The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ದೇವಾಲಯಗಳಲ್ಲಿ ದೇವರುಗಳಿಗೆ ವಿಭಿನ್ನ ರೀತಿಯ ಸೇವೆಯನ್ನು ಮಾಡಲು ಅರ್ಪಿಸಲಾಗಿರುವ ಯುವತಿಯರನ್ನು ದೇವದಾಸಿಯರೆಂದು ಕರೆಯಲಾಗುತ್ತಿತ್ತು. ಈ ಯುವತಿಯರು ಭಗವಂತನ ದಾಸಿಯರಾದ್ದರಿಂದ ಮಂದಿರವನ್ನು ಶುದ್ಧಗೋಳಿಸುವುದು, ದೀಪ ಬೆಳಗಿಸುವುದು ಹಾಗೂ ದೇವರ ಪ್ರತಿಮೆಯ ಸಮ್ಮುಖದಲ್ಲಿ ಭಕ್ತಿಪೂರ್ವಕವಾಗಿ ಗಾಯನ ನರ್ತನ ಮೊದಲಾದ ನಿಶ್ಚಿತ ಕಾರ್ಯಗಳನ್ನು ಮಾಡುವುದು-ಇವುಗಳ ಮೂಲಕ ದೇವರ ಸೇವೆಯನ್ನು ನೆರವೇರಿಸುತ್ತಿದ್ದರು. ಈ ಪದ್ಧತಿ ತೀರ ಪ್ರಾಚೀನವಾದುದೆಂದು ತಿಳಿದು ಬರುತ್ತದೆ.
ಉಭಯವಾಸಿಗಳು ಎಂದರೆ ಉಭಯವಾಸಿ ವರ್ಗದ ಬಹಿರ್ ಉಷ್ಣಿ ಚತುಷ್ಪದಿ ಕಶೇರುಕಗಳಾಗಿವೆ.ಅಧುನಿಕ ಉಭವಾಸಿಗಳೆವು ಲಿಸಾಂಫಿಬಿಯನ್ಸಗಳಾಗಿವೆ.ಅವುಗಳು ವಿಭಿನ್ನವಾದ ಅವಾಸಗಳಲ್ಲಿ ಕಂಡುಬರುತ್ತವೆ. ಬಹಳಷ್ಟು ಉಭಯವಾಸಿಗಳು ಭೂವಾಸಿಗಳಾಗಿವೆ,ಕೆಲವು ಫಾಸೊರಿಯಲ್ಗಳಾಗಿವೆ, ಕೆಲವು ಮರವಾಸಿಗಳಾಗಿವೆ ಅಥವಾ ಸಿಹಿ ನೀರಿನ ಮೂಲದ ಅವಾಸ ಪರಿಸರವ್ಯವಸ್ಥೆಯಲ್ಲಿ ಕಂಡು ಬರುತ್ತವೆ.ಉಭಯವಾಸಿಗಳು ಸಾಮಾನ್ಯವಾಗಿ ನೀರಿನಲ್ಲಿ ಲಾರ್ವಾ ರೂಪದಲ್ಲಿ ತಮ್ಮ ಜೀವನವನ್ನು ಆರಂಬಿಸುತ್ತವೆ. ಆದರೆ ಕೆಲವು ಜಾತಿಯ ಉಭಯವಾಸಿಗಳು ವರ್ತಾನಾ ಬದಲಾವಣೆಗಳ ಹೊಂದಾಣಿಕೆಯಿಂದಾಗಿ ಈ ಹಂತವನ್ನು ಹೊರತಾಗಿ ಬೆಳೆಯುತ್ತವೆ.ಸಾಮಾನ್ಯವಾಗಿ ಮರಿಗಳು ಲಾರ್ವಾದಿಂದ ರೂಪಾಂತರ ಹೊಂದಿ ತರುಣ ಜೀವಿಗಳಿಗೆ ಇರುವಂತೆ ಕಿವಿರುಗಳು ಮಾರ್ಪಾಟಾಗಿ ಪುಪ್ಪಸಗಳಾಗಿ ಬದಲಾವಣೆ ಹೊಂದುತ್ತವೆ.