The most-visited ಕನ್ನಡ Wikipedia articles, updated daily. Learn more...
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ನೆಗಡಿ ಯು [ಮೇಲ್ಭಾಗದ ಶ್ವಾಸೇಂದ್ರಿಯದ ಪ್ರದೇಶದ ವೈರಾಣುವಿನ ಸೋಂಕು (VURTI ), ಮೂಗು-ಗಂಟಲು ಕುಹರಗಳ ವೈರಾಣುವಿನ ತೀವ್ರವಾದ ಉರಿಯೂತ, ಮೂಗಿನಲ್ಲಿನ ತೀವ್ರವಾದ ಸುರಿಯುವಿಕೆ, ಅಥವಾ ಶೀತ ] ಮೇಲ್ಭಾಗದ ಉಸಿರಾಟದ ವ್ಯವಸ್ಥೆಯ ಒಂದು ಸಾಂಕ್ರಾಮಿಕವಾದ, ವೈರಾಣುವಿನ ಸೋಂಕು ಹರಡುವ ಕಾಯಿಲೆಯಾಗಿದ್ದು, ಮೂಗಿನ ವೈರಾಣುಗಳು (ರೈನೋವೈರಸ್ಗಳು) ಮತ್ತು ಮುಕುಟ ವೈರಾಣುಗಳಿಂದ (ಕರೋನಾ ವೈರಸ್ಗಳು) ಅದು ಪ್ರಧಾನವಾಗಿ ಉಂಟಾಗುತ್ತದೆ. ಒಂದು ಕೆಮ್ಮು, ನೋಯುತ್ತಿರುವ ಗಂಟಲು, ಸ್ರವಿಸುವ ಮೂಗು, ಮತ್ತು ಜ್ವರ ಇವುಗಳು ಸಾಮಾನ್ಯ ರೋಗಲಕ್ಷಣಗಳಲ್ಲಿ ಸೇರಿಕೊಂಡಿವೆ. ಇದಕ್ಕೆ ಸದ್ಯಕ್ಕೆ ಯಾವುದೇ ತಿಳಿದ ಔಷಧಿಯಿಲ್ಲ; ಆದಾಗ್ಯೂ, ರೋಗಲಕ್ಷಣಗಳು ಸಾಮಾನ್ಯವಾಗಿ 7ರಿಂದ 10 ದಿನಗಳಲ್ಲಿ ಅಪ್ರಯತ್ನಿತವಾಗಿ ಪರಿಹರಿಸಲ್ಪಟ್ಟರೆ, ಕೆಲವೊಂದು ರೋಗಲಕ್ಷಣಗಳು ಪ್ರಾಯಶಃ ಮೂರು ವಾರಗಳವರೆಗೂ ಉಳಿದುಕೊಂಡಿರುತ್ತವೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮಧ್ಯ ಏಷ್ಯಾದಿಂದ(ಮಂಗೋಲಿಯ ಸಾಮ್ರಾಜ್ಯದ ಉಜಬೇಕಿಸ್ತಾನದಿಂದ) ಬಂದ ಮುಸ್ಲಿಂಜಯಶಾಲಿ, ಜಹೀರ್ ಉದ್ -ದಿನ್ ಮಹಮ್ಮದ್ ಬಾಬರ್ (February 23 [O.S. February 14] 1483 — January 5 [O.S. December 26, 1530] 1531) ಹಲವಾರು ಸತತ ಸೋಲಿನಿಂದ,ಎದೆಗುಂದದೆ ಅಂತಿಮವಾಗಿ ಭಾರತದಲ್ಲಿ ಮುಘಲ್ ಸಾಮ್ರಾಜ್ಯ ಸ್ಥಾಪಿಸಿದನು .https://www.britannica.com/biography/Babur ತನ್ನ ತಂದೆಯ ಮೂಲಕ ತೈಮೂರುವಂಶದ ನೇರಸ್ಥಾನಾಗಿ, ಗೆನ್ಗೀಸ್ ಖಾನ್ ನ ವಂಶಸ್ಥನಾದದ್ದು, ತಾಯಿಯ ಮೂಲಕ. ಬಾಬರ್ ತನ್ನ ವಂಶ ಪರಂಪರೆಯನ್ನು ಟಿಮುರಿಡ್ ಮತ್ತು ಚಾಘತಯ್ -ಟರ್ಕಿಕ್ ಎಂದು ಗುರುತಿಸಿಕೊಂಡಿದ್ದು,ತನ್ನ ಹುಟ್ಟು,ವಾತಾವರಣ, ತರಭೇತಿ ಮತ್ತು ಸಂಸ್ಕೃತಿಗಳು ಪೆರ್ಸಿಯನ್ ಸಂಸ್ಕೃತಿ ಯಿಂದ ಬಂದವುಗಳೆಂದು,ಆದುದರಿಂದ ತನ್ನ ವಂಶದವರಿಂದ ಬಂದ ಇವುಗಳನ್ನು ತನ್ನ ಜವಾಬ್ದಾರಿಯಿಂದ ಪೋಷಿಸಬೇಕೆಂದು, ಪೆರ್ಸಿಯನ್ ಸಂಸ್ಕೃತಿಯ ಪ್ರಭಾವ ವನ್ನು ಭಾರತದ ಉಪಖಂಡ ದಲ್ಲಿ ವಿಸ್ತರಿಸಿ, ಬುದ್ಧಿವಂತಿಕೆಯ ಸಾಹಿತ್ಯ, ಕಲೆ, ಮತ್ತು ಚಾರಿತ್ರಿಕ ಫಲಿತಾಂಶದ ಮೂಲಕ ಪರಿಚಯಿಸಲು ಉದ್ಯುಕ್ತನಾದನು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಮೋಡ ಬಿತ್ತನೆ ಒಂದು ಬಗೆಯ ಹವಾಮಾನ ಬದಲಾವಣೆ, ವಾತಾವರಣದಲ್ಲಿ ವಸ್ತುಗಳನ್ನು ಹರಡಿ ಮೋಡಗಳಿಂದ ಬೀಳುವ ಅವಕ್ಷೇಪನದ ಪ್ರಮಾಣ ಅಥವಾ ಪ್ರಕಾರವನ್ನು ಬದಲಾಯಿಸುವ ಒಂದು ರೀತಿ. ಈ ವಸ್ತುಗಳು ಮೋಡ ಘನೀಕರಣ ಅಥವಾ ಮಂಜುಗಡ್ಡೆ ನಾಭಿಗಳಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಮೋಡದೊಳಗಿನ ಸೂಕ್ಷ್ಮಭೌತಿಕ ಪ್ರಕ್ರಿಯೆಗಳನ್ನು ಮಾರ್ಪಾಡು ಮಾಡುತ್ತವೆ. ಅವಕ್ಷೇಪನವನ್ನು (ಮಳೆ ಅಥವಾ ಹಿಮ) ಹೆಚ್ಚಿಸುವುದು ಇದರ ಸಾಮಾನ್ಯ ಉದ್ದೇಶವಾಗಿದೆ, ಆದರೆ ವಿಮಾನ ನಿಲ್ದಾಣಗಳಲ್ಲಿ ಆಲಿಕಲ್ಲು ಮತ್ತು ಮಂಜಿನ ನಿರೋಧವನ್ನೂ ವ್ಯಾಪಕವಾಗಿ ನಡೆಸಲಾಗುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕೃಷ್ಣೆ ಹೊಳೆ ದಕ್ಷಿಣ ಭಾರತದ ಎರಡನೆಯ ದೊಡ್ಡ ಹೊಳೆಯಾಗಿದೆ. ಈ ಹೊಳೆಯು ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಮಹಾದೇವ ಪರ್ವತ ಶ್ರೇಣಿಯಲ್ಲಿ ಮಹಾಬಲೇಶ್ವರದ ಹತ್ತಿರ ಕಡಲು ಮಟ್ಟಕ್ಕಿಂತ ೧೩೩೮ ಮೀಟರ ಎತ್ತರದಲ್ಲಿ ಉಗಮವಾಗಿ ಸುಮಾರು ೧೩೯೨ ಕಿ.ಮಿ.