The most-visited English Wikipedia articles, updated daily. Learn more...
೧೯೪೭ ಆಗಸ್ಟ್ ೧೫ರಂದು ಭಾರತ ಸ್ವತಂತ್ರವಾಯಿತು. ಆದರೆ ಆಗ ಭಾರತದೊಡನೆ ವಿಲೀನವಾಗಲು ಬಯಸಿದ ತನ್ನ ಸಂಸ್ಥಾನದ ಬಹುಜನರ ಅಭಿಪ್ರಾಯವನ್ನು ವಿರೋಧಿಸಿದ ಹೈದರಾಬಾದಿನ ನಿಜಾಮ ಮೀರ್ ಉಸ್ಮಾನ್ ಅಲಿ, "ಡೆಕ್ಕನ್ ರೇಡಿಯೋ" (ಅಥವಾ "ನಿಜಾಮ್ ರೇಡಿಯೋ") ಮೂಲಕ ಹೈದರಾಬಾದ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿದ. ನಿರೀಕ್ಷೆಯಂತೆ ಪಾಕಿಸ್ತಾನವು ಹೈದರಾಬಾದ ಸ್ವತಂತ್ರ ರಾಷ್ಟ್ರವೆಂದು ಮಾನ್ಯ ಮಾಡಿದ ಮೊದಲ ದೇಶವಾಯಿತು.
ವಿಶ್ವಕರ್ಮನು (ಸಂಸ್ಕೃತದಲ್ಲಿ ಈ ಶಬ್ದದ ಅರ್ಥ - ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ, ಎಲ್ಲವನ್ನು ಮಾಡುವವನು) ಸೃಷ್ಟಿಯ ವ್ಯಕ್ತೀಕರಣ ಮತ್ತು ಋಗ್ವೇದದ ಪ್ರಕಾರ ಸೃಷ್ಟಿ ದೇವತೆಯ ಅಮೂರ್ತ ರೂಪ. ಇವನು ವಿಶ್ವಕರ್ಮ ಜಾತಿಯವರ, ಅಭಿಯಂತರರ, ಕುಶಲಕರ್ಮಿಗಳ ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವತೆಯಾಗಿದ್ದಾನೆ. ಇವನು "ಬ್ರಹ್ಮಾಂಡದ ಪ್ರಧಾನ ವಾಸ್ತುಶಿಲ್ಪಿ" ಮತ್ತು ಬ್ರಹ್ಮನ್ ಹಾಗೂ ಪುರುಷರ ಮೂಲ ಪರಿಕಲ್ಪನೆ ಎಂದು ನಂಬಲಾಗಿದೆ.
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ - ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ನೀಡುವ, ವಾರ್ಷಿಕ ಪ್ರಶಸ್ತಿ. ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದ ದಾದಾಸಾಹೇಬ್ ಫಾಲ್ಕೆ, '(ದುಂಡಿರಾಜ್ ಗೋವಿಂದ ಫಾಲ್ಕೆ)' ಯವರ, 'ಜನ್ಮ ಶತಾಬ್ದಿಯ ವರ್ಷ'ವಾದ ೧೯೬೯ರಲ್ಲಿ ಈ ಪ್ರಶಸ್ತಿಯನ್ನು ನೀಡುವ ಪರಂಪರೆ, ಉಗಮಗೊಂಡಿತು. 'ಪ್ರತಿ ವರ್ಷದ ಪ್ರಶಸ್ತಿ'ಯನ್ನು ಅದರ ಮುಂದಿನ ವರ್ಷದ ಕೊನೆಯಲ್ಲಿ ನಡೆಯುವ 'ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನದ ಸಂದರ್ಭ'ದಲ್ಲಿ ನೀಡಲಾಗುತ್ತದೆ.
