The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಟೆಂಪ್ಲೇಟು:Launching/Proton (Khrunichev) ಗ್ಲೋನಾಸ್ (Russian: ГЛОНАСС, IPA: [ɡlɐˈnas]) ರೇಡಿಯೊ ಆಧಾರಿತಉಪಗ್ರಹ ಸಂಚಾರ ನಿರ್ದೇಶಿಸುವ ವ್ಯವಸ್ಥೆಯಾಗಿದ್ದು,ರಷ್ಯಾದ ಬಾಹ್ಯಾಕಾಶ ಶಕ್ತಿಗಳಿಂದ ರಷ್ಯನ್ ಸರ್ಕಾರಕ್ಕೆ ನಿರ್ವಹಿಸಲಾಗುತ್ತದೆ. ಅಮೆರಿಕದ ಜಾಗತಿಕ ಸ್ಥಾನಿಕವ್ಯವಸ್ಥೆ, ಚೀನಾದ ಕಂಪ್ಯಾಸ್ ಸಂಚಾರ ನಿರ್ದೇಶನ ವ್ಯವಸ್ಥೆ ಮತ್ತು ಐರೋಪ್ಯ ಒಕ್ಕೂಟದ ಯೋಜಿತ ಗೆಲಿಲಿಯೊ ಸ್ಥಾನಿಕ ವ್ಯವಸ್ಥೆ ಮತ್ತು ಭಾರತದ ಪ್ರಾದೇಶಿಕ ಸಂಚಾರ ನಿರ್ದೇಶನ ಉಪಗ್ರಹ ವ್ಯವಸ್ಥೆಗೆ ಪರ್ಯಾಯ ಮತ್ತು ಪೂರಕವಾಗಿದೆ. ಗ್ಲೋನಾಸ್ ಕುರಿತ ಅಭಿವೃದ್ಧಿಯು ೧೯೭೬ರಲ್ಲಿ ಸೋವಿಯಟ್ ಒಕ್ಕೂಟದಲ್ಲಿ ಆರಂಭವಾಯಿತು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ನಾ. ಡಿಸೋಜ (೬ನೇ ಜೂನ್ ೧೯೩೭ - ೫ನೇ ಜನವರಿ ೨೦೨೫) ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ.ತಮ್ಮೆಲ್ಲ ಕಥೆ, ಕಾದಂಬರಿಗಳ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಎಚ್ಚರಿಸುತ್ತ ಬಂದಿದ್ದು, ಪರಿಸರ ನಾಶವೇ ಮಾನವ ಜನಾಂಗದ ವಿನಾಶದ ಮೂಲ, ಪರಿಸರವನ್ನುಳಿಸಿಕೊಂಡು ಬಾಳಿದರೆ ಮಾನವನ ಬಾಳೂ ಸಂತುಷ್ಟ ಎಂಬುದನ್ನು ಮತ್ತೆ ಮತ್ತೆ ಪ್ರಸ್ತಾಪಿಸುತ್ತಾರೆ, ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಆಕ್ರೊ ನೃತ್ಯ ವು ನೃತ್ಯದ ಒಂದು ಶೈಲಿಯಾಗಿದ್ದು, ಶಾಸ್ತ್ರೀಯ ನೃತ್ಯದ ತಂತ್ರವನ್ನು ನಿಖರ ಆಕ್ರೊಬಾಟಿಕ್(ದೊಂಬರಾಟದ ಕಸರತ್ತು) ಅಂಶಗಳಿಂದ ಸಂಯೋಜಿಸಿದೆ. ಇದನ್ನು ಅದರ ಅಥ್ಲೆಟಿಕ್ ಲಕ್ಷಣದಿಂದ ವ್ಯಾಖ್ಯಾನಿಸಬಹುದು. ಅದರ ವಿಶಿಷ್ಟ ನೃತ್ಯನಿಯೋಜನೆಯು ನಯವಾಗಿ ನೃತ್ಯ ಮತ್ತು ಆಕ್ರೋಬ್ಯಾಟಿಕ್ಸ್ನ್ನು ಒಂದುಗೂಡಿಸುತ್ತದೆ ಮತ್ತು ನೃತ್ಯದ ಸಂದರ್ಭದಲ್ಲಿ ದೊಂಬರಾಟದ ಕಸರತ್ತುಗಳ ಬಳಕೆಯ ಲಕ್ಷಣದಿಂದ ಕೂಡಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಗೀತಾ ನಾಗಭೂಷಣ ಕನ್ನಡ ಸಾಹಿತ್ಯದ ಪ್ರಸಿದ್ಧ ಬರಹಗಾರ್ತಿಯರಲ್ಲೊಬ್ಬರು. ಮೊಘಲಾಯಿ ಪರಿಸರದ ಪ್ರಮುಖ ಲೇಖಕಿ ಎಂದು ಪ್ರಖ್ಯಾತರಾಗಿರುವ ನಾಡೋಜ ಗೀತಾ ನಾಗಭೂಷಣ, ತಮಗಿದ್ದ ಕಿತ್ತು ತಿನ್ನುವ ಬಡತನ, ಅಸಹಕಾರಕ ಪರಿಸರ, ಹೆಣ್ಣು ಮಕ್ಕಳ ನ್ನು ಶಾಲೆಗೆ ಕಳುಹಿಸದ ಸಾಮಾಜಿಕ ವ್ಯವಸ್ಥೆ ಇತ್ಯಾದಿಗಳನ್ನೆಲ್ಲಾ ದೃಢಸಂಕಲ್ಪ ಮತ್ತು ಹೋರಾಟದ ಮನೋಭಾವಗಳಿಂದ ದಾಟಿ ತಮ್ಮ ಎಡೆಬಿಡದ ಪರಿಶ್ರಮದಿಂದ ಬಿ.ಎ, ಬಿ.ಎಡ್, ಎಂ.ಎ ಪದವಿಗಳನ್ನು ಗಳಿಸಿ ಬಹುಕಾಲ ಅಧ್ಯಾಪನ ವೃತ್ತಿಯನ್ನೂ ನಡೆಸಿದವರು. ಜೊತೆಗೆ ತಮ್ಮ ಶಿಕ್ಷಕ ವೃತ್ತಿ, ಬರಹ ಪ್ರವೃತ್ತಿ ಮತ್ತು ನಡೆಗಳಿಂದ ಸಮಾಜಕ್ಕೆ ಬೆಳಕು ಕಾಣಿಸುವಲ್ಲಿ ನಿರಂತರ ಪ್ರಯತ್ನಶೀಲರಾದವರು.
ಚಹಾ ವು ಕೆಮೆಲಿಯಾ ಸೈನೆನ್ಸಿಸ್ ಸಸ್ಯದ ಎಲೆಗಳು, ಎಲೆಯ ಮೊಗ್ಗುಗಳು, ಹಾಗೂ ಅಂತರಗೆಣ್ಣುಗಳ ವ್ಯಾವಸಾಯಿಕ ಉತ್ಪನ್ನವಾಗಿದ್ದು ಹಲವಾರು ವಿಧಾನಗಳಿಂದ ಇದು ತಯಾರಿಸಲ್ಪಡುತ್ತದೆ ಮತ್ತು ಹದಗೊಳಿಸಲ್ಪಡುತ್ತದೆ. ಬಿಸಿಯಾಗಿರುವ ಅಥವಾ ಕುದಿಯುತ್ತಿರುವ ನೀರಿಗೆ ಹದಗೊಳಿಸಲಾದ ಅಥವಾ ಸಂಸ್ಕರಿಸಲಾದ ಎಲೆಗಳನ್ನು ಮಿಶ್ರಗೊಳಿಸಿ ತಯಾರಿಸಲಾಗುವ ಪರಿಮಳದ ಪಾನೀಯಕ್ಕೂ "ಚಹಾ" ಎಂದೇ ಕರೆಯಲಾಗುತ್ತದೆ ಹಾಗೂ ಇದು ಸ್ವತಃ ಕೆಮೆಲಿಯಾ ಸೈನೆನ್ಸಿಸ್ ಸಸ್ಯಕ್ಕಿರುವ ಸಾಮಾನ್ಯ ಹೆಸರಾಗಿದೆ. ನೀರಿನ ನಂತರ, ಚಹಾವು ವಿಶ್ವದಲ್ಲಿ ಅತ್ಯಂತ ವ್ಯಾಪಕವಾಗಿ-ಬಳಸಲಾಗುತ್ತಿರುವ ಪಾನೀಯವಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಕ್ಯಾರೆನ್ ಲಿಡಿಯಾ ಆಬೈ (19 ಸೆಪ್ಟೆಂಬರ್ 1904 - 15 ಸೆಪ್ಟೆಂಬರ್ 1982) ಒಬ್ಬ ಡ್ಯಾನಿಶ್ ಬರಹಗಾರ್ತಿ. ಅವರು 1930ರ ದಶಕದ ಉತ್ತರಾರ್ಧದಲ್ಲಿ, ಪ್ಯಾರಿಸ್ ಮತ್ತು ಲಂಡನ್ನಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡಿದರು, ಹಲವಾರು ಐತಿಹಾಸಿಕ ಕಾದಂಬರಿಗಳೊಂದಿಗೆ ಜನಪ್ರಿಯತೆಯನ್ನು ಗಳಿಸಿದರು, ಇವರ ಬರವಣಿಗೆಯಲ್ಲಿ ಬಲವಾದ ಇಚ್ಛಾಶಕ್ತಿಯುಳ್ಳ ಮಹಿಳೆಯರ ಪಾತ್ರಗಳೇ ಪ್ರಾಮುಖ್ಯ. ಅವರ ಕೃತಿಗಳಲ್ಲಿ ಪ್ರವಾಸ ಪುಸ್ತಕಗಳು ಮತ್ತು ಪ್ರಬಂಧಗಳ ಸಂಗ್ರಹವೂ ಸೇರಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸಿಖ್ಖ್ಧರ್ಮದ ಸಂಸ್ಥಾಪಕ ಗುರುನಾನಕ್ ಪಶ್ಚಿಮ ಪಂಜಾಬ್ನ (ಈಗಿನ ಪಾಕಿಸ್ತಾನ) ತಳವಂಡಿಯಲ್ಲಿ,ಏಪ್ರಿಲ್ ೧೫, ೧೪೬೯ರಂದು ಹುಟ್ಟಿದರು.ಸಾಮಾನ್ಯ ಹಿಂದೂ ಕುಟುಂಬದ ಕಲ್ಯಾಣ್ ದಾಸ್ ಮತ್ತು ಮೆಹ್ತಾ ತೃಪ್ತ ದಂಪತಿಗಳ ಮಗನಾಗಿ ಜನಿಸಿದರು.ತಮ್ಮ ೧೬ನೇ ವಯಸ್ಸಿನಲ್ಲಿ ಸುಲಾಖನಿಯವರೊಂದಿಗೆ ವಿವಾಹ.ಶ್ರೀಚಂದ್ ಮತ್ತು ಲಕ್ಷ್ಮಿದಾಸ್ ಮಕ್ಕಳು. ಕಾರ್ತಿಕ ಮಾಸದ ಪೌರ್ಣಮಿಯ ದಿನವನ್ನು ಗುರುನಾನಕ್ ಅವರ ಜನ್ಮದಿನವನ್ನಾಗಿ ಆಚರಿಸಲಾಗುತ್ತದೆ. ತುಂಬಾ ಸಹಜ ಮತ್ತು ಸರಳವಾಗಿದ್ದ, ಪವಾಡ ಮಾಡುತ್ತೇನೆಂದು ಹೇಳಿಕೊಳ್ಳದ, ಜನರ ಮಧ್ಯದ ಜೀವ ಗುರುನಾನಕ್.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಪುಕ್ಸಟ್ಟೆ ಗಂಡ ಹೊಟ್ಟೆ ತುಂಬಾ ಉಂಡ (ಚಲನಚಿತ್ರ)
