The most-visited English Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಅನಂತ ಚತುರ್ದಶಿಯು ಭಗವಾನ್ ವಿಷ್ಣುವಿಗೆ ಸಮರ್ಪಿತವಾದ ಹಬ್ಬವಾಗಿದೆ, ಇದನ್ನು ಹಿಂದೂಗಳು ಮತ್ತು ಜೈನರು ಆಚರಿಸುತ್ತಾರೆ. ಅನಂತ ಚತುರ್ದಶಿಯು ಹತ್ತು ದಿನಗಳ ಕಾಲ ನಡೆಯುವ ಗಣೇಶೋತ್ಸವ ಅಥವಾ ಗಣೇಶ ಚತುರ್ಥಿ ಹಬ್ಬದ ಕೊನೆಯ ದಿನವಾಗಿದೆ ಮತ್ತು ಭಕ್ತರು ಅನಂತ ಚತುರ್ದಶಿಯಂದು ಗಣೇಶನ ವಿಗ್ರಹಗಳನ್ನು ನೀರಿನಲ್ಲಿ ಮುಳುಗಿಸುವ ಮೂಲಕ (ವಿಸರ್ಜನ) ದೇವರಿಗೆ ವಿದಾಯ ಹೇಳಿದಾಗ ಗಣೇಶ ಚೌದಾಸ್ ಎಂದೂ ಕರೆಯುತ್ತಾರೆ. ಚತುರ್ದಶಿಯು ಚಂದ್ರನ ಹದಿನೈದು ದಿನಗಳ 14 ನೇ ದಿನವಾಗಿದೆ.
ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ
"ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಹಿಂದೂ ಧರ್ಮ ದಲ್ಲಿ, ಸೂರ್ಯದೇವ (ದೇವನಾಗರಿ : सूर्य, ಸೂರ್ಯ ("ಅತ್ಯುಚ್ಚ ಬೆಳಕು "); Malay: [Suria] ; ಥಾಯ್:พระอาทิตย์ Suraya, Suriya or Phra Athit) ಮುಖ್ಯ ಸೂರ್ಯನ ದೇವತೆ , ಆದಿತ್ಯ ರಲ್ಲಿ ಒಬ್ಬ ಕಶ್ಯಪ ನ ಮಗ ಮತ್ತು ಅವನ ಹೆಂಡತಿಯರಲ್ಲಿ ಒಬ್ಬಳು, ಅದಿತಿ ; ಇಂದ್ರ ನ ಪತ್ನಿ ; ಅಥವಾ ದಯುಸ್ ಪಿತರ್ (ಅವತರಿಣಿಕೆಯ ಆಧಾರದನ್ವಯ ). ಸಾಮಾನ್ಯವಾಗಿ ಸೂರ್ಯ ನನ್ನು, ಸನ್‌ಎಂದು ಕರೆಯಲ್ಪಡುತ್ತಾರೆ. ಸೂರ್ಯನಿಗೆ ಕೂದಲುಗಳಿದ್ದು, ಚಿನ್ನ ದ ತೊಳುಗಳಿವೆ.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿವು ಭಾರತದ ಚಲನಚಿತ್ರ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಭಾರತ ಸರ್ಕಾರದಿಂದ ನೀಡಲಾಗುತ್ತದೆ ಮತ್ತು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಸಮಾರಂಭದಲ್ಲಿ ಪ್ರತಿವರ್ಷ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿ ಪುರಸ್ಕೃತರನ್ನು ಅವರ "ಭಾರತೀಯ ಚಲನಚಿತ್ರೋದ್ಯಮದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅತ್ಯುತ್ತಮ ಕೊಡುಗೆ"ಗಾಗಿ ಗೌರವಿಸಲಾಗುತ್ತದೆ, ಮತ್ತು ಭಾರತೀಯ ಚಲನಚಿತ್ರೋದ್ಯಮದ ಪ್ರಮುಖ ವ್ಯಕ್ತಿಗಳನ್ನು ಒಳಗೊಂಡ ಸಮಿತಿಯಿಂದ ಆಯ್ಕೆ ಮಾಡಲಾಗುತ್ತದೆ. ಈ ಪ್ರಶಸ್ತಿಯು ಒಂದು ಸ್ವರ್ಣ ಕಮಲ (ಚಿನ್ನದ ಕಮಲ) ಪದಕ, ಒಂದು ಶಾಲು, ಮತ್ತು ₹೧೫ lakh (US$೧೬,೦೦೦) ನಗದು ಬಹುಮಾನವನ್ನು ಒಳಗೊಂಡಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಆಹಾರ ಸಾಮಾನ್ಯವಾಗಿ ಪಿಷ್ಟ, ಕೊಬ್ಬು ಮತ್ತು/ಅಥವಾ ಪ್ರೋಟೀನ್‍ಗಳನ್ನು ಒಳಗೊಂಡು, ಜೀವಿಗಳು ಪೋಷಕಾಂಶಗಳಿಗಾಗಿ ಅಥವಾ ಸಂತೋಷಕ್ಕಾಗಿ ತಿನ್ನುವ ಪದಾರ್ಥಗಳು. ಆಹಾರ ಎನ್ನುವುದು ಸಾಮಾನ್ಯವಾಗಿ ಸಸ್ಯಗಳಿಂದ, ಪ್ರಾಣಿಗಳಿಂದ ಅಥವಾ ಕೊಳೆಹಾಕಿದ ಪಾನೀಯಗಳು ಸಿಗುವುದು. ಮೊದಮೊದಲು ಮನುಷ್ಯ ಪ್ರಾಣಿಗಳನ್ನು ಬೇಟೆಯಾಡಿ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ, ಈಗ ತನಗೆ ಬೇಕಾದ ವಸ್ತುಗಳನ್ನು ವ್ಯವಸಾಯ, ಮೀನುಗಾರಿಕೆ, ಬೇಟೆ, ಹುಡುಕಾಟ ಮತ್ತಿತರ ವಿಧಾನದಿಂದ ಪಡೆಯುತ್ತಾನೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಭಾರತದ ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಒಂದು ತಾಲ್ಲೂಕು ಮತ್ತು ತಾಲ್ಲೂಕಿನ ಆಡಳಿತ ಕೇಂದ್ರ. ಜಿಲ್ಲೆಯ ದಕ್ಷಿಣದಲ್ಲಿ ಕೊನೆಯ ತಾಲ್ಲೂಕಾದ ಇದನ್ನು ಪಶ್ಚಿಮ, ವಾಯವ್ಯ ಮತ್ತು ಉತ್ತರದಲ್ಲಿ ಪುತ್ತೂರು ತಾಲ್ಲೂಕು, ಈಶಾನ್ಯದಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕು ಪೂರ್ವಕ್ಕೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕುಗಳೂ ಪಶ್ಚಿಮ ಮತ್ತು ನೈಋತ್ಯದಲ್ಲಿ ಕೇರಳರಾಜ್ಯ, ದಕ್ಷಿಣ ಮತ್ತು ಆಗ್ನೇಯದಲ್ಲಿ ಮಡಿಕೇರಿ ತಾಲ್ಲೂಕು ಸುತ್ತುವರಿದಿವೆ. ಪುತ್ತೂರು ಉಪವಿಭಾಗಕ್ಕೆ ಸೇರಿದ ಈ ಪ್ರದೇಶವನ್ನು 1965 ಡಿಸೆಂಬರ್ 15 ರಂದು ಪ್ರತ್ಯೇಕಿಸಿ ತಾಲ್ಲೂಕೆಂದು ಗುರುತಿಸಲಾಯಿತು.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್‌ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್‌ಗಳನ್ನು ನಿರ್ವಹಿಸಬಹುದು.