The most-visited ಕನ್ನಡ Wikipedia articles, updated daily. Learn more...
ವಟ ಪೂರ್ಣಿಮಾ ( वट पूर्णिमा, vaṭapūrṇimā, ವಟ ಸಾವಿತ್ರಿ ವ್ರತ ಎಂದೂ ಕರೆಯುತ್ತಾರೆ) ನೇಪಾಳ, ಉತ್ತರ ಭಾರತ ಮತ್ತು ಪಶ್ಚಿಮ ಭಾರತದ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕುಮಾವ್, ಗುಜರಾತ್ನಲ್ಲಿ ವಿವಾಹಿತ ಮಹಿಳೆಯರು ಆಚರಿಸುವ ಹಿಂದೂ ಆಚರಣೆಯಾಗಿದೆ. ಈ ಪೂರ್ಣಿಮೆಯಂದು (ಹುಣ್ಣಿಮೆ) ಹಿಂದೂ ಕ್ಯಾಲೆಂಡರ್ನಲ್ಲಿ ಜ್ಯೇಷ್ಠ ಮಾಸದ ಮೂರು ದಿನಗಳಲ್ಲಿ ( ಗ್ರೆಗೋರಿಯನ್ ಕ್ಯಾಲೆಂಡರ್ನಲ್ಲಿ ಮೇ-ಜೂನ್ನಲ್ಲಿ ಬರುತ್ತದೆ), ವಿವಾಹಿತ ಮಹಿಳೆ ಆಲದ ಮರದ ಸುತ್ತಲೂ ವಿಧ್ಯುಕ್ತ ದಾರವನ್ನು ಕಟ್ಟುವ ಮೂಲಕ ತನ್ನ ಗಂಡನ ಮೇಲಿನ ಪ್ರೀತಿಯನ್ನು ಗುರುತಿಸುತ್ತಾಳೆ. ಈ ಆಚರಣೆಯು ಮಹಾಕಾವ್ಯವಾದ ಮಹಾಭಾರತದಲ್ಲಿ ನಿರೂಪಿತವಾಗಿರುವ ಸಾವಿತ್ರಿ ಮತ್ತು ಸತ್ಯವಾನರ ದಂತಕಥೆಯನ್ನು ಆಧರಿಸಿದೆ..
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕದಂಬ ಮನೆತನ : ಪಶ್ಚಿಮ ಕರ್ನಾಟಕದಲ್ಲಿ ಪ್ರ.ಶ. ೪-೭ನೆಯ ಶತಮಾನದವರೆಗೆ ಸ್ವತಂತ್ರರಾಗಿಯೂ ೧೦-೧೩ನೆಯ ಶತಮಾನದವರೆಗೆ ಹಾನುಗಲ್ಲು, ಗೋವ ಮುಂತಾದ ಕಡೆಗಳಲ್ಲಿ ಬಹುತೇಕ ಸಾಮಂತರು ಅಥವಾ ಮಾಂಡಲಿಕರಾಗಿಯೂ ಆಳಿದ ಒಂದು ರಾಜಮನೆತನ. ಈ ಮನೆತನದ ಅರಸರಿಗೆ ಸಂಬಂಧಿಸಿದ ಶಾಸನಗಳು ಮತ್ತು ದಿನಾಂಕಗಳನ್ನು ಆಯಾ ಅರಸರ ಆಳ್ವಿಕೆಯ ವರ್ಷ ಮಾಸ ಪಕ್ಷ ದಿನಗಳ ಎಣಿಕೆಯಲ್ಲಿ ನಿರೂಪಿಸಿರುವುದರಿಂದ ಇವಕ್ಕೆ ಸಮಾನವಾದ ತಾರೀಖುಗಳನ್ನು ನಿಷ್ಕರ್ಷಿಸುವುದು ಕಷ್ಟವೆಂದು ಹೇಳಲಾಗಿದೆ.
ಏಂಜೆಲಿನಾ ಜೋಲೀ (ಜನನ ಏಂಜೆಲಿನಾ ಜೋಲೀ ವೈಯಟ್, ಜೂನ್ ೪, ೧೯೭೫) ಅವರು ಅಮೇರಿಕಾದ ನಟಿ ಹಾಗೂ ಯುಎಸ್ ರೆಫ್ಯೂಜಿ ಎಜೆನ್ಸಿಯ ಹಿತಚಿಂತನ ರಾಯಭಾರಿ ಆಗಿದ್ದಾರೆ. ಅವರು ಮೂರು ಗೋಲ್ಡನ್ ಗ್ಲೋಬ್ ಪ್ರಶಸ್ತಿಗಳು, ಎರಡು ಸ್ಕ್ರೀನ್ ಆಯ್ಕ್ಟರ್ಸ್ ಗಿಲ್ಡ್ ಪ್ರಶಸ್ತಿಗಳು ಮತ್ತು ಒಂದು ಅಕಾಡೆಮಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಜೋಲೀ ಮಾನವತಾವಾದಿಯ ಧ್ಯೇಯಗಳನ್ನು ವಿಶ್ವದಾದ್ಯಂತ ಪ್ರಚಾರಮಾಡಿದರು ಮತ್ತು ಯುಎನ್ಎಚ್ಸಿಆರ್ ಮೂಲಕ ನಿರಾಶ್ರಿತರೊಂದಿಗಿನ ಅವರ ಕೆಲಸದಿಂದ ಪ್ರಖ್ಯಾತರಾದರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಶ್ರೀನಿವಾಸ ರಾಮಾನುಜನ್ (ಪೂರ್ಣ ಹೆಸರು - ಶ್ರೀನಿವಾಸ ರಾಮಾನುಜನ್ ಅಯ್ಯಂಗಾರ್) (ಡಿಸೆಂಬರ್ ೨೨, ೧೮೮೭ - ಏಪ್ರಿಲ್ ೨೬, ೧೯೨೦) ವಿಶ್ವದಲ್ಲಿ ಶ್ರೇಷ್ಠ ಭಾರತೀಯ ಗಣಿತಜ್ಞರೆಂದು ಪ್ರಖ್ಯಾತರಾಗಿದ್ದಾರೆ. “ಪ್ರತಿ ಧನಪೂರ್ಣಾಂಶವೂ ರಾಮಾನುಜನ್ನರ ವೈಯಕ್ತಿಕ ಮಿತ್ರರುಗಳಲ್ಲೊಂದು” ಎಂಬುದು ಲೋಕದಲ್ಲಿ ವಿಖ್ಯಾತ ನುಡಿ. ಅವರಿಗೆ “ಸಂಖ್ಯೆಗಳ ವೈಲಕ್ಷಣಗಳನ್ನು ನಂಬಲಸಾಧ್ಯವಾದಂಥ ರೀತಿಯಲ್ಲಿ ನೆನಪಿಡುವ’ ಅಪೂರ್ವ ಸಾಮರ್ಥ್ಯವಿತ್ತು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಓಪನ್ಎಐ ಎಂಬುದು ಅಮೆರಿಕದ ಕೃತಕ ಬುದ್ಧಿಮತ್ತೆ ಸಂಶೋಧನಾ ಸಂಸ್ಥೆಯಾಗಿದ್ದು, ಇದು ಲಾಭರಹಿತ ಸಂಸ್ಥೆ ಮತ್ತು ನಿಯಂತ್ರಿತ ಲಾಭರಹಿತ ಸಾರ್ವಜನಿಕ ಲಾಭ ನಿಗಮ ಸಂಸ್ಥೆ ಎರಡನ್ನೂ ಒಳಗೊಂಡಿದೆ, ಇದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಇದು "ಸುರಕ್ಷಿತ ಮತ್ತು ಪ್ರಯೋಜನಕಾರಿ" ಕೃತಕ ಸಾಮಾನ್ಯ ಬುದ್ಧಿಮತ್ತೆ (ಎಜಿಐ) ಅನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ. ಈ ಸಂಸ್ಥೆ ಜಿಪಿಟಿ , ಪಠ್ಯದಿಂದ ಚಿತ್ರಕ್ಕೆ ಪರಿವರ್ತಿಸುವ DALL-E ಮತ್ತು ಪಠ್ಯದಿಂದ ವೀಡಿಯೊಗೆ ರಚಿಸುವ ಸೋರ ದ ಅಭಿವೃದ್ಧಿಗಾಗಿ ಓಪನ್ಎಐ ವ್ಯಾಪಕವಾಗಿ ಗುರುತಿಸಲ್ಪಟ್ಟಿದೆ, ನವೆಂಬರ್ ೨೦೨೨ ರ ಚಾಟ್ ಜಿಪಿಟಿ ಯ ಬಿಡುಗಡೆಯು ಉತ್ಪಾದಕ ಎಐ ನಲ್ಲಿ ಜನರ ವ್ಯಾಪಕ ಆಸಕ್ತಿಯನ್ನು ಹೆಚ್ಚಿಸುವ ಕೀರ್ತಿಗೆ ಪಾತ್ರವಾಗಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಅರ್ಜುನ್ ಬಿಜ್ಲಾನಿಯವರು ಭಾರತೀಯ ದೂರದರ್ಶನ ಮತ್ತು ಚಲನಚಿತ್ರ ನಟ.ಅವರು ಬಾಲಾಜಿ ಟೆಲಿಫಿಲ್ಮ್ಸ್ ನ ಕಾರ್ತಿಕ ಎಂಬ ದೂರದರ್ಶನ ಕಾರ್ಯಕ್ರಮದ ಮೂಲಕ ಚೊಚ್ಚಲ ಪ್ರದರ್ಶನ ಮಾಡಿದರು.ನಂತರ ಅವರು ಲೆಫ್ಟ್ ರೈಟ್ ಲೆಫ್ಟ್, ಮಿಲೇ ಜಬ್ ಹಮ್ ತುಮ್, ಮೇರೀ ಆಶಿಕೀ ತುಮ್ ಸೇ ಹೀ, ನಾಗಿನ್ ಮತ್ತು ಪರ್ದೇಸ್ ಮೇ ಹೇ ಮೇರಾ ದಿಲ್ ಸೇರಿದಂತೆ ಇತರ ಪ್ರಸಿದ್ದ ಧಾರಾವಾಹಿಗಳಲ್ಲೂ ಕಾಣಿಸಿಕೊಂಡಿದ್ದಾರೆ.೨೦೧೬ ರಲ್ಲಿ ಅವರು 'ಝಲಕ್ ದಿಖ್ಲಾ ಝಾ ೯' ರಿಯಾಲಿಟಿ ಶೋ ನಲ್ಲಿ ಭಾಗವಹಿಸಿದ್ದರು.ಅದೇ ವರ್ಷದಲ್ಲಿ ಅವರು 'ಡೈರೆಕ್ಟ್ ಇಶ್ಕ್' ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದರು.೨೦೧೮ ರಲ್ಲಿ ಅವರು ಕಲರ್ಸ್ ಟಿವಿ ಯ ಡ್ಯಾನ್ಸ್ ರಿಯಾಲಿಟಿ ಶೋ 'ಡ್ಯಾನ್ಸ್ ದಿವಾನೆ' ಯ ಹೋಸ್ಟ್ ಆಗಿಯೂ ಕಾಣಿಸಿಕೊಂಡಿದ್ದಾರೆ.
ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ದೇವಸ್ಥಾನ
ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ದೇವಸ್ಥಾನವು ಕರ್ನಾಟಕದ ಹಾಸನ ಜಿಲ್ಲೆಯ ಅರಸಿಕೆರೆ ತಾಲ್ಲೂಕಿನ ಯಾದಪುರ ಗ್ರಾಮದಲ್ಲಿರುವ ಪ್ರಸಿದ್ಧ ಹಿಂದೂ ದೇವಾಲಯವಾಗಿದೆ. ಯಾದಪುರವು ಅರಸಿಕೆರೆಯಿಂದ ೮ ಕಿಲೋ ಮೀಟರ್ ದೂರದಲ್ಲಿದೆ. ಈ ದೇವಾಲಯವು ಬೆಟ್ಟದ ಮೇಲಿದ್ದು ಶಿವನಿಗೆ ಸಮರ್ಪಿತವಾಗಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಹವಾ ಮಹಲ್ (ಹಿಂದಿ: हवा महल, ಅನುವಾದ: "ವಾಯುವಿನ ಅರಮನೆ" ಅಥವಾ "ತಂಗಾಳಿಯ ಅರಮನೆ"), ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದು ದೇವರಾದ ಕೃಷ್ಣನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡ ಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ವೈಯಕ್ತಿಕ ಮಾಹಿತಿ ಜನನ ದುರ್ಗಿ ಟುಡು (1958-06-20) 20 June 1958ಉಪರ್ಬೇಡಾ, ಒಡಿಶಾ, ಭಾರತ ರಾಜಕೀಯ ಪಕ್ಷ ಭಾರತೀಯ ಜನತಾ ಪಕ್ಷ ಸಂಗಾತಿ(ಗಳು) ಮಕ್ಕಳು * ಲಕ್ಷ್ಮಣ್ ಮುರ್ಮು (ಮರಣ: 2009) ಸಿಪುನ್ ಮುರ್ಮು (ಮರಣ: 2012) ಇತಿಶ್ರೀ ಮುರ್ಮು ವಾಸಸ್ಥಾನ ಟೆಂಪ್ಲೇಟು:Bulletedlist ಅಭ್ಯಸಿಸಿದ ವಿದ್ಯಾಪೀಠ ರಾಮಾ ದೇವಿ ಮಹಿಳಾ ವಿಶ್ವವಿದ್ಯಾಲಯ (ಬಿಎ) ವೃತ್ತಿ ರಾಜಕಾರಣಿ ಉದ್ಯೋಗ ಶಿಕ್ಷಕಿ ಸಹಿ ಜಾಲತಾಣ presidentofindia.nic.in ಮಿಲಿಟರಿ ಸೇವೆ ಪ್ರಶಸ್ತಿಗಳು ಕೆಳಗೆ ನೋಡಿ ದ್ರೌಪದಿ ಮುರ್ಮು (ಜನನ ೨೦ ಜೂನ್ ೧೯೫೮) ಒಬ್ಬ ಭಾರತೀಯ ರಾಜಕಾರಣಿ, ಇವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರಾಗಿದ್ದರು. ಅವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದ ಸ್ಥಳೀಯ, ಪರಿಶಿಷ್ಟ ಬುಡಕಟ್ಟು ಸಮುದಾಯಕ್ಕೆ ಸೇರಿದ ಮೊದಲ ವ್ಯಕ್ತಿ.
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.
ವಿಜಯದಾಸ(೧೬೮೨– ೧೭೫೫) ೧೮ ನೇ ಶತಮಾನದಲ್ಲಿ ಕರ್ನಾಟಕದ, ಹರಿದಾಸ ಸಂಪ್ರದಾಯದ ಪ್ರಮುಖ ಸಂತ ಮತ್ತು ದ್ವೈತ ತತ್ವಶಾಸ್ತ್ರದ ಸಂಪ್ರದಾಯದ ವಿದ್ವಾಂಸ. ಸಮಕಾಲೀನ ಹರಿದಾಸ ಸಂತರಾದ ಗೋಪಾಲ ದಾಸ, ಹೆಳವನಕಟ್ಟೆ ಗಿರಿಯಮ್ಮ, ಜಗನ್ನಾಥ ದಾಸ ಮತ್ತು ಪ್ರಸನ್ನ ವೆಂಕಟ ದಾಸರೊಂದಿಗೆ, ಅವರು ಕನ್ನಡ ಭಾಷೆಯಲ್ಲಿ ಬರೆದ ದೇವರನಾಮ ಎಂಬ ಭಕ್ತಿಗೀತೆಗಳ ಮೂಲಕ ದಕ್ಷಿಣ ಭಾರತದಾದ್ಯಂತ ಮಧ್ವಾಚಾರ್ಯರ ತತ್ವಶಾಸ್ತ್ರದ ಸದ್ಗುಣಗಳನ್ನು ಪ್ರಚಾರ ಮಾಡಿದರು.ಕನ್ನಡ ವೈಷ್ಣವ ಭಕ್ತಿ ಸಾಹಿತ್ಯದ ಅವಿಭಾಜ್ಯ ಅಂಗವಾಗಿದ್ದು, ಹಿಂದೂ ದೇವರು ವಿಷ್ಣು ಮತ್ತು ಇತರ ದೇವತೆಗಳನ್ನು ಸ್ತುತಿಸುವ ಈ ಸಂಯೋಜನೆಗಳನ್ನು ದಾಸರ ಪದಗಳು (ದಾಸರ ಸಂಯೋಜನೆಗಳು) ಎಂದು ಕರೆಯಲಾಗುತ್ತದೆ. ಅವರು ತಮ್ಮ ಸಂಯೋಜನೆಗಳ ಮೂಲಕ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ಎರಡನ್ನೂ ಪ್ರಭಾವಿಸಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಗೋಲು ಗಳಿಸಲು ಕಾಲಿನಿಂದ ಚೆಂಡನ್ನು ಒದೆಯುವುದು, ವಿವಿಧ ಡಿಗ್ರಿಗಳಿಗೆ ಒಳಗೊಂಡ ಕ್ರೀಡಾ ಒಂದು ಸಂಖ್ಯೆಯನ್ನು ಸೂಚಿಸುತ್ತದೆ. ಈ ಕ್ರೀಡಾ ಜಗತ್ತಿನಾದ್ಯಂತ ಅತ್ಯಂತ ಜನಪ್ರಿಯವಾಗಿದೆ ಸಾಮಾನ್ಯವಾಗಿ "ಫುಟ್ಬಾಲ್" ಅಥವಾ "ಸಾಕ್ಕರ್" ಎಂದು ಕರೆಯಲಾಗುತ್ತದೆ ಅಸೋಸಿಯೇಶನ್ ಫುಟ್ಬಾಲ್,. ಅನರ್ಹ, ಫುಟ್ಬಾಲ್ ಪದವು ಫುಟ್ಬಾಲ್ನ ಯಾವುದೇ ಪ್ರಕಾರಕ್ಕೆ ಅನ್ವಯಿಸುತ್ತದೆ ಪದ ಅಸೋಸಿಯೇಷನ್ ಫುಟ್ಬಾಲ್, ಹಾಗೆಯೇ ಅಮೆರಿಕನ್ ಫುಟ್ಬಾಲ್, ಆಸ್ಟ್ರೇಲಿಯನ್ ನಿಯಮಗಳ ಫುಟ್ಬಾಲ್, ಕೆನಡಿಯನ್ ಫುಟ್ಬಾಲ್, ಗೇಲಿಕ್ ಫುಟ್ಬಾಲ್, ರಗ್ಬಿ ಲೀಗ್, ರಗ್ಬಿ ಒಕ್ಕೂಟ ಸೇರಿದಂತೆ ಕಾಣಿಸಿಕೊಳ್ಳುವ ಪ್ರಾದೇಶಿಕ ಸನ್ನಿವೇಶದಲ್ಲಿ ಅತ್ಯಂತ ಜನಪ್ರಿಯ, ಮತ್ತು ಇತರ ಸಂಬಂಧಿತ ಆಟಗಳು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕಮ್ಯುನಿಸ್ಟ್ ಪಕ್ಷಗಳು, ಭಾರತದಲ್ಲಿ
ಕಮ್ಯುನಿಸ್ಟ್ ಪಕ್ಷಗಳು, ಭಾರತದಲ್ಲಿ : ಭಾರತದ ರಾಜಕೀಯ ಇತಿಹಾಸದಲ್ಲಿ 70ರ ದಶಕವನ್ನು ಅನೇಕ ಮಹತ್ತರ ಘಟನೆಗಳಿಂದ ಕೂಡಿದ ಕಾಲ ಎಂದು ಕರೆಯಬಹುದಾಗಿದೆ.
An ಜನಾಂಗೀಯ ಗುಂಪು is a ಗುಂಪು of ಜನರು whose members identify with each other, through a common heritage that is real or assumed. This shared heritage may be based upon putative common ಮನೆತನ, history, ರಕ್ತಸಂಬಂಧ, religion, language, shared territory, ರಾಷ್ಟ್ರೀಯity or physical appearance. Members of an ಜನಾಂಗೀಯ ಗುಂಪು are conscious of belonging to an ಜನಾಂಗೀಯ ಗುಂಪು; moreover ಜನಾಂಗೀಯ identity is further marked by the recognition from others of a ಗುಂಪು's distinctiveness.
