The most-visited English Wikipedia articles, updated daily. Learn more...
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಕನ್ನಡಕವು, ಸಾಮಾನ್ಯವಾಗಿ ದೃಷ್ಟಿ ಸರಿಪಡಿಕೆ, ಕಣ್ಣಿನ ರಕ್ಷಣೆ, ಅಥವಾ ನೀಲಲೋಹಿತಾತೀತ ಕಿರಣಗಳಿಂದ ರಕ್ಷಣೆಗಾಗಿ ಕಣ್ಣುಗಳ ಮುಂಭಾಗದಲ್ಲಿ ಧರಿಸಲಾಗುವ, ಮಸೂರಗಳನ್ನು ಹೊರುವ ಚೌಕಟ್ಟು. ಆಧುನಿಕ ಕನ್ನಡಕವು ವಿಶಿಷ್ಟವಾಗಿ ಮುಗೇಣಿನ ಮೇಲಿನ ಮೆತ್ತೆ ಜೋಡಣೆಗಳು ಮತ್ತು ಕಿವಿಗಳ ಮೇಲಿರಿಸಲಾದ "ಕಣತಲೆ ತೋಳುಗಳನ್ನು" ಆಧರಿಸಿರುತ್ತದೆ. ಐತಿಹಾಸಿಕ ಪ್ರಕಾರಗಳು, ಪ್ಯಾನ್ಸ್-ನೇ, ಒಕ್ಕಣ್ಣ ಕನ್ನಡಕ, ಲಾರ್ನ್ಯೆಟ್, ಮತ್ತು ಸಿಸರ್ಸ್-ಗ್ಲಾಸಸ್‌ಗಳನ್ನು ಒಳಗೊಂಡಿವೆ.
ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆಗಳು
ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆಗಳು (ಐಐಎಮ್‌ಗಳು) ಸಂಶೋಧನೆಯನ್ನು ನಡೆಸುವ ಮತ್ತು ನಿರ್ವಹಣಾ ಕ್ಷೇತ್ರದಲ್ಲಿ ಭಾರತೀಯ ಅರ್ಥವ್ಯವಸ್ಥೆಯ ವಿವಿಧ ವಲಯಗಳಿಗೆ ಪರಾಮರ್ಶ ಸೇವೆಗಳನ್ನೂ ಒದಗಿಸುವ ಭಾರತದ ಪ್ರಧಾನ ನಿರ್ವಹಣಾ ಸಂಸ್ಥೆಗಳು. ಅವು ಭಾರತದ ವಿದ್ಯಾರ್ಥಿ ಸಮುದಾಯದಲ್ಲಿ ಲಭ್ಯವಾದ ಅತ್ಯಂತ ಚುರುಕಾದ ಮೇಧಾವಿ ಪ್ರತಿಭೆಗಳನ್ನು ಗುರುತಿಸಿ ವಿಶ್ವದಲ್ಲಿ ಲಭ್ಯವಿರುವ ಅತ್ಯುತ್ತಮ ನಿರ್ವಹಣಾ ತಂತ್ರಗಳಲ್ಲಿ ತರಬೇತಿ ನೀಡುವ, ಮತ್ತು ಅಂತಿಮವಾಗಿ ಭಾರತೀಯ ಅರ್ಥವ್ಯವಸ್ಥೆಯ ವಿವಿಧ ವಿಭಾಗಗಳನ್ನು ನಿರ್ವಹಿಸಲು ಹಾಗೂ ಮುನ್ನಡೆಸಲು ಸಮಾಜಶ್ರೇಷ್ಠ ನಿರ್ವಾಹಕರ ಒಂದು ನಿಧಿಯನ್ನು ಸೃಷ್ಟಿಸುವ ಉದ್ದೇಶದಿಂದ ಭಾರತ ಸರ್ಕಾರದಿಂದ ರಚಿಸಲ್ಪಟ್ಟವು. ಐಐಎಮ್‌ಗಳು ರಾಷ್ಟ್ರದ ನಿರ್ವಾಹಕ ಬಲದ ಬೆಳವಣಿಗೆಯಲ್ಲಿ ನಾಯಕತ್ವದ ಪಾತ್ರವನ್ನು ವಹಿಸುತ್ತವೆ ಮತ್ತು ಹೊರಹೊಮ್ಮುತ್ತಿರುವ ಕ್ಷೇತ್ರಗಳಲ್ಲಿ ಸಂಶೋಧನೆ ನಡೆಸುತ್ತವೆ.