The most-visited English Wikipedia articles, updated daily. Learn more...
ಭಾರತದ ಶ್ರೇಷ್ಠ ಹಾಕಿ ಆಟಗಾರರಾಗಿದ್ದ ಮೇಜರ್ ಧ್ಯಾನ್ ಚಂದ್ ರವರ ಸ್ಮರಣಾರ್ಥ ಪ್ರತಿ ವರ್ಷ ಆಗಸ್ಟ್ ೨೯ ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ ಕ್ರೀಡಾ ದಿನವನ್ನು ಭಾರತದಲ್ಲಿ ಮೊದಲ ಬಾರಿಗೆ 2012 ರಲ್ಲಿ ರಾಷ್ಟ್ರೀಯ ದಿನಗಳ ಪಟ್ಟಿಯಲ್ಲಿ ಸೇರಿಸಲಾಯಿತು. ಹರಿಯಾಣ, ಪಂಜಾಬ್ ಮತ್ತು ಕರ್ನಾಟಕ ಇತರ ರಾಜ್ಯಗಳಲ್ಲಿ, ದೈಹಿಕ ಚಟುವಟಿಕೆಗಳು ಮತ್ತು ಜೀವನದಲ್ಲಿ ಕ್ರೀಡೆಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಕ್ರೀಡಾಕೂಟಗಳು ಮತ್ತು ಸೆಮಿನಾರ್‌ಗಳನ್ನು ಆಯೋಜಿಸುತ್ತವೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಶಂಬೂಕ (ಸಂಸ್ಕೃತ:शम्बूक, IAST : śambūka) ಎಂಬುದು ಒಂದು ಪ್ರಕ್ಷೇಪಿಸಿದ ಪಾತ್ರವಾಗಿದೆ, ಇದು ಮೂಲ ವಾಲ್ಮೀಕಿ ರಾಮಾಯಣದಲ್ಲಿ ಕಂಡುಬರುವುದಿಲ್ಲ ಆದರೆ ನಂತರದ ಸೇರ್ಪಡೆಯಾದ ಉತ್ತರ ಕಾಂಡದಲ್ಲಿ ಕಂಡುಬರುತ್ತದೆ. ಕಥೆಯ ಪ್ರಕಾರ, ಧರ್ಮವನ್ನು ಉಲ್ಲಂಘಿಸಿ ತಪಸ್ಸನ್ನು ಮಾಡಲು ಪ್ರಯತ್ನಿಸಿದ್ದಕ್ಕಾಗಿ ರಾಮನಿಂದ ಶೂದ್ರ ತಪಸ್ವಿಯಾದ ಶಂಬೂಕನನ್ನು ಕೊಲ್ಲಲಾಯಿತು, ಇದು ಬ್ರಾಹ್ಮಣನ ಮಗನ ಸಾವಿಗೆ ಕಾರಣವಾದ ಕೆಟ್ಟ ಕರ್ಮಕ್ಕೆ ಕಾರಣವಾಯಿತು. ಈ ಕಥೆಯನ್ನು ನಂತರದ ಅವಧಿಯಲ್ಲಿ ರಚಿಸಲಾಗಿದೆ.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ
"ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಅಕ್ಕೇಡಿಯನ್ ಭಾಷೆ ಯೂಪ್ರೆಟಿಸ್, ಟೈಗ್ರಿಸ್ ನದಿಗಳ ನಡುವಣ ಪ್ರದೇಶದ ಉತ್ತರ ಭಾಗಕ್ಕೆ ರಾಜಧಾನಿಯಾಗಿದ್ದ ಅಕ್ಕಾಡ್ ನಗರದ ಸುತ್ತಮುತ್ತ ಪ್ರಚಲಿತವಾಗಿತ್ತು. ಇದು ಹೀಬ್ರೂ, ಅರಬ್ಬಿ ಮುಂತಾದ ಭಾಷೆಗಳಂತೆ ಸೆಮಿಟಿಕ್ ಭಾಷಾವರ್ಗಕ್ಕೆ ಸೇರಿದ್ದು; ಆ ಭಾಷಾವರ್ಗದ ಪುರ್ವದಿಕ್ಕಿನ ಶಾಖೆ, ಸೆಮಿಟಿಕ್ ಭಾಷೆಯೊಂದನ್ನು ಆಡುತ್ತಿದ್ದ ಜನ ಅರೇಬಿಯದಿಂದ ವಲಸೆ ಹೊರಟು ಪ್ರ.ಶ.ಪು. 2000ದ ಸುಮಾರಿನಲ್ಲಿ ಅಕ್ಕಡ ಪ್ರದೇಶದಲ್ಲಿ ಬಂದು ನೆಲೆಸಿದರು; ಅವರ ಭಾಷೆ ಇಲ್ಲಿ ಬೆಳೆದು ಅಕ್ಕೇಡಿಯನ್ ಆಯಿತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು
ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಸಾಲಿಗ್ರಾಮ'ಎಂಬುವುದು ಒಂದು ಶಿಲೆ ಭೂಮಿಯ ಮೇಲೆ ಕೋಟ್ಯಾಂತರ ವರ್ಷಗಳ ಹಿಂದಿನಿಂದಲೇ ಸಾಲಿಗ್ರಾಮ ಇದೆ. ಪದ್ಮಪುರಾಣದಲ್ಲಿ ಸಾಲಿಗ್ರಾಮ ಶಿಲೆಯ ಬಗ್ಗೆ ಶಿವನು ಈ ರೀತಿ ಹೇಳಿದ್ದಾನೆ. "ಮಹಾಲಿಂಗ ಕೋಟಿಭಿಃ ದೃಷ್ಟಿ ಯದ್ ಫಲಂ ಪೂಜತಿ ಸಾಲಿಗ್ರಾಮ ಶಿಲಾಯಂತು ಏಕಸ್ಯಂ ಇವ ತದ್ಭವೇದ್" ಶಿವನನ್ನು ಲಿಂಗದ ರೂಪದಲ್ಲಿ ಪೂಜಿಸುವುದು ಸಾಮಾನ್ಯ.ಜತೆಗೆ ಪ್ರಪಂಚಾದ್ಯಂತ ಶಿವ ದೇಗುಲಗಳೂ ಇವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) (ಆಂಗ್ಲ: ISRO – Indian Space Research Organisation) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ. ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತಮಿಳುನಾಡು), ಹಾಸನ(ಕರ್ನಾಟಕ) ಮತ್ತು ಶ್ರೀಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್‌ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್‌ಗಳನ್ನು ನಿರ್ವಹಿಸಬಹುದು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ವೀರಾಸ್ವಾಮಿ ರವಿಚಂದ್ರನ್ ಕನ್ನಡ ಚಿತ್ರರಂಗದಲ್ಲಿ ವಿ.ರವಿಚಂದ್ರನ್ ಎನ್ನುವ ಹೆಸರಿನಲ್ಲಿ ಪ್ರಸಿದ್ಧರು. ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ಮತ್ತು ಬೆಳ್ಳಿಪರದೆಗೆ ಹೊಸರಂಗು ತಂದ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಅನೇಕ ರೀಮೇಕ್ ಸಿನಿಮಾಗಳನ್ನು ಕನ್ನಡಕ್ಕೆ ತಂದರೂ ಮೂಲಸಿನಿಮಾದ ಛಾಯೆ ಇರದ ತಮ್ಮದೇ ಆದ ಶೈಲಿಯಲ್ಲಿ ಕನ್ನಡ ಸೊಗಡಿನ ಸೂಪರ್ ಹಿಟ್ ಗಳನ್ನು ನೀಡಿದ್ದಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಯಶ್ (ನವೀನ್ ಕುಮಾರ್ ಗೌಡ ಜನ್ಮ ಹೆಸರು) ಭಾರತೀಯ ಚಲನಚಿತ್ರ ನಟ, ಮುಖ್ಯವಾಗಿ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಲನಚಿತ್ರಗಳಲ್ಲಿ ಅಭಿನಯಿಸುವದಕ್ಕೆ ಮೊದಲು ಅವರು ರಂಗಕಲೆ ನಾಟಕಗಳು ಮತ್ತು ದೂರದರ್ಶನ ಸೋಪ್ಗಳಲ್ಲಿ ಕಾಣಿಸಿಕೊಂಡರು. ಯಶ್ ೨೦೦೭ ರಲ್ಲಿ ಜಂಭದ ಹುಡುಗಿ ಅವರ ಚಲನಚಿತ್ರದ ಚೊಚ್ಚಲ ಪ್ರವೇಶವನ್ನು ಮಾಡಿದರು, ಈ ಚಿತ್ರದಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದರು.