The most-visited ಕನ್ನಡ Wikipedia articles, updated daily. Learn more...
2014 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ಯೋಗದ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ ಯೋಗವು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ತಮ್ಮ ಯುಎನ್ ಭಾಷಣದಲ್ಲಿ ಜೂನ್ 21 ರ ದಿನಾಂಕವನ್ನು ಸೂಚಿಸಿದ್ದರು. ಏಕೆಂದರೆ ಇದು ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾಗಿದೆ ಮತ್ತು ಪ್ರಪಂಚದ ಅನೇಕ ಭಾಗಗಳಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹಂಚಿಕೊಳ್ಳುತ್ತದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ
ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ಬುಕ್ ಸಂಖ್ಯೆ (ಐ.ಎಸ್.ಬಿ.ಎನ್) /ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ ಒಂದು ವಿಶಿಷ್ಟವಾದ ಸಂಖ್ಯೆ. ಪ್ರಕಾಶಕರು ಐಎಸ್ಬಿಎನ್ ಅನ್ನು ಪುಸ್ತಕ ಶೀರ್ಷಿಕೆಗೆ ನಿಯೋಜಿಸುತ್ತಾರೆ.ಒಂದು ಐಎಸ್ಬಿಎನ್ ಮುಖ್ಯವಾಗಿ ಪ್ರಕಾಶಕರು, ಪುಸ್ತಕ ಮಾರಾಟಗಾರರು, ಗ್ರಂಥಾಲಯಗಳು, ಇಂಟರ್ನೆಟ್ ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಪೂರೈಕೆ ಸರಪಳಿಗಳು ಆದೇಶ, ಪಟ್ಟಿಗಳು, ಮಾರಾಟದ ದಾಖಲೆಗಳು ಮತ್ತು ಷೇರು ನಿಯಂತ್ರಣ ಉದ್ದೇಶಗಳಿಗಾಗಿ ಬಳಸಲ್ಪಡುವ ಒಂದು ಉತ್ಪನ್ನ ಗುರುತಿಸುವಿಕೆ. ಐಎಸ್ಬಿಎನ್ ನೋಂದಾಯಿಸುವವರನ್ನು ನಿರ್ದಿಷ್ಟ ಶೀರ್ಷಿಕೆ, ಆವೃತ್ತಿ ಮತ್ತು ಸ್ವರೂಪವನ್ನು ಗುರುತಿಸುತ್ತದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮ್ಯಾರಥಾನ್ ಎನ್ನುವುದು ದೂರ ಅಂತರದ ಓಡುವಿಕೆಯ ಸ್ಪರ್ಧೆಯಾಗಿದ್ದು, ಇದು ಅಧಿಕೃತವಾಗಿ 42.195 ಕಿಲೋಮೀಟರುಗಳು (26 ಮೈಲುಗಳನ್ನು ಮತ್ತು 385 ಯಾರ್ಡ್ಗಳ) ದೂರವನ್ನು ಒಳಗೊಂಡಿರುತ್ತದೆ ಮತ್ತು ಅದು ಸಾಮಾನ್ಯವಾಗಿ ರಸ್ತೆ ಓಟವಾಗಿರುತ್ತದೆ. ಈ ಆಟವನ್ನು ಮ್ಯಾರಥಾನ್ ಯುದ್ಧ (ಓಟದ ಹೆಸರಿನದು) ದಿಂದ ಅಥೆನ್ಸ್ನವರೆಗೆ ಸುದ್ದಿವಾಹಕನಾದ ಗ್ರೀಕ್ ಸೈನಿಕ ಫೀಡಿಪ್ಪಿಡೆಸ್ನ ಪುರಾಣಕಥೆಯ ಓಟದ ನೆನಪಿಗಾಗಿ ಪ್ರಾರಂಭಿಸಲಾಯಿತು. ಈ ಪ್ರಸಿದ್ಧ ವ್ಯಕ್ತಿಯ ಐತಿಹಾಸಿಕ ನಿಖರತೆಯು ನಿರ್ದಿಷ್ಟವಾಗಿ ಹೆರೋಡೋಟಸ್ ನೀಡಿರುವ ವಿವರಗಳಿಗೆ ಹೋಲಿಸಿದರೆ ಅನುಮಾನಾಸ್ಪದ ಮತ್ತು ಪರಸ್ಪರ ವಿರುದ್ಧವಾಗಿದೆ.
