The most-visited English Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
"ಹಡಪದ ಅಪ್ಪಣ್ಣ" ನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು "ಹಡಪದ" ಸಮಾಜದವರಾಗಿದ್ದು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರಿಗೆ ಕನ್ನಡಿಯಾಗಿದೆಯೆಂದರೆ ತಪ್ಪಾಗಲಾರದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಕರ್ತವ್ಯ ಎಂದರೆ ಸಾಮಾನ್ಯವಾಗಿ ಅಥವಾ ನಿರ್ದಿಷ್ಟ ಸಂದರ್ಭಗಳು ಉದ್ಭವಿಸಿದರೆ ಯಾವುದೋ ಕ್ರಿಯೆಯನ್ನು ನೆರವೇರಿಸಲು ಬದ್ಧತೆ ಅಥವಾ ನಿರೀಕ್ಷೆ. ಕರ್ತವ್ಯವು ನೈತಿಕತೆ ಅಥವಾ ನೀತಿಶಾಸ್ತ್ರದ ವ್ಯವಸ್ಥೆಯಿಂದ ಉದ್ಭವಿಸಬಹುದು, ವಿಶೇಷವಾಗಿ ಗೌರವ ಸಂಸ್ಕೃತಿಯಲ್ಲಿ. ಅನೇಕ ಕರ್ತವ್ಯಗಳು ಕಾನೂನಿನಿಂದ ಸೃಷ್ಟಿಯಾಗಿ ಅದರ ಮೇಲೆ ಆಧಾರಿತವಾಗಿರುತ್ತವೆ ಮತ್ತು ಅವನ್ನು ನೆರವೇರಿಸದಿರುವುದಕ್ಕೆ ಕ್ರೋಢೀಕೃತ ಶಿಕ್ಷೆ ಅಥವಾ ಬಾಧ್ಯತೆಯನ್ನು ಒಳಗೊಳ್ಳುತ್ತವೆ.
ಅಶೋಕ ಚಕ್ರವು ಭಾರತೀಯ ಸೇನೆ ತನ್ನ ಯೋಧರಿಗೆ ನೀಡುವ ಶೌರ್ಯ ಪ್ರಶಸ್ತಿಯಾಗಿದೆ. ರಣರಂಗದ ಹೊರಗಡೆ ಯೋಧನೊಬ್ಬ ತನ್ನ ಅಪ್ರತಿಮ ಶೌರ್ಯ,ಸಾಹಸ ಮತ್ತು ತ್ಯಾಗಕ್ಕಾಗಿ ಪಡೆಯಬಹುದಾದ ಪದಕವಿದು.ಸಾಮಾನ್ಯವಾಗಿ ಶಾಂತಿ ಸಮಯದಲ್ಲಿ ಪ್ರದಾನ ಮಾಡುವ ಪರಮ ವೀರ ಚಕ್ರಕ್ಕೆ ಸಮಾಂತರವಾದ ಪ್ರಶಸ್ತಿ ಇದಾಗಿದೆ.ಕೀರ್ತಿ ಚಕ್ರ ಮತ್ತು ಶೌರ್ಯ ಚಕ್ರ ಪದಕಗಳು ಅಶೋಕ ಚಕ್ರದ ವಿಸ್ತರಿತಗೊಂಡ ಪ್ರಶಸ್ತಿಗಳಾಗಿವೆ.
ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಅಥವಾ ನೀಟ್ ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜ್‍ಗಳಲ್ಲಿ ಯಾವುದೇ ಪದವಿ ವೈದ್ಯಕೀಯ ಕೋರ್ಸ್ (ಎಮ್‍ಬಿಬಿಎಸ್/ ದಂತವೈದ್ಯಕೀಯ ಕೋರ್ಸ್ - ಬಿಡಿಎಸ್) ಅಥವಾ ಸ್ನಾತಕೋತ್ತರ ಕೋರ್ಸ್ (ಎಮ್‍ಡಿ, ಎಮ್‌ಎಸ್) ಅಭ್ಯಸಿಸಲು ಬಯಸುವ ವಿದ್ಯಾರ್ಥಿಗಳಿಗೆ ಭಾರತದಲ್ಲಿನ ಒಂದು ಪ್ರವೇಶ ಪರೀಕ್ಷೆ. ಎಮ್‍ಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ ಗಳಿಗಾಗಿ ನೀಟ್-ಯುಜಿ (ಪದವಿಪೂರ್ವ) ಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‍ಸಿ) ನಡೆಸಿಕೊಡುತ್ತದೆ. ಅಖಿಲ ಭಾರತ ಪ್ರಿ ಮೆಡಿಕಲ್ ಟೆಸ್ಟ್ (ಎಐಪಿಎಮ್‍ಟಿ) ಮತ್ತು ರಾಜ್ಯಗಳು ಅಥವಾ ಕಾಲೇಜ್‍ಗಳು ನಡೆಸಿಕೊಡುವ ಎಲ್ಲ ಪ್ರತ್ಯೇಕ ಎಮ್‍ಬಿಬಿಎಸ್ ಪರೀಕ್ಷೆಗಳ ಬದಲಾಗಿ ನೀಟ್-ಯುಜಿ ೨೦೧೩ರಲ್ಲಿ ಬಂದಿತು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ಧವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆ (LOC) ಇರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಭಾರತದಲ್ಲಿ ಈ ಸಂಘರ್ಷವನ್ನು ಆಪರೇಷನ್ ವಿಜಯ್ ಎಂದೂ ಉಲ್ಲೇಖಿಸಲಾಗುತ್ತದೆ, ಇದು ಈ ಪ್ರದೇಶದಲ್ಲಿನ ಭಾರತೀಯ ಸೇನಾ ಕಾರ್ಯಾಚರಣೆಯ ಸಂಕೇತನಾಮವಾಗಿದೆ. ಭಾರತೀಯ ವಾಯುಪಡೆಯು ಭಾರತೀಯ ಸೇನೆಯೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನ ಸೇನೆ ಮತ್ತು ಅರೆಸೇನಾ ಪಡೆಗಳನ್ನು ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಖಾಲಿಯಾದ ಭಾರತೀಯ ಸ್ಥಾನಗಳಿಂದ ಹೊರಹಾಕಿತು, ಇದನ್ನು ಆಪರೇಷನ್ ಸಫೇದ್ ಸಾಗರ್ (ಬಿಳಿ ಸಾಗರ) ಎಂದು ಹೆಸರಿಸಲಾಯಿತು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ಇಕ್ಬಾಲ್ ಅನ್ಸಾರಿರವರು ಕರ್ನಾಟಕ ರಾಜ್ಯದ ರಾಜಕಾರಣಿ ಮತ್ತು ಕರ್ನಾಟಕದ ಹದಿನಾಲ್ಕನೇ ವಿಧಾನಸಭೆಯ ಸದಸ್ಯರು. ಕರ್ನಾಟಕ ಸರ್ಕಾರದಲ್ಲಿ ಅವರು ಕ್ಯಾಬಿನೆಟ್ ಸಚಿವರಾಗಿದ್ದರು ಮತ್ತು ಗಂಗಾವತಿ ಕ್ಷೇತ್ರದಿಂದ ಎರಡು ಬಾರಿ ಶಾಸನಸಭೆಯ ಸದಸ್ಯರಾಗಿದ್ದಾರೆ. ಗಂಗಾವತಿ ಸಂಪನ್ಮೂಲಗಳು, ನಾಯಕರು, ಶೈಕ್ಷಣಿಕ ಮತ್ತು ವ್ಯವಹಾರ ಸಂಸ್ಥೆಗಳು ಮತ್ತು ಇಡೀ ಜಿಲ್ಲೆಯ ಅತ್ಯಂತ ಶ್ರೀಮಂತ ನಗರಗಳ ಕೊಪ್ಪಳ ಜಿಲ್ಲೆಯ ಕೇಂದ್ರವಾಗಿದೆ.
ರಷ್ಯೆ ಅಥವಾ ರಷ್ಯಾ ಅಥವಾ ರಷ್ಯ ಅಥವಾ ರೂಸ್ (ಪ್ರಥಮ ವಿಭಕ್ತಿ: ರೂಸು) (ರೂಸಿ: Россия), ಅಧಿಕೃತವಾಗಿ ರೂಸಿ ಒಕ್ಕೂಟ (ರೂಸಿ: Российская Федерация) , ಉತ್ತರ ಯುರೇಷಿಯಾ (ಯುರೋಪ್ ಹಾಗೂ ಏಷ್ಯಾ ಒಟ್ಟಿಗೆ) ದಲ್ಲಿರುವ ಒಂದು ದೇಶ. ಇದೊಂದು 83 ಬಿಡಿ ಸಂಸ್ಥಾನಗಳನ್ನು ಹೊಂದಿರುವ ಅರೆ-ಅಧ್ಯಕ್ಷೀಯ ಒಕ್ಕೂಟವಾಗಿದೆ. ರಷ್್ಯತನ್ನ ಭೂಗಡಿಗಳನ್ನು ಈ ದೇಶಗಳೊಂದಿಗೆ ಹಂಚಿಕೊಂಡಿದೆ (ವಾಯುವ್ಯದಿಂದ ಆಗ್ನೇಯದವರೆಗೆ) : ನಾರ್ವೆ, ಫಿನ್‌ಲ್ಯಾಂಡ್, ಎಸ್ಟೊನಿಯಾ, ಲಾಟ್ವಿಯಾ, ಲಿಥುವೇನಿಯಾ (ಕಲಿನಿನ್‌ಗ್ರಾಡ್ ಓಬ್ಲಸ್ಟ್ ಮೂಲಕ), ಪೋಲೆಂಡ್ (ಕಲಿನಿನ್‌ಗ್ರಾಡ್ ಓಬ್ಲಸ್ಟ್ ಮೂಲಕ), ಬೆಲಾರೂಸ್, ಉಕ್ರೇನ್, ಜಾರ್ಜಿಯಾ, ಅಜರ್ಬೈಜಾನ್, ಕಜಕ್‌ಸ್ತಾನ್, ಚೀನಾ, ಮಂಗೋಲಿಯಾ ಮತ್ತು ಉತ್ತರ ಕೊರಿಯಾ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಇಕ್ಷ್ವಾಕು ವಂಶದ ದೊರೆ ರಾಜ ಹರಿಶ್ಚಂದ್ರ ಸತ್ಯಪಾಲನೆಗಾಗಿ ಹೆಸರಾದವನು. ತಂದೆ ಸೂರ್ಯ ವಂಶದ ದೊರೆ ತ್ರಿಶಂಕು,ತಾಯಿ ಸತ್ಯವ್ರತೆಯ ಮಗ ಮುಂದೆ ಸತ್ಯ ಹರಿಶ್ಚಂದ್ರನೆಂದು ಪ್ರಸಿದ್ಧಿ ಪಡೆದನು. ಒಂದಾನೊಂದು ಕಾಲದಲ್ಲಿ ಹರಿಶ್ಚಂದ್ರನೆಂಬ ರಾಜನು ಆಯೋಧ್ಯ ಎಂಬ ರಾಜ್ಯವನು ಚಾಣಕ್ಷ್ಯತನದಿಂದ ರಾಜ್ಯವನು ಆಳುತ್ತಿದನು ಮತ್ತು ಅವನು ಸತ್ಯವನು ಬಿಟ್ಟು ಬೇರೆ ಏನನ್ನು ಹೇಳುತ್ತಿರಲಿಲ್ಲ ಯಾವಾಗಲು ಸಂತೋಷದಿಂದ ರಾಜ್ಯಭಾರ ಮಾಡುತ್ತಿದ್ದ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಜೋರ್ಡಾನ್ (ಅರಾಬಿಕ್ ಹೆಸರು - الأردنّ ಅಥವಾ ಅಲ್-ಉರ್ದುನ್ನ್)ಅಥವಾ ಜಾರ್ಡನ್ ಪಶ್ಚಿಮ ಏಷ್ಯಾದ ಅರಬ್ ಪ್ರದೇಶದಲ್ಲಿನ ಒಂದು ರಾಷ್ಟ್ರ. ಜೋರ್ಡಾನಿನ ಉತ್ತರಕ್ಕೆ ಸಿರಿಯಾ, ಈಶಾನ್ಯಕ್ಕೆ ಇರಾಖ್, ಪಶ್ಚಿಮದಲ್ಲಿ ಇಸ್ರೇಲ್ ಮತ್ತು ವೆಸ್ಟ್ ಬ್ಯಾಂಕ್ ಹಾಗೂ ದಕ್ಷಿಣ ಮತ್ತು ಪೂರ್ವದಲ್ಲಿ ಸೌದಿ ಅರೇಬಿಯಾ ರಾಷ್ಟ್ರಗಳಿವೆ. ಜೋರ್ಡಾನ್ ಇಸ್ರೇಲ್ ಜೊತೆಗೆ ಮೃತ ಸಮುದ್ರದ ಎಲ್ಲೆಗಳನ್ನು ಹಂಚಿಕೊಂಡಿದೆ.
"ಶ್ರೀ ರಾಮಾಯಣ ದರ್ಶನಂ" ವು ಮಹಾಕಾವ್ಯವಾದ ರಾಮಾಯಣವನ್ನು ಆಧರಿಸಿ ಕುವೆಂಪು ರವರು ರಚಿಸಿದ ಆಧುನಿಕ ಕನ್ನಡ ಸಾಹಿತ್ಯದ ಮೇರು ಕೃತಿಯಾಗಿದ್ದು ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ೧೯೬೮ ರಲ್ಲಿ 'ಜ್ಞಾನಪೀಠ ಪ್ರಶಸ್ತಿ'ಯನ್ನು ಕುವೆಂಪುರವರಿಗೆ ತಂದೊದಗಿಸಿದೆ. ಆಧುನಿಕ ಕನ್ನಡ ಸಾಹಿತ್ಯದ ಮಹೋನ್ನತ ಕೃತಿ. ಮಹಾಕಾವ್ಯಗಳ ರಚನೆಯ ಯುಗ ಮುಗಿದೇ ಹೋಯಿತು ಎನ್ನುವಾಗಲೇ ಸೃಷ್ಟಿಯಾದ ಆಧುನಿಕ ಮಹಾಕಾವ್ಯ.