The most-visited ಕನ್ನಡ Wikipedia articles, updated daily. Learn more...
ಮುಖ್ಯ ಮೆನು ತೆರೆ ವಿಕಿಪೀಡಿಯ ಹುಡುಕು Show my notifications ಬದಲಾವಣೆಗಳು ನಂತರದ ಸಂಪಾದನೆ → Krishi Thapanda ೫,೫೪೨ BYTES ADDED, ೨೭ ನಿಮಿಷಗಳ ಹಿಂದೆ "Krishi Thapanda" ಪುಟವನ್ನು ಅನುವಾದಿಸುವುದರಿಂದ ಸೃಷ್ಟಿಸಲಾಯಿತು ಕ್ರಿಷಿ ತಾಪಂಡ ಅವರು ರೂಪದರ್ಶಿಯಾಗಿದ್ದಾರೆ ಹಾಗು ಭಾರತೀಯ ನಟಿಯಾಗಿ ಕನ್ನಡ ಚಲನಚಿತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೆ. ಅವರು ೨೦೧೬ರಲ್ಲಿ ಅಕಿರ ಎಂಬ ಕನ್ನಡ ಚಲನಚಿತ್ರ ಮೂಲಕ ಚಿತ್ರರಂಗ ಪ್ರವೇಶಿಸಿದರು. ೨೦೧೬ರ 'ಎಸ್ಐಐಎಂಎ'ನ ಉತ್ತಮ ನಟಿ ಪ್ರಶಸ್ತಿಗಾಗಿ ಇವರು ನಾಮನಿರ್ದೇಶನಗೊಂಡಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಅಂಚೀ ಮಿನ್ (ಸರಳೀಕೃತ ಚೀನೀ: 闵安琪; ಚೀನೀ: 閔安琪; ಪಿನ್ಯಿನ್: Mǐn Ānqí; ಜನನ: ಜನವರಿ ೧೪, ೧೯೫೭) ಅವರು ಸ್ಯಾನ್ ಫ್ರಾನ್ಸಿಸ್ಕೋ ಮತ್ತು ಶಾಂಘೈನಲ್ಲಿ ವಾಸಿಸುತ್ತಿರುವ ಚೀನೀ-ಅಮೇರಿಕನ್ ಲೇಖಕಿ. ಮಿನ್ ಅವರು ಎರಡು ಆತ್ಮಕಥೆಗಳನ್ನು ಪ್ರಕಟಿಸಿದ್ದಾರೆ: *ರೆಡ್ ಅಜೇಲಿಯಾ* ಮತ್ತು *ದಿ ಕುಕ್ಡ್ ಸೀಡ್: ಎ ಮೆಮೊಯಿರ್*, ಮತ್ತು ಆರು ಐತಿಹಾಸಿಕ ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ಅವರ ಸಾಹಿತ್ಯದಲ್ಲಿ ಶಕ್ತಿಶಾಲಿ ಮಹಿಳಾ ಪಾತ್ರಗಳಿಗೆ ವಿಶೇಷ ಒತ್ತು ನೀಡಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಶಿಕ್ಷಣ ಸಚಿವಾಲಯ, (1985 - 2020 ರವರೆಗೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎಂದು ಕರೆಯಲಾಗುತ್ತಿತ್ತು) ಭಾರತದಲ್ಲಿ ಶಿಕ್ಷಣ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಗೆ ಕಾರಣವಾಗಿದೆ. ಸಚಿವಾಲಯವನ್ನು ಪ್ರಸ್ತುತ ರಮೇಶ್ ಪೋಖ್ರಿಯಾಲ್ 'ನಿಶಾಂಕ್' ಅವರು ನಿರ್ವಹಿಸುತ್ತಿದ್ದಾರೆ. ಈ ಸಚಿವಾಲಯವನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ: ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಮಾಧ್ಯಮಿಕ ಶಿಕ್ಷಣ, ವಯಸ್ಕರ ಶಿಕ್ಷಣ ಮತ್ತು ಸಾಕ್ಷರತೆ ಮತ್ತು ವಿಶ್ವವಿದ್ಯಾಲಯದೊಂದಿಗೆ ವ್ಯವಹರಿಸುವ ಉನ್ನತ ಶಿಕ್ಷಣ ಇಲಾಖೆಯನ್ನು ನಿರ್ವಹಿಸುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ.
