The most-visited English Wikipedia articles, updated daily. Learn more...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಓಣಮ್ದಕ್ಷಿಣ ಭಾರತದ ಕೇರಳರಾಜ್ಯದಲ್ಲಿ ನಡೆಯುವ ಅತಿದೊಡ್ಡ ಹಬ್ಬವಾಗಿದೆ. ಈ ಹಬ್ಬವನ್ನು ಮಲಯಾಳೀ ಪಂಚಾಂಗದ ಮೊದಲ ತಿಂಗಳು ಚಿಂಗಮ್(ಆಗಸ್ಟ್-ಸೆಪ್ಟೆಂಬರ್) ತಿಂಗಳಿನಲ್ಲಿ, ಪುರಾಣಪ್ರಸಿದ್ಧ ಸಾಮ್ರಾಟ ಮಹಾಬಲಿಯು ಮನೆಗೆ ಮರಳಿ ಬಂದ ಕುರುಹಾಗಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಹತ್ತು ದಿನಗಳವರೆಗೆ ಸಡಗರದಿಂದ ಜರುಗುವ ಈ ಹಬ್ಬವು ಕೇರಳದ ಹಲವಾರು ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕತೆಯ ಎಳೆಗಳೊಂದಿಗೆ ಬೆಸೆದುಕೊಂಡಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಉಪಾಕರ್ಮ "ಆರಂಭ" ಬ್ರಾಹ್ಮಣ ವರ್ಣದ ಆಧುನಿಕ ಹಿಂದೂಗಳಿಂದ ಆಚರಿಸಲ್ಪಡುವ ಒಂದು ವೈದಿಕ ಕ್ರಿಯಾವಿಧಿ. ಈ ಕ್ರಿಯಾವಿಧಿಯನ್ನು ದೈನಂದಿನ ಸಂಧ್ಯಾವಂದನೆ ಮಾಡುವ ಆರ್ಯ ವೈಶ್ಯ ಸಮುದಾಯದವರೂ ಆಚರಿಸುತ್ತಾರೆ. ಉಪಾಕರ್ಮವನ್ನು ವರ್ಷಕ್ಕೆ ಒಂದು ಸಾರಿ ಶ್ರಾವಣ ಅಥವಾ ಧನಿಷ್ಠಾ ನಕ್ಷತ್ರದಲ್ಲಿ ನಡೆಸಲಾಗುತ್ತದೆ ಮತ್ತು ಇದರಲ್ಲಿ ಬ್ರಾಹ್ಮಣರು ಶಾಸ್ತ್ರೋಕ್ತವಾಗಿ ತಮ್ಮ ಉಪನಯನದ ದಾರವನ್ನು ಬದಲಿಸುತ್ತಾರೆ ಜೊತೆಗೆ ಸಂಬಂಧಿತ ಶ್ರೌತ ಕ್ರಿಯಾವಿಧಿಗಳು ಇರುತ್ತವೆ ಮತ್ತು ವೈದಿಕ ಶ್ಲೋಕಗಳನ್ನು ರಚಿಸಿದರು ಎಂದು ಹಿಂದೂಗಳು ನಂಬುವ ಋಷಿಗಳಿಗೆ ಶ್ರಾದ್ಧ ತರ್ಪಣಗಳನ್ನು ಕೊಡುತ್ತಾರೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ
"ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪ್ರಾಣಿಗಳು ಜೈವಿಕ ಸಾಮ್ರಾಜ್ಯ ಅನಿಮಾಲಿಯಾದ ಬಹುಕೋಶೀಯ, ಯೂಕ್ಯಾರಿಯೋಟಿಕ್ ಜೀವಿಗಳು. ಕೆಲವು ವಿನಾಯಿತಿಗಳೊಂದಿಗೆ, ಪ್ರಾಣಿಗಳು ಸಾವಯವ ಪದಾರ್ಥವನ್ನು ಸೇವಿಸುತ್ತವೆ, ಆಮ್ಲಜನಕವನ್ನು ಉಸಿರಾಡುತ್ತವೆ, ಸ್ನಾಯುಕೋಶಗಳನ್ನು ಹೊಂದಿರುತ್ತವೆ ಮತ್ತು ಇವುಗಳಿಗೆ ಚಲಿಸಲು ಸಾಧ್ಯವಿರುತ್ತದೆ ಹಾಗೂ ಇವುಗಳು ಲೈಂಗಿಕವಾಗಿ ಸಂತಾನೋತ್ಪತ್ತಿ ಮಾಡಬಲ್ಲವು ಮತ್ತು ಭ್ರೂಣದ ಬೆಳವಣಿಗೆಯ ಸಮಯದಲ್ಲಿ ಜೀವಕೋಶಗಳ ಟೊಳ್ಳಾದ ಗೋಳವಾದ ಬ್ಲಾಸ್ಟುಲಾದಿಂದ ಬೆಳೆಯುತ್ತವೆ. ೨೦೨೨ ರ ಹೊತ್ತಿಗೆ, ೨.೧೬ ದಶಲಕ್ಷ ಜೀವಂತ ಪ್ರಾಣಿ ಪ್ರಭೇದಗಳನ್ನು ವಿವರಿಸಲಾಗಿತ್ತು.
