The most-visited English Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಅಂತರಜಾಲ (ಆಂಗ್ಲ: Internet ಇಂಟರ್‌ನೆಟ್) ಎನ್ನುವುದು ಕಂಪ್ಯೂಟರ್ ನೆಟ್‌ವರ್ಕ್‌ಗಳ (ಜಾಲಬಂಧಗಳ) ಒಂದು ನೆಟ್‌ವರ್ಕ್ ಆಗಿದೆ. ಇದು ವಿಶ್ವವ್ಯಾಪಕವಾಗಿದ್ದು ಮಿಲಿಯಗಟ್ಟಲೆ ಸಂಖ್ಯೆಯ ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಕಂಪ್ಯೂಟರ್ ನೆಟ್‌ವರ್ಕ್‌ಗಳ ನಡುವೆ ಪರಸ್ಪರ ಸಂಪರ್ಕ ಕಲ್ಪಿಸುತ್ತದೆ. ಇಂಟರ್‌ನೆಟ್ ಅಥವಾ ಅಂತರಜಾಲ ಕ್ರಿ.ಶ ೧೯೭೦ರ ದಶಕದಲ್ಲಿ ಯು.ಎಸ್.ಎ ಯಲ್ಲಿ ರಚನೆಯಾಯಿತು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಭಾರತ್ ಜೋಡೋ ಯಾತ್ರೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಆರಂಭಿಸಿದ ನಡೆಯುತ್ತಿರುವ ಸಾಮೂಹಿಕ ಚಳುವಳಿಯಾಗಿದೆ. ಕಾಂಗ್ರೆಸ್‌ನ ನಾಯಕ ರಾಹುಲ್ ಗಾಂಧಿಯವರು ಪಕ್ಷದ ಕಾರ್ಯಕರ್ತರನ್ನು ಮತ್ತು ಸಾರ್ವಜನಿಕರನ್ನು ಸಜ್ಜುಗೊಳಿಸಿ, ಪರ್ಯಾಯ ದ್ವೀಪದ ದಕ್ಷಿಣ ತುದಿಯಾದ ಕನ್ಯಾಕುಮಾರಿಯಿಂದ 3,570 ಕಿಲೋಮೀಟರ್‌ಗಳಷ್ಟು ವ್ಯಾಪಿಸಿರುವ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದವರೆಗೆ ಕಾಲ್ನಡಿಗೆಯಲ್ಲಿ ನಡೆಯಲು ಆಂದೋಲನವನ್ನು ರೂಪಿಸುತ್ತಿದ್ದಾರೆ. ನವದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರದ ಆಪಾದಿತ "ವಿಭಜಕ ರಾಜಕೀಯ" ವಿರುದ್ಧ ದೇಶವನ್ನು ಒಗ್ಗೂಡಿಸಲು ನಾವು ಈ ಚಳುವಳಿಯನ್ನು ಪ್ರಾರಂಭಿಸಿದ್ದೇವೆ ಎಂದು ಕಾಂಗ್ರೆಸ್ ಹೇಳಿದೆ .