ಉಭಯವಾಸಿಗಳು ತಮ್ಮ ಚರ್ಮವನ್ನು ದ್ವಿತೀಯಕ ಉಸಿರಾಟದ ಅಂಗವಾಗಿ ಬಳಸಿಕೊಳ್ಳುವವು ಹಾಗೂ ಕೆಲವು ಚಿಕ್ಕ ಭೂವಾಸಿ ಸೆಲಾಮೆಂಡರ್ಗಳು ಮತ್ತು ಕಪ್ಪೆಗಳು ಉಸಿರಾಟಾಕ್ಕಾಗಿ ಪೂರ್ಣವಾಗಿ ತಮ್ಮ ಚರ್ಮವನ್ನೆ ನಂಬಿಕೊಂಡಿವೆ.ಉಭಯವಾಸಿಗಳು ಮೇಲ್ನೋಟಕ್ಕೆ ಸರಿಸೃಪಗಳಂತಿದ್ದರೂ, ಸಸ್ತನಿ ಮತ್ತು ಪಕ್ಷಿಗಳಂತಲ್ಲದೇ ಸರಿಸೃಪಗಳು ಆಮ್ನಿಓಟ್ಸ[೧]ಗಳಾಗಿದ್ದು ತಮ್ಮ ಸಂತಾನಭಿವೃದ್ದಿಗಾಗಿ ನೀರಿನ ಆಕರಗಳ ಅವಶ್ಯಕತೆಯಿಲ್ಲ.ಉಭಯವಾಸಿಗಳ ಸಂಕೀರ್ಣಮಯವಾದ ಸಂತನೋತ್ಪತ್ತಿಯ ಅವಶ್ಯಕತೆಗಳು ಹಾಗೂ ಸೂಕ್ಷ್ಮವಾದ ಚರ್ಮಗಳನ್ನು ಹೊಂದಿದ್ದು, ಉಭಯವಾಸಿಗಳು ಬಹಳಷ್ಟು ಸಾರಿ ಪರಿಸರ ವ್ಯವಸ್ಥೆಯ ಸೂಚಕಗಳಾಗಿವೆ ಮತ್ತು ಇತ್ತೀಚಿನ ದಶಕಗಳಲ್ಲಿ ವಿಶ್ವಾದಾಂತ್ಯ ಉಭವಾಸಿಗಳ ಸಂಖ್ಯೆಯು ಗಣನೀಯವಾಗಿ ಕ್ಷೀಣಗೊಳ್ಳುತ್ತಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಶ್ರೀಪಾದರಾಜರು (೧೩೮೯ - ೧೪೮೭) ಕನ್ನಡ ಹರಿದಾಸ ಸಾಹಿತ್ಯದ ಪಿತಾಮಹರು ಶ್ರೀಪಾದರಾಜರು. ಸರಳ ಕನ್ನಡ ಭಾಷೆಯಲ್ಲಿ ಧರ್ಮಗ್ರಂಥಗಳನ್ನು ಪರಿವರ್ತಿಸಬೇಕೆಂಬ ಅಭಿಲಾಷೆ ಇವರಲ್ಲಿ ಉಂಟಾದದು ಅಂದಿನ ಪರಿಸ್ಥಿತಿಯಲ್ಲಿ ಕ್ರಾಂತಿಕಾರಕವೇ ಆಗಿತ್ತು. ಇದಕ್ಕಾಗಿ ಭಾಗವತ ತಂಡವೊಂದನ್ನು ಏರ್ಪಡಿಸಿ ಪೂಜಾಕಾಲದಲ್ಲಿ ವೇದ ಪಾರಾಯಣ ಮಾಡಿದಂತೆ ಭಾಗವತರ ಮೂಲಕ ಕನ್ನಡ ದೇವರನಾಮಗಳನ್ನು ಹಾಡಿಸಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವ್ಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.