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ವೇದಗಳ ಕಾಲದ ಧರ್ಮ ( ವೇದಿಸಂ ಎಂದೂ,ವೈದಿಕ ಬ್ರಾಹ್ಮಣತ್ವ ವೆಂದೂ ಅಥವಾ, ಭಾರತೀಯ ಪುರಾತತ್ವದ ವಿಷಯಾನ್ವಿತವಾದಾಗ, ಸರಳವಾಗಿ ಬ್ರಾಹ್ಮಣತ್ವ ವೆಂದೂ ಕರೆಯಲ್ಪಡುತ್ತದೆ)ವು ಚರಿತ್ರೆಯ ಪುಟಗಳಲ್ಲಿ ಹಿಂದೂಧರ್ಮಕ್ಕಿಂತಲೂ ಪುರಾತನವಾದುದಾಗಿದೆ. ಅದರ ಆಚರಣಾವಿಧಾನ(ಪೂಜಾವಿಧಾನ)ವು ನಾಲ್ಕು ವೇದಗಳ ಮಂತ್ರಗಳ ಭಾಗಗಳಲ್ಲಿ ಬಿಂಬಿತವಾಗಿದ್ದು, ಈ ನಾಲ್ಕೂ ವೇದಗಳು ಸಂಸ್ಕೃತಭಾಷೆಯಲ್ಲಿ ಬರೆಯಲಾಗಿವೆ. ಪುರೋಹಿತವರ್ಗವು ನಿರ್ದೇಶಿಸಿದ ರೀತಿಯಲ್ಲಿ ಧಾರ್ಮಿಕ ಸಂಸ್ಕಾರಗಳು ನಡೆಸಲಾಗುತ್ತಿದ್ದವು ಹಾಗೂ ಇಂತಹ ಸಂಸ್ಕಾರಗಳಲ್ಲಿ ಆಗಾಗ್ಗೆ ಬಲಿ ನೀಡುವ ಕ್ರಮಗಳೂ ಇರುತ್ತಿದ್ದವು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಗೌರವಾನ್ವಿತ ಮೌಲಾನಾ ವಾಹಿದುದ್ದೀನ್ ಖಾನ್ (ಜನನ ೧ ಜನವರಿ ೧೯೨೫ - ಮರಣ ೨೧ ಎಪ್ರಿಲ್ ೨೦೨೧) ಒಬ್ಬ ಭಾರತೀಯ ಇಸ್ಲಾಮಿಕ್ ವಿದ್ವಾಂಸ ಮತ್ತು ಶಾಂತಿ ಕಾರ್ಯಕರ್ತರಾಗಿದ್ದು, ಇಸ್ಲಾಮಿನ ಧರ್ಮಗ್ರಂಥ ಕುರಾನಿನ ಮೇಲೆ ವ್ಯಾಖ್ಯಾನವನ್ನು ಬರೆದಿದ್ದಾರೆ ಮತ್ತು ಅದನ್ನು ಸಮಕಾಲೀನ ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ಬಾಬರಿ ಮಸೀದಿಯ ಜಾಗದ ಹಕ್ಕನ್ನು ಮುಸ್ಲಿಮರು ಹಿಂದೂಗಳಿಗೆ ಬಿಟ್ಟುಕೊಡಬೇಕೆಂದು ಭಾರತೀಯ ಮುಸ್ಲಿಮರಿಗೆ ಕರೆ ನೀಡಿದ ವಾಹಿಯುದ್ದೀನ್ ಖಾನ್, ವಿಶ್ವದ ೫೦೦ ಅತ್ಯಂತ ಪ್ರಭಾವಶಾಲಿ ಮುಸ್ಲಿಮ್ ವ್ಯಕ್ತಿಗಳು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಖಾನ್ ಅವರು ರಷ್ಯಾದ ಡೆಮಿಯುರ್ಗಸ್ ಪೀಸ್ ಇಂಟರ್ನ್ಯಾಷನಲ್ ಪ್ರಶಸ್ತಿಯನ್ನು ಪಡೆದಿದ್ದಾರೆ; ಜನವರಿ 2000 ರಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವ ಪದ್ಮಭೂಷಣ ; ಮದರ್ ತೆರೇಸಾ ಪ್ರಸ್ತುತಪಡಿಸಿದ ರಾಷ್ಟ್ರೀಯ ನಾಗರಿಕರ ಪ್ರಶಸ್ತಿ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಡೈಸಿ ಶಾ (ಜನನ : ೨೫ ಆಗಸ್ಟ್ ೧೯೮೪) ಇವರು ಭಾರತೀಯ ಚಲನಚಿತ್ರ ನಟಿ, ರೂಪದರ್ಶಿ ಮತ್ತು ನರ್ತಕಿ. ಇವರು ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ಅವರ ಸಹಾಯಕರಾಗಿ ಕೆಲಸ ಮಾಡಿದ್ದಾರೆ. ಇವರು ೨೦೧೦ ರ ದ್ವಿಭಾಷಾ ಆಕ್ಷನ್ ಥ್ರಿಲ್ಲರ್ ವಂದೇ ಮಾಥರಂನಲ್ಲಿ ವಿಶೇಷ ಪಾತ್ರದಲ್ಲಿ ಅತಿಥಿಯಾಗಿ ಪಾದಾರ್ಪಣೆ ಮಾಡಿದರು, ಆದರೆ ೨೦೧೧ ರ ಕನ್ನಡ ಚಲನಚಿತ್ರ ಬಾಡಿಗಾರ್ಡ್ ನಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದರು.ನಂತರ ಅವರು ೨೦೧೪ ರ ಬಾಲಿವುಡ್ ಚಲನಚಿತ್ರ ಜೈ ಹೋ ಚಿತ್ರದಲ್ಲಿ ಸಲ್ಮಾನ್ ಖಾನ್ ಎದುರು ಕಾಣಿಸಿಕೊಂಡರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ವಿಧಾನಸಭೆಯ ಕ್ಷೇತ್ರಗಳ ಪಟ್ಟಿ
ಕರ್ನಾಟಕ ವಿಧಾನಸಭೆಯು ಭಾರತದ ದೇಶದ ಕರ್ನಾಟಕ ರಾಜ್ಯದ ದ್ವಿಸದಸ್ಯೀಯ ಶಾಸಕಾಂಗ ಕೆಳಮನೆಯಾಗಿದೆ.ಕರ್ನಾಟಕವು ಭಾರತದ ಎರಡು ಸದನಗಳನ್ನು ಒಳಗೊಂಡ ಆರು ರಾಜ್ಯಗಳಲ್ಲಿ ಒಂದಾಗಿದೆ. ಈ ಎರಡು ಸದನಗಳೆಂದರೆ ವಿಧಾನ ಸಭಾ (ಕೆಳಮನೆ) ಮತ್ತು ವಿಧಾನ ಪರಿಷತ್ (ಮೇಲಿನ ಮನೆ). ಬೇಸಿಗೆಯಲ್ಲಿ, ವಿಧಾನಸಭೆಯು ರಾಜ್ಯದ ರಾಜಧಾನಿಯಾದ ಬೆಂಗಳೂರು, ಚಳಿಗಾಲದಲ್ಲಿ ರಾಜ್ಯದ ಉತ್ತರ ಭಾಗದಲ್ಲಿರುವ ಬೆಳಗಾವಿಯಲ್ಲಿ ನಡೆಯುತ್ತದೆ ಅವಧಿಗೆ ಮೊದಲು ವಿಸರ್ಜಿಸದಿದ್ದರೆ ವಿಧಾನಸಭೆಯ ಪೂರ್ಣಾವಧಿ ಐದು ವರ್ಷಗಳು.
