The most-visited ಕನ್ನಡ Wikipedia articles, updated daily. Learn more...
2014 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ಯೋಗದ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ ಯೋಗವು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ತಮ್ಮ ಯುಎನ್ ಭಾಷಣದಲ್ಲಿ ಜೂನ್ 21 ರ ದಿನಾಂಕವನ್ನು ಸೂಚಿಸಿದ್ದರು. ಏಕೆಂದರೆ ಇದು ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾಗಿದೆ ಮತ್ತು ಪ್ರಪಂಚದ ಅನೇಕ ಭಾಗಗಳಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹಂಚಿಕೊಳ್ಳುತ್ತದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಆಧ್ಯಾತ್ಮಿಕ, ಮಾನಸಿಕ ಮತ್ತು ದೈಹಿಕ ಶಾಂತಿ-ಸಂಯಮಗಳನ್ನು ಕಾಯ್ದುಕೊಳ್ಳಲು ಸಾಧಿಸಲಾಗುವ ಉನ್ನತ ಜೀವನ ಶಿಕ್ಷಣವೇ ಯೋಗ. ಸಾವಿರಾರು ವರ್ಷಗಳಿಂದಲೂ ಭಾರತ ದೇಶದಲ್ಲಿ ಆಚರಿಸಲ್ಪಡುತ್ತಿರುವ 'ಯೋಗವಿದ್ಯೆಯು' ಋಷಿ ಮುನಿಗಳಾದಿ ಸಾಧಕರಿಂದ ವಿದ್ಯೆ ಮತ್ತು ಜೀವನ ಶೈಲಿಯಾಗಿ ಹರಿದು ಬಂದಿದೆ. ಯೋಗಶ್ಚಿತ್ತವೃತ್ತಿನಿರೋಧಃ ಎಂದ ಮಹಾ ಯೋಗಾಚಾರ್ಯ ಪತಂಜಲಿ ಮಹರ್ಷಿಗಳು ಯೋಗ ಪ್ರವರ್ತಕರು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಒಂಟೆಯು ಅದರ ಬೆನ್ನ ಮೇಲೆ "ಡುಬ್ಬ"ಗಳೆಂದು ಕರೆಯಲಾಗುವ ವಿಶಿಷ್ಟ ಕೊಬ್ಬಿನ ಸಂಗ್ರಹವನ್ನು ಹೊಂದಿರುವ, ಕಮೇಲುಸ್ ಜಾತಿಯಲ್ಲಿನ ಒಂದು ಸಮ ಕಾಲ್ಬೆರಳುಗಳಿರುವ ಗೊರಸುಳ್ಳ ಪ್ರಾಣಿ. ಮಧ್ಯಪ್ರಾಚ್ಯ ಹಾಗು ಆಫ಼್ರಿಕಾದ ಕೊಂಬಿನಲ್ಲಿ ನೆಲೆಸಿರುವ ಡ್ರಮಿಡರಿ ಅಥವಾ ಒಂಟಿ ಡುಬ್ಬದ ಒಂಟೆ (ಕಮೇಲುಸ್ ಡ್ರೋಮೆಡೇರಿಯಸ್) ಮತ್ತು ಮಧ್ಯ ಏಷ್ಯಾದಲ್ಲಿ ನೆಲೆಸಿರುವ ಬ್ಯಾಕ್ಟ್ರಿಯನ್ ಅಥವಾ ಎರಡು ಡುಬ್ಬಗಳ ಒಂಟೆ (ಕಮೇಲುಸ್ ಬ್ಯಾಕ್ಟ್ರಿಯೇನಸ್) ಒಂಟೆಯ ಎರಡು ಜೀವಂತವಿರುವ ಪ್ರಜಾತಿಗಳಾಗಿವೆ. ಎರಡೂ ಪ್ರಜಾತಿಗಳನ್ನು ಪಳಗಿಸಲಾಗಿದೆ; ಅವು ಹಾಲು, ಮಾಂಸ, ಬಟ್ಟೆಗಳು ಅಥವಾ ಉಣ್ಣೆಬಟ್ಟೆ ಸಂಚಿಗಳಂತಹ ಸರಕುಗಳಿಗೆ ಕೂದಲನ್ನು ಒದಗಿಸುತ್ತವೆ, ಮತ್ತು ಅವು ಮಾನವ ಸಾರಿಗೆಯಿಂದ ಭಾರ ಹೊರುವವರೆಗೆ ವ್ಯಾಪಿಸುವ ಕಾರ್ಯಗಳಲ್ಲಿ ಕೆಲಸದ ಪ್ರಾಣಿಗಳಾಗಿವೆ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ, ಯುಎಸ್, ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಸಚಿನ್ ರಮೇಶ್ ತೆಂಡೂಲ್ಕರ್ (ಜನನ: ೨೪-ಏಪ್ರಿಲ್-೧೯೭೩) ಭಾರತದ ಖ್ಯಾತ ಕ್ರಿಕೆಟ್ ಆಟಗಾರ . ಕ್ರಿಕೆಟ್ ಲೋಕದ ದೇವರು ಎಂದೇ ಹೆಸರು ಮಾಡಿರುವ ಸಚಿನ್, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ದಾಖಲೆಗಳ ಸರದಾರ ಎನಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲಿ ಅತಿ ಹೆಚ್ಚು ಶತಕ ಹಾಗೂ ರನ್ಗಳನ್ನು ಭಾರಿಸಿರುವ ದಾಖಲೆ ಹೊಂದಿರುವ ಸಚಿನ್ ಅವರನ್ನು ಲಿಟಲ್ ಮಾಸ್ಟರ್ ಎಂದೂ ಕರೆಯಲಾಗುತ್ತದೆ.
ಕಯ್ಯಾರ ಕಿಞ್ಞಣ್ಣ ರೈ (ಜೂನ್ ೮,೧೯೧೫ - ಆಗಸ್ಟ್ ೯,೨೦೧೫) ಅಖಿಲ ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ,ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ,ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣ ಕ್ರಿಯಾಸಮಿತಿಯ ಪ್ರಧಾನ ಸಂಚಾರಕರಾಗಿ,ನಿರಂತರವಾಗಿ ದುಡಿದವರು. ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈರವರು, ಅಖಿಲಭಾರತ ಮಟ್ಟದಲ್ಲಿ ಜರುಗಿದ ೬೬ ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ರಾಯಚೂರು ಜಿಲ್ಲೆ ಎಂಬುದು ಭಾರತದ ಕರ್ನಾಟಕ ರಾಜ್ಯದಲ್ಲಿ ಆಡಳಿತಾತ್ಮಕ ಜಿಲ್ಲೆ ಆಗಿದೆ. ಇದು ರಾಜ್ಯದ ಈಶಾನ್ಯ ಭಾಗದಲ್ಲಿದೆ ಮತ್ತು ಉತ್ತರದಲ್ಲಿ ಯಾದಗಿರಿ ಜಿಲ್ಲೆ, ಬಿಜಾಪುರ ಜಿಲ್ಲೆ ಮತ್ತು ಬಾಗಲಕೋಟೆ ಜಿಲ್ಲೆ ವಾಯುವ್ಯದಲ್ಲಿ, ಕೊಪ್ಪಳ ಜಿಲ್ಲೆ ಪಶ್ಚಿಮದಲ್ಲಿ, ಬಳ್ಳಾರಿ ಜಿಲ್ಲೆ ದಕ್ಷಿಣದಲ್ಲಿ, ಜೋಗುಲಾಂಬ ಗದ್ವಾಲ್ ಜಿಲ್ಲೆ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆ.