ಗಳಷ್ಟು ಹರಿದು ಆಂಧ್ರಪ್ರದೇಶದ ಹಂಸಲಾದೀವಿಯಲ್ಲಿ ಬಂಗಾಳ ಕೊಲ್ಲಿ ಯನ್ನು ಸೇರುತ್ತದೆ. ಕೃಷ್ಣೆ ಹೊಳೆ ಮಹಾರಾಷ್ಟ್ರ,ಕರ್ನಾಟಕ, ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಹರಿಯುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ನಾಸಿರ್ ಉದ್ದೀನ್ ಮಹಮ್ಮದ್ ಹುಮಾಯೂನ್ (ಪೂರ್ಣ ಹೆಸರು: ಅಲ್-ಸುಲ್ತಾನ್ ಅಲ್-ಅಜಮ್ ವಾಲ್ ಖಾಕನ್ ಅಲ್-ಮುಕರಾಮ್, ಜಾಮ್-ಇ-ಸುಲ್ತನಾತ್-ಇ-ಹಕಿಕಿ ವಾ ಮಜಾಜಿ, ಸಯಿದ್ ಅಲ್-ಸಾಲತಿನ್, ಅಬುಇಲ್ ಮುಜಾಫರ್ ನಾಸಿರ್ ಉದ್ದೀನ್ ಮಹಮ್ಮದ್ ಹುಮಾಯೂನ್ ಪಾದ್ಶಾ ಘಜಿ, ಜಿಲ್ಲುಲ್ಲಾಹ್ ) (ಪರ್ಷಿಯನ್:نصيرالدين همايون) (17 ಮಾರ್ಚ್ 1508– 4 ಮಾರ್ಚ್ 1556) (OS 7 ಮಾರ್ಚ್ 1508-OS 22 ಫೆಬ್ರವರಿ 1556) ಇಂದಿನ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಉತ್ತರ ಭಾರತದ ಇತರ ಭಾಗಗಳನ್ನು 1530ರಿಂದ 1540ರವರೆಗೆ ಹಾಗೂ ಮತ್ತೆ 1555ರಿಂದ 1556ರವರೆಗೆ ಆಳಿದ ಎರಡನೇ ಮೊಘಲ್ ಚರ್ಕವರ್ತಿಯಾಗಿದ್ದಾನೆ. ತಂದೆ ಬಾಬರ್ನಂತೆ ಆತನೂ ಸಹ ಅವನ ರಾಜ್ಯವನ್ನು ಬಹುಬೇಗನೆ ಕಳೆದುಕೊಂಡನು. ಆದರೆ ಪರ್ಷಿಯನ್ ಸಹಾಯದೊಂದಿಗೆ, ಅವನು ಅಂತಿಮವಾಗಿ ಮತ್ತಷ್ಟು ದೊಡ್ಡ ಸಾಮ್ರಾಜ್ಯವನ್ನು ಪುನಃಪಡೆದನು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಭಾರತದ ರಾಷ್ಟ್ರೀಯ ಉದ್ಯಾನಗಳ ಹಾಗು ರಾಷ್ಟ್ರಮಟ್ಟದ ವನ್ಯಜೀವಿ ಧಾಮಗಳ ಪಟ್ಟಿ ಇಂತಿದೆ. ಸೂ: ಪೆಂಚ್ ರಾಷ್ಟ್ರೀಯ ಉದ್ಯಾನವು ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಗಳಲ್ಲಿ ಹರಡಿದ್ದು ತಮ್ಮ ತಮ್ಮ ಭಾಗದ ಉಸ್ತುವಾರಿಯನ್ನು ಎರಡೂ ರಾಜ್ಯಗಳು ಬೇರೆಬೇರೆಯಾಗಿ ನೋಡಿಕೊಳ್ಳುತ್ತವೆ. ಸಂಜಯ್ ರಾಷ್ಟ್ರೀಯ ಉದ್ಯಾನವು ಛತ್ತೀಸ್ ಗಢ ಮತ್ತು ಮಧ್ಯಪ್ರದೇಶಗಳಲ್ಲಿ ಹರಡಿದ್ದು ತಮ್ಮ ತಮ್ಮ ಭಾಗದ ಉಸ್ತುವಾರಿಯನ್ನು ಎರಡೂ ರಾಜ್ಯಗಳು ಬೇರೆಬೇರೆಯಾಗಿ ನೋಡಿಕೊಳ್ಳುತ್ತವೆ.
