The most-visited ಕನ್ನಡ Wikipedia articles, updated daily. Learn more...
ಮುಚ್ಚಳವು ಒಂದು ಧಾರಕದ ಭಾಗವಾಗಿದ್ದು, ಮುಚ್ಚುವಿಕೆ ಅಥವಾ ಮುಚ್ಚಿಗೆಯ ಕಾರ್ಯನಿರ್ವಹಿಸುತ್ತದೆ ಮತ್ತು ಸಾಮಾನ್ಯವಾಗಿ ಒಂದು ವಸ್ತುವನ್ನು ಸಂಪೂರ್ಣವಾಗಿ ಮುಚ್ಚುತ್ತದೆ. ಮುಚ್ಚಳಗಳನ್ನು ಡಬ್ಬಿಗಳಂತಹ ಸಣ್ಣ ಧಾರಕಗಳ ಮೇಲೆ ಜೊತೆಗೆ ತೆರೆದ ಶಿರದ ಕೊಳಗಗಳು ಹಾಗೂ ಪೀಪಾಯಿಗಳ ಮೇಲೆ ಹೆಚ್ಚು ದೊಡ್ಡ ಮುಚ್ಚಳಗಳನ್ನು ಇರಿಸಬಹುದು. ಕೆಲವು ಮುಚ್ಚಳಗಳು ಅವನ್ನು ಬಯಸಿದಾಗ ಅಥವಾ ಅಧಿಕೃತವಾಗಿ ತೆರೆಯುವವರೆಗೆ ಭದ್ರವಾಗಿ ಹಿಡಿದಿಡಲು ನೆರವಾಗುವ ಭದ್ರತಾ ಪಟ್ಟಿ ಅಥವಾ ಅನಧಿಕೃತ ಮಾರ್ಪಾಟು ಸ್ಪಷ್ಟವಾಗುವ ಪಟ್ಟಿಯನ್ನು ಹೊಂದಿರುತ್ತವೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ವನಸ್ಪತಿ ಯು ಸಾಂಪ್ರದಾಯಿಕ ಅಥವಾ ಜಾನಪದ ಔಷಧ ಪ್ರಕಾರವಾಗಿದ್ದು, ಇದು ಸಸ್ಯ ಮತ್ತು ಸಸ್ಯಜನ್ಯ ಸಾರ, ಸತ್ವಗಳ ಬಳಕೆಯನ್ನವಲಂಭಿಸಿದೆ. ಈ ವನಸ್ಪತಿಯು ಸಸ್ಯಗಳ ಔಷಧಿ, ಔಷಧೀಯ ವನಸ್ಪತಿ, ಗಿಡಮೂಲಿಕೆಗಳ ಔಷಧಿ, ಮೂಲಿಕಾಶಾಸ್ತ್ರ ಮತ್ತು ಮೂಲಿಕಾ ಚಿಕಿತ್ಸೆ ಎಂಬ ಹೆಸರುಗಳಿಂದಲೂ ಕರೆಯಲ್ಪಡುತ್ತದೆ. ಗಿಡಮೂಲಿಕೆಗಳ ಔಷಧಿಯ ವ್ಯಾಪ್ತಿಯು ಕೆಲವೊಮ್ಮೆ ಶಿಲೀಂಧ್ರಗಳು ಮತ್ತು ಜೇನುಹುಳುಗಳ ಉತ್ಪನ್ನಗಳಿಗೂ ಹರಡಿದ್ದು, ಖನಿಜಾಂಶಗಳು, ಚಿಪ್ಪುಗಳು ಹಾಗೂ ಕೆಲವು ಪ್ರಾಣಿಗಳ ದೇಹದ ಭಾಗಗಳನ್ನೂ ಒಳಗೊಂಡಿರುತ್ತವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಅರ್ನೆಸ್ಟೊ ಗುವೇರಾ (ಜೂನ್ ೧೪, ೧೯೨೮ - ಅಕ್ಟೋಬರ್ ೯, ೧೯೬೭), ಜನಪ್ರಿಯವಾಗಿ ಚೇ ಗುವೇರಾ, ಎಲ್ ಚೇ ಅಥವಾ ಬರಿ ಚೇ ಎಂದು ಕರೆಯಲ್ಪಡುವ ಇವರು ಅರ್ಜೆಂಟೀನಾದ ಮಾರ್ಕ್ಸ್ವಾದಿ ಕ್ರಾಂತಿಕಾರಿ, ವೈದ್ಯ, ಲೇಖಕ, ಗೆರಿಲ್ಲಾ ನಾಯಕ, ರಾಜತಾಂತ್ರಿಕ ಮತ್ತು ಮಿಲಿಟರಿ ಸಿದ್ಧಾಂತಿ. ಕ್ಯೂಬನ್ ಕ್ರಾಂತಿಯ ಪ್ರಮುಖ ವ್ಯಕ್ತಿಯಾಗಿದ್ದು, ಅವರ ಶೈಲೀಕೃತ ನೋಟವು ದಂಗೆಯ ಸರ್ವತ್ರ ಪ್ರತಿ-ಸಾಂಸ್ಕೃತಿಕ ಸಂಕೇತವಾಗಿತ್ತು ಮತ್ತು ಜನಪ್ರಿಯ ಸಂಸ್ಕೃತಿಯಲ್ಲಿ ಜಾಗತಿಕ ಚಿಹ್ನೆಯಾಗಿತ್ತು. ಚೆ ಗುವೆರ ೧೯೨೮ ಲ್ಲಿ ರೊಸಾರಿಯೋ,ಅರ್ಜೆಂಟೀನದಲ್ಲಿ ಹುಟ್ಟಿದರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಬಂಗೀ ಜಿಗಿತ ವು (ಇದನ್ನು "ಬಂಗಿ" ಜಿಗಿತ ಎಂದೂ ಉಚ್ಚರಿಸಲಾಗುತ್ತದೆ) ಒಂದು ಸಾಹಸ ಚಟುವಟಿಕೆಯಾಗಿದ್ದು, ಸ್ಥಿತಿಸ್ಥಾಪಕ ಗುಣವುಳ್ಳ ಒಂದು ದೊಡ್ಡದಾದ ಹಗ್ಗಕ್ಕೆ ಕಟ್ಟಿಕೊಂಡು ಒಂದು ಎತ್ತರವಾದ ಕಟ್ಟಡ ಅಥವಾ ರಚನೆಯಿಂದ ಜಿಗಿಯುವುದನ್ನು ಇದು ಒಳಗೊಂಡಿರುತ್ತದೆ. ಎತ್ತರವಾದ ರಚನೆಯು ಸಾಮಾನ್ಯವಾಗಿ ಒಂದು ಕಟ್ಟಡ, ಸೇತುವೆ ಅಥವಾ ಕ್ರೇನಿನಂಥ ಒಂದು ನೆಲೆಗೊಳಿಸಿದ ಅಥವಾ ಸ್ಥಾಯಿಯಾಗಿರುವ ವಸ್ತುವಾಗಿರುತ್ತದೆ; ಆದರೆ, ನೆಲದ ಮಟ್ಟದಿಂದ ಮೇಲಕ್ಕೆ ತೂಗಾಡುವ ಸಾಮರ್ಥ್ಯವನ್ನು ಹೊಂದಿರುವ, ಒಂದು ಬಿಸಿ-ಗಾಳಿಯ-ಬಲೂನು ಅಥವಾ ಹೆಲಿಕಾಪ್ಟರ್ನಂಥ ಒಂದು ಚಲಿಸಬಲ್ಲ ವಸ್ತುವಿನಿಂದಲೂ ಜಿಗಿತವನ್ನು ಕೈಗೊಳ್ಳುವುದು ಸಾಧ್ಯವಿದೆ. ಹಿಂಪುಟಿತಗಳಿಂದ ಸಿಗುವಷ್ಟೇ ಪ್ರಮಾಣದಲ್ಲಿ ಮುಕ್ತ-ಜಿಗಿತದಿಂದಲೂ ರೋಮಾಂಚನವು ಸಿಗುತ್ತದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಮೂಕಾಂಬಿಕಾ ದೇವಿಗೆ ಸಮರ್ಪಿಸಲಾದ ಕೊಲ್ಲೂರಿನ ಮೂಕಾಂಬಿಕಾ ದೇವಿ ದೇವಸ್ಥಾನವು (ಕನ್ನಡ:ಮೂಕಾಂಬಿಕಾ ದೇವಿ), ಭಾರತದ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿನ ಜನರಿಗೆ ಸಂಬಂಧಿಸಿದಂತಿರುವ ಅತ್ಯಂತ ಪ್ರಸಿದ್ಧ ಪೂಜಾ ಸ್ಥಳಗಳ ಪೈಕಿ ಒಂದೆನಿಸಿದೆ. ಸೌಪರ್ಣಿಕಾ ನದಿಯ ದಂಡೆಗಳು ಮತ್ತು ಸೊಂಪಾಗಿ ರಸಭರಿತವಾಗಿರುವ ಹಸಿರು ಹುಲ್ಲಿನಿಂದಾವೃತವಾದ ಕೊಡಚಾದ್ರಿ ಬೆಟ್ಟದಿಂದ ಸಾದರಪಡಿಸಲ್ಪಟ್ಟಿರುವ ಚಿತ್ರಸದೃಶ ಪರಿಸರದಲ್ಲಿ, ಮಂಗಳೂರಿನಿಂದ ೧೪೭ ಕಿ.