The most-visited ಕನ್ನಡ Wikipedia articles, updated daily. Learn more...
ಟೆಂಪ್ಲೇಟು:Globalize/USA ಅಂಕಿ ಸಂಖ್ಯಾಶಾಸ್ತ್ರ ಅಥವಾ ಅಂಕಿ ಸಂಖ್ಯಾ ಮಾಹಿತಿ ಸರ್ಕಾರದಲ್ಲಿ ಉಪಯೋಗವಿರುವಂತೆ ಮನುಷ್ಯರ ಜನಸಂಖ್ಯೆಯ ದತ್ತಾಂಶ, ವಿಕ್ರಯಿಸುವ ಅಥವಾ ಸಂಶೋಧನಾ ಅಭಿಪ್ರಾಯಗಳ, ಅಥವಾ ಅಂಕಿ ಸಂಖ್ಯಾಶಾಸ್ತ್ರದ ಪಾರ್ಶ್ವಚಿತ್ರ ಸಂಶೋಧಿಸಿದಂತೆ. "ಅಂಕಿ ಸಂಖ್ಯಾಶಾಸ್ತ್ರ " ಎಂಬ ಶಬ್ದದ ಅರ್ಥದಲ್ಲಿನ ವ್ಯತ್ಯಾಸವನ್ನು ಕಂಡಾಗ, (ಕೆಳಗೆ ನೋಡಿ) ಅದರಲ್ಲಿ ಸಾಮಾನ್ಯವಾಗಿ ಅಂಕಿ ಸಂಖ್ಯಾಶಾಸ್ತ್ರವು ಲಿಂಗ, ಬುಡಕಟ್ಟು/ಜನಾಂಗ, ವಯಸ್ಸು, ಆದಾಯ, ಅಂಗವೈಕಲ್ಯತೆ, ಚಲನೆ (ಪ್ರಯಾಣದ ಸಮಯದಲ್ಲಿ ಕೆಲಸ ಮಾಡುವ ಅಥವಾ ಇರುವ ವಾಹನಗಳ ಸಂಖ್ಯೆ ), ಶೈಕ್ಷಣಿಕ ಅರ್ಹತೆ, ಮನೆಯ ಮಾಲೀಕತ್ವ, ಉದ್ಯೋಗ ಪರಿಸ್ಥಿತಿ, ಮತ್ತು ಸ್ಥಳವೂ ಸೇರಿಕೊಂಡಿದೆ. ಅಂಕಿ ಸಂಖ್ಯೆಯಲ್ಲಿನ ಭಿನ್ನತೆಯು,ಹಾಗು ಮನೆಯ ಅವಶ್ಯಕತೆಯ ಸುತ್ತ-ಮುತ್ತ, ಎರಡು ವಿಷಯ ಆಸಕ್ತಿದಾಯಕವಾಗಿದ್ದು,ಸಮಯಾಧಾರಿತ ಪರಿಸ್ಥಿತಿಯು ಸಹ ಕಾರಣವಾಗಿರುತ್ತದೆ.
