The most-visited English Wikipedia articles, updated daily. Learn more...
ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ
"ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿವು ಭಾರತದ ಚಲನಚಿತ್ರ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಭಾರತ ಸರ್ಕಾರದಿಂದ ನೀಡಲಾಗುತ್ತದೆ ಮತ್ತು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಸಮಾರಂಭದಲ್ಲಿ ಪ್ರತಿವರ್ಷ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿ ಪುರಸ್ಕೃತರನ್ನು ಅವರ "ಭಾರತೀಯ ಚಲನಚಿತ್ರೋದ್ಯಮದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅತ್ಯುತ್ತಮ ಕೊಡುಗೆ"ಗಾಗಿ ಗೌರವಿಸಲಾಗುತ್ತದೆ, ಮತ್ತು ಭಾರತೀಯ ಚಲನಚಿತ್ರೋದ್ಯಮದ ಪ್ರಮುಖ ವ್ಯಕ್ತಿಗಳನ್ನು ಒಳಗೊಂಡ ಸಮಿತಿಯಿಂದ ಆಯ್ಕೆ ಮಾಡಲಾಗುತ್ತದೆ. ಈ ಪ್ರಶಸ್ತಿಯು ಒಂದು ಸ್ವರ್ಣ ಕಮಲ (ಚಿನ್ನದ ಕಮಲ) ಪದಕ, ಒಂದು ಶಾಲು, ಮತ್ತು ₹೧೫ lakh (US$೧೬,೦೦೦) ನಗದು ಬಹುಮಾನವನ್ನು ಒಳಗೊಂಡಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಅನಂತ ಚತುರ್ದಶಿಯು ಭಗವಾನ್ ವಿಷ್ಣುವಿಗೆ ಸಮರ್ಪಿತವಾದ ಹಬ್ಬವಾಗಿದೆ, ಇದನ್ನು ಹಿಂದೂಗಳು ಮತ್ತು ಜೈನರು ಆಚರಿಸುತ್ತಾರೆ. ಅನಂತ ಚತುರ್ದಶಿಯು ಹತ್ತು ದಿನಗಳ ಕಾಲ ನಡೆಯುವ ಗಣೇಶೋತ್ಸವ ಅಥವಾ ಗಣೇಶ ಚತುರ್ಥಿ ಹಬ್ಬದ ಕೊನೆಯ ದಿನವಾಗಿದೆ ಮತ್ತು ಭಕ್ತರು ಅನಂತ ಚತುರ್ದಶಿಯಂದು ಗಣೇಶನ ವಿಗ್ರಹಗಳನ್ನು ನೀರಿನಲ್ಲಿ ಮುಳುಗಿಸುವ ಮೂಲಕ (ವಿಸರ್ಜನ) ದೇವರಿಗೆ ವಿದಾಯ ಹೇಳಿದಾಗ ಗಣೇಶ ಚೌದಾಸ್ ಎಂದೂ ಕರೆಯುತ್ತಾರೆ. ಚತುರ್ದಶಿಯು ಚಂದ್ರನ ಹದಿನೈದು ದಿನಗಳ 14 ನೇ ದಿನವಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಅಮಿತ್ ಶಾ (ಜನನ 22 ಅಕ್ಟೋಬರ್ 1964) ಒಬ್ಬ ಭಾರತೀಯ ರಾಜಕಾರಣಿ ಮತ್ತು ಪ್ರಸ್ತುತ ಗುಜರಾತಿನ ರಾಜ್ಯಸಭಾ ಎಂಪಿ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಯ ಪ್ರಸ್ತುತ ಅಧ್ಯಕ್ಷರಾಗಿದ್ದಾರೆ. ನಾಲ್ಕು ಸತತ ಚುನಾವಣೆಗಳಲ್ಲಿ ಸರ್ಖೇಜ್ನ ಶಾಸಕರಾಗಿ ಚುನಾಯಿತರಾಗಿದ್ದಾರೆ 1997 (ಉಪಚುನಾವಣೆ), 1998, 2002 ಮತ್ತು 2007. ಅಮಿತ್ ಶಾ', ೨೦೧೪ ರ ಸಾರ್ವತ್ರಿಕ ಚುನಾವಣೆಯಲ್ಲಿ ಬಹಳ ಮಹತ್ವದ ಪಾತ್ರ ವಹಿಸಿದ್ದರು.
