The most-visited ಕನ್ನಡ Wikipedia articles, updated daily. Learn more...
ದೇವಾಲಯಗಳಲ್ಲಿ ದೇವರುಗಳಿಗೆ ವಿಭಿನ್ನ ರೀತಿಯ ಸೇವೆಯನ್ನು ಮಾಡಲು ಅರ್ಪಿಸಲಾಗಿರುವ ಯುವತಿಯರನ್ನು ದೇವದಾಸಿಯರೆಂದು ಕರೆಯಲಾಗುತ್ತಿತ್ತು. ಈ ಯುವತಿಯರು ಭಗವಂತನ ದಾಸಿಯರಾದ್ದರಿಂದ ಮಂದಿರವನ್ನು ಶುದ್ಧಗೋಳಿಸುವುದು, ದೀಪ ಬೆಳಗಿಸುವುದು ಹಾಗೂ ದೇವರ ಪ್ರತಿಮೆಯ ಸಮ್ಮುಖದಲ್ಲಿ ಭಕ್ತಿಪೂರ್ವಕವಾಗಿ ಗಾಯನ ನರ್ತನ ಮೊದಲಾದ ನಿಶ್ಚಿತ ಕಾರ್ಯಗಳನ್ನು ಮಾಡುವುದು-ಇವುಗಳ ಮೂಲಕ ದೇವರ ಸೇವೆಯನ್ನು ನೆರವೇರಿಸುತ್ತಿದ್ದರು. ಈ ಪದ್ಧತಿ ತೀರ ಪ್ರಾಚೀನವಾದುದೆಂದು ತಿಳಿದು ಬರುತ್ತದೆ.
ರಾಮೆನ್ (/rɑːmən/′ (′, ′, ರಾಮೆನ್ ಅಥವಾ ′, ರೇಮನ್, [ɾaːme] i′) ಜಪಾನಿನ ನೂಡಲ್ ಖಾದ್ಯವಾಗಿದೆ. ಇದು ಚೀನೀ ಶೈಲಿಯ ಗೋಧಿ ನೂಡಲ್ಸ್ ಅನ್ನು ಒಳಗೊಂಡಿದೆ (Синсия ноудльны, chūkamen), ಇದನ್ನು ಸಾರುಗಳಲ್ಲಿ ಬಡಿಸಲಾಗುತ್ತದೆ. ಸಾಮಾನ್ಯ ರುಚಿಗಳೆಂದರೆ ಸೋಯಾ ಸಾಸ್ ಮತ್ತು ಮಿಸೊ, ಕತ್ತರಿಸಿದ ಹಂದಿಮಾಂಸ (ಚಶು ನೌರಿ) (ಒಣಗಿದ ಕಡಲಕಳೆ ಮೆನ್ಮಾ (ಬಿದಿರು ಚಿಗುರುಗಳು) ಮತ್ತು ಸ್ಕಲ್ಲಿಯನ್ಸ್ ಸೇರಿದಂತೆ ವಿಶಿಷ್ಟ ಮೇಲೋಗರಗಳೊಂದಿಗೆ.