ಬೌದ್ಧ ಧರ್ಮ ಎಂದರೆ ಪ್ರಪಂಚದ ಅನೇಕ ಧರ್ಮಗಳಲ್ಲಿ 4 ನೇ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಸತ್ಯ ಮತ್ತು ವಿಜ್ಞಾನಕ್ಕೆ ಹತ್ತಿರವಾದ ಹಾಗೂ ಯಾರಿಗೂ ನಿಷ್ಠೂರವಾಗದ ವಾಸ್ತವ ವಾದವನ್ನು ಕ್ರಿ.ಪೂ. 566 ವರ್ಷಗಳ ಮುಂಚಿತವಾಗಿ ಭಾರತ ದಲ್ಲಿ ಜನನವಾಗಿ 98 ವರ್ಷಗಳ ಕಾಲ ಜೀವಿಸಿದ್ದ ಸಿದ್ದಾರ್ಥ ಗೌತಮ ಬುದ್ದನ ಬೋಧನೆಗಳ ಮೇಲೆ ಆಧಾರಿತವಾಗಿ ಬೆಳೆದು ಬಂದಿರುವ ಭಾರತೀಯ ಧರ್ಮ. ಸಾಖ್ಯರ ರಾಜಧಾನಿಯಾದ ಕಪಿಲವಸ್ತುವಿನ ರಾಜ ಶುದ್ದೋಧನ ಹಾಗೂ ಮಹಾಮಾಯೆ ಎನ್ನುವವರ ಮಗನಾದ ರಾಜಕುಮಾರ ಸಿದ್ಧಾರ್ಥ ನು ಕಠಿಣ ಪರಿಶ್ರಮ ಮೂಲಕ ಜ್ಞಾನ ವನ್ನು ಪಡೆದು ಬುದ್ಧನಾಗಿ 98 ವರ್ಷಗಳ ಕಾಲ ಧರ್ಮೋಪದೇಶ ಮಾಡುತ್ತಾ ನಿರ್ವಾಣ ಹೊಂದಿದ ಕಾರಣ ಗೌತಮ ಬುದ್ಧ ನೆಂಬ ಹೆಸರೂ ಇದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ಫೆಬ್ರವರಿ 2020 ರಲ್ಲಿ ಭಾರತ ಸರ್ಕಾರದಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮತ್ತು ನಿರ್ವಹಣೆಗಾಗಿ ಸ್ಥಾಪಿಸಲಾದ ಟ್ರಸ್ಟ್ ಆಗಿದೆ ಟ್ರಸ್ಟ್ 15 ಟ್ರಸ್ಟಿಗಳನ್ನು ಒಳಗೊಂಡಿದೆ. ಈ ಟ್ರಸ್ಟ್ 22 ಜನವರಿ 2024 ರಂದು ಪ್ರಾಣ ಪ್ರತಿಷ್ಠೆಯನ್ನು ಆಯೋಜಿಸಿತ್ತು.
ಹಿಂದೂ ಧರ್ಮ ದಲ್ಲಿ, ಸೂರ್ಯದೇವ (ದೇವನಾಗರಿ : सूर्य, ಸೂರ್ಯ ("ಅತ್ಯುಚ್ಚ ಬೆಳಕು "); Malay: [Suria] Error: {{Lang}}: text has italic markup (help); ಥಾಯ್:พระอาทิตย์ Suraya, Suriya or Phra Athit) ಮುಖ್ಯ ಸೂರ್ಯನ ದೇವತೆ , ಆದಿತ್ಯ ರಲ್ಲಿ ಒಬ್ಬ ಕಶ್ಯಪ ನ ಮಗ ಮತ್ತು ಅವನ ಹೆಂಡತಿಯರಲ್ಲಿ ಒಬ್ಬಳು, ಅದಿತಿ ; ಇಂದ್ರ ನ ಪತ್ನಿ ; ಅಥವಾ ದಯುಸ್ ಪಿತರ್ (ಅವತರಿಣಿಕೆಯ ಆಧಾರದನ್ವಯ ). ಸಾಮಾನ್ಯವಾಗಿ ಸೂರ್ಯ ನನ್ನು, ಸನ್ಎಂದು ಕರೆಯಲ್ಪಡುತ್ತಾರೆ. ಸೂರ್ಯನಿಗೆ ಕೂದಲುಗಳಿದ್ದು, ಚಿನ್ನ ದ ತೊಳುಗಳಿವೆ.