ರಾಮೆನ್ (/rɑːmən/′ (′, ′, ರಾಮೆನ್ ಅಥವಾ ′, ರೇಮನ್, [ɾaːme] i′) ಜಪಾನಿನ ನೂಡಲ್ ಖಾದ್ಯವಾಗಿದೆ. ಇದು ಚೀನೀ ಶೈಲಿಯ ಗೋಧಿ ನೂಡಲ್ಸ್ ಅನ್ನು ಒಳಗೊಂಡಿದೆ (Синсия ноудльны, chūkamen), ಇದನ್ನು ಸಾರುಗಳಲ್ಲಿ ಬಡಿಸಲಾಗುತ್ತದೆ. ಸಾಮಾನ್ಯ ರುಚಿಗಳೆಂದರೆ ಸೋಯಾ ಸಾಸ್ ಮತ್ತು ಮಿಸೊ, ಕತ್ತರಿಸಿದ ಹಂದಿಮಾಂಸ (ಚಶು ನೌರಿ) (ಒಣಗಿದ ಕಡಲಕಳೆ ಮೆನ್ಮಾ (ಬಿದಿರು ಚಿಗುರುಗಳು) ಮತ್ತು ಸ್ಕಲ್ಲಿಯನ್ಸ್ ಸೇರಿದಂತೆ ವಿಶಿಷ್ಟ ಮೇಲೋಗರಗಳೊಂದಿಗೆ.
ಸಾಮಾನ್ಯವಾಗಿ ಅಣೆಕಟ್ಟು ನಿರ್ಮಾಣದ ಉದ್ದೇಶ ನದಿ ನೀರನ್ನು ಸಂಗ್ರಹಿಸಿ ಅದನ್ನು ನೀರಾವರಿ, ಕುಡಿಯುವ ನೀರು ಪೂರೈಕೆ, ವಿದ್ಯುತ್ ಉತ್ಪಾದನೆ ಹೀಗೆ ವಿವಿಧ ಉದ್ದೇಶಗಳಿಗೆ ಬಳಸಿಕೊಳ್ಳುವುದು. ಅಣೆಕಟ್ಟು ತುಂಬಿದಾಗ ಅದರ ಕ್ರಸ್ಟ್ಗೇಟುಗಳನ್ನು ತೆರೆದು ನದಿಗೆ ನೀರು ಬಿಡಲಾಗುತ್ತದೆ. 3000 ವರ್ಷ ಹಿಂದೆ ನಿರ್ಮಿಸಿದ್ದು ಎನ್ನಲಾಗಿರುವ ಜೋರ್ಡಾನ್ನ ಜಾವಾ ಅಣೆಕಟ್ಟು ಜಗತ್ತಿನ ಅತ್ಯಂತ ಪುರಾತನ ಅಣೆಕಟ್ಟು ಎಂದು ಗುರುತಿಸಲಾಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಕೆಲ ಪರಿಸ್ಥಿತಿಗಳಲ್ಲಿ ಒಂದು ದೇಶದ ಸರ್ಕಾರವು ತನ್ನ ಕೆಲವು ನಿಯಮಿತ ಕಾರ್ಯಗಳನ್ನು ಸ್ಥಗಿತಗೊಳಿಸಿ ಪ್ರಜೆಗಳ ವ್ಯವಹಾರಗಳ ಮೇಲೆ ಕೆಲವು ನಿಯಮಗಳನ್ನು ಅಥವ ನಿಯಂತ್ರಣಗಳನ್ನು ತರಬಹುದು. ಇಂತಃ ಪರಿಸ್ಥಿತಿಗಳಿಗೆ ತುರ್ತು ಪರಿಸ್ಥಿತಿ ಎಂದು ಹೆಸರು. ಈ ಘೋಷಣೆಯು ನೈಸರ್ಗಿಕ ವಿಕೋಪಗಳಿಗಿರಬಹುದು, ಯುದ್ಧಕಾಲ ಅಥವ ಪರದೇಶದ ಆಕ್ರಮಣದಿಂದಿರಬಹುದು ಅಥವ ಸಾರ್ವಜನಿಕ ಅಶಾಂತಿಯ ಪರಿಸ್ಥಿತಿಗಾಗಿರಬಹುದು.
