The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
2014 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ಯೋಗದ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ ಯೋಗವು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ತಮ್ಮ ಯುಎನ್ ಭಾಷಣದಲ್ಲಿ ಜೂನ್ 21 ರ ದಿನಾಂಕವನ್ನು ಸೂಚಿಸಿದ್ದರು. ಏಕೆಂದರೆ ಇದು ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾಗಿದೆ ಮತ್ತು ಪ್ರಪಂಚದ ಅನೇಕ ಭಾಗಗಳಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹಂಚಿಕೊಳ್ಳುತ್ತದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಥಿಯೊಸೊಫಿಕಲ್ ಸೊಸೈಟಿಯು 1875 ರಲ್ಲಿ ರಚನೆಯಾದ ಒಂದು ಸಂಘಟನೆಯಾಗಿದೆ. ಸಮಾಜದಲ್ಲಿ ಯಾವುದೇ ಬೇಧ-ಭಾವ ಇಲ್ಲದ ವಿಶ್ವಭಾತೃತ್ವದ ನಿರ್ಮಾಣ, ವೈಚಾರಿಕತೆಯ ತುಲನಾತ್ಮಕ ಅಧ್ಯಯನ ನಡೆಸುವುದು ಮತ್ತು ಪ್ರಕೃತಿ ನಿಯಮ ಹಾಗೂ ಮಾನವನ ಸುಪ್ತ ಶಕ್ತಿಗಳನ್ನು ಪತ್ತೆ ಹಚ್ಚುವ ಮುಖ್ಯ ಉದ್ದೇಶಗಳಿಂದ ಸ್ಥಾಪಿತವಾಯಿತು. ಈ ಮೂಲ ಸಂಸ್ಥೆ, ವಿಭಜನೆ ಮತ್ತು ಮರುಜೋಡಣೆ ನಂತರ, ಪ್ರಸ್ತುತ ಹಲವಾರು ಉತ್ತರಾಧಿಕಾರಿಗಳನ್ನು ಹೊಂದಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
"ಶ್ರೀ ರಾಮಾಯಣ ದರ್ಶನಂ" ವು ಮಹಾಕಾವ್ಯವಾದ ರಾಮಾಯಣವನ್ನು ಆಧರಿಸಿ ಕುವೆಂಪು ರವರು ರಚಿಸಿದ ಆಧುನಿಕ ಕನ್ನಡ ಸಾಹಿತ್ಯದ ಮೇರು ಕೃತಿಯಾಗಿದ್ದು ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ೧೯೬೮ ರಲ್ಲಿ 'ಜ್ಞಾನಪೀಠ ಪ್ರಶಸ್ತಿ'ಯನ್ನು ಕುವೆಂಪುರವರಿಗೆ ತಂದೊದಗಿಸಿದೆ. ಆಧುನಿಕ ಕನ್ನಡ ಸಾಹಿತ್ಯದ ಮಹೋನ್ನತ ಕೃತಿ. ಮಹಾಕಾವ್ಯಗಳ ರಚನೆಯ ಯುಗ ಮುಗಿದೇ ಹೋಯಿತು ಎನ್ನುವಾಗಲೇ ಸೃಷ್ಟಿಯಾದ ಆಧುನಿಕ ಮಹಾಕಾವ್ಯ.
