The most-visited English Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಚಿಯಾಂಗ್ ಕೈ-ಶೆಕ್ (31 ಅಕ್ಟೋಬರ್ 1887 - 5 ಏಪ್ರಿಲ್ 1975), 1928 ಮತ್ತು 1975 ರ ನಡುವೆ ರಿಪಬ್ಲಿಕ್ ಆಫ್ ಚೀನಾದ ನಾಯಕನಾಗಿ ಸೇವೆ ಸಲ್ಲಿಸಿದ ರಾಜಕೀಯ ಮತ್ತು ಮಿಲಿಟರಿ ಮುಖಂಡರಾಗಿದ್ದರು. ಚಿಯಾಂಗ್ ಕ್ಯೂಮಿಂಟಾಂಗ್ (ಕೆಎಂಟಿ), ಚೀನೀಯ ನ್ಯಾಶನಲಿಸ್ಟ್ ಪಾರ್ಟಿಯ ಪ್ರಭಾವಿ ಸದಸ್ಯರಾಗಿದ್ದು, ಸನ್ ಯಾಟ್-ಸೆನ್ನವರ ನಿಕಟ ಮಿತ್ರರಾದರು. ಚಿಯಾಂಗ್ ಕ್ಯುಮಿಂಟಾಂಗ್ನ ವಂಪೊವಾ ಮಿಲಿಟರಿ ಅಕಾಡೆಮಿಯ ಕಮಾಂಡೆಂಟ್ ಆದರು ಮತ್ತು 1926 ರ ಆರಂಭದಲ್ಲಿ ಕ್ಯಾಂಟನ್ ಕೂಪ್ನ ನಂತರ ಕೆಎಂಟಿಯ ನಾಯಕನಾಗಿ ಸೂರ್ಯನ ಸ್ಥಳವನ್ನು ಪಡೆದರು.
ಕೋಳಿಯು (ಗಾಲುಸ್ ಗಾಲುಸ್ ಡೊಮೆಸ್ಟಿಕೂಸ್) ಒಂದು ಪಳಗಿಸಿದ ಹಕ್ಕಿ, ಕೆಂಪು ಕಾಡುಕೋಳಿಯ ಒಂದು ಉಪಪ್ರಜಾತಿ. ದೇಶೀಯ ಪ್ರಾಣಿಗಳ ಪೈಕಿ ಅತಿ ಸಾಮಾನ್ಯ ಹಾಗು ವ್ಯಾಪಕ ಹಾಗು ೨೦೦೩ರಲ್ಲಿ ೨೪ ಬಿಲಿಯಕ್ಕಿಂತ ಹೆಚ್ಚಿನ ಸಂಖ್ಯೆಯಿತ್ತೆಂದು ಅಂದಾಜಿಸಲಾಗಿರುವ ಕೋಳಿ ಇತರ ಯಾವುದೇ ಪಕ್ಷಿ ಪ್ರಜಾತಿಗಳಿಗಿಂತ ಹೆಚ್ಚಿವೆ. ಮಾನವರು ಕೋಳಿಗಳನ್ನು ಪ್ರಮುಖವಾಗಿ ಒಂದು ಆಹಾರ ಮೂಲವಾಗಿ ಇಟ್ಟುಕೊಳ್ಳುತ್ತಾರೆ, ಮತ್ತು ಮಾಂಸ ಹಾಗು ಮೊಟ್ಟೆ ಎರಡನ್ನೂ ಸೇವಿಸುತ್ತಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಸಾಗರಜೀವಿರಾಷ್ಟ್ರೀಯ ಉದ್ಯಾನ, ಕಚ್ಛ್ ಕೊಲ್ಲಿ
ಸಾಗರಜೀವಿರಾಷ್ಟ್ರೀಯ ಉದ್ಯಾನ, ಕಚ್ಛ್ ಕೊಲ್ಲಿ ರಾಷ್ಟ್ರೀಯ ಉದ್ಯಾನವು ಭಾರತದ ಗುಜರಾತ್ ರಾಜ್ಯದಲ್ಲಿದೆ ಕಚ್ ಕೊಲ್ಲಿ ಸಾಗರ ರಾಷ್ಟ್ರೀಯ ಉದ್ಯಾನವನವು ಭಾರತದ ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಕಚ್ ಕೊಲ್ಲಿಯ ದಕ್ಷಿಣ ತೀರದಲ್ಲಿರುವ ಒಂದು ಸಾಗರ ಉದ್ಯಾನವನವಾಗಿದೆ . ಇದನ್ನು 1980 ರಲ್ಲಿ ಸಮುದ್ರ ಅಭಯಾರಣ್ಯವೆಂದು ಘೋಷಿಸಲಾಯಿತು, ಇದು ಓಖಾದಿಂದ ಜೋಡಿಯಾವರೆಗಿನ ಸುಮಾರು 270 ಚದರ ಕಿಲೋಮೀಟರ್ (100 ಚದರ ಮೈಲಿ) ಪ್ರದೇಶವನ್ನು ಒಳಗೊಂಡಿದೆ. ನಂತರ, 1982 ರಲ್ಲಿ, ಭಾರತದ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ರ ನಿಬಂಧನೆಗಳ ಅಡಿಯಲ್ಲಿ 110 ಕಿಮೀ (68 ಚದರ ಮೈಲಿ) ಕೇಂದ್ರ ಪ್ರದೇಶವನ್ನು ಸಮುದ್ರ ರಾಷ್ಟ್ರೀಯ ಉದ್ಯಾನವನವೆಂದು ಘೋಷಿಸಲಾಯಿತು .