ಜಲಚರ ಸಾಕಣೆ ಎಂಬುದು ಈಜುರೆಕ್ಕೆ ಮೀನು, ಮೃದ್ವಂಗಿಗಳು, ಕಠಿಣಚರ್ಮಿಗಳಂಥ ಸಿಹಿನೀರಿನ ಹಾಗೂ ಉಪ್ಪುನೀರಿನ ಜೀವಿಗಳು ಮತ್ತು ಜಲವಾಸಿ ಸಸ್ಯಗಳ ಸಾಕುವಿಕೆಯಾಗಿದೆ. ಜಲಕೃಷಿ ಎಂದೂ ಹೆಸರಾಗಿರುವ ಜಲಚರ ಸಾಕಣೆಯು ನಿಯಂತ್ರಿತ ಸನ್ನಿವೇಶಗಳ ಅಡಿಯಲ್ಲಿ ಜಲವಾಸಿ ಜೀವಿಗಳ ಸಾಕುವಿಕೆ ಅಥವಾ ಬೆಳೆಸುವಿಕೆಯನ್ನು ಒಳಗೊಂಡಿದೆ, ಮತ್ತು ಇದನ್ನು ಸಾಕಿರದ ಮೀನನ್ನು ಹಿಡಿಯುವ ವಿಧಾನವಾದ ವಾಣಿಜ್ಯ ಮೀನುಗಾರಿಕೆಯೊಂದಿಗೆ ತದ್ವಿರುದ್ಧವಾಗಿ ಪರಿಗಣಿಸಬಹುದಾಗಿದೆ. ವಾಣಿಜ್ಯ ಜಲಚರ ಸಾಕಣೆಯು ಮಾನವರು ನೇರವಾಗಿ ಸೇವಿಸುವ ಮೀನು ಮತ್ತು ಚಿಪ್ಪುಮೀನುಗಳ ಪೈಕಿ ಒಂದರ್ಧವನ್ನು ಪೂರೈಸುತ್ತದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ನೆದರ್ಲ್ಯಾಂಡ್ಸ್ (Netherlands) ಪಶ್ಚಿಮ ಯುರೋಪಿನ ಒಂದು ಪ್ರಮುಖ ರಾಷ್ಟ್ರ. ನೆದರ್ಲ್ಯಾಂಡ್ಸ್ ರಾಜ್ಯವು ಈ ಮುಖ್ಯ ಭೂಭಾಗದ ಜೊತೆಗೆ ಕೆರಿಬ್ಬಿಯನ್ ಪ್ರದೇಶದ ಅರೂಬಾ (Aruba), ಕುರಾಕಾವೊ (Curaçao) ಮತ್ತು ಸಿಂಟ್ ಮಾರ್ಟೆನ್ (Sint Maarten) ದ್ವೀಪಗಳನ್ನು ಸಹ ಒಳಗೊಂಡಿದೆ. ನೆದರ್ಲ್ಯಾಂಡ್ಸ್ನ ಉತ್ತರ ಮತ್ತು ಪಶ್ಚಿಮದಲ್ಲಿ ಉತ್ತರ ಸಮುದ್ರವಿದ್ದರೆ (North Sea), ದಕ್ಷಿಣದಲ್ಲಿ ಬೆಲ್ಜಿಯಮ್ ಹಾಗೂ ಪೂರ್ವದಲ್ಲಿ ಜರ್ಮನಿ ದೇಶಗಳಿವೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಆರ್ಥಿಕತೆಯ ಎಲ್ಲ ವಲಯಗಳನ್ನು ಮೂರು ಭಾಗಗಳಾಗಿ ವರ್ಗೀಕರಿಸಿದಾಗ ಕೈಗಾರಿಕೆಗಳು 'ದ್ವಿತೀಯ' ವಲಯ (Secondary Sector) ಎನ್ನಿಸಿಕೊಂಡಿದೆ. ಕೈಗಾರಿಕೆಗಳು ಒಂದು ದೇಶದ ಮೂಳೆಗಳಿದ್ದಂತೆ. ಮಾನವ ದೇಹಕ್ಕೆ ಪೂರ್ಣ ಚೈತನ್ಯವನ್ನು ಒದಗಿಸಲು ಮೂಳೆಗಳು ಹೇಗೆ ಅವಶ್ಯಕವೋ ಹಾಗೆಯೇ ಆರ್ಥಿಕತೆಗೆ ಚೇತನ ನೀಡಿ ದೀರ್ಘಕಾಲೀನ ಅಭಿವೃದ್ಢಿ ಸಾಧನೆಗೆ ನೆರವಾಗಲು ಕೈಗಾರಿಕೆಗಳು ಅತ್ಯಂತ ಆವಶ್ಯಕ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಲೂಯಿಸಿಯಾನ (ಇಂಗ್ಲಿಷ್: Louisiana, French: État de Louisiane, [lwizjan] ( ); ಲೂಯಿಸಿಯಾನ ಕ್ರೆಒಲೇ: ಲೇಟ ಡೆ ಲ ಲ್ವಿಜ್ಯನ್) ಎಂಬುದು ಅಮೇರಿಕ ಸಂಯುಕ್ತ ಸಂಸ್ಥಾನದ ದಕ್ಷಿಣ ಭಾಗದಲ್ಲಿ ನೆಲೆಯಾಗಿರುವ ಒಂದು ರಾಜ್ಯ. ಬೇಟನ್ ರೂಜ್ ಇದರ ರಾಜಧಾನಿಯಾಗಿದ್ದು ನ್ಯೂ ಆರ್ಲಿಯನ್ಸ್ ಲೂಯಿಸಿಯಾನಾದ ಅತ್ಯಂತ ದೊಡ್ಡ ನಗರವೆನಿಸಿದೆ. ಪ್ಯಾರಿಷ್ ಎಂದು ಕರೆಯಲ್ಪಡುವ ರಾಜಕೀಯ ಉಪವಿಭಾಗಗಳನ್ನು ಹೊಂದಿರುವ U.S.ನ ಏಕೈಕ ರಾಜ್ಯ ಲೂಯಿಸಿಯಾನ , ಈ ಪ್ಯಾರಿಷ್ ಗಳು ಕೌಂಟಿಗಳಿಗೆ ಸಮಾನಾಂತರವಾದ ಸ್ಥಳೀಯ ಆಡಳಿತವನ್ನು ನಡೆಸುತ್ತವೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಕಪ್ಪು ಕುಳಿ ಬಾಹ್ಯಾಕಾಶದ ಪ್ರದೇಶವಾಗಿದ್ದು, ಅದರಿಂದ ಬೆಳಕು ಸೇರಿದಂತೆ ಯಾವುದೂ ತಪ್ಪಿಸಿಕೊಂಡು ಹೋಗುವುದು ಸಾಧ್ಯವಾಗುವುದಿಲ್ಲ. ಇದು ತೀರಾ ಸಾಂದ್ರೀಕೃತ ದ್ರವ್ಯರಾಶಿಯಿಂದ ಉಂಟಾದ ಸ್ಪೇಸ್ಟೈಮ್(ದೇಶ-ಕಾಲ)(ದೇಶದ ಮೂರು ಆಯಾಮ ಮತ್ತು ಕಾಲದ ಒಂದು ಆಯಾಮದ ಕಲ್ಪನೆ) ರೂಪವಿಕೃತಿಯ ಫಲಿತಾಂಶವಾಗಿದೆ. ಕಪ್ಪು ಕುಳಿಯ ಸುತ್ತ ಗುರುತಿಸಲಾಗದ ಹೊರಮೈಯಿದ್ದು, ಇದು ಹಿಂತಿರುಗಲಾರದ ಬಿಂದುವನ್ನು ಸಂಕೇತಿಸುತ್ತದೆ.
