The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೂಕಾಂಬಿಕಾ ದೇವಿಗೆ ಸಮರ್ಪಿಸಲಾದ ಕೊಲ್ಲೂರಿನ ಮೂಕಾಂಬಿಕಾ ದೇವಿ ದೇವಸ್ಥಾನವು (ಕನ್ನಡ:ಮೂಕಾಂಬಿಕಾ ದೇವಿ), ಭಾರತದ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿನ ಜನರಿಗೆ ಸಂಬಂಧಿಸಿದಂತಿರುವ ಅತ್ಯಂತ ಪ್ರಸಿದ್ಧ ಪೂಜಾ ಸ್ಥಳಗಳ ಪೈಕಿ ಒಂದೆನಿಸಿದೆ. ಸೌಪರ್ಣಿಕಾ ನದಿಯ ದಂಡೆಗಳು ಮತ್ತು ಸೊಂಪಾಗಿ ರಸಭರಿತವಾಗಿರುವ ಹಸಿರು ಹುಲ್ಲಿನಿಂದಾವೃತವಾದ ಕೊಡಚಾದ್ರಿ ಬೆಟ್ಟದಿಂದ ಸಾದರಪಡಿಸಲ್ಪಟ್ಟಿರುವ ಚಿತ್ರಸದೃಶ ಪರಿಸರದಲ್ಲಿ, ಮಂಗಳೂರಿನಿಂದ ೧೪೭ ಕಿ.ಮೀ.ಗಳಷ್ಟು ಅಂತರದಲ್ಲಿ ನೆಲೆಗೊಂಡಿರುವ ಈ ದೇವಸ್ಥಾನವು ಪ್ರತಿವರ್ಷವೂ ಲಕ್ಷಗಟ್ಟಲೆ ಯಾತ್ರಾರ್ಥಿಗಳನ್ನು ಆಕರ್ಷಿಸುತ್ತದೆ. ಹಿಂದುಗಳು ಪೂಜ್ಯಭಾವನೆಯಿಂದ ಕಾಣಲ್ಪಡುವ ಜಗದ್ಗುರು ಆದಿ ಶಂಕರಾಚಾರ್ಯರೊಂದಿಗೆ ಈ ದೇವಸ್ಥಾನವು ಸಂಬಂಧವನ್ನು ಹೊಂದಿರುವ ಕ್ಷೇತ್ರವಾಗಿರುವುದರಿಂದ, ಭಕ್ತ-ಸಮುದಾಯಕ್ಕೆ ಸಂಬಂಧಿಸಿದಂತೆ ಇದು ಅಗಾಧವಾದ ಪ್ರಸ್ತುತತೆಯನ್ನು ಹೊಂದಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಾಕ್ಸೈಟ್ ದು ಅಲ್ಯುಮಿನಿಯಮ್ನ ಉತ್ಪಾದನೆಯಲ್ಲಿ ಬಳಕೆಯಾಗುವ ಅದಿರು.ಇದನ್ನು ಘರ್ಷಕಗಳ (abrasives) ಗಳ ತಯಾರಿಕೆಯಲ್ಲಿ ಉಪಯೋಗಿಸಲಾಗುತ್ತದೆ.ಉಕ್ಕು ಕರಗಿಸುವ ಕುಲುಮೆಗಳ ತಯಾರಿಯಲ್ಲಿ ಬಾಕ್ಸೈಟ್ ಮಿಶ್ರಿತ ಜೇಡಿಮಣ್ಣನ್ನು ಉಪಯೋಗಿಸುತ್ತಾರೆ.ಔಷದಗಳ ತಯಾರಿಯಲ್ಲಿ ಬಳಸುವ ಪಟಿಕ(Alum) ಇದರ ಉಪ ಉತ್ಪನ್ನವಾಗಿದೆ.ಇದು ಪ್ರಥಮ ಬಾರಿಗೆ ಪತ್ತೆಯಾದ ಸ್ಥಳವಾದ ಪ್ರಾನ್ಸ್ ನ ಲೆಸ್ ಬಾಕ್ಸ್ (Les Baux)ನ ಹೆಸರು ಇದರ ಹೆಸರಿನಲ್ಲಿ ಸೇರಿಕೊಂಡಿದೆ. ಬಾಕ್ಸೈಟ್ನಲ್ಲಿ ಮುಖ್ಯವಾಗಿ ಅಲ್ಯುಮಿನಿಯಮ್ ಹೈಡ್ರಾಕ್ಸೈಡ್ ಇರುತ್ತದೆ. ಹೆಚ್ಚಿನ ಬಾಕ್ಸೈಟ್ ನಲ್ಲಿ ೩೦ ರಿಂದ ೬೦ ಶೇಕಡಾ ಅಲ್ಯುಮಿನಿಯಮ್ ಇದ್ದು,೧೨ ರಿಂದ ೩೦ ಶೇಕಡಾ ನೀರು ಇರುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಬಾಬಾ ರಾಮ್ ಚಂದ್ರ (೧೮೬೪/೧೮೭೫-೧೯೫೦) ಒಬ್ಬ ಭಾರತೀಯ ಕಾರ್ಮಿಕ ಸ೦ಘವಾದಿ ಆಗಿದ್ದು, ೧೯೨೦ ಮತ್ತು ೧೯೩೦ ರ ದಶಕದಲ್ಲಿ ಭೂಮಾಲೀಕರ ದೌರ್ಜನ್ಯದ ವಿರುದ್ಧ ಹೋರಾಡಲು ಒಂದು ಸಂಘಟಿತ ವಲಯದ ಅಗತ್ಯ ವನ್ನು ಅರಿತು, ಅವಧ್ ರೈತರನ್ನು ಸಂಘಟಿಸಿದರು. ಅವರು ಫಿಜಿಯ ಇತಿಹಾಸ ದಲ್ಲಿ ಒಬ್ಬ ಪ್ರಭಾವಿ ವ್ಯಕ್ತಿಯಾಗಿದ್ದರು . ೧೨ ವರ್ಷಗಳ ಕಾಲ ಫಿಜಿ ಯಲ್ಲಿ ಒಪ್ಪ೦ದದ ಕಾರ್ಮಿಕರಾಗಿ ಬದುಕ್ಕಿದ್ದು ,ಒಪ್ಪ೦ದದ ಕಾರ್ಮಿಕರಾಗಿ ದುಡಿಯುವ ಕಾರ್ಮಿಕ ಪದ್ದತಿ ಯನ್ನುಕೊನೆಗೊಳಿಸಲು ಸ್ಫೂರ್ತಿ ಯಾಯಿತು. .
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಹಿಂದು ಧರ್ಮ ಎಂದರೆ ಅದು ಮಾನವ ಧರ್ಮ, ಅನಂತ ಸತ್ಯ ಧರ್ಮ, ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
2014 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ಯೋಗದ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ ಯೋಗವು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ತಮ್ಮ ಯುಎನ್ ಭಾಷಣದಲ್ಲಿ ಜೂನ್ 21 ರ ದಿನಾಂಕವನ್ನು ಸೂಚಿಸಿದ್ದರು. ಏಕೆಂದರೆ ಇದು ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾಗಿದೆ ಮತ್ತು ಪ್ರಪಂಚದ ಅನೇಕ ಭಾಗಗಳಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹಂಚಿಕೊಳ್ಳುತ್ತದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮಹರ್ಷಿ ವಾತ್ಸ್ಯಾಯನ ಕೃತವಾದ ಕಾಮಸೂತ್ರವೆಂಬ ಪ್ರಾಚೀನ ಭಾರತೀಯ ಸಂಸ್ಕೃತ ಗ್ರಂಥ ಮಾನವನ ಲೈಂಗಿಕ ವರ್ತನೆ ಮತ್ತು ಭಾರತೀಯ ಪುರುಷಾರ್ಥ ಚಿಂತನೆಯನ್ನು ಕುರಿತ ಪ್ರಮಾಣಿತ ಕೃತಿಯೆಂಬುದು ಪಂಡಿತಜನ ವೇದ್ಯವಾದ ವಿಷಯ. ವಾತ್ಸ್ಯಾಯನ ಕಾಮಸೂತ್ರವು ಪ್ರಧಾನವಾಗಿ ಸಂಭೋಗ ಭಂಗಿಗಳನ್ನು ಕುರಿತ ಲೈಂಗಿಕ ಕೈಪಿಡಿಯಲ್ಲ.