ಹಕ್ಕುಗಳು ಸ್ವಾತಂತ್ರ್ಯ ಅಥವಾ ಅರ್ಹತೆಯ ಕಾನೂನಾತ್ಮಕ, ಸಾಮಾಜಿಕ, ಅಥವಾ ನೈತಿಕ ತತ್ವಗಳು; ಅಂದರೆ, ಹಕ್ಕುಗಳು ಯಾವುದಾದರೂ ಕಾನೂನು ವ್ಯವಸ್ಥೆ, ಸಾಮಾಜಿಕ ಸಂಪ್ರದಾಯ, ಅಥವಾ ನೈತಿಕ ಸಿದ್ದಾಂತದ ಪ್ರಕಾರ, ಜನರಿಗೆ ಏನು ಅವಕಾಶವಿದೆ ಎಂಬುವುದರ ಬಗ್ಗೆ ಮೂಲಭೂತ ಪ್ರಮಾಣಕ ನಿಯಮಗಳು. ಕಾನೂನು ಮತ್ತು ನೀತಿಶಾಸ್ತ್ರದಂತಹ ವಿಭಾಗಗಳಲ್ಲಿ, ಹಕ್ಕುಗಳು ಅತ್ಯಗತ್ಯ ಪ್ರಾಮುಖ್ಯತೆ ಇರುವಂಥವು, ವಿಶೇಷವಾಗಿ ನ್ಯಾಯ ಮತ್ತು ಕರ್ತವ್ಯಶಾಸ್ತ್ರದ ಸಿದ್ಧಾಂತಗಳಲ್ಲಿ. ಹಕ್ಕುಗಳು ಹಲವುವೇಳೆ ನಾಗರಿಕತೆಗೆ ಮೂಲಭೂತವಾಗಿರುವಂಥವು ಎಂದು ಪರಿಗಣಿತವಾಗಿವೆ, ಮತ್ತು ಸಮಾಜ ಹಾಗೂ ಸಂಸ್ಕೃತಿಯ ಸ್ಥಾಪಿತ ಆಧಾರಸ್ತಂಭಗಳು ಎಂದು ಪರಿಗಣಿತವಾಗಿವೆ, ಮತ್ತು ಸಾಮಾಜಿಕ ಸಂಘರ್ಷಗಳ ಇತಿಹಾಸವನ್ನು ಪ್ರತಿಯೊಂದು ಹಕ್ಕು ಮತ್ತು ಅದರ ಬೆಳವಣಿಗೆಯ ಇತಿಹಾಸದಲ್ಲಿ ಕಂಡುಕೊಳ್ಳಬಹುದು.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಉಪ್ಪಿನ ಕಾಯಿ ಉಪ್ಪು, ಹುಳಿ(ಆಮ್ಲ), ಕಾರ, ಕಾಡಿ (ವಿನೇಗರ್), ಎಣ್ಣೆ, ಸಕ್ಕರೆ ಇಲ್ಲವೇ ಇವುಗಳ ಮಿಶ್ರಣದಲ್ಲೆ ಊರಿಟ್ಟ ಹಸಿಯ ಹುಳಿಗಾಯಿ, ತರಕಾರಿ ತೆರನ ವಸ್ತುಗಳೇ ಉಪ್ಪಿನಕಾಯಿ (ಪಿಕಲ್). ಬಹುಬೇಗ ಕೆಟ್ಟುಹೋಗುವ ಇಂಥ ಪದಾರ್ಥಗಳನ್ನು ಬಹುದಿನ ಕೆಡದಂತಿರಿಸಲು ಈ ವಿಧಾನವನ್ನು ಬಳಸುತ್ತಾರೆ. ಅಂದರೆ ರುಚಿಗೆ ತಕ್ಕಂತೆ ಉಪ್ಪಿನಕಾಯಿಯಲ್ಲಿ ಸಿಹಿ, ಹುಳಿ, ಎಂಬ ಎರಡು ಬಗೆಯವಿದೆ.
