The most-visited English Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ
"ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಜಾರಿ ನಿರ್ದೇಶನಾಲಯ(Enforcement Directorate - ED) ಭಾರತ ಸರ್ಕಾರದ ಅವಿಭಾಜ್ಯ ಸಂಸ್ಥೆಯಾಗಿದ್ದು ಆರ್ಥಿಕ ಕಾನೂನುಗಳನ್ನು ಶಿಸ್ತು ಬದ್ಧವಾಗಿ ಜಾರಿಮಾಡುವ, ಹಾಗು ಅವು ಪಾಲನೆಯಲ್ಲಿರುವಂತೆ ನಿಗಾ ವಹಿಸುವ ಕರ್ತವ್ಯದಲ್ಲಿ ತೊಡಗಿಕೊಳ್ಳುತ್ತದೆ. ದೇಶದೊಳಗೆ ನಡೆಯುವ ಆರ್ಥಿಕ ಅಪರಾಧಗಳ ಮೇಲೂ ಕಣ್ಗಾವಲು ಇಡುವ ಅಧಿಕಾರ ಜಾರಿ ನಿರ್ದೇಶನಾಲಯಕ್ಕೆ ಇದ್ದು ಇದು ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಆದಾಯ ವಿಭಾಗದ ಒಂದು ಪ್ರಮುಖ ಭಾಗವಾಗಿದೆ. ಭಾರತೀಯ ಆಡಳಿತಾತ್ಮಕ ಸೇವಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗು ಆದಾಯ ತೆರಿಗೆ ಅಧಿಕಾರಿಗಳನ್ನು ಈ ಸಂಸ್ಥೆ ಒಳಗೊಂಡಿರುತ್ತದೆ.
ಮಕ್ಕಳ ಉಚಿತ ಹಾಗು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ
ಮಕ್ಕಳ ಉಚಿತ ಹಾಗು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಭಾರತದ ಸಂಸತ್ತಿನಿಂದ ಮಾಡಲ್ಪಟ್ಟಿರುವ ಕಾನೂನು. ಈ ಕಾಯ್ದೆಯಡಿ ಭಾರತದಲ್ಲಿ ೬ರಿಂದ ೧೪ ವರ್ಷದವರೆಗಿನ ಮಕ್ಕಳಿಗೆ ಉಚಿತ ಹಾಗು ಕಡ್ಡಾಯ ಶಿಕ್ಷಣ ದೊರಕುವಂತೆ ಹಕ್ಕನ್ನು ನೀಡಲಾಗಿದೆ. ಈ ಕಾಯ್ದೆಯನ್ನು ಭಾರತ ಸಂವಿಧಾನದ ೨೧A ಕಲಮಿನಡಿ ಜಾರಿಗೊಳಿಸಲಾಗಿದೆ.
ವಿಶ್ವ ಶಿಕ್ಷಕರ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ ೫ ರಂದು ಆಚರಿಸಲಾಗುತ್ತದೆ. ೧೯೯೪ ರಲ್ಲಿ ಸ್ಥಾಪನೆಯಾದ ಇದು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ಮತ್ತು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಶಿಫಾರಸುಗಳಿಗೆ ಸಹಿ ಹಾಕಿದ ನೆನಪಿಗಾಗಿ ಇದೆ. ೧೯೬೬ ರ "ಶಿಕ್ಷಕರ ಸ್ಥಿತಿಗೆ ಸಂಬಂಧಿಸಿದ ಐಎಲ್ಒ / ಯುನೆಸ್ಕೋ ಶಿಫಾರಸು" ವಿಶ್ವದಾದ್ಯಂತದ ಶಿಕ್ಷಕರ ಸ್ಥಿತಿ ಮತ್ತು ಪರಿಸ್ಥಿತಿಗಳನ್ನು ಪರಿಹರಿಸುವ ಪ್ರಮಾಣಿತ ಸಾಧನವಾಗಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
ರಾಜ್ಯಸಭೆಯಲ್ಲಿನ ಸಂಸದರು ( ಸಂಕ್ಷಿಪ್ತ : ಎಂ.ಪಿ) ಇವರು ಭಾರತದ ಸಂಸತ್ತಿನ ಎರಡು ಸದನಗಳಲ್ಲಿ ಒಂದಾದ ಭಾರತದ ಸಂಸತ್ತಿನ ಮೇಲ್ಮನೆಗೆ ರಾಜ್ಯಸಭೆಗೆ ಭಾರತೀಯ ರಾಜ್ಯಗಳ ಪ್ರತಿನಿಧಿ. ರಾಜ್ಯ ಸಭೆಯ ಸಂಸದರನ್ನು ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರುಗಳು ವರ್ಗಾವಣೆ ಮಾಡಬಹುದಾದ ಮತದಿಂದ ಪ್ರಮಾಣಾನುಗುಣವಾದ ಪ್ರಾತಿನಿಧ್ಯದ ವ್ಯವಸ್ಥೆಯೊಂದಿಗೆ ಆಯ್ಕೆ ಮಾಡಲಾಗುತ್ತದೆ. ಚುನಾವಣೆಗಳು, ನಾಮನಿರ್ದೇಶನಗಳು ಅಥವಾ ಇತರ ಅಂಶಗಳಿಂದ ಸಂಯೋಜನೆ ಮತ್ತು ಸದಸ್ಯತ್ವವು ನಿಯಮಿತವಾಗಿ ಬದಲಾಗಬಹುದು.