(ಜನನ: ೩೦ ಏಪ್ರಿಲ್ ೧೮೯೦-ಮರಣ: ೧೬ ಫೆಬ್ರುವರಿ ೧೯೪೪) ದಾದಾ ಸಾಹೇಬ್ ಫಾಲ್ಕೆ ಯೆಂದು ಪ್ರಸಿದ್ಧರಾದ, 'ದುಂಡಿರಾಜ್ ಗೋವಿಂದ ಫಾಲ್ಕೆ'ಯವರು, ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದವರು. ಅವರು ಗತಿಸಿ ೧೨ ದಶಕಗಳಾದರೂ, ಮಹಾರಾಷ್ಟ್ರದ ಹಾಗೂ ಭಾರತದ ಬೆಳ್ಳಿ-ತೆರೆಯ ಇತಿಹಾಸದಲ್ಲಿ, ಎಂದೆಂದಿಗೂ ಮರೆಯಲಾರದ ವ್ಯಕ್ತಿಯಾಗಿ, ವಿಜೃಂಭಿಸುತ್ತಿದ್ದಾರೆ. ಭಾರತದಲ್ಲಿ ಚಲನಚಿತ್ರ ಲೋಕವನ್ನು ಸೃಷ್ಟಿಸಿದ ಅವರ ಮನೆಯಲ್ಲಿ ಇಟ್ಟ ಹೆಸರು, 'ಧುಂಡಿರಾಜ್ ಗೋವಿಂದ ಫಾಲ್ಕೆ'ಯೆಂದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಹೈದರಾಬಾದ್ ಸಂಸ್ಥಾನ ( ) ಒಂದು ಸ್ವತಂತ್ರ ರಾಜಪ್ರಭುತ್ವ / ರಾಜಕ ಸಂಸ್ಥಾನ/ ದೇಶ ಭಾರತ ಉಪಖಂಡದ ದಕ್ಷಿಣ-ಮಧ್ಯ ದಕ್ಖಿನ ಪ್ರದೇಶದಲ್ಲಿ ಹೈದರಾಬಾದ್ ನಗರದಲ್ಲಿ ಅದರ ರಾಜಧಾನಿಯನ್ನು ಹೊಂದಿದೆ. ಇದನ್ನು ಈಗ ಇಂದಿನ ತೆಲಂಗಾಣ ರಾಜ್ಯ, ಕರ್ನಾಟಕದ ಕಲ್ಯಾಣ-ಕರ್ನಾಟಕ ಪ್ರದೇಶ ಮತ್ತು ಭಾರತದಲ್ಲಿ ಮಹಾರಾಷ್ಟ್ರದ ಮರಾಠವಾಡ ಪ್ರದೇಶ ಎಂದು ವಿಂಗಡಿಸಲಾಗಿದೆ. ಈ ರಾಜ್ಯವನ್ನು 1724 ರಿಂದ 1857 ರವರೆಗೆ ನಿಜಾಮನು ಆಳಿದನು, ಅವನು ಆರಂಭದಲ್ಲಿ ದಕ್ಖನಿನಲ್ಲಿ ಮೊಘಲ್ ಸಾಮ್ರಾಜ್ಯದ ಉಪರಾಯ ಆಗಿದ್ದನು.
ನೇಗಿಲು ಬೀಜ ಬಿತ್ತುವ ಅಥವಾ ಸಸ್ಯ ನೆಡುವ ತಯಾರಿಕೆಯಲ್ಲಿ ಮಣ್ಣನ್ನು ಸಡಿಲಗೊಳಿಸಲು ಅಥವಾ ತಿರುಗಿಸುವ ಸಲುವಾಗಿ ಮಣ್ಣಿನ ಆರಂಭಿಕ ಸಾಗುವಳಿಗಾಗಿ ಕೃಷಿಯಲ್ಲಿ ಬಳಸಲಾದ ಒಂದು ಉಪಕರಣ ಅಥವಾ ಕೃಷಿ ಸಾಮಗ್ರಿ. ಸಾಂಪ್ರದಾಯಿಕವಾಗಿ ನೇಗಿಲುಗಳನ್ನು ಕುದುರೆಗಳು ಅಥವಾ ದನಗಳಂತಹ ಕೆಲಸದ ಪ್ರಾಣಿಗಳು ಎಳೆಯುತ್ತಿದ್ದವು, ಆದರೆ ಆಧುನಿಕ ಕಾಲದಲ್ಲಿ ಟ್ರ್ಯಾಕ್ಟರ್‌ಗಳು ಎಳೆಯುತ್ತವೆ. ನೇಗಿಲನ್ನು ಕಟ್ಟಿಗೆ, ಕಬ್ಬಿಣ ಅಥವಾ ಉಕ್ಕಿನಿಂದ ತಯಾರಿಸಬಹುದು.
ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ
"ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಪೆರಿಯಾರ್ ರಾಮಸ್ವಾಮಿ (ಸೆಪ್ಟೆಂಬರ್ ೧೭, ೧೮೭೯–ಡಿಸೆಂಬರ್ ೨೪, ೧೯೭೩) - ಇ.ವಿ.ಆರ್, ಇ.ವಿ. ರಾಮಸ್ವಾಮಿ ನಾಯ್ಕರ್, ತಂತೈ ಪೆರಿಯಾರ್, ಅಥವಾ ಪೆರಿಯಾರ್ ಎಂದು ಹಲವಾರು ಹೆಸರುಗಳಿಂದ ಪ್ರಖ್ಯಾತರಾಗಿದ್ದ "ಪೆರಿಯಾರ್ ರಾಮಸ್ವಾಮಿ" ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂನ ಸ್ಥಾಪಕ ಮತ್ತು "ತಮಿಳು ಸ್ವಾಭಿಮಾನ ಚಳುವಳಿ" ಯ ನಾಯಕರಾಗಿದ್ದರಲ್ಲದೇ, ಸ್ವಾತಂತ್ರ ಹೋರಾಟಗಾರರಾಗಿದ್ದರೂ ನಂತರ ಬ್ರಿಟಿಷರ ವಸಾಹತು ಆಡಳಿತವನ್ನು ಒಪ್ಪಿಕೊಂಡಿದ್ದರು. ತಮಿಳು ಭಾಷೆಯಲ್ಲಿ 'ಪೆರಿಯಾರ್' ಅಂದ್ರೆ ಗೌರವಾನ್ವಿತ, ಅಥವಾ ದೊಡ್ಡವರು ಎಂಬರ್ಥವಿದೆ.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
"ಗ್ರ್ಯಾಂಡ್ ಓಲ್ಡ್ ಮ್ಯಾನ್ ಆಫ್ ಇಂಡಿಯಾ" ಮತ್ತು "ಭಾರತದ ಅನಧಿಕೃತ ರಾಯಭಾರಿ" ಎಂದೂ ಕರೆಯಲ್ಪಡುವ ಸರ್ ದಾದಾಭಾಯಿ ನವರೋಜಿ ದೋರ್ಡಿ (4 ಸೆಪ್ಟೆಂಬರ್ 1825 - 30 ಜೂನ್ 1917) ಬ್ರಿಟಿಷ್ ಪಾರ್ಸಿ ವಿದ್ವಾಂಸ, ವ್ಯಾಪಾರಿ ಮತ್ತು ರಾಜಕಾರಣಿಯಾಗಿದ್ದು, ಅವರು 1892 ಮತ್ತು 1895 ರ ನಡುವೆ ಯುನೈಟೆಡ್ ಕಿಂಗ್‌ಡಮ್ ಹೌಸ್ ಆಫ್ ಕಾಮನ್ಸ್‌ನಲ್ಲಿ,ಲಿಬರಲ್ ಪಕ್ಷದ ಸಂಸತ್ ಸದಸ್ಯರಾಗಿದ್ದರು(ಸಂಸದ ) ಮತ್ತು ಬ್ರಿಟಿಷ್ ಸಂಸದರಾದ ಮೊದಲ ಭಾರತೀಯ, ಆಂಗ್ಲೋ-ಇಂಡಿಯನ್ ಸಂಸದ ಡೇವಿಡ್ ಆಕ್ಟರ್‌ಲೋನಿ ಡೈಸ್ ಸೊಂಬ್ರೆ ಅವರ ಹೊರತಾಗಿಯೂ, ಭ್ರಷ್ಟಾಚಾರಕ್ಕೆ ಹಕ್ಕು ನಿರಾಕರಿಸಿದರು. ನೌರೋಜಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸ್ಥಾಪಕ ಸದಸ್ಯರಲ್ಲಿ ಒಬ್ಬರು. ಅವರ ಪುಸ್ತಕ ಪಾವರ್ಟಿ ಅಂಡ್ ಅನ್-ಬ್ರಿಟಿಷ್ ರೂಲ್ ಇನ್ ಇಂಡಿಯಾ ಭಾರತದ ಸಂಪತ್ತನ್ನು ಬ್ರಿಟನ್‌ಗೆ ಪರಿಚಯಿಸುವುದರ ಬಗ್ಗೆ ಗಮನ ಸೆಳೆಯಿತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಟೆಂಪ್ಲೇಟು:Infobox ಜಿಲ್ಲೆಕಲಬುರಗಿ ಜಿಲ್ಲೆ, ಹಿಂದೆ ಗುಲ್ಬರ್ಗಾ ಜಿಲ್ಲೆ ಎಂದು ಕರೆಯಲಾಗುತ್ತಿತ್ತು, ದಕ್ಷಿಣ ಭಾರತದ ಕರ್ನಾಟಕ ರಾಜ್ಯದ 31 ಜಿಲ್ಲೆಗಳಲ್ಲಿ ಒಂದಾಗಿದೆ. ಕಲಬುರಗಿ ನಗರವು ಜಿಲ್ಲೆಯ ಆಡಳಿತ ಕೇಂದ್ರವಾಗಿದೆ. ಈ ಜಿಲ್ಲೆ ಕಲಬುರಗಿ ವಿಭಾಗದ ಕೇಂದ್ರವಾಗಿದೆ.ಕಲಬುರಗಿವು ಕರ್ನಾಟಕದ ಎರಡನೇ ದೊಡ್ಡ ಜಿಲ್ಲೆ ಎಂದು ಗುರುತಿಸಿಕೊಂಡಿದೆ.ಇದು ಒಂದು ಕರ್ನಾಟಕದ ಕಂದಾಯ ವಿಭಾಗವಾಗಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
೨೦೨೪ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ
ಜುಲೈ 26ರಿಂದ ಆಗಸ್ಟ್ 11, 2024ರವರೆಗೆ ಫ್ರಾನ್ಸ್ನ ರಾಜಧಾನಿ ಪ್ಯಾರಿಸ್ನಲ್ಲಿ ನಡೆಯಲಿರುವ 2024ರ ಬೇಸಿಗೆ ಒಲಿಂಪಿಕ್ಸ್ನಲ್ಲಿ ಭಾರತ ಸ್ಪರ್ಧಿಸಲಿದೆ. ಭಾರತೀಯ ಕ್ರೀಡಾಪಟುಗಳು ಒಲಿಂಪಿಕ್ ಕ್ರೀಡಾಕೂಟದ ಪ್ರತಿ ಆವೃತ್ತಿಯಲ್ಲೂ ಕಾಣಿಸಿಕೊಂಡಿದ್ದರೂ, 1900ರಲ್ಲಿ ಪ್ಯಾರಿಸ್ನಲ್ಲಿ ತಂಡದ ಅಧಿಕೃತ ಚೊಚ್ಚಲ ಪ್ರವೇಶವನ್ನು ಮಾಡಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜನರ, ವಸ್ತುಗಳ, ಘಟನೆಗಳ ಅಥವಾ ಸನ್ನಿವೇಶಗಳ ಒಂದು ಆಳವಾದ ತಿಳಿಯುವಿಕೆ ಮತ್ತು ಮನಗಾಣುವಿಕೆ, ಮತ್ತು ಆರಿಸುವ ಸಾಮರ್ಥ್ಯ ಅಥವಾ ಕಡಿಮೆ ಸಮಯ ಮತ್ತು ಶಕ್ತಿಯನ್ನು ಬಳಸಿಕೊಂಡು ಗರಿಷ್ಠ ಫಲಿತಾಂಶಗಳನ್ನು ಒಂದೇ ಸಮನೇ ಉತ್ಪತ್ತಿ ಮಾಡುವುದಕ್ಕೆ ಬುದ್ಧಿವಂತಿಕೆ ಎನ್ನುವರು. ಬುದ್ಧಿವಂತಿಕೆಯು ಗ್ರಹಿಕೆ ಮತ್ತು ಜ್ಞಾನಗಳನ್ನು ಅತ್ಯುತ್ತಮವಾಗಿ (ಪರಿಣಾಮಕಾರಿಯಾಗಿ ಮತ್ತು ಸಮರ್ಥವಾಗಿ) ಅನ್ವಯಿಸುವ ಮತ್ತು ಆದ್ದರಿಂದ ಉದ್ದೇಶಿತ ಫಲಿತಾಂಶಗಳನ್ನು ಉತ್ಪತ್ತಿ ಮಾಡುವ ಸಾಮರ್ಥ್ಯವಾಗಿದೆ. ಬುದ್ಧಿವಂತಿಕೆಯು ಕ್ರಿಯೆಗೆ ಅತ್ಯುತ್ತಮ ನಿರ್ಣಯದ ಜೊತೆಗೂಡಿ ಯಾವುದು ನಿಜ ಅಥವಾ ಸರಿ ಎಂಬುದರ ಗ್ರಹಿಸುವಿಕೆಯಾಗಿದೆ.