ಆಯುರ್ವೇದ (ಸಂಸ್ಕೃತ: आयुर्वेद ಆಯು—ಆಯಸ್ಸು; ವೇದ—ಜ್ಞಾನ) ೧೨೦೦೦ ವರ್ಷಗಳಿಗೂ ಹೆಚ್ಚು ಹಳೆಯದಾದ ಔಷಧ ಪದ್ಧತಿ. ವೇದಗಳಲ್ಲಿ ಮೂಡಿಬರುವ ಈ ಪದ್ಧತಿಯಲ್ಲಿ ಆರೋಗ್ಯ ಹಾಗೂ ದೀರ್ಘ ಆಯಸ್ಸನ್ನು ಹೇಗೆ ಪಡೆಯುವುದು ಎಂಬುದನ್ನು ಹೇಳುವುದೇ ಸಂಹಿತೆಗಳ ಮೂಲ ಉದ್ದೇಶ. ಹಿಂದೂ ಸಂಪ್ರದಾಯಕ್ಕೆ ಹೊಂದಿಕೊಂಡಂತಿರುವ ಈ ಪದ್ಧತಿ ಪ್ರಾಚೀನ ಭಾರತದಿಂದ (ಭಾರತೀಯ ಉಪಖಂಡ) ಬೆಳೆದು ಬಂದದ್ದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಚದುರಂಗ (ಚೆಸ್) ಇಬ್ಬರು ಆಟಗಾರರಿಂದ ಆಡಲ್ಪಡುವ ಒಂದು ಆಟ - ಇದನ್ನು ೬೪ ಚೌಕಗಳಿರುವ ಮಣೆಯ ಮೇಲೆ ಆಡಲಾಗುತ್ತದೆ. ಮಣೆಯ ಮೇಲಿನ ಚೌಕಗಳು ಕಪ್ಪು ಮತ್ತು ಬಿಳುಪು ಬಣ್ಣಗಳಿಂದ ಕೂಡಿದ್ದ ಒಂದು ಕಪ್ಪು ಮತ್ತು ಒಂದು ಬಿಳಿ - ಹೀಗೆ ಜೋಡಿಸಲ್ಪಟ್ಟಿರುತ್ತವೆ. ಆಟದ ಪ್ರಾರಂಭದಲ್ಲಿ ಪ್ರತಿ ಆಟಗಾರನ ಬಳಿ ೧೬ ಕಾಯಿಗಳಿರುತ್ತವೆ - ಒಂದು ರಾಜ, ಒಂದು ರಾಣಿ, ಎರಡು ಆನೆ, ಎರಡು ಕುದುರೆ, ಎರಡು ಒಂಟೆ ಮತ್ತು ಎಂಟು ಪದಾತಿಗಳು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವ್ಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.