ಮಹರ್ಷಿ ವಾತ್ಸ್ಯಾಯನ ಕೃತವಾದ ಕಾಮಸೂತ್ರವೆಂಬ ಪ್ರಾಚೀನ ಭಾರತೀಯ ಸಂಸ್ಕೃತ ಗ್ರಂಥ ಮಾನವನ ಲೈಂಗಿಕ ವರ್ತನೆ ಮತ್ತು ಭಾರತೀಯ ಪುರುಷಾರ್ಥ ಚಿಂತನೆಯನ್ನು ಕುರಿತ ಪ್ರಮಾಣಿತ ಕೃತಿಯೆಂಬುದು ಪಂಡಿತಜನ ವೇದ್ಯವಾದ ವಿಷಯ. ವಾತ್ಸ್ಯಾಯನ ಕಾಮಸೂತ್ರವು ಪ್ರಧಾನವಾಗಿ ಸಂಭೋಗ ಭಂಗಿಗಳನ್ನು ಕುರಿತ ಲೈಂಗಿಕ ಕೈಪಿಡಿಯಲ್ಲ.ಅದು ಚೆನ್ನಾಗಿ ಬದುಕುವ ಕಲೆ, ಪ್ರೀತಿಯ ಸ್ವರೂಪ, ಸಂಗಾತಿಗಳನ್ನು ಹುಡುಕುವ ಕ್ರಮ, ಲೈಂಗಿಕ ಜೀವನವನ್ನು ಕಾಪಾಡಿಕೊಳ್ಳುವುದು ಮತ್ತು ಆನಂದ-ಆಧಾರಿತ ಸಾಮರ್ಥ್ಯಗಳಿಗೆ ಸಂಬಂಧಿಸಿದ ಇತರ ಅಂಶಗಳನ್ನು ಕುರಿತು ಮಾರ್ಗದರ್ಶಿಯಾಗಿದೆ. ಇದು ವಿಭಿನ್ನ ಭಾಷ್ಯಗಳೊಂದಿಗೆ (ವ್ಯಾಖ್ಯಾನಗಳು) ಆಧುನಿಕ ಯುಗದಲ್ಲಿ ಉಳಿದುಕೊಂಡಿರುವ ಸಂಕ್ಷಿಪ್ತ ಪೌರುಷ ಪದ್ಯಗಳನ್ನು ಹೊಂದಿರುವ ಸೂತ್ರ ವಿಭಾಗದ ಗ್ರಂಥವಾಗಿದೆ.