ಸಾವಿತ್ರಿ ಕನ್ನಡ ಚಲನಚಿತ್ರದ ಬಗ್ಗೆ ಮಾಹಿತಿಗೆ ಈ ಲೇಖನ ನೋಡಿ. ಸಾವಿತ್ರಿ - ಹಿಂದೂ ಧರ್ಮದ ಪುರಾಣಗಳಲ್ಲಿನ ಪ್ರಮುಖ ವ್ಯಕ್ತಿಗಳಲ್ಲೊಬ್ಬರು. ಸತ್ಯವಾನ್ ಅವರ ಪತ್ನಿಯಾದ ಸಾವಿತ್ರಿ, ತನ್ನ ಪತಿ ಮರಣ ಹೊಂದಿದಾಗ ಯಮನೊಡನೆ ಮಾತಿನಲ್ಲೇ ಹೋರಾಡಿ, ತನ್ನ ಪತಿಯ ಪ್ರಾಣವನ್ನು ಯಮನಿಂದ ಹಿಂದಕ್ಕೆ ಪಡೆಯುತ್ತಾಳೆ.ಅಂದಿನಿಂದ ಸತಿಶ್ರೇಷ್ಠರಲ್ಲಿ ಒಬ್ಬರೆಂದು ಪರಿಗಣಸಲಾಗುವ ಸಾವಿತ್ರಿ, ಸತಿ ಸಾವಿತ್ರಿ ಎಂದೇ ಪ್ರಸಿದ್ಧಿ.
ಕಾಸ್ಟಿಂಗ್ ಕೌಚ್ ಎಂಬುದು ಮನರಂಜನಾ ಕ್ಷೇತ್ರದಲ್ಲಿ, ಅದರಲ್ಲೂ ಸಿನೆಮಾ ಮುಂತಾದವುಗಳಲ್ಲಿ ನಟನೆಯ ಅವಕಾಶಗಳನ್ನು ಒದಗಿಸುವಲ್ಲಿ ಅದಕ್ಕೆ ಬದಲಾಗಿ ಆ ಉದ್ಯೋಗದ ಆಕಾಂಕ್ಷಿಗಳಿಂದ ಲೈಂಗಿಕ ಸುಖವನ್ನು ಕೋರುವ ಅಭ್ಯಾಸವನ್ನು ತಿಳಿಸಲು ಸೂಚಕವಾಗಿ ಬಳಸಲಾಗುವ ಒಂದು ಪದ. ಮುಖ್ಯವಾಗಿ ಪುರುಷ ಕಾಸ್ಟಿಂಗ್ ನಿರ್ದೇಶಕರು ಮತ್ತು ಚಲನಚಿತ್ರ ನಿರ್ಮಾಪಕರು ಕಾಸ್ಟಿಂಗ್ ಕೌಚ್ ಅನ್ನು ಹಾಲಿವುಡ್, ಬಾಲಿವುಡ್, ಬ್ರಾಡ್ವೇ ಮುಂತಾದ ಉದ್ಯಮದ ಕ್ಷೇತ್ರಗಳಲ್ಲಿ ಆಕಾಂಕ್ಷಿ ನಟಿಯರಿಂದ ಲೈಂಗಿಕಸುಖ ಪಡೆಯಲು ಬಳಸುತ್ತಾರೆ. ಕಾಸ್ಟಿಂಗ್ ಕೌಚ್ ಎಂಬ ಪದವು ಮೂಲತಃ ಕಾಸ್ಟಿಂಗ್ ಆಫೀಸಿನಲ್ಲಿ ಇಡಲಾಗುವ ಭೌತಿಕ ಮಂಚಗಳನ್ನು ಉಲ್ಲೇಖಿಸುತ್ತಿತ್ತು.
ನಾ. ಡಿಸೋಜ (೬ನೇ ಜೂನ್ ೧೯೩೭ - ೫ನೇ ಜನವರಿ ೨೦೨೫) ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ.ತಮ್ಮೆಲ್ಲ ಕಥೆ, ಕಾದಂಬರಿಗಳ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಎಚ್ಚರಿಸುತ್ತ ಬಂದಿದ್ದು, ಪರಿಸರ ನಾಶವೇ ಮಾನವ ಜನಾಂಗದ ವಿನಾಶದ ಮೂಲ, ಪರಿಸರವನ್ನುಳಿಸಿಕೊಂಡು ಬಾಳಿದರೆ ಮಾನವನ ಬಾಳೂ ಸಂತುಷ್ಟ ಎಂಬುದನ್ನು ಮತ್ತೆ ಮತ್ತೆ ಪ್ರಸ್ತಾಪಿಸುತ್ತಾರೆ, ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ.