The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ರಾಮಚಾರಿ ಒಂದು ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿಯಾಗಿದ್ದು, ಸೋಮವಾರದಿಂದ ಶುಕ್ರವಾರದವರೆಗೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದೆ. 31 ಜನವರಿ 2022 ರಂದು ಪ್ರಥಮ ಸಂಚಿಕೆ ಮತ್ತು ಕೊನೆಯ ಸಂಚಿಕೆ 28 ಡಿಸೆಂಬರ್ 2025 ರಂದು ಪ್ರಸಾರವಾಯಿತು . ಇದರಲ್ಲಿ ರಿತ್ವಿಕ್ ಕ್ರುಪಕರ್, ಮೌನಾ ಗುಡ್ಡೆಮನೆ, ಮಿಥುನ್ ತೇಜಸ್ವಿ, ಶಂಕರ್ ಅಶ್ವತ್, ಸಿರಿಜಾ ಮತ್ತು ಅಂಜಲಿ ಸುಧಾಕರ್ ನಟಿಸುತ್ತಾ ಇದ್ದಾರೆ .
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ರಿಲಯನ್ಸ್ ಜಿಯೋ ಇನ್ಫೋಕಾಂ ಲಿಮಿಟೆಡ್ ಅಥವಾ ಜಿಯೋ ಭಾರತದ LTE ಮೊಬೈಲ್ ನೆಟ್ವರ್ಕ್ ಆಪರೇಟರ್ ಆಗಿದೆ.ಇದು ರಿಲಯನ್ಸ್ ಇಂಡಸ್ಟ್ರೀಸ್ ನ ಅಂಗಸಂಸ್ಥೆ,ಇದರ ಪ್ರಧಾನ ಕಚೇರಿ ಮುಂಬೈನಲ್ಲಿ ಇದೆ. ಇದು ಭಾರತದ 22 ಟೆಲಿಕಾಮ್ ವಲಯಗಳಲ್ಲೂ 100℅ 4G LTE ನೆಟ್ವರ್ಕ್ ಸೇವೆ (2G / 3G ಆಧಾರಿತ ಸೇವೆಗಳು ಇಲ್ಲದೆ) ಸೇವೆ ಒದಗಿಸುತ್ತಿದೆ.ಜಿಯೋ ಬೀಟಾ ಆವೃತ್ತಿ ಡಿಸೆಂಬರ್ 27, 2015 ರಂದು ಮೊದಲು Jio ನ ಸಹಭಾಗಿಗಳಿಗೆ ಮತ್ತು ನೌಕರರಿಗೆ ಸೇವೆಗಳನ್ನು ಪ್ರಾರಂಭಿಸಲಾಯಿತು. ವಾಣಿಜ್ಯ ಸೇವೆಗಳನ್ನು 5, ಸೆಪ್ಟೆಂಬರ್, 2016 ರಂದು ಪ್ರಾರಂಭಿಸಲಾಯಿತು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಚಾಕ್ಯಾರ್ ಕೂತು (ಉಚ್ಚಾರಣೆ [tʃaːkjaːr kuːt̪ːɨ̆] ) ಭಾರತದ ಕೇರಳದ ಒಂದು ಪ್ರದರ್ಶನ ಕಲೆಯಾಗಿದೆ. ಇದು ಪ್ರಾಥಮಿಕವಾಗಿ ಹೆಚ್ಚು ಸಂಸ್ಕರಿಸಿದ ಸ್ವಗತದ ಒಂದು ವಿಧವಾಗಿದೆ, ಅಲ್ಲಿ ಪ್ರದರ್ಶಕನು ಹಿಂದೂ ಮಹಾಕಾವ್ಯಗಳಿಂದ ( ರಾಮಾಯಣ ಮತ್ತು ಮಹಾಭಾರತದಂತಹ ) ಪ್ರಸಂಗಗಳನ್ನು ಮತ್ತು ಪುರಾಣಗಳಿಂದ ಕಥೆಗಳನ್ನು ನಿರೂಪಿಸುತ್ತಾನೆ. ಕೆಲವೊಮ್ಮೆ, ಆದಾಗ್ಯೂ, ಇದು ಆಧುನಿಕ ಸ್ಟ್ಯಾಂಡ್-ಅಪ್ ಕಾಮಿಡಿ ಆಕ್ಟ್ಗೆ ಸಾಂಪ್ರದಾಯಿಕ ಸಮಾನವಾಗಿದೆ, ಪ್ರಸ್ತುತ ಸಾಮಾಜಿಕ-ರಾಜಕೀಯ ಘಟನೆಗಳ ವ್ಯಾಖ್ಯಾನವನ್ನು ಸಂಯೋಜಿಸುತ್ತದೆ (ಮತ್ತು ಪ್ರೇಕ್ಷಕರ ಸದಸ್ಯರನ್ನು ಉದ್ದೇಶಿಸಿ ವೈಯಕ್ತಿಕ ಕಾಮೆಂಟ್ಗಳು).
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.
ಪುಸ್ತಕದ ರಕ್ಷಾಕವಚ ಎಂದರೆ ಒಂದು ಪುಸ್ತಕದ ಪುಟಗಳನ್ನು ಒಟ್ಟಾಗಿ ಕಟ್ಟಲು ಬಳಸಲಾದ ಯಾವುದೇ ರಕ್ಷಣಾತ್ಮಕ ಹೊದಿಕೆ. ಗಟ್ಟಿರಟ್ಟುಗಳು ಮತ್ತು ಕಾಗದಕವಚಗಳ ನಡುವಿನ ಪರಿಚಿತ ವ್ಯತ್ಯಾಸವನ್ನು ಮೀರಿ, ಮತ್ತಷ್ಟು ಪರ್ಯಾಯಗಳು ಮತ್ತು ಸೇರ್ಪಡಿಕೆಗಳಿವೆ, ಉದಾಹರಣೆಗೆ ಧೂಳು ಹೊದಿಕೆಗಳು, ಉಂಗುರ ರಟ್ಟು ಮತ್ತು ಹತ್ತೊಂಭತ್ತನೇ ಶತಮಾನದ ಪೇಪರ್-ಬೋರ್ಡ್ ಹಾಗೂ ಕೈರಟ್ಟಿನ ಸಾಂಪ್ರದಾಯಿಕ ಪ್ರಕಾರಗಳಂತಹ ಹೆಚ್ಚು ಹಳೆಯ ರೂಪಗಳು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮಹದೇಶ್ವರ ಬೆಟ್ಟ ಕರ್ನಾಟಕದ ದಕ್ಷಿಣ ತುದಿಯ ಗಡಿಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನ ಮುಖ್ಯ ಶ್ರದ್ಧಾಭಕ್ತಿ ಕೇಂದ್ರ. ದೇವಸ್ಥಾನವು ಬೆಟ್ಟಗಳಿಂದ ಸುತ್ತುವರಿದಿರುವ ಕಾರಣ ಮಹದೇಶ್ವರ ಬೆಟ್ಟವೆಂದು ಕರೆಯಲಾಗುತ್ತದೆ. ಪಶ್ಚಿಮಘಟ್ಟಗಳ ಭಾಗದಿಂದ ಆರಂಭವಾಗಿ ಪೂರ್ವಘಟ್ಟಗಳ ಕಡೆಗೆ ಹರಡಿಕೊಂಡಿರುವ ಬೆಟ್ಟ ಸಾಲುಗಳಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಹಬ್ಬಿರುವ ಮಹದೇಶ್ವರ ಬೆಟ್ಟ ದಖನ್ ಪ್ರಸ್ಥಭೂಮಿಯ ಬಹುಮುಖ್ಯ ಭಾಗವೂ ಕೂಡ.
ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವ್ಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ವೈಯಕ್ತಿಕ ಮಾಹಿತಿ ಜನನ ದುರ್ಗಿ ಟುಡು (1958-06-20) 20 June 1958ಉಪರ್ಬೇಡಾ, ಒಡಿಶಾ, ಭಾರತ ರಾಜಕೀಯ ಪಕ್ಷ ಭಾರತೀಯ ಜನತಾ ಪಕ್ಷ ಸಂಗಾತಿ(ಗಳು) ಮಕ್ಕಳು * ಲಕ್ಷ್ಮಣ್ ಮುರ್ಮು (ಮರಣ: 2009) ಸಿಪುನ್ ಮುರ್ಮು (ಮರಣ: 2012) ಇತಿಶ್ರೀ ಮುರ್ಮು ವಾಸಸ್ಥಾನ ಟೆಂಪ್ಲೇಟು:Bulletedlist ಅಭ್ಯಸಿಸಿದ ವಿದ್ಯಾಪೀಠ ರಾಮಾ ದೇವಿ ಮಹಿಳಾ ವಿಶ್ವವಿದ್ಯಾಲಯ (ಬಿಎ) ವೃತ್ತಿ ರಾಜಕಾರಣಿ ಉದ್ಯೋಗ ಶಿಕ್ಷಕಿ ಸಹಿ ಜಾಲತಾಣ presidentofindia.nic.in ಮಿಲಿಟರಿ ಸೇವೆ ಪ್ರಶಸ್ತಿಗಳು ಕೆಳಗೆ ನೋಡಿ ದ್ರೌಪದಿ ಮುರ್ಮು (ಜನನ ೨೦ ಜೂನ್ ೧೯೫೮) ಒಬ್ಬ ಭಾರತೀಯ ರಾಜಕಾರಣಿ, ಇವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರಾಗಿದ್ದರು. ಅವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದ ಸ್ಥಳೀಯ, ಪರಿಶಿಷ್ಟ ಬುಡಕಟ್ಟು ಸಮುದಾಯಕ್ಕೆ ಸೇರಿದ ಮೊದಲ ವ್ಯಕ್ತಿ.
'ಹರ್ಷ ಭೋಗಲೆ', (Marathi: हर्ष भोगले)(೧೯, ಜುಲೈ, ೧೯೬೧) ಭಾರತದ ಟೆಲೆವಿಷನ್ ಚಾನಲ್ ನ ಒಬ್ಬ ಹೆಸರಾಂತ 'ಕಾಮೆಂಟೇಟರ್' ಹಾಗೂ 'ಪತ್ರಿಕೋದ್ಯಮಿ'. ಅವರು 'ಹೈದರಾಬಾದಿನಲ್ಲಿ ನೆಲೆಸಿದ ಮರಾಠಿ ಮಾತಾಡುವ ಪರಿವಾರವೊಂದರಲ್ಲಿ ಜನ್ಮವೆತ್ತಿದರು.' ಟೆಲಿವಿಷನ್ ವಲಯದಲ್ಲಿ ಸಮರ್ಥವಾಗಿ ಹಾಗೂ ಸಮಗ್ರವಾದ ಕ್ರಿಕೆಟ್ ಆಟದ ವಿಧಿ-ಧಾನಗಳನ್ನು ಅತ್ಯಂತ ರೋಚಕವಾಗಿ ಸತತವಾಗಿ ತಪ್ಪದೆ ಭಾಗವಹಿಸಿ, ಕ್ರೀಡಾಪ್ರಿಯರ ಮನರಂಜನೆ ಮಾಡುತ್ತಿರುವ ಭಾರತೀಯರಲ್ಲಿ ಮೊದಲಿಗರೆಂದು ಹೆಸರು ಮಾಡಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ವಿಜಯದಾಸ(೧೬೮೨– ೧೭೫೫) ೧೮ ನೇ ಶತಮಾನದಲ್ಲಿ ಕರ್ನಾಟಕದ, ಹರಿದಾಸ ಸಂಪ್ರದಾಯದ ಪ್ರಮುಖ ಸಂತ ಮತ್ತು ದ್ವೈತ ತತ್ವಶಾಸ್ತ್ರದ ಸಂಪ್ರದಾಯದ ವಿದ್ವಾಂಸ. ಸಮಕಾಲೀನ ಹರಿದಾಸ ಸಂತರಾದ ಗೋಪಾಲ ದಾಸ, ಹೆಳವನಕಟ್ಟೆ ಗಿರಿಯಮ್ಮ, ಜಗನ್ನಾಥ ದಾಸ ಮತ್ತು ಪ್ರಸನ್ನ ವೆಂಕಟ ದಾಸರೊಂದಿಗೆ, ಅವರು ಕನ್ನಡ ಭಾಷೆಯಲ್ಲಿ ಬರೆದ ದೇವರನಾಮ ಎಂಬ ಭಕ್ತಿಗೀತೆಗಳ ಮೂಲಕ ದಕ್ಷಿಣ ಭಾರತದಾದ್ಯಂತ ಮಧ್ವಾಚಾರ್ಯರ ತತ್ವಶಾಸ್ತ್ರದ ಸದ್ಗುಣಗಳನ್ನು ಪ್ರಚಾರ ಮಾಡಿದರು.ಕನ್ನಡ ವೈಷ್ಣವ ಭಕ್ತಿ ಸಾಹಿತ್ಯದ ಅವಿಭಾಜ್ಯ ಅಂಗವಾಗಿದ್ದು, ಹಿಂದೂ ದೇವರು ವಿಷ್ಣು ಮತ್ತು ಇತರ ದೇವತೆಗಳನ್ನು ಸ್ತುತಿಸುವ ಈ ಸಂಯೋಜನೆಗಳನ್ನು ದಾಸರ ಪದಗಳು (ದಾಸರ ಸಂಯೋಜನೆಗಳು) ಎಂದು ಕರೆಯಲಾಗುತ್ತದೆ. ಅವರು ತಮ್ಮ ಸಂಯೋಜನೆಗಳ ಮೂಲಕ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ಎರಡನ್ನೂ ಪ್ರಭಾವಿಸಿದ್ದಾರೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ತ್ರಿಶೂಲ (ಸಂಸ್ಕೃತ: त्रिशूल, IAST: ತ್ರಿಶೂಲ) ಒಂದು ಮೂರು ಮೊನೆಗಳುಳ್ಳ ಆಯುಧವಾಗಿದ್ದು, ಇದನ್ನು ಹಿಂದೂ ಧರ್ಮ ಮತ್ತು ಬೌದ್ಧ ಧರ್ಮದ ಪ್ರಮುಖ ಸಂಕೇತಗಳಾಗಿ ಬಳಸಲಾಗುತ್ತದೆ. ಭಾರತ ಮತ್ತು ಥೈಲ್ಯಾಂಡ್ನಲ್ಲಿ ಈ ಶಬ್ದವು ದಂಡಕ್ಕೆ ಜೋಡಿಸಿದ ಚಿಕ್ಕದಾದ ಶಸ್ತ್ರಾಸ್ತ್ರವನ್ನು ಸೂಚಿಸುತ್ತದೆ. ಆದರೆ ಓಕಿನಾನ್ ಸಾಯಿಯಂತಲ್ಲದೆ, ತ್ರಿಶೂಲವನ್ನು ಹೆಚ್ಚಾಗಿ ಹರಿತಗೊಳಿಸಲಾಗುತ್ತದೆ.
ಅರ್ಜುನ್ ಬಿಜ್ಲಾನಿಯವರು ಭಾರತೀಯ ದೂರದರ್ಶನ ಮತ್ತು ಚಲನಚಿತ್ರ ನಟ.ಅವರು ಬಾಲಾಜಿ ಟೆಲಿಫಿಲ್ಮ್ಸ್ ನ ಕಾರ್ತಿಕ ಎಂಬ ದೂರದರ್ಶನ ಕಾರ್ಯಕ್ರಮದ ಮೂಲಕ ಚೊಚ್ಚಲ ಪ್ರದರ್ಶನ ಮಾಡಿದರು.ನಂತರ ಅವರು ಲೆಫ್ಟ್ ರೈಟ್ ಲೆಫ್ಟ್, ಮಿಲೇ ಜಬ್ ಹಮ್ ತುಮ್, ಮೇರೀ ಆಶಿಕೀ ತುಮ್ ಸೇ ಹೀ, ನಾಗಿನ್ ಮತ್ತು ಪರ್ದೇಸ್ ಮೇ ಹೇ ಮೇರಾ ದಿಲ್ ಸೇರಿದಂತೆ ಇತರ ಪ್ರಸಿದ್ದ ಧಾರಾವಾಹಿಗಳಲ್ಲೂ ಕಾಣಿಸಿಕೊಂಡಿದ್ದಾರೆ.೨೦೧೬ ರಲ್ಲಿ ಅವರು 'ಝಲಕ್ ದಿಖ್ಲಾ ಝಾ ೯' ರಿಯಾಲಿಟಿ ಶೋ ನಲ್ಲಿ ಭಾಗವಹಿಸಿದ್ದರು.ಅದೇ ವರ್ಷದಲ್ಲಿ ಅವರು 'ಡೈರೆಕ್ಟ್ ಇಶ್ಕ್' ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದರು.೨೦೧೮ ರಲ್ಲಿ ಅವರು ಕಲರ್ಸ್ ಟಿವಿ ಯ ಡ್ಯಾನ್ಸ್ ರಿಯಾಲಿಟಿ ಶೋ 'ಡ್ಯಾನ್ಸ್ ದಿವಾನೆ' ಯ ಹೋಸ್ಟ್ ಆಗಿಯೂ ಕಾಣಿಸಿಕೊಂಡಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ದೆಹಲಿಯ ಅಥವಾ ದಿಲ್ಲಿ ಸುಲ್ತಾನತೆ ದೆಹಲಿಯಲ್ಲಿದ್ದ ಸುಲ್ತಾನತೆ (ಮುಸಲ್ಮಾನ ಸಾಮ್ರಾಜ್ಯ) ಆಗಿತ್ತು, ಇದು ಭಾರತ ಉಪಖಂಡದ ದೊಡ್ಡ ಭಾಗಗಳನ್ನು ೩೨೦ ವರ್ಷಗಳವರೆಗೆ (೧೨೦೬-೧೫೨೬) ವಿಸ್ತರಿಸಿತು. ಐದು ರಾಜವಂಶಗಳಾದ ದಿಲ್ಲಿ ಸುಲ್ತಾನತೆಯ ಅನುಕ್ರಮವಾಗಿ: ಗುಲಾಮ (ಮಾಮ್ಲುಕ್) ರಾಜವಂಶ (೧೨೦೬-೯೦), ಖಲಜಿ ರಾಜವಂಶ (೧೨೯೦-೧೩೨೦), ತುಘಲಕ್ ರಾಜವಂಶ (೧೩೨೦-೧೪೧೪), ಸಯ್ಯಿದ್ ರಾಜವಂಶ (೧೪೧೪- ೫೧), ಮತ್ತು ಲೋದಿ ರಾಜವಂಶ (೧೪೫೧-೧೫೨೬). ಮಂಗೋಲ್ ಸಾಮ್ರಾಜ್ಯದ ಆಕ್ರಮಣವನ್ನು ಹಿಮ್ಮೆಟ್ಟಿಸಲು ಕೆಲವು ರಾಜ್ಯಗಳಲ್ಲಿ ಒಂದಾಗಿರುವ ಸುಲ್ತಾನರು, ಮತ್ತು ೧೨೩೬ ರಿಂದ ೧೨೪೦ ರವರೆಗೆ ಆಳ್ವಿಕೆ ಮಾಡಿದ ಇಸ್ಲಾಮಿ ಇತಿಹಾಸದ ಕೆಲವು ಸ್ತ್ರೀ ಆಡಳಿತಗಾರರು ಆಳಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.