The most-visited English Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಭಾರತದ ರಾಷ್ಟ್ರಪತಿಯ ನಂತರ ಭಾರತದ ಉಪ ರಾಷ್ಟ್ರಪತಿಯರು ಭಾರತ ಸರ್ಕಾರದಲ್ಲಿ ಎರಡನೇ ಅತ್ಯುನ್ನತ ಸಾಂವಿಧಾನಿಕ ಕಚೇರಿಯಾಗಿದ್ದಾರೆ. ಭಾರತದ ಸಂವಿಧಾನದ 63 ನೇ ವಿಧಿಗೆ ಅನುಸಾರವಾಗಿ, ರಾಜೀನಾಮೆ, ತೆಗೆದುಹಾಕುವಿಕೆ, ಮರಣ, ದೋಷಾರೋಪಣೆ ಅಥವಾ ಅಧ್ಯಕ್ಷರು ತಮ್ಮ ಕಾರ್ಯಗಳನ್ನು ನಿರ್ವಹಿಸಲು ಅಸಮರ್ಥತೆಯಿಂದಾಗಿ ಅನಿಶ್ಚಿತತೆ ಉಂಟಾದಾಗ ಉಪ ರಾಷ್ಟ್ರಪತಿಯರು ರಾಷ್ಟ್ರಪತಿಯರ ಕಾರ್ಯಗಳನ್ನು ನಿರ್ವಹಿಸುತ್ತಾರೆ. ಅವರು ಭಾರತದ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರೂ ಆಗಿದ್ದಾರೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಸಾಮಾನ್ಯವಾಗಿ ಅಣೆಕಟ್ಟು ನಿರ್ಮಾಣದ ಉದ್ದೇಶ ನದಿ ನೀರನ್ನು ಸಂಗ್ರಹಿಸಿ ಅದನ್ನು ನೀರಾವರಿ, ಕುಡಿಯುವ ನೀರು ಪೂರೈಕೆ, ವಿದ್ಯುತ್ ಉತ್ಪಾದನೆ ಹೀಗೆ ವಿವಿಧ ಉದ್ದೇಶಗಳಿಗೆ ಬಳಸಿಕೊಳ್ಳುವುದು. ಅಣೆಕಟ್ಟು ತುಂಬಿದಾಗ ಅದರ ಕ್ರಸ್ಟ್‌ಗೇಟುಗಳನ್ನು ತೆರೆದು ನದಿಗೆ ನೀರು ಬಿಡಲಾಗುತ್ತದೆ. 3000 ವರ್ಷ ಹಿಂದೆ ನಿರ್ಮಿಸಿದ್ದು ಎನ್ನಲಾಗಿರುವ ಜೋರ್ಡಾನ್‌ನ ಜಾವಾ ಅಣೆಕಟ್ಟು ಜಗತ್ತಿನ ಅತ್ಯಂತ ಪುರಾತನ ಅಣೆಕಟ್ಟು ಎಂದು ಗುರುತಿಸಲಾಗಿದೆ.
ವಿಶ್ವ ಸ್ತನ್ಯಪಾನ ವಾರ (ಡಬ್ಲ್ಯೂಬಿಡಬ್ಲ್ಯೂ) ವಾರ್ಷಿಕ ಆಚರಣೆಯಾಗಿದ್ದು , ಇದನ್ನು ಪ್ರತಿವರ್ಷ ಆಗಸ್ಟ್ 1 ರಿಂದ ಆಗಸ್ಟ್ 7 ರವರೆಗೆ 120 ಕ್ಕೂ ಹೆಚ್ಚು ದೇಶಗಳಲ್ಲಿ ನಡೆಸಲಾಗುತ್ತದೆ.WBW ವೆಬ್ಸೈಟ್ನ ಅಂಕಿಅಂಶಗಳ ಪ್ರಕಾರ, ಪ್ರಪಂಚದ ಸ್ತನ್ಯಪಾನ ಸಪ್ತಾಹ 2010 ರ ವರೆಗೆ 488 ಸಂಘಟನೆಗಳು ಮತ್ತು 406,620 ಜನ ಭಾಗವಹಿಸುವವರೊಂದಿಗೆ 79 ದೇಶಗಳಲ್ಲಿ 540 ಕಾರ್ಯಕ್ರಮಗಳು ನಡೆದಿವೆ.