The most-visited English Wikipedia articles, updated daily. Learn more...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಬೋಡೊ (बर ʼಅಥವಾ बड़ो [bɔɽo]), ಬೋರೊ ಎಂದು ಸಹ ನಿರೂಪಿಸಲಾಗಿದೆ ಇದು ಸಿನೋ-ಟಿಬೆಟಿಯನ್ ಭಾಷೆಯಾಗಿದ್ದು, ಪ್ರಾಥಮಿಕವಾಗಿ ಈಶಾನ್ಯ ಭಾರತದ ಬೋರೋಸ್ ಮತ್ತು ನೆರೆಯ ರಾಷ್ಟ್ರಗಳಾದ ನೇಪಾಳ ಮತ್ತು ಬಾಂಗ್ಲಾದೇಶದಲ್ಲಿ ಮಾತನಾಡುತ್ತಾರೆ. ಇದು ಭಾರತದ ಅಸ್ಸಾಂ ರಾಜ್ಯದ ಅಧಿಕೃತ ಭಾಷೆಯಾಗಿದ್ದು, ಪ್ರಧಾನವಾಗಿ ಬೋಡೋಲ್ಯಾಂಡ್ ಪ್ರಾದೇಶಿಕ ಪ್ರದೇಶದಲ್ಲಿ ಮಾತನಾಡುತ್ತಾರೆ. ಇದು ಭಾರತದ ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಪಟ್ಟಿ ಮಾಡಲಾದ ಇಪ್ಪತ್ತೆರಡು ಭಾಷೆಗಳಲ್ಲಿ ಒಂದಾಗಿದೆ.
ಕೇಂದ್ರ ಮತ್ತು ರಾಜ್ಯಗಳ ನಡುವೆ ಶಾಸಕಾಂಗ ಅಧಿಕಾರಗಳ ವಿತರಣೆಯ ವಿಷಯದ ಬಗ್ಗೆ ಭಾರತದಲ್ಲಿನ ಸಾಂವಿಧಾನಿಕ ನಿಬಂಧನೆಗಳನ್ನು ಹಲವಾರು ಲೇಖನಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿದೆ; ಈ ವಿಷಯದಲ್ಲಿ ಅತ್ಯಂತ ಮುಖ್ಯವಾದುದು ವಿಶೇಷವಾಗಿ ಭಾರತದ ಸಂವಿಧಾನದ 245 ಮತ್ತು 246 ನೇ ವಿಧಿಗಳ ಅಡಿಯಲ್ಲಿ. ಭಾರತದ ಸಂವಿಧಾನದ ಏಳನೇ ವೇಳಾಪಟ್ಟಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಅಧಿಕಾರ ಮತ್ತು ಕಾರ್ಯಗಳ ಹಂಚಿಕೆಯನ್ನು ವ್ಯಾಖ್ಯಾನಿಸುತ್ತದೆ ಮತ್ತು ನಿರ್ದಿಷ್ಟಪಡಿಸುತ್ತದೆ. ಇದು ಮೂರು ಪಟ್ಟಿಗಳನ್ನು ಒಳಗೊಂಡಿದೆ; ಅಂದರೆ 1) ಕೇಂದ್ರ ಪಟ್ಟಿ, 2) ರಾಜ್ಯ ಪಟ್ಟಿ ಮತ್ತು 3) ಸಮವರ್ತಿ ಪಟ್ಟಿ.
ಕೆಲ ಪರಿಸ್ಥಿತಿಗಳಲ್ಲಿ ಒಂದು ದೇಶದ ಸರ್ಕಾರವು ತನ್ನ ಕೆಲವು ನಿಯಮಿತ ಕಾರ್ಯಗಳನ್ನು ಸ್ಥಗಿತಗೊಳಿಸಿ ಪ್ರಜೆಗಳ ವ್ಯವಹಾರಗಳ ಮೇಲೆ ಕೆಲವು ನಿಯಮಗಳನ್ನು ಅಥವ ನಿಯಂತ್ರಣಗಳನ್ನು ತರಬಹುದು. ಇಂತಃ ಪರಿಸ್ಥಿತಿಗಳಿಗೆ ತುರ್ತು ಪರಿಸ್ಥಿತಿ ಎಂದು ಹೆಸರು. ಈ ಘೋಷಣೆಯು ನೈಸರ್ಗಿಕ ವಿಕೋಪಗಳಿಗಿರಬಹುದು, ಯುದ್ಧಕಾಲ ಅಥವ ಪರದೇಶದ ಆಕ್ರಮಣದಿಂದಿರಬಹುದು ಅಥವ ಸಾರ್ವಜನಿಕ ಅಶಾಂತಿಯ ಪರಿಸ್ಥಿತಿಗಾಗಿರಬಹುದು.