ಗೋವಿಂದಾ (ಹಿಂದಿ:गोविंदा; ಗೋವಿಂದ್ ಅರುಣ್ ಅಹುಜಾ, ೧೯೬೩ ರ ಡಿಸೆಂಬರ್ ೨೧ ರಂದು ಜನನ), ಇವರು ಫಿಲ್ಮ್ ಫೇರ್ ಪ್ರಶಸ್ತಿ-ವಿಜೇತರಾಗಿರುವ ಭಾರತೀಯ ನಟ ಮತ್ತು ರಾಜಕಾರಣಿಯಾಗಿದ್ದಾರೆ. ಇವರು ಸುಮಾರು ೧೨೦ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ವೃತ್ತಿಜೀವನದ ಆರಂಭದಲ್ಲಿ, ಅವರ ನಟನೆ ಮತ್ತು ನೃತ್ಯ ಕೌಶಲಗಳು ಚಲನಚಿತ್ರ ವೀಕ್ಷರಲ್ಲಿ ಜನಪ್ರಿಯತೆ ಗಳಿಸುವಂತೆ ಮಾಡಿದವು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವ್ಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಸಚಿನ್ ರಮೇಶ್ ತೆಂಡೂಲ್ಕರ್ (ಜನನ: ೨೪-ಏಪ್ರಿಲ್-೧೯೭೩) ಭಾರತದ ಖ್ಯಾತ ಕ್ರಿಕೆಟ್ ಆಟಗಾರ . ಕ್ರಿಕೆಟ್ ಲೋಕದ ದೇವರು ಎಂದೇ ಹೆಸರು ಮಾಡಿರುವ ಸಚಿನ್, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದಾಖಲೆಗಳ ಸರದಾರ ಎನಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲಿ ಅತಿ ಹೆಚ್ಚು ಶತಕ ಹಾಗೂ ರನ್‌ಗಳನ್ನು ಭಾರಿಸಿರುವ ದಾಖಲೆ ಹೊಂದಿರುವ ಸಚಿನ್ ಅವರನ್ನು ಲಿಟಲ್ ಮಾಸ್ಟರ್ ಎಂದೂ ಕರೆಯಲಾಗುತ್ತದೆ.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು
ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಡಯಾನಾ, ವೇಲ್ಸ್ ರಾಜಕುಮಾರಿಯ ಆಭರಣಗಳು
ಡಯಾನಾ, ವೇಲ್ಸ್ ರಾಜಕುಮಾರಿ, ಬ್ರಿಟಿಷ್ ರಾಜಮನೆತನದ ಸದಸ್ಯೆಯಾಗಿದ್ದ ಅವಧಿಯಲ್ಲಿ ಹಾಗೂ ಖಾಸಗಿ ವ್ಯಕ್ತಿಯಾಗಿದ್ದಾಗಲೂ ಆಭರಣಗಳ ಒಂದು ಸಂಗ್ರಹವನ್ನು ಹೊಂದಿದ್ದರು. ಇವು ರಾಜಮಕುಟದ ಪಟ್ಟಾಭಿಷೇಕ ಮತ್ತು ರಾಜ್ಯ ಸಮಾರಂಭಗಳಲ್ಲಿ ಬಳಸುವ ರಾಜಮಕುಟದ ಆಭರಣಗಳಿಂದ ಪ್ರತ್ಯೇಕವಾಗಿದ್ದವು. ಅವರ ಬಹುತೇಕ ಆಭರಣಗಳು ವಿದೇಶಿ ರಾಜಮನೆತನಗಳಿಂದ ದೊರೆತ ಉಡುಗೊರೆಗಳು, ರಾಣಿ ಎಲಿಜಬೆತ್ II ಅವರಿಂದ ಸಾಲವಾಗಿ ಪಡೆದವು, ವಿವಾಹದ ಉಡುಗೊರೆಗಳು, ಡಯಾನಾ ಸ್ವತಃ ಖರೀದಿಸಿದವು ಅಥವಾ ಸ್ಪೆನ್ಸರ್ ಕುಟುಂಬಕ್ಕೆ ಸೇರಿದ ಪಾರಂಪರಿಕ ಆಭರಣಗಳಾಗಿದ್ದವು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ದಕ್ಷಿಣ ಭಾರತದ ಕೆಲವು ಭಾಗಗಳನ್ನು ಧೀರ್ಘಕಾಲ ಆಳಿದ ರಾಜವಂಶಗಳಲ್ಲಿ ಚೋಳರ ವಂಶವು (ತಮಿಳು:சோழர் குலம், ಟೆಂಪ್ಲೇಟು:IPA2ಒಂದು ಪ್ರಮುಖ ತಮಿಳು ನಾಯಕ ರಾಜವಂಶವಾಗಿದೆ. ಕಿಸ್ತ ಪೂರ್ವ 3ರನೇ ಶತಮಾನದಲ್ಲಿ ಉತ್ತರಭಾರತದ ದೊರೆಯಾಗಿದ್ದ. ಅಶೋಕನ, ಕಾಲದ ಶಾಸನಗಳು, ಈ ವಂಶವು ಕ್ರಿಸ್ತಶಕ 13ನೇ ಶತಮಾನದವರೆಗೆ ತಮ್ಮ ಆಳ್ವಿಕೆಯನ್ನು ಮುಂದುವರೆಸಿಕೊಂಡು ಹೋದುದಕ್ಕೆ ಪುರಾವೆಗಳನ್ನು ಕೊಡುತ್ತವೆ.ಚೋಳರನ್ನು ಕರ್ನಾಟಕದ ಇತಿಹಾಸಕಾರ ಪ್ರಕಾರ,ಸಾಮಂತ ಕ್ಷತ್ರಿಯರು(ಪಲ್ಲವ ರಾಜ್ಯದ ಸೈನಿಕರು) ಎಂದು ಬಣ್ಣಿಸಲಾಗಿದೆ...