ಮಹಾಲಕ್ಷ್ಮಿ ದೇವಸ್ಥಾನ, ಕೊಲ್ಲಾಪುರ
ಅಂಬಾಬಾಯಿ ದೇವಾಲಯ (ಮಹಾಲಕ್ಷ್ಮಿ ದೇವಸ್ಥಾನ ಎಂದೂ ಕರೆಯುತ್ತಾರೆ) ಲಕ್ಷ್ಮಿಗೆ ಸಮರ್ಪಿತವಾದ ಹಿಂದೂ ದೇವಾಲಯವಾಗಿದೆ. ಮಹಾವಿಷ್ಣುವಿನ ಜೊತೆಗೆ ಸರ್ವೋಚ್ಚ ಮಾತೆ ಮಹಾಲಕ್ಷ್ಮಿಯಾಗಿ ಅಲ್ಲಿ ನೆಲೆಸಿದ್ದಾಳೆ ಎಂದು ನಂಬಲಾಗಿದೆ ಮತ್ತು ಮಹಾಲಕ್ಷ್ಮಿಯನ್ನು ಸ್ಥಳೀಯರು ಅಂಬಾಬಾಯಿ ಎಂದು ಪೂಜಿಸುತ್ತಾರೆ. ಮಹಾಲಕ್ಷ್ಮಿಯು ತ್ರಿದೇವಿಯರ ಭಾಗವಾಗಿ, ಮೂರು ಸರ್ವೋಚ್ಚ ದೇವತೆಗಳಾದ ಮಹಾಕಾಳಿ, ಮಹಾಲಕ್ಷ್ಮಿ ಮತ್ತು ಮಹಾಸರಸ್ವತಿಯರನ್ನು ಸಂಕೇತಿಸುತ್ತಿದ್ದಾಳೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ರಾಮಾಯಣದಲ್ಲಿ ಬರುವ ರಾಕ್ಷಸನ ಪಾತ್ರ. ರಾಮ,ಲಕ್ಷ್ಮಣರು ವಿಶ್ವಾಮಿತ್ರರಲ್ಲಿ ವಿದ್ಯಾರ್ಜನೆ ಮಾಡುತ್ತಿರುವಾಗ ಸುಬಾಹು ಮತ್ತು ಮಾರೀಚನೆಂಬ ರಾಕ್ಷಸರು ವಿಶ್ವಾಮಿತ್ರರ ಹೋಮ-ಯಾಗಾದಿಗಳಲ್ಲಿ ವಿಘ್ನ ತರುತ್ತಿರುತ್ತಾರೆ. ಆಗ ವಿಶ್ವಾಮಿತ್ರರ ಅಪ್ಪಣೆಯ ಮೇರೆಗೆ ರಾಮ,ಲಕ್ಷ್ಮಣರು ಈ ರಾಕ್ಷಸರ ಮೇಲೆ ದಾಳಿ ಮಾಡಿದಾಗ ಸುಬಾಹು ಮೃತನಾಗುತ್ತಾನೆ ಮತ್ತು ಮಾರೀಚ ಅನಾಮಧೇಯ ದ್ವೀಪವೊಂದರಲ್ಲಿ ಬಚ್ಚಿಟ್ಟುಕೊಳ್ಳುತ್ತಾನೆ.ಮುಂದೆ ರಾಮ-ಲಕ್ಷ್ಮಣ-ಸೀತೆಯರು ಅರಣ್ಯದಲ್ಲಿ ವನವಾಸದಲ್ಲಿದ್ದಾಗ ಇದೇ ಮಾರೀಚ ರಾವಣನಿಗೆ ಸಹಾಯಮಾಡಲೆಂದು ಬಂಗಾರ ವರ್ಣದ ಜಿಂಕೆಯಾಗಿ ಸೀತೆಯ ಕುಟೀರದ ಮುಂದೆ ಸುಳಿದಾಡತೊಡಗಿ ಸೀತೆಯ ಮನಸೂರೆಗೊಳ್ಳುತ್ತಾನೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಎರ್ನೋ ರೂಬಿಕ್ (ಜುಲೈ ೧೩, ೧೯೪೪) ಹಂಗೇರಿಯನ್ ಸಂಶೋಧಕ, ವಾಸ್ತುಶಿಲ್ಪಿ ಮತ್ತು ವಾಸ್ತುಶಿಲ್ಪದ ಪ್ರಾಧ್ಯಾಪಕ. ರೂಬಿಕ್ಸ್ ಕ್ಯೂಬ್ (೧೯೭೪), ರೂಬಿಕ್ಸ್ ಮ್ಯಾಜಿಕ್, ರೂಬಿಕ್ಸ್ ಮ್ಯಾಜಿಕ್: ಮಾಸ್ಟರ್ ಎಡಿಷನ್ ಮತ್ತು ರೂಬಿಕ್ಸ್ ಸ್ನೇಕ್ ಸೇರಿದಂತೆ ಯಾಂತ್ರಿಕ ಒಗಟುಗಳ ಆವಿಷ್ಕಾರಕ್ಕೆ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ರೂಬಿಕ್ ಕ್ಯೂಬ್ ಮತ್ತು ಅವನ ಇತರ ಒಗಟುಗಳನ್ನು ಕಂಡುಹಿಡಿದಿದ್ದಕ್ಕಾಗಿ ರೂಬಿಕ್ ಪ್ರಸಿದ್ಧನಾಗಿದ್ದರೂ, ಅವನ ಇತ್ತೀಚಿನ ಕೆಲಸವು ಶಿಕ್ಷಣದಲ್ಲಿ ವಿಜ್ಞಾನದ ಪ್ರಚಾರವನ್ನು ಒಳಗೊಂಡಿರುತ್ತದೆ.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಆಲೂರು ವೆಂಕಟ ರಾವ್ (ಕೆಲವೊಮ್ಮೆ ಆಲೂರು ವೆಂಕಟ ರಾಯ ಎಂದೂ ಕರೆಯುತ್ತಾರೆ) (೧೨ಜುಲೈ ೧೮೮೦ – ೨೫ಫೆಬ್ರವರಿ ೧೯೬೩) ಒಬ್ಬ ಭಾರತೀಯ ಇತಿಹಾಸಕಾರ, ಬರಹಗಾರ ಮತ್ತು ಪತ್ರಕರ್ತ. ಪ್ರತ್ಯೇಕ ಕರ್ನಾಟಕ ರಾಜ್ಯದ ಉದ್ದೇಶಕ್ಕಾಗಿ ಅವರು ನೀಡಿದ ಕೊಡುಗೆಗಾಗಿ ಅವರನ್ನು ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ಕುಲಪುರೋಹಿತ ( ಕನ್ನಡ ಕುಟುಂಬದ ಪ್ರಧಾನ ಅರ್ಚಕ ) ಎಂದು ಪೂಜಿಸುತ್ತಾರೆ. ಮೈಸೂರು, ಬಾಂಬೆ ಪ್ರೆಸಿಡೆನ್ಸಿ ಮತ್ತು ನಿಜಾಮರ ಹೈದರಾಬಾದ್‌ನ ಕನ್ನಡ ಮಾತನಾಡುವ ಜನರಿಗಾಗಿ ರಾಜ್ಯ ರಚನೆಗೆ ಬೆಂಬಲವಾಗಿ ಕರ್ನಾಟಕ ಏಕೀಕರಣ ಚಳುವಳಿಯನ್ನು ಕೈಗೊಂಡಿದ್ದಕ್ಕಾಗಿ ಅವರು ಪ್ರಸಿದ್ಧರಾದ್ದಾರೆ.
ಉತ್ತರಾಖಂಡ (ಹಿಂದಿಯಲ್ಲಿ: उत्तराखण्ड ಅಥವಾ उत्तराखंड),(ಸಂಸ್ಕೃತದಲ್ಲಿ: उत्तराखण्डराज्यं ಅಥವಾ उत्तराखंडराज्यम्)( ಮೊದಲಿನ ಹೆಸರು ಉತ್ತರಾಂಚಲ ) ರಾಜ್ಯವನ್ನು ಭಾರತ ಗಣರಾಜ್ಯದ ೨೭ನೆಯ ರಾಜ್ಯವನ್ನಾಗಿ ೨೦೦೦ರ ನವೆಂಬರ್ ೯ ರಂದು ರಚಿಸಲಾಯಿತು. ಉತ್ತರಪ್ರದೇಶ ರಾಜ್ಯದ ಹಿಮಾಲಯಪರ್ವತ ಪ್ರಾಂತ್ಯವನ್ನು ಬೇರಾಗಿಸಿ ಉತ್ತರಾಖಂಡ ರಾಜ್ಯವನ್ನು ಅಸ್ತಿತ್ವಕ್ಕೆ ತರಲಾಗಿದೆ. ರಾಜ್ಯದ ಉತ್ತರಕ್ಕೆ ಟಿಬೆಟ್, ಪೂರ್ವಕ್ಕೆ ನೇಪಾಲ, ದಕ್ಷಿಣ ಹಾಗೂ ಪಶ್ಚಿಮಕ್ಕೆ ಉತ್ತರಪ್ರದೇಶ ರಾಜ್ಯ ಇವೆ.