ಕರ್ನಾಟಕ ಹೈಕೋರ್ಟ್ ಅಥವಾ ಕರ್ನಾಟಕ ಉಚ್ಚ ನ್ಯಾಯಾಲಯವು ರಾಜ್ಯದ ಮುಖ್ಯ ನ್ಯಾಯಾಂಗ ಸಂಸ್ಥೆಯಾಗಿದ್ದು, ಈ ನ್ಯಾಯಾಲಯವು ಮೂರು ಪ್ರತ್ಯೇಕ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತದೆ, ಬೆಂಗಳೂರು, ಧಾರವಾಡ ಮತ್ತು ಗುಲ್ಬರ್ಗ (ಯಾದಗಿರಿ). ಇದರ ಮುಖ್ಯ ಕಚೇರಿ ಬೆಂಗಳೂರು ನಗರದಲ್ಲಿದೆ ಮತ್ತು ಧಾರವಾಡ ಮತ್ತು ಗುಲ್ಬರ್ಗದಲ್ಲಿ ಶಾಖಾ ನ್ಯಾಯಾಲಯಗಳಿವೆ. ಈ ವ್ಯವಸ್ಥೆಯಿಂದ ರಾಜ್ಯದ ವಿವಿಧ ಭಾಗಗಳ ನಾಗರಿಕರಿಗೆ ನ್ಯಾಯಾಲಯದ ಸೇವೆ ಸುಲಭವಾಗಿ ಲಭ್ಯವಾಗುತ್ತದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಹಿಂದೂ ಧರ್ಮದಲ್ಲಿ, ಸಂಪ್ರದಾಯ ಶಬ್ದವನ್ನು ಆಧ್ಯಾತ್ಮಿಕ ವಂಶಾವಳಿ, ಧಾರ್ಮಿಕ ವ್ಯವಸ್ಥೆ ಎಂದು ಹೇಳಬಹುದು. ಇದು ಸರಿಸುಮಾರು ಆಂಗ್ಲದ ಟ್ರೆಡಿಷನ್ ಶಬ್ದಕ್ಕೆ ಸಮಾನಾರ್ಥಕವಾಗಿದೆ. ಇದು ಗುರುಗಳು ಮತ್ತು ಶಿಷ್ಯರ ಉತ್ತರಾಧಿಕಾರಕ್ಕೆ ಸಂಬಂಧಿಸಿದೆ, ಮತ್ತು ಆಧ್ಯಾತ್ಮಿಕ ಸಂಪರ್ಕದಾರಿಯಾಗಿ ಕಾರ್ಯನಿರ್ವಹಿಸುತ್ತದೆ, ಮತ್ತು ಒಂದು ಧಾರ್ಮಿಕ ಗುರುತಿಗೆ ಸ್ಥಿರತೆಯನ್ನು ನೀಡುವ ಸಂಬಂಧಗಳ ಸೂಕ್ಷ್ಮ ಜಾಲವನ್ನು ಒದಗಿಸುತ್ತದೆ.
ವಟ ಪೂರ್ಣಿಮಾ ( वट पूर्णिमा, vaṭapūrṇimā, ವಟ ಸಾವಿತ್ರಿ ವ್ರತ ಎಂದೂ ಕರೆಯುತ್ತಾರೆ) ನೇಪಾಳ, ಉತ್ತರ ಭಾರತ ಮತ್ತು ಪಶ್ಚಿಮ ಭಾರತದ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕುಮಾವ್, ಗುಜರಾತ್ನಲ್ಲಿ ವಿವಾಹಿತ ಮಹಿಳೆಯರು ಆಚರಿಸುವ ಹಿಂದೂ ಆಚರಣೆಯಾಗಿದೆ. ಈ ಪೂರ್ಣಿಮೆಯಂದು (ಹುಣ್ಣಿಮೆ) ಹಿಂದೂ ಕ್ಯಾಲೆಂಡರ್ನಲ್ಲಿ ಜ್ಯೇಷ್ಠ ಮಾಸದ ಮೂರು ದಿನಗಳಲ್ಲಿ ( ಗ್ರೆಗೋರಿಯನ್ ಕ್ಯಾಲೆಂಡರ್ನಲ್ಲಿ ಮೇ-ಜೂನ್ನಲ್ಲಿ ಬರುತ್ತದೆ), ವಿವಾಹಿತ ಮಹಿಳೆ ಆಲದ ಮರದ ಸುತ್ತಲೂ ವಿಧ್ಯುಕ್ತ ದಾರವನ್ನು ಕಟ್ಟುವ ಮೂಲಕ ತನ್ನ ಗಂಡನ ಮೇಲಿನ ಪ್ರೀತಿಯನ್ನು ಗುರುತಿಸುತ್ತಾಳೆ. ಈ ಆಚರಣೆಯು ಮಹಾಕಾವ್ಯವಾದ ಮಹಾಭಾರತದಲ್ಲಿ ನಿರೂಪಿತವಾಗಿರುವ ಸಾವಿತ್ರಿ ಮತ್ತು ಸತ್ಯವಾನರ ದಂತಕಥೆಯನ್ನು ಆಧರಿಸಿದೆ..
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀಪಾದರಾಜರು (೧೩೮೯ - ೧೪೮೭) ಕನ್ನಡ ಹರಿದಾಸ ಸಾಹಿತ್ಯದ ಪಿತಾಮಹರು ಶ್ರೀಪಾದರಾಜರು. ಸರಳ ಕನ್ನಡ ಭಾಷೆಯಲ್ಲಿ ಧರ್ಮಗ್ರಂಥಗಳನ್ನು ಪರಿವರ್ತಿಸಬೇಕೆಂಬ ಅಭಿಲಾಷೆ ಇವರಲ್ಲಿ ಉಂಟಾದದು ಅಂದಿನ ಪರಿಸ್ಥಿತಿಯಲ್ಲಿ ಕ್ರಾಂತಿಕಾರಕವೇ ಆಗಿತ್ತು. ಇದಕ್ಕಾಗಿ ಭಾಗವತ ತಂಡವೊಂದನ್ನು ಏರ್ಪಡಿಸಿ ಪೂಜಾಕಾಲದಲ್ಲಿ ವೇದ ಪಾರಾಯಣ ಮಾಡಿದಂತೆ ಭಾಗವತರ ಮೂಲಕ ಕನ್ನಡ ದೇವರನಾಮಗಳನ್ನು ಹಾಡಿಸಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಶ್ರೀನಿವಾಸ ರಾಮಾನುಜನ್ (ಪೂರ್ಣ ಹೆಸರು - ಶ್ರೀನಿವಾಸ ರಾಮಾನುಜನ್ ಅಯ್ಯಂಗಾರ್) (ಡಿಸೆಂಬರ್ ೨೨, ೧೮೮೭ - ಏಪ್ರಿಲ್ ೨೬, ೧೯೨೦) ವಿಶ್ವದಲ್ಲಿ ಶ್ರೇಷ್ಠ ಭಾರತೀಯ ಗಣಿತಜ್ಞರೆಂದು ಪ್ರಖ್ಯಾತರಾಗಿದ್ದಾರೆ. “ಪ್ರತಿ ಧನಪೂರ್ಣಾಂಶವೂ ರಾಮಾನುಜನ್ನರ ವೈಯಕ್ತಿಕ ಮಿತ್ರರುಗಳಲ್ಲೊಂದು” ಎಂಬುದು ಲೋಕದಲ್ಲಿ ವಿಖ್ಯಾತ ನುಡಿ. ಅವರಿಗೆ “ಸಂಖ್ಯೆಗಳ ವೈಲಕ್ಷಣಗಳನ್ನು ನಂಬಲಸಾಧ್ಯವಾದಂಥ ರೀತಿಯಲ್ಲಿ ನೆನಪಿಡುವ’ ಅಪೂರ್ವ ಸಾಮರ್ಥ್ಯವಿತ್ತು.
ಯಕೃತ್ತು ಕಶೇರುಕಗಳಲ್ಲಿ ಮತ್ತು ಇತರ ಕೆಲವು ಪ್ರಾಣಿಗಳಲ್ಲಿ ಕಂಡುಬರುವ ಒಂದು ಜೀವಧಾರಕ ಅಂಗ. ವಿಷದ ಅಂಶವನ್ನು ತೆಗೆದುಹಾಕುವುದು, ಪ್ರೋಟೀನ್ ಸಂಶ್ಲೇಷಣೆ ಮತ್ತು ಜೀರ್ಣಕ್ರಿಯೆಗೆ ಬೇಕಾಗುವ ಜೀವರಾಸಾಯನಿಕ ವಸ್ತುಗಳನ್ನು ಉತ್ಪತ್ತಿ ಮಾಡುವುದು ಇವೇ ಮೊದಲಾದ ಹಲವಾರು ಕಾರ್ಯಗಳನ್ನು ಇದು ಮಾಡುತ್ತದೆ. ಜೀವದ ಉಳಿವಿಗಾಗಿ ಯಕೃತ್ತು ಅತೀ ಅವಶ್ಯಕ; ಯಕೃತ್ತು ಕಾರ್ಯವನ್ನು ಮಾಡದಿದ್ದರೆ ಅದನ್ನು ಸರಿದೂಗಿಸುವಂತಹ ಬೇರೆ ಯಾವುದೇ ಮಾರ್ಗಗಳು ಪ್ರಸ್ತುತದಲ್ಲಿಲ್ಲ.
ಪ್ರತಾಪ್ ಸಿಂಹ ಕನ್ನಡದ ಜನಪ್ರಿಯ ಅಂಕಣಕಾರರು ಹಾಗೂ ಪತ್ರಿಕೋದ್ಯಮಿ. ಸಕಲೇಶಪುರದಲ್ಲಿ ಜನಿಸಿರುವ ಇವರು ತಮ್ಮ ಪದವಿ ಪುರ್ವ ಶಿಕ್ಷಣವನ್ನು ಚಿಕ್ಕಮಗಳೂರುನಲ್ಲಿ ಮುಗಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿರುವ ಎಸ್ ಡಿ ಎಮ್ ಕಾಲೇಜಿನಿಂದ ಮನಃಶಾಸ್ತ್ರ ಹಾಗೂ ಪತ್ರಿಕೋದ್ಯಮದಲ್ಲಿ ಪದವಿಯನ್ನು ಪಡೆದಿದ್ದಾರೆ. ಎಂಸಿಜೆ ಮಂಗಳೂರಿನಿಂದ ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ ಹಾಗೂ ಎಮ್ ಐ ಸಿ ಇ ಮಂಗಳೂರಿಂದ ಕಂಪ್ಯೂಟರ್ ಅಪ್ಲಿಕೇಷನ್ ಡಿಪ್ಲೋಮಾ ಮಾಡಿದ್ದರೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಭಾರತದ ಇತಿಹಾಸದಲ್ಲಿ ಅತ್ಯಂತ ಪ್ರಮುಖವಾದವು. ಎಲ್ಲರಿಗೂ ಅರ್ಥವಾಗುವಂತೆ ಅತಿ ಸರಳವಾದ ಭಾಷೆಯಲ್ಲಿ ಧರ್ಮೋಪದೇಶವನ್ನು ಕಲ್ಲುಬಂಡೆಗಳ ಮೇಲೂ ಶಿಲಾಸ್ತಂಭಗಳ ಮೇಲೂ ಗವಿಗಳ ಗೋಡೆಯ ಮೇಲೂ ಆತ ಕೆತ್ತಿಸಿದ್ದಾನೆ. ಈ ಶಾಸನಗಳು ಅಶೋಕ ಚಕ್ರವರ್ತಿಯ ಸ್ವಂತ ಮಾತುಗಳಾಗಿ ಪಾಲಿ ಭಾಷೆಯಲ್ಲಿ, ಅತಿ ಪ್ರಧಾನವಾದ ಮತ್ತು ಜನರ ಕಣ್ಣಿಗೆ ಸುಲಭವಾಗಿ ಗೋಚರಿಸುವ ಪ್ರದೇಶಗಳಲ್ಲಿ ಕೆತ್ತಲ್ಪಟ್ಟಿವೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಹ್ಯೂ ಮೈಕೇಲ್ ಜ್ಯಾಕ್ಮನ್ (ಜನನ 12 ಅಕ್ಟೋಬರ್ 1968) ಇವರು ಸಿನಿಮಾ, ಸಂಗೀತ ರಂಗಭೂಮಿ ಮತ್ತು ದೂರದರ್ಶನದಲ್ಲಿ ತೊಡಗಿಕೊಂಡಿರುವ ಒಬ್ಬ ಆಸ್ಟ್ರೇಲಿಯಾದ ನಟ ಮತ್ತು ನಿರ್ಮಾಪಕ. ಜ್ಯಾಕ್ಮನ್ ತನ್ನ ಹಲವು ಪ್ರಮುಖ ಸಿನಿಮಾಗಳಿಗಾಗಿ ವಿಶೇಷವಾಗಿ ಆಕ್ಷನ್/ಸೂಪರ್ಹೀರೋ, ಯುಗಾಂತರ ಮತ್ತು ರಮ್ಯ ಪಾತ್ರಗಳಿಗಾಗಿ ಅಂತಾರಾಷ್ಟ್ರೀಯ ಗಮನ ಸೆಳೆದಿದ್ದಾರೆ. ಎಕ್ಸ್-ಮೆನ್ ಸರಣಿಯ ವೋಲ್ವೆರೈನ್ ಪಾತ್ರ, ಜೊತೆಗೆ ನಾಯಕನಾಗಿ ಅಭಿನಯಿಸಿದ ಕೇಟ್ ಅಂಡ್ ಲಿಯೋಪೋಲ್ಡ್, ವ್ಯಾನ್ ಹೆಲ್ಸಿಂಗ್, ದ ಪ್ರೆಸ್ಟೀಜ್, ಮತ್ತು ಆಸ್ಟ್ರೇಲಿಯಾ ಚಿತ್ರಗಳಿಗಾಗಿ ಇವರು ಚಿರಪರಿಚಿತರಾಗಿದ್ದಾರೆ.
ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ
ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ ಮೂಲತಃ ಮಾದಾರ ಜನಾಂಗಕ್ಕೆ ಸೇರಿದ ಮಹಾಶಿವಶರಣೆ ಇವರ ಕಾರ್ಯ ಕ್ಷೇತ್ರ ನಂದವಾಡಗಿ. ಒಂದೆಡೆ ಕಿತ್ತು ತಿನ್ನುವ ಬಡತನ, ಮತ್ತೊಂದೆಡೆ ಕಳ್ಳನಾಗಿದ್ದ ಗಂಡನೊಡನೆ ಕಾಳವ್ವೆ ಪ್ರಯಾಸದ ಜೀವನ ನಡೆಸುತ್ತಿರುತ್ತಾಳೆ. ಒಂದು ದಿನ ಕಳ್ಳತನ ಮಾಡಲು ಹೋದ ಉರಿಲಿಂಗಪೆದ್ದಿ ಮನ:ಪರಿವರ್ತನೆಗೊಂಡು, 'ಉರಿಲಿಂಗ ದೇವರೆಂಬ' ಗುರುವಿನಿಂದ ಗುರುದೀಕ್ಷೆ ಪಡೆದು ಶರಣನಾಗುವನು.
ಇದಿ ಅಮೀನ್ (ಸಿ.೧೯೨೫[A] – ೧೬ ಆಗಸ್ಟ್ ೨೦೦೩) ಇವರು ೧೯೭೧ ರಿಂದ ೧೯೭೯ ರವರೆಗೆ ಉಗಾಂಡಾದ ಅಧ್ಯಕ್ಷರಾಗಿದ್ದರು ಹಾಗೂ ಸೈನ್ಯದ ನಾಯಕರಾಗಿದ್ದರು. ಅಮೀನ್ ಅವರು ೧೯೪೬ರಲ್ಲಿ ಬ್ರಿಟಿಷ್ ವಸಾಹತು ಸೈನಿಕ ಪಡೆ ಕಿಂಗ್ಸ್ ಆಫ್ರಿಕನ್ ರೈಫಲ್ಸ್ ಸೇರಿದರು, ಹಾಗೂ ಮಿಲ್ಟನ್ ಒಬೋಟ್ ನಂತರ ಮಿಲಿಟರಿ ಕಾಪ್ ಆಫ್ ಜನವರಿ ೧೯೭೧ ಗೆ ಆಯ್ಕೆಗೊಂಡು ನಂತರದಲ್ಲಿ ಮೇಜರ್ ಜನರಲ್ ದರ್ಜೆಗೇರಿದರು ಹಾಗೂ ಉಗಾಂಡನ್ ಸೈನ್ಯದ ಕಮ್ಯಾಂಡರ್ ಆದರು. ಅವರು ರಾಜ್ಯದ ಮುಖ್ಯಸ್ಥರಾಗಿದ್ದಾಗ ತಮ್ಮನ್ನು ಫೀಲ್ಡ್ ಮಾರ್ಷಲ್ ಸ್ಥಾನಕ್ಕೆ ನಿಯಮಿಸಿಕೊಂಡರು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಒಕ್ಕಲಿಗ ರಾಮಚಂದ್ರ ರಘುನಾಥ್ ಭಾರತದ ಓರ್ವ ವೃತ್ತಿಪರ ಹಾಕಿ ಆಟಗಾರರಾಗಿದ್ದಾರೆ.ಇವರು ೧ ನವೆಂಬರ್ ೧೯೮೮ ರಂದು ಜನಿಸಿದರು.ಇವರು ವಿ ಎಸ್ ರಾಮಚಂದ್ರ ಮತ್ತು ದೊಡ ಮನೆ ಬೊಜಮ್ಮ ದಂಪತಿಗೆ ಜನಿಸಿದರು. ಇಬ್ಬರ ಸಹೋದರಿಯರು ನಿವೀದಿತ ಸಂಕೇತ್ ಮತ್ತು ಕವನ ಯತೀಶ್.