ಈ ಚಿತ್ರವನ್ನು ರಾಜ್ ಕಿಶೋರ್ ಅವರು ನಿರ್ದೇಶನ ಮಾಡಿದ್ದರು.ಈ ಚಿತ್ರದ ನಿರ್ಮಾಪಕರು ಬಿ.ಎನ್.ಗಂಗಾಧರ್. ಈ ಚಿತ್ರದಲ್ಲಿ ಬರುವ ಪಾತ್ರಗಳು ಅಂಬರೀಶ್, ವಿದ್ಯಾಶ್ರೀ, ಭವ್ಯ, ಆರ್.ಎನ್.ಜಯಗೋಪಾಲ್, ವೆಂಕಟೇಶ್, ಸದಾಶಿವ ಸಾಲಿಯಾನ, ಬಾಲಕೃಷ್ಣ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ಹಂಸಲೇಖ. ಈ ಚಿತ್ರದ ಛಾಯಾಗ್ರಹಕರು ಸಿ.ಮನೋಹರ್.
ಜೋನಸ್ ಗಹರ್ ಸ್ಟೋರ್ (ಜನನ 25 ಆಗಸ್ಟ್ 1960) 2021 ರಿಂದ ನಾರ್ವೆಯ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸುತ್ತಿರುವ ನಾರ್ವೇಜಿಯನ್ ರಾಜಕಾರಣಿ. ಅವರು 2014 ರಿಂದ ಲೇಬರ್ ಪಕ್ಷದ ನಾಯಕರಾಗಿದ್ದಾರೆ. ಸ್ಟೋರ್ 2005 ರಿಂದ 2012 ರವರೆಗೆ ಪ್ರಧಾನಿ ಜೆನ್ಸ್ ಸ್ಟೋಲ್ಟೆನ್ಬರ್ಗ್ ಅವರ ಅಡಿಯಲ್ಲಿ ವಿದೇಶಾಂಗ ಸಚಿವರಾಗಿ ಮತ್ತು 2012 ರಿಂದ 2013 ರವರೆಗೆ ಆರೋಗ್ಯ ಮತ್ತು ಸಾಮಾಜಿಕ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದರು.
2014 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ಯೋಗದ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ ಯೋಗವು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ತಮ್ಮ ಯುಎನ್ ಭಾಷಣದಲ್ಲಿ ಜೂನ್ 21 ರ ದಿನಾಂಕವನ್ನು ಸೂಚಿಸಿದ್ದರು. ಏಕೆಂದರೆ ಇದು ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾಗಿದೆ ಮತ್ತು ಪ್ರಪಂಚದ ಅನೇಕ ಭಾಗಗಳಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹಂಚಿಕೊಳ್ಳುತ್ತದೆ.