ದ್ವಾರಕಾಧೀಶ ದೇವಸ್ಥಾನವನ್ನು ಜಗತ್ ಮಂದಿರ ಎಂದೂ ಕರೆಯುತ್ತಾರೆ ಮತ್ತು ಸಾಂದರ್ಭಿಕವಾಗಿ ದ್ವಾರಕಾಧೀಶ ಎಂದು ಉಚ್ಚರಿಸಲಾಗುತ್ತದೆ, ಇದು ಕೃಷ್ಣನಿಗೆ ಸಮರ್ಪಿತವಾದ ಹಿಂದೂ ದೇವಾಲಯವಾಗಿದೆ, ಇದನ್ನು ಇಲ್ಲಿ ದ್ವಾರಕಾಧೀಶ ಅಥವಾ 'ದ್ವಾರಕಾ ರಾಜ' ಎಂಬ ಹೆಸರಿನಿಂದ ಪೂಜಿಸಲಾಗುತ್ತದೆ. ಈ ದೇವಾಲಯವು ಭಾರತದ ಗುಜರಾತ್‌ನ ದ್ವಾರಕಾ ನಗರದಲ್ಲಿದೆ, ಇದು ಹಿಂದೂ ತೀರ್ಥಯಾತ್ರೆಯ ಸ್ಥಳ ಆಗಿರುವ ಚಾರ್ ಧಾಮ್‌ನ ತಾಣಗಳಲ್ಲಿ ಒಂದಾಗಿದೆ. ಐದು ಅಂತಸ್ತಿನ ಕಟ್ಟಡದ ಮುಖ್ಯ ದೇಗುಲವು ೭೨ ಕಂಬಗಳಿಂದ ಬೆಂಬಲಿತವಾಗಿದೆ, ಇದನ್ನು ಜಗತ್ ಮಂದಿರ ಅಥವಾ ನಿಜ ಮಂದಿರ ಎಂದು ಕರೆಯಲಾಗುತ್ತದೆ.
ಜೂನ್ ೨೧- ಈ ದಿನವನ್ನು ಕರ್ನಾಟಕದಲ್ಲಿದಲ್ಲಿ ರೈತ ಹುತಾತ್ಮ ದಿನವೆಂದು ಆಚರಿಸಲಾಗುತ್ತದೆ. ಮಲಪ್ರಭಾ ಅಚ್ಚುಕಟ್ಟು ಪ್ರದೇಶದಲ್ಲಿ ೧೯೭೪ರಿಂದ ೧೯೮೦ರವರೆಗೆ ಸತತ ೬ ವರ್ಷದ ಬರಗಾಲ ಬಿದ್ದಾಗಲೂ ಸಹ ಸರಕಾರವು ರೈತರಿಂದ ನೀರಾವರಿ ಕರ, ಬೆಟರಮೆಂಟ್ ಲೆವಿ ಹಾಗು ಸುಸ್ತಿ ಬಡ್ಡಿ ವಸೂಲಿಗೆ ಕಠಿಣ ಕ್ರಮಗಳನ್ನು ತೆಗೆದುಕೊಂಡಿತು. ಅಧಿಕಾರಿಗಳು ರೈತರ ಮನೆಮನೆಗೆ ನುಗ್ಗಿ ಅಲ್ಲಿಯ ಪಾತ್ರೆ- ಪಗಡೆ,ರಂಟೆ- ಕುಂಟಿಗಳನ್ನು ಜಪ್ತ ಮಾಡತೊಡಗಿದರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಒಂದು ಆಸ್ಪತ್ರೆ ಎಂದರೆ ಇದೊಂದು ರೋಗಿಗಳಿಗೆ ಆರೋಗ್ಯ ರಕ್ಷಣೆ, ಗುಣಮಾಡುವ ಚಿಕಿತ್ಸೆ ಒದಗಿಸುವ ತಾಣವಾಗಿದೆ.ಇದಕ್ಕಾಗಿ ವಿಶೇಷ ವೈದ್ಯಕೀಯ ಸಿಬ್ಬಂದಿಯು ಮೇಲಿಂದ ಮೇಲೆ ರೋಗಿಗಳ ಸ್ಥಿತಿಗತಿಯನ್ನು ನಿಗಾವಹಿಸುತ್ತದೆ.