ಸತ್ಯ ಸಾಯಿ ಬಾಬ (ತೆಲುಗು:సత్య సాయిబాబా),ಅವರ ಜನ್ಮ ನಾಮ ಸತ್ಯನಾರಾಯಣ ರಾಜು (ಜನನ: ನವೆ೦ಬರ್ ೨೩, ೧೯೨೬; ನಿಧನ: ಏಪ್ರಿಲ್ ೨೪, ೨೦೧೧), ಇವರು ಒಬ್ಬ ಪ್ರಸಿದ್ಧ ದಕ್ಷಿಣ ಭಾರತದ ಧಾರ್ಮಿಕ ಗುರು ಹಾಗು ಶಿಕ್ಷಕ. ಭಕ್ತರು ಅವರನ್ನು ಅವತಾರ ಪುರುಷ, ದೇವ ಮಾನವ, ಆಧ್ಯಾತ್ಮಿಕ ಶಿಕ್ಷಕ ಹಾಗು ಅದ್ಭುತ ಪವಾಡಗಳನ್ನು ಮಾಡುವ ಕೆಲಸಗಾರ ಎಂದು ವರ್ಣಿಸಿದರು. ಸತ್ಯ ಸಾಯಿ ಬಾಬಾರವರು ಹಲವಾರು "ಪವಾಡ ಸದೃಶ", ಕೆಲಸಗಳನ್ನು ಮಾಡಿ ವಿಭೂತಿ (ಪವಿತ್ರ ಬೂದಿ) ಹಾಗು ಚಿಕ್ಕ ವಸ್ತುಗಳಾದ ಉ೦ಗುರ,ಕಂಠಹಾರ ಹಾಗು ಕೈಗಡಿಯಾರಗಳನ್ನು ಪ್ರತ್ಯಕ್ಷಮಾಡುತ್ತಿದ್ದರು, ಇದರಿ೦ದಾಗಿ ಅವರು ಪ್ರಸಿದ್ಧರಾದರಲ್ಲದೆ ಹಲವಾರು ವಾದವಿವಾದಗಳಿಗೆ ಎಡೆಮಾಡಿಕೊಟ್ಟರು, ಅಲ್ಲದೆ ಸ೦ದೇಹಾತ್ಮಕವಾಗಿ ಕೈಚಳಕವನ್ನು ಸಾಧಿಸುತ್ತಾರೆ ಎಂದು ಹಲವರು ಹೇಳಿದರೆ, ಭಕ್ತರು ಅದು ದೈವತ್ವದ ಪ್ರತೀಕ ಎಂದು ಭಾವಿಸಿದರು.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಅಜೆರ್ಬೈಜಾನ್ (Azərbaycan), ಅಧಿಕೃತವಾಗಿ ಅಜೆರ್ಬೈಜಾನ್ ಗಣರಾಜ್ಯ (ಅಜೆರ್ಬೈಜಾನಿ ಭಾಷೆಯಲ್ಲಿ: Azərbaycan Respublikası), ಪಶ್ಚಿಮ ಏಷ್ಯಾ ಮತ್ತು ಪೂರ್ವ ಯುರೋಪ್ಗಳ ಸಮ್ಮಿಲನದ ಜಾಗದಲ್ಲಿ ಇರುವ ಒಂದು ದೇಶ. ಪೂರ್ವಕ್ಕೆ ಕ್ಯಾಸ್ಪಿಯನ್ ಸಮುದ್ರ, ಉತ್ತರಕ್ಕೆ ರಷ್ಯಾ, ಪಶ್ಚಿಮಕ್ಕೆ ಟರ್ಕಿ ಮತ್ತು ಅರ್ಮೇನಿಯ, ಈಶಾನ್ಯಕ್ಕೆ ಜಾರ್ಜಿಯ ಮತ್ತು ದಕ್ಷಿಣಕ್ಕೆ ಇರಾನ್ಗಳೊಂದಿಗೆ ಗಡಿಯನ್ನು ಹೊಂದಿದೆ. ನೈಋತ್ಯ ಏಷ್ಯ ಮತ್ತು ಯುರೋಪ್‍ನಲ್ಲಿ ಇರುವ ಒಂದು ಸ್ವತಂತ್ರ ಗಣರಾಜ್ಯ.
ಗಣಕಯಂತ್ರವು ತನ್ನ ಕಾರ್ಯವನ್ನು ನಿರ್ವಹಿಸಲು ಬೇಕಾಗುವ ಉಪಕರಣಕ್ಕೆ ತಂತ್ರಾಂಶ(ಸಾಫ್ಟ್ ವೇರ್)ವೆಂದು ಕರೆಯಬಹುದು. ಸಾಮಾನ್ಯವಾಗಿ ಗಣಕಯಂತ್ರದಲ್ಲಿ ನಿರ್ದಿಷ್ಟ ಬಗೆಯ ಕೆಲಸಗಳಿಗೆ ಸೂಕ್ತ ರೀತಿಯ ತಂತ್ರಾಂಶಗಳನ್ನು ಬಳಸುತ್ತಾರೆ. ಮೈಕ್ರೋಸಾಫ್ಟ್ ನ ವಿಂಡೋಸ್ ಮತ್ತು ಲಿನಕ್ಸ್ ನಂಥ ತಂತ್ರಾಂಶಗಳು (Operating System) ಗಣಕಯಂತ್ರದ ಮುನ್ನೆಡೆಗೆ ಅಥವಾ ಕಾರ್ಯಾಚರಣೆಗೆ ಬಳಕೆಯಾದರೆ,ಮೈಕ್ರೋಸಾಫ್ಟ್ ಆಫೀಸ್,ಅಟೋಕ್ಯಾಡ್,ಫೋಟೋಶಾಪ್,ಬರಹ ಮುಂತಾದವುಗಳು ನಿರ್ದಿಷ್ಟ ರೀತಿಯ ಕಾರ್ಯಗಳಿಗಾಗಿ ಉಪಯೋಗಿಸಲ್ಪಡುತ್ತವೆ.
ಬಸಪ್ಪ ದಾನಪ್ಪ ಜತ್ತಿ(ಬಿ.ಡಿ.ಜತ್ತಿ) (ಸೆಪ್ಟೆಂಬರ್ 10,1912 - ಜೂನ್ 7, 2002) - ಭಾರತದ ಮಾಜಿ ಉಪರಾಷ್ಟ್ರಪತಿಗಳಲ್ಲೊಬ್ಬರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಲ್ಲೊಬ್ಬರು. ಸ್ವಲ್ಪ ದಿನಗಳ ಕಾಲ ಹಂಗಾಮಿ ರಾಷ್ಟ್ರಪತಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಕರ್ನಾಟಕದ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮ ಪಂಚಾಯತಿಯಿಂದ ದೇಶದ ಹಂಗಾಮಿ ರಾಷ್ಟ್ರಪತಿ ಹುದ್ದೆಯವರೆಗೆ ತಲುಪಿದ ಏಕೈಕ ರಾಜಕಾರಣಿ ಬಿ.ಡಿ.ಜತ್ತಿ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಸಿನಮಾವು ಪ್ರತ್ಯೇಕವಾದ ಚಲನಚಿತ್ರಗಳು, ಒಂದು ಕಲಾ ಪ್ರಕಾರವಾಗಿ ಚಲನಚಿತ್ರದ ಕಾರ್ಯಕ್ಷೇತ್ರ, ಮತ್ತು ಚಿತ್ರೋದ್ಯಮವನ್ನು ಒಳಗೊಳ್ಳುತ್ತದೆ. ವಿಶ್ವದ ಚಿತ್ರಗಳನ್ನು ಕ್ಯಾಮೆರಾದಿಂದ ಮುದ್ರಿಸಿ, ಅಥವಾ ಅನಿಮೇಶನ್ ತಂತ್ರಗಳು ಅಥವಾ ಸ್ಪೆಶಲ್ ಇಫೆಕ್ಟ್‌ಗಳನ್ನು ಬಳಸಿ ಚಿತ್ರಗಳನ್ನು ಸೃಷ್ಟಿಸಿ ಚಲನಚಿತ್ರಗಳನ್ನು ನಿರ್ಮಿಸಲಾಗುತ್ತದೆ. ಚಿತ್ರ, ಚಲನಚಿತ್ರ, ನಾಟಕೀಯ ಚಿತ್ರ ಅಥವಾ ಫೋಟೊಪ್ಲೇ ಎಂದೂ ಸಹ ಕರೆಯಲ್ಪಡುವ ಒಂದು ಚಿತ್ರ, ಪರದೆಯ ಮೇಲೆ ತೋರಿಸುವಾಗ, ಚಲಿಸುವ ಚಿತ್ರಗಳ ಭ್ರಮೆಯನ್ನು ಸೃಷ್ಟಿಸುವ ಚಿತ್ರಗಳ ಒಂದು ಸರಣಿಯಾಗಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.