ವೈಯಕ್ತಿಕ ಮಾಹಿತಿ ಜನನ ದುರ್ಗಿ ಟುಡು (1958-06-20) 20 June 1958ಉಪರ್ಬೇಡಾ, ಒಡಿಶಾ, ಭಾರತ ರಾಜಕೀಯ ಪಕ್ಷ ಭಾರತೀಯ ಜನತಾ ಪಕ್ಷ ಸಂಗಾತಿ(ಗಳು) ಮಕ್ಕಳು * ಲಕ್ಷ್ಮಣ್ ಮುರ್ಮು (ಮರಣ: 2009) ಸಿಪುನ್ ಮುರ್ಮು (ಮರಣ: 2012) ಇತಿಶ್ರೀ ಮುರ್ಮು ವಾಸಸ್ಥಾನ ಟೆಂಪ್ಲೇಟು:Bulletedlist ಅಭ್ಯಸಿಸಿದ ವಿದ್ಯಾಪೀಠ ರಾಮಾ ದೇವಿ ಮಹಿಳಾ ವಿಶ್ವವಿದ್ಯಾಲಯ (ಬಿಎ) ವೃತ್ತಿ ರಾಜಕಾರಣಿ ಉದ್ಯೋಗ ಶಿಕ್ಷಕಿ ಸಹಿ ಜಾಲತಾಣ presidentofindia.nic.in ಮಿಲಿಟರಿ ಸೇವೆ ಪ್ರಶಸ್ತಿಗಳು ಕೆಳಗೆ ನೋಡಿ ದ್ರೌಪದಿ ಮುರ್ಮು (ಜನನ ೨೦ ಜೂನ್ ೧೯೫೮) ಒಬ್ಬ ಭಾರತೀಯ ರಾಜಕಾರಣಿ, ಇವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರಾಗಿದ್ದರು. ಅವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದ ಸ್ಥಳೀಯ, ಪರಿಶಿಷ್ಟ ಬುಡಕಟ್ಟು ಸಮುದಾಯಕ್ಕೆ ಸೇರಿದ ಮೊದಲ ವ್ಯಕ್ತಿ.
ಜಲ ಚಕ್ರ ಅಥವಾ ಜಲವಿಜ್ಙಾನ ಚಕ್ರ ದ ಪರಿಕಲ್ಪನೆಯು ಭೂಮಿಯಲ್ಲಿರುವ ನೀರಿನ ಸಂಪತ್ತು, ಭೂ ಮೇಲ್ ಮೈಯ ಹೊರಗೆ (ವಾತಾವರಣದಲ್ಲಿ) ಮತ್ತು ಒಳಗೆ (ನೆಲದ ಕೆಳಗೆ) ಹಂತ ಹಂತವಾಗಿ ನಿರಂತರವಾಗಿ ನಡೆಯುವ ನೀರಿನ ಚಕ್ರೀಯ ಪರಿಚಲನೆಯನ್ನು ವಿವರಿಸುತ್ತದೆ. ಭೂಮಿಯ ಮೇಲೆ ಲಭ್ಯವಿರುವ ಒಟ್ಟು ನೀರಿನ ಪ್ರಮಾಣವು ಹೆಚ್ಚುಕಡಿಮೆ ನಿರ್ದಿಷ್ಟವಾಗಿದ್ದರೂ, ಜಲಚಕ್ರದ ವಿವಿಧ ಹಂತಗಳಲ್ಲಿ ಚಲಿಸುವ ನೀರು ವಿವಿಧ ಪ್ರಮಾಣಗಳಲ್ಲಿ ದ್ರವ, ಅನಿಲ ಅಥವಾ ಘನ (ಹಿಮ) ಸ್ಥಿತಿಗಳಿಗೆ, ಹಾಗೆಯೇ, ಸಿಹಿನೀರು, ಉಪ್ಪುನೀರು, ಹಿಮದಲ್ಲಿ ಅಡಕವಾದ ನೀರು, ವಾತಾವರಣದ ನೀರು ಇತ್ಯಾದಿ ವಿಭಿನ್ನ ರೂಪ-ಸ್ಥಿತಿಗಳಿಗೆ ಬದಲಾವಣೆಯಾಗಬಹುದು. ಜಲಚಕ್ರದ ನೀರು ಒಂದು ಜಲಸಂಗ್ರಹದಿಂದ ಇನ್ನೊಂದಕ್ಕೆ ಅಂದರೆ ನದಿಗಳಿಂದ ಸಮುದ್ರಕ್ಕೆ, ಸಮುದ್ರದಿಂದ ವಾತಾವರಣಕ್ಕೆ ವಾತಾವರಣದಿಂದ ಮತ್ತೆ ಭೂಮಿಗೆ ಚಲಿಸಲು, ಸಹಕರಿಸುವ ಭೌತಿಕ ಪ್ರಕ್ರಿಯೆಗಳೆಂದರೆ ಬಾಷ್ಪೀಕರಣ (evapotranspiration), ಸಾಂದ್ರೀಕರಣ(condensation), ವರ್ಷಾವತರಣ(precipitation), ಒಳಸೋಸುವಿಕೆ(infiltration), ಮೇಲಿನ ಹರಿವು(surface flow) ಮತ್ತು ನೆಲದಡಿಯ ಹರಿವು(subsurface flow).
ಓಝೋನ್' ('O3 ), ಅಥವಾ ಟ್ರೈಆಕ್ಸಿಜನ್ ಎಂಬುದು ಒಂದು ತ್ರಿಪರಮಾಣ್ವಕ ಅಣುವಾಗಿದ್ದು, ಮೂರು ಆಮ್ಲಜನಕ ಪರಮಾಣುಗಳನ್ನು ಇದು ಒಳಗೊಂಡಿದೆ. ದ್ವಿಪರಮಾಣ್ವಕ ಭಿನ್ನರೂಪಕ್ಕಿಂತ (O2) ಸಾಕಷ್ಟು ಕಡಿಮೆ ಸ್ಥಿರವಾಗಿರುವ ಆಮ್ಲಜನಕದ ಒಂದು ಭಿನ್ನರೂಪ ಇದಾಗಿದೆ. ಕೆಳಮಟ್ಟದ ವಾತಾವರಣದಲ್ಲಿರುವ ಓಝೋನ್ ಒಂದು ವಾಯು ಮಾಲಿನ್ಯಕಾರಕವಾಗಿದ್ದು, ಪ್ರಾಣಿಗಳ ಉಸಿರಾಟದ ವ್ಯವಸ್ಥೆಗಳ ಮೇಲೆ ಇದು ಅಪಾಯಕಾರಿ ಪರಿಣಾಮಗಳನ್ನು ಬೀರುತ್ತದೆ ಮತ್ತು ಸೂಕ್ಷ್ಮ ಸ್ವಭಾವದ ಸಸ್ಯಗಳನ್ನು ಸುಡುತ್ತದೆ; ಆದಾಗ್ಯೂ, ಮೇಲುಮಟ್ಟದ ವಾತಾವರಣದಲ್ಲಿನ ಓಝೋನ್ ಪದರವು ಪ್ರಯೋಜನಕಾರಿಯಾಗಿದ್ದು, ಹಾನಿಕಾರಕ ನೇರಳಾತೀತ ಬೆಳಕು ಭೂಮಿಯ ಮೇಲ್ಮೈಯನ್ನು ತಲುಪುವುದನ್ನು ಸಮರ್ಥವಾಗಿ ತಡೆಗಟ್ಟುತ್ತದೆ.
ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವ್ಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಆಂಧ್ರ ಪ್ರದೇಶ (ತೆಲುಗು:ఆంధ్ర ప్రదేశ్) (, ಭಾಷಾಂತರ: ಆಂಧ್ರದ ಪ್ರಾಂತ್ಯ, ಸಂಕ್ಷಿಪ್ತವಾಗಿ ಎ.ಪಿ. ಎಂದು ಕರೆಯಲ್ಪಡುವ ರಾಜ್ಯವಾಗಿದ್ದು ಇದುಭಾರತದ ಆಗ್ನೇಯ ಕರಾವಳಿ ಭಾಗದಲ್ಲಿದೆ. ಭಾರತದಲ್ಲಿ ಇದು ವಿಸ್ತೀರ್ಣದ ಆಧಾರದಲ್ಲಿ ಭಾರತದ ರಾಜ್ಯಗಳ ವಿಸ್ತೀರ್ಣದಲ್ಲಿ ಎಂಟನೇ ಅತಿದೊಡ್ಡ ರಾಜ್ಯವಾಗಿದೆ ಮತ್ತು ಜನಸಂಖ್ಯೆಯ ಆಧಾರದಲ್ಲಿ ಭಾರತದ ರಾಜ್ಯಗಳ ಜನಸಂಖ್ಯೆಯಲ್ಲಿ ಹತ್ತನೇ ಅತಿ ದೊಡ್ಡ ರಾಜ್ಯವಾಗಿದೆ.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ರೇವು ಹಡಗುಗಳು ಬಂದುಹೋಗಬಹುದಾದಂಥ ಮತ್ತು ಜನ ಅಥವಾ ಸರಕನ್ನು ನೆಲಕ್ಕೆ ಅಥವಾ ನೆಲದಿಂದ ವರ್ಗಾಯಿಸಬಹುದಾದಂಥ ಒಂದು ಅಥವಾ ಹೆಚ್ಚು ಬಂದರುಗಳನ್ನು ಹೊಂದಿರುವ ತೀರ ಅಥವಾ ಕಿನಾರೆಯ ಮೇಲಿನ ಸ್ಥಳ. ರೇವು ನೆಲೆಗಳನ್ನು ಭೂಮಿ ಮತ್ತು ನೌಕಾಸಂಚಾರ ಯೋಗ್ಯ ನೀರಿಗೆ ಪ್ರವೇಶವನ್ನು ಉತ್ತಮಗೊಳಿಸುವಂತೆ, ವಾಣಿಜ್ಯ ಬೇಡಿಕೆಗಾಗಿ, ಮತ್ತು ಗಾಳಿ ಹಾಗು ಅಲೆಗಳಿಂದ ಆಶ್ರಯಕ್ಕಾಗಿ ಆಯ್ಕೆಮಾಡಲಾಗುತ್ತದೆ. ಹೆಚ್ಚು ಆಳವಾದ ನೀರಿರುವ ರೇವುಗಳು ವಿರಳ, ಆದರೆ ಅಂಥವು ಹೆಚ್ಚು ದೊಡ್ಡ, ಹೆಚ್ಚು ಮಿತವ್ಯಯಕರ ಹಡಗುಗಳನ್ನು ನಿರ್ವಹಿಸಬಹುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಭಾರತದ ಗಡಿಗಳು ಮತ್ತು ನರೆ ರಾಜ್ಯಗಳು