ಬಹುಕಾಲದ ಕಾಯಿಲೆಗಳಿಗೆ ಅಲ್ಲಿಯೇ ಔಷಧೋಪಚಾರವನ್ನು ಒದಗಿಸುತ್ತದೆ. ಇಂದು ಆಸ್ಪತ್ರೆಗಳು ಬಹುತೇಕವಾಗಿ ಖಾಸಗಿಯವರಿಂದ ಹಣಕಾಸಿನ ನೆರವಿನಡಿಯಲ್ಲಿ ನಡೆಯುತ್ತಿವೆ,ಲಾಭಕ್ಕಾಗಿ ಇಲ್ಲವೆ ಲಾಭರಹಿತ ಆರೋಗ್ಯ ಸಂಘಟನೆಗಳ ಮೂಲಕ ಆರೋಗ್ಯ ವಿಮೆ ಕಂಪನಿಗಳು ಅಥವಾ ದತ್ತಿಸಂಸ್ಥೆಗಳು ಅಲ್ಲದೇ ನೇರವಾದ ದತ್ತಿ ನಿಧಿ ಕೊಡುಗೆಗಳಿಂದ ನಡೆಸಲ್ಪಡುತ್ತವೆ. ಇತಿಹಾಸದುದ್ದಕ್ಕೂ ಆಸ್ಪತ್ರೆಗಳನ್ನು ಧಾರ್ಮಿಕಸಂಸ್ಥೆಗಳು ಹಣಕಾಸು ನೀಡುವುದು ಅದರ ಸ್ಥಾಪನೆ ಮಾಡುವುದು ಮತ್ತುಅದನ್ನು ರಕ್ಷಿಸಿ ಸಾರ್ವಜನಿಕರಿಗೆ ಸೌಕರ್ಯಕ್ಕಾಗಿ ಅವರಲ್ಲದೇ ವ್ಯಕ್ತಿಗಳ ಸಹಾಯದ ಮೂಲಕ ನಡೆಸುತ್ತಾರೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಅಥವಾ ನೀಟ್ ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜ್‍ಗಳಲ್ಲಿ ಯಾವುದೇ ಪದವಿ ವೈದ್ಯಕೀಯ ಕೋರ್ಸ್ (ಎಮ್‍ಬಿಬಿಎಸ್/ ದಂತವೈದ್ಯಕೀಯ ಕೋರ್ಸ್ - ಬಿಡಿಎಸ್) ಅಥವಾ ಸ್ನಾತಕೋತ್ತರ ಕೋರ್ಸ್ (ಎಮ್‍ಡಿ, ಎಮ್‌ಎಸ್) ಅಭ್ಯಸಿಸಲು ಬಯಸುವ ವಿದ್ಯಾರ್ಥಿಗಳಿಗೆ ಭಾರತದಲ್ಲಿನ ಒಂದು ಪ್ರವೇಶ ಪರೀಕ್ಷೆ. ಎಮ್‍ಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ ಗಳಿಗಾಗಿ ನೀಟ್-ಯುಜಿ (ಪದವಿಪೂರ್ವ) ಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‍ಸಿ) ನಡೆಸಿಕೊಡುತ್ತದೆ. ಅಖಿಲ ಭಾರತ ಪ್ರಿ ಮೆಡಿಕಲ್ ಟೆಸ್ಟ್ (ಎಐಪಿಎಮ್‍ಟಿ) ಮತ್ತು ರಾಜ್ಯಗಳು ಅಥವಾ ಕಾಲೇಜ್‍ಗಳು ನಡೆಸಿಕೊಡುವ ಎಲ್ಲ ಪ್ರತ್ಯೇಕ ಎಮ್‍ಬಿಬಿಎಸ್ ಪರೀಕ್ಷೆಗಳ ಬದಲಾಗಿ ನೀಟ್-ಯುಜಿ ೨೦೧೩ರಲ್ಲಿ ಬಂದಿತು.
