The most-visited English Wikipedia articles, updated daily. Learn more...
ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.
ವನಸ್ಪತಿ ಯು ಸಾಂಪ್ರದಾಯಿಕ ಅಥವಾ ಜಾನಪದ ಔಷಧ ಪ್ರಕಾರವಾಗಿದ್ದು, ಇದು ಸಸ್ಯ ಮತ್ತು ಸಸ್ಯಜನ್ಯ ಸಾರ, ಸತ್ವಗಳ ಬಳಕೆಯನ್ನವಲಂಭಿಸಿದೆ. ಈ ವನಸ್ಪತಿಯು ಸಸ್ಯಗಳ ಔಷಧಿ, ಔಷಧೀಯ ವನಸ್ಪತಿ, ಗಿಡಮೂಲಿಕೆಗಳ ಔಷಧಿ, ಮೂಲಿಕಾಶಾಸ್ತ್ರ ಮತ್ತು ಮೂಲಿಕಾ ಚಿಕಿತ್ಸೆ ಎಂಬ ಹೆಸರುಗಳಿಂದಲೂ ಕರೆಯಲ್ಪಡುತ್ತದೆ. ಗಿಡಮೂಲಿಕೆಗಳ ಔಷಧಿಯ ವ್ಯಾಪ್ತಿಯು ಕೆಲವೊಮ್ಮೆ ಶಿಲೀಂಧ್ರಗಳು ಮತ್ತು ಜೇನುಹುಳುಗಳ ಉತ್ಪನ್ನಗಳಿಗೂ ಹರಡಿದ್ದು, ಖನಿಜಾಂಶಗಳು, ಚಿಪ್ಪುಗಳು ಹಾಗೂ ಕೆಲವು ಪ್ರಾಣಿಗಳ ದೇಹದ ಭಾಗಗಳನ್ನೂ ಒಳಗೊಂಡಿರುತ್ತವೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),
ದ್ರವೀಕೃತ ಪೆಟ್ರೋಲಿಯಮ್ ಅನಿಲ(LPG, GPL, LP ಗ್ಯಾಸ್, ಅಥವಾ ಆಟೋಗ್ಯಾಸ್ ಎಂದೂ ಕರೆಯಲಾದ) [[ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ. ಈ ಅನಿಲವನ್ನು ಬಿಸಿ ಮಾಡುವ ಉಪಕರಣಗಳು ಹಾಗೂ ವಾಹನಗಳಲ್ಲಿ ಇಂಧನ ರೂಪದಲ್ಲಿ ಬಳಸಲಾಗುತ್ತಿದೆ. ಇದಲ್ಲದೆ, ಓಜೋನ್ ಪದರಕ್ಕೆ ಹಾನಿಯನ್ನು ಕಡಿಮೆಗೊಳಿಸುವ ಉದ್ದೇಶದಿಂದ, ಕ್ಲೋರೋಫ್ಲೋರೋಕಾರ್ಬನ್‌ಗಳ ಬದಲಿಗೆ, ವಾಯುದ್ರವ ನೋದಕ (ಏರೋಸಾಲ್ ಪ್ರೊಪೆಲ್ಲಂಟ್) ಹಾಗೂ ಶೀತಕ|ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಬಿ.ಆರ್.ಲಕ್ಷ್ಮಣರಾವ್, ಅವರು ಕನ್ನಡದ ಪ್ರೇಮಕವಿ, ನವೋದಯ, ನವ್ಯ, ಬಂಡಾಯ ಮೊದಲಾದ ಯಾವ ಗುಂಪಿಗೂ ಸೇರದ ಕವಿ, ಭಾವಗೀತೆಗಳ ಕವಿ. ಲಕ್ಷ್ಮಣರಾಯರ 'ಅಮ್ಮ, ನಿನ್ನ ಎದೆಯಾಳದಲ್ಲಿ',‘ಸುಬ್ಭಾಭಟ್ಟರ ಮಗಳೇ’,‘ನಾ ಚಿಕ್ಕವನಾಗಿದ್ದಾಗ ಅಪ್ಪ ಹೇಳುತ್ತಿದ್ದರು',' ಜಾಲಿಬಾರಿನಲ್ಲಿ ಕೂತ ಪೋಲಿ ಗೆಳೆಯರು' ಮುಂತಾದ ಕವಿತೆಗಳು ಜನಪ್ರಿಯವಾಗಿವೆ. ಈ ಪದ್ಯಗಳು, ಹಲವು ವೇಳೆ ಕೆ.