ಮೀ.ಗಳಷ್ಟು ಅಂತರದಲ್ಲಿ ನೆಲೆಗೊಂಡಿರುವ ಈ ದೇವಸ್ಥಾನವು ಪ್ರತಿವರ್ಷವೂ ಲಕ್ಷಗಟ್ಟಲೆ ಯಾತ್ರಾರ್ಥಿಗಳನ್ನು ಆಕರ್ಷಿಸುತ್ತದೆ. ಹಿಂದುಗಳು ಪೂಜ್ಯಭಾವನೆಯಿಂದ ಕಾಣಲ್ಪಡುವ ಜಗದ್ಗುರು ಆದಿ ಶಂಕರಾಚಾರ್ಯರೊಂದಿಗೆ ಈ ದೇವಸ್ಥಾನವು ಸಂಬಂಧವನ್ನು ಹೊಂದಿರುವ ಕ್ಷೇತ್ರವಾಗಿರುವುದರಿಂದ, ಭಕ್ತ-ಸಮುದಾಯಕ್ಕೆ ಸಂಬಂಧಿಸಿದಂತೆ ಇದು ಅಗಾಧವಾದ ಪ್ರಸ್ತುತತೆಯನ್ನು ಹೊಂದಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
2014 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ಯೋಗದ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ ಯೋಗವು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ತಮ್ಮ ಯುಎನ್ ಭಾಷಣದಲ್ಲಿ ಜೂನ್ 21 ರ ದಿನಾಂಕವನ್ನು ಸೂಚಿಸಿದ್ದರು. ಏಕೆಂದರೆ ಇದು ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾಗಿದೆ ಮತ್ತು ಪ್ರಪಂಚದ ಅನೇಕ ಭಾಗಗಳಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹಂಚಿಕೊಳ್ಳುತ್ತದೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಭಾರತದ ಗಡಿಗಳು ಮತ್ತು ನರೆ ರಾಜ್ಯಗಳು
ಭಾರತವು 1947ರಲ್ಲಿ ಸ್ವತಂತ್ರ ರಾಷ್ಟ್ರವಾದ ನಂತರ ಅದರ ನೆರೆಹೊರೆಯ ಸಾರ್ವಭೌಮ ರಾಷ್ಟ್ರಗಳಾದ ಅಫ್ಘಾನಿಸ್ತಾನ್, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನಗಳೊಂದಿಗೆ ಅಂತರರಾಷ್ಟ್ರೀಯ ಭೂ ಗಡಿಗಳನ್ನು ಹೊಂದಿದೆ. ಕಾಶ್ಮೀರ ವಿವಾದದ ಪರಿಣಾಮ ಪಾಕಿಸ್ತಾನದೊಂದಿಗೆ ಗಡಿ ನಿಯಂತ್ರಣ ನಿಯಂತ್ರಣ (ಎಲ್ಒಸಿ) ರೇಖೆಯನ್ನು ಹೊಂದಿದೆ. ಈ ಎಲ್ಲಾ ಗಡಿ ಮತ್ತು ನಿಯಂತ್ರಣ (ಎಲ್ಒಸಿ) ರೇಖೆಯ ರಕ್ಷಣೆಯ ಹೊಣೆಯನ್ನೂ ಹೊಂದಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.