ಇವರ ಊರು ಕನಾಟಕದಲ್ಲಿರುವ ಕೊದಗು ಜಿಲ್ಲೆಯ ಹಾತೂರು ತಾಲೂಕಿನವರು..ಇವರ ಎತ್ತರ ೧೭೭ಸಿ.ಎಮ್.ಇವರು ಪ್ರಸ್ಥುತ ಐ.ಓ.ಸೀ.ಅಲ್. ತಂಡಕ್ಕೆ ಆಡುತೀದರೆ.ಇವರು ಹಲವರು ಪದಕಗಳನನ್ನು ಗೆದ್ದಿದಾರೆ.
ಬೇಲೂರು - ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ಶಿಲಾಬಾಲಿಕೆಯರ ಬೇಲೂರು ಎಂದು ಪ್ರಸಿದ್ಧವಾಗಿರುವ ಬೇಲೂರು, ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡು, ಸೋಮನಾಥಪುರದ ಜೊತೆಗೆ ಬೇಲೂರು, ಹೊಯ್ಸಳ ಸಾಮ್ರಾಜ್ಯದ ಶಿಲ್ಪಕಲೆಯ ದೇವಾಲಯಗಳೆಂದು ಪ್ರಸಿದ್ಧವಾಗಿವೆ.ಬೇಲೂರಿನ ಶ್ರೀ ಚೆನ್ನಕೇಶವ ದೇವಾಲಯವು ಸಹಸ್ರಾರು ಪ್ರವಾಸಿಗರನ್ನು ತನ್ನೆಡೆಗೆ ತನ್ನ ಶಿಲ್ಪಕಲೆಗಳ ಮೂಲಕ ಸೆಳೆಯುತ್ತದೆ.
ಕೈ ಹೆಣಿಗೆಗಾಗಿ ಬಳಸಲಾಗುವ ಸೂಜಿಯು ಒಂದು ಕೊನೆಯಲ್ಲಿ ಚೂಪಾದ ತುದಿಯನ್ನು ಮತ್ತು ಇನ್ನೊಂದು ಕೊನೆಯಲ್ಲಿ ರಂಧ್ರವನ್ನು (ಅಥವಾ ಕಣ್ಣು) ಹೊಂದಿರುವ ಒಂದು ಉದ್ದನೆಯ, ತೆಳ್ಳಗಿರುವ ಸಾಧನ. ಅತ್ಯಂತ ಮುಂಚಿನ ಸೂಜಿಗಳನ್ನು ಮೂಳೆ ಅಥವಾ ಕಟ್ಟಿಗೆಯಿಂದ ತಯಾರಿಸಲಾಗಿತ್ತು; ಆಧುನಿಕ ಸೂಜಿಗಳನ್ನು ಹೆಚ್ಚಿನ ಪ್ರಮಾಣದ ಇಂಗಾಲದ ಉಕ್ಕಿನ ತಂತಿಯಿಂದ ಉತ್ಪಾದಿಸಲಾಗುತ್ತದೆ ಮತ್ತು ಸವೆತವನ್ನು ತಡೆಯಲು ನಿಕಲ್ ಅಥವಾ ೧೮ ಕ್ಯಾರಟ್ ಚಿನ್ನದ ಲೇಪನ ಹೊಂದಿರುತ್ತವೆ. ಉನ್ನತ ಗುಣಮಟ್ಟದ ಕಸೂತಿ ಸೂಜಿಗಳನ್ನು ಮೂರರಲ್ಲಿ ಎರಡು ಭಾಗ ಪ್ಲಾಟಿನಮ್ ಮತ್ತು ಒಂದು ಭಾಗ ಟೈಟೇನಿಯಮ್ ಮಿಶ್ರಲೋಹದಿಂದ ಲೇಪಿಸಲಾಗುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಅರ್ಜುನ್ ಬಿಜ್ಲಾನಿಯವರು ಭಾರತೀಯ ದೂರದರ್ಶನ ಮತ್ತು ಚಲನಚಿತ್ರ ನಟ.