ತೋಕ್ಯೋ (東京), ಅಧಿಕೃತವಾಗಿ ತೋಕ್ಯೋ ಮಹಾನಗರ(東京都, とうきょうと, ತೋಕ್ಯೋತೊ), ಜಪಾನ್ ದೇಶದ ರಾಜಧಾನಿ ಮತ್ತು ಜಪಾನಿನ ೪೭ ರಾಜ್ಯ (都道府県, ತೊದೋಫುಕೆನ್) ಗಳಲ್ಲಿ ಅತೀದೊಡ್ಡದಾದದ್ದು. ಜಪಾನಿನ ಮುಖ್ಯ ದ್ವೀಪವಾಗಿರವ ಹೋಂಶು (本州) ವಿನ ಪೂರ್ವಭಗದಲ್ಲಿರುವ ಕಾನ್ತೋ(関東) ಉಪರಾಜ್ಯ(地方, ಚಿಹೋ)ದಲ್ಲಿ ಟೋಕ್ಯೊ ಸ್ಥಿತವಾಗಿದೆ. ಟೋಕ್ಯೊ ನಗರದ ೨೩ ವಿಶೇಷ ವಾರ್ಡ್ ಗಳಲ್ಲಿ ೧೪ ದಶಲಕ್ಷಕಿಂತಲೂ ಹೆಚ್ಚು ಜನರು ವಾಸವಾಗಿದ್ದು, ನಗರದ ಹೊರಭಾಗಗಳನ್ನು ಸೇರಿಸಿ ಒಟ್ಟು ೩೮ ದಶಲಕ್ಷಕಿಂತಲೂ ಹೆಚ್ಚು ಜನರು ತೋಕ್ಯೋ ರಾಜ್ಯದಲ್ಲಿ ವಾಸವಾಗಿದ್ದಾರೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಕರ್ನಾಟಕ ರಾಜ್ಯದಲ್ಲಿನ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯನ್ನು ಭಾರತದ ಬ್ಯಾಂಕಿಂಗ್ನ ತೊಟ್ಟಿಲು ಎಂದು ಕರೆಯಲಾಗುತ್ತದೆ. ಇದಕ್ಕೆ ಕಾರಣ ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಏಳು ಬ್ಯಾಂಕುಗಳು ಈ ಪ್ರದೇಶದಲ್ಲಿ ಹುಟ್ಟಿಕೊಂಡಿತು, ಅವುಗಳೆಂದರೆ: ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಕಾರ್ಪೊರೇಷನ್ ಬ್ಯಾಂಕ್, ವಿಜಯಾ ಬ್ಯಾಂಕ್, ಕರ್ನಾಟಕ ಬ್ಯಾಂಕ್, ವೈಶ್ಯ ಬ್ಯಾಂಕ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು . ಮೇಲಿನ ಬ್ಯಾಂಕ್ಗಳ ಪಟ್ಟಿಯಲ್ಲಿ ಮೊದಲ ಐದು ಬ್ಯಾಂಕ್ಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸ್ಥಾಪಿಸಲಾಯಿತು.