ರಶ್ಮಿಕಾ ಮಂದಣ್ಣ (ಜನನ: ೫ ಏಪ್ರಿಲ್ ೧೯೯೬), ಒಬ್ಬ ಭಾರತೀಯ ರೂಪದರ್ಶಿ ಹಾಗೂ ಕನ್ನಡ ಚಿತ್ರನಟಿ. ತನ್ನ ವೃತ್ತಿಜೀವನವನ್ನು ಒಬ್ಬ ರೂಪದರ್ಶಿಯಾಗಿ ಪ್ರಾರಂಭಿಸಿದ ಅವರು ಕನ್ನಡ ಚಲನಚಿತ್ರ ಕಿರಿಕ್ ಪಾರ್ಟಿಯೊಂದಿಗೆ ೨೦೧೬ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಿರಿಕ್ ಪಾರ್ಟಿಯ ನಂತರ ಕರ್ನಾಟಕ ಕ್ರಶ್ ಎನಿಸಿಕೊಂಡಿದ್ದ ರಶ್ಮಿಕಾ ಅವರನ್ನು, ಇದೀಗ ನ್ಯಾಷನಲ್ ಕ್ರಶ್ 2020 ಎಂದು ಗೂಗಲ್ ಇಂಡಿಯಾ ಕರೆದಿದೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
carburetor (ಅಮೇರಿಕಾದ ಉಚ್ಛಾರ) ಅಥವಾ carburettor (ಕಾಮನ್‌ವೆಲ್ತ್ ಉಚ್ಛಾರ) ಇದು ಗಾಳಿ ಮತ್ತು ಇಂಧನವನ್ನು ಎಂಜಿನ್‌ನ ಆಂತರಿಕ ದಹನಕ್ಕೆ ಸಂಯೋಜಿಸುವ ಒಂದು ಸಾಧನ. ಇದು ಕಾರ್ಲ್ ಬೆಂಜ್‌ನಿಂದ 1885 ಕ್ಕೂ ಮೊದಲು ಸಂಶೋಧಿಸಲ್ಪಟ್ಟಿತು ಮತ್ತು ಇದರ ಏಕಸ್ವಾಮ್ಯವು 1886 ರಲ್ಲಿ ಪಡೆಯಲ್ಪಟ್ಟಿತು. ಆಡುಮಾತಿನಲ್ಲಿ ಇದು ಒಂದು ಕಾರ್ಬ್ ಎಂದು ಕರೆಯಲ್ಪಡುತ್ತದೆ (ಉತ್ತರ ಅಮೇರಿಕಾದಲ್ಲಿ ಮತ್ತು ಯುನೈಟೆಡ್ ಕಿಂಗ್‌ಡಮ್‌ನಲ್ಲಿ).
ಕರ್ಕಾಟಕ ಸಂಕ್ರಾಂತಿ ವೃತ್ತ : ಸಮಭಾಜಕ ವೃತ್ತಕ್ಕೆ (ಭೂಮಧ್ಯರೇಖೆ-ಟೆರ್ರೆಸ್ಟ್ರಿಯಲ್ ಇಕ್ವೇಟರ್) 23 ಡಿಗ್ರಿ 27’ಉತ್ತರದಲ್ಲಿ ಭೂಗೋಳದ ಮೇಲೆ ಎಳೆದ ಸಮಾಂತರ ಅಲ್ಪವೃತ್ತ (ಟ್ರಾಪಿಕ್ ಆಫ್ ಕ್ಯಾನ್ಸರ್). ಇದು ಸೂರ್ಯನ ದೈನಂದಿನ ಪಥಗಳ (ಸೂರ್ಯ ಮೂಡುವಲ್ಲಿಂದ ಕಂತುವ ತನಕ ಒಂದು ಹಗಲು ಆಕಾಶದಲ್ಲಿ ಸಾಗಿದ ದಾರಿಯ ಹೆಸರು ದೈನಂದಿನ ಪಥ) ಅತಿ ಉತ್ತರ ಗಡಿ ; ಎಂದರೆ ಕರ್ಕಾಟಕ ಸಂಕ್ರಾಂತಿ ವೃತ್ತಕ್ಕಿಂತ ಉತ್ತರಕ್ಕೆ ಸೂರ್ಯನ ಸಂಚಾರವಿಲ್ಲ. ದೈನಂದಿನ ಪಥಗಳನ್ನು ನೆಲದ ಮೇಲಿನ ಯಾವುದೇ ಸ್ಥಿರ ನೆಲೆಗಳ ಆಧಾರದಿಂದ ಗುರುತಿಸುತ್ತ ಹೋಗಬೇಕು.