ಸಚಿನ್ ತೆಂಡೂಲ್ಕರ್ ನಿವೃತ್ತಿ ಭಾಷಣ
ಸಚಿನ್ ತೆಂಡೂಲ್ಕರ್ ವಿದಾಯದೊಂದಿಗೆ ೧೬ನವೆಂಬರ್,೨೦೧೩ ಶನಿವಾರ ಕ್ರಿಕೆಟ್ ನಲ್ಲಿ ಭವ್ಯ ಯುಗವೊಂದು ಮುಗಿಯಿತು. ಕಳೆದ ೨೪ ವರ್ಷಗಳುದ್ದಕ್ಕೂ ರನ್, ಶತಕ, ದಾಖಲೆಗಳನ್ನೇ ಪೋಣಿಸುತ್ತ ಕ್ರಿಕೇಟ್ ಪ್ರಿಯರ ಪಾಲಿಗೆ ದೇವರೆಂಬ ಖ್ಯಾತಿ ಗಳಿಸಿದ್ದ ಸಚಿನ್ ತಮ್ಮ ಬ್ಯಾಟಿಂಗ್ ಪ್ರದರ್ಶನಕ್ಕೆ ಪೂರ್ಣ ವಿರಾಮ ಹಾಕಿದರು. ವೆಸ್ಟ್ ಇಂಡೀಸ್ ವಿರುದ್ದ ಇನ್ನಿಂಗ್ಸ್ ಮತ್ತು ೧೨೬ ರನ್ ಅಂತರದಿಂದ ಗೆಲ್ಲುವ ಮೂಲಕ ಭಾರತ ತಂಡ ಸಚಿನ್ ಗೆ ವಿದಾಯ ನೀಡಿದ್ದಾರೆ, ಕ್ರಿಕೇಟ್ ಜೀವನದುದ್ದಕ್ಕೂ ಪ್ರೀತಿಸಿ,ಬೆಂಬಲಿಸಿ, ಬೆನ್ನುತಟ್ಟಿದ ಎಲ್ಲರಿಗೂ ಧನ್ಯವಾದ ಹೇಳುತ್ತಲೇ ಸಚಿನ್ ತಮ್ಮೊಳಗಿನ ಪರಿಪೂರ್ಣ ವ್ಯಕ್ತಿತ್ವ ವನ್ನು ಅನಾವರಣ ಗೊಳಿಸಿದರು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸತ್ರಿಯಾ , ಅಥವಾ ಸತ್ರಿಯಾ ನೃತ್ಯ , ಶಾಸ್ತ್ರೀಯ ಭಾರತೀಯ ನಾಟ್ಯದ ಎಂಟು ಪ್ರಮುಖ ಸಂಪ್ರದಾಯಗಳಲ್ಲಿ ಇದೂ ಕೂಡ ಒಂದಾಗಿದೆ. ಇತ್ತೀಚೆಗಷ್ಟೇ ಸ್ವಲ್ಪ ದಿನಗಳ ಹಿಂದೆ ಇತರ ಸಂಪ್ರದಾಯಗಳನ್ನು ಪುನರುಜ್ಜೀವನಗೊಳಿಸಲಾಯಿತು, ಆದರೆ ಸತ್ರಿಯಾ ಮಾತ್ರ ಅಸ್ಸಾಮಿ ವೈಷ್ಣವ ಸಂತರಾದ ಶ್ರೀಮಂತ ಶಂಕರ್ ದೇವಾ 15 ನೇ ಶತಮಾನದಲ್ಲಿ ಅಸ್ಸಾಂನಲ್ಲಿ ಇದನ್ನು ಸೃಷ್ಟಿಸಿದಾಗ ಹೇಗೆ ಇತ್ತೂ ಹಾಗೇಯೇ ಉಳಿದುಕೊಂಡಿದೆ. ಶಂಕರ್ ದೇವಾ ಸತ್ರಿಯಾ ನೃತ್ಯ ವನ್ನು ಅಂಖಿಯ ನಾಟ್ (ಇವರು ಸೃಷ್ಟಿಸಿದಂತಹ ಅಸ್ಸಾಮಿಯರ ಏಕ ಅಂಕ ನಾಟಕದ ಒಂದು ರೂಪವಾಗಿದೆ)ದ ಜೊತೆಯಾಗಿ ಸೃಷ್ಟಿಸಿದರು.