ಕ್ರಿಕೆಟ್ ನಿಯಮಗಳು ಮೆರಿಲಿಬೋನ್ ಕ್ರಿಕೆಟ್ ಕ್ಲಬ್ (MCC) ಸ್ಥಾಪಿಸಿದ ಕ್ರಿಕೆಟ್ ಆಟ ಆಡುವವರು ಜಗತ್ತಿನಾದ್ಯಂತ ಬಳಸಬಲ್ಲ ಸೂತ್ರಗಳ ಸಂಗ್ರಹವಾಗಿದ್ದು, ಇದು ಕ್ರಿಕೆಟ್ಅನ್ನು ವಿಶ್ವದಲ್ಲೆಲ್ಲಾ ಒಂದೇ ರೀತಿಯಲ್ಲಿ ಮತ್ತು ನ್ಯಾಯಯುತವಾಗಿ ಆಡಲು ಸಹಾಯಕವಾಗಿವೆ. ಸಧ್ಯದಲ್ಲಿ ಒಟ್ಟಾರೆ ೪೨ ನಿಯಮಗಳಿದ್ದು, ಇವು ಕ್ರೀಡೆಯನ್ನು ಆಡುವುದರಿಂದ ಹಿಡಿದು, ಆಟವನ್ನು ತಂಡವು ಯಾವ ರೀತಿ ಗೆಲ್ಲುತ್ತದೆ, ಬ್ಯಾಟ್ಸ್ ಮನ್ ಗಳು ಔಟ್ ಆಗುವುದು ಹೇಗೆ, ಆಡುವ ಪಿಚ್ ಅನ್ನು ಹೇಗೆ ತಯಾರಿಸಬೇಕು ಮತ್ತು ಹೇಗೆ ಸಂರಕ್ಷಿಸಬೇಕು, ಇತ್ಯಾದಿ ವಿಷಯಗಳ ಬಗ್ಗೆ ವಿಧಿವಿಧಾನಗಳನ್ನು ಸೂಚಿಸುತ್ತವೆ. MCC ಒಂದು ಖಾಸಗಿ ಕ್ಲಬ್ ಆಗಿದ್ದು, ಇದು ಇಂಗ್ಲೆಂಡ್ ನ ಲಂಡನ್ ನಲ್ಲಿದೆ ಹಾಗೂ ಈಗ ಅದು ಕ್ರಿಕೆಟ್ ಆಟದ ಆಡಳಿತವನ್ನು ನಡೆಸುವಂತಹ ಸಂಸ್ಥೆಯಾಗಿಲ್ಲ; ಆದಾಗ್ಯೂ ಇಂದಿಗೂ MCCಯೇ ಕ್ರಿಕೆಟ್ ನ ನಿಯಮಗಳ ಕಾಪಿರೈಟ್ (ಸ್ವಾಮ್ಯ) ಹೊಂದಿದೆ ಹಾಗೂ ಕೇವಲ MCC ಮಾತ್ರ ನಿಯಮಗಳನ್ನು ಬದಲಾಯಿಸುವ ಹಕ್ಕನ್ನು ಹೊಂದಿದೆ; ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಈ ಕ್ರೀಡೆಯನ್ನು ವಿಶ್ವಮಟ್ಟದಲ್ಲಿ ನಿಯಂತ್ರಿಸುವ ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ICC)ನೊಡನೆ ಚರ್ಚಿಸಿದ ನಂತರವೇ ನಿಯಮಗಳಲ್ಲಿ ಬದಲಾವಣೆಗಳನ್ನು ತರಲಾಗುತ್ತಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಗಾಂಧಾರಿ ಎಂಬುದು ಮಹಾಭಾರತ ಮಹಾಕಾವ್ಯದಲ್ಲಿ ಬರುವ ಒಂದು ಪಾತ್ರ. ಗಾಂಧಾರ ದೇಶದ (ಈಗಿನ ಕಾಂದಹಾರ್, ಅಫ್ಘಾನಿಸ್ಥಾನ)ರಾಜನಾದ ಸುಬಲನ ಪುತ್ರಿಯಾದ ಈಕೆ ಕುರುವಂಶದ ಮಹಾರಾಜನಾದ ಧೃತರಾಷ್ಟ್ರನನ್ನು ವರಿಸುತ್ತಾಳೆ. ಹುಟ್ಟು ಕುರುಡನಾದ ತನ್ನ ಪತಿ ಧೃತರಾಷ್ಟ್ರನಿಗೆ ಕಾಣದ ಹೊರಜಗತ್ತು ತನಗೂ ಸಹ ಕಾಣುವುದು ಬೇಡವೆಂದು ನಿರ್ಧರಿಸಿ ತನ್ನ ಕಣ್ಣಿಗೆ ಪಟ್ಟಿಯನ್ನು ಕಟ್ಟಿಕೊಳ್ಳುತ್ತಾಳೆ.