ಚಾರ್ಮಿನಾರ್ 2013 ರ ಕನ್ನಡ ರೋಮ್ಯಾಂಟಿಕ್ ನಾಟಕ ಚಲನಚಿತ್ರವಾಗಿದ್ದು, ಆರ್. ಚಂದ್ರು ಅವರು ಬರೆದು ನಿರ್ದೇಶಿಸಿದ್ದಾರೆ ಮತ್ತು ನಿರ್ಮಿಸಿದ್ದಾರೆ, ಪ್ರೇಮ್ ಕುಮಾರ್ ಮತ್ತು ಮೇಘನಾ ಗಾಂವ್ಕರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಹೈದರಾಬಾದ್ನ ಪ್ರಸಿದ್ಧ ಸ್ಮಾರಕವಾದ ಚಾರ್ಮಿನಾರ್ಗೆ ಹೋಲಿಸುತ್ತ ಈ ಚಲನಚಿತ್ರವು ವ್ಯಕ್ತಿಯ ಜೀವನವು ಕುಟುಂಬ, ಗುರು, ಸ್ನೇಹಿತರು ಮತ್ತು ಪ್ರೇಮಿ ಸೇರಿದಂತೆ ನಾಲ್ಕು ಪ್ರಮುಖ ಆಧಾರಸ್ತಂಭಗಳನ್ನು ಹೊಂದಿದೆ ಎಂದು ತೋರಿಸುತ್ತದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಹಿಂದು ಧರ್ಮ ಎಂದರೆ ಅದು ಮಾನವ ಧರ್ಮ, ಅನಂತ ಸತ್ಯ ಧರ್ಮ, ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಬುದ್ಧನು ಐತಿಹಾಸಿಕ ಘಟನೆಗಳ ಪ್ರಕಾರ ೫೬೩ಬಿಸಿಇ ನಲ್ಲಿ ಮತ್ತು ಬೌದ್ಧ ಸಂಪ್ರದಾಯದ ಪ್ರಕಾರ ೬೨೪ಬಿಸಿಇ ನಲ್ಲಿ ಲುಂಬಿನಿಯಲ್ಲಿ ಉದಾತ್ತ ಕುಟುಂಬದಲ್ಲಿ ಜನಿಸಿದನು. ಅವರನ್ನು ಬಾಲ್ಯದಲ್ಲಿ ಸಿದ್ಧಾರ್ಥ ಗೌತಮ ಎಂದು ಕರೆಯಲಾಗುತ್ತಿತ್ತು. ಅವನ ತಂದೆ ರಾಜ ಶುದ್ಧೋದನ, ಬೆಳೆಯುತ್ತಿರುವ ಕೋಸಲ ರಾಜ್ಯದಲ್ಲಿ ಶಾಕ್ಯ ಕುಲದ ಹೊಲಯ ಚಲವಾದಿ ಕುಲದ ನಾಯಕ, ಮತ್ತು ಅವನ ತಾಯಿ ರಾಣಿ ಮಾಯಾ.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.(ಷಟ್ಪದಿಯ ಬ್ರಹ್ಮ ಎಂದೇ ಪ್ರಸಿದ್ಧರಾಗಿದ್ದಾರೆ) ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ ಧರ್ಮದ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ಕರ್ನಾಟಕ ಹೈಕೋರ್ಟ್ ಅಥವಾ ಕರ್ನಾಟಕ ಉಚ್ಚ ನ್ಯಾಯಾಲಯವು ರಾಜ್ಯದ ಮುಖ್ಯ ನ್ಯಾಯಾಂಗ ಸಂಸ್ಥೆಯಾಗಿದ್ದು, ಈ ನ್ಯಾಯಾಲಯವು ಮೂರು ಪ್ರತ್ಯೇಕ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತದೆ, ಬೆಂಗಳೂರು, ಧಾರವಾಡ ಮತ್ತು ಗುಲ್ಬರ್ಗ (ಯಾದಗಿರಿ). ಇದರ ಮುಖ್ಯ ಕಚೇರಿ ಬೆಂಗಳೂರು ನಗರದಲ್ಲಿದೆ ಮತ್ತು ಧಾರವಾಡ ಮತ್ತು ಗುಲ್ಬರ್ಗದಲ್ಲಿ ಶಾಖಾ ನ್ಯಾಯಾಲಯಗಳಿವೆ. ಈ ವ್ಯವಸ್ಥೆಯಿಂದ ರಾಜ್ಯದ ವಿವಿಧ ಭಾಗಗಳ ನಾಗರಿಕರಿಗೆ ನ್ಯಾಯಾಲಯದ ಸೇವೆ ಸುಲಭವಾಗಿ ಲಭ್ಯವಾಗುತ್ತದೆ.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.
ಇತಿಹಾಸ ಎಂದರೆ ನಮ್ಮ ಭೂತಕಾಲದ ಬಗೆಗಿನ ಮಾಹಿತಿ ಎಂದರ್ಥ (ಸಂಸ್ಕೃತದಲ್ಲಿ ಇತಿ=ಹೀಗೆ ಮತ್ತು ಹಾಸ=ಆದದ್ದು ಎಂಬ ವಿವರಣೆ ಇದೆ). ಸಂಬಂಧಪಟ್ಟ ವಿಷಯಗಳಿಗೆ ಈ ಪದವನ್ನು ನಾಮಪದವನ್ನಾಗಿ ಉಪಯೋಗಿಸಿದಾಗ ಇತಿಹಾಸವು ಮಾನವ, ಕುಟುಂಬ, ಮತ್ತು ಸಮಾಜದ ಮತ್ತು ಜೈವಿಕ ಬದುಕಿನ ಆಗುಹೋಗುಗಳ ದಾಖಲೆಗಳ ವೈಚಾರಿಕ ಚಿಂತನೆಗೆ ಪರಿಭಾಷೆಯಾಗಿ ಬಳಸಲ್ಪಡುತ್ತದೆ. ಬಹುಮಟ್ಟಿನ ಇತಿಹಾಸಕಾರರು ತಮ್ಮ ಅಧ್ಯಯನಗಳಿಗೆ ಬರವಣಿಗೆಯಲ್ಲಿ ದಾಖಲಾಗಿರುವ ಮೂಲಗಳನ್ನು ಆಧಾರವಾಗಿಟ್ಟುಕೊಳ್ಳುತ್ತಾರೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ.
ದೇಶ-ವಿದೇಶಗಳ ಪರಿಚಯ ಪುಸ್ತಕವನ್ನು ಪಾಂಡುರಂಗ ಶಾಸ್ತ್ರೀ ಮತ್ತು ಸಿ ಆರ್ ಕೃಷ್ಣರಾವ್ ಪರಿಚಯಿಸಿದವರು ಇಂದು ನಮ್ಮ ಭೂಮಂಡಲದಲ್ಲಿ ನೂರಾರು ಸ್ವತಂತ್ರ ದೇಶಗಳು,ಹಲವು ಸಣ್ಣ ಪುಟ್ಟ ದ್ವೀಪಗಳೂ ಇವೆ.ಈ ಪುಸ್ತಕದಲ್ಲಿ ಅವೆಲ್ಲವನ್ನೂ ಪರಿಚಯಿಸಲಾಗಿದೆ. ನಮ್ಮ ಈ ಭೂಮಂಡಲ ರೂಪುಗೊಂಡು ಕೋಟ್ಯಂತರ ವರ್ಷಗಳಾದ ಮೇಲೆ ಸಹಸ್ರ ಸಹಸ್ರ ಜೀವಿ ಜಂತುಗಳು ಉಗಮಿಸಿದ ನಂತರ ಮನುಷ್ಯ ಜೀವಿ ಕಾಣಿಸಿಕೊಂಡ.ಆದಿಮ ಮಾನವ ಇತರ ಎಲ್ಲ ಪ್ರಾಣಿವರ್ಗಗಳಂತೆಯೇ ಸಮಷ್ಟಿ ಜೀವಿ.ಬೇಟೆಯಾಡಿ ದೊರೆತದ್ದನ್ನು ತನ್ನ ಗುಂಪಿನವರೊಂದಿಗೆ ಹಂಚಿಕೊಂಡು ಮುಕ್ತವಾದ ಅಲೆಮಾರಿ ಜೀವನ ನೆಡೆಸುತಿದ್ದ.ಯಾವ ಬಗೆಯ ನಿರ್ಬಂಧವೂ ಇಲ್ಲದ ಸ್ವತಂತ್ರ ಜೀವಿಯಾಗಿದ್ದ.ಕ್ರಮೇಣ ಮುಂದುವರಿದು ಪಶುಸಂಗೋಪನೆಯಲ್ಲಿ,ಬೇಸಾಯದಲ್ಲಿ ತೊಡಗಿಕೊಂಡ.