ಅದು ಚೆನ್ನಾಗಿ ಬದುಕುವ ಕಲೆ, ಪ್ರೀತಿಯ ಸ್ವರೂಪ, ಸಂಗಾತಿಗಳನ್ನು ಹುಡುಕುವ ಕ್ರಮ, ಲೈಂಗಿಕ ಜೀವನವನ್ನು ಕಾಪಾಡಿಕೊಳ್ಳುವುದು ಮತ್ತು ಆನಂದ-ಆಧಾರಿತ ಸಾಮರ್ಥ್ಯಗಳಿಗೆ ಸಂಬಂಧಿಸಿದ ಇತರ ಅಂಶಗಳನ್ನು ಕುರಿತು ಮಾರ್ಗದರ್ಶಿಯಾಗಿದೆ. ಇದು ವಿಭಿನ್ನ ಭಾಷ್ಯಗಳೊಂದಿಗೆ (ವ್ಯಾಖ್ಯಾನಗಳು) ಆಧುನಿಕ ಯುಗದಲ್ಲಿ ಉಳಿದುಕೊಂಡಿರುವ ಸಂಕ್ಷಿಪ್ತ ಪೌರುಷ ಪದ್ಯಗಳನ್ನು ಹೊಂದಿರುವ ಸೂತ್ರ ವಿಭಾಗದ ಗ್ರಂಥವಾಗಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಮೈಲಾರ ಲಿಂಗೇಶ್ವರ ದೇವಸ್ಥಾನ, ಮೈಲಾರ
ಕರ್ನಾಟಕದ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ಅಲ್ಲಿರುವ ಒಂದು ಪ್ರಸಿದ್ದ ಸ್ಥಳ. ತುಂಗಭದ್ರ ನದಿಯಿಂದ ೨ಕಿಮಿ, ಹೂವಿನ ಹಡಗಲಿ ಇಂದ ೪೦ಕಿಮಿ , ರಾಣೆಬೆನ್ನುರಿನಿಂದ ೩೪ಕಿಮಿ ದೂರದಲ್ಲಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಇದೇ ರೀತಿಯ ಹೇಳಿಕೆ ಇಲ್ಲಿಯ ಕಾರಣಿಕೋತ್ಸವದಲ್ಲಿ ಕೇಳಿಬಂದಿತ್ತು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.
ವಿಜಯದಾಸ(೧೬೮೨– ೧೭೫೫) ೧೮ ನೇ ಶತಮಾನದಲ್ಲಿ ಕರ್ನಾಟಕದ, ಹರಿದಾಸ ಸಂಪ್ರದಾಯದ ಪ್ರಮುಖ ಸಂತ ಮತ್ತು ದ್ವೈತ ತತ್ವಶಾಸ್ತ್ರದ ಸಂಪ್ರದಾಯದ ವಿದ್ವಾಂಸ. ಸಮಕಾಲೀನ ಹರಿದಾಸ ಸಂತರಾದ ಗೋಪಾಲ ದಾಸ, ಹೆಳವನಕಟ್ಟೆ ಗಿರಿಯಮ್ಮ, ಜಗನ್ನಾಥ ದಾಸ ಮತ್ತು ಪ್ರಸನ್ನ ವೆಂಕಟ ದಾಸರೊಂದಿಗೆ, ಅವರು ಕನ್ನಡ ಭಾಷೆಯಲ್ಲಿ ಬರೆದ ದೇವರನಾಮ ಎಂಬ ಭಕ್ತಿಗೀತೆಗಳ ಮೂಲಕ ದಕ್ಷಿಣ ಭಾರತದಾದ್ಯಂತ ಮಧ್ವಾಚಾರ್ಯರ ತತ್ವಶಾಸ್ತ್ರದ ಸದ್ಗುಣಗಳನ್ನು ಪ್ರಚಾರ ಮಾಡಿದರು.ಕನ್ನಡ ವೈಷ್ಣವ ಭಕ್ತಿ ಸಾಹಿತ್ಯದ ಅವಿಭಾಜ್ಯ ಅಂಗವಾಗಿದ್ದು, ಹಿಂದೂ ದೇವರು ವಿಷ್ಣು ಮತ್ತು ಇತರ ದೇವತೆಗಳನ್ನು ಸ್ತುತಿಸುವ ಈ ಸಂಯೋಜನೆಗಳನ್ನು ದಾಸರ ಪದಗಳು (ದಾಸರ ಸಂಯೋಜನೆಗಳು) ಎಂದು ಕರೆಯಲಾಗುತ್ತದೆ. ಅವರು ತಮ್ಮ ಸಂಯೋಜನೆಗಳ ಮೂಲಕ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ಎರಡನ್ನೂ ಪ್ರಭಾವಿಸಿದ್ದಾರೆ.