ವೈಯಕ್ತಿಕ ಮಾಹಿತಿ ಜನನ ದುರ್ಗಿ ಟುಡು (1958-06-20) 20 June 1958ಉಪರ್ಬೇಡಾ, ಒಡಿಶಾ, ಭಾರತ ರಾಜಕೀಯ ಪಕ್ಷ ಭಾರತೀಯ ಜನತಾ ಪಕ್ಷ ಸಂಗಾತಿ(ಗಳು) ಮಕ್ಕಳು * ಲಕ್ಷ್ಮಣ್ ಮುರ್ಮು (ಮರಣ: 2009) ಸಿಪುನ್ ಮುರ್ಮು (ಮರಣ: 2012) ಇತಿಶ್ರೀ ಮುರ್ಮು ವಾಸಸ್ಥಾನ ಟೆಂಪ್ಲೇಟು:Bulletedlist ಅಭ್ಯಸಿಸಿದ ವಿದ್ಯಾಪೀಠ ರಾಮಾ ದೇವಿ ಮಹಿಳಾ ವಿಶ್ವವಿದ್ಯಾಲಯ (ಬಿಎ) ವೃತ್ತಿ ರಾಜಕಾರಣಿ ಉದ್ಯೋಗ ಶಿಕ್ಷಕಿ ಸಹಿ ಜಾಲತಾಣ presidentofindia.nic.in ಮಿಲಿಟರಿ ಸೇವೆ ಪ್ರಶಸ್ತಿಗಳು ಕೆಳಗೆ ನೋಡಿ ದ್ರೌಪದಿ ಮುರ್ಮು (ಜನನ ೨೦ ಜೂನ್ ೧೯೫೮) ಒಬ್ಬ ಭಾರತೀಯ ರಾಜಕಾರಣಿ, ಇವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರಾಗಿದ್ದರು. ಅವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದ ಸ್ಥಳೀಯ, ಪರಿಶಿಷ್ಟ ಬುಡಕಟ್ಟು ಸಮುದಾಯಕ್ಕೆ ಸೇರಿದ ಮೊದಲ ವ್ಯಕ್ತಿ.
ಜಾ, ವಿ ಎಲ್ಸ್ಕರ್ ಡೆಟ್ಟೆ ಲ್ಯಾಂಡೆಟ್ (ನಾರ್ವೆ ರಾಷ್ಟ್ರಗೀತೆ)
" Ja, vi elsker dette landet " (Norwegian: [ˈjɑː viː ˈɛ̂lskə ˈɖɛ̂tːə ˈlɑ̀nːə] ; lit. ' ಹೌದು, ನಾವು ಈ ದೇಶವನ್ನು ಪ್ರೀತಿಸುತ್ತೇವೆ ' ) ಎಂಬುದು ನಾರ್ವೆಯ ರಾಷ್ಟ್ರಗೀತೆ . ಮೂಲತಃ ದೇಶಭಕ್ತಿ ಗೀತೆಯಾಗಿದ್ದ ಇದನ್ನು ೨೦ ನೇ ಶತಮಾನದ ಆರಂಭದಲ್ಲಿ ನಾರ್ವೆಯ ವಾಸ್ತವಿಕ ರಾಷ್ಟ್ರಗೀತೆ ಎಂದು ಪರಿಗಣಿಸಲಾಯಿತು, ೧೮೬೦ ರಿಂದ "ಸೋನರ್ ಅವ್ ನಾರ್ಗೆ (ಸನ್ಸ್ ಆಫ್ ನಾರ್ವೆ)" ಜೊತೆಗೆ ಬಳಸಲಾಗುತ್ತಿದೆ . ಇದನ್ನು ಅಧಿಕೃತವಾಗಿ 2019 ರಲ್ಲಿ ಅಂಗೀಕರಿಸಲಾಯಿತು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಕ್ರಿಸ್ಟಿಯಾನೋ ರೊನಾಲ್ಡೊ ಡಾಸ್ಸ್ಯಾಂಟೋಸ್ ಅವೇರೊ (ಜನನ ೦೫ ಫೆಬ್ರವರಿ ೧೯೮೫) ಒಬ್ಬ ಫ್ರಸಿದ್ದ ಪೋರ್ಚುಗೀಸ್ ಫುಟ್ಬಾಲ್ ಆಟಗಾರ. ಸ್ಪ್ಯಾನಿಷ್ ಲೀಗಿನ ರಿಯಲ್ ಮ್ಯಾಡ್ರಿಡ್ ಮತ್ತು ಪೋರ್ಚುಗಲ್ ಲಿನ ರಾಷ್ಟ್ರೀಯತಂಡಕ್ಕೆ ಆಟವಾಡುತ್ತಾನೆ. ಅವರು ಫಾರ್ವಡ್ ಮತ್ತು ಪೋರ್ಚುಗಲಿನ ನಾಯಕನನ್ನಾಗಿ ಕಾರ್ಯನಿರ್ವಹಿಸುತ್ತದೆ.೨೦೦೮ ರಲ್ಲಿ, ತನ್ನ ಮೊದಲ ಬ್ಯಾಲನ್ ಡಿ'ಓರ್ ಮತ್ತು ವರ್ಷದ ಅತ್ಯತ್ತಮ ಫಿಫಾ ವಿಶ್ವ ಆಟಗಾರ ಪ್ರಶಸ್ತಿ ದೊರಕಿದ.ನಂತರ ೨೦೧೩ ಮತ್ತು ೨೦೧೪ ರಲ್ಲಿ ಫಿಫಾ ಬ್ಯಾಲನ್ ಡಿ'ಓರ್ ಸಾಧಿಸಿದೆ.೨೦೧೫ ರಲ್ಲಿ ರೊನಾಲ್ಡೊ ಕ್ಲಬ್ ಮತ್ತು ದೇಶಕ್ಕೆ ತನ್ನ 500 ನೇ ಗೋಲನ್ನು ಒಡೆದ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸಾಮಾನ್ಯವಾಗಿ ಅಣೆಕಟ್ಟು ನಿರ್ಮಾಣದ ಉದ್ದೇಶ ನದಿ ನೀರನ್ನು ಸಂಗ್ರಹಿಸಿ ಅದನ್ನು ನೀರಾವರಿ, ಕುಡಿಯುವ ನೀರು ಪೂರೈಕೆ, ವಿದ್ಯುತ್ ಉತ್ಪಾದನೆ ಹೀಗೆ ವಿವಿಧ ಉದ್ದೇಶಗಳಿಗೆ ಬಳಸಿಕೊಳ್ಳುವುದು. ಅಣೆಕಟ್ಟು ತುಂಬಿದಾಗ ಅದರ ಕ್ರಸ್ಟ್ಗೇಟುಗಳನ್ನು ತೆರೆದು ನದಿಗೆ ನೀರು ಬಿಡಲಾಗುತ್ತದೆ. 3000 ವರ್ಷ ಹಿಂದೆ ನಿರ್ಮಿಸಿದ್ದು ಎನ್ನಲಾಗಿರುವ ಜೋರ್ಡಾನ್ನ ಜಾವಾ ಅಣೆಕಟ್ಟು ಜಗತ್ತಿನ ಅತ್ಯಂತ ಪುರಾತನ ಅಣೆಕಟ್ಟು ಎಂದು ಗುರುತಿಸಲಾಗಿದೆ.