ಕಪ್ಪೆಗಳು, ಕಾಡುಕಪ್ಪೆಗಳು, ಬೆಂಕಿಮೊಸಳೆಗಳು (ಅಗ್ನಿಮಕರ), ನ್ಯೂಟ್ಗಳು (ಚಿಕ್ಕ ಉಭಯ ಚರ ಪ್ರಾಣಿ), ಮತ್ತು ಸೀಸಿಲಿಯನ್ಗಳಂತಹ ಉಭಯಚರಗಳು (ಉಭಯಚರ ಪ್ರಾಣಿವರ್ಗ, ಆಂಫಿ - ಅರ್ಥ "ಎರಡು ಬದಿಗಳಲ್ಲಿ" ಮತ್ತು -ಬಿಯೋಸ್ ಅರ್ಥ "ಜೀವನ") ಶೀತರಕ್ತದ ಪ್ರಾಣಿಗಳಾಗಿವೆ (ಅಥವಾ ಕೋಲ್ಡ್-ಬ್ಲಡೆಡ್). ಅವು ಒಂದು ಚಿಕ್ಕ ವಯಸ್ಸಿನ ನೀರು-ಉಸಿರಾಟದ ವಿಧದಿಂದ ಪ್ರದುದ್ಧವಾದ ನೀರು-ಉಸಿರಾಟ ವಿಧಕ್ಕೆ, ಅಥವಾ ಕೆಲವು ರೂಪಾಂತರದ ಗುಣಲಕ್ಷಣಗಳನ್ನು ಉಳಿಸಿಕೊಂಡಿರುವ ಪೆಡೊಮೊರ್ಫ್ಗಳಿಗೆ ತಮ್ಮ ರೂಪವನ್ನು ಬದಲಾಯಿಸುತ್ತವೆ. ಪ್ರೊಟೆಡೀ (ಮಣ್ಣುಹುಳುಗಳು ಮತ್ತು ನೀರುನಾಯಿಗಳು) ಇದು ರೂಪಾಂತರಗೊಳ್ಳುವ ಜೀವಿಗಳ ವರ್ಗದ ಒಂದು ಉತ್ತಮ ಉದಾಹರಣೆಯಾಗಿದೆ.
ಕೊಂಕಣ ವನ್ನು ಕೊಂಕಣ ಕರಾವಳಿ ಅಥವಾ ಕರಾವಳಿ ಎಂದೂ ಸಹ ಕರೆಯಲಾಗುತ್ತದೆ, ಇದು ರಾಯಗಡದಿಂದ ಮಂಗಳೂರಿನವರೆಗೂ ಇರುವ ಭಾರತದ ಪಶ್ಚಿಮ ಕರಾವಳಿಯಲ್ಲಿ ಕಲ್ಲುಬಂಡೆಗಳಿಂದ ಕೂಡಿದ ಭಾಗವಾಗಿದೆ.ಭಾರತದ ಪಶ್ಚಿಮತೀರದಲ್ಲಿ, ಮಹಾರಾಷ್ಟ್ರದ ಠಾಣೆ (ಥಾನಾ) ಕೊಲಾಬಾ ಮತ್ತು ರತ್ನಾಗಿರಿ ಜಿಲ್ಲೆಗಳನ್ನೂ ಗೋವವನ್ನೂ ಒಳಗೊಂಡ ಪ್ರದೇಶವನ್ನು ಸ್ಥೂಲವಾಗಿ ಕೊಂಕಣ ಎಂದು ಕರೆಯುವುದಿದೆ. ಪಶ್ಚಿಮಘಟ್ಟಗಳ ಪಶ್ಚಿಮಕ್ಕಿರುವ ಈ ತಗ್ಗುನೆಲವೆಲ್ಲ ಮೈದಾನವಲ್ಲ. ೩೦-೫೦ ಮೈ.