ಏಕಾದಶ ಈ ಸಂಸ್ಕೃತ ಪದದ ಅರ್ಥ ಹನ್ನೊಂದು(೧೧).ಹಿಂದೂ ಪಂಚಾಂಗದ ೧೨ ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ.ಒಂದು ಮಾಸದಲ್ಲಿ ಎರಡು ಏಕಾದಶಿಗಳಿರುತ್ತವೆ.ಈ ದಿನದಂದು ಯಾವ ಆಹಾರವನ್ನೂ ಸೇವಿಸದೆ,ಉಪವಾಸ ಮಾಡುವ ಸಂಪ್ರದಾಯವಿದೆ.ಈ ದಿನದಂದು ಕೆಲವರು ಅನ್ನವನ್ನು ಮಾತ್ರ ತ್ಯಜಿಸಿ ಉಪವಾಸ ಆಚರಿಸಿದರೆ,ಮತ್ತೆ ಕೆಲವರು ಹನಿ ನೀರನ್ನೂ ಕುಡಿಯದೆ,ನಿರಾಹಾರ ವ್ರತವನ್ನು ಆಚರಿಸುತ್ತಾರೆ.ಏಕಾದಶಿಯ ದಿನ ಉಪವಾಸವಿದ್ದು,ಮಾರನೆಯ ದಿನ ಅಂದರೆ ದ್ವಾದಶಿಯಂದು ಬೆಳಿಗ್ಗೆ ೯ ಘಂಟೆಯೊಳಗಾಗಿ ಪಾರಣೆ(ಊಟ)ಮಾಡುವ ಸಂಪ್ರದಾಯವಿದೆ. ಕೆಲವರು ಏಕಾದಶಿಯಂದು ಮೌನ ವ್ರತ ಸಹ ಆಚರಿಸುತ್ತಾರೆ. ವೈಕುಂಠ ಏಕಾದಶಿ ಏಕಾದಶಿಗಳಲ್ಲಿ ವಿಶೇಷ ದಿನ.ಚಾಂದ್ರಮಾನ ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿಯೇ ಈ ವಿಶೇಷ ದಿನ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ವಿಜಯದಾಸ(೧೬೮೨– ೧೭೫೫) ೧೮ ನೇ ಶತಮಾನದಲ್ಲಿ ಕರ್ನಾಟಕದ, ಹರಿದಾಸ ಸಂಪ್ರದಾಯದ ಪ್ರಮುಖ ಸಂತ ಮತ್ತು ದ್ವೈತ ತತ್ವಶಾಸ್ತ್ರದ ಸಂಪ್ರದಾಯದ ವಿದ್ವಾಂಸ. ಸಮಕಾಲೀನ ಹರಿದಾಸ ಸಂತರಾದ ಗೋಪಾಲ ದಾಸ, ಹೆಳವನಕಟ್ಟೆ ಗಿರಿಯಮ್ಮ, ಜಗನ್ನಾಥ ದಾಸ ಮತ್ತು ಪ್ರಸನ್ನ ವೆಂಕಟ ದಾಸರೊಂದಿಗೆ, ಅವರು ಕನ್ನಡ ಭಾಷೆಯಲ್ಲಿ ಬರೆದ ದೇವರನಾಮ ಎಂಬ ಭಕ್ತಿಗೀತೆಗಳ ಮೂಲಕ ದಕ್ಷಿಣ ಭಾರತದಾದ್ಯಂತ ಮಧ್ವಾಚಾರ್ಯರ ತತ್ವಶಾಸ್ತ್ರದ ಸದ್ಗುಣಗಳನ್ನು ಪ್ರಚಾರ ಮಾಡಿದರು.ಕನ್ನಡ ವೈಷ್ಣವ ಭಕ್ತಿ ಸಾಹಿತ್ಯದ ಅವಿಭಾಜ್ಯ ಅಂಗವಾಗಿದ್ದು, ಹಿಂದೂ ದೇವರು ವಿಷ್ಣು ಮತ್ತು ಇತರ ದೇವತೆಗಳನ್ನು ಸ್ತುತಿಸುವ ಈ ಸಂಯೋಜನೆಗಳನ್ನು ದಾಸರ ಪದಗಳು (ದಾಸರ ಸಂಯೋಜನೆಗಳು) ಎಂದು ಕರೆಯಲಾಗುತ್ತದೆ. ಅವರು ತಮ್ಮ ಸಂಯೋಜನೆಗಳ ಮೂಲಕ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ಎರಡನ್ನೂ ಪ್ರಭಾವಿಸಿದ್ದಾರೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಅಭಿಮನ್ಯು ಮಹಾಭಾರತದಲ್ಲಿ ಅರ್ಜುನ ಮತ್ತು ಸುಭದ್ರೆಯರ ಮಗ. ಮಹಾಭಾರತ ಯುದ್ಧದಲ್ಲಿ ದ್ರೋಣಾಚಾರ್ಯರು ರಚಿಸಿದ ಚಕ್ರವ್ಯೂಹವನ್ನು ಭೇದಿಸಿ (ಅದರಿಂದ ಹೊರಗೆ ಬರುವುದು ಗೊತ್ತಿರದಿದ್ದರೂ), ಒಳಗೆ ನುಗ್ಗಿ ಅನೇಕ ವೀರಾಧಿ-ವೀರರನ್ನು ಕೊಂದು, ದ್ರೋಣ, ಕರ್ಣ, ದುರ್ಯೋಧನ, ದುಃಶಾಸನ ಮುಂತಾದ ಅತಿರಥ-ಮಹಾರಥರಿಗೆ ಸಮನಾಗಿ ಹೋರಾಡಿ ನಂತರ, ವಂಚನೆಗೊಳಗಾಗಿ ಚಕ್ರವ್ಯೂಹದಿಂದ ಹೊರಬರಲಾಗದೆ ವೀರಮರಣವನ್ನು ಹೊಂದಿದನು. ಅಭಿಮನ್ಯುವಿಗೆ ಸೌಭದ್ರ ಎಂಬ ಇನ್ನೊಂದು ಹೆಸರಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಉತ್ತರ ಐರ್ಲೆಂಡ್ (ಐರಿಷ್:Tuaisceart Éireann, ಅಲ್ಸ್ಟರ್ ಸ್ಕಾಟ್ಸ್: ನಾರ್ಲಿನ್ ಏರ್ಲನ್ನ್ ) ಯುನೈಟೆಡ್ ಕಿಂಗ್ಡಮ್ ನ ನಾಲ್ಕು ರಾಷ್ಟ್ರಗಳಲ್ಲಿ ಒಂದಾಗಿದೆ. ಐರ್ಲೆಂಡ್ ನ ದ್ವೀಪದ ಈಶಾನ್ಯ ಭಾಗದಲ್ಲಿ ನೆಲೆಯಾಗಿರುವ ಇದು, ದಕ್ಷಿಣ ಹಾಗು ಪಶ್ಚಿಮಕ್ಕೆ ರಿಪಬ್ಲಿಕ್ ಆಫ್ ಐರ್ಲೆಂಡ್ ನೊಂದಿಗೆ ಗಡಿಯನ್ನು ಹಂಚಿಕೊಳ್ಳುತ್ತದೆ. 2001 UK ಜನಗಣತಿಯ ಸಮಯದಲ್ಲಿ ಇದು 1,685,000ರಷ್ಟು ಜನಸಂಖ್ಯೆ ಹೊಂದಿತ್ತು, ಇದರಲ್ಲಿ ದ್ವೀಪದ ಒಟ್ಟಾರೆ ಜನಸಂಖ್ಯೆಯು ಸುಮಾರು 30% ಹಾಗು ಯುನೈಟೆಡ್ ಕಿಂಗ್ಡಮ್ ಜನಸಂಖ್ಯೆಯಲ್ಲಿ ಸುಮಾರು 3%ನಷ್ಟು ಸೇರಿದೆ.