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS )(ಇಂಟರ್ನ್ಯಾಷನಲ್ ಸ್ಪೇಸ್ ಸ್ಟೇಷನ್) ಎಂಬುದು ಅಂತರರಾಷ್ಟ್ರೀಯವಾಗಿ ಅಭಿವೃದ್ಧಿಪಡಿಸಲಾದ ಸಂಶೋಧನಾ ಸೌಲಭ್ಯವಾಗಿದ್ದು, ಇದನ್ನು ಪೃಥ್ವಿಯ ನಿಕಟವರ್ತಿ ಕಕ್ಷೆಯಲ್ಲಿ ಸ್ಥಾಪಿಸಲಾಗುತ್ತದೆ. ಈ ನಿಲ್ದಾಣದ ನಿರ್ಮಾಣವನ್ನು 1998 ರಲ್ಲಿ ಪ್ರಾರಂಭಿಸಲಾಗಿದ್ದು, 2011 ರ ಉತ್ತರಾರ್ಧದಲ್ಲಿ ಪೂರ್ಣಗೊಳಿಸಬೇಕೆಂದು ನಿರ್ಧರಿಸಲಾಗಿದೆ. ನಿಲ್ದಾಣವು ಕೊನೆಯ ಪಕ್ಷ 2015 ರವರೆಗೆ ಮತ್ತು 2020 ರವರೆಗೆ ಕಾರ್ಯಾಚರಣೆಯಲ್ಲಿರಬೇಕೆಂದು ನಿರೀಕ್ಷಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಬಿ.ಆರ್.ಲಕ್ಷ್ಮಣರಾವ್, ಅವರು ಕನ್ನಡದ ಪ್ರೇಮಕವಿ, ನವೋದಯ, ನವ್ಯ, ಬಂಡಾಯ ಮೊದಲಾದ ಯಾವ ಗುಂಪಿಗೂ ಸೇರದ ಕವಿ, ಭಾವಗೀತೆಗಳ ಕವಿ. ಲಕ್ಷ್ಮಣರಾಯರ 'ಅಮ್ಮ, ನಿನ್ನ ಎದೆಯಾಳದಲ್ಲಿ',‘ಸುಬ್ಭಾಭಟ್ಟರ ಮಗಳೇ’,‘ನಾ ಚಿಕ್ಕವನಾಗಿದ್ದಾಗ ಅಪ್ಪ ಹೇಳುತ್ತಿದ್ದರು',' ಜಾಲಿಬಾರಿನಲ್ಲಿ ಕೂತ ಪೋಲಿ ಗೆಳೆಯರು' ಮುಂತಾದ ಕವಿತೆಗಳು ಜನಪ್ರಿಯವಾಗಿವೆ. ಈ ಪದ್ಯಗಳು, ಹಲವು ವೇಳೆ ಕೆ.ಎಸ್.ನ ಅವರ ‘ಶ್ಯಾನುಭೋಗರ ಮಗಳು’, ‘ರಾಯರು ಬಂದರು ಮಾವನ ಮನೆಗೆ’ ಪದ್ಯಗಳಿಗೆ ಸರಿಹೋಲಿಕೆಯಂತಿವೆ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಅಥವಾ ನೀಟ್ ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜ್ಗಳಲ್ಲಿ ಯಾವುದೇ ಪದವಿ ವೈದ್ಯಕೀಯ ಕೋರ್ಸ್ (ಎಮ್ಬಿಬಿಎಸ್/ ದಂತವೈದ್ಯಕೀಯ ಕೋರ್ಸ್ - ಬಿಡಿಎಸ್) ಅಥವಾ ಸ್ನಾತಕೋತ್ತರ ಕೋರ್ಸ್ (ಎಮ್ಡಿ, ಎಮ್ಎಸ್) ಅಭ್ಯಸಿಸಲು ಬಯಸುವ ವಿದ್ಯಾರ್ಥಿಗಳಿಗೆ ಭಾರತದಲ್ಲಿನ ಒಂದು ಪ್ರವೇಶ ಪರೀಕ್ಷೆ. ಎಮ್ಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ ಗಳಿಗಾಗಿ ನೀಟ್-ಯುಜಿ (ಪದವಿಪೂರ್ವ) ಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಸಿ) ನಡೆಸಿಕೊಡುತ್ತದೆ. ಅಖಿಲ ಭಾರತ ಪ್ರಿ ಮೆಡಿಕಲ್ ಟೆಸ್ಟ್ (ಎಐಪಿಎಮ್ಟಿ) ಮತ್ತು ರಾಜ್ಯಗಳು ಅಥವಾ ಕಾಲೇಜ್ಗಳು ನಡೆಸಿಕೊಡುವ ಎಲ್ಲ ಪ್ರತ್ಯೇಕ ಎಮ್ಬಿಬಿಎಸ್ ಪರೀಕ್ಷೆಗಳ ಬದಲಾಗಿ ನೀಟ್-ಯುಜಿ ೨೦೧೩ರಲ್ಲಿ ಬಂದಿತು.
ಮಾನವ ಶಿಶ್ನವು ಪುರುಷರಿಗೆ ಮೂತ್ರ ವಿಸರ್ಜಿಸಲು ಮತ್ತು ಸ್ಖಲಿಸಲು ಸಹಕರಿಸುವ ಬಾಹ್ಯ ಲೈಂಗಿಕ ಅವಯವವಾಗಿದೆ. ವೃಷಣಗಳು ಮತ್ತು ಇತರ ಅನುಬಂಧ ರಚನೆಗಳೊಂದಿಗೆ ಶಿಶ್ನವು ಪುರುಷ ಪ್ರತ್ಯುತ್ಪಾದನಾ ವ್ಯವಸ್ಥೆಯ ಪ್ರಮುಖ ಭಾಗವಾಗಿ ಕಾರ್ಯನಿರ್ವಹಿಸುತ್ತದೆ. ಶಿಶ್ನದ ಮುಖ್ಯ ಭಾಗಗಳು ಮೂಲ, ದೇಹ, ಶಿಶ್ನದ ಎಪಿಥೀಲಿಯಂ, ಶಾಫ್ಟ್ ಚರ್ಮ ಸೇರಿದಂತೆ ಮತ್ತು ಗ್ಲಾನ್ಸ್ ಅನ್ನು ಆವರಿಸುವ ಮುಂದೊಗಲು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.
ವೈಯಕ್ತಿಕ ಮಾಹಿತಿ ಜನನ ದುರ್ಗಿ ಟುಡು (1958-06-20) 20 June 1958ಉಪರ್ಬೇಡಾ, ಒಡಿಶಾ, ಭಾರತ ರಾಜಕೀಯ ಪಕ್ಷ ಭಾರತೀಯ ಜನತಾ ಪಕ್ಷ ಸಂಗಾತಿ(ಗಳು) ಮಕ್ಕಳು * ಲಕ್ಷ್ಮಣ್ ಮುರ್ಮು (ಮರಣ: 2009) ಸಿಪುನ್ ಮುರ್ಮು (ಮರಣ: 2012) ಇತಿಶ್ರೀ ಮುರ್ಮು ವಾಸಸ್ಥಾನ ಟೆಂಪ್ಲೇಟು:Bulletedlist ಅಭ್ಯಸಿಸಿದ ವಿದ್ಯಾಪೀಠ ರಾಮಾ ದೇವಿ ಮಹಿಳಾ ವಿಶ್ವವಿದ್ಯಾಲಯ (ಬಿಎ) ವೃತ್ತಿ ರಾಜಕಾರಣಿ ಉದ್ಯೋಗ ಶಿಕ್ಷಕಿ ಸಹಿ ಜಾಲತಾಣ presidentofindia.nic.in ಮಿಲಿಟರಿ ಸೇವೆ ಪ್ರಶಸ್ತಿಗಳು ಕೆಳಗೆ ನೋಡಿ ದ್ರೌಪದಿ ಮುರ್ಮು (ಜನನ ೨೦ ಜೂನ್ ೧೯೫೮) ಒಬ್ಬ ಭಾರತೀಯ ರಾಜಕಾರಣಿ, ಇವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರಾಗಿದ್ದರು. ಅವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದ ಸ್ಥಳೀಯ, ಪರಿಶಿಷ್ಟ ಬುಡಕಟ್ಟು ಸಮುದಾಯಕ್ಕೆ ಸೇರಿದ ಮೊದಲ ವ್ಯಕ್ತಿ.