ಮಹರ್ಷಿ ವಾತ್ಸ್ಯಾಯನ ಕೃತವಾದ ಕಾಮಸೂತ್ರವೆಂಬ ಪ್ರಾಚೀನ ಭಾರತೀಯ ಸಂಸ್ಕೃತ ಗ್ರಂಥ ಮಾನವನ ಲೈಂಗಿಕ ವರ್ತನೆ ಮತ್ತು ಭಾರತೀಯ ಪುರುಷಾರ್ಥ ಚಿಂತನೆಯನ್ನು ಕುರಿತ ಪ್ರಮಾಣಿತ ಕೃತಿಯೆಂಬುದು ಪಂಡಿತಜನ ವೇದ್ಯವಾದ ವಿಷಯ. ವಾತ್ಸ್ಯಾಯನ ಕಾಮಸೂತ್ರವು ಪ್ರಧಾನವಾಗಿ ಸಂಭೋಗ ಭಂಗಿಗಳನ್ನು ಕುರಿತ ಲೈಂಗಿಕ ಕೈಪಿಡಿಯಲ್ಲ.ಅದು ಚೆನ್ನಾಗಿ ಬದುಕುವ ಕಲೆ, ಪ್ರೀತಿಯ ಸ್ವರೂಪ, ಸಂಗಾತಿಗಳನ್ನು ಹುಡುಕುವ ಕ್ರಮ, ಲೈಂಗಿಕ ಜೀವನವನ್ನು ಕಾಪಾಡಿಕೊಳ್ಳುವುದು ಮತ್ತು ಆನಂದ-ಆಧಾರಿತ ಸಾಮರ್ಥ್ಯಗಳಿಗೆ ಸಂಬಂಧಿಸಿದ ಇತರ ಅಂಶಗಳನ್ನು ಕುರಿತು ಮಾರ್ಗದರ್ಶಿಯಾಗಿದೆ. ಇದು ವಿಭಿನ್ನ ಭಾಷ್ಯಗಳೊಂದಿಗೆ (ವ್ಯಾಖ್ಯಾನಗಳು) ಆಧುನಿಕ ಯುಗದಲ್ಲಿ ಉಳಿದುಕೊಂಡಿರುವ ಸಂಕ್ಷಿಪ್ತ ಪೌರುಷ ಪದ್ಯಗಳನ್ನು ಹೊಂದಿರುವ ಸೂತ್ರ ವಿಭಾಗದ ಗ್ರಂಥವಾಗಿದೆ.
ಶ್ರೀನಿಧಿ ಬೆಂಗಳೂರು (ಜನನ ೨೩ ಸೆಪ್ಟೆಂಬರ್ ೧೯೯೮) ರವರು ಒಬ್ಬ ಭಾರತೀಯ ಚಿತ್ರಕಥೆಗಾರ ಮತ್ತು ಚಲನಚಿತ್ರ ನಿರ್ದೇಶಕ, ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಬ್ಲಿಂಕ್ ಎಂಬ ಚಲನಚಿತ್ರವನ್ನ ನಿರ್ದೇಶಸಿಸುವ ಮೂಲಕ ಕನ್ನಡ ಚಲನಚಿತ್ರ ರಂಗಕ್ಕೆ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದರು. ದಿಯಾ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಚೈತ್ರಾ ಜೆ.
ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.
ದ್ವಾರಕೀಶ್ ಎಂಬ ಹೆಸರಿನಿಂದ ಗುರುತಿಸಲ್ಪಡುವ ಬಂಗ್ಲೆ ಶಾಮಾರಾವ್ ದ್ವಾರಕಾನಾಥ (೧೯ ಆಗಸ್ಟ್ ೧೯೪೨ - ೧೬ ಏಪ್ರಿಲ್ ೨೦೨೪) ಕನ್ನಡ ಚಲನಚಿತ್ರ ನಟ, ನಿರ್ದೇಶಕ ಮತ್ತು ನಿರ್ಮಾಪಕ. 1964ರಲ್ಲಿ ಬಿಡುಗಡೆಯಾದ ವೀರ ಸಂಕಲ್ಪ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದ ದ್ವಾರಕೀಶ್, ತಮ್ಮ ವಿಶಿಷ್ಟ ಹಾಸ್ಯ ಶೈಲಿಯಿಂದ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕನಾಗಿ, ಹಾಸ್ಯ ನಟನಾಗಿ ಹಾಗೂ ಪೋಷಕ ಪಾತ್ರಗಳಲ್ಲಿ ತಮ್ಮದೇ ಆದ ಗುರುತು ಮೂಡಿಸಿದರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಎಲೆಕ್ಟ್ರಾನಿಕ್ ಮತದಾನ ವು,( ಇ ಮತದಾನ ಎಂದೂ ಕರೆಯಲ್ಪಡುತ್ತದೆ ) ವಿವಿಧ ರೀತಿಯ ಮತದಾನಗಳನ್ನು ತನ್ನ ಪರಿಧಿಯಲ್ಲಿ ಒಳಗೊಂಡಂತಹ ಒಂದು ಪದವಾಗಿದ್ದು,ಎಲೆಕ್ಟ್ರಾನಿಕ್ (ವಿದ್ಯುನ್ಮಾನ) ರೀತಿಯಲ್ಲಿ ಮತ ಚಲಾಯಿಸುವ ಮತ್ತು ವಿದ್ಯುನ್ಮಾನ ರೀತಿಯಲ್ಲಿಯೇ ಮತಗಳನ್ನು ಎಣಿಸುವ ಪ್ರಕ್ರಿಯೆಗಳನ್ನು ಬಿಂಬಿಸುವ ಪದವಾಗಿದೆ. ಎಲೆಕ್ಟ್ರಾನಿಕ್ ಮತದಾನದ ತಂತ್ರಜ್ಞಾನವು ಇವುಗಳನ್ನು ಒಳಗೊಂಡಿರುತ್ತವೆಪಂಚ್ ಕಾರ್ಡಗಳು, ಆಪ್ಟಿಕಲ್ ಸ್ಕಾನ್ ಮತದಾನದ ವ್ಯವಸ್ಥೆ ಮತ್ತು ವಿಶೇಷವಾದ ಮತಗಟ್ಟೆಗಳು ಡೈರೆಕ್ಟ್-ರೆಕಾರ್ಡಿಂಗ್ ಎಲೆಕ್ಟ್ರಾನಿಕ್ ಮತದಾನದ ಪದ್ಧತಿಯನ್ನೂ (ಡಿ ಅರ್ ಇ) ಸಹ ಒಳಗೊಂಡಿರುತ್ತದೆ, ಅದು ದೂರವಾಣಿಗಳು, ಖಾಸಗಿ ಗಣಕಯಂತ್ರದ ನೆಟ್ವರ್ಕ್ ಗಳು, ಅಥವಾ ಅಂತರಜಾಲಗಳ ಮುಖಾಂತರ, ಮತಪತ್ರಗಳು ಮತ್ತು ಮತಗಳನ್ನು ರವಾನಿಸುವುದೂ ಸಹ ಸೇರಿರುತ್ತದೆ. ಎಲೆಕ್ಟ್ರಾನಿಕ್ ಮತದಾನದ ತಂತ್ರಜ್ಞಾನವು ಮತಪತ್ರಗಳ ಎಣಿಕೆಯನ್ನು ತ್ವರಿತಗೊಳಿಸಬಹುದು ಮತ್ತು ವಿಕಲ ಮತದಾರರಿಗೆ ಉತ್ತಮಗೊಂಡ ತಲುಪುವಿಕೆಯನ್ನು ಒದಗಿಸಬಹುದು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಪಶ್ಚಿಮ ಬಂಗಾಳ, ಭಾರತದ ಪೂರ್ವ ರಾಜ್ಯಗಳಲ್ಲಿ ಒಂದಾಗಿದೆ ಮತ್ತು ಭಾರತ ಗಣರಾಜ್ಯದ ಒಂದು ರಾಜ್ಯವಾಗಿದೆ. ಕರ್ಕಾಟಕ ಸಂಕ್ರಾಂತಿ ವೃತ್ತ ಪಶ್ಚಿಮ ಬಂಗಾಳದ ನಡುವೆ ಹಾದುಹೋಗುತ್ತದೆ.ಈ ರಾಜ್ಯದ ಉತ್ತರ ಭಾಗದಲ್ಲಿ ಸಿಕ್ಕಿಂ ಮತ್ತು ಭೂತಾನ್ ಬರುತ್ತದೆ, ದಕ್ಷಿಣದಲ್ಲಿ ಬಂಗಾಳ ಕೊಲ್ಲಿ ಬರುತ್ತದೆ, ಪೂರ್ವದಲ್ಲಿ ಅಸ್ಸಾಂ ಮತ್ತು ಬಾಂಗ್ಲಾದೇಶ ಬರುತ್ತದೆ. ಪಶ್ಚಿಮದಲ್ಲಿ ಒರಿಸ್ಸಾ, ಬಿಹಾರ ಮತ್ತು ನೇಪಾಲ ಇವೆ.
ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ
"ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಟೆಂಪ್ಲೇಟು:Expert-portal ಆಮೆಗಳು ಅಥವಾ ನೆಲದ ದೊಡ್ಡ ಆಮೆಗಳು, ಟೆಸ್ಟುಡಿನಿಡೆ ಟೆಸ್ಟೋಡೈನ್‌ಗಳ ಕುಟುಂಬಕ್ಕೆ ಸೇರಿದ ನೆಲದಲ್ಲಿ-ವಾಸಿಸುವ ಸರೀಸೃಪಗಳು. ಅವುಗಳ ಸಮುದ್ರದ ಸಂಬಂಧಿಗಳ ಹಾಗೆ ಸಾಗರದ ದೊಡ್ಡ ಆಮೆಗಳು, ಆಮೆಗಳು ಬೇಟೆಯಾಡುವ ಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಚಿಪ್ಪನ್ನು ಹೊಂದಿವೆ.. ಮೇಲಿನ ಭಾಗದ ಚಿಪ್ಪು ಕೆರಾಪೇಸ್, ಕೆಳ ಭಾಗ ಪ್ಲಸ್ಟ್ರೋನ್, ಈ ಎರಡೂ ಒಂದು ಸೇತುವೆಯ ರೀತಿಯಲ್ಲಿ ಕೂಡಿಕೊಂಡಿವೆ.
ಪಿಟ್ಯುಟರಿ ಗ್ರಂಥಿ ಅಥವಾ ಹೈಪೋಫೈಸಿಸ್ ಅನ್ನುವುದು ಒಂದು ಬಟಾಣಿ ಗಾತ್ರದ ಮತ್ತು 0.5 ಗ್ರಾಂ(0.02 oz.) ತೂಕವಿರುವ ಎಂಡೊಕ್ರೈನ್ ಗ್ರಂಥಿ. ಇದು ಮಿದುಳಿನ ತಳಭಾಗದಲ್ಲಿರುವ ಮಸ್ತಿಷ್ಕನಿಮ್ನಾಂಗದ ಚಾಚಿರುವ ಕೆಳಭಾಗವಾಗಿದೆ, ಮತ್ತು ಎರಡು ಪದರ (ದಯಾಫ್ರಾಗ್ಮ ಸೆಲ್ಲೆ)ಗಳಿಂದ ಆವರಿಸಿಕೊಂಡಿರುವ ಚಿಕ್ಕ, ಎಲುಬುಗೂಡಿನಲ್ಲಿ (ಸೆಲ್ಲಾ ಟರ್ಕಿಕ) ಸ್ಥಿತವಾಗಿದೆ. ಪಿಟ್ಯುಟರಿ ಕುಳಿಯಲ್ಲಿ ಪಿಟ್ಯುಟರಿ ಗ್ರಂಥಿಯು ನೆಲೆಸಿದ್ದು, ಅದು ಮಿದುಳಿನ ತಳಭಾಗದ ತಲೆಬುರುಡೆ ಮಧ್ಯದ ಕುಳಿಯಲ್ಲಿರುವ ಸ್ಫಿನಾಯ್ಡ್ ಮೂಳೆಯಲ್ಲಿ ನೆಲೆಸಿದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) (ಆಂಗ್ಲ: ISRO – Indian Space Research Organisation) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ. ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತಮಿಳುನಾಡು), ಹಾಸನ(ಕರ್ನಾಟಕ) ಮತ್ತು ಶ್ರೀಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
'ಮಾಧ್ಯಮ ಅಥವಾ ಸಮೂಹ ಮಾಧ್ಯಮ ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.