ವಿಶ್ರವಸು ಪುಲಸ್ತ್ಯನ ಮಗ, ಪ್ರಸಿದ್ಧ ಋಷಿಯಾದ ಅಗಸ್ತ್ಯ ಮುನಿಯ ಸಹೋದರ ಮತ್ತು ಸೃಷ್ಟಿಕರ್ತ ಬ್ರಹ್ಮನ ಮೊಮ್ಮಗ, ಸೃಷ್ಟಿಕರ್ತ ಪ್ರಾಚೀನ ಭಾರತದ ಮಹಾನ್ ಹಿಂದೂ ಧರ್ಮಗ್ರಂಥ ಮಹಾಕಾವ್ಯ ರಾಮಾಯಣದಲ್ಲಿ ವಿವರಿಸಿದಂತೆ ಪ್ರಬಲ ಋಷಿ. ಶ್ರೇಷ್ಠ ವಿದ್ವಾಂಸರಾದ, ಅವರು ತಪಸ್ಸಿನ ಮೂಲಕ ಮಹಾನ್ ಶಕ್ತಿಗಳನ್ನು ಗಳಿಸಿದರು, ಇದು ಅವರ ಸಹವರ್ತಿ ಋಷಿಗಳಲ್ಲಿ ಅವರಿಗೆ ಉತ್ತಮ ಹೆಸರು ಮತ್ತು ಖ್ಯಾತಿಯನ್ನು ಗಳಿಸಿತು. ವಿಶೇಷವಾಗಿ ಭಾರದ್ವಾಜನು ವಿಶ್ರವನಿಂದ ಎಷ್ಟು ಪ್ರಭಾವಿತನಾದನೆಂದರೆ ಅವನಿಗೆ ತನ್ನ ಮಗಳಾದ ಇಳವಿದಾಳನ್ನು ಮದುವೆ ಮಾಡಿಕೊಟ್ಟನು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
'ಜೀವಭೂರಾಸಾಯನಿಕ ಚಕ್ರವು' ಹೆಸರೇ ಹೇಳುವಂತೆ ಜೈವಿಕ, ರಾಸಯನಿಕ ಮತ್ತು ಭೌಮಿಕ ಘಟಕಗಳನ್ನೊಳಗೊಂಡಿದೆ. ಇಂಗಾಲ(ಕಾರ್ಬನ್), ಆಮ್ಲಜನಕ(ಆಕ್ಸಿಜನ್), ಸಾರಜನಕ(ನೈಟ್ರೋಜನ್), ನೀರು, ರಂಜಕ(ಫೊಸ್ಫೊರಸ್), ಗಂಧಕ(ಸಲ್ಫರ್) ಮುಂತಾದ ಪೋಷಕಾಂಶಗಳು ಜೈವಿಕ ಮತ್ತು ಭೌತಿಕ ಜಗತ್ತಿನ ನಡುವೆ ನಿರಂತರವಾಗಿ ವಿನಿಮಯಗೊಳ್ಳುತ್ತವೆ. ಪರಿಸರ ವ್ಯವಸ್ಥೆಯಲ್ಲಿ ಪೋಷಕಾಂಶಗಳ ಚಕ್ರೀಯ ಚಲನೆಯನ್ನು, ಜೀವಭೂರಾಸಾಯನಿಕ ಚಕ್ರ ಎನ್ನುವರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕನ್ನಡ ಚಿತ್ರರಂಗದ ತಾರೆಯರಲ್ಲಿ ಸಿ.ಪಿ.ಯೋಗಿಶ್ವರ್ ರವರು ಒಬ್ಬರು. ಮೊದಲು ಕನ್ನಡದಲ್ಲಿ ಹಲವಾರು ಚಿತ್ರಗಳಲ್ಲಿ ಸಹ ಕಲಾವಿದನಾಗಿ ನಟಿಸಿ ಉತ್ತರದೃವದಿಂ ದಕ್ಷಿಣ ದೃವಕ್ಕು , ಸೈನಿಕ, ಬದ್ರಿ, ಪ್ರೀತಿ ನೀ ಇಲ್ಲದೇ ನಾ ಹೇಗಿರಲಿ, ಪಾಂಚಾಲಿ, ಶಿವಪ್ಪನಾಯಕ ಚಿತ್ರಗಳಲ್ಲಿ ನಾಯಕನಾಗಿ ನಟಿಸಿ ಜನಪ್ರೀತಿ ಗಳಿಸಿ, ಚನ್ನಪಟ್ಟಣ ಕ್ಷೇತ್ರದಲ್ಲಿ ಸಾಧನೆಯ ಹ್ಯಾಟ್ರಿಕ್ ವಿಜಯ ಸಾಧಿಸಿ ಶಾಸಕರಾಗಿ ಕಾರ್ಯನಿರ್ವಯಿಸಿತ್ತಿದ್ದಾರೆ. ಜನನಾಯಕನಾಗಿ, ಯುವಜನರ ಮುಖಂಡನಾಗಿ ಮಿಂಚುತ್ತಿರುವ ಸೈನಿಕ ಯೋಗಿಶ್ವರ್ ಕನ್ನಡ ಚಿತ್ರರಂಗ ಮತ್ತು ಕರ್ನಾಟಕ ರಾಜಕೀಯದಲ್ಲಿ ತಮ್ಮ ಜೀವನ ತೊಡಗಿಸಿಕೊಂಡಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಕಾವ್ಯಮೀಮಾಂಸೆ ಎಂದರೆ ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯಪ್ರಭೇದಗಳು, ಕಾವ್ಯಗಳಲ್ಲಿ ಅಲಂಕಾರ, ರೀತಿ, ರಸ, ಧ್ವನಿ ಮೊದಲಾದುವುಗಳ ಸ್ಥಾನ, ಕಾವ್ಯದ ವಸ್ತು ಮತ್ತು ಆತ್ಮಗಳ ಪರಿಶೀಲನ—ಇತ್ಯಾದಿಯಾಗಿ ಕಾವ್ಯವಿದ್ಯೆಗೆ ಸಂಬಂಧಿಸಿದ ವಿಷಯಗಳ ಶಾಸ್ತ್ರೀಯ ನಿರೂಪಣೆ. ಸಂಸ್ಕೃತದಲ್ಲಿ ಕಾವ್ಯಮೀಮಾಂಸೆ ಕ್ರಿಸ್ತಶಕದ ಆರಂಭದ ವೇಳೆಗೆ ಸ್ವತಂತ್ರ ಶಾಸ್ತ್ರವೆನಿಸುತ್ತಿದ್ದುದನ್ನು ರುದ್ರದಾಮನ ಶಿಲಾಲೇಖ, ಪತಂಜಲಿಯ ಮಹಾಭಾಷ್ಯ ಭರತನ ನಾಟ್ಯಶಾಸ್ತ್ರ ಮುಂತಾದವು ಸೂಚಿಸುತ್ತವೆ. ಆದರೆ ಕ್ರಿ.ಶ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ವೈಯಕ್ತಿಕ ಮಾಹಿತಿ ಜನನ ದುರ್ಗಿ ಟುಡು (1958-06-20) 20 June 1958ಉಪರ್ಬೇಡಾ, ಒಡಿಶಾ, ಭಾರತ ರಾಜಕೀಯ ಪಕ್ಷ ಭಾರತೀಯ ಜನತಾ ಪಕ್ಷ ಸಂಗಾತಿ(ಗಳು) ಮಕ್ಕಳು * ಲಕ್ಷ್ಮಣ್ ಮುರ್ಮು (ಮರಣ: 2009) ಸಿಪುನ್ ಮುರ್ಮು (ಮರಣ: 2012) ಇತಿಶ್ರೀ ಮುರ್ಮು ವಾಸಸ್ಥಾನ ಟೆಂಪ್ಲೇಟು:Bulletedlist ಅಭ್ಯಸಿಸಿದ ವಿದ್ಯಾಪೀಠ ರಾಮಾ ದೇವಿ ಮಹಿಳಾ ವಿಶ್ವವಿದ್ಯಾಲಯ (ಬಿಎ) ವೃತ್ತಿ ರಾಜಕಾರಣಿ ಉದ್ಯೋಗ ಶಿಕ್ಷಕಿ ಸಹಿ ಜಾಲತಾಣ presidentofindia.nic.in ಮಿಲಿಟರಿ ಸೇವೆ ಪ್ರಶಸ್ತಿಗಳು ಕೆಳಗೆ ನೋಡಿ ದ್ರೌಪದಿ ಮುರ್ಮು (ಜನನ ೨೦ ಜೂನ್ ೧೯೫೮) ಒಬ್ಬ ಭಾರತೀಯ ರಾಜಕಾರಣಿ, ಇವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರಾಗಿದ್ದರು. ಅವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದ ಸ್ಥಳೀಯ, ಪರಿಶಿಷ್ಟ ಬುಡಕಟ್ಟು ಸಮುದಾಯಕ್ಕೆ ಸೇರಿದ ಮೊದಲ ವ್ಯಕ್ತಿ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಹರ್ ಗೋಬಿಂದ್ ಖೊರಾನ (9 ಜನವರಿ 1922 - 9 ನವೆಂಬರ್ 2011) ಒಬ್ಬ ಭಾರತೀಯ ಅಮೇರಿಕನ್ ಜೀವರಸಾಯನಶಾಸ್ತ್ರಜ್ಞರಾಗಿದ್ದರು, ಜೀವಕೋಶದ ಆನುವಂಶಿಕ ಸಂಕೇತವನ್ನು ಸಾಗಿಸುವ ನ್ಯೂಕ್ಲಿಯಿಕ್ ಆಮ್ಲಗಳಲ್ಲಿನ ನ್ಯೂಕ್ಲಿಯೊಟೈಡ್ಗಳ ಕ್ರಮವು ಪ್ರೋಟೀನ್ಗಳ ಕೋಶದ ಸಂಶ್ಲೇಷಣೆಯನ್ನು ನಿಯಂತ್ರಿಸುತ್ತದೆ ಎಂಬ ತಮ್ಮ ಸಂಶೋಧನೆಗೆ 1968 ರ ಶರೀರವಿಜ್ಞಾನ ಅಥವಾ ಮೆಡಿಸಿನ್ ನೊಬೆಲ್ ಪ್ರಶಸ್ತಿಯನ್ನು ಮಾರ್ಷಲ್ ಡಬ್ಲ್ಯು.ನೀರೆನ್ಬರ್ಗ್ ಮತ್ತು ರಾಬರ್ಟ್ ಡಬ್ಲ್ಯೂ ಜೊತೆ ಹಂಚಿಕೊಂಡಿದ್ದಾರೆ. ಖೊರಾನಾ ಅದೇ ವರ್ಷ ಕೊಲಂಬಿಯಾ ವಿಶ್ವವಿದ್ಯಾನಿಲಯದ ಲೂಯಿಸಾ ಗ್ರಾಸ್ ಹೋರ್ವಿಟ್ಜ್ ಪ್ರಶಸ್ತಿಯನ್ನು ಪಡೆದರು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಬೆಂಗಳೂರು ಉತ್ತರ (ದೊಡ್ಡಬಳ್ಳಾಪುರ)
ಬೆಂಗಳೂರು ಉತ್ತರ ಜಿಲ್ಲೆ : ಭಾರತದ ಕರ್ನಾಟಕ ರಾಜ್ಯದ ೩೧ ಜಿಲ್ಲೆಗಳಲ್ಲಿ ಒಂದಾಗಿದೆ. ದೊಡ್ಡಬಳ್ಳಾಪುರ ಈ ಜಿಲ್ಲೆಯ ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ. ೧೯೮೬ ರಲ್ಲಿ ಬೆಂಗಳೂರು ಜಿಲ್ಲೆಯನ್ನು ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಎಂದು ವಿಭಜಿಸಿದಾಗ ಇದನ್ನು ರಚಿಸಲಾಯಿತು.
ಸ್ವಾಭಾವಿಕ ಸಸ್ಯ ಮತ್ತು ಪ್ರಾಣಿಸಂಪತ್ತನ್ನು ಉಳಿಸಿಕೊಂಡು ದೇಶದ ಸೌಂದರ್ಯವನ್ನು ಕಾಪಾಡಿಕೊಳ್ಳುವುದೇ ಅಲ್ಲದೆ, ನಿಸರ್ಗದ ಸಮತೋಲ ಕದಡದಂತೆ ಇರಿಸುವ ಸಲುವಾಗಿ ಕರ್ನಾಟಕದಲ್ಲಿ ಅಭಯಾರಣ್ಯಗಳನ್ನು, ರಾಷ್ಟ್ರೀಯ ಉದ್ಯಾನಗಳನ್ನು ಸ್ಥಾಪಿಸಲಾಗಿದೆ. ಇವು ಬಹುವಾಗಿ ಅಂತಾರಾಷ್ಟ್ರೀಯ ನಿಯಮಗಳನ್ನೇ ಅನುಸರಿಸುತ್ತವೆ. ಆದರೆ ಸ್ಥಳೀಯ ಪರಿಸ್ಥಿತಿಗೆ ಹೊಂದಿಕೊಳ್ಳುವಂತೆ ಅಲ್ಪಸ್ವಲ್ಪ ಮಾರ್ಪಾಟುಗಳನ್ನು ಇವುಗಳಲ್ಲಿ ಕಾಣಬಹುದು.
ಕಲ್ಲಿಕೋಟೆ (ಕೋಝಿಕ್ಕೋಡ್, ಕೋೞಿಕ್ಕೋಡ್, ಅಥವಾ ಕ್ಯಾಲಿಕಟ್, ಮಲಯಾಳಂ : കോഴിക്കോട് ) ದಕ್ಷಿಣ ಭಾರತದ ಕೇರಳ ರಾಜ್ಯದಲ್ಲಿ ಅರಬ್ಬಿ ಸಮುದ್ರದ ನೈಋತ್ಯ ಕರಾವಳಿಯಲ್ಲಿದೆ. ಅದರ ಪಶ್ಚಿಮಕ್ಕೆ ವಿಶಾಲ ಮತ್ತು ನೆಮ್ಮದಿಯ ಅರಬ್ಬಿ ಸಮುದ್ರವಿದೆ ಮತ್ತು ಪೂರ್ವಕ್ಕೆ ವಯನಾಡ್ ಬೆಟ್ಟಗಳು ಅದರ ಸೌಂದರ್ಯವನ್ನು ಹೆಚ್ಚಿಸುತ್ತವೆ. ಹಸಿರು, ಪ್ರಶಾಂತ ಪರಿಸರ, ಐತಿಹಾಸಿಕ ಕಟ್ಟಡಗಳು, ವನ್ಯಜೀವಿ ಅಭಯಾರಣ್ಯಗಳು, ನದಿಗಳು, ಬೆಟ್ಟಗಳು ಇತ್ಯಾದಿಗಳನ್ನು ನೋಡಲು ಇಲ್ಲಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಬರುತ್ತಾರೆ.
೧೯೪೫ ರಿಂದ ೧೯೮೯ರ ವರೆಗಿನ ಪೊಲೆಂಡ್ ನ ಇತಿಹಾಸವು, ಸೊವಿಯತ್ ಒಕ್ಕೂಟದ ಪ್ರಾಬಲ್ಯದ ಕಾಲ ಮತ್ತು ಎರಡನೇ ವಿಶ್ವಯುದ್ಧದ ನಂತರ ಹೊಸದಾಗಿ ರಚಿಸಲಾದ ಗಡಿಯೊಳಗೆ ಪುನರ್ಸ್ಥಾಪಿಸಲಾದ ಪೊಲೆಂಡ್ ನ ಮೇಲೆ ಹೇರಲ್ಪಟ್ಟ ಕಮ್ಯೂನಿಸ್ಟ್ ಆಳ್ವಿಕೆಯನ್ನು ಒಳಗೊಂಡಿದೆ. ಈ ವರ್ಷಗಳು, ಸಾಮಾನ್ಯವಾದ ಔದ್ಯೋಗೀಕರಣ, ಮತ್ತು ನಗರೀಕರಣವನ್ನೊಳಗೊಂಡಾಗಿಯೂ ಸಾಮಾಜಿಕ ಅಶಾಂತಿ ಮತ್ತು ತೀವ್ರತರದ ಆರ್ಥಿಕ ಸಂಕಷ್ಟಗಳಿಗೀಡಾಗಿದ್ದವು. ಎರಡನೆಯ ವಿಶ್ವಯುದ್ಧದ ಅಂತ್ಯದ ವೇಳೆ, ಸೊವಿಯತ್ ಒಕ್ಕೂಟದ ಕೆಂಪು ಸೇನೆಯು, ಆಕ್ರಮಿಸಲ್ಪಟ್ಟ ಪೊಲೆಂಡ್ ನಿಂದ ನಾಝಿ ಜರ್ಮನ್ ಶಕ್ತಿಗಳನ್ನು ಹೊರದಬ್ಬಿತು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಒಂದು ವಸ್ತುವಿನ ಎಲ್ಲಾ ಭಾಗಗಳ ತೂಕಗಳಿಂದಾದ ಕ್ರೋಡೀಕೃತ (Resultant) ಬಲವು ಯಾವ ಬಿಂದುವಿನ ಮೂಲಕ ಹಾದು ಹೋಗುವುದೋ ಆ ಬಿಂದುವನ್ನು ಗುರುತ್ವ ಕೇಂದ್ರ ಎನ್ನುತ್ತಾರೆ. ಒಂದು ವಸ್ತುವಿಗೆ ಅದರ ಎಲ್ಲಾ ಸ್ಥಾನಗಳಿಗೂ ಕೇವಲ ಒಂದು ಗುರುತ್ವ ಕೇಂದ್ರವಿರುತ್ತದೆ. ಏಕರೀತಿಯ ಗುರುತ್ವ ಕ್ಷೇತ್ರದಲ್ಲಿ ವಸ್ತುವಿನ ಗುರುತ್ವ ಕೇಂದ್ರ ಮತ್ತು ದ್ರವ್ಯರಾಶಿಯ ಕೇಂದ್ರ ಒಂದೇ ಆಗಿರುವುದು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೀನ್ಸ್
ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೀನ್ಸ್ ಕೆರಿಬ್ಬಿಯನ್ ಸಮುದ್ರದ ಲೆಸ್ಸರ್ ಆಂಟಿಲ್ಸ್ ದ್ವೀಪ ಸಮೂಹದ ಒಂದು ದ್ವೀಪ ರಾಷ್ಟ್ರ. ಸೇಂಟ್ ವಿನ್ಸೆಂಟ್ ಅಗ್ನಿಪರ್ವತವಿರುವ ದ್ವೀಪ. ಕೆರೆಬಿಯನ್ ದ್ವೀಪಗಳಲ್ಲಿ ಅತಿದೊಡ್ಡದು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
2003 ಮಾರ್ಚ್ 20ರಂದು ಪ್ರಾರಂಭಗೊಂಡ ಬಹುರಾಷ್ಟ್ರಗಳ ಸೇನಾ ತುಕಡಿಗಳು ಇರಾಕಿನ ನೆಲವನ್ನು ವಶಪಡಿಸಿಕೊಳ್ಳುವ ಸೇನಾಕಾರ್ಯಾಚರಣೆಯನ್ನು ಇರಾಕ್ ಯುದ್ಧ ಎಂದು ಕರೆಯಲಾಗುತ್ತದೆ (ಇದನ್ನು ಇರಾಕ್ ಆಕ್ರಮಣ, ಎರಡನೇ ಗಲ್ಫ್ ಯುದ್ಧ , ಹಾಗೂ ಆಪರೇಷನ್ ಇರಾಕ್ ವಿಮೋಚನಾ ಕಾರ್ಯಾಚರಣೆ ಎಂದೂ ಕರೆಯಲಾಗುತ್ತದೆ). ಅಮೇರಿಕಾದ ಅಧ್ಯಕ್ಷ ಜಾರ್ಜ್.ಡಬ್ಲ್ಯು.ಬುಷ್ ಅವರ ಮುಂಚೂಣಿಯ ಅಮೇರಿಕಾ ಹಾಗೂ ಟೋನಿ ಬ್ಲೇರ್ ಮುಖಂಡತ್ವದ ಇಂಗ್ಲೆಂಡ್ ಈ ಕಾರ್ಯಾಚರಣೆಯ ಮುಂದಾಳತ್ವ ವಹಿಸಿಕೊಂಡಿದ್ದವು. ಹೀಗೆ ವಿಮೋಚನೆಯ ಹೆಸರಿನಲ್ಲಿ ಇರಾಕಿನ ನೆಲದ ಮೇಲೆ ಕಾಲೂರಿದ ಸೇನೆಯನ್ನು ಇತ್ತೀಚೆಗೆ ತೆರವುಗೊಳಿಸಲಾಯಿತು.
ಎರ್ನೆಸ್ಟ್ ಥಾಮಸ್ ಸಿಂಟನ್ ವಾಲ್ಟನ್
ಐರ್ಲೆಂಡಿನ ಭೌತವಿಜ್ಞಾನಿಯಾಗಿದ್ದ ಎರ್ನೆಸ್ಟ್ ಥಾಮಸ್ ಸಿಂಟನ್ ವಾಲ್ಟನ್ರವರು ೧೯೦೩ರ ಅಕ್ಟೋಬರ್ ೬ರಂದು ವಾಟರ್ಫೋರ್ಡ್ ಕೌಂಟಿಯ ಡುಂಗಾರ್ವನ್ ಪ್ರದೇಶದಲ್ಲಿ ಜನಿಸಿದರು. ವಾಲ್ಟನ್ರವರು ಇನ್ನೊಬ್ಬ ವಿಜ್ಞಾನಿ ಜಾನ್ ಡೊಗ್ಲಾಸ್ ಕಾಕ್ಕ್ರಾಫ್ಟ್ರವರ ಜೊತೆ ಸೇರಿಕೊಂಡು ೧೯೩೨ರಲ್ಲಿ ಮೊತ್ತಮೊದಲ ಯಶಸ್ವೀ ಕಣ ವೇಗೋತ್ಕರ್ಷಕವನ್ನು (particle accelerator) ನಿರ್ಮಿಸಿದರು. ಆ ಸಾಧನದಲ್ಲಿ ೫೦೦,೦೦೦ ಇಲೆಕ್ಟ್ರಾನ್-ವೋಲ್ಟ್ಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ವೇಗೋತ್ಕರ್ಷಕ್ಕೆ ಒಳಗಾದ ಪ್ರೋಟಾನ್ಗಳ ಧೂಲವನ್ನು ಉತ್ಪತ್ತಿ ಮಾಡಬಹುದಾಗಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ವೈಭವ್ ಸೂರ್ಯವಂಶಿ (ಜನನ ೨೭ ಮಾರ್ಚ್ ೨೦೧೧) ಒಬ್ಬ ಭಾರತೀಯ ಕ್ರಿಕೆಟಿಗ, ಇವರು ದೇಶೀಯ ಕ್ರಿಕೆಟ್ನಲ್ಲಿ ಬಿಹಾರ ಪರ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಾರೆ. ಎಡಗೈ ಬ್ಯಾಟ್ಸ್ಮನ್ ಆಗಿ, ಅವರು ಜನವರಿ 2024 ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು. ಅವರು ಲಿಸ್ಟ್ ಎ ತಂಡದ ಆರಂಭಿಕ ಆಟಗಾರರಲ್ಲಿ ಅತ್ಯಂತ ಕಿರಿಯರು ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯರು.
ಬಾಬು ಜಗಜೀವನ್ ರಾಮ್ (೫ ಏಪ್ರಿಲ್ ೧೯೦೮ - ೬ ಜುಲೈ ೧೯೮೬) ಇವರು ಜನಪ್ರಿಯವಾಗಿ ಬಾಬೂಜಿ ಎಂದು ಕರೆಯಲ್ಪಡುತ್ತಾರೆ ಹಾಗೂ ಇವರು ಭಾರತದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಿಹಾರದ ರಾಜಕಾರಣಿಯಾಗಿದ್ದರು. ೧೯೩೫ ರಲ್ಲಿ, ದಲಿತರಿಗೆ ಸಮಾನತೆಯನ್ನು ಸಾಧಿಸಲು ಸಮರ್ಪಿತವಾದ ಅಖಿಲ ಭಾರತ ಶೋಷಿತ ವರ್ಗಗಳ ಲೀಗ್ ಅನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು ಮತ್ತು ೧೯೩೭ ರಲ್ಲಿ, ಬಿಹಾರ ವಿಧಾನಸಭೆಗೆ ಆಯ್ಕೆಯಾದರು. ನಂತರ, ಅವರು ಗ್ರಾಮೀಣ ಕಾರ್ಮಿಕ ಚಳವಳಿಯನ್ನು ಸಂಘಟಿಸಿದರು.
ಕಂದಕವು ಸಾಮಾನ್ಯವಾಗಿ (ಹೆಚ್ಚು ಅಗಲದ ಕಮರಿ ಅಥವಾ ಅಗಳಿಗೆ ವಿರುದ್ಧವಾಗಿ) ಅಗಲಕ್ಕಿಂತ ಹೆಚ್ಚು ಆಳವಾಗಿರುವ, ಅದರ ಉದ್ದಕ್ಕೆ ಹೋಲಿಸಿದರೆ ಕಿರಿದಾದ ನೆಲದಲ್ಲಿನ ಒಂದು ಬಗೆಯ ಅಗೆಯುವಿಕೆ ಅಥವಾ ತಗ್ಗು. ಭೂವಿಜ್ಞಾನದಲ್ಲಿ, ಕಂದಕಗಳು ನದಿಗಳಿಂದ ಭೂಸವೆತದ ಪರಿಣಾಮವಾಗಿ ಅಥವಾ ಭೂಮಿಯ ಹೊರಪದರಗಳ ಭೂವೈಜ್ಞಾನಿಕ ಚಲನೆಯಿಂದ ಸೃಷ್ಟಿಯಾಗುತ್ತವೆ. ನಾಗರಿಕ ಶಿಲ್ಪವಿಜ್ಞಾನ ಕ್ಷೇತ್ರದಲ್ಲಿ, ಕಂದಕಗಳನ್ನು ಹಲವುವೇಳೆ ನೆಲದಡಿಯ ಆಧಾರರಚನೆ ಅಥವಾ ಸೌಲಭ್ಯಗಳನ್ನು (ಉದಾ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕರಿಶ್ಮಾ ಕಪೂರ್ (ಹಿಂದಿ:करिश्मा कपूर, 1974 ರ ಜೂನ್ 25 ರಂದು ಜನನ), ಲೊಲೊ ಎಂಬ ಮುದ್ದಿನ ಉಪನಾಮದಿಂದ ಕರೆಯಲ್ಪಡುವ ಇವರು, ಬಾಲಿವುಡ್ ನ ಚಲನಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಭಾರತೀಯ ನಟಿಯಾಗಿದ್ದಾರೆ. 1991 ರಲ್ಲಿ ಮೊದಲ ಬಾರಿಗೆ ಚಲನಚಿತ್ರದಲ್ಲಿ ಅಭಿನಯಿಸುವ ಮೂಲಕ ಕಪೂರ್ ಅವರ ಪೀಳಿಗೆಯ ಅತ್ಯಂತ ಪ್ರಸಿದ್ಧ ನಟಿಯಾದರು. ಕಪೂರ್ ರವರ ವೃತ್ತಿಜೀವನದ ಸಂದರ್ಭದಲ್ಲಿ, ವಾಣಿಜ್ಯದ ದೃಷ್ಟಿ ಮತ್ತು ವಿಮರ್ಶಾತ್ಮಕವಾಗಿ ಯಶಸ್ವಿಯಾದ ಅನೇಕ ಚಿತ್ರಗಳ ಭಾಗವಾಗಿದ್ದರು.