ಟ್ಯಾರೋ(ಭವಿಷ್ಯ ಹೇಳಲು ಬಳಸುವ ಇಸ್ಪೀಟೆಲೆಗಳ ಪ್ಯಾಕ್)
ಟ್ಯಾರೋ (ಮೊದಲಿಗೆ ಇದನ್ನು ಟ್ಯಾರೋಚಿ,/ta.ʁo/, ಟ್ಯಾರಾಕ್ ಮತ್ತು ಅದೇ ವಿಧದ ಹೆಸರುಗಳಿಂದ ಗುರುತಿಸುತ್ತಿದ್ದರು) ಒಂದು ಕಾರ್ಡ್ ಗಳ ಕಟ್ಟು(ಸಾಮಾನ್ಯವಾಗಿ ಒಂದು ಕಟ್ಟಿನಲ್ಲಿ 78 ಕಾರ್ಡ್ ಗಳಿರುತ್ತವೆ); ಇದನ್ನು ಇಟಾಲಿಯನ್ ಟ್ಯಾರೋಚಿನಿ ಮತ್ತು ಫ್ರೆಂಚ್ ಟ್ಯಾರೋ ಆಟಗಳನ್ನಾಡಲು ಯೂರೋಪ್ ನ ಹಲವಾರು ಭಾಗಗಳಲ್ಲಿ ಹದಿನೈದನೆಯ ಶತಮಾನದ ಮಧ್ಯಭಾಗದಿಂದ ಬಳಸಲಾಗುತ್ತಿದೆ. 18ನೆಯ ಶತಮಾನದಿಂದ ಇಂದಿನವರೆಗೆ ಟ್ಯಾರೋಗಳನ್ನು ಆಧ್ಯಾತ್ಮವಾದಿಗಳು ಮತ್ತು ಭವಿಷ್ಯ ನುಡಿಯುವವರು ಕಣಿ ಹೇಳಲು, ಅಥವಾ ಆಧ್ಯಾತ್ಮಿಕ ಅಥವಾ ಮಾನಸಿಕ ಮಾರ್ಗಗಳನ್ನು ರೂಪಿಸಲು ಬಳಸುವುದು ವಾಡಿಕೆಯಲ್ಲಿದೆ. ಬಳಕೆಯಲ್ಲಿರುವ ಇಸ್ಪೀಟ್ ಎಲೆಗಳಲ್ಲಿರುವಂತೆಯೇ ಟ್ಯಾರೋವಿನಲ್ಲೂ ನಾಲ್ಕು ವಿಧದ ಕಾರ್ಡುಗಳು (ಸ್ಯೂಟ್ ಗಳು) ಇವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮಹೇಂದ್ರ ಸಿಂಗ್ ಧೋನಿಯವರನ್ನು ಎಮ್ ಎಸ್ ಧೋನಿ ಎಂದೂ ಸಂಕ್ಷ್ತಿಪ್ತ ರೂಪದಲ್ಲಿ ಕರೆಯಲಾಗುತ್ತದೆ. ಜನನ ಬಿಹಾರದ ರಾಂಚಿಯಲ್ಲಿ ೭ ಜುಲೈ ೧೯೮೧ರಂದು (ಈಗಿನ ಜಾರ್ಖಂಡ್) ಇವರು ಭಾರತದ ಕ್ರಿಕೆಟಿಗ ಮತ್ತು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರು. ಭಾರತದಲ್ಲಿ ಅಬ್ಬರದ ಮತ್ತು ಆಕ್ರಮಣಕಾರಿ ಬ್ಯಾಟ್ಸ್ಮ್ಯಾನ್ ಎಂದು ಗುರುತಿಸಿಕೊಂಡರೂ, ನಂತರ ಧೋನಿಯವರು ಭಾರತದ ಏಕದಿನ (ODI) ತಂಡದ ಶಾಂತ ಸ್ವಭಾವದ ನಾಯಕರಲ್ಲಿ ಒಬ್ಬರಂತೆ ಗುರ್ತಿಸಲ್ಪಡುತ್ತಾರೆ.