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್‌ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
(ಜನನ: ೩೦ ಏಪ್ರಿಲ್ ೧೮೯೦-ಮರಣ: ೧೬ ಫೆಬ್ರುವರಿ ೧೯೪೪) ದಾದಾ ಸಾಹೇಬ್ ಫಾಲ್ಕೆ ಯೆಂದು ಪ್ರಸಿದ್ಧರಾದ, 'ದುಂಡಿರಾಜ್ ಗೋವಿಂದ ಫಾಲ್ಕೆ'ಯವರು, ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದವರು. ಅವರು ಗತಿಸಿ ೧೨ ದಶಕಗಳಾದರೂ, ಮಹಾರಾಷ್ಟ್ರದ ಹಾಗೂ ಭಾರತದ ಬೆಳ್ಳಿ-ತೆರೆಯ ಇತಿಹಾಸದಲ್ಲಿ, ಎಂದೆಂದಿಗೂ ಮರೆಯಲಾರದ ವ್ಯಕ್ತಿಯಾಗಿ, ವಿಜೃಂಭಿಸುತ್ತಿದ್ದಾರೆ. ಭಾರತದಲ್ಲಿ ಚಲನಚಿತ್ರ ಲೋಕವನ್ನು ಸೃಷ್ಟಿಸಿದ ಅವರ ಮನೆಯಲ್ಲಿ ಇಟ್ಟ ಹೆಸರು, 'ಧುಂಡಿರಾಜ್ ಗೋವಿಂದ ಫಾಲ್ಕೆ'ಯೆಂದು.
ಗ್ರಂಥ ಸಂಪಾದನೆ ಎಂದರೆ ಉಪಲಬ್ಧವಿರುವ ಪ್ರತಿಗಳ ಆಧಾರದ ಮೇಲೆ ಗ್ರಂಥದ ಮೂಲಪಾಠವೇನಿದ್ದಿರಬಹುದೆಂಬುದನ್ನು ಗುರುತಿಸುವ ಹಾಗೂ ಸಮಗ್ರ ಗ್ರಂಥದ ಬಗ್ಗೆ ವಿಮರ್ಶೆಯನ್ನು ನೀಡುವ ಕೆಲಸ (ಟೆಕ್ಸ್‍ಚುಅಲ್ ಕ್ರಿಟಿಸಿಸóಂ). ಕೈಬರೆಹದಲ್ಲಿ ಉಳಿದಿರುವ ಕೃತಿಗಳ ಸಂಪಾದನೆಯಲ್ಲೇ ಹೆಚ್ಚಿನ ಕ್ಲೇಶಗಳು ಕಂಡುಬರುತ್ತವಾಗಿ ಅವನ್ನೇ ಗಮನದಲ್ಲಿಟ್ಟುಕೊಂಡು ವಿಷವನ್ನಿಲ್ಲಿ ವಿಮರ್ಶಿಸಲಾಗಿದೆ. ಹಿಂದಿನ ಕಾಲದಲ್ಲಿ ಕವಿಗಳು, ಜ್ಞಾನಿಗಳು, ಸಂತರು ತಾವು ಲೋಕಕ್ಕೆ ಹೇಳಬಯಸಿದ ವಿಚಾರಗಳನ್ನು ಭೂರ್ಜಪತ್ರಗಳ ಮೇಲೂ ತಾಳೆಗರಿಗಳ ಮೇಲೂ ಬರೆದಿಡುತ್ತಿದ್ದರು.
ಉಡುಪಿ (Tulu: ಒಡಿಪು) ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಶುದ್ಧವಾದ ವೈಷ್ಣವಮತ ಪ್ರತಿಪಾದಿಸಿದ ತ್ರೈಲೋಕ್ಯಾಚಾರ್ಯರಾದ ಶ್ರೀ ಮಧ್ವಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಕೃಷ್ಣ ಮಂದಿರ ಇರುವುದು ಉಡುಪಿಯಲ್ಲಿಯೇ. ಶ್ರೀ ವ್ಯಾಸತೀರ್ಥರು, ಶ್ರೀಮದ್ ವಾದಿರಾಜ ತೀರ್ಥರು, ಶ್ರೀರಾಘವೇಂದ್ರ ತೀರ್ಥ ಗುರುರಾಜರು, ಪುರಂದರದಾಸರು, ಕನಕದಾಸರು, ವಿಜಯದಾಸರು ಈ ಎಲ್ಲ ಮಹನೀಯರೂ ಸಹ ಶ್ರೀಮನ್ ಮಧ್ವಾಚಾರ್ಯರನ್ನು ನಿತ್ಯ ಉಪಾಸಿಸುವ, ಅವರ ಅನುಯಾಯಿಗಳೇ.