ಬ್ರಿಟಿಷರ ಆಕ್ರಮಣ ಕಾಲದಿಂದಲೇ ಒಂದು ದೃಷ್ಟಿಯಲ್ಲಿ ಆರಂಭವಾಗಿ, ೧೯ನೆಯ ಶತಮಾನದ ನಡುಗಾಲದಿಂದ ಕ್ರಮೇಣ ತೀವ್ರವಾಗಿ, ೨೦ನೆಯ ಶತಮಾನದಲ್ಲಿ ವ್ಯಾಪಕವಾಗಿ ಹಬ್ಬಿ, ೧೯೪೭ರಲ್ಲಿ ಯಶಸ್ವಿಯಾಗಿ ಪರ್ಯವಸಾನ ಹೊಂದಿನ ಭಾರತೀಯ ಸ್ವಾತಂತ್ರ್ಯ ಚಳವಳಿಯ ಅಂಗವಾಗಿದ್ದೂ ವಿಶಿಷ್ಟವಾಗಿ ವಿಕಾಸಗೊಂಡ ಕರ್ನಾಟಕ ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಸ್ಥೂಲವಾಗಿ ಮೂರು ಕಾಲಗಳಾಗಿ ವಿಂಗಡಿಸಬಹುದಾಗಿದೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತದ ರಾಷ್ಟ್ರಪತಿಯ ನಂತರ ಭಾರತದ ಉಪ ರಾಷ್ಟ್ರಪತಿಯರು ಭಾರತ ಸರ್ಕಾರದಲ್ಲಿ ಎರಡನೇ ಅತ್ಯುನ್ನತ ಸಾಂವಿಧಾನಿಕ ಕಚೇರಿಯಾಗಿದ್ದಾರೆ. ಭಾರತದ ಸಂವಿಧಾನದ 63 ನೇ ವಿಧಿಗೆ ಅನುಸಾರವಾಗಿ, ರಾಜೀನಾಮೆ, ತೆಗೆದುಹಾಕುವಿಕೆ, ಮರಣ, ದೋಷಾರೋಪಣೆ ಅಥವಾ ಅಧ್ಯಕ್ಷರು ತಮ್ಮ ಕಾರ್ಯಗಳನ್ನು ನಿರ್ವಹಿಸಲು ಅಸಮರ್ಥತೆಯಿಂದಾಗಿ ಅನಿಶ್ಚಿತತೆ ಉಂಟಾದಾಗ ಉಪ ರಾಷ್ಟ್ರಪತಿಯರು ರಾಷ್ಟ್ರಪತಿಯರ ಕಾರ್ಯಗಳನ್ನು ನಿರ್ವಹಿಸುತ್ತಾರೆ. ಅವರು ಭಾರತದ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರೂ ಆಗಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸಾಹಿತ್ಯ ಮತ್ತು ವಿಶೇಷವಾಗಿ ಪ್ರಾಚೀನ ಹಸ್ತಪ್ರತಿಗಳ ಸಂಬಂಧದಲ್ಲಿ, ಪ್ರಕ್ಷೇಪಣ ಎಂದರೆ ಪಠ್ಯದಲ್ಲಿ ಮೂಲ ಲೇಖಕನು ಬರೆಯದಿರುವಂಥ ನಮೂದು ಅಥವಾ ವಾಕ್ಯವೃಂದ. ಪ್ರಾಚೀನ ಪಠ್ಯದ ಅಸ್ತಿತ್ವದಲ್ಲಿರುವ ಪ್ರತಿ ಮತ್ತು ಮೂಲಪ್ರತಿಯ ನಡುವೆ ಹಲವುವೇಳೆ ಪ್ರತಿಗಳ ಹಲವಾರು ಪೀಳಿಗೆಗಳಿರುವುದರಿಂದ, ಮತ್ತು ಪ್ರತಿಯೊಂದು ಪ್ರತಿಯನ್ನು ಭಿನ್ನ ಬರಹಗಾರರು ಬರೆದಿರುವುದರಿಂದ, ಅಂತಹ ದಸ್ತಾವೇಜುಗಳಲ್ಲಿ ಕಾಲ ಕಳೆದಂತೆ ಬಾಹ್ಯ ಮಾಹಿತಿಯನ್ನು ಒಳಸೇರಿಸುವ ಸಹಜ ಪ್ರವೃತ್ತಿಯಿರುತ್ತದೆ. ಆದರೆ, ಬಹುತೇಕ ಪ್ರಕ್ಷೇಪಣಗಳು ಕೈಯಿಂದ ಪ್ರತಿಗಳನ್ನು ಮಾಡುವಾಗ, ವಿಶೇಷವಾಗಿ ದೀರ್ಘ ಸಮಯಾವಧಿಗಳೊಂದಿಗೆ, ಉದ್ಭವಿಸುವ ಸಾಧ್ಯತೆಯಿರುವ ದೋಷಗಳು ಹಾಗೂ ತಪ್ಪುಗಳ ಕಾರಣದಿಂದ ಉಂಟಾಗುತ್ತವೆ.