ಸ್ತನ್ಯಪಾನ ಕ್ರಿಯೆಗಾಗಿ ವಿಶ್ವ ಅಲೈಯನ್ಸ್ , WHO ಮತ್ತು UNICEF, WBW ಯ ಸಂಘಟಿತವಾಗಿದ್ದು, ಮಗು ಜನಿಸಿದ ಮೊದಲ ಆರು ತಿಂಗಳ ಕಾಲ ವಿಶೇಷ ಎದೆ ಹಾಲುಣಿಸುವಿಕೆಯನ್ನು ಉತ್ತೇಜಿಸುವ ಗುರಿಯೊಂದಿಗೆ 1991ರಲ್ಲಿ ಆರಂಭಿಸಲಾಯಿತು ಸ್ತನ್ಯಪಾನ ,ಮಹತ್ವದ ಪೋಷಕಾಂಶಗಳನ್ನು ಒದಗಿಸುತ್ತದೆ, ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ನ್ಯುಮೋನಿಯಾ ,ಪ್ರಾಣಾಂತಿಕ ರೋಗಗಳಿಂದ ರಕ್ಷಣೆ ಮತ್ತು ಬೆಳವಣಿಗೆಯನ್ನು ಅಭಿವೃದ್ಧಿಪಡಿಸುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಸ್ತನ್ಯಪಾನ (ನರ್ಸಿಂಗ್) ಎಂದರೆ ಅಮ್ಮಂದಿರು ಸ್ತನದಿಂದ ಶಿಶುಗಳು ಮತ್ತು ಚಿಕ್ಕ ಮಕ್ಕಳಿಗೆ ಹಾಲನ್ನು ಉಣಿಸುವುದು. ಸಸ್ತನಿ ವರ್ಗದಲ್ಲಿ ಹಾಲು ತಯಾರಿ ಹಾಗೂ ಕುಡಿಸುವಿಕೆ ಅತ್ಯಂತ ವಿಶಿಷ್ಟವಾದುದು. ಸ್ತನ್ಯಪಾನವು ಮಗುವಿನ ಜೀವನದಲ್ಲಿ ಜನಿಸಿದ ಮೊದಲ ಗಂಟೆಯೊಳಗೆ ಪ್ರಾರಂಭವಾಗುತ್ತದೆ ಮತ್ತು ಹಲವುವೇಳೆ ಮಗುವು ಬಯಸಿದಷ್ಟು ಕಾಲ ಮುಂದುವರಿಯುತ್ತದೆ ಎಂದು ಆರೋಗ್ಯ ವೃತ್ತಿಪರರು ಶಿಫಾರಸು ಮಾಡುತ್ತಾರೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಕಬಿನಿ ನದಿಯು ದಕ್ಷಿಣ ಭಾರತದಲ್ಲಿ ಕಾವೇರಿ ನದಿಯ ಪ್ರಮುಖ ಉಪನದಿಗಳಲ್ಲಿ ಒಂದಾಗಿದೆ. ಇದು ಪನಮರಮ್ ನದಿ ಮತ್ತು ಮನಂತವಾಡಿ ನದಿಯ ಸಂಗಮದಿಂದ ಕೇರಳ ರಾಜ್ಯದ ಕೋಯಿಕ್ಕೋಡ್ ಜಿಲ್ಲೆಯ ಕವಿಲುಂಪಾರ ಬಳಿ ಹುಟ್ಟುತ್ತದೆ. ಇದು ವಯನಾಡು ಜಿಲ್ಲೆಯ ಮೂಲಕ ಪೂರ್ವಾಭಿಮುಖವಾಗಿ ಹರಿದು ಕರ್ನಾಟಕದ ಮೈಸೂರು ಜಿಲ್ಲೆಯನ್ನು ಪ್ರವೇಶಿಸಿ ಕರ್ನಾಟಕದ ಮೈಸೂರು ಜಿಲ್ಲೆಯಲ್ಲಿ ಕಾವೇರಿ ನದಿಯನ್ನು ಸೇರುತ್ತದೆ .
ಹೇಬಿಯಸ್ ಕಾರ್ಪಸ್ (ಆಸಾಮಿ ಹಾಜರಿ ಹುಕುಂ) pronounced /ˌheɪbiːəs ˈkɔrpəs/ಎಂಬುದು, ಲ್ಯಾಟಿನ್ : “(We command) that you have the body”) ಇದು ಒಂದು ರಿಟ್ ಅರ್ಜಿ ಅಥವಾ ಕಾನೂನು ಪ್ರಕ್ರಿಯೆಯಾಗಿದ್ದು. ಇದರಿಂದ ವ್ಯಕ್ತಿಯೊಬ್ಬನು ಅನ್ಯಾಯಕ್ಕೆ ಅಥವಾ ಇನ್ನೊಬ್ಬ ವ್ಯಕ್ತಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಲು ಅಥವಾ ಅದರಿಂದ ಹೊರಬರಲು ಇದನ್ನು ಬಳಸಿಕೊಳ್ಳಬಹುದಾಗಿದೆ. ನ್ಯಾಯ ವ್ಯವಸ್ಥೆಯಿಂದ ಅಥವಾ ವ್ಯಕ್ತಿಗಳಿಂದ ಕಷ್ಟಕ್ಕೀಡಾಗುವುದನ್ನು ಈ ಹೇಬಿಯಸ್ ಕಾರ್ಪಸ್ ದಾವೆಯು ತಪ್ಪಿಸುತ್ತದೆ.
ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ, ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್‌ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್‌ಗಳನ್ನು ನಿರ್ವಹಿಸಬಹುದು.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
"ಹಡಪದ ಅಪ್ಪಣ್ಣ" ನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು "ಹಡಪದ" ಸಮಾಜದವರಾಗಿದ್ದು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರಿಗೆ ಕನ್ನಡಿಯಾಗಿದೆಯೆಂದರೆ ತಪ್ಪಾಗಲಾರದು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಅಲ್ಲೂರಿ ಸೀತಾರಾಮ ರಾಜು (ಜುಲೈ ೪ , ೧೮೯೭ - ಮೇ ೭, ೧೯೨೪) ಭಾರತದ ಸ್ವಾತಂತ್ರ್ಯ ಕ್ಕಾಗಿ, ಆದಿವಾಸಿ ಗುಡ್ಡಗಾಡು ಜನಾಂಗಗಳ ಹಕ್ಕುಗಳಿಗೆ ತನ್ನ ಪ್ರಾಣವನ್ನು ತೆತ್ತ ಕ್ರಾಂತಿಕಾರಿ ಹೋರಾಟಗಾರ. ಅವರು 'ಮಾನ್ಯಂ ವೀರುಡು - ಅತ್ಯಂತ ಗೌರವಯುತರಾದ ವೀರರು' ಎಂದು ದೇಶದಲ್ಲಿ ಸ್ಮರಣೀಯರಾಗಿದ್ದಾರೆ. ಭಾರತದ ನೆಲದಲ್ಲಿ ತಮ್ಮದೇ ಆದ ಇತಿಹಾಸ ಮತ್ತು ಸಂಸ್ಕೃತಿಯನ್ನು ಕಾಪಾಡಿಕೊಂಡು ಬಂದಿರುವ, ಈ ನೆಲದ ನಿಜ-ವಾರಸುದಾರರೆಂದು ಹೇಳಲಾಗುವ ಆದಿವಾಸಿಗಳ ಹಕ್ಕು ಕುರಿತಂತೆ ಈ ದೇಶದಲ್ಲಿ ಪ್ರಥಮ ಬಾರಿಗೆ ಧ್ವನಿ ಎತ್ತಿದ್ದು ಆಂಧ್ರ ಪ್ರದೇಶದ ಉತ್ತರ ತೆಲಂಗಾಣದ ಅಲ್ಲೂರಿ ಸೀತಾರಾಮ ರಾಜು ಎಂಬ ಒಬ್ಬ ಅಪ್ರತಿಮ ನಾಯಕ ಮತ್ತು ದೇಶಭಕ್ತ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಭಾರತದ ಗಡಿಗಳು ಮತ್ತು ನರೆ ರಾಜ್ಯಗಳು
ಭಾರತವು 1947ರಲ್ಲಿ ಸ್ವತಂತ್ರ ರಾಷ್ಟ್ರವಾದ ನಂತರ ಅದರ ನೆರೆಹೊರೆಯ ಸಾರ್ವಭೌಮ ರಾಷ್ಟ್ರಗಳಾದ ಅಫ್ಘಾನಿಸ್ತಾನ್, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನಗಳೊಂದಿಗೆ ಅಂತರರಾಷ್ಟ್ರೀಯ ಭೂ ಗಡಿಗಳನ್ನು ಹೊಂದಿದೆ. ಕಾಶ್ಮೀರ ವಿವಾದದ ಪರಿಣಾಮ ಪಾಕಿಸ್ತಾನದೊಂದಿಗೆ ಗಡಿ ನಿಯಂತ್ರಣ ನಿಯಂತ್ರಣ (ಎಲ್‌ಒಸಿ) ರೇಖೆಯನ್ನು ಹೊಂದಿದೆ. ಈ ಎಲ್ಲಾ ಗಡಿ ಮತ್ತು ನಿಯಂತ್ರಣ (ಎಲ್‌ಒಸಿ) ರೇಖೆಯ ರಕ್ಷಣೆಯ ಹೊಣೆಯನ್ನೂ ಹೊಂದಿದೆ.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ಮಹಾನಗರಪಾಲಿಕೆಗಳು ಮಹಾನಗರಗಳ ಆಡಳಿತವನ್ನು ನಡೆಸುತ್ತವೆ. ಕರ್ನಾಟಕ ಮಹಾನಗರ ಪಾಲಿಕೆ ಕಾಯ್ದೆಯಂತೆ ಒಂದು ನಗರ ಮಹಾನಗರಪಾಲಿಕೆ ದರ್ಜೆಗೇರಲು ಪೂರ್ಣ ನಗರ ಪ್ರದೇಶದಲ್ಲಿ ೨ ಲಕ್ಷ ಜನಸಂಖ್ಯೆ ಮತ್ತು ಸುತ್ತಲಿನ ಪ್ರದೇಶದಲ್ಲಿ ೧ ಲಕ್ಷ ಜನಸಂಖ್ಯೆ ಅಂದರೆ ಒಟ್ಟಾರೆ ೩ ಲಕ್ಷ ಜನಸಂಖ್ಯೆ ಇರಬೇಕು. ನಗರದ ಕಂದಾಯ ೬ ಕೋಟಿ ರೂಪಾಯಿಗಳಿಗೂ ಮಿಕ್ಕಿರಬೇಕು ಮತ್ತು ಜನಸಾಂದ್ರತೆ ಪ್ರತಿ ಚದರ ಕಿ.ಮಿ.ಗೆ ೩೦೦೦ ಮಿಕ್ಕಿರಬೇಕು.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು
ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.