The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮಂಗಳದ್ರವ್ಯ ಎಂದರೆ ಒಳ್ಳೆಯದಾಗಲಿ ಎಂಬ ನಂಬಿಕೆಗೆ ಪೂರಕವಾಗಿ ಜನಪದರು ಬಳಸುವ ಪರಿಕರ. ಇವನ್ನು ಬಳಸುವ ಸಂದರ್ಭಗಳಿಗನುಗುಣವಾಗಿ ಸ್ಥೂಲವಾಗಿ ದ್ಯೆನಂದಿನ ಜೀವನದ, ಹಬ್ಬಹರಿದಿನಗಳ, ಮದುವೆ ಮುಂಜಿಗಳ ಮಂಗಳದ್ರವ್ಯಗಳೆಂದು ವಿಂಗಡಿಸಬಹುದು. ಅರಿಶಿನ, ಕುಂಕುಮ, ಹೂವು, ಗಂಧ, ಅಕ್ಷತೆ, ಬಳೆ, ರಂಗೋಲಿ, ಧೂಪ, ದೀಪ, ತೋರಣ ಇತ್ಯಾದಿಗಳನ್ನು ನಿತ್ಯಜೀವನದಲ್ಲಿಯೂ ಹಬ್ಬಹರಿದಿನಗಳಲ್ಲಿಯೂ ಮದುವೆ ಮುಂಜಿಗಳಲ್ಲಿಯೂ ಬಳಸುತ್ತಾರೆ.
ವಿಶ್ವ ಪರಿಸರ ದಿನವನ್ನು ( ಡಬ್ಲ್ಯೂಇಡಿ ) ವಾರ್ಷಿಕವಾಗಿ ಜೂನ್ 5 ರಂದು ಆಚರಿಸಲಾಗುತ್ತದೆ ಮತ್ತು ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮವನ್ನು ಉತ್ತೇಜಿಸುತ್ತದೆ. ಇದು ಅನೇಕ ಸರ್ಕಾರೇತರ ಸಂಸ್ಥೆಗಳು, ವ್ಯವಹಾರಗಳು, ಸರ್ಕಾರಿ ಘಟಕಗಳಿಂದ ಬೆಂಬಲಿತವಾಗಿದೆ ಮತ್ತು ಪರಿಸರವನ್ನು ಬೆಂಬಲಿಸುವ ಪ್ರಾಥಮಿಕ ವಿಶ್ವಸಂಸ್ಥೆಯ ಎಲ್ಲರಿಗೂ ತಲುಪುವ ಜಾಗೃತಿ ದಿನವನ್ನು ಪ್ರತಿನಿಧಿಸುತ್ತದೆ. ಮೊದಲ ಬಾರಿಗೆ 1973 ರಲ್ಲಿ ಆಯೋಜಿಸಲಾಯಿತು, ಇದು ಸಮುದ್ರ ಮಾಲಿನ್ಯ, ಅಧಿಕ ಜನಸಂಖ್ಯೆ, ಜಾಗತಿಕ ತಾಪಮಾನ ಏರಿಕೆ, ಸುಸ್ಥಿರ ಅಭಿವೃದ್ಧಿ ಮತ್ತು ವನ್ಯಜೀವಿ ಅಪರಾಧಗಳಂತಹ ಪರಿಸರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾಗ್ಯಲಕ್ಷ್ಮೀ ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿ ಆಗಿದೆ. ಅಕ್ಟೋಬರ್ ೧೦, ೨೦೨೨ ರಿಂದ ಆರಂಭವಾದ ಈ ಧಾರಾವಾಹಿಯು ಪ್ರಸ್ತುತ ಪ್ರತಿದಿನ ರಾತ್ರಿ ೭:೦೦ ಗಂಟೆಗೆ ಪ್ರಸಾರವಾಗುತ್ತಿದೆ. ಹಲವಾರು ಯಶಸ್ವಿ ಧಾರಾವಾಹಿಗಳನ್ನು ನಿರ್ಮಾಣ ಮಾಡಿರುವ ಜೈ ಮಾತಾ ಕಂಬೈನ್ಸ್ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದ್ದಾರೆ.