ಅವರು ಬಾಲಾಜಿ ಟೆಲಿಫಿಲ್ಮ್ಸ್ ನ ಕಾರ್ತಿಕ ಎಂಬ ದೂರದರ್ಶನ ಕಾರ್ಯಕ್ರಮದ ಮೂಲಕ ಚೊಚ್ಚಲ ಪ್ರದರ್ಶನ ಮಾಡಿದರು.ನಂತರ ಅವರು ಲೆಫ್ಟ್ ರೈಟ್ ಲೆಫ್ಟ್, ಮಿಲೇ ಜಬ್ ಹಮ್ ತುಮ್, ಮೇರೀ ಆಶಿಕೀ ತುಮ್ ಸೇ ಹೀ, ನಾಗಿನ್ ಮತ್ತು ಪರ್ದೇಸ್ ಮೇ ಹೇ ಮೇರಾ ದಿಲ್ ಸೇರಿದಂತೆ ಇತರ ಪ್ರಸಿದ್ದ ಧಾರಾವಾಹಿಗಳಲ್ಲೂ ಕಾಣಿಸಿಕೊಂಡಿದ್ದಾರೆ.೨೦೧೬ ರಲ್ಲಿ ಅವರು 'ಝಲಕ್ ದಿಖ್ಲಾ ಝಾ ೯' ರಿಯಾಲಿಟಿ ಶೋ ನಲ್ಲಿ ಭಾಗವಹಿಸಿದ್ದರು.ಅದೇ ವರ್ಷದಲ್ಲಿ ಅವರು 'ಡೈರೆಕ್ಟ್ ಇಶ್ಕ್' ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದರು.೨೦೧೮ ರಲ್ಲಿ ಅವರು ಕಲರ್ಸ್ ಟಿವಿ ಯ ಡ್ಯಾನ್ಸ್ ರಿಯಾಲಿಟಿ ಶೋ 'ಡ್ಯಾನ್ಸ್ ದಿವಾನೆ' ಯ ಹೋಸ್ಟ್ ಆಗಿಯೂ ಕಾಣಿಸಿಕೊಂಡಿದ್ದಾರೆ.
ಜೋಧಾ-ಅಕ್ಬರ್ (ಹಿಂದಿ: जोधा-अकबर, ಉರ್ದು: جودھا اکبر) ಫೆಬ್ರವರಿ 15, 2008ರಂದು ಬಿಡುಗಡೆಯಾದ ಐತಿಹಾಸಿಕ ಪ್ರೇಮ ಕಥಾನಕವುಳ್ಳ ಭಾರತದ ಮಹೋನ್ನತ ಚಿತ್ರ. ಅಕ್ಯಾಡೆಮಿ ಪ್ರಶಸ್ತಿ(ಆಸ್ಕರ್ ಪ್ರಶಸ್ತಿ)ಗೆ ನಾಮನಿರ್ದೇಶನಗೊಂಡಿದ್ದ ಲಗಾನ್ (2001) ಚಿತ್ರದ ನಿರ್ದೇಶಕರಾದ ಭಾರತದ ಶ್ರೇಷ್ಠ ನಿರ್ದೇಶಕರಲ್ಲೊಬ್ಬರಾದ ಆಶುತೋಷ್ ಗೋವಾರಿಕರ್ ಈ ಚಿತ್ರವನ್ನು ನಿರ್ದೇಶಿಸಿ, ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ತಾರೆಯರಾದ ಹೃತಿಕ್ ರೋಷನ್ ಮತ್ತು ಐಶ್ವರ್ಯರೈ ಬಚ್ಚನ್ ನಾಯಕ-ನಾಯಕಿಯರಾಗಿ ನಟಿಸಿದ್ದಾರೆ.