ಬೇಸಾಯ ಅಭಿವೃದ್ಧಿಗೊಂಡ ಹಾಗೆ ಒಂದೆಡೆ ನೆಲೆಯೂರಲಾರಂಭಿಸಿದ.ತಾನೂ ಬೆಳೆದದ್ದನ್ನು ತನಗೆ ಉಪಯೋಗಕ್ಕಿರಿಸಿಕೊಂಡು ಉಳಿದದ್ದನ್ನು ದಾಸ್ತಾನು ಮಾಡುವುದನ್ನು ಕಲಿತ.ಇದರೊಂದಿಗೆ ಸ್ವಂತಿಕೆ ಪ್ರಾರಂಭವಾಗಿ ಸಮಷ್ಟಿ ಜೀವನ ಶಿಥಿಲಗೊಂಡಿತು.ತಾನು ಬೇಸಾಯ ಮಾಡುತ್ತಿದ್ದ ಪ್ರದೇಶವನ್ನು ತನ್ನದಾಗಿಸಿಕೊಂಡ.ಇದು ಸ್ವಂತ ಆಸ್ತಿಗೆ ಮೂಲವಾಯಿತು.ತನಗೆ ಅವಶ್ಯಕವಾಗಿರುವುದಕ್ಕಿಂತ ಹೆಚ್ಚು ಭೂಮಿಯನ್ನು ಆಕ್ರಮಿಸಿಕೊಂಡು ಹೆಚ್ಚು ಆಹಾರ ಪದಾರ್ಥಗಳನ್ನು ಬೆಳೆದ.ಹೆಚ್ಚುವರಿ ಬೆಳೆಯನ್ನು ಬೇರೆ ವಸ್ತುಗಳಿಗೆ ವಿನಿಮಯ ಮಾಡಿಕೊಳ್ಳತೊಡಗಿದ.ಸ್ವಂತ ಆಸ್ತಿ ಮೇಲುಗೈ ಪಡೆದುಕೊಂಡ ಹಾಗೆ ಹಿಂದಿನ ಆದಿಮ ಸಮಾಜದ ಸಮಷ್ಟಿ ಜೀವನ ವ್ಯವಸ್ಥೆ ಅದೃಶ್ಯಗೊಂಡಿತು. ಸ್ವಂತ ಆಸ್ತಿ ಜಮೀನು ಬಲಗೊಂಡ ಹಾಗೆಸೀಮಾರೇಖೆಗಳು ಬಂದುವಲ್ಲದೆ,ಅದರ ರಕ್ಷಣೆಗೆ ಬೇಕಾದ ಸಮಾಜ ವ್ಯವಸ್ಥೆಯೂ ಅಸ್ತಿತ್ವಕ್ಕೆ ಬಂದಿತು.ಹೆಚ್ಚು ಬಲಶಾಲಿಯಾದವನು ಹೆಚ್ಚು ಭೂಮಿಯನ್ನು ಆಕ್ರಮಿಸಿಕೊಂಡು ಶ್ರೀಮಂತನಾದ.ದುರ್ಬಲರ ಶೋಷಣೆಯಲ್ಲಿ ತೊಡಗಿದ.ಒಂದರ ಹಿಂದೆ ಒಂದು ಎಂಬಂತೆ ಭೂಮಾಲಿಕತ್ವ,ಗುಲಾಮಗಿರಿ,ಹಣ ವಿನಿಮಯ ಇವುಗಳೆಲ್ಲ ಸೃಷ್ಟಿಯಾದವು.ಉಳ್ಳವರು-ಇಲ್ಲದವರು ಎನ್ನುವ ನಾಗರಿಕತೆ ಬಂದು ಈ ವ್ಯವಸ್ಥೆ ಬಲಗೊಂಡು ಬೇರೂರಿದ ಹಾಗೆ ಶೋಷಕರು-ಶೋಷಿತರು ಎನಿಸಿಕೊಂಡ ವರ್ಗಗಳು ಅಸ್ತಿತ್ವಕ್ಕೆ ಬಂದವು.ಹೆಚ್ಚು ಶ್ರೀಮಂತನಾದವನು,ಬಲಶಾಲಿಯಾದವನು ಮುಂದೆ ನಾಯಕನಾದ,ರಾಜನಾದ.ಈ ಬಗೆಯಲ್ಲಿ ರಾಜ್ಯಗಳು,ಸಾಮ್ರಾಜ್ಯಗಳು ಹುಟ್ಟಿಕೊಂಡವು.ರಾಜ್ಯಗಳಿಗೆ ಗಡಿಗಳು ಬಂದವು.