ಮಹರ್ಷಿ ವಾತ್ಸ್ಯಾಯನ ಕೃತವಾದ ಕಾಮಸೂತ್ರವೆಂಬ ಪ್ರಾಚೀನ ಭಾರತೀಯ ಸಂಸ್ಕೃತ ಗ್ರಂಥ ಮಾನವನ ಲೈಂಗಿಕ ವರ್ತನೆ ಮತ್ತು ಭಾರತೀಯ ಪುರುಷಾರ್ಥ ಚಿಂತನೆಯನ್ನು ಕುರಿತ ಪ್ರಮಾಣಿತ ಕೃತಿಯೆಂಬುದು ಪಂಡಿತಜನ ವೇದ್ಯವಾದ ವಿಷಯ. ವಾತ್ಸ್ಯಾಯನ ಕಾಮಸೂತ್ರವು ಪ್ರಧಾನವಾಗಿ ಸಂಭೋಗ ಭಂಗಿಗಳನ್ನು ಕುರಿತ ಲೈಂಗಿಕ ಕೈಪಿಡಿಯಲ್ಲ.ಅದು ಚೆನ್ನಾಗಿ ಬದುಕುವ ಕಲೆ, ಪ್ರೀತಿಯ ಸ್ವರೂಪ, ಸಂಗಾತಿಗಳನ್ನು ಹುಡುಕುವ ಕ್ರಮ, ಲೈಂಗಿಕ ಜೀವನವನ್ನು ಕಾಪಾಡಿಕೊಳ್ಳುವುದು ಮತ್ತು ಆನಂದ-ಆಧಾರಿತ ಸಾಮರ್ಥ್ಯಗಳಿಗೆ ಸಂಬಂಧಿಸಿದ ಇತರ ಅಂಶಗಳನ್ನು ಕುರಿತು ಮಾರ್ಗದರ್ಶಿಯಾಗಿದೆ. ಇದು ವಿಭಿನ್ನ ಭಾಷ್ಯಗಳೊಂದಿಗೆ (ವ್ಯಾಖ್ಯಾನಗಳು) ಆಧುನಿಕ ಯುಗದಲ್ಲಿ ಉಳಿದುಕೊಂಡಿರುವ ಸಂಕ್ಷಿಪ್ತ ಪೌರುಷ ಪದ್ಯಗಳನ್ನು ಹೊಂದಿರುವ ಸೂತ್ರ ವಿಭಾಗದ ಗ್ರಂಥವಾಗಿದೆ.
ಬಾಚಣಿಗೆಯು (ಹಣಿಗೆ, ಸಿಕ್ಕಟಿಗೆ) ಹಲ್ಲುಗಳ ಸಾಲನ್ನು ಹಿಡಿದಿಡುವ ಕಾಂಡವನ್ನು ಹೊಂದಿರುವ ಒಂದು ಉಪಕರಣ. ಕೂದಲನ್ನು ಸ್ವಚ್ಛಗೊಳಿಸಲು, ಸುಕ್ಕು ಬಿಡಿಸಲು, ಅಥವಾ ವಿನ್ಯಾಸ ಮಾಡಲು ಕೂದಲಿನ ಮೂಲಕ ಇದನ್ನು ಎಳೆಯುವುದು ಇದರ ಉದ್ದೇಶವಾಗಿದೆ. ಬಾಚಣಿಗೆಗಳನ್ನು ಪ್ರಾಗೈತಿಹಾಸಿಕ ಕಾಲದಿಂದ ಬಳಸಲಾಗಿದೆ, ಮತ್ತು ಪರ್ಷಿಯಾದಲ್ಲಿನ ೫,೦೦೦ ವರ್ಷದಷ್ಟು ಹಳೆಯದೆಂದು ಕಾಲ ನಿರ್ಧಾರ ಮಾಡಲಾದ ವಸಾಹತುಗಳಿಂದ ಬಹಳ ಸಂಸ್ಕರಿತ ರೂಪಗಳಲ್ಲಿ ಪತ್ತೆಹಚ್ಚಲಾಗಿದೆ.
ನಾ. ಡಿಸೋಜ (೬ನೇ ಜೂನ್ ೧೯೩೭ - ೫ನೇ ಜನವರಿ ೨೦೨೫) ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ.ತಮ್ಮೆಲ್ಲ ಕಥೆ, ಕಾದಂಬರಿಗಳ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಎಚ್ಚರಿಸುತ್ತ ಬಂದಿದ್ದು, ಪರಿಸರ ನಾಶವೇ ಮಾನವ ಜನಾಂಗದ ವಿನಾಶದ ಮೂಲ, ಪರಿಸರವನ್ನುಳಿಸಿಕೊಂಡು ಬಾಳಿದರೆ ಮಾನವನ ಬಾಳೂ ಸಂತುಷ್ಟ ಎಂಬುದನ್ನು ಮತ್ತೆ ಮತ್ತೆ ಪ್ರಸ್ತಾಪಿಸುತ್ತಾರೆ, ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ.