ಶ್ಯಾಮ್ ಪ್ರಸಾದ್ ಮುಖರ್ಜಿ (ಜುಲೈ ೬, ೧೯೦೧ - ಜೂನ್ ೨೩, ೧೯೫೩) ಭಾರತೀಯ ಜನಸಂಘ ರಾಜಕೀಯ ಪಕ್ಷದ ಸ್ಥಾಪಕ. ಶ್ಯಾಮ ಪ್ರಸಾದ್ ಮುಖರ್ಜಿ (6 ಜುಲೈ 1901 - 23 ಜೂನ್ 1953) ಒಬ್ಬ ಭಾರತೀಯ ರಾಜಕಾರಣಿ, ನ್ಯಾಯವಾದಿ ಮತ್ತು ಶಿಕ್ಷಣತಜ್ಞರಾಗಿದ್ದರು, ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರ ಸಚಿವ ಸಂಪುಟದಲ್ಲಿ "ಕೈಗಾರಿಕೋದ್ಯಮ ಮತ್ತು ಸರಬರಾಜು(ವಾಣಿಜ್ಯೋದ್ಯಮ) ಸಚಿವರಾಗಿ ಕಾರ್ಯನಿರ್ವಹಿಸಿದರು. ಅವರು ಕಾಂಗ್ರೆಸ್ ಪಕ್ಷವಲ್ಲದಿದ್ದರೂ, ಅವರ ಪ್ರತಿಭೆಯನ್ನು ಪರಿಗಣಿಸಿ, ಅವರನ್ನು ನೆಹರು ಮಂತ್ರಿಮಂಡಲಕ್ಕೆ ಸೇರಿಸಿಕೊಂಡಿದ್ದರು.
ಆದಿಯೋಗಿ ಪ್ರತಿಮೆಯು ೩೪-ಮೀಟರ್ ಎತ್ತರ (೧೧೨ ಅಡಿ), ೪೫-ಮೀಟರ್ ಉದ್ದ (೧೪೭ ಅಡಿ) ಮತ್ತು ೨೫-ಮೀಟರ್ ಅಗಲದ (೮೨ ಅಡಿ) ಶಿವನ ತಿರುನಾಮಮ್ ಹೊಂದಿರುವ ಉಕ್ಕಿನ ಪ್ರತಿಮೆಯಾಗಿದ್ದು, ತಮಿಳುನಾಡಿನ ಕೊಯಮತ್ತೂರಿನಲ್ಲಿದೆ. ಇದು ವಿಶ್ವದ "ಅತಿದೊಡ್ಡ ಬಸ್ಟ್ ಸ್ಕಲ್ಪ್ಚರ್" ಎಂದು ಗಿನ್ನೆಸ್ ವಿಶ್ವ ದಾಖಲೆಗಳಿಂದ ಗುರುತಿಸಲ್ಪಟ್ಟಿದೆ. ಇಶಾ ಫೌಂಡೇಶನ್‌ನ ಸಂಸ್ಥಾಪಕ ಮತ್ತು ಮುಖ್ಯಸ್ಥರಾದ ಸದ್ಗುರು ಜಗ್ಗಿ ವಾಸುದೇವ್ ವಿನ್ಯಾಸಗೊಳಿಸಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಭೋಗ ನಂದೀಶ್ವರ ದೇವಾಲಯವು ಕರ್ನಾಟಕ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟ (ಅಥವಾ ನಂದಿದುರ್ಗ)ದ ಬುಡದಲ್ಲಿರುವ, ನಂದಿ ಗ್ರಾಮದಲ್ಲಿ ಇರುವ ಶಿವನ ದೇವಾಲಯವಾಗಿದೆ. ಈ ಸಂಕೀರ್ಣದಲ್ಲಿರುವ ಮೂಲ ದೇವಾಲಯವು ಕರ್ನಾಟಕದ ಅತ್ಯಂತ ಹಳೆಯ ದೇವಾಲಯಗಳಲ್ಲಿ ಒಂದೆಂದು ಗುರುತಿಸಲ್ಪಟ್ಟಿದೆ, ಇದು 9 ನೇ ಶತಮಾನದ ಆರಂಭದ್ದಾಗಿದೆ. ಭಾರತದ ಪುರಾತತ್ವ ಇಲಾಖೆಯ ಪ್ರಕಾರ ಹಳೆಯ ಶಾಸನಗಳಲ್ಲಿ ಪ್ರಕಾರ, ಈ ಶಿವ ದೇವಾಲಯದ ನಿರ್ಮಾಣದ ಉಲ್ಲೇಖವು ನೊಳಂಬ ರಾಜವಂಶದ ದೊರೆ ನೊಳಂಬಾಧಿರಾಜ ಮತ್ತು ರಾಷ್ಟ್ರಕೂಟ ದೊರೆ ಮೂರನೇ ಗೋವಿಂದನ ಕ್ರಿ.ಶ.