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ, ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸಾಮಾನ್ಯವಾಗಿ ಅಣೆಕಟ್ಟು ನಿರ್ಮಾಣದ ಉದ್ದೇಶ ನದಿ ನೀರನ್ನು ಸಂಗ್ರಹಿಸಿ ಅದನ್ನು ನೀರಾವರಿ, ಕುಡಿಯುವ ನೀರು ಪೂರೈಕೆ, ವಿದ್ಯುತ್ ಉತ್ಪಾದನೆ ಹೀಗೆ ವಿವಿಧ ಉದ್ದೇಶಗಳಿಗೆ ಬಳಸಿಕೊಳ್ಳುವುದು. ಅಣೆಕಟ್ಟು ತುಂಬಿದಾಗ ಅದರ ಕ್ರಸ್ಟ್‌ಗೇಟುಗಳನ್ನು ತೆರೆದು ನದಿಗೆ ನೀರು ಬಿಡಲಾಗುತ್ತದೆ. 3000 ವರ್ಷ ಹಿಂದೆ ನಿರ್ಮಿಸಿದ್ದು ಎನ್ನಲಾಗಿರುವ ಜೋರ್ಡಾನ್‌ನ ಜಾವಾ ಅಣೆಕಟ್ಟು ಜಗತ್ತಿನ ಅತ್ಯಂತ ಪುರಾತನ ಅಣೆಕಟ್ಟು ಎಂದು ಗುರುತಿಸಲಾಗಿದೆ.
ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಕಾರ್ಯಾಂಗ ವಿಭಾಗದ ಮಂತ್ರಿಗಳನ್ನು ಶಾಸಕಾಂಗದಿಂದ ಆಯ್ಕೆಮಾಡಲಾಗುವಂಥ, ಮತ್ತು ಕಾರ್ಯಾಂಗ ಹಾಗೂ ಶಾಸಕಾಂಗ ವಿಭಾಗಗಳು ಪರಸ್ಪರವಾಗಿ ಸೇರಿಕೊಂಡು ಆ ಸಂಸ್ಥೆಗೆ ಜವಾಬ್ದಾರವಾಗಿರುವಂಥ ಸರ್ಕಾರಿ ವ್ಯವಸ್ಥೆಯು ಸಂಸದೀಯ ವ್ಯವಸ್ಥೆ. ಅಂತಹ ವ್ಯವಸ್ಥೆಯಲ್ಲಿ, ಸರ್ಕಾರದ ನಾಯಕನು ವಾಸ್ತವವಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಮುಖ್ಯ ಶಾಸನಾಧಿಕಾರಿ ಎರಡೂ ಆಗಿರುತ್ತಾನೆ. ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಪಕ್ಷಗಳ ಪಾತ್ರ ಅತ್ಯಂತ ಮಹತ್ವದ್ದಾಗಿರುತ್ತದೆ.ರಾಜಕೀಯ ಪಕ್ಷಗಳಿಲ್ಲದೆ ಪ್ರಜಾಪ್ರಭುತ್ವ ಅಸಾಧ್ಯ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
"ಮೈಸೂರಿನ ಮಹಾರಾಜರಾದ ಹತ್ತನೆ ಶ್ರೀ ಚಾಮರಾಜೇಂದ್ರ ಒಡೆಯರ್ ಬಹದ್ದೂರ್ ಜಿ.ಸಿ.ಎಸ್.ಐ ಅವರ ಆಳ್ವಿಕೆಯ ಕಾಲದಲ್ಲಿ ಪ್ರಪ್ರಥಮವಾಗಿ ಈ ರಾಜ್ಯ ಗೀತೆಯನ್ನು ರಚಿಸಲಾಯಿತು. ಮೈಸೂರು ಅರಸರ ಕುಲದೇವತೆಯಾದ ಶ್ರೀ ಚಾಮುಂಡೇಶ್ವರಿ ಅಥವಾ ಗೌರಿಯನ್ನು ಪ್ರಾರ್ಥಿಸುವ ಈ ರಾಜ್ಯಗೀತೆಯನ್ನು ರಚಿಸಿದವರು ಆಸ್ಥಾನ ಸಾಹಿತಿ ವಿದ್ವಾನ್ ಬಸವಪ್ಪ ಶಾಸ್ತ್ರಿ. ಕನ್ನಡ-ಸಂಸ್ಕೃತ ಭಾಷೆಗಳಲ್ಲಿ ವಿಶೇಷ ಪ್ರಭುತ್ವ ಪಡೆದ ಪ್ರಕಾಂಡ ಪಂಡಿತರು.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.