ಮುಖ್ಯ ಮೆನು ತೆರೆ ವಿಕಿಪೀಡಿಯ ಹುಡುಕು Show my notifications ಬದಲಾವಣೆಗಳು ನಂತರದ ಸಂಪಾದನೆ → Krishi Thapanda ೫,೫೪೨ BYTES ADDED, ೨೭ ನಿಮಿಷಗಳ ಹಿಂದೆ "Krishi Thapanda" ಪುಟವನ್ನು ಅನುವಾದಿಸುವುದರಿಂದ ಸೃಷ್ಟಿಸಲಾಯಿತು ಕ್ರಿಷಿ ತಾಪಂಡ ಅವರು ರೂಪದರ್ಶಿಯಾಗಿದ್ದಾರೆ ಹಾಗು ಭಾರತೀಯ ನಟಿಯಾಗಿ ಕನ್ನಡ ಚಲನಚಿತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೆ. ಅವರು ೨೦೧೬ರಲ್ಲಿ ಅಕಿರ ಎಂಬ ಕನ್ನಡ ಚಲನಚಿತ್ರ ಮೂಲಕ ಚಿತ್ರರಂಗ ಪ್ರವೇಶಿಸಿದರು. ೨೦೧೬ರ 'ಎಸ್ಐಐಎಂಎ'ನ ಉತ್ತಮ ನಟಿ ಪ್ರಶಸ್ತಿಗಾಗಿ ಇವರು ನಾಮನಿರ್ದೇಶನಗೊಂಡಿದ್ದರು.
ರಾಮಾಯಣದಲ್ಲಿ ಬರುವ ರಾಕ್ಷಸನ ಪಾತ್ರ. ರಾಮ,ಲಕ್ಷ್ಮಣರು ವಿಶ್ವಾಮಿತ್ರರಲ್ಲಿ ವಿದ್ಯಾರ್ಜನೆ ಮಾಡುತ್ತಿರುವಾಗ ಸುಬಾಹು ಮತ್ತು ಮಾರೀಚನೆಂಬ ರಾಕ್ಷಸರು ವಿಶ್ವಾಮಿತ್ರರ ಹೋಮ-ಯಾಗಾದಿಗಳಲ್ಲಿ ವಿಘ್ನ ತರುತ್ತಿರುತ್ತಾರೆ. ಆಗ ವಿಶ್ವಾಮಿತ್ರರ ಅಪ್ಪಣೆಯ ಮೇರೆಗೆ ರಾಮ,ಲಕ್ಷ್ಮಣರು ಈ ರಾಕ್ಷಸರ ಮೇಲೆ ದಾಳಿ ಮಾಡಿದಾಗ ಸುಬಾಹು ಮೃತನಾಗುತ್ತಾನೆ ಮತ್ತು ಮಾರೀಚ ಅನಾಮಧೇಯ ದ್ವೀಪವೊಂದರಲ್ಲಿ ಬಚ್ಚಿಟ್ಟುಕೊಳ್ಳುತ್ತಾನೆ.ಮುಂದೆ ರಾಮ-ಲಕ್ಷ್ಮಣ-ಸೀತೆಯರು ಅರಣ್ಯದಲ್ಲಿ ವನವಾಸದಲ್ಲಿದ್ದಾಗ ಇದೇ ಮಾರೀಚ ರಾವಣನಿಗೆ ಸಹಾಯಮಾಡಲೆಂದು ಬಂಗಾರ ವರ್ಣದ ಜಿಂಕೆಯಾಗಿ ಸೀತೆಯ ಕುಟೀರದ ಮುಂದೆ ಸುಳಿದಾಡತೊಡಗಿ ಸೀತೆಯ ಮನಸೂರೆಗೊಳ್ಳುತ್ತಾನೆ.