ಕರ್ನಾಟಕ ಲೋಕಾಯುಕ್ತ ಭಾರತದ ಕರ್ನಾಟಕ ರಾಜ್ಯದ ತನಿಖಾ ಸಂಸ್ಥೆಯಾಗಿದೆ. ಕರ್ನಾಟಕ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಮತ್ತು ವರದಿ ಮಾಡಲು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು ಇದನ್ನು 1984 ರಲ್ಲಿ ಸ್ಥಾಪಿಸಲಾಯಿತು. ಒಂದು ಕಾಲದಲ್ಲಿ ದೇಶದ ಅತ್ಯಂತ ಶಕ್ತಿಶಾಲಿ ಸಂಸ್ಥೆ ಎಂದು ಪರಿಗಣಿಸಲ್ಪಟ್ಟು ಈ ಲೋಕಾಯುಕ್ತ.
ಉಡುಪಿ (Tulu: ಒಡಿಪು) ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಶುದ್ಧವಾದ ವೈಷ್ಣವಮತ ಪ್ರತಿಪಾದಿಸಿದ ತ್ರೈಲೋಕ್ಯಾಚಾರ್ಯರಾದ ಶ್ರೀ ಮಧ್ವಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಕೃಷ್ಣ ಮಂದಿರ ಇರುವುದು ಉಡುಪಿಯಲ್ಲಿಯೇ. ಶ್ರೀ ವ್ಯಾಸತೀರ್ಥರು, ಶ್ರೀಮದ್ ವಾದಿರಾಜ ತೀರ್ಥರು, ಶ್ರೀರಾಘವೇಂದ್ರ ತೀರ್ಥ ಗುರುರಾಜರು, ಪುರಂದರದಾಸರು, ಕನಕದಾಸರು, ವಿಜಯದಾಸರು ಈ ಎಲ್ಲ ಮಹನೀಯರೂ ಸಹ ಶ್ರೀಮನ್ ಮಧ್ವಾಚಾರ್ಯರನ್ನು ನಿತ್ಯ ಉಪಾಸಿಸುವ, ಅವರ ಅನುಯಾಯಿಗಳೇ.
ಪೈ ದಿನವು ಗಣಿತದ ಸ್ಥಿರ π (pi) ನ ವಾರ್ಷಿಕ ಆಚರಣೆಯಾಗಿದೆ. 3, 1, ಮತ್ತು 4 π ಯ ಮೊದಲ ಮೂರು ಪ್ರಮುಖ ಅಂಕೆಗಳು ಆಗಿರುವುದರಿಂದ ಪೈ ಡೇ ಮಾರ್ಚ್ 14 ರಂದು (3/14 ತಿಂಗಳ / ದಿನ ದಿನಾಂಕ ಸ್ವರೂಪದಲ್ಲಿ) ಆಚರಿಸಲಾಗುತ್ತದೆ.2009 ರಲ್ಲಿ ಯುನೈಟೆಡ್ ಸ್ಟೇಟ್ಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಪೈ ದಿನದ ಹೆಸರನ್ನು ಬೆಂಬಲಿಸಿದರು. ಪೈ ಅಂದಾಜು ದಿನವನ್ನು ಜುಲೈ 22 ರಂದು (22/7 ದಿನ / ತಿಂಗಳ ದಿನಾಂಕ ಸ್ವರೂಪದಲ್ಲಿ) ಆಚರಿಸಲಾಗುತ್ತದೆ, ಏಕೆಂದರೆ 22/7 ಭಾಗವು π ಯ ಸಾಮಾನ್ಯ ಅಂದಾಜುಯಾಗಿದೆ, ಇದು ಆರ್ಕಿಮಿಡೀಸ್ನಿಂದ ಎರಡು ದಶಮಾಂಶ ಸ್ಥಳಗಳು ಮತ್ತು ದಿನಾಂಕಗಳಿಗೆ ನಿಖರವಾಗಿದೆ.