ದಿವ್ಯಾ ಸಿಂಗ್ ಹಿಂದಿ 'दिव्या सिंह(1982,ಜುಲೈ 21ರಂದು ಜನನ)ಭಾರತದ ಮಹಿಳೆಯರ ರಾಷ್ಟ್ರೀಯ ಬ್ಯಾಸ್ಕೆಟ್ಬಾಲ್ ತಂಡದ ಮಾಜಿ ನಾಯಕಿ. ದಿವ್ಯಾ 2006ರ ಮೆಲ್ಬರ್ನ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಬ್ಯಾಸ್ಕೆಟ್ಬಾಲ್ ತಂಡವನ್ನು ನಾಯಕಿಯಾಗಿ ಮುನ್ನಡೆಸಿದರು. ಆಟದ ಕೌಶಲ್ಯಗಳು, ನಾಯಕತ್ವ ಗುಣಗಳು, ಶೈಕ್ಷಣಿಕ ಬಲ ಮತ್ತು ವ್ಯಕ್ತಿತ್ವಕ್ಕೆ ಹೆಸರಾದ ಅವರು ಭಾರತದಲ್ಲಿ ಅತ್ಯುತ್ತಮ ಬ್ಯಾಸ್ಕೆಟ್ಬಾಲ್ ಆಟಗಾರ್ತಿಯರಲ್ಲಿ ಒಬ್ಬರಾಗಿದ್ದಾರೆ.
ಜೀವಕಣವಿಜ್ಞಾನದಲ್ಲಿ ಬೀಜಕಣ (ಲ್ಯಾಟಿನ್ ನಿಂದ ಬಹುವಚನ. ಬೀಜಕಣಗಳು ಅಥವಾ ತಿರುಳು ಎಂದರ್ಥ) ಮತ್ತು ಕೆಲವೊಮ್ಮೆ "ನಿಯಂತ್ರಣ ಕೇಂದ್ರ" ಎಂದು ಉಲ್ಲೇಖಿಸುವುದೂ ಉಂಟು, ಯೂಕಾರ್ಯೋಟಿಕ್ ಜೀವಕಣಗಳಲ್ಲಿ ಕಂಡು ಬರುವ ಒಳಪೊರೆಯ ವಿಶೇಷ ಭಾಗ. ಇದರಲ್ಲಿ ಜೀವಕಣಗಳ ವಂಶವಾಹಿನಿ ಸಾಮಗ್ರಿ ಇರುತ್ತದೆ, ನಾನಾ ಭಾಗಗಳುಳ್ಳ ಉದ್ದನೆಯ ರೇಖೆಯಂತೆ DNA ಕಣಗಳು ಸಂಯುಕ್ತವಾಗಿ ವ್ಯವಸ್ಥಿತಗೊಂಡಿರುತ್ತದೆ ಮತ್ತು ಇದರಲ್ಲಿ ದೊಡ್ಡ ಮಟ್ಟದಲ್ಲಿ ನಾನಾ ವಿಧದ ಪ್ರೊಟೀನ್ ಗಳು ಉದಾಹರಣೆಗೆ ಹಿಸ್ಟೋನ್ ಗಳು ಕ್ರೋಮೋಸೋಮ್ ಗಳಾಗಿ ರೂಪಗೊಳ್ಳುತ್ತವೆ.
ಮುತ್ತತ್ತಿ ಕರ್ನಾಟಕ ರಾಜ್ಯ, ಮಂಡ್ಯ ಜಿಲ್ಲೆ, ಮಳವಳ್ಳಿ ತಾಲ್ಲೂಕು, ಹಲಗೂರು ಹೋಬಳಿಯಲ್ಲಿರುವ ಮುತ್ತತ್ತಿ ಶ್ರೀ ಆಂಜನೇಯಸ್ವಾಮಿ ದೇವಸ್ಥಾನ ಪ್ರಸಿದ್ದ ಯಾತ್ರಾ ಸ್ಥಳ ಹಾಗೂ ಪ್ರವಾಸಿ ತಾಣವಾಗಿದೆ. ಕಾವೇರಿ ನದಿಯ ಹರಿವಿನ ಸುಂದರ ಪ್ರಕೃತಿ ಸೌಂದರ್ಯದೊಂದಿಗೆ ಕಂಗೊಳಿಸುವ ಚಿಕ್ಕ ಗ್ರಾಮವೇ ಮುತ್ತತ್ತಿ . ಕಾವೇರಿ ನದಿ ನೀರಿನಲ್ಲಿ ಭಾರಿ ಜನಪ್ರಿಯ ಸಾಹಸಕ್ರೀಡೆ ಕೋರಲ್ ರೈಡ್ ನ್ನು ಇಲ್ಲಿ ಪ್ರವಾಸಿಗರು ಆನಂದಿಸಬಹುದು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಅಲೆಕ್ಸಾಂಡರ್ ಗ್ರಹಾಂ ಬೆಲ್ (ಮಾರ್ಚ್ ೩, ೧೮೪೭ – ಆಗಸ್ಟ್ ೨, ೧೯೨೨) ಒಬ್ಬ ಉತ್ಕೃಷ್ಟ ವಿಜ್ಞಾನಿ, ಆವಿಷ್ಕಾರಕ, ಎಂಜಿನಿಯರ್ ಮತ್ತು ಹೊಸತನದ ಪ್ರವರ್ತಕನಾಗಿದ್ದ. ಮೊದಲ ಕಾರ್ಯೋಪಯೋಗಿ ದೂರವಾಣಿಯನ್ನು ಸೃಷ್ಟಿಸಿದ ಕೀರ್ತಿ ಇವನಿಗೆ ದೊರಕಿದೆ. ಬೆಲ್ನ ತಂದೆ, ತಾತ, ಮತ್ತು ಸೋದರ ಇವರೆಲ್ಲರೂ ವಾಗ್ವೈಖರಿ ಮತ್ತು ವಾಕ್ ಶಕ್ತಿಗೆ ಸಂಬಂಧಿಸಿದ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು, ಮತ್ತು ಅವನ ತಾಯಿ ಹಾಗೂ ಹೆಂಡತಿ ಕಿವುಡರಾಗಿದ್ದುದು ಬೆಲ್ನ ಜೀವಮಾನದ ಕಾರ್ಯದ ಮೇಲೆ ಆಳವಾದ ಪ್ರಭಾವವನ್ನು ಬೀರಿತ್ತು.
ಇಸ್ಲಾಮ್ (الإسلام; [ɪsˈlaːm] ( ), ಅನುವಾದ. ದೇವರ ಇಚ್ಛೆಗೆ ಶರಣಾಗುವುದು) ಏಕದೇವತಾವಾದಿ ಧರ್ಮವಾಗಿದ್ದು, ಇದರ ಅನುಯಾಯಿಗಳು ಅಲ್ಲಾಹನಲ್ಲದೆ ಬೇರೆ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ನಂಬುತ್ತಾರೆ. ಅವರನ್ನು ಮುಸ್ಲಿಮರು ಎಂದು ಕರೆಯಲಾಗುತ್ತದೆ. ಇಸ್ಲಾಂ ಧರ್ಮವು ದೇವರು (ಅಲ್ಲಾಹು) ಕರುಣಾಮಯಿ, ಸರ್ವಶಕ್ತ ಮತ್ತು ಏಕೈಕನು ಎಂದು ಬೋಧಿಸುತ್ತದೆ ಮತ್ತು ಅವನು ಪ್ರವಾದಿಗಳು, ಸಂದೇಶವಾಹಕರು ಮತ್ತು ಪವಿತ್ರ ಗ್ರಂಥಗಳ ಮೂಲಕ ಮಾನವಕುಲಕ್ಕೆ ಮಾರ್ಗದರ್ಶನ ನೀಡಿದ್ದಾನೆ ಎಂದು ಹೇಳುತ್ತದೆ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಆಕ್ರೊ ನೃತ್ಯ ವು