ಎಸ್.ನ ಅವರ ‘ಶ್ಯಾನುಭೋಗರ ಮಗಳು’, ‘ರಾಯರು ಬಂದರು ಮಾವನ ಮನೆಗೆ’ ಪದ್ಯಗಳಿಗೆ ಸರಿಹೋಲಿಕೆಯಂತಿವೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ರಥ ಜಾತ್ರಾ (Oriya: [] Error: {{Lang}}: no text (help)ରଥଯାତ୍ରା, ಬಂಗಾಳಿ:রথযাত্রা) ಎಂಬುದು ಭಾರತದ ಒಡಿಶಾ ರಾಜ್ಯದಲ್ಲಿರುವ ಪುರಿ ಎಂಬಲ್ಲಿ ಜೂನ್ ತಿಂಗಳಿನ ಅವಧಿಯಲ್ಲಿ ಆಯೋಜಿಸಲ್ಪಡುವ ಸ್ವಾಮಿ ಜಗನ್ನಾಥನಿಗೆ ಸಂಬಂಧಿಸಿದ ಒಂದು ಬೃಹತ್ ಹಿಂದೂ ಉತ್ಸವವಾಗಿದೆ. ನಗರದ ಸಮಾಜದ ಬಹುಭಾಗವು ಜಗನ್ನಾಥನ (ಕೃಷ್ಣ) ಪೂಜೆಯ ಸುತ್ತಲೂ ಆಧರಿಸಿದ್ದು, ಇಲ್ಲಿರುವ ಜಗನ್ನಾಥನ ಪ್ರಾಚೀನ ದೇವಸ್ಥಾನವು ಈ ಪ್ರದೇಶದ ಪ್ರಭಾವೀ ಅಂಶವಾಗಿ ರೂಪುಗೊಂಡಿದೆ. ಜಗನ್ನಾಥ ಸ್ವಾಮಿಯು ತನ್ನ ಚಿಕ್ಕಮ್ಮನ ಮನೆಯ (ಇದಕ್ಕೆ ಮೌಸಿಮಾ ದೇವಸ್ಥಾನ ಎಂದು ಕರೆಯಲಾಗುತ್ತದೆ ಮತ್ತು ಇದು ಪುರಿಯಲ್ಲಿನ ಬಾಲಗಂಡಿ ಚಾಕದ ಸಮೀಪವಿದೆ) ಮಾರ್ಗವಾಗಿ ಗುಂಡಿಚಾ ರಾಣಿಯ ದೇವಸ್ಥಾನಕ್ಕೆ ನೀಡುವ ವಾರ್ಷಿಕ ಭೇಟಿಯನ್ನು ಈ ಉತ್ಸವವು ನೆನಪಿಗೆ ತರುತ್ತದೆ.
ದಕ್ಷಿಣ ಅಮೇರಿಕದ ಜನಸಂಖ್ಯೆ ಮತ್ತು ವಿಸ್ತೀರ್ಣಗಳ ಆಧಾರದ ಮೇಲೆ ಅತಿ ದೊಡ್ಡ ದೇಶ ಬ್ರೆಜಿಲ್. ಬ್ರೆಜಿಲ್ ದಕ್ಷಿಣ ಅಮೇರಿಕದ ಮಧ್ಯದಿಂದ ಅಟ್ಲಾಂಟಿಕ್ ಮಹಾಸಾಗರದ ವರೆಗೆ ಹಬ್ಬಿರುವ ಈ ದೇಶ ಯುರುಗ್ವೆ, ಅರ್ಜೆಂಟೀನ, ಪೆರಗ್ವೆ, ಬೊಲಿವಿಯಾ, ಪೆರು, ಕೊಲಂಬಿಯಾ, ವೆನೆಜುವೆಲಾ, ಗಯಾನಾ, ಸುರಿನಾಮ್, ಮತ್ತು ಫ್ರೆಂಚ್ ಗಯಾನಾಗಳ ಜೊತೆ ಗಡಿಯನ್ನು ಹೊಂದಿದೆ. ಈಕ್ವೆಡಾರ್ ಮತ್ತು ಚಿಲಿ ದೇಶಗಳನ್ನು ಹೊರತುಪಡಿಸಿ ದಕ್ಷಿಣ ಅಮೇರಿಕದ ಎಲ್ಲ ದೇಶಗಳ ಜೊತೆಯೂ ಗಡಿಯನ್ನು ಹೊಂದಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಕರ್ನಾಟಕ ಲೋಕಾಯುಕ್ತ ಭಾರತದ ಕರ್ನಾಟಕ ರಾಜ್ಯದ ತನಿಖಾ ಸಂಸ್ಥೆಯಾಗಿದೆ. ಕರ್ನಾಟಕ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಮತ್ತು ವರದಿ ಮಾಡಲು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು ಇದನ್ನು 1984 ರಲ್ಲಿ ಸ್ಥಾಪಿಸಲಾಯಿತು. ಒಂದು ಕಾಲದಲ್ಲಿ ದೇಶದ ಅತ್ಯಂತ ಶಕ್ತಿಶಾಲಿ ಸಂಸ್ಥೆ ಎಂದು ಪರಿಗಣಿಸಲ್ಪಟ್ಟು ಈ ಲೋಕಾಯುಕ್ತ.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ದರ್ಜಿಯು (ಚಿಪ್ಪಿಗ) ಉಡುಪುಗಳನ್ನು ವೃತ್ತಿಪರವಾಗಿ ತಯಾರಿಸುವ, ದುರಸ್ತಿಮಾಡುವ ಅಥವಾ ಮಾರ್ಪಡಿಸುವ ವ್ಯಕ್ತಿ, ವಿಶೇಷವಾಗಿ ಸೂಟ್‍ಗಳು ಮತ್ತು ಪುರುಷರ ಉಡುಪುಗಳು. ದರ್ಜಿಗಳು ಪುರುಷರ ಮತ್ತು ಸ್ತ್ರೀಯರ ಸೂಟ್‍ಗಳು, ಕೋಟ್ಗಳು, ಷರಾಯಿಗಳು ಮತ್ತು ಹೋಲುವ ಉಡುಪುಗಳನ್ನು ತಯಾರಿಸುತ್ತಾರೆ, ಸಾಮಾನ್ಯವಾಗಿ ಉಣ್ಣೆ, ನಾರುಬಟ್ಟೆ ಅಥವಾ ರೇಷ್ಮೆಯದ್ದು. ಸ್ಥಳೀಯ ದರ್ಜಿ ಕೆಲಸದಲ್ಲಿ ಸಾಮಾನ್ಯವಾಗಿ ಗ್ರಾಹಕರು ದರ್ಜಿಯನ್ನು ಸ್ಥಳೀಯವಾಗಿ ಭೇಟಿಯಾಗುತ್ತಾರೆ ಮತ್ತು ಉಡುಪನ್ನು ಸ್ಥಳೀಯವಾಗಿ ತಯಾರಿಸಲಾಗುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಕ್ರಿಕೆಟ್ ಆಟದಲ್ಲಿ ವಿಕೆಟ್-ಕೀಪರ್ (ವಿಕೆಟ್ ಕೀಪರ್ ಎಂದೂ ಉಚ್ಚರಿಸಲಾಗುತ್ತದೆ, ಹಾಗು ಸಾಮಾನ್ಯವಾಗಿ(ಕ್ಷೇತ್ರ ರಕ್ಷಕ) ಕೀಪರ್ ಎಂದು ಮಾತ್ರ ಹೇಳಲಾಗುತ್ತದೆ.)ಫೀಲ್ಡಿಂಗ್ ತಂಡದ ಆಟಗಾರನಾಗಿರುವ ಈತ, ಚೆಂಡನ್ನು ಎದುರಿಸುವ ಬ್ಯಾಟ್ಸ್‌ಮನ್ ನ ಬ್ಯಾಟಿನ ಕಾಪುನೆಲೆಯನ್ನು(ಗಾರ್ಡ್) ಪಡೆದ ವಿಕೆಟ್ ನ ಅಥವಾ ಸ್ಟಂಪ್ ಗಳ(ವಿಕೆಟ್ ನ ಮೂರು ಕೋಲುಗಳು) ಹಿಂದೆ ನಿಂತಿರುತ್ತಾನೆ. ಫೀಲ್ಡಿಂಗ್ ಮಾಡುವ ತಂಡದಲ್ಲಿ ವಿಕೆಟ್-ಕೀಪರ್ ಗೆ ಮಾತ್ರ ಕೈಗವಸು ಹಾಗು ಕಾಲಿಗೆ ಬಾಹ್ಯ ರಕ್ಷಾಕವಚ ಧರಿಸಲು ಅನುಮತಿ ನೀಡಲಾಗಿರುತ್ತದೆ. ಇದು ಮೂಲತಃ ಒಂದು ವಿಶೇಷ ಪರಿಣತಿಯ(ಪಾತ್ರ) ಕಾರ್ಯವಾಗಿದ್ದರೂ ಸಾಂದರ್ಭಿಕವಾಗಿ ಇವರಿಗೆ ಬೌಲಿಂಗ್ ಮಾಡಲು ಅವಕಾಶ ನೀಡಲಾಗುತ್ತದೆ.