ವರಾಹಾವತಾರ ಹಂದಿಯ ರೂಪದಲ್ಲಿ ಹಿಂದೂ ದೇವತೆ ವಿಷ್ಣುವಿನ ಅವತಾರ, ಮತ್ತು ಇದು ಕೂರ್ಮಾವತಾರದ ನಂತರ ಹಾಗು ನರಸಿಂಹಾವತಾರದ ಮೊದಲು ಬರುತ್ತದೆ. ವರಾಹಾವತಾರವನ್ನು ದಶಾವತಾರಗಳಲ್ಲಿ ಮೂರನೆಯದಾಗಿ ಪಟ್ಟಿಮಾಡಲಾಗುತ್ತದೆ. ದೈತ್ಯ ಹಿರಣ್ಯಾಕ್ಷನು ಭೂಮಿಯನ್ನು (ಭೂದೇವಿಯಾಗಿ ಮೂರ್ತೀಕರಿಸಲಾಗಿದೆ) ಕದ್ದು ಆಕೆಯನ್ನು ಆದಿಸ್ವರೂಪದ ನೀರಿನಲ್ಲಿ ಬಚ್ಚಿಟ್ಟಾಗ, ವಿಷ್ಣು ಆಕೆಯನ್ನು ಕಾಪಾಡಲು ವರಾಹನಾಗಿ ಕಾಣಿಸಿಕೊಂಡನು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ ಅಥವಾ ಕೆ-ಸಿಇಟಿ ) ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ವಾರ್ಷಿಕವಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿದೆ. ಸಿಇಟಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುತ್ತದೆ, ಇದು ಕರ್ನಾಟಕದ ಉನ್ನತ ಶಿಕ್ಷಣ ಸಚಿವಾಲಯದ ವ್ಯಾಪ್ತಿಗೆ ಬರುತ್ತದೆ. ಇದು ಕರ್ನಾಟಕ ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಪೂರ್ಣ ಸಮಯದ ಎಂಜಿನಿಯರಿಂಗ್, ತಂತ್ರಜ್ಞಾನ, ಬಿ-ಫಾರ್ಮಾ, ಡಿ-ಫಾರ್ಮಾ, ಕೃಷಿ ಶಿಕ್ಷಣ (ಕೃಷಿ ವಿಜ್ಞಾನ) ಮತ್ತು ಪಶುವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾದ ಆಫ್ಲೈನ್ ಪರೀಕ್ಷೆಯಾಗಿದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
{\displaystyle } ಖಾಸಗೀಕರಣ ಎಂದರೆ ವ್ಯಾಪಾರ, ಉದ್ದಿಮೆ, ಏಜನ್ಸಿ, ಸಾರ್ವಜನಿಕ ವಲಯಗಳಿಂದ ಸಾರ್ವಜನಿಕ ಸೇವೆಗಳನ್ನು ಖಾಸಗಿ ವಲಯ ಅಥವಾ ಖಾಸಗಿ ಲಾಭಾಪೇಕ್ಷೆ ರಹಿತ ಸಂಸ್ಥೆಗೆ ವಹಿಸಿಕೊಡುವ ಕಾರ್ಯ ಅಥವಾ ಪ್ರಕ್ರಿಯೆಯಾಗಿದೆ. ವಿಶಾಲ ವ್ಯಾಪ್ತಿಯಲ್ಲಿ ಖಾಸಗೀಕರಣವೆಂದರೆ ಸರ್ಕಾರದ ಕೆಲಸಗಳನ್ನು ಖಾಸಗಿ ವಲಯಕ್ಕೆ ಹಸ್ತಾಂತರಿಸುವುದು. ಉದಾಹರಣೆಗೆ ಸರ್ಕಾರಿ ಕೆಲಸಗಳಾದ ಕಂದಾಯ ಸಂಗ್ರಹಣೆ ಮತ್ತು ಕಾನೂನು ನಿರ್ವಹಣೆ ಕಾರ್ಯಗಳು ಕೂಡ ಇದರಲ್ಲಿ ಸೇರಿದೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ. , ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಮಾಟ - ಮಂತ್ರ (ಮಂತ್ರವಿದ್ಯೆ) ಎಂದರೆ ಒಂದು ವಿಶಿಷ್ಟ ಬಗೆಯ ಮಾಂತ್ರಿಕ ಶಕ್ತಿಯನ್ನು ಉಪಯೋಗಿಸಿಕೊಂಡು ಜನರನ್ನು ಹಿಂಸಿಸುವ ಅಥವಾ ಅವರ ಆಸ್ತಿಪಾಸ್ತಿಯನ್ನು ಹಾನಿಗೊಳಿಸುವ, ಪ್ರಪಂಚದಾದ್ಯಂತ ಕಂಡುಬರುವ, ಎಲ್ಲ ಆದಿವಾಸಿಗಳಲ್ಲಿಯೂ ಇರುವ ಒಂದು ಸಂಪ್ರದಾಯ ಮತ್ತು ನಂಬಿಕೆ (ವಿಚ್ಕ್ರಾಫ್ಟ್). ಇದು ಧರ್ಮದಷ್ಟೇ ಪ್ರಾಚೀನವಾದುದು. ಒಂದು ಕಾಲಕ್ಕೆ ಧರ್ಮಕ್ಕೂ, ಮಾಟ-ಮಂತ್ರಗಳಿಗೂ ಸಂಬಂಧವೇ ಇಲ್ಲ ಎಂದು ಭಾವಿಸಲಾಗಿತ್ತು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಅಯ್ಯಪ್ಪನನ್ನು ಧರ್ಮಶಾಸ್ತಾ ಮತ್ತು ಮಣಿಕಂಠ ಎಂದೂ ಕರೆಯುತ್ತಾರೆ, ದಕ್ಷಿಣ ಭಾರತದಲ್ಲಿ ಜನಪ್ರಿಯವಾಗಿರುವ ಹಿಂದೂ ದೇವತೆ, ಅವನನ್ನು ಸಾಕಾರವಾಗಿ ಪರಿಗಣಿಸಲಾಗಿದೆ. ಧರ್ಮ, ಸತ್ಯ ಮತ್ತು ಸದಾಚಾರ ಮತ್ತು ಕೆಟ್ಟದ್ದನ್ನು ತೊಡೆದುಹಾಕಲು ಆಗಾಗ್ಗೆ ಕರೆಯುತ್ತಾರೆ. ಅಯ್ಯಪ್ಪನ ಮೇಲಿನ ಭಕ್ತಿಯು ದಕ್ಷಿಣ ಭಾರತದಲ್ಲಿ ಮೊದಲು ಪ್ರಚಲಿತದಲ್ಲಿದ್ದರೂ, ಅವನ ಜನಪ್ರಿಯತೆಯು ೨೦ ನೇ ಶತಮಾನದ ಉತ್ತರಾರ್ಧದಲ್ಲಿ ಮಾತ್ರ ಹೆಚ್ಚಾಯಿತು ಹಿಂದೂ ಧರ್ಮಶಾಸ್ತ್ರದ ಪ್ರಕಾರ, ಅವನು ಹರಿಹರ (ವಿಷ್ಣು ಮೋಹಿನಿ, ಮತ್ತು ಶಿವನ ಮಗ).
ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಪರಿಸರ ರಕ್ಷಣೆಯು ವ್ಯಕ್ತಿಗಳು, ಸಂಘಟನೆಗಳು ಮತ್ತು ಸರ್ಕಾರಗಳಿಂದ ನೈಸರ್ಗಿಕ ಪರಿಸರವನ್ನು ರಕ್ಷಿಸುವ ಅಭ್ಯಾಸವಾಗಿದೆ. ಅದರ ಉದ್ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ಅಸ್ತಿತ್ವದಲ್ಲಿರುವ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದಾಗಿದೆ ಮತ್ತು ಸಾಧ್ಯವಾದಲ್ಲಿ, ಹಾನಿ ಮತ್ತು ರಿವರ್ಸ್ ಪ್ರವೃತ್ತಿಯನ್ನು ಸರಿಪಡಿಸುವುದಾಗಿದೆ. ಅತಿಯಾದ ಅನುಭೊಗದ ಒತ್ತಡ, ಜನಸಂಖ್ಯಾ ಬೆಳವಣಿಗೆ ಮತ್ತು ತಂತ್ರಜ್ಞಾನದ ಕಾರಣದಿಂದ, ಜೈವಿಕ ಪರಿಸರವು ಕುಸಿಯುತ್ತಿದೆ ಕೆಲವೊಮ್ಮೆ ಶಾಶ್ವತವಾಗಿ ನಾಶವಾಗುತ್ತಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.