ನೃತ್ಯದ ಒಂದು ಶೈಲಿಯಾಗಿದ್ದು, ಶಾಸ್ತ್ರೀಯ ನೃತ್ಯದ ತಂತ್ರವನ್ನು ನಿಖರ ಆಕ್ರೊಬಾಟಿಕ್(ದೊಂಬರಾಟದ ಕಸರತ್ತು) ಅಂಶಗಳಿಂದ ಸಂಯೋಜಿಸಿದೆ. ಇದನ್ನು ಅದರ ಅಥ್ಲೆಟಿಕ್ ಲಕ್ಷಣದಿಂದ ವ್ಯಾಖ್ಯಾನಿಸಬಹುದು. ಅದರ ವಿಶಿಷ್ಟ ನೃತ್ಯನಿಯೋಜನೆಯು ನಯವಾಗಿ ನೃತ್ಯ ಮತ್ತು ಆಕ್ರೋಬ್ಯಾಟಿಕ್ಸ್ನ್ನು ಒಂದುಗೂಡಿಸುತ್ತದೆ ಮತ್ತು ನೃತ್ಯದ ಸಂದರ್ಭದಲ್ಲಿ ದೊಂಬರಾಟದ ಕಸರತ್ತುಗಳ ಬಳಕೆಯ ಲಕ್ಷಣದಿಂದ ಕೂಡಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಭಾರತ ಗಣರಾಜ್ಯವು ಐತಿಹಾಸಿಕ ದಾಖಲೆ, ಧ್ವಜ, ಲಾಂಛನ, ಗೀತೆ, ಸ್ಮಾರಕ ಗೋಪುರ ಮತ್ತು ಹಲವಾರು ರಾಷ್ಟ್ರೀಯ ವೀರರು ಸೇರಿದಂತೆ ಹಲವಾರು ಅಧಿಕೃತ ರಾಷ್ಟ್ರೀಯ ಚಿಹ್ನೆಗಳನ್ನು ಹೊಂದಿದೆ. ಎಲ್ಲಾ ಚಿಹ್ನೆಗಳನ್ನು ವಿವಿಧ ಸಮಯಗಳಲ್ಲಿ ತೆಗೆದುಕೊಳ್ಳಲಾಗಿದೆ. ೧೯೪೭ ರ ಜುಲೈ ೨೨ ರಂದು ರಾಷ್ಟ್ರೀಯ ಧ್ವಜದ ವಿನ್ಯಾಸವನ್ನು ಸಂವಿಧಾನ ಸಭೆಯು ಅಧಿಕೃತವಾಗಿ ಅಂಗೀಕರಿಸಿತು ಮತ್ತು ರಾಷ್ಟ್ರೀಯ ಪ್ರಾಣಿ, ಪಕ್ಷಿ, ಹೂವು, ಹಣ್ಣು ಮತ್ತು ಮರ ಸೇರಿದಂತೆ ಇನ್ನೂ ಹಲವಾರು ಚಿಹ್ನೆಗಳು ಇವೆ.
ಇವರು ೧೯೦೭ ರಲ್ಲಿ ಜನಿಸಿದರು. ಶ್ರೀ ಕಡಿದಾಳ್ ಮಂಜಪ್ಪನವರು ಶಿವಮೊಗ್ಗ ಜಿಲ್ಲೆಯ ತೀರ್ಥ ಹಳ್ಳಿ ತಾಲೂಕಿನ ಹಾರೋಹಳ್ಳಿಯಲ್ಲಿ ಜನಿಸಿದರು. ತೀರ್ಥಹಳ್ಳಿ,ಶಿವಮೊಗ್ಗ,ಬೆಂಗಳೂರು ಮತ್ತು ಮೈಸೂರುಗಳಲ್ಲಿ ವಿಧ್ಯಾಭ್ಯಾಸ ಮಾಡಿ ಬಿ,ಎ.ಪದವಿ ಪಡೆದರು.ಪೂನಾದಲ್ಲಿ ಕಾನೂನು ಪದವಿ ಪಡೆದರು.೧೯೨೭ರಲ್ಲಿಯೇ ಗಾಂಧೀಜಿಯವರ ದರ್ಶನ ಪಡೆದು ಅವರ ತತ್ವಗಳಿಗೆ ಮಾರು ಹೋಗಿ ಅಂದಿನಿಂದಲೇ ಗಾಂದೀವಾದಿಯಾದರು.
ದನಗಳು ದೊಡ್ಡ ಪಳಗಿಸಿದ ಗೊರಸುಳ್ಳ ಪ್ರಾಣಿಗಳ ಅತಿ ಸಾಮಾನ್ಯ ವಿಧ. ಅವು ಬೋವಿನಿ ಉಪಕುಟುಂಬದ ಒಂದು ಪ್ರಮುಖ ಆಧುನಿಕ ಸದಸ್ಯವಾಗಿವೆ, ಬೋಸ್ ಪ್ರಜಾತಿಯ ಅತಿ ವ್ಯಾಪಕ ಜಾತಿಯಾಗಿವೆ, ಮತ್ತು ಅತಿ ಸಾಮಾನ್ಯವಾಗಿ ಒಟ್ಟಾರೆಯಾಗಿ ಬೋಸ್ ಪ್ರೀಮಿಗೇನ್ಯೂಸ್ ಎಂದು ವರ್ಗೀಕರಿಸಲ್ಪಡುತ್ತವೆ. ದನಗಳನ್ನು ಮಾಂಸಕ್ಕಾಗಿ (ಗೋಮಾಂಸ ಮತ್ತು ವೀಲ್) ಜಾನುವಾರುಗಳಾಗಿ, ಹಾಲು ಮತ್ತು ಇತರ ಕ್ಷೀರೋತ್ಪನ್ನಗಳಿಗಾಗಿ ಹೈನು ಪ್ರಾಣಿಗಳಾಗಿ, ಮತ್ತು ಭಾರ ಎಳೆಯುವ ಪ್ರಾಣಿಗಳಾಗಿ (ಎತ್ತುಗಳು ಅಥವಾ ಗವ್ಯ ಪ್ರಾಣಿಗಳು) (ಬಂಡಿಗಳು, ನೇಗಿಲುಗಳು ಮತ್ತು ಇತ್ಯಾದಿಗಳನ್ನು ಎಳೆಯುವುದಕ್ಕಾಗಿ) ಬಳಸಲಾಗುತ್ತದೆ.
ಶ್ರೀ ಹರ್ಮಂದಿರ್ ಸಾಹಿಬ್ (ಪಂಜಾಬಿಯಲ್ಲಿ : ) ಅಥವ ದರ್ಬಾರ್ ಸಾಹಿಬ್ (ಪಂಜಾಬಿಯಲ್ಲಿ{ : ), ಅಸಂಪ್ರದಾಯಕವಾಗಿ ಚಿನ್ನದ ದೇವಸ್ಥಾನವೆಂದು ಹೇಳಲಾಗುತ್ತದೆ, ಇದು ಸಿಖ್ ಧರ್ಮದ ಅತ್ಯಂತ ಪವಿತ್ರವಾದ ಮಂದಿರ. ಸಿಖ್ಬರ ನಾಲ್ಕನೆಯ ಗುರು, ಗುರು ರಾಮ್ ದಾಸ್ ರಿಂದ ಸ್ಥಾಪಿಸಲ್ಪಟ್ಟ ಈ ಮಂದಿರ, ಅಮೃತಸರ್ ನಗರದಲ್ಲಿದೆ, ಹಾಗೂ ಸಿಖ್ ಗುರುವಿನ ನಗರವೆಂದು ಅರ್ಥವಿರುವ "ಗುರು ಡಿ ನರ್ಗಿ" ಎಂದು ಹೆಸರಾಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸೋನಾರ್ ಅಥವಾ Sonar (‘SOund Navigation And Ranging’ ಇದರ ಸಂಕ್ಷಿಪ್ತ ರೂಪ) ಇದೊಂದು ಶಬ್ದ ಪ್ರಸಾರದ ಮೂಲಕ (ಸಾಮಾನ್ಯವಾಗಿ ನೀರಿನಾಳದಲ್ಲಿ, ಸಬ್ಮೆರಿನ್ ನೌಕಾಯಾನದಲ್ಲಿ) ಸಂಪರ್ಕಕ್ಕಾಗಿ ಅಥವಾ ಇತರ ನೌಕೆಗಳನ್ನು ಪತ್ತೆ ಹಚ್ಚಲು ಉಪಯೋಗಿಸುವ ತಂತ್ರವಾಗಿದೆ. ಎರಡು ರೀತಿಯ ತಾಂತ್ರಿಕತೆಗೆ ಸೋನಾರ್ ಎಂದು ಕರೆಯಲಾಗುತ್ತದೆ: ನಿಷ್ಕ್ರಿಯ ಸೋನಾರ್ ಇದು ಹಡಗುಗಳಿಂದ ಮಾಡಲ್ಪಟ್ಟ ಶಬ್ದಗಳನ್ನು ಆಲಿಸಲು ಅಗತ್ಯವಾಗಿದೆ. ಸಕ್ರಿಯ ಸೋನಾರ್ ಇದು ಶಬ್ದದ ನಾಡಿಯ ವಿಮೋಚನೆಗಾಗಿ ಹಾಗೂ ಪ್ರತಿಧ್ವನಿಯನ್ನು ಆಲಿಸಲು ಅಗತ್ಯವಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.