ಮದರ್ ತೆರೇಸಾಸುಮಾರು ೪೫ ವರ್ಷಗಳಿಗೂ ಹೆಚ್ಚು ಕಾಲ ಇವರು ಬಡವರ, ರೋಗಿಗಳ, ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡವರು. ೧೯೭೦ರ ವೇಳೆಗೆ ಇವರು ಒಬ್ಬ ಮಾನವತಾ ವಾದಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದರು. ಮದರ್ ತೆರೇಸಾ ಒಬ್ಬ ಮಹಾ ಮಾನವತಾವಾದಿಯಾಗಿ ಬಡವರ, ನಿರ್ಗತಿಕರ, ರೋಗಿಗಳ, ಅನಾಥರ, ವೃದ್ಧರ ಪರವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಗೆ ವಿಶ್ವದ ಅತ್ಯುನ್ನತ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಖೊ ಖೋ ಆಟ ಆಡಲು ಬೇಕಾಗುವ ವಸ್ತುಗಳು- ೨ ಕೋಲುಗಳು ಅಂಕಣದ ಕೊನೆಗಳಲ್ಲಿ ಹಾಕಲು ಆಟದವ ವಿವರಣೆ ಖೋಖೋ ಆಟ ಮೊದಲು ಜಮೈಕಯಲ್ಲಿನ ಬರೋಡ ಎಂಬಲ್ಲಿ 1924 ಉಗಮವಾಯಿತು. ಈ ಆಟದ ಒಂದು ಚಾಂಪಿಯನ್ಶಿಪ್ 1960 ರಲ್ಲಿ ನಡೆಯಿತು. ಭಾರತದಲ್ಲಿ ಈ ಆಟವನ್ನು ಮೊದಲು ಪರಿಚಯಿಸಿದ್ದು ಮಹಾರಾಷ್ಟ್ರದ ಅಖಿಲ ಮಹಾರಾಷ್ಟ್ರ ಶಾರೀರಿಕ್ ಶಿಕ್ಷಣ ಮಂಡಲ್.ಈಗ ಈ ಆಟವು ಶಾಲೆಗಳಲ್ಲಿ ಕಡ್ಡಾಯ ಕ್ರೀಡೆಯಾಗಿದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು
ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಚದುರಂಗದ ನಿಯಮಗಳು (ಚದುರಂಗದ ಕಾನೂನುಗಳು ಎಂದೂ ಸಹ ಇವು ಪರಿಚಿತವಾಗಿವೆ) ಚದುರಂಗದ ಆಟದ ಆಡುವಿಕೆಯನ್ನು ನಿರ್ದೇಶಿಸುವ ನಿಯಮಗಳಾಗಿವೆ. ಚದುರಂಗದ ಮೂಲಗಳು ಕರಾರುವಾಕ್ಕಾಗಿ ಯಾವುವು ಎಂಬುದು ಅಸ್ಪಷ್ಟವಾಗಿದ್ದರೂ ಸಹ, ಆಟದ ಆಧುನಿಕ ನಿಯಮಗಳು ೧೬ನೇ ಶತಮಾನದ ಅವಧಿಯಲ್ಲಿ ಇಟಲಿಯಲ್ಲಿ ಮೊದಲು ರೂಪುಗೊಂಡವು ಎನ್ನಬಹುದು. ೧೯ನೇ ಶತಮಾನದ ಆರಂಭದವರೆಗೂ ಈ ನಿಯಮಗಳಲ್ಲಿ ಕೊಂಚಮಟ್ಟಿನ ಮಾರ್ಪಾಡು ಆಗುತ್ತಲೇ ಇತ್ತು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ದಾಳಗಳು ಹಲವು ಗುರುತಿರುವ ಪಾರ್ಶ್ವ ಮುಖಗಳಲ್ಲಿ ಯಾವುದರ ಮೇಲಾದರೂ ಇಳಿಯುವಂತೆ ವಿನ್ಯಾಸಗೊಳಿಸಲಾದ, ಹಲವುವೇಳೆ ಸರಿಸುಮಾರು ಲಂಬ ಅಕ್ಷದ ಪಟ್ಟಕದಂತಿರುವ ಡೈಸ್. ತುದಿಯ ಮೇಲೆ ಇಳಿಯುವಿಕೆ ಬಹಳ ಅಪರೂಪ ಏಕೆಂದರೆ ಇತರ ಮುಖಗಳಿಗೆ ಹೋಲಿಸಿದರೆ ಅವುಗಳ ಗಾತ್ರ ಸಣ್ಣದಾಗಿದೆ, ದಾಳದ ಎತ್ತರದಲ್ಲಿ ಅಂತರ್ಗತವಾಗಿರುವ ಅಸ್ಥಿರತೆಯಿರುವುದರಿಂದ, ಮತ್ತು ದಾಳವನ್ನು ಎಸೆಯುವುದರ ಬದಲು ಅಕ್ಷದ ಮೇಲೆ ಉರುಳಿಸುವುದರಿಂದ. ಅನೇಕ ದಾಳಗಳು ತುದಿಯ ಮೇಲೆ ಇಳಿಯುವುದನ್ನು ತಪ್ಪಿಸಲು, ತುದಿಗಳಿಗೆ ದುಂಡನೆಯ ಅಥವಾ ಶಿಖರಾಕಾರ ಕೊಟ್ಟು, ಹೆಚ್ಚಿನ ಪರಿಹಾರ ಒದಗಿಸುತ್ತವೆ, ಮತ್ತು ಇದರಿಂದ ಅಂತಹ ಆಗುಹ ಭೌತಿಕವಾಗಿ ಅಸಾಧ್ಯವಾಗುತ್ತದೆ (ಕನಿಷ್ಠಪಕ್ಷ ಚಪ್ಪಟೆ ಭದ್ರ ಮೇಲ್ಮೈ ಮೇಲೆ).
ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.
ಯಶ್ (ನವೀನ್ ಕುಮಾರ್ ಗೌಡ ಜನ್ಮ ಹೆಸರು) ಭಾರತೀಯ ಚಲನಚಿತ್ರ ನಟ, ಮುಖ್ಯವಾಗಿ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಲನಚಿತ್ರಗಳಲ್ಲಿ ಅಭಿನಯಿಸುವದಕ್ಕೆ ಮೊದಲು ಅವರು ರಂಗಕಲೆ ನಾಟಕಗಳು ಮತ್ತು ದೂರದರ್ಶನ ಸೋಪ್ಗಳಲ್ಲಿ ಕಾಣಿಸಿಕೊಂಡರು. ಯಶ್ ೨೦೦೭ ರಲ್ಲಿ ಜಂಭದ ಹುಡುಗಿ ಅವರ ಚಲನಚಿತ್ರದ ಚೊಚ್ಚಲ ಪ್ರವೇಶವನ್ನು ಮಾಡಿದರು, ಈ ಚಿತ್ರದಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದರು.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಭಾರತದ ಶ್ರೇಷ್ಠ ಹಾಕಿ ಆಟಗಾರರಾಗಿದ್ದ ಮೇಜರ್ ಧ್ಯಾನ್ ಚಂದ್ ರವರ ಸ್ಮರಣಾರ್ಥ ಪ್ರತಿ ವರ್ಷ ಆಗಸ್ಟ್ ೨೯ ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ ಕ್ರೀಡಾ ದಿನವನ್ನು ಭಾರತದಲ್ಲಿ ಮೊದಲ ಬಾರಿಗೆ 2012 ರಲ್ಲಿ ರಾಷ್ಟ್ರೀಯ ದಿನಗಳ ಪಟ್ಟಿಯಲ್ಲಿ ಸೇರಿಸಲಾಯಿತು. ಹರಿಯಾಣ, ಪಂಜಾಬ್ ಮತ್ತು ಕರ್ನಾಟಕ ಇತರ ರಾಜ್ಯಗಳಲ್ಲಿ, ದೈಹಿಕ ಚಟುವಟಿಕೆಗಳು ಮತ್ತು ಜೀವನದಲ್ಲಿ ಕ್ರೀಡೆಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಕ್ರೀಡಾಕೂಟಗಳು ಮತ್ತು ಸೆಮಿನಾರ್‌ಗಳನ್ನು ಆಯೋಜಿಸುತ್ತವೆ.