವಜನಿಕ ಸೇವೆಗೆ ರಾಷ್ಟ್ರ ಮಟ್ಟದಲ್ಲಿ ಪರೀಕ್ಷೆಗಳನ್ನು ನಡೆಸಿ ಲೋಕ ಸೇವಾ ಅಧಿಕಾರಿಗಳನ್ನು ಆಯ್ಕೆ ಮಾಡುವ ಕಾರ್ಯದಲ್ಲಿ ತೊಡಗುವ ಅಧಿಕಾರವನ್ನು ಹೊಂದಿದೆ. ಭಾರತೀಯ ನಾಗರೀಕ ಸೇವಾ ಪರೀಕ್ಷೆ, ಇಂಜಿನಿಯರಿಂಗ್ ಸೇವಾ ಪರೀಕ್ಷೆ, ಕಂಬೈನ್ಡ್ ಡಿಫೆನ್ಸ್ ಸೇವಗಳ ಪರೀಕ್ಷೆ, ರಾಷ್ಟ್ರೀಯ ಸೇನಾ ಅಕಾಡೆಮಿ ಪರೀಕ್ಷೆ,ಜಲ ಸೇನಾ ಅಕಾಡೆಮಿ ಪರೀಕ್ಷೆ, ಭಾರತೀಯ ಅರಣ್ಯ ಸೇವೆ ಪರೀಕ್ಷೆ, ಭಾರತೀಯ ಅರ್ಥ ಸೇವೆ ಪರೀಕ್ಷೆ, ಭಾರತೀಯ ಸಂಖ್ಯಾ ಸೇವೆ ಪರೀಕ್ಷೆ, ಸಂಯೋಜಿತ ಭೂಗರ್ಭವಿಜ್ಞಾನ ಹಾಗು ಭೂಗರ್ಭ ತಜ್ಞರ ಪರೀಕ್ಷೆ ಹಾಗು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಪರೀಕ್ಷೆಗಳನ್ನು ಕೇಂದ್ರ ಲೋಕ ಸೇವಾ ಆಯೋಗವು ಕಾಲ ಕಾಲಕ್ಕೆ ತಕ್ಕಂತೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ. ಪರೀಕ್ಷೆಗಳು ಅಭ್ಯರ್ಥಿಯ ಮಾನಸಿಕ ಸಾಮರ್ಥ್ಯ, ಭೌದ್ದಿಕ ಸಾಮರ್ಥ್ಯಗಳನ್ನು ಅಳೆಯುವ ಬಹು ಮುಖ್ಯ ಸಾಧನಗಳಾಗಿರುತ್ತವೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.