ಅರ್ಜುನನು ಹಿಂದು ಪುರಾಣಗಳಲ್ಲಿ ಒಂದಾದ ಮಹಾಭಾರತದ ನಾಯಕರಲ್ಲಿ ಸಾರಥಿಯೂ, ಆಪ್ತ ಮಿತ್ರನೂ ಆಗಿದ್ದ ಶ್ರೀಕೃಷ್ಣ ಪರಮಾತ್ಮನು ಮನವೂಲಿಸಿದನು. ಯುದ್ಧದಲ್ಲಿ ಅಡಕವಾಗಿರುವ ವಿಷಯಗಳು, ಧೈರ್ಯ, ಯೋಧನೋರ್ವನ ಕರ್ತವ್ಯ, ಮಾನವ ಜೀವನದ ಹಾಗೂ ಆತ್ಮದ ಸ್ವಭಾವ ಹಾಗೂ ದೇವರುಗಳ ಪಾತ್ರ ಇವೇ ಮುಂತಾದವುಗಳಿಂದ ಕೂಡಿದ್ದ ಇವರ ನಡುವಿನ ಸಂಭಾಷಣೆಯು ಮಹಾಭಾರತದ ಅತೀ ಪ್ರಮುಖ ಪ್ರಸಂಗಗಳಲ್ಲಿ ಒಂದಾದ ಭಗವದ್ಗೀತೆಯವಸ್ತುವಾಗಿದೆ. ಕಡೆಯಲ್ಲಿ ಈತನ ಪರಮ ಪ್ರತಿಸ್ಫರ್ಧಿಯಾದ ಕರ್ಣನನ್ನು ಕೊಲ್ಲುವುದರಲ್ಲಿ ಅರ್ಜುನನು ಪ್ರಮುಖ ಪಾತ್ರವನ್ನು ವಹಿಸಿದ್ದನು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ವಿಶ್ವ ಪರಿಸರ ದಿನವನ್ನು ( ಡಬ್ಲ್ಯೂಇಡಿ ) ವಾರ್ಷಿಕವಾಗಿ ಜೂನ್ 5 ರಂದು ಆಚರಿಸಲಾಗುತ್ತದೆ ಮತ್ತು ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮವನ್ನು ಉತ್ತೇಜಿಸುತ್ತದೆ. ಇದು ಅನೇಕ ಸರ್ಕಾರೇತರ ಸಂಸ್ಥೆಗಳು, ವ್ಯವಹಾರಗಳು, ಸರ್ಕಾರಿ ಘಟಕಗಳಿಂದ ಬೆಂಬಲಿತವಾಗಿದೆ ಮತ್ತು ಪರಿಸರವನ್ನು ಬೆಂಬಲಿಸುವ ಪ್ರಾಥಮಿಕ ವಿಶ್ವಸಂಸ್ಥೆಯ ಎಲ್ಲರಿಗೂ ತಲುಪುವ ಜಾಗೃತಿ ದಿನವನ್ನು ಪ್ರತಿನಿಧಿಸುತ್ತದೆ. ಮೊದಲ ಬಾರಿಗೆ 1973 ರಲ್ಲಿ ಆಯೋಜಿಸಲಾಯಿತು, ಇದು ಸಮುದ್ರ ಮಾಲಿನ್ಯ, ಅಧಿಕ ಜನಸಂಖ್ಯೆ, ಜಾಗತಿಕ ತಾಪಮಾನ ಏರಿಕೆ, ಸುಸ್ಥಿರ ಅಭಿವೃದ್ಧಿ ಮತ್ತು ವನ್ಯಜೀವಿ ಅಪರಾಧಗಳಂತಹ ಪರಿಸರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿದೆ.
ನಾಗಪ್ಪ ವೀರಾಸ್ವಾಮಿ (೧೭ ಏಪ್ರಿಲ್ ೧೯೩೨ – ೨೩ ಆಗಸ್ಟ್ ೧೯೯೨)- ಕನ್ನಡ ಚಲನಚಿತ್ರ ನಿರ್ಮಾಪಕ ಮತ್ತು ವಿತರಕ, ಈಶ್ವರಿ ಪ್ರೊಡಕ್ಷನ್ಸ್ ಸಂಸ್ಥೆಯ ಅಡಿಯಲ್ಲಿ ೧೯೭೦ ರಿಂದ ಆರಂಭಿಸಿ ೧೯೯೨ ರಲ್ಲಿ ತಮ್ಮ ಸಾವಿನ ತನಕದ ಅವಧಿಯಲ್ಲಿ ೧೭ ಕನ್ನಡ ಚಿತ್ರಗಳನ್ನು ಮತ್ತು ಒಂದು ಹಿಂದಿ ಚಿತ್ರವನ್ನು ನಿರ್ಮಿಸಿದ್ದಾರೆ. ಅವರು ಕನ್ನಡ ಚಿತ್ರ ತಾರೆ ಮತ್ತು ತಾರಾನಿರ್ದೇಶಕ ವಿ. ರವಿಚಂದ್ರನ್ ಅವರ ತಂದೆ.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ವೀರಾಸ್ವಾಮಿ ರವಿಚಂದ್ರನ್ ಕನ್ನಡ ಚಿತ್ರರಂಗದಲ್ಲಿ ವಿ.ರವಿಚಂದ್ರನ್ ಎನ್ನುವ ಹೆಸರಿನಲ್ಲಿ ಪ್ರಸಿದ್ಧರು. ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ಮತ್ತು ಬೆಳ್ಳಿಪರದೆಗೆ ಹೊಸರಂಗು ತಂದ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಅನೇಕ ರೀಮೇಕ್ ಸಿನಿಮಾಗಳನ್ನು ಕನ್ನಡಕ್ಕೆ ತಂದರೂ ಮೂಲಸಿನಿಮಾದ ಛಾಯೆ ಇರದ ತಮ್ಮದೇ ಆದ ಶೈಲಿಯಲ್ಲಿ ಕನ್ನಡ ಸೊಗಡಿನ ಸೂಪರ್ ಹಿಟ್ ಗಳನ್ನು ನೀಡಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕರ್ನಾಟಕ ಯುದ್ಧಗಳು : ಭಾರತದ ಕೋರಮಂಡಲ ತೀರಪ್ರದೇಶ ಮತ್ತು ಅದರ ಹಿನ್ನಾಡಿನಲ್ಲಿ ಇಂಗ್ಲಿಷರಿಗೂ ಫ್ರೆಂಚರಿಗೂ ನಡುವೆ ೧೮ನೆಯ ಶತಮಾನದಲ್ಲಿ ನಡೆದ ಯುದ್ಧಗಳು. ಇವು ನಡೆದ ಪ್ರದೇಶವನ್ನು ಐರೋಪ್ಯರು ಕರ್ನಾಟಕವೆಂದು (ಕರ್ನಾಟಿಕ್) ಕರೆಯುತ್ತಿದ್ದುದರಿಂದ ಈ ಯುದ್ಧಗಳಿಗೆ ಕರ್ನಾಟಕ ಯುದ್ಧಗಳೆಂದು ಹೆಸರು ಬಂದಿದೆ. ಯುರೋಪಿನಲ್ಲಿ ಫ್ರೆಂಚರಿಗೂ ಇಂಗ್ಲಿಷರಿಗೂ ನಡುವೆ ಯುದ್ಧ ಸಂಭವಿಸಿದಾಗ ಭಾರತದಲ್ಲೂ ಆರಂಭವಾದ ಈ ಯುದ್ಧಗಳ ತತ್ಕ್ಷಣದ ಕಾರಣಗಳೂ ಫಲಗಳೂ ಅತಿ ಕ್ಷುಲ್ಲಕವೆನಿಸಿದರೂ ಇವುಗಳಿಂದ ಅಂತಿಮವಾಗಿ ಭಾರತದಲ್ಲಿ ಇಂಗ್ಲಿಷರ ಸ್ಥಾನ ಭದ್ರವಾಗಿ ಫ್ರೆಂಚರ ಬಲ ಕುಂದಿದ್ದರಿಂದ ಈ ದೇಶದ ಚರಿತ್ರೆಯಲ್ಲಿ ಕರ್ನಾಟಕ ಯುದ್ಧಗಳನ್ನು ಅತ್ಯಂತ ಪ್ರಮುಖ ಘಟನೆಗಳೆಂದು ಪರಿಗಣಿಸಲಾಗಿದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಮಹದೇಶ್ವರ ಬೆಟ್ಟ ಕರ್ನಾಟಕದ ದಕ್ಷಿಣ ತುದಿಯ ಗಡಿಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನ ಮುಖ್ಯ ಶ್ರದ್ಧಾಭಕ್ತಿ ಕೇಂದ್ರ. ದೇವಸ್ಥಾನವು ಬೆಟ್ಟಗಳಿಂದ ಸುತ್ತುವರಿದಿರುವ ಕಾರಣ ಮಹದೇಶ್ವರ ಬೆಟ್ಟವೆಂದು ಕರೆಯಲಾಗುತ್ತದೆ. ಪಶ್ಚಿಮಘಟ್ಟಗಳ ಭಾಗದಿಂದ ಆರಂಭವಾಗಿ ಪೂರ್ವಘಟ್ಟಗಳ ಕಡೆಗೆ ಹರಡಿಕೊಂಡಿರುವ ಬೆಟ್ಟ ಸಾಲುಗಳಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಹಬ್ಬಿರುವ ಮಹದೇಶ್ವರ ಬೆಟ್ಟ ದಖನ್ ಪ್ರಸ್ಥಭೂಮಿಯ ಬಹುಮುಖ್ಯ ಭಾಗವೂ ಕೂಡ.
ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಮತ್ತು ಬಂಗಾಳದ ನವಾಬ ಹಾಗೂ ಅವನ ಫ್ರೆಂಚ್ ಬೆಂಬಲಿಗರ ನಡುವೆ ಪ್ಲಾಸಿಯಲ್ಲಿ ನಡೆದ ನಿರ್ಣಾಯಕ ಯುದ್ಧದಲ್ಲಿ ಬ್ರಿಟಿಷರು ಗೆದ್ದು ಮುಂದೆ ೧೯೦ ವರ್ಷಗಳ ಕಾಲ ಭಾರತದಲ್ಲಿ ಬ್ರಿಟಿಷ್ ಆಡಳಿತಕ್ಕೆ ಅಡಿಪಾಯ ಹಾಕಿದರು. ೧೭೫೭ರ ೨೩ನೇ ಜೂನಿನಂದು ಪಶ್ಚಿಮ ಬಂಗಾಳದ, ಭಾಗೀರಥಿ ನದಿಯ ದಂಡೆಯ ಮೇಲಿರುವ, ಪ್ಲಾಸಿಯಲ್ಲಿ ಈ ಯುದ್ಧ ನಡೆಯಿತು. ಈ ಯುದ್ಧದ ಒಂದು ಕಡೆ ಬಂಗಾಳದ ಕೊನೆಯ ಸ್ವತಂತ್ರ ನವಾಬ ಸಿರಾಜುದ್ದೌಲನೂ, ಇನ್ನೊಂದು ಕಡೆ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯೂ ಇದ್ದವು.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.