ಭಾರತ ಬಿಟ್ಟು ತೊಲಗಿ ಚಳುವಳಿಯು ಒಂದು ಅಸಹಕಾರ ಚಳುವಳಿಯಾಗಿದ್ದು ಆಗಸ್ಟ್ ೧೯೪೨ರಲ್ಲಿ ಮಹಾತ್ಮಾ ಗಾಂಧಿಯವರ ಮುಂದಾಳತ್ವದಲ್ಲಿ ನಡೆಯಿತು. ಇದರ ಗುರಿ ಬ್ರಿಟಿಷ್ ಸರ್ಕಾರದಿಂದ ಭಾರತದ ಸ್ವಾತಂತ್ರ್ಯ ಪಡೆಯುವುದಾಗಿತ್ತು. ೮ ಆಗಸ್ಟ್ ರಂದು ಮುಂಬಯಿಯ ಗೊವಾಳಿಯ ಮೈದಾನ(ಇಂದಿನ ಹೆಸರು - ಆಗಸ್ಟ್ ಕ್ರಾಂತಿ ಮೈದಾನ)ದಲ್ಲಿ ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಎಂಬ ಘೋಷಣೆಯೊಂದಿಗೆ ಪ್ರಾರಂಭವಾಯಿತು.
ಇಸ್ಲಾಮ್ (الإسلام; [ɪsˈlaːm] ( ), ಅನುವಾದ. ದೇವರ ಇಚ್ಛೆಗೆ ಶರಣಾಗುವುದು) ಏಕದೇವತಾವಾದಿ ಧರ್ಮವಾಗಿದ್ದು, ಇದರ ಅನುಯಾಯಿಗಳು ಅಲ್ಲಾಹನಲ್ಲದೆ ಬೇರೆ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ನಂಬುತ್ತಾರೆ. ಅವರನ್ನು ಮುಸ್ಲಿಮರು ಎಂದು ಕರೆಯಲಾಗುತ್ತದೆ. ಇಸ್ಲಾಂ ಧರ್ಮವು ದೇವರು (ಅಲ್ಲಾಹು) ಕರುಣಾಮಯಿ, ಸರ್ವಶಕ್ತ ಮತ್ತು ಏಕೈಕನು ಎಂದು ಬೋಧಿಸುತ್ತದೆ ಮತ್ತು ಅವನು ಪ್ರವಾದಿಗಳು, ಸಂದೇಶವಾಹಕರು ಮತ್ತು ಪವಿತ್ರ ಗ್ರಂಥಗಳ ಮೂಲಕ ಮಾನವಕುಲಕ್ಕೆ ಮಾರ್ಗದರ್ಶನ ನೀಡಿದ್ದಾನೆ ಎಂದು ಹೇಳುತ್ತದೆ.
ಬೇಲೂರು - ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ಶಿಲಾಬಾಲಿಕೆಯರ ಬೇಲೂರು ಎಂದು ಪ್ರಸಿದ್ಧವಾಗಿರುವ ಬೇಲೂರು, ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡು, ಸೋಮನಾಥಪುರದ ಜೊತೆಗೆ ಬೇಲೂರು, ಹೊಯ್ಸಳ ಸಾಮ್ರಾಜ್ಯದ ಶಿಲ್ಪಕಲೆಯ ದೇವಾಲಯಗಳೆಂದು ಪ್ರಸಿದ್ಧವಾಗಿವೆ.ಬೇಲೂರಿನ ಶ್ರೀ ಚೆನ್ನಕೇಶವ ದೇವಾಲಯವು ಸಹಸ್ರಾರು ಪ್ರವಾಸಿಗರನ್ನು ತನ್ನೆಡೆಗೆ ತನ್ನ ಶಿಲ್ಪಕಲೆಗಳ ಮೂಲಕ ಸೆಳೆಯುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.