ಕಾರ್ತಿಕೇಯನು ಹಿಂದೂಗಳಲ್ಲಿ ಜನಪ್ರಿಯನಾಗಿರುವ ಒಬ್ಬ ಹಿಂದೂ ದೇವತೆ, ಮತ್ತು ವಿಶೇಷವಾಗಿ ದಕ್ಷಿಣ ಭಾರತ, ಸಿಂಗಾಪುರ, ಶ್ರೀಲಂಕಾ, ಮಲೇಷ್ಯಾ ಹಾಗೂ ಮಾರಿಷಸ್ಗಳಲ್ಲಿ ಪ್ರಸಿದ್ಧವಾದ ದೇವರು. ಆದರೆ ಶ್ರೀಲಂಕಾದಲ್ಲಿ, ಹಿಂದೂಗಳು ಮತ್ತು ಬೌದ್ಧ ಧರ್ಮೀಯರು ಇಬ್ಬರೂ ಕಾರ್ತಿಕೇಯನಿಗೆ ಮುಡುಪಾಗಿರುವ ಮತ್ತು ದೇಶದ ದಕ್ಷಿಣದಲ್ಲಿರುವ ಒಂದು ಅತ್ಯಂತ ಪವಿತ್ರ ಬೌದ್ಧ ಮತ್ತು ಹಿಂದೂ ಕ್ಷೇತ್ರವಾದ ಕತರಗಾಮಾ ದೇವಸ್ಥಾನವನ್ನು ಪೂಜ್ಯಭಾವದಿಂದ ಕಾಣುತ್ತಾರೆ. ಹಾಗೆಯೆ ಮಲೇಷ್ಯಾದ ಪಿನಾಂಗ್, ಕ್ವಾಲಾಲಂಪೂರ್ನ ಚೀನೀ ಜನರೂ ಸಹ ಮುರುಗನ್ನನ್ನು ಥೈಪುಸಮ್ನ ಅವಧಿಯಲ್ಲಿ ಪೂಜಿಸುತ್ತಾರೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಕರ್ನಾಟಕ ರಾಜ್ಯದ ಒಂದು ಜಿಲ್ಲೆ, ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಬಿಮ್ಮನೆ ಬಂದಳೋ ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ ಎಲ್ಲಿ ಮುಗಿಲಲಿ ಮಿಂಚಿನೋಲ್ ಕಾವೇರಿ ಹೊಳೆ ಹೊಳೆ ಹೊಳೆವಳೋ ಎಲ್ಲಿ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ ಅಲ್ಲೆ ಆ ಕಡೆ ನೋಡಲಾ ಅಲ್ಲೆ ಕೊಡಗರ ನಾಡಲಾ ಅಲ್ಲೆ ಕೊಡಗರ ಬೀಡಲಾ ಭೂಲಕ್ಷ್ಮಿ ಯು ದೇವರ ಸನ್ನಿಧಾನದಲ್ಲಿರಬೇಕೆಂಬ ಬಯಕೆಯಿಂದ ಗಂಭೀರ-ವೈಯಾರದಿಂದ ಬಂದು ನೆಲೆಸಿದ ಕ್ಷೇತ್ರ; ಭೂಮಿಯನ್ನು ತಣಿಸಿ ಜನರಿಗೆ ಅನ್ನವನ್ನೀಯುವ ಕಾವೇರಿ ಹುಟ್ಟಿ ಹರಿಯಲಾರಂಭಿಸುವ ಪ್ರದೇಶ ಕೊಡಗು ಎಂದು ಕವಿವರ್ಯ ಪಂಜೆ ಮಂಗೇಶರಾಯರು ತಮ್ಮ ಹುತ್ತರಿ ಹಾಡು ಎಂಬ ಪದ್ಯದಲ್ಲಿ ಬಣ್ಣಿಸಿದ್ದಾರೆ. ಕರ್ನಾಟಕ ರಾಜ್ಯದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಹಸಿರು ವನರಾಜಿಯಿಂದ, ತೊರೆ, ಝರಿ, ನದಿಗಳಿಂದ ಕೂಡಿದ ಜಿಲ್ಲೆ ಕೊಡಗನ್ನು ಗುರುತಿಸಲು ಇದಕ್ಕಿಂತ ಬೇರೆ ವರ್ಣನೆ ಬೇಕಾಗಿಲ್ಲ. ಕೊಡಗಿಗೆ ಕೂರ್ಗ್ (Coorg) ಎಂಬ ಆಂಗ್ಲೀಯ ಬಳಕೆಯೂ ಇದೆ.