ಭಾರತವು 1947ರಲ್ಲಿ ಸ್ವತಂತ್ರ ರಾಷ್ಟ್ರವಾದ ನಂತರ ಅದರ ನೆರೆಹೊರೆಯ ಸಾರ್ವಭೌಮ ರಾಷ್ಟ್ರಗಳಾದ ಅಫ್ಘಾನಿಸ್ತಾನ್, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನಗಳೊಂದಿಗೆ ಅಂತರರಾಷ್ಟ್ರೀಯ ಭೂ ಗಡಿಗಳನ್ನು ಹೊಂದಿದೆ. ಕಾಶ್ಮೀರ ವಿವಾದದ ಪರಿಣಾಮ ಪಾಕಿಸ್ತಾನದೊಂದಿಗೆ ಗಡಿ ನಿಯಂತ್ರಣ ನಿಯಂತ್ರಣ (ಎಲ್ಒಸಿ) ರೇಖೆಯನ್ನು ಹೊಂದಿದೆ. ಈ ಎಲ್ಲಾ ಗಡಿ ಮತ್ತು ನಿಯಂತ್ರಣ (ಎಲ್ಒಸಿ) ರೇಖೆಯ ರಕ್ಷಣೆಯ ಹೊಣೆಯನ್ನೂ ಹೊಂದಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಇಂಡೋ-ಯುರೋಪಿಯನ್ ಅಥವಾ ಭಾರತಯೂರೋಪಿ ಭಾಷೆಗಳು ನೂರಾರು ಭಾಷೆಗಳನ್ನು ಒಳಗೊಂಡಿರುವ ಪ್ರಪಂಚದಲ್ಲಿ ಅತ್ಯಂತ ಹೆಚ್ಚು ಮಾತುಗಾರರನ್ನುಳ್ಳ ಭಾಷಾ ಕುಟುಂಬ. ಈ ಗುಂಪಿಗೆ ಸೇರಿದ ಭಾಷೆಗಳು ಇತರ ಯಾವುದೇ ಮನೆತನಕ್ಕೆ ಸೇರಿದ ಭಾಷೆಗಳಿಗಿಂತಲೂ ಹೆಚ್ಚು ವಿಸ್ತಾರವಾಗಿ ಪ್ರಪಂಚದಲ್ಲಿ ವ್ಯಾಪಿಸಿವೆ. ಅಲ್ಲದೆ ಈ ಭಾಷೆಗಳ ಸಂಖ್ಯೆಯೂ ಅಧಿಕವಿದ್ದು ಮಿಕ್ಕೆಲ್ಲ ಭಾಷೆಗಳಿಗಿಂತ ಹೆಚ್ಚು ವಿಸ್ತಾರವಾಗಿ ಪುನರ್ವಿಂಗಡಣೆಗೊಂಡಿದೆ.
ಸ್ವಾತಂತ್ರ್ಯಾ ನಂತರದ ಸಮಯ ೧೯೫೩ರಲ್ಲಿ ಭಾರತ ದೇಶವೂ ಸ್ವಾತಂತ್ರ್ಯದ ನವ ಉಲ್ಲಾಸದ ಗಾಳಿಯಲ್ಲಿ ಮಿಂದು ಏಳುತ್ತಿತ್ತು.ಬ್ರಿಟಿಷರ ಆಳ್ವಿಕೆಯಿಂದ ಬಿಡುಗಡೆ ಪಡೆದು ಕೆಲವೇ ವರುಷಗಳಾಗಿ ಭಾರತ ಪುಟ್ಟ ಮಗುವಿನಂತೆ ಸಣ್ಣ ಹೆಜ್ಜೆಗಳನ್ನು ಇಡುತ್ತಾ ಬೆಳೆಯಿತು.೧೯೫೩ನೇ ಇಸವಿ, ಇಂದು ನಮ್ಮ ಇತಿಹಾಸವಾಗಿದೆ.ಇತಿಹಾಸ ಎಂದರೆ ನಮ್ಮ ಭೂತಕಾಲದ ಬಗೆಗಿನ ಮಾಹಿತಿ ಅಥವ ಕಥೆ.ಮಾನವನ ಬದುಕು, ಸಮಾಜ ಮತ್ತು ಜೈವಿಕ ಬದುಕಿನ ಆಗುಹೋಗುಗಳ ದಾಖಲೆಗಳೇ ಇತಿಹಾಸ.೧೯೫೩ನೇ ಇಸವಿಯು ನಮ್ಮ ಭಾರತ ದೇಶದಲ್ಲಿ ನಡೆದ ಹಲವು ಪ್ರಮುಖ ಘಟನೆಗಳಿಗೆ ಸಾಕ್ಷಿಯಾಗಿ, ಇಂದು ನಮ್ಮೆಲ್ಲರಿಗೆ ಆ ವರ್ಷದ ಇತಿಹಾಸವು ಅತ್ಯಮೂಲ್ಯವಾಗಿದೆ.