ಶ್ರೀಯುತ ಸಜ್ಜನ್ ಜಿಂದಾಲ್ ರವರು (ಜನನ (೧೯೫೯-೧೨-೦೫)೫ ಡಿಸೆಂಬರ್ ೧೯೫೯ ) ಒಬ್ಬ ಭಾರತೀಯ ಉದ್ಯಮಿ. ಭಾರತದಲ್ಲಿ ಉಕ್ಕು, ಗಣಿಗಾರಿಕೆ, ಇಂಧನ, ಕ್ರೀಡೆ, ಮೂಲಸೌಕರ್ಯ ಮತ್ತು ಸಾಫ್ಟ್ವೇರ್ ವ್ಯವಹಾರದಲ್ಲಿ ಮುಂಚೂಣಿಯಲ್ಲಿಯರುವ ಜೆಎಸ್ಡಬ್ಲ್ಯೂ ಸಮೂಹ ಕಂಪನಿಗಳ ಪ್ರಸ್ತುತ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರೂ ಆಗಿದ್ದಾರೆ. ಜೆಎಸ್ಡಬ್ಲ್ಯೂ ಸ್ಟೀಲ್ ಭಾರತದ ಅತಿದೊಡ್ಡ ಖಾಸಗಿ ಉಕ್ಕು ಉತ್ಪಾದಕ ಕಂಪನಿಯಾಗಿದ್ದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಿಶ್ವದಲ್ಲಿಯ ಮಾನವ ನಿರ್ಮಿತ ಮತ್ತು ನೈಸರ್ಗಿಕ ವಿಸ್ಮಯಗಳ ವಿಶ್ವದ ಅದ್ಭುತಗಳನ್ನು ಗುರುತಿಸಲು ಕಾಲಕಾಲಕ್ಕೆ ಹಲವಾರು ರೀತಿಯ ಪಟ್ಟಿಗಳನ್ನು ಮಾಡಲಾಗುತ್ತಿದೆ. ಪ್ರಾಚೀನ ವಿಶ್ವದ ಏಳು ಅದ್ಭುತಗಳು ಈ ರೀತಿಯ ಪಟ್ಟಿ ಗಳಲ್ಲಿ ಮೊದಲನೆಯದು. ಈ ಪಟ್ಟಿಯಲ್ಲಿ ಮಾನವನಿರ್ಮಿತ ಉತ್ಕೃಷ್ಟ ಪ್ರಾಚೀನಾವಶೇಷಗಳನ್ನು ಹೆಲೆನಿಕ್ ಸ್ಥಳ ವೀಕ್ಷಕರ ಮಾಹಿತಿ ಗ್ರಂಥದಲ್ಲಿ ಪಟ್ಟಿ ಮಾಡಲಾಗಿದೆ.
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಮಹದೇಶ್ವರ ಬೆಟ್ಟ ಕರ್ನಾಟಕದ ದಕ್ಷಿಣ ತುದಿಯ ಗಡಿಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನ ಮುಖ್ಯ ಶ್ರದ್ಧಾಭಕ್ತಿ ಕೇಂದ್ರ. ದೇವಸ್ಥಾನವು ಬೆಟ್ಟಗಳಿಂದ ಸುತ್ತುವರಿದಿರುವ ಕಾರಣ ಮಹದೇಶ್ವರ ಬೆಟ್ಟವೆಂದು ಕರೆಯಲಾಗುತ್ತದೆ. ಪಶ್ಚಿಮಘಟ್ಟಗಳ ಭಾಗದಿಂದ ಆರಂಭವಾಗಿ ಪೂರ್ವಘಟ್ಟಗಳ ಕಡೆಗೆ ಹರಡಿಕೊಂಡಿರುವ ಬೆಟ್ಟ ಸಾಲುಗಳಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಹಬ್ಬಿರುವ ಮಹದೇಶ್ವರ ಬೆಟ್ಟ ದಖನ್ ಪ್ರಸ್ಥಭೂಮಿಯ ಬಹುಮುಖ್ಯ ಭಾಗವೂ ಕೂಡ.