ಮಂಡ್ಯ ರಮೇಶ್ (ಜುಲೈ ೧೪, ೧೯೬೪) ರಂಗಭೂಮಿ ತಜ್ಞರಾಗಿ, ನಟರಾಗಿ, ನಿರ್ದೇಶಕರಾಗಿ, ಅದ್ಭುತ ಕಲಾವಿದ, ಕಲಾಸಂಘಟಕ ಅಷ್ಟೇ ಅಲ್ಲದೇ ಅತ್ಯುತ್ತಮ ರಂಗಶಿಕ್ಷಕರೂ ಹೌದು. ಪ್ರಖ್ಯಾತ 'ನಟನ' ತಂಡದ ಸಂಸ್ಥಾಪಕರಾಗಿ, ಚಲನಚಿತ್ರ ರಂಗದಲ್ಲಿ ನೂರಾರು ಚಿತ್ರಗಳ ಯಶಸ್ವೀ ಕಲಾವಿದರಾಗಿ ಹೀಗೆ ಮಹತ್ವದ ಸಾಧನೆಗಳ ಕ್ರಿಯಾಶೀಲ ಕಲಾವಿದರು.ಆಸ್ಟ್ರೇಲಿಯಾದಲ್ಲಿ ನಡೆದ ವಿಶ್ವಕನ್ನಡ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸನ್ಮಾನಿತರಾಗಿದ್ದರು. ಪ್ರಸ್ತುತ ಮಜಾಟಾಕೀಸ್ ನಲ್ಲಿ ಹಾಸ್ಯನಟರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಭಾರತದ ಗಡಿಗಳು ಮತ್ತು ನರೆ ರಾಜ್ಯಗಳು
ಭಾರತವು 1947ರಲ್ಲಿ ಸ್ವತಂತ್ರ ರಾಷ್ಟ್ರವಾದ ನಂತರ ಅದರ ನೆರೆಹೊರೆಯ ಸಾರ್ವಭೌಮ ರಾಷ್ಟ್ರಗಳಾದ ಅಫ್ಘಾನಿಸ್ತಾನ್, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನಗಳೊಂದಿಗೆ ಅಂತರರಾಷ್ಟ್ರೀಯ ಭೂ ಗಡಿಗಳನ್ನು ಹೊಂದಿದೆ. ಕಾಶ್ಮೀರ ವಿವಾದದ ಪರಿಣಾಮ ಪಾಕಿಸ್ತಾನದೊಂದಿಗೆ ಗಡಿ ನಿಯಂತ್ರಣ ನಿಯಂತ್ರಣ (ಎಲ್‌ಒಸಿ) ರೇಖೆಯನ್ನು ಹೊಂದಿದೆ. ಈ ಎಲ್ಲಾ ಗಡಿ ಮತ್ತು ನಿಯಂತ್ರಣ (ಎಲ್‌ಒಸಿ) ರೇಖೆಯ ರಕ್ಷಣೆಯ ಹೊಣೆಯನ್ನೂ ಹೊಂದಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಕ್ರಿಕೆಟ್ ಚೆಂಡು ಎಂಬುದು ಕ್ರಿಕೆಟ್ ಆಟ ಆಡಲು ಬಳಸುವ ಗಟ್ಟಿ ಮತ್ತು ಗಡುಸಾದ ಚೆಂಡು ಎನಿಸಿದೆ. ಕಾರ್ಕ್ ಮತ್ತು ಚರ್ಮದಿಂದ ತಯಾರಾಗುವ ಈ ಕ್ರಿಕೆಟ್ ಚೆಂಡನ್ನು, ಪ್ರಥಮ ವರ್ಗದ ಪಂದ್ಯದಲ್ಲಿ ಕ್ರಿಕೆಟ್ ನಿಯಮಗಳಿಂದ ಮಿತಿಗೊಳಿಸಲಾಗಿರುತ್ತದೆ. ಕ್ರಿಕೆಟ್ ನ ಅನೇಕ ಭೌತಿಕ ಲಕ್ಷಣಗಳ ಮೂಲಕ ಚೆಂಡಿನ ಕುಶಲ ಬಳಕೆಯನ್ನು ಕೆಂಡಕಂಡಂತೆ ಮಾಡಬಹುದು: ಇದು ಬೌಲಿಂಗ್ ನ ಪ್ರಧಾನ ಅವಿಭಾಜ್ಯ ಅಂಗ ಮತ್ತು ವಿಕೆಟ್ ಪಡೆಯುವಲ್ಲಿನ ಪ್ರಮುಖ ಘಟಕವಾಗಿದೆ– ಗಾಳಿಯಲ್ಲಿ ಚಲನೆ, ಮತ್ತು ಮೈದಾನದ ಅರ್ಧ ಭಾಗವು ಚೆಂಡಿನ ಸ್ಥಿತಿ ಮತ್ತು ಬೌಲಿಂಗ್ ಮಾಡುವವನ ಪ್ರಯತ್ನದಿಂದ ಪ್ರಭಾವಿಸಲ್